Connect with us

ನಿತ್ಯ ಭವಿಷ್ಯ

ನಿಮ್ಮ ಸರ್ವ ಸಮಸ್ಯೆಗಳಿಗೆ ಭಗವತಿ ದೇವಿಯ ಪೂಜಾ ಶಕ್ತಿಯಿಂದ ವಿಶೇಷ ಪರಿಹಾರ : ಕರೆಮಾಡಿ | 21-02-2020 ಶುಕ್ರವಾರ

Published

on

ನುಕುಲದ ಮಾಯಾಲೋಕದಲ್ಲಿ ಭಗವಂತನ ಮಾಯೆಯಾಟ ಉತ್ತರ ಸಿಗದ ದಿಗಂತ. ಜನ್ಮಜನ್ಮಾಂತರ ಗಳಿಂದ ನಾವು ಮಾಡಿದ ಪಾಪ ಕರ್ಮದ ಫಲವಾಗಿ ಸಮಸ್ಯೆಗಳು ಬೆಂಬಿಡದೆ ಕಾಡಬಹುದು . ಸಮಸ್ಯೆಗಳ ಪರಿಹಾರ ಮಾರ್ಗ ಜ್ಯೋತಿಷ್ಯಶಾಸ್ತ್ರ. ಭವ್ಯ ಭವಿಷ್ಯದ ಕನಸು ನನಸಾಗಲು ಇಂದೇ ಕರೆ ಮಾಡಿ  9964584883

ಶ್ರೀ ಕೇರಳ ಮಾಂತ್ರಿಕ ಜ್ಯೋತಿಷ್ಯ ಶಾಸ್ತ್ರಂ
ಜ್ಯೋತಿಷ್ಯರು. ಲಕ್ಷ್ಮಿಕಾಂತ್ ಭಟ್
9964584883

ಮೇಷ ರಾಶಿ

ಎಲ್ಲಾ ಕೆಲಸದಲ್ಲಿ ಆತ್ಮಸ್ಥೈರ್ಯ ಇರಲಿ.ಕೆಲಸ ಸಂಪೂರ್ಣ ಆಗುವವರೆಗೂ ನಿರ್ಲಕ್ಷ ತೋರದಿರಿ. ಇಂದು ನೀವು ಧಾರ್ಮಿಕ ಚಟುವಟಿಕೆಗಳಲ್ಲಿ ಪಾಲ್ಗೊಳ್ಳಲಿದ್ದೀರಿ. ವ್ಯವಹಾರದಲ್ಲಿ ಸಡಿಲತನ ಬೇಡ. ಮಡದಿಯಿಂದ ನಿರೀಕ್ಷಿತ ಶುಭ ಸುದ್ದಿ.
ಜ್ಯೋತಿಷ್ಯರು ಲಕ್ಷ್ಮಿಕಾಂತ್ ಭಟ್
9964584883
ಮಾಹಿತಿಗಾಗಿ ಕರೆ ಮಾಡಿ

ವೃಷಭ ರಾಶಿ

ಸನ್ನಿವೇಶ ಸಂದರ್ಭಗಳಿಗೆ ನಿಮ್ಮ ಬುದ್ಧಿಯನ್ನು ಉಪಯೋಗಿಸಿ ಜಯಶೀಲರಾಗುವುದು ಒಳಿತು. ನಿಮ್ಮ ವಿಚಾರ ಪ್ರಜ್ಞೆಯೂ ಜನ ಮನ್ನಣೆ ಗಳಿಸಲಿದೆ. ಹೊಗಳುಭಟ್ಟರಿಂದ ಆದಷ್ಟು ಅಂತರ ಕಾಯ್ದುಕೊಳ್ಳಿ. ನಿಮ್ಮ ಆತ್ಮೀಯ ಸಂಗಡಿಗರಿಂದ ಆರ್ಥಿಕ ಸ್ಥಿತಿಯಲ್ಲಿ ಚೇತರಿಕೆ ಕಾಣಬಹುದು.

ಜ್ಯೋತಿಷ್ಯರು ಲಕ್ಷ್ಮಿ ಕಾಂತ್ ಭಟ್
9964584883
ಮಾಹಿತಿಗಾಗಿ ಕರೆ ಮಾಡಿ

ಮಿಥುನ ರಾಶಿ

ಛಲ, ಹುಮ್ಮಸ್ಸು, ಚೈತನ್ಯ ಎಲ್ಲವೂ ಇಂದು ಕಾಣಲಿದೆ. ಚತುರತೆಯ ವ್ಯವಹಾರದಿಂದ ಲಾಭಾಂಶ. ಕುಟುಂಬದೊಡನೆ ಪ್ರವಾಸ ಯೋಗ. ಹಲವು ದಿನಗಳ ಈಡೇರಿದ ಆನಂದ. ನಿಮ್ಮ ಸಂಗಾತಿಯ ಒಲವಿನ ಮಾತಿಗೆ ಅಭಿಮಾನಿಯಾಗುವಿರಿ.
ಜ್ಯೋತಿಷ್ಯರು ಲಕ್ಷ್ಮಿ ಕಾಂತ್ ಭಟ್
9964584883
ಮಾಹಿತಿಗಾಗಿ ಕರೆ ಮಾಡಿ

ಕರ್ಕಟಾಕ ರಾಶಿ

ನಿಮ್ಮ ಕೆಲಸದ ಶ್ರೇಯಸ್ಸು ಇನ್ನೊಬ್ಬರ ಪಾಲಾಗದಂತೆ ಆದಷ್ಟು ನೋಡಿಕೊಳ್ಳಿ. ಉದ್ಯೋಗ ನಿಮಿತ್ತ ಪ್ರಯಾಣ ಹಾಗೂ ಉನ್ನತ ಮೂಲಗಳ ಸಾಂದರ್ಭಿಕ ಮಾತುಕತೆ ನಡೆಯಲಿದೆ. ಈಗ ಬಂದಿರುವ ವ್ಯವಹಾರಗಳಿಗೆ ಬಂಡವಾಳದ ಕೊರತೆಯ ಸಮಸ್ಯೆ ಬರುತ್ತದೆ. ನಿಮ್ಮ ಉತ್ಕೃಷ್ಟ ಕೆಲಸದ ಜ್ಞಾನಕ್ಕೆ ಹೊರ ವಲಯದಿಂದ ಬೇಡಿಕೆ ಕಾಣಬಹುದು. ಕುಟುಂಬದಲ್ಲಿ ಸೌಖ್ಯ.

ಜ್ಯೋತಿಷ್ಯರು ಲಕ್ಷ್ಮಿ ಕಾಂತ್ ಭಟ್
9964584883
ಮಾಹಿತಿಗಾಗಿ ಕರೆ ಮಾಡಿ

ಸಿಂಹ ರಾಶಿ

ವ್ಯವಹಾರ ನಿಮಿತ್ತ ಬಂಡವಾಳ ಕ್ರೂಡಿಕರಣ ಮಾಡಲು ಕೆಲವರ ಬಳಿ ಸಾಲ ಕೇಳುವ ಪರಿಸ್ಥಿತಿ ನಿರ್ಮಾಣವಾಗಬಹುದು. ಮನೆಯಲ್ಲಿ ಲಗ್ನ ಕಾರ್ಯದ ಬಗ್ಗೆ ಚಿಂತನೆ ನಡೆದಿದೆ. ನಿಮ್ಮ ಆಂತರಿಕ ಕಚೇರಿ ಕೆಲಸಗಳಲ್ಲಿ ಹಿನ್ನಡೆ. ನಂಬಿಕಸ್ಥ ಜನಗಳಿಂದ ಕೇಡು ಸಂಭವ.

ಜ್ಯೋತಿಷ್ಯರು ಲಕ್ಷ್ಮಿ ಕಾಂತ್ ಭಟ್
9964584883
ಮಾಹಿತಿಗಾಗಿ ಕರೆ ಮಾಡಿ

ಕನ್ಯಾ ರಾಶಿ

ನಿಮ್ಮ ವ್ಯವಹಾರವು ಚಾಕಚಕ್ಯತೆ ಇಂದ ಕೂಡಿದೆ. ಮನೆಯ ಆಂತರಿಕ ಕಲಹ ನಿಮ್ಮಿಂದ ಶಮನವಾಗಲಿದೆ. ಸ್ನೇಹಿತರ ಜೊತೆಯಲ್ಲಿ ಮೋಜು ಮಸ್ತಿಗಳಲ್ಲಿ ಪಾಲ್ಗೊಳ್ಳುವುದನ್ನು ತಡೆಯಿರಿ. ನಿಮ್ಮ ಮಾತು ನಿಯಂತ್ರಣ ಸಾಧಿಸಿ, ನಿಮ್ಮ ಬಗ್ಗೆ ನೀವೇ ಹೊಗಳಿಕೊಳ್ಳುವುದು ಅತಿಶಯೋಕ್ತಿಯಾಗುತ್ತದೆ.

ಜ್ಯೋತಿಷ್ಯರು ಲಕ್ಷ್ಮಿ ಕಾಂತ್ ಭಟ್
9964584883
ಮಾಹಿತಿಗಾಗಿ ಕರೆ ಮಾಡಿ

ತುಲಾ ರಾಶಿ

ನಿಮ್ಮಲ್ಲಿರುವ ಭಯವನ್ನು ತೆಗೆದು ಮುನ್ನಡೆಯಿರಿ. ರಿಯಲ್ ಎಸ್ಟೇಟ್ ಉದ್ಯಮದವರಿಗೆ, ಹಣಕಾಸಿನ ವ್ಯವಹಾರಸ್ಥರಿಗೆ ಇಂದು ಲಾಭ. ಪತ್ನಿಯ ಮನೆಯ ಕಡೆ ಇಂದು ಭೇಟಿ ನೀಡಲಿದ್ದೀರಿ. ನಿಮ್ಮಲ್ಲಿನ ವ್ಯಕ್ತಿತ್ವ ಪ್ರಶಂಸೆಗೆ ಪಾತ್ರವಾಗಲಿದೆ. ಪತ್ನಿಯಿಂದ ವಿಶೇಷ ಉಡುಗೊರೆಯನ್ನು ಪಡೆಯುವ ಸೌಭಾಗ್ಯ ನಿಮ್ಮದು.

ಜ್ಯೋತಿಷ್ಯರು ಲಕ್ಷ್ಮಿ ಕಾಂತ್ ಭಟ್
9964584883
ಮಾಹಿತಿಗಾಗಿ ಕರೆ ಮಾಡಿ

ವೃಶ್ಚಿಕ ರಾಶಿ

ನಿಮ್ಮ ವ್ಯವಹಾರಕ್ಕೆ ಆಪ್ತ ವರ್ಗದಿಂದ ಸಹಾಯ. ಉದ್ಯೋಗದಲ್ಲಿ ಅಥವಾ ಆರ್ಥಿಕ ವಿಚಾರಗಳಲ್ಲಿ ಹೊಸ ವ್ಯಕ್ತಿಯೊಡನೆ ವ್ಯವಹರಿಸುವಾಗ ಎಚ್ಚರವಿರಲಿ. ಮನೆಯಲ್ಲಿನ ಸಣ್ಣ ಪುಟ್ಟ ವಿಚಾರಗಳಿಗೆ ಆಗುವಂತಹ ಜಗಳವನ್ನು ನಿಲ್ಲಿಸಿ. ಮನೆಯ ವಿಷಯಗಳಲ್ಲಿ ಚರ್ಚೆಗಳಲ್ಲಿ ಅಥವಾ ಮಕ್ಕಳ ಹಿತಾಸಕ್ತಿಗಳನ್ನು ನಿಮ್ಮ ಪ್ರಾತಿನಿಧ್ಯ ಬಹುಮುಖ್ಯ.

ಜ್ಯೋತಿಷ್ಯರು ಲಕ್ಷ್ಮಿ ಕಾಂತ್ ಭಟ್
9964584883
ಮಾಹಿತಿಗಾಗಿ ಕರೆ ಮಾಡಿ

ಧನಸ್ಸು ರಾಶಿ

ನಿಮ್ಮ ಕೆಲಸವು ಇಂದು ಉತ್ಕೃಷ್ಟತೆ ಯಿಂದ ಕೂಡಿದೆ. ಎಲ್ಲರಿಂದಲೂ ಶಬ್ಬಾಸ್ ಗಿರಿಯನ್ನು ಪಡೆಯುವ ಅದೃಷ್ಟ. ನಿರುದ್ಯೋಗಿಗಳಿಗೆ ಉದ್ಯೋಗಾವಕಾಶಗಳು ಸಿಗಲಿದೆ. ಹಣಕಾಸಿನಲ್ಲಿ ಉತ್ತಮವಾಗಿದೆ ಹಾಗೂ ಹಳೆಯ ಸಾಲಗಳ ವಸೂಲಿ ಆಗಲಿದೆ.
ಜ್ಯೋತಿಷ್ಯರು ಲಕ್ಷ್ಮಿ ಕಾಂತ್ ಭಟ್
9964584883
ಮಾಹಿತಿಗಾಗಿ ಕರೆ ಮಾಡಿ

ಮಕರ ರಾಶಿ

ಅವಸರದ ನಿಮ್ಮ ನಿಲುವು ಕೆಲಸಕ್ಕೆ ಬಾರದಾಗಿದೆ, ಅವಕಾಶ ವಂಚಿತ ರಾಗಿರುವ ಸಾಧ್ಯತೆ. ಆರೋಗ್ಯಯುತ ಜೀವನಕ್ಕೆ ಉತ್ತಮ ಆಹಾರ ಸೇವನೆ. ಕಡತಗಳ ಪರಿಶೀಲನೆ ಯನ್ನು ತಾಳ್ಮೆಯಿಂದ ಮಾಡಿ. ಬಂಧುಗಳ ಮಿತ್ರರ ಸಹಕಾರದಿಂದ ಉದ್ಯೋಗದಲ್ಲಿ ಯಶಸ್ವಿಯಾಗುವಿರಿ.

ಜ್ಯೋತಿಷ್ಯರು ಲಕ್ಷ್ಮಿ ಕಾಂತ್ ಭಟ್
9964584883
ಮಾಹಿತಿಗಾಗಿ ಕರೆ ಮಾಡಿ

ಕುಂಭ ರಾಶಿ

ಕುಟುಂಬದ ಹಿತಾಸಕ್ತಿಯಿಂದ ವ್ಯವಹಾರದಲ್ಲಿ ಸಾಧನೆ. ನಿಮ್ಮ ಮಾತುಗಳಿಂದ ಹಲವರ ಮನಸ್ಸನ್ನು ಗೆಲ್ಲುವಿರಿ. ಇಂದು ನಿಮ್ಮಲ್ಲಿ ಗತಿಸಿದ ಘಟನೆಗಳನ್ನು ನೆನಪಿಸಿಕೊಳ್ಳಲಿದಿರಿ. ಬಳಗದ ಜನಗಳಿಂದ ಇಂದು ವ್ಯವಹಾರ ಬೇಡ.

ಜ್ಯೋತಿಷ್ಯರು ಲಕ್ಷ್ಮಿ ಕಾಂತ್ ಭಟ್
9964584883
ಮಾಹಿತಿಗಾಗಿ ಕರೆ ಮಾಡಿ

ಮೀನ ರಾಶಿ

ದಾಂಪತ್ಯ ಜೀವನದಲ್ಲಿ ಅನ್ಯೂನತೆ ಕಾಣುವಿರಿ. ವಿವಾಹ ಸಿದ್ಧತೆ ನಡೆಸುವವರಿಗೆ ಶುಭ ಸುದ್ದಿ. ಕೆಲಸದ ಸ್ಥಳದಲ್ಲಿ ಸಹವರ್ತಿಗಳ ಅನುಚಿತ ವರ್ತನೆ. ನಿಮ್ಮ ಮಡದಿಯ ಕೆಲವು ಆಶೋತ್ತರ ಈಡೇರಿಸುವಿರಿ.

ಜ್ಯೋತಿಷ್ಯರು ಲಕ್ಷ್ಮಿ ಕಾಂತ್ ಭಟ್
9964584883
ಮಾಹಿತಿಗಾಗಿ ಕರೆ ಮಾಡಿ

ಜ್ಯೋತಿಷ್ಯರು ಲಕ್ಷ್ಮಿಕಾಂತ್ ಭಟ್
ಕಠಿಣ ಸಮಸ್ಯೆಗಳಿಗೆ ಸೂಕ್ತವಾದ ಪರಿಹಾರ ಮತ್ತು ಮಾರ್ಗದರ್ಶನ ಸೂಚಿಸುತ್ತಾರೆ. 
ಸಮಸ್ಯೆಗಳು ಹತ್ತು-ಹಲವಾರು ಪರಿಹಾರ ಮಾತ್ರ ಒಂದೇ ಅದುವೇ ಜ್ಯೋತಿಷ್ಯಶಾಸ್ತ್ರ. 
ನಿಮ್ಮ ಒಂದು ಕರೆ ಜೀವನವನ್ನು ಬದಲಾಯಿಸಬಹುದು.  9964584883

ಅಂಕಣ

ದೀಪಾವಳಿ ವಿಶೇಷಾಂಕ | ದೇವನಗರಿ ಸುದ್ದಿದಿನ ಪತ್ರಿಕೆಯಿಂದ ಕತೆ- ಕವಿತೆ- ಲೇಖನ- ರೂಪದರ್ಶಿ ಫೋಟೋ ಗಳಿಗೆ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ: ಪ್ರಿಯ ಓದುಗರೆ, ಬೆಳಕಿನ ಹಬ್ಬ ದೀಪಾವಳಿಯ ಪ್ರಯುಕ್ತ ದೇವನಗರಿ ಸುದ್ದಿದಿನ – ಕನ್ನಡ ದಿನ ಪತ್ರಿಕೆ ಹಾಗೂ ಶ್ಯಾಮ್ ಪ್ರಕಾಶನದವತಿಯಿಂದ ‘ ದೀಪಾವಳಿ ವಿಶೇಷಾಂಕ’-2026ನ್ನು ತರಲಾಗುತ್ತಿದೆ.

ಈ‌ ಹಿನ್ನೆಲೆಯಲ್ಲಿ ದೀಪಾವಳಿ ವಿಷೇಶಾಂಕ 2026ರ ವಿಭಾಗಕ್ಕೆ ಕತೆ, ಕವಿತೆ ಹಾಗೂ ಲೇಖನ ಹಾಗೂ ರೂಪದರ್ಶಿಗಳ ಛಾಯಾಚಿತ್ರಗಳನ್ನು ಆಹ್ವಾನಿಸಿದ್ದೇವೆ.

ಕತೆ – ಕವಿತೆಗಳನ್ನು ಕಳುಹಿಸಲು ಇರುವ ನಿಯಮಗಳು

ಕತೆ/ಕವಿತೆ ಸ್ವತಂತ್ರ ರಚನೆಯಾಗಿರಬೇಕು. ಈ ಮೊದಲು ಯಾವ ಮಾಧ್ಯಮಗಳಲ್ಲಿಯೂ ಪ್ರಕಟ ಅಥವಾ ಪ್ರಸಾರ ಆಗಿರಬಾರದು.

ಕತೆ 1500 ಸಾವಿರ ಪದಗಳ ಮಿತಿಯಲ್ಲಿರಲಿ. ಕವಿತೆಗೆ 40 ಸಾಲಿನ ಮಿತಿಯಿರಲಿ, ನುಡಿ ಅಥವಾ ಬರಹ ತಂತ್ರಾಂಶದಲ್ಲಿ ಇಲ್ಲವೆ ಯೂನಿಕೋಡ್‌ನಲ್ಲಿ ಇರಬೇಕು. ವಯಸ್ಸಿನ ಮಿತಿ ಇರುವುದಿಲ್ಲ.

ಕತೆ/ಕವಿತೆ ಇರುವ ಪುಟದಲ್ಲಿ ಹೆಸರು, ವಿವರ ಬರೆಯುವಂತಿಲ್ಲ. ಪ್ರತ್ಯೇಕ ಪುಟದಲ್ಲಿ ಹೆಸರು, ಅಂಚೆ ವಿಳಾಸ, ಮೊಬೈಲ್ ನಂಬರ್, ಇ-ಮೇಲ್ ವಿಳಾಸ ಒದಗಿಸಬೇಕು.

ಇತ್ತೀಚಿನ ಪಾಸ್‌ಪೋರ್ಟ್ ಅಳತೆಯ ವರ್ಣಮಯ ಭಾವಚಿತ್ರದೊಂದಿಗೆ 100 ಪದಗಳ ಒಳಗೆ ಕಿರು ಪರಿಚಯ ಕಳುಹಿಸಬೇಕು.

ಸ್ಪರ್ಧೆಗೆ ಕಳುಹಿಸಿರುವ ಬರಹಗಳನ್ನು ಹಿಂದಿರುಗಿಸುವುದಿಲ್ಲ. ಬರಹಗಳು ಕಡ್ಡಾಯವಾಗಿ ಎಂಎಸ್ ವರ್ಡ್ ಫೈಲ್ (MS word File) ನಲ್ಲಿರಲಿ.

ಬರಹ ಮತ್ತು ಫೋಟೋಗಳನ್ನು ಇ-ಮೇಲ್ ಮೂಲಕವಷ್ಟೇ ಕಳಿಸಿ.

ತೀರ್ಪುಗಾರರ ತೀರ್ಮಾನವೇ ಅಂತಿಮ.

ಲೇಖನಗಳಿಗೆ ಆಹ್ವಾನ : ವೈಚಾರಿಕತೆ, ವಿಮರ್ಶೆ, ಕಾನೂನು, ಸಾಹಿತ್ಯ, ತಂತ್ರಜ್ಞಾನ, ವಿಜ್ಞಾನ, ಡಿಜಿಟಲ್ ಮಾಧ್ಯಮ, ಸಿನೆಮಾ, ಪ್ರೇಮಪತ್ರ, ಕೃಷಿ, ರಾಜಕೀಯ, ಕಲೆ, ಆರೋಗ್ಯ, ಪ್ರವಾಸ, ಅಡುಗೆ, ಫೋಟೋಗ್ರಫಿ, ವೈಲ್ಡ್ ಲೈಫ್, ಹಾಸ್ಯ ಕುರಿತಾದ ಲೇಖನಗಳನ್ನು 450 ಪದಗಳನ್ನು ಮೀರದಂತೆ ಬರೆದು ಕಳುಹಿಸಿ.

ಹಾಗೆಯೇ, ವಿಶೇಷಾಂಕದ ಮುಖಪುಟದ ರೂಪದರ್ಶಿಯಾಗಲು ಅವಕಾಶವನ್ನು ಕಲ್ಪಸಿಲಾಗಿದೆ. ಆಸಕ್ತ ರೂಪದರ್ಶಿಗಳು ಸ್ಟುಡಿಯೋ ಅಥವಾ ಫೋಟೋಗ್ರಾಫರ್ ಮೂಲಕ ತೆಗೆದ ‘6*4 ಅಳತೆಯ ಮುದ್ರಿತ ಫೋಟೋ ಮತ್ತು ಇ-ಮೇಲ್ ಮೂಲಕವೂ ಕಳಿಸಬಹುದು. 80 ಪದಗಳಮಿತಿಯೊಳಗೆ ನಿಮ್ಮ ಪರಿಚಯದೊಂದಿಗೆ, ಒಬ್ಬರು 4 ಫೋಟೋ ಕಳುಹಿಸಬೇಕು. ವಯಸ್ಸಿನ ಮಿತಿಯಿಲ್ಲ ಇರುವುದಿಲ್ಲ.

ಕತೆಯ ವಿಜೇತರಿಗೆ ಪ್ರಥಮ ಬಹುಮಾನ : 10000, ದ್ವಿತೀಯ ಬಹುಮಾನ : 5000, ತೃತೀಯ ಬಹುಮಾನ : 3000 ಹಾಗೂ ಕವಿತೆ ಬಹುಮಾನ ವಿಜೇತರಿಗೆ ಪ್ರಥಮ ಬಹುಮಾನ : 5000 ದ್ವಿತೀಯ ಬಹುಮಾನ : 3000 ಹಾಗೂ ತೃತೀಯ ಬಹುಮಾನ : ₹2000 ಸಿಗಲಿದೆ.

ಆಗಸ್ಟ್‌ 30ರೊಳಗೆ ಬರಹಗಳನ್ನು ಇ-ಮೇಲ್‌: deepasuddidina@gmail.com ಗೆ ಕಳುಹಿಸಲು ತಿಳಿಸಿದೆ. ಈ ಕುರಿತು ಹೆಚ್ಚಿನ ಮಾಹಿತಿಗಾಗಿ :9980346243 ಹಾಗೂ visit: www.suddidina.com ಅನ್ನು ವೀಕ್ಷಿಸಬಹುದಾಗಿದೆ.

ಕಚೇರಿ ವಿಳಾಸ 

ದೇವನಗರಿ ಸುದ್ದಿದಿನ- ಕನ್ನಡ ದಿನ ಪತ್ರಿಕೆ
ದೀಪಾವಳಿ ವಿಶೇಷಾಂಕ ವಿಭಾಗ
#3231/1, ಸಂಜೀವ ಸದನ, 11ನೇ ಮುಖ್ಯರಸ್ತೆ, 4 ನೇ ಅಡ್ಡರಸ್ತೆ, ಎಂಸಿಸಿ ಬಿ ಬ್ಲಾಕ್, ದಾವಣಗೆರೆ, 577004

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ಕ್ರೀಡೆ

ರಾಜ್ಯದ ವಿವಿಧ ನೀರಾವರಿ ಯೋಜನೆಗಳಿಗೆ ಹೆಚ್ಚಿನ ಅನುದಾನ ; ಇ-ಖಾತೆ ಅಭಿಯಾನ ಹಾಗೂ ಇತರೆ ‌ಪ್ರಮುಖ ಸುದ್ದಿಗಳು

Published

on

ರಾಜ್ಯದ ವಿವಿಧ ನೀರಾವರಿ ಯೋಜನೆಗಳಿಗೆ ಹೆಚ್ಚಿನ ಅನುದಾನ ; ಇ-ಖಾತೆ ಅಭಿಯಾನ ಹಾಗೂ ಇತರೆ ‌ಪ್ರಮುಖ ಸುದ್ದಿಗಳು

1. ಮುಖ್ಯಮಂತ್ರಿ ಸಿದ್ದರಾಮಯ್ಯ ನವದೆಹಲಿ ತಲುಪಿದ್ದಾರೆ. ಇಂದು ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿ ಮಾಡಿ, 5 ಪ್ರಮುಖ ಮಸೂದೆಗಳಿಗೆ ಅಂಗೀಕಾರ ನೀಡುವಂತೆ ಮನವಿ ಮಾಡಲಿದ್ದಾರೆ ಎಂದು ಉನ್ನತ ಮೂಲಗಳು ತಿಳಿಸಿವೆ. ಭದ್ರಾ ಮೇಲ್ದಂಡೆ ಯೋಜನೆ ಸೇರಿದಂತೆ ರಾಜ್ಯದ ವಿವಿಧ ನೀರಾವರಿ ಯೋಜನೆಗಳಿಗೆ, ಹೆಚ್ಚಿನ ಅನುದಾನ ಬಿಡುಗಡೆ ಮಾಡುವಂತೆ, ಕೇಂದ್ರದ ಜಲಶಕ್ತಿ ಖಾತೆ ಸಚಿವರನ್ನು ಕೋರುವುದಾಗಿ, ಇದೇ ವೇಳೆ ಸಾಮಾಜಿಕ ಜಾಲತಾಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

2. ರಾಜ್ಯದ ಗ್ರಾಮ ಪಂಚಾಯ್ತಿಗಳ ಹಂತದಲ್ಲಿ ಜುಲೈ 15ರಿಂದ, ಸಾರ್ವಜನಿಕರ ಆಸ್ತಿಗಳ ಇ-ಖಾತೆ ರೂಪಿಸುವ ಅಭಿಯಾನವನ್ನು ಕಂದಾಯ ಇಲಾಖೆ ಆಯೋಜಿಸಲಿದೆ ಎಂದು ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.

3. ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆಗೆ ಸಂಬಂಧಿಸಿ, ಇಲ್ಲಿಯವರೆಗೆ ಹೆಸರು ನೋಂದಾಯಿಸದವರು, ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ, ಈ ತಿಂಗಳ 30ರವರೆಗೆ ಮಾಹಿತಿ ನೀಡಲು ಅವಕಾಶವಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಎ.ಬಿ.ಬಸವರಾಜು ತಿಳಿಸಿದ್ದಾರೆ.

4. ಕಾವೇರಿ ಜಲಾನಯನ ಪ್ರದೇಶದಲ್ಲಿ ವ್ಯಾಪಕವಾಗಿ ಸುರಿಯುತ್ತಿರುವ ಮಳೆಯಿಂದ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆ.ಆರ್.ಎಸ್. ಅಣೆಕಟ್ಟೆ ಭಾಗಶ: ಭರ್ತಿಯಾಗಿದ್ದು, ಒಳ ಹರಿವು ಇನ್ನಷ್ಟು ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಅಣೆಕಟ್ಟೆಯಿಂದ 5 ಸಾವಿರದಿಂದ 15 ಸಾವಿರ ಕ್ಯುಸೆಕ್ ನೀರನ್ನು ನದಿಗೆ ಹರಿಸಲಾಗಿದೆ.

5. ಕತಾರ್‌ನಲ್ಲಿರುವ ಅಲ್ ಉದೈದ್ ಅಮೇರಿಕ ವಾಯುನೆಲೆಯ ಮೇಲೆ ಇರಾನ್ ನಡೆಸಿದ ದಾಳಿಯ ನಂತರ ಜಾಗತಿಕ ತೈಲ ಬೆಲೆಗಳು ಐದು ವರ್ಷಗಳಲ್ಲಿ ನಿನ್ನೆ ಒಂದೇ ದಿನದಲ್ಲಿ ತೀವ್ರ ಕುಸಿತವನ್ನು ದಾಖಲಿಸಿದೆ.

6. ಕರ್ನಾಟಕ, ಮಧ್ಯಪ್ರದೇಶ, ಬಿಹಾರ, ಜಾಖಂಡ್, ಒಡಿಶಾ, ಛತ್ತೀಸ್‌ಗಢ, ಪಶ್ಚಿಮ ಬಂಗಾಳ, ಸಿಕ್ಕಿಂ, ಅರುಣಾಚಲ ಪ್ರದೇಶ, ಕೊಂಕಣ, ಗೋವಾ, ಮಹಾರಾಷ್ಟ್ರ, ಗುಜರಾತ್, ಹಿಮಾಚಲ ಪ್ರದೇಶ, ಉತ್ತರಾಖಂಡ, ಪಶ್ಚಿಮ ಉತ್ತರ ಪ್ರದೇಶ, ರಾಜಸ್ಥಾನ, ಕೇರಳದ ಕೆಲವು ಸ್ಥಳಗಳಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

7. ಅಯೋವಾದಲ್ಲಿ ನಾಳೆ ಆರಂಭವಾಗಲಿರುವ ಯುಎಸ್ ಓಪನ್ 2025 ಬ್ಯಾಡ್ಮಿಂಟನ್ ಪಂದ್ಯಾವಳಿಯ ಪುರುಷರ ಡಬಲ್ಸ್ ವಿಭಾಗದಲ್ಲಿ ಹರಿಹರನ್ ಅಂಶಕರುಣನ್ ಮತ್ತು ರೂಬನ್ ಕುಮಾರ್ ರೆಥಿನಸಬಪತಿ, ಭಾರತವನ್ನು ಮುನ್ನಡೆಸಲಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಈರುಳ್ಳಿ ಕೇವಲ ತರಕಾರಿಯಲ್ಲ ; ಅದ್ಭುತ ಔಷಧ

Published

on

ನಾವು ನಿತ್ಯವೂ ತಯಾರಿಸುವ ಅಡುಗೆ ಪದಾರ್ಥಗಳಿಗೆ ಈರುಳ್ಳಿಯನ್ನು ಹಾಕದಿದ್ದಾಗ ಒಂದು ರುಚಿಯಾದರೆ ಅದನ್ನು ಹಾಕಿದಾಗ ಆ ಪದಾರ್ಥದ ರುಚಿಯೇ ಬೇರೆಯಾಗುತ್ತದೆ. ನಾವು ಈರುಳ್ಳಿಯ ಗುಣಗಳು, ಅದರ ಉಪಯೋಗಗಳು ಮತ್ತು ಮನೆ ಮದ್ದುಗಳ ಬಗ್ಗೆ ತಿಳಿದುಕೊಳ್ಳೋಣ.

ಆಯುರ್ವೇದದಲ್ಲಿ ಈರುಳ್ಳಿಯ ಬಗ್ಗೆ ವಿಸ್ತೃತ ವಿವರಣೆ ಇದೆ. ಆಯುರ್ವೇದ ಗ್ರಂಥಗಳ ಪ್ರಕಾರ ಈರುಳ್ಳಿಗೆ ಬೆಳ್ಳುಳ್ಳಿಯ ಗುಣಗಳಿವೆ. ಆದರೆ ಬೆಳ್ಳುಳ್ಳಿಯಂತೆ ಇದು ಉಷ್ಣವಲ್ಲ. ಹಾಗಾಗಿ ಬೆಳ್ಳುಳ್ಳಿಯ ಅದ್ಭುತ ಗುಣಗಳನ್ನು ಪಡೆಯಬೇಕು ಎಂದಾದರೆ ಮತ್ತು ಬೆಳ್ಳುಳ್ಳಿಯನ್ನು ಸೇವಿಸಿದರೆ ಉಷ್ಣವಾಗುತ್ತದೆ ಎಂಬ ಯೋಚನೆ ಇದ್ದರೆ ಬದಲಿಗೆ ಈರುಳ್ಳಿಯನ್ನು ಬಳಸಬಹುದು.

ಭಾವ ಪ್ರಕಾಶ ನಿಘಂಟು ಎಂಬ ಗ್ರಂಥದಲ್ಲಿ “ಬಲವೀರ್ಯ ಕೈರೋ ಗುರುಃ” ಎಂದಿದ್ದಾರೆ. ಅಂದರೆ ಈರುಳ್ಳಿಯು ದೇಹದ ಬಲವನ್ನು, ವೀರ್ಯದ ಗುಣಮಟ್ಟವನ್ನು, ಲೈಂಗಿಕ ಶಕ್ತಿಯನ್ನು ಹೆಚ್ಚಿಸುತ್ತದೆ ಎಂದರ್ಥ. ಬಹುತೇಕ ಎಲ್ಲಾ ಆಯುರ್ವೇದ ಗ್ರಂಥಗಳಲ್ಲಿಯೂ ಈರುಳ್ಳಿಯಿಂದ ಲೈಂಗಿಕ ಶಕ್ತಿ ವೃದ್ಧಿಯಾಗುತ್ತದೆ ಎಂಬುದನ್ನು ಹೇಳಲಾಗಿದೆ. ಇದು ಚರ್ಮಕ್ಕೆ ಕೂಡ ಅತ್ಯಂತ ಅನುಕೂಲಕರವಾದದ್ದು. ಚರ್ಮವನ್ನು ಸ್ನಿಗ್ಧಗೊಳಿಸಿ ಒರಟುತನವನ್ನು ಹೋಗಲಾಡಿಸುತ್ತದೆ; ಚರ್ಮಕ್ಕೆ ಕಾಂತಿಯನ್ನು ಕೊಡುತ್ತದೆ; ಜೊತೆಗೆ ಚರ್ಮದ ಶುದ್ಧಿಯನ್ನೂ ಮಾಡುತ್ತದೆ ಎಂದು ವಿವರಿಸಲಾಗಿದೆ. ಈರುಳ್ಳಿಯನ್ನು ನಿಯಮಿತವಾಗಿ ಸೇವಿಸುವುದರಿಂದ ದೇಹದ ಬಾಹ್ಯ ಮತ್ತು ಆಂತರಿಕ ಕಾಂತಿ ಹೆಚ್ಚುತ್ತದೆ.

ಅಂದರೆ ಕೇವಲ ಸೌಂದರ್ಯವೃದ್ಧಿಯಷ್ಟೇ ಅಲ್ಲ ದೇಹದೊಳಗಿನ ರೋಗನಿರೋಧಕ ಶಕ್ತಿ ತುಂಬಾ ಚೆನ್ನಾಗಿ ಹೆಚ್ಚುತ್ತದೆ. ಈರುಳ್ಳಿಯು ಧ್ವನಿಗೆ ಸಂಬಂಧಿಸಿದ ಸಮಸ್ಯೆಗಳನ್ನು ಹೋಗಲಾಡಿಸಿ ಒಳ್ಳೆಯ ಧ್ವನಿಯನ್ನು ನೀಡುತ್ತದೆ ಎಂದು ವಿವರಿಸಲಾಗಿದೆ. ಹೀಗಾಗಿ ಹಾಡುಗಾರರು, ಅಧ್ಯಾಪಕರಂಥವರಿಗೆ ನಿಯಮಿತ ಈರುಳ್ಳಿ ಸೇವನೆ ಅನುಕೂಲಕರ. ಇದು ಕಣ್ಣಿನ ಆರೋಗ್ಯವನ್ನು ಹೆಚ್ಚಿಸುವುದರಿಂದ ಹತ್ತರಿಂದ ಹದಿನೈದು ಮಿಲೀ ಈರುಳ್ಳಿ ರಸವನ್ನು ಸುಮಾರು ಒಂದು ತಿಂಗಳು ದಿನಕ್ಕೊಮ್ಮೆ ಸೇವಿಸುವುದರಿಂದ ಚಿಕ್ಕಪುಟ್ಟ ಕಣ್ಣಿನ ತೊಂದರೆಗಳು ನಿವಾರಣೆಯಾಗುತ್ತವೆ. ಸ್ವಲ್ಪ ಸಿಹಿ ಇರುವ ಅಂದರೆ ಖಾರ ಕಡಿಮೆ ಇರುವ ಈರುಳ್ಳಿಯನ್ನು ಚಿಕ್ಕ ಚಿಕ್ಕ ತುಂಡುಗಳನ್ನಾಗಿ ಕತ್ತರಿಸಿ ತುಪ್ಪದಲ್ಲಿ ಹುರಿದು ನಿಯಮಿತವಾಗಿ ಸೇವಿಸಿದರೆ ಲೈಂಗಿಕ ಶಕ್ತಿಯ ವೃದ್ಧಿಯಾಗುತ್ತದೆ.

ಕೂದಲು ಉದುರುವುದನ್ನು ಕಡಿಮೆ ಮಾಡಲು ಈರುಳ್ಳಿಯು ಸಹಕಾರಿ. ಈರುಳ್ಳಿಯ ರಸ ತೆಗೆದು ತಲೆ ಸ್ನಾನ ಮಾಡುವ ಹತ್ತು ನಿಮಿಷ ಮೊದಲು ಕೂದಲಿನ ಬುಡಕ್ಕೆ ಹಚ್ಚಬೇಕು. ಇದರಿಂದ ಕೂದಲಿನ ಬೆಳವಣಿಗೆ ಚೆನ್ನಾಗಿ ಆಗಲು ಮತ್ತು ಕೂದಲು ಉದುರುವುದು ನಿಲ್ಲಲು ಸಹಾಯವಾಗುತ್ತದೆ. ಬೊಜ್ಜನ್ನು ಕಡಿಮೆ ಮಾಡಲು ಕೂಡ ಈರುಳ್ಳಿಯು ಸಹಕಾರಿ. ಬೆಳ್ಳುಳ್ಳಿಯ ಇನ್ನೊಂದು ಅದ್ಭುತ ಗುಣವೆಂದರೆ ಅದು ನರದ ಶಕ್ತಿಯನ್ನು ಹೆಚ್ಚಿಸುತ್ತದೆ. ಹಾಗಾಗಿ ಸಯಾಟಿಕಾದಂತಹ ಸಮಸ್ಯೆಗಳನ್ನು ಅನುಭವಿಸುತ್ತಿರುವವರಿಗೆ ಈರುಳ್ಳಿ ತುಂಬಾ ಲಾಭದಾಯಕ.

ಕಫದ ಸಮಸ್ಯೆಯಿಂದ ಬಳಲುತ್ತಿದ್ದು ಕಫ ಹೊರಗೆ ಬರುತ್ತಿಲ್ಲದಿದ್ದರೆ ಎರಡು ಚಮಚದಷ್ಟು ಈರುಳ್ಳಿ ರಸ, ಅರ್ಧ ಚಮಚದಷ್ಟು ಶುಂಠಿ ರಸ, ಅರ್ಧ ಚಮಚದಷ್ಟು ತುಳಸಿ ಎಲೆಗಳ ರಸ ಮತ್ತು ಒಂದು ಚಮಚ ಜೇನುತುಪ್ಪವನ್ನು ಸೇರಿಸಿ ದಿನಕ್ಕೆ ಒಂದು ಅಥವಾ ಎರಡು ಬಾರಿ ಸೇವಿಸಿದರೆ ಕಫ ಹೊರಗೆ ಬಂದು ಸಮಸ್ಯೆ ನಿವಾರಣೆಯಾಗುತ್ತದೆ.

ಈರುಳ್ಳಿ ಒಳ್ಳೆಯ ಜೀರ್ಣಕಾರಿಯೂ ಹೌದು ಹಾಗಾಗಿ ಅಜೀರ್ಣ ಇರುವವರಿಗೆ ಹೆಚ್ಚಿನ ಪ್ರಮಾಣದಲ್ಲಿ ಈರುಳ್ಳಿಯನ್ನು ಹಾಕಿ ಹೆಸರುಬೇಳೆಯ ತಿಳಿಸಾರು ಮಾಡಿ ಊಟಕ್ಕೆ ನೀಡಿದರೆ ಅಜೀರ್ಣದ ಸಮಸ್ಯೆ ತುಂಬಾ ಚೆನ್ನಾಗಿ ಹತೋಟಿಗೆ ಬರುತ್ತದೆ. ಜೊತೆಗೆ ಶಕ್ತಿ ವೃದ್ಧಿಯೂ ಆಗುತ್ತದೆ. ಒಟ್ಟಿನಲ್ಲಿ ಈರುಳ್ಳಿಯನ್ನು ಸರಿಯಾಗಿ ಬಳಸಿಕೊಂಡರೆ ಅದು ಕೇವಲ ತರಕಾರಿಯಲ್ಲ ಅದ್ಭುತ ಔಷಧ.(ಬರಹ-ಡಾ|| ವೆಂಕಟ್ರಮಣ ಹೆಗಡೆ
ವೇದ ವೆಲ್ನೆಸ್ ಸೆಂಟರ್, ನಿಸರ್ಗಮನೆ, ಶಿರಸಿ, ಉ.ಕನ್ನಡ)

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending