Connect with us

ನಿತ್ಯ ಭವಿಷ್ಯ

ಹೆಣ್ಣು ಮಕ್ಕಳ ಋತುಚಕ್ರದಲ್ಲಿ ತೊಂದರೆಯೇ ? ಭಗವತಿ ದೇವಿಯ ಪೂಜಾ ಶಕ್ತಿಯಿಂದ ವಿಶೇಷ ಪರಿಹಾರ : ಕರೆಮಾಡಿ | 18-20-2020 ಮಂಗಳವಾರ

Published

on

ನುಕುಲದ ಮಾಯಾಲೋಕದಲ್ಲಿ ಭಗವಂತನ ಮಾಯೆಯಾಟ ಉತ್ತರ ಸಿಗದ ದಿಗಂತ. ಜನ್ಮಜನ್ಮಾಂತರ ಗಳಿಂದ ನಾವು ಮಾಡಿದ ಪಾಪ ಕರ್ಮದ ಫಲವಾಗಿ ಸಮಸ್ಯೆಗಳು ಬೆಂಬಿಡದೆ ಕಾಡಬಹುದು. ಸಮಸ್ಯೆಗಳ ಪರಿಹಾರ ಮಾರ್ಗ ಜ್ಯೋತಿಷ್ಯಶಾಸ್ತ್ರ. ಭವ್ಯ ಭವಿಷ್ಯದ ಕನಸು ನನಸಾಗಲು ಇಂದೇ ಕರೆ ಮಾಡಿ  9964584883

ಶ್ರೀ ಕೇರಳ ಮಾಂತ್ರಿಕ ಜ್ಯೋತಿಷ್ಯ ಶಾಸ್ತ್ರಂ
ಜ್ಯೋತಿಷ್ಯರು. ಲಕ್ಷ್ಮಿಕಾಂತ್ ಭಟ್
9964584883

ಮೇಷ ರಾಶಿ

ಹಣಕಾಸಿನ ವ್ಯವಹಾರದಲ್ಲಿ ಮಂದಗತಿಯ ಪ್ರಗತಿ ಕಂಡುಬರುತ್ತದೆ. ನಿಮ್ಮಲ್ಲಿ ಮೂಡುವ ಸೋಮಾರಿತನದಿಂದ ಕಾರ್ಯಗಳು ವಿಳಂಬವಾಗುವ ಸಾಧ್ಯತೆ ಇದೆ. ಯೋಜನೆಗಳಲ್ಲಿ ಪಾಲ್ಗೊಳ್ಳುವಾಗ ನಿಮ್ಮ ವ್ಯಕ್ತಿತ್ವ ಹಾಗೂ ವರ್ತನೆಯನ್ನು ಉತ್ತಮ ರೀತಿಯಲ್ಲಿ ಪ್ರಸ್ತುತಪಡಿಸಿ. ಕುಟುಂಬ ನಿಮ್ಮ ಬೆಂಬಲವಾಗಿ ನಿಲ್ಲುವುದು. ನಿಮ್ಮ ಪ್ರತಿಯೊಂದು ಕಾರ್ಯಗಳಿಗೆ ಸಹಕಾರ ದೊರೆಯುವುದು ನಿಶ್ಚಿತ. ಹಿರಿಯರ ಆರೋಗ್ಯದ ಬಗ್ಗೆ ಆದಷ್ಟು ಗಮನವಹಿಸುವುದು ಸೂಕ್ತ.

ಜ್ಯೋತಿಷ್ಯರು ಲಕ್ಷ್ಮಿ ಕಾಂತ್ ಭಟ್
9964584883
ಮಾಹಿತಿಗಾಗಿ ಕರೆ ಮಾಡಿ

ವೃಷಭ ರಾಶಿ

ಕೆಲಸದ ವಿಷಯವಾಗಿ ಕೆಲವರು ನಿಮ್ಮ ವಿರುದ್ಧ ಅಪಹಾಸ್ಯ ಮಾಡಬಹುದು, ನಡೆಯುವ ದಾರಿಯಲ್ಲಿ ಕಲ್ಲುಮುಳ್ಳುಗಳು ಸಹಜ ಗುರಿಯ ಕಡೆಗೆ ಆದಷ್ಟು ಗಮನವಹಿಸಿ. ನಿಮ್ಮ ಚಿಂತನೆಗಳು ಉತ್ತಮ ರೀತಿಯಲ್ಲಿ ಪ್ರಸ್ತುತಪಡಿಸುವುದು ಒಳಿತು. ಕೆಲಸದಲ್ಲಿ ತಪ್ಪಾಗದಂತೆ ಕಾರ್ಯವನ್ನು ಮಾಡಲು ಮುಂದಾಗಿ. ವ್ಯಾಜ್ಯಗಳನ್ನು ಹಿರಿಯರು ಈ ದಿನ ನ್ಯಾಯಯುತವಾಗಿ ಬಗೆ ಹರಿಸುವರು.

ಜ್ಯೋತಿಷ್ಯರು ಲಕ್ಷ್ಮಿ ಕಾಂತ್ ಭಟ್
9964584883
ಮಾಹಿತಿಗಾಗಿ ಕರೆ ಮಾಡಿ

ಮಿಥುನ ರಾಶಿ

ಕಾರ್ಯದಲ್ಲಿನ ಪ್ರಯತ್ನಶೀಲತೆ ನಡೆಯು ಹಾಗೂ ಆತ್ಮೀಯ ಬಂಧುವರ್ಗದ ಸಹಕಾರದಿಂದ ನಿಮ್ಮ ಯೋಜಿತ ಕೆಲಸಗಳಲ್ಲಿ ಗೆಲುವು ಪಡೆಯುವ ಸಾಧ್ಯತೆ. ಆದಾಯಕ್ಕಿಂತ ಖರ್ಚು ಹೆಚ್ಚಾಗುವುದರಿಂದ ನಿಮ್ಮಲ್ಲಿ ಆತಂಕ ಹೆಚ್ಚಾಗುತ್ತದೆ. ನಿಮ್ಮ ವರ್ಚಸ್ಸಿಗೆ ಅಗೌರವ ತರುವಂತಹ ಜನಗಳನ್ನು ದೂರವಿಡಿ. ಸಾಂಸಾರಿಕ ಜೀವನದಲ್ಲಿ ಮೌಲ್ಯಯುತ ವಿಚಾರಗಳು ಹಾಗೂ ನಿಮ್ಮ ಸಂಬಂಧ ಹಾಳು ಮಾಡುವ ಮನಸ್ಥಿತಿ ಇರುವ ಜನರು ಇರಬಹುದು ಜಾಗ್ರತೆವಹಿಸಿ.

ಜ್ಯೋತಿಷ್ಯರು ಲಕ್ಷ್ಮಿ ಕಾಂತ್ ಭಟ್
9964584883
ಮಾಹಿತಿಗಾಗಿ ಕರೆ ಮಾಡಿ

ಕರ್ಕಟಾಕ ರಾಶಿ

ಮಾನಸಿಕ ಒತ್ತಡವನ್ನು ಕಡಿಮೆಮಾಡಿಕೊಳ್ಳಲು ಕ್ರೀಡೆಯಲ್ಲಿ ಪಾಲ್ಗೊಳ್ಳುವುದು ಉತ್ತಮ. ವಸ್ತುಗಳನ್ನು ಜೋಪಾನವಾಗಿ ಕಾಪಾಡುವುದು ನಿಮ್ಮ ಕರ್ತವ್ಯ. ಕುಟುಂಬಸ್ಥರ ಅನುಗ್ರಹದಿಂದ ಉತ್ತಮ ಯೋಜನೆಗೆ ತೊಡಗಿಸಿಕೊಳ್ಳುವ ಸಾಧ್ಯತೆ. ವಿದ್ಯಾರ್ಥಿಗಳಲ್ಲಿ ಕೆಲವು ಬದಲಾವಣೆಗಳು ಕಾಣಬಹುದು ಅವರ ಇಷ್ಟ ಪೂರೈಸಲು ಹೆಣಗಾಡುವ ಸ್ಥಿತಿ ನಿಮ್ಮದಾಗಿರುತ್ತದೆ. ವಾಗ್ದಾನ ನೀಡುವಾಗ ಅದರ ಬದ್ಧತೆ ನಿಮ್ಮಿಂದ ಸಾಧ್ಯವೇ ನೋಡಿಕೊಳ್ಳಿ.

ಜ್ಯೋತಿಷ್ಯರು ಲಕ್ಷ್ಮಿ ಕಾಂತ್ ಭಟ್
9964584883
ಮಾಹಿತಿಗಾಗಿ ಕರೆ ಮಾಡಿ

ಸಿಂಹ ರಾಶಿ

ಶತ್ರುಬಾದೆ ನಿಮಗೆ ಇನ್ನಿಲ್ಲದಂತೆ ತೊಂದರೆ ನೀಡಬಹುದು ಆದಷ್ಟು ಎಚ್ಚರದಿಂದಿರುವುದು ಒಳ್ಳೆಯದು. ಆರ್ಥಿಕ ವ್ಯವಹಾರಗಳನ್ನು ಸುಖಾಸುಮ್ಮನೆ ಎಲ್ಲರೊಡನೆ ಹಂಚಿಕೊಳ್ಳಬೇಡಿ. ಪತ್ನಿಯ ಇಚ್ಚಾಶಕ್ತಿ ನಿಮ್ಮ ಭವಿಷ್ಯದ ಅಡಿಪಾಯಕ್ಕೆ ಸೂಕ್ತವಾಗಿರುತ್ತದೆ.

ಜ್ಯೋತಿಷ್ಯರು ಲಕ್ಷ್ಮಿ ಕಾಂತ್ ಭಟ್
9964584883
ಮಾಹಿತಿಗಾಗಿ ಕರೆ ಮಾಡಿ

ಕನ್ಯಾ ರಾಶಿ

ಸ್ನೇಹ ಮಧುರವಾದದ್ದು ಅದು ಉತ್ತಮ ದಾರಿಯಿಂದ ಕೂಡಿದ್ದರೆ ಮಾತ್ರ, ನಿಮಗೆ ಅರಿವಿಲ್ಲದೆ ಕೆಲವು ದುರಭ್ಯಾಸಗಳು ಹೆಚ್ಚಾಗುತ್ತದೆ ಅದನ್ನು ಬಿಡುವುದು ಒಳಿತು. ಕುಟುಂಬದಲ್ಲಿ ನಿಮ್ಮ ಜವಾಬ್ದಾರಿಯುತ ಸ್ಥಾನ ಉತ್ತಮಗೊಳ್ಳಲಿದೆ. ಆರ್ಥಿಕತೆಯು ನಿಮ್ಮ ನಿರೀಕ್ಷೆಯನ್ನು ಇಂದು ಹುಸಿಗೊಳಿಸಬಹುದಾದ ಸಾಧ್ಯತೆ ಇದೆ. ನಿಮ್ಮ ಲಾಭಾಂಶದ ಕೆಲಸವು ನೆರವೇರಲು ಅಗತ್ಯ ಸಿದ್ಧತೆ ಈಗಲೇ ಮಾಡಿಕೊಳ್ಳಿ. ದೂರದ ಊರಿನ ಪ್ರಯಾಣ ಮಾಡುವ ನಿರೀಕ್ಷೆಯಿದೆ. ಪ್ರಯಾಣದಿಂದ ನಿಮ್ಮಲ್ಲಿ ಚೈತನ್ಯ ಸೃಷ್ಟಿಯಾಗಲಿದೆ.

ಜ್ಯೋತಿಷ್ಯರು ಲಕ್ಷ್ಮಿ ಕಾಂತ್ ಭಟ್
9964584883
ಮಾಹಿತಿಗಾಗಿ ಕರೆ ಮಾಡಿ

ತುಲಾ ರಾಶಿ

ಹೊಸ ಆರ್ಥಿಕ ವ್ಯವಹಾರ ನಿಮಗೆ ಇಂದು ಕೈಗೂಡಿ ಬರಲಿದೆ. ನಿಮ್ಮ ಆರ್ಥಿಕ ಸ್ಥಿತಿ ಬೆಳವಣಿಗೆಯ ಹಂತ ನೋಡಬಹುದು. ಸ್ಥಳ ಬದಲಾವಣೆ ಯೋಚನೆ ನಿಮ್ಮಲ್ಲಿದ್ದರೆ ಅಗತ್ಯ ಕೆಲಸ ಆಗಲಿದೆ. ವ್ಯವಹಾರದಲ್ಲಿ ನಿಮ್ಮ ಮಾತುಗಳು ಸ್ಪಷ್ಟ ಮತ್ತು ಧೈರ್ಯದಿಂದ ಇರಲಿ ಖಂಡಿತ ಕಾರ್ಯ ಯಶಸ್ಸು ಆಗಲಿದೆ. ಮಡದಿಯೊಂದಿಗೆ ವಸ್ತುಗಳ ಖರೀದಿಗೆ ಹೋಗುವ ಸಾಧ್ಯತೆ ಹಾಗೂ ಅವರೊಡನೆ ಕಳೆಯುವ ಕಾಲ ಅವಿಸ್ಮರಣೀಯ ವಾಗಿರುತ್ತದೆ.

ಜ್ಯೋತಿಷ್ಯರು ಲಕ್ಷ್ಮಿ ಕಾಂತ್ ಭಟ್
9964584883
ಮಾಹಿತಿಗಾಗಿ ಕರೆ ಮಾಡಿ

ವೃಶ್ಚಿಕ ರಾಶಿ

ನಿಮ್ಮ ಹಿರಿಯರ ಸಲಹೆಗಳನ್ನು ಸ್ವೀಕರಿಸಿ ಮುಂದೆ ಹೆಜ್ಜೆ ಇಡುವುದು ಒಳ್ಳೆಯದು. ನಿಮ್ಮ ಬಹುದಿನದ ಕನಸುಗಳು ಇಂದು ನನಸಾಗುವ ಸುಂದರ ಕ್ಷಣಗಳು ನಿಮ್ಮ ಪಾಲಿಗೆ ಬರಲಿದೆ. ನಿಮ್ಮ ವ್ಯಾಪಾರ-ವ್ಯವಹಾರಗಳಲ್ಲಿ ನಿರೀಕ್ಷಿಸುವಂತಹ ಲಾಭದ ಮಟ್ಟವನ್ನು ಇಂದು ತಲುಪಲಾಗುವುದಿಲ್ಲ. ಇಂದು ನಿಮ್ಮ ಆರೋಗ್ಯದಲ್ಲಿ ಹೆಚ್ಚಿನ ಚೇತರಿಕೆಯನ್ನು ಕಾಣಬಹುದು. ನಿಮ್ಮ ಸಾಮಾಜಿಕ ಕಳಕಳಿಯನ್ನು ಗೌರವಿಸುವ ಸುಂದರ ಕ್ಷಣ ಇಂದು ನಿಮ್ಮದಾಗಲಿದೆ. ನಿಮ್ಮ ಕುಟುಂಬದಲ್ಲಿ ನಡೆಯುವ ಹಲವು ವ್ಯಾಜ್ಯಗಳಿಂದ ಮನಸ್ತಾಪ ವಾಗುವುದು.

ಜ್ಯೋತಿಷ್ಯರು ಲಕ್ಷ್ಮಿ ಕಾಂತ್ ಭಟ್
9964584883
ಮಾಹಿತಿಗಾಗಿ ಕರೆ ಮಾಡಿ

ಧನಸ್ಸು ರಾಶಿ

ಈ ದಿನ ನಿಮ್ಮ ಮಾತಿನ ಮೇಲೆ ನಿಯಂತ್ರಣವಿರಲಿ. ನಿಮ್ಮ ಆತುರದ ಸ್ವಭಾವ ಇಂದು ನಿಮ್ಮನ್ನು ಸಂಕಷ್ಟಕ್ಕೆ ಸಿಲುಕಿಸಬಹುದು. ನಿಮ್ಮ ಸಂಗಾತಿಯೊಂದಿಗಿನ ಭಿನ್ನಾಭಿಪ್ರಾಯಗಳು ಹಾಗೂ ಸಂಶಯಗಳು ನಿಮ್ಮಿಂದ ದೂರವಾಗುತ್ತದೆ. ಬರಬೇಕಾದ ಹಣ ಇಂದು ನಿಮ್ಮ ಕೈ ಸೇರುವ ಸಾಧ್ಯತೆ ಇರುವುದು. ವ್ಯರ್ಥ ಖರ್ಚಿಗೆ ಇಂದು ಕಡಿವಾಣ ಇರಲಿ. ಗುರುವಿನ ಧ್ಯಾನದಿಂದ ಅಥವಾ ಆರಾಧನೆಯಿಂದ ನಿಮ್ಮ ಮನೋಕಾಮನೆಗಳು ಪೂರ್ಣಗೊಳ್ಳುವವು.

ಜ್ಯೋತಿಷ್ಯರು ಲಕ್ಷ್ಮಿ ಕಾಂತ್ ಭಟ್
9964584883
ಮಾಹಿತಿಗಾಗಿ ಕರೆ ಮಾಡಿ

ಮಕರ ರಾಶಿ

ಈ ಶುಭದಿನದಂದು ನೀವು ಹೆಚ್ಚಾಗಿ ಶುಭ ಧಾರ್ಮಿಕ ಹಾಗೂ ಮಂಗಲಕಾರ್ಯಗಳಲ್ಲಿ ತೊಡಗಿರುತ್ತೀರಿ. ವಿವಿಧ ಕ್ಷೇತ್ರಗಳಲ್ಲಿ ನಿಮ್ಮ ಇಂದಿನ ಹೂಡಿಕೆಗಳು ಹೆಚ್ಚು ಲಾಭದಾಯಕವಾಗಿ ಇರುವುದಿಲ್ಲ. ನಿಮ್ಮ ದೀರ್ಘಾವಧಿಯ ಆರೋಗ್ಯ ಬಾಧೆಯು ಇಂದು ಸುಧಾರಣೆಯ ಹಂತ ತಲುಪುವುದು. ಇಂದು ನಿಮ್ಮ ಪತ್ನಿಯ ಇಚ್ಛೆಯನ್ನು ಅರಿತು ನಡೆಯುವಂಥವರಾಗಿರುತ್ತೀರಿ. ಬಹುದಿನಗಳಿಂದ ನಿರೀಕ್ಷಿಸುತ್ತಿದ್ದ ಉದ್ಯೋಗ ಅವಕಾಶಗಳು ಇಂದು ನಿಮ್ಮ ಪಾಲಿನದಾಗಿರುತ್ತದೆ. ನಿಮ್ಮ ಆತ್ಮೀಯ ಸ್ನೇಹಿತರು ನಿಮ್ಮಿಂದ ದೂರವಾಗಬಹುದು.

ಜ್ಯೋತಿಷ್ಯರು ಲಕ್ಷ್ಮಿ ಕಾಂತ್ ಭಟ್
9964584883
ಮಾಹಿತಿಗಾಗಿ ಕರೆ ಮಾಡಿ

ಕುಂಭ ರಾಶಿ

ನಿಮ್ಮ ಜ್ಞಾನವೇ ದೊಡ್ಡದು ಎಂದು ಭಾವಿಸದಿರಿ. ನಿಮ್ಮ ಜ್ಞಾನ ಕ್ಕಿಂತಲೂ ಹೆಚ್ಚು ಜ್ಞಾನವುಳ್ಳ ಜನರ ಸಂಪರ್ಕ ನಿಮಗಾಗುವುದು. ಇಂದು ನಿಮ್ಮ ಮನೋಗುಪ್ತ ವ್ಯವಹಾರಗಳು ನೆರವೇರುವ ಸುಂದರ ಕ್ಷಣಗಳು ನಿಮ್ಮದಾಗಲಿದೆ. ನಿಮ್ಮ ದಾಂಪತ್ಯ ಜೀವನದ ಸುಂದರ ಕ್ಷಣಗಳು ನಿಮಗೆ ಮನೋಲ್ಲಾಸವನ್ನು ತರುತ್ತದೆ. ಈ ದಿನ ನಿಮಗೆ ಅಂದುಕೊಂಡಂತೆ ಲಾಭವನ್ನು ದಯಪಾಲಿಸುತ್ತದೆ. ನಿಮ್ಮ ಕಾರ್ಯಯೋಜನೆಗಳಿಗೆ ಹಿರಿಯ ಅಧಿಕಾರಿಗಳಿಂದ ಮಾನ್ಯತೆ ದೊರೆಯುವುದು.

ಜ್ಯೋತಿಷ್ಯರು ಲಕ್ಷ್ಮಿ ಕಾಂತ್ ಭಟ್
9964584883
ಮಾಹಿತಿಗಾಗಿ ಕರೆ ಮಾಡಿ

ಮೀನ ರಾಶಿ

ಆಸ್ತಿ ಸಂಬಂಧಿತ ತಕರಾರುಗಳು ಬರಬಹುದಾದ ಸಾಧ್ಯತೆ ಇದೆ. ಕೌಟುಂಬಿಕ ಹೊಂದಾಣಿಕೆಗೆ ಆದಷ್ಟು ಪ್ರಯತ್ನ ಮಾಡಿ. ನಿಮ್ಮ ನಿರ್ಧಾರಗಳು ಹಾಗೂ ಕಾರ್ಯ ಶೈಲಿಯು ನಿಮ್ಮ ವ್ಯವಹಾರ ಹಾಗೂ ಹಣಕಾಸಿನ ಪರಿಸ್ಥಿತಿಯನ್ನು ಉತ್ತಮಗೊಳಿಸುತ್ತದೆ. ದುಂದುವೆಚ್ಚಗಳಿಗೆ ಆದಷ್ಟು ಕಡಿವಾಣ ಹಾಕಿ.

ಜ್ಯೋತಿಷ್ಯರು ಲಕ್ಷ್ಮಿ ಕಾಂತ್ ಭಟ್
9964584883
ಮಾಹಿತಿಗಾಗಿ ಕರೆ ಮಾಡಿ

ಜ್ಯೋತಿಷ್ಯರು ಲಕ್ಷ್ಮಿಕಾಂತ್ ಭಟ್
ಕಠಿಣ ಸಮಸ್ಯೆಗಳಿಗೆ ಸೂಕ್ತವಾದ ಪರಿಹಾರ ಮತ್ತು ಮಾರ್ಗದರ್ಶನ ಸೂಚಿಸುತ್ತಾರೆ. 
ಸಮಸ್ಯೆಗಳು ಹತ್ತು-ಹಲವಾರು ಪರಿಹಾರ ಮಾತ್ರ ಒಂದೇ ಅದುವೇ ಜ್ಯೋತಿಷ್ಯಶಾಸ್ತ್ರ. 
ನಿಮ್ಮ ಒಂದು ಕರೆ ಜೀವನವನ್ನು ಬದಲಾಯಿಸಬಹುದು.  9964584883

ಅಂಕಣ

ದೀಪಾವಳಿ ವಿಶೇಷಾಂಕ | ದೇವನಗರಿ ಸುದ್ದಿದಿನ ಪತ್ರಿಕೆಯಿಂದ ಕತೆ- ಕವಿತೆ- ಲೇಖನ- ರೂಪದರ್ಶಿ ಫೋಟೋ ಗಳಿಗೆ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ: ಪ್ರಿಯ ಓದುಗರೆ, ಬೆಳಕಿನ ಹಬ್ಬ ದೀಪಾವಳಿಯ ಪ್ರಯುಕ್ತ ದೇವನಗರಿ ಸುದ್ದಿದಿನ – ಕನ್ನಡ ದಿನ ಪತ್ರಿಕೆ ಹಾಗೂ ಶ್ಯಾಮ್ ಪ್ರಕಾಶನದವತಿಯಿಂದ ‘ ದೀಪಾವಳಿ ವಿಶೇಷಾಂಕ’-2026ನ್ನು ತರಲಾಗುತ್ತಿದೆ.

ಈ‌ ಹಿನ್ನೆಲೆಯಲ್ಲಿ ದೀಪಾವಳಿ ವಿಷೇಶಾಂಕ 2026ರ ವಿಭಾಗಕ್ಕೆ ಕತೆ, ಕವಿತೆ ಹಾಗೂ ಲೇಖನ ಹಾಗೂ ರೂಪದರ್ಶಿಗಳ ಛಾಯಾಚಿತ್ರಗಳನ್ನು ಆಹ್ವಾನಿಸಿದ್ದೇವೆ.

ಕತೆ – ಕವಿತೆಗಳನ್ನು ಕಳುಹಿಸಲು ಇರುವ ನಿಯಮಗಳು

ಕತೆ/ಕವಿತೆ ಸ್ವತಂತ್ರ ರಚನೆಯಾಗಿರಬೇಕು. ಈ ಮೊದಲು ಯಾವ ಮಾಧ್ಯಮಗಳಲ್ಲಿಯೂ ಪ್ರಕಟ ಅಥವಾ ಪ್ರಸಾರ ಆಗಿರಬಾರದು.

ಕತೆ 1500 ಸಾವಿರ ಪದಗಳ ಮಿತಿಯಲ್ಲಿರಲಿ. ಕವಿತೆಗೆ 40 ಸಾಲಿನ ಮಿತಿಯಿರಲಿ, ನುಡಿ ಅಥವಾ ಬರಹ ತಂತ್ರಾಂಶದಲ್ಲಿ ಇಲ್ಲವೆ ಯೂನಿಕೋಡ್‌ನಲ್ಲಿ ಇರಬೇಕು. ವಯಸ್ಸಿನ ಮಿತಿ ಇರುವುದಿಲ್ಲ.

ಕತೆ/ಕವಿತೆ ಇರುವ ಪುಟದಲ್ಲಿ ಹೆಸರು, ವಿವರ ಬರೆಯುವಂತಿಲ್ಲ. ಪ್ರತ್ಯೇಕ ಪುಟದಲ್ಲಿ ಹೆಸರು, ಅಂಚೆ ವಿಳಾಸ, ಮೊಬೈಲ್ ನಂಬರ್, ಇ-ಮೇಲ್ ವಿಳಾಸ ಒದಗಿಸಬೇಕು.

ಇತ್ತೀಚಿನ ಪಾಸ್‌ಪೋರ್ಟ್ ಅಳತೆಯ ವರ್ಣಮಯ ಭಾವಚಿತ್ರದೊಂದಿಗೆ 100 ಪದಗಳ ಒಳಗೆ ಕಿರು ಪರಿಚಯ ಕಳುಹಿಸಬೇಕು.

ಸ್ಪರ್ಧೆಗೆ ಕಳುಹಿಸಿರುವ ಬರಹಗಳನ್ನು ಹಿಂದಿರುಗಿಸುವುದಿಲ್ಲ. ಬರಹಗಳು ಕಡ್ಡಾಯವಾಗಿ ಎಂಎಸ್ ವರ್ಡ್ ಫೈಲ್ (MS word File) ನಲ್ಲಿರಲಿ.

ಬರಹ ಮತ್ತು ಫೋಟೋಗಳನ್ನು ಇ-ಮೇಲ್ ಮೂಲಕವಷ್ಟೇ ಕಳಿಸಿ.

ತೀರ್ಪುಗಾರರ ತೀರ್ಮಾನವೇ ಅಂತಿಮ.

ಲೇಖನಗಳಿಗೆ ಆಹ್ವಾನ : ವೈಚಾರಿಕತೆ, ವಿಮರ್ಶೆ, ಕಾನೂನು, ಸಾಹಿತ್ಯ, ತಂತ್ರಜ್ಞಾನ, ವಿಜ್ಞಾನ, ಡಿಜಿಟಲ್ ಮಾಧ್ಯಮ, ಸಿನೆಮಾ, ಪ್ರೇಮಪತ್ರ, ಕೃಷಿ, ರಾಜಕೀಯ, ಕಲೆ, ಆರೋಗ್ಯ, ಪ್ರವಾಸ, ಅಡುಗೆ, ಫೋಟೋಗ್ರಫಿ, ವೈಲ್ಡ್ ಲೈಫ್, ಹಾಸ್ಯ ಕುರಿತಾದ ಲೇಖನಗಳನ್ನು 450 ಪದಗಳನ್ನು ಮೀರದಂತೆ ಬರೆದು ಕಳುಹಿಸಿ.

ಹಾಗೆಯೇ, ವಿಶೇಷಾಂಕದ ಮುಖಪುಟದ ರೂಪದರ್ಶಿಯಾಗಲು ಅವಕಾಶವನ್ನು ಕಲ್ಪಸಿಲಾಗಿದೆ. ಆಸಕ್ತ ರೂಪದರ್ಶಿಗಳು ಸ್ಟುಡಿಯೋ ಅಥವಾ ಫೋಟೋಗ್ರಾಫರ್ ಮೂಲಕ ತೆಗೆದ ‘6*4 ಅಳತೆಯ ಮುದ್ರಿತ ಫೋಟೋ ಮತ್ತು ಇ-ಮೇಲ್ ಮೂಲಕವೂ ಕಳಿಸಬಹುದು. 80 ಪದಗಳಮಿತಿಯೊಳಗೆ ನಿಮ್ಮ ಪರಿಚಯದೊಂದಿಗೆ, ಒಬ್ಬರು 4 ಫೋಟೋ ಕಳುಹಿಸಬೇಕು. ವಯಸ್ಸಿನ ಮಿತಿಯಿಲ್ಲ ಇರುವುದಿಲ್ಲ.

ಕತೆಯ ವಿಜೇತರಿಗೆ ಪ್ರಥಮ ಬಹುಮಾನ : 10000, ದ್ವಿತೀಯ ಬಹುಮಾನ : 5000, ತೃತೀಯ ಬಹುಮಾನ : 3000 ಹಾಗೂ ಕವಿತೆ ಬಹುಮಾನ ವಿಜೇತರಿಗೆ ಪ್ರಥಮ ಬಹುಮಾನ : 5000 ದ್ವಿತೀಯ ಬಹುಮಾನ : 3000 ಹಾಗೂ ತೃತೀಯ ಬಹುಮಾನ : ₹2000 ಸಿಗಲಿದೆ.

ಆಗಸ್ಟ್‌ 30ರೊಳಗೆ ಬರಹಗಳನ್ನು ಇ-ಮೇಲ್‌: deepasuddidina@gmail.com ಗೆ ಕಳುಹಿಸಲು ತಿಳಿಸಿದೆ. ಈ ಕುರಿತು ಹೆಚ್ಚಿನ ಮಾಹಿತಿಗಾಗಿ :9980346243 ಹಾಗೂ visit: www.suddidina.com ಅನ್ನು ವೀಕ್ಷಿಸಬಹುದಾಗಿದೆ.

ಕಚೇರಿ ವಿಳಾಸ 

ದೇವನಗರಿ ಸುದ್ದಿದಿನ- ಕನ್ನಡ ದಿನ ಪತ್ರಿಕೆ
ದೀಪಾವಳಿ ವಿಶೇಷಾಂಕ ವಿಭಾಗ
#3231/1, ಸಂಜೀವ ಸದನ, 11ನೇ ಮುಖ್ಯರಸ್ತೆ, 4 ನೇ ಅಡ್ಡರಸ್ತೆ, ಎಂಸಿಸಿ ಬಿ ಬ್ಲಾಕ್, ದಾವಣಗೆರೆ, 577004

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ಕ್ರೀಡೆ

ರಾಜ್ಯದ ವಿವಿಧ ನೀರಾವರಿ ಯೋಜನೆಗಳಿಗೆ ಹೆಚ್ಚಿನ ಅನುದಾನ ; ಇ-ಖಾತೆ ಅಭಿಯಾನ ಹಾಗೂ ಇತರೆ ‌ಪ್ರಮುಖ ಸುದ್ದಿಗಳು

Published

on

ರಾಜ್ಯದ ವಿವಿಧ ನೀರಾವರಿ ಯೋಜನೆಗಳಿಗೆ ಹೆಚ್ಚಿನ ಅನುದಾನ ; ಇ-ಖಾತೆ ಅಭಿಯಾನ ಹಾಗೂ ಇತರೆ ‌ಪ್ರಮುಖ ಸುದ್ದಿಗಳು

1. ಮುಖ್ಯಮಂತ್ರಿ ಸಿದ್ದರಾಮಯ್ಯ ನವದೆಹಲಿ ತಲುಪಿದ್ದಾರೆ. ಇಂದು ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿ ಮಾಡಿ, 5 ಪ್ರಮುಖ ಮಸೂದೆಗಳಿಗೆ ಅಂಗೀಕಾರ ನೀಡುವಂತೆ ಮನವಿ ಮಾಡಲಿದ್ದಾರೆ ಎಂದು ಉನ್ನತ ಮೂಲಗಳು ತಿಳಿಸಿವೆ. ಭದ್ರಾ ಮೇಲ್ದಂಡೆ ಯೋಜನೆ ಸೇರಿದಂತೆ ರಾಜ್ಯದ ವಿವಿಧ ನೀರಾವರಿ ಯೋಜನೆಗಳಿಗೆ, ಹೆಚ್ಚಿನ ಅನುದಾನ ಬಿಡುಗಡೆ ಮಾಡುವಂತೆ, ಕೇಂದ್ರದ ಜಲಶಕ್ತಿ ಖಾತೆ ಸಚಿವರನ್ನು ಕೋರುವುದಾಗಿ, ಇದೇ ವೇಳೆ ಸಾಮಾಜಿಕ ಜಾಲತಾಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

2. ರಾಜ್ಯದ ಗ್ರಾಮ ಪಂಚಾಯ್ತಿಗಳ ಹಂತದಲ್ಲಿ ಜುಲೈ 15ರಿಂದ, ಸಾರ್ವಜನಿಕರ ಆಸ್ತಿಗಳ ಇ-ಖಾತೆ ರೂಪಿಸುವ ಅಭಿಯಾನವನ್ನು ಕಂದಾಯ ಇಲಾಖೆ ಆಯೋಜಿಸಲಿದೆ ಎಂದು ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.

3. ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆಗೆ ಸಂಬಂಧಿಸಿ, ಇಲ್ಲಿಯವರೆಗೆ ಹೆಸರು ನೋಂದಾಯಿಸದವರು, ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ, ಈ ತಿಂಗಳ 30ರವರೆಗೆ ಮಾಹಿತಿ ನೀಡಲು ಅವಕಾಶವಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಎ.ಬಿ.ಬಸವರಾಜು ತಿಳಿಸಿದ್ದಾರೆ.

4. ಕಾವೇರಿ ಜಲಾನಯನ ಪ್ರದೇಶದಲ್ಲಿ ವ್ಯಾಪಕವಾಗಿ ಸುರಿಯುತ್ತಿರುವ ಮಳೆಯಿಂದ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆ.ಆರ್.ಎಸ್. ಅಣೆಕಟ್ಟೆ ಭಾಗಶ: ಭರ್ತಿಯಾಗಿದ್ದು, ಒಳ ಹರಿವು ಇನ್ನಷ್ಟು ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಅಣೆಕಟ್ಟೆಯಿಂದ 5 ಸಾವಿರದಿಂದ 15 ಸಾವಿರ ಕ್ಯುಸೆಕ್ ನೀರನ್ನು ನದಿಗೆ ಹರಿಸಲಾಗಿದೆ.

5. ಕತಾರ್‌ನಲ್ಲಿರುವ ಅಲ್ ಉದೈದ್ ಅಮೇರಿಕ ವಾಯುನೆಲೆಯ ಮೇಲೆ ಇರಾನ್ ನಡೆಸಿದ ದಾಳಿಯ ನಂತರ ಜಾಗತಿಕ ತೈಲ ಬೆಲೆಗಳು ಐದು ವರ್ಷಗಳಲ್ಲಿ ನಿನ್ನೆ ಒಂದೇ ದಿನದಲ್ಲಿ ತೀವ್ರ ಕುಸಿತವನ್ನು ದಾಖಲಿಸಿದೆ.

6. ಕರ್ನಾಟಕ, ಮಧ್ಯಪ್ರದೇಶ, ಬಿಹಾರ, ಜಾಖಂಡ್, ಒಡಿಶಾ, ಛತ್ತೀಸ್‌ಗಢ, ಪಶ್ಚಿಮ ಬಂಗಾಳ, ಸಿಕ್ಕಿಂ, ಅರುಣಾಚಲ ಪ್ರದೇಶ, ಕೊಂಕಣ, ಗೋವಾ, ಮಹಾರಾಷ್ಟ್ರ, ಗುಜರಾತ್, ಹಿಮಾಚಲ ಪ್ರದೇಶ, ಉತ್ತರಾಖಂಡ, ಪಶ್ಚಿಮ ಉತ್ತರ ಪ್ರದೇಶ, ರಾಜಸ್ಥಾನ, ಕೇರಳದ ಕೆಲವು ಸ್ಥಳಗಳಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

7. ಅಯೋವಾದಲ್ಲಿ ನಾಳೆ ಆರಂಭವಾಗಲಿರುವ ಯುಎಸ್ ಓಪನ್ 2025 ಬ್ಯಾಡ್ಮಿಂಟನ್ ಪಂದ್ಯಾವಳಿಯ ಪುರುಷರ ಡಬಲ್ಸ್ ವಿಭಾಗದಲ್ಲಿ ಹರಿಹರನ್ ಅಂಶಕರುಣನ್ ಮತ್ತು ರೂಬನ್ ಕುಮಾರ್ ರೆಥಿನಸಬಪತಿ, ಭಾರತವನ್ನು ಮುನ್ನಡೆಸಲಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಈರುಳ್ಳಿ ಕೇವಲ ತರಕಾರಿಯಲ್ಲ ; ಅದ್ಭುತ ಔಷಧ

Published

on

ನಾವು ನಿತ್ಯವೂ ತಯಾರಿಸುವ ಅಡುಗೆ ಪದಾರ್ಥಗಳಿಗೆ ಈರುಳ್ಳಿಯನ್ನು ಹಾಕದಿದ್ದಾಗ ಒಂದು ರುಚಿಯಾದರೆ ಅದನ್ನು ಹಾಕಿದಾಗ ಆ ಪದಾರ್ಥದ ರುಚಿಯೇ ಬೇರೆಯಾಗುತ್ತದೆ. ನಾವು ಈರುಳ್ಳಿಯ ಗುಣಗಳು, ಅದರ ಉಪಯೋಗಗಳು ಮತ್ತು ಮನೆ ಮದ್ದುಗಳ ಬಗ್ಗೆ ತಿಳಿದುಕೊಳ್ಳೋಣ.

ಆಯುರ್ವೇದದಲ್ಲಿ ಈರುಳ್ಳಿಯ ಬಗ್ಗೆ ವಿಸ್ತೃತ ವಿವರಣೆ ಇದೆ. ಆಯುರ್ವೇದ ಗ್ರಂಥಗಳ ಪ್ರಕಾರ ಈರುಳ್ಳಿಗೆ ಬೆಳ್ಳುಳ್ಳಿಯ ಗುಣಗಳಿವೆ. ಆದರೆ ಬೆಳ್ಳುಳ್ಳಿಯಂತೆ ಇದು ಉಷ್ಣವಲ್ಲ. ಹಾಗಾಗಿ ಬೆಳ್ಳುಳ್ಳಿಯ ಅದ್ಭುತ ಗುಣಗಳನ್ನು ಪಡೆಯಬೇಕು ಎಂದಾದರೆ ಮತ್ತು ಬೆಳ್ಳುಳ್ಳಿಯನ್ನು ಸೇವಿಸಿದರೆ ಉಷ್ಣವಾಗುತ್ತದೆ ಎಂಬ ಯೋಚನೆ ಇದ್ದರೆ ಬದಲಿಗೆ ಈರುಳ್ಳಿಯನ್ನು ಬಳಸಬಹುದು.

ಭಾವ ಪ್ರಕಾಶ ನಿಘಂಟು ಎಂಬ ಗ್ರಂಥದಲ್ಲಿ “ಬಲವೀರ್ಯ ಕೈರೋ ಗುರುಃ” ಎಂದಿದ್ದಾರೆ. ಅಂದರೆ ಈರುಳ್ಳಿಯು ದೇಹದ ಬಲವನ್ನು, ವೀರ್ಯದ ಗುಣಮಟ್ಟವನ್ನು, ಲೈಂಗಿಕ ಶಕ್ತಿಯನ್ನು ಹೆಚ್ಚಿಸುತ್ತದೆ ಎಂದರ್ಥ. ಬಹುತೇಕ ಎಲ್ಲಾ ಆಯುರ್ವೇದ ಗ್ರಂಥಗಳಲ್ಲಿಯೂ ಈರುಳ್ಳಿಯಿಂದ ಲೈಂಗಿಕ ಶಕ್ತಿ ವೃದ್ಧಿಯಾಗುತ್ತದೆ ಎಂಬುದನ್ನು ಹೇಳಲಾಗಿದೆ. ಇದು ಚರ್ಮಕ್ಕೆ ಕೂಡ ಅತ್ಯಂತ ಅನುಕೂಲಕರವಾದದ್ದು. ಚರ್ಮವನ್ನು ಸ್ನಿಗ್ಧಗೊಳಿಸಿ ಒರಟುತನವನ್ನು ಹೋಗಲಾಡಿಸುತ್ತದೆ; ಚರ್ಮಕ್ಕೆ ಕಾಂತಿಯನ್ನು ಕೊಡುತ್ತದೆ; ಜೊತೆಗೆ ಚರ್ಮದ ಶುದ್ಧಿಯನ್ನೂ ಮಾಡುತ್ತದೆ ಎಂದು ವಿವರಿಸಲಾಗಿದೆ. ಈರುಳ್ಳಿಯನ್ನು ನಿಯಮಿತವಾಗಿ ಸೇವಿಸುವುದರಿಂದ ದೇಹದ ಬಾಹ್ಯ ಮತ್ತು ಆಂತರಿಕ ಕಾಂತಿ ಹೆಚ್ಚುತ್ತದೆ.

ಅಂದರೆ ಕೇವಲ ಸೌಂದರ್ಯವೃದ್ಧಿಯಷ್ಟೇ ಅಲ್ಲ ದೇಹದೊಳಗಿನ ರೋಗನಿರೋಧಕ ಶಕ್ತಿ ತುಂಬಾ ಚೆನ್ನಾಗಿ ಹೆಚ್ಚುತ್ತದೆ. ಈರುಳ್ಳಿಯು ಧ್ವನಿಗೆ ಸಂಬಂಧಿಸಿದ ಸಮಸ್ಯೆಗಳನ್ನು ಹೋಗಲಾಡಿಸಿ ಒಳ್ಳೆಯ ಧ್ವನಿಯನ್ನು ನೀಡುತ್ತದೆ ಎಂದು ವಿವರಿಸಲಾಗಿದೆ. ಹೀಗಾಗಿ ಹಾಡುಗಾರರು, ಅಧ್ಯಾಪಕರಂಥವರಿಗೆ ನಿಯಮಿತ ಈರುಳ್ಳಿ ಸೇವನೆ ಅನುಕೂಲಕರ. ಇದು ಕಣ್ಣಿನ ಆರೋಗ್ಯವನ್ನು ಹೆಚ್ಚಿಸುವುದರಿಂದ ಹತ್ತರಿಂದ ಹದಿನೈದು ಮಿಲೀ ಈರುಳ್ಳಿ ರಸವನ್ನು ಸುಮಾರು ಒಂದು ತಿಂಗಳು ದಿನಕ್ಕೊಮ್ಮೆ ಸೇವಿಸುವುದರಿಂದ ಚಿಕ್ಕಪುಟ್ಟ ಕಣ್ಣಿನ ತೊಂದರೆಗಳು ನಿವಾರಣೆಯಾಗುತ್ತವೆ. ಸ್ವಲ್ಪ ಸಿಹಿ ಇರುವ ಅಂದರೆ ಖಾರ ಕಡಿಮೆ ಇರುವ ಈರುಳ್ಳಿಯನ್ನು ಚಿಕ್ಕ ಚಿಕ್ಕ ತುಂಡುಗಳನ್ನಾಗಿ ಕತ್ತರಿಸಿ ತುಪ್ಪದಲ್ಲಿ ಹುರಿದು ನಿಯಮಿತವಾಗಿ ಸೇವಿಸಿದರೆ ಲೈಂಗಿಕ ಶಕ್ತಿಯ ವೃದ್ಧಿಯಾಗುತ್ತದೆ.

ಕೂದಲು ಉದುರುವುದನ್ನು ಕಡಿಮೆ ಮಾಡಲು ಈರುಳ್ಳಿಯು ಸಹಕಾರಿ. ಈರುಳ್ಳಿಯ ರಸ ತೆಗೆದು ತಲೆ ಸ್ನಾನ ಮಾಡುವ ಹತ್ತು ನಿಮಿಷ ಮೊದಲು ಕೂದಲಿನ ಬುಡಕ್ಕೆ ಹಚ್ಚಬೇಕು. ಇದರಿಂದ ಕೂದಲಿನ ಬೆಳವಣಿಗೆ ಚೆನ್ನಾಗಿ ಆಗಲು ಮತ್ತು ಕೂದಲು ಉದುರುವುದು ನಿಲ್ಲಲು ಸಹಾಯವಾಗುತ್ತದೆ. ಬೊಜ್ಜನ್ನು ಕಡಿಮೆ ಮಾಡಲು ಕೂಡ ಈರುಳ್ಳಿಯು ಸಹಕಾರಿ. ಬೆಳ್ಳುಳ್ಳಿಯ ಇನ್ನೊಂದು ಅದ್ಭುತ ಗುಣವೆಂದರೆ ಅದು ನರದ ಶಕ್ತಿಯನ್ನು ಹೆಚ್ಚಿಸುತ್ತದೆ. ಹಾಗಾಗಿ ಸಯಾಟಿಕಾದಂತಹ ಸಮಸ್ಯೆಗಳನ್ನು ಅನುಭವಿಸುತ್ತಿರುವವರಿಗೆ ಈರುಳ್ಳಿ ತುಂಬಾ ಲಾಭದಾಯಕ.

ಕಫದ ಸಮಸ್ಯೆಯಿಂದ ಬಳಲುತ್ತಿದ್ದು ಕಫ ಹೊರಗೆ ಬರುತ್ತಿಲ್ಲದಿದ್ದರೆ ಎರಡು ಚಮಚದಷ್ಟು ಈರುಳ್ಳಿ ರಸ, ಅರ್ಧ ಚಮಚದಷ್ಟು ಶುಂಠಿ ರಸ, ಅರ್ಧ ಚಮಚದಷ್ಟು ತುಳಸಿ ಎಲೆಗಳ ರಸ ಮತ್ತು ಒಂದು ಚಮಚ ಜೇನುತುಪ್ಪವನ್ನು ಸೇರಿಸಿ ದಿನಕ್ಕೆ ಒಂದು ಅಥವಾ ಎರಡು ಬಾರಿ ಸೇವಿಸಿದರೆ ಕಫ ಹೊರಗೆ ಬಂದು ಸಮಸ್ಯೆ ನಿವಾರಣೆಯಾಗುತ್ತದೆ.

ಈರುಳ್ಳಿ ಒಳ್ಳೆಯ ಜೀರ್ಣಕಾರಿಯೂ ಹೌದು ಹಾಗಾಗಿ ಅಜೀರ್ಣ ಇರುವವರಿಗೆ ಹೆಚ್ಚಿನ ಪ್ರಮಾಣದಲ್ಲಿ ಈರುಳ್ಳಿಯನ್ನು ಹಾಕಿ ಹೆಸರುಬೇಳೆಯ ತಿಳಿಸಾರು ಮಾಡಿ ಊಟಕ್ಕೆ ನೀಡಿದರೆ ಅಜೀರ್ಣದ ಸಮಸ್ಯೆ ತುಂಬಾ ಚೆನ್ನಾಗಿ ಹತೋಟಿಗೆ ಬರುತ್ತದೆ. ಜೊತೆಗೆ ಶಕ್ತಿ ವೃದ್ಧಿಯೂ ಆಗುತ್ತದೆ. ಒಟ್ಟಿನಲ್ಲಿ ಈರುಳ್ಳಿಯನ್ನು ಸರಿಯಾಗಿ ಬಳಸಿಕೊಂಡರೆ ಅದು ಕೇವಲ ತರಕಾರಿಯಲ್ಲ ಅದ್ಭುತ ಔಷಧ.(ಬರಹ-ಡಾ|| ವೆಂಕಟ್ರಮಣ ಹೆಗಡೆ
ವೇದ ವೆಲ್ನೆಸ್ ಸೆಂಟರ್, ನಿಸರ್ಗಮನೆ, ಶಿರಸಿ, ಉ.ಕನ್ನಡ)

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending