ನಿತ್ಯ ಭವಿಷ್ಯ
ನಾಗರ ಪಂಚಮಿ ಭವಿಷ್ಯ ವಾಣಿ ಮತ್ತು ಸಮಸ್ಯೆಗಳಿಗೆ ಪರಿಹಾರ ಮಾರ್ಗದರ್ಶನ : 05/08/2019 ಸೋಮವಾರ
ಈ ದಿನ ಶ್ರಾವಣ ಸೋಮವಾರ ನಾಗರ ಪಂಚಮಿ ಬಂದಿರುವುದು ಬಹಳ ನಾಗಪೂಜೆ ವಿಶೇಷತೆ ಇದೆ ಕೆಲವು ಜಾತಕದಲ್ಲಿ ಕುಜದೋಷ ,ನಾಗದೋಷ, ಸಂತಾನ ದೋಷಗಳು ಕಂಡು ಬಂದರೆ ಸರ್ವ ಸಮಸ್ಯೆಗಳಿಗೆ ಸೂಕ್ತವಾದ ಶಾಶ್ವತವಾಗಿ ಪರಿಹಾರ ಹುಡುಕಲು ಇಂದೇ ಕರೆಮಾಡಿ. ಪಂಡಿತ್ ಶ್ರೀ ಸೂರ್ಯನಾರಾಯಣಭಟ್. 9900494333.
ನಾಗರ ಪಂಚಮಿ
ಇಂದು ನಾಗರ ಕಲ್ಲಿಗೆ ನಾಗ ದೇವತೆಗಳಿಗೆ ಹಾಲು ಎರೆದು ಅಭಿಷೇಕ ಮಾಡಿ ಪೂಜೆ ಮಾಡುವುದು ಶ್ರೇಷ್ಠತೆ ಎನಿಸುತ್ತದೆ. ನಿಮ್ಮ ದೋಷಗಳು ಕೂಡ ಪರಿಹಾರವಾಗುವುದು. ಮನೆಯಲ್ಲಿ ಸಿಹಿ ತಿನಿಸುಗಳು ಮಾಡಿ ಸೇವಿಸುವುದು ಒಳ್ಳೆಯದು. ಹೆಚ್ಚಿನ ಮಾಹಿತಿಗೆ ಕರೆಮಾಡಿ ತಿಳಿದುಕೊಳ್ಳುವುದು ಉತ್ತಮ ಎನಿಸುತ್ತದೆ.
ಮೇಷ ರಾಶಿ
ನೀವು ಉದ್ಯೋಗದಲ್ಲಿ ದೀರ್ಘಾವಧಿ ಕೆಲಸದ ಯೋಜನೆ ಮಾಡುತ್ತೀರಿ ಆದರೆ ಅದರ ವೆಚ್ಚಗಳ ಮೇಲೆ ಗಮನ ನೀಡಬೇಕು. ನಿಮ್ಮ ಆರೋಗ್ಯ ಸಮಸ್ಯೆಗಳನ್ನು ಕಾಪಾಡಿಕೊಳ್ಳಬಹುದು. ಹಣಕಾಸಿನಲ್ಲಿ ಅದೃಷ್ಟವನ್ನು ಸುಧಾರಿಸಿಕೊಳ್ಳಲು ಹಲವು ಅವಕಾಶಗಳನ್ನು ಪಡೆಯುತ್ತೀರಿ. ನಿಮ್ಮ್ಮ ಜೀವನದಲ್ಲಿ ಸಮತೋಲನವನ್ನು ನಿರ್ವಹಿಸುವುದು ಉತ್ತಮ. ಕುಟುಂಬದ ಮದುವೆ ವಿಷಯಗಳಲ್ಲಿ ಕೋಪಮಾಡಿ ನಿರ್ಧಾರ ತೆಗೆದುಕೊಳ್ಳಬಾರದು. ನಾಗರ ಪಂಚಮಿ ಹಬ್ಬ ಸಂಭ್ರಮ ಮಾಡುವುದು ಉತ್ತಮ ಎನಿಸುತ್ತದೆ. (ಪರಿಹಾರಕ್ಕೆ ಕರೆಮಾಡಿ) 9900494333.
ವೃಷಭ ರಾಶಿ
ಸಾಮಾನ್ಯ ರೀತಿಯಲ್ಲಿ ಖರ್ಚು ಹೆಚ್ಚಾಗಿ ಆಗುತ್ತದೆ. ನೀವು ನಿಲ್ಲಿಸಿದ ಕೆಲಸ ಕಾರ್ಯಗಳು ಈ ದಿನ ಪೂರ್ಣಗೊಳ್ಳುತ್ತವೆ. ಮಿತ್ರರಿಂದ ಧನಸಹಾಯವನ್ನು ಪಡೆಯುತ್ತೀರಿ. ಆರೋಗ್ಯದ ಬಗ್ಗೆ ತುಂಬಾ ಚಿಂತಿಸಬೇಕಿಲ್ಲ. ನಿಮ್ಮ ಎಲ್ಲಾ ಕುಟುಂಬದವರಿಂದ ಬೆಂಬಲ ಸಿಗಬಹುದು. ಉದ್ಯೋಗಿಗಳು ಕೆಲಸದಲ್ಲಿ ಲಘುವಾಗಿ ಪರಿಗಣಿಸಿದರೆ ನಂತರದಲ್ಲಿ ಗಂಭೀರ ಸಮಸ್ಯೆ ಉಂಟಾಗುತ್ತದೆ. (ಪರಿಹಾರಕ್ಕೆ ಕರೆಮಾಡಿ) 9900494333.
ಮಿಥುನ ರಾಶಿ
ಹಣಕಾಸಿನ ವಿಷಯದಲ್ಲಿ ಸ್ವಲ್ಪ ಮಟ್ಟಿಗೆ ಏಳು ಬೀಳುಗಳ ಜತೆಗೆ ಕುಟುಂಬ ಜೀವನ ಕೂಡ ಸಹಜವಾಗಿ ಇರುತ್ತದೆ. ಸಹೋದ್ಯೋಗಿಗಳ ಜೊತೆ ನಿಮ್ಮ ಯಶಸ್ಸನ್ನು ಹಂಚಿಕೊಳ್ಳಲು ಹೋಗಬೇಡಿ. ವ್ಯಾಪಾರ ವ್ಯವಹಾರದಲ್ಲಿ ಲಾಭ ದೊರೆಯುತ್ತದೆ. ನೀವು ವಿದ್ಯಾಭ್ಯಾಸದಲ್ಲಿ ಸ್ವಲ್ಪ ಕಠಿಣ ಪರಿಶ್ರಮ ಪಡೆಯುವುದು ಉತ್ತಮ. ಗೌರವ ಸ್ಥಾನ ಮಾನ ಪುಣ್ಯ ಫಲಗಳು ದೊರೆಯುತ್ತದೆ. (ಪರಿಹಾರಕ್ಕೆ ಕರೆಮಾಡಿ) 9900494333.
ಕರ್ಕಾಟಕ ರಾಶಿ
ನಿಮ್ಮ ಕುಟುಂಬ ಸದಸ್ಯರ ಜೊತೆ ಉತ್ತಮ ಸಮಯವನ್ನು ಕಳೆಯಲು ಸಾಧ್ಯವಾಗುತ್ತದೆ. ಹಣ ವಿನಿಮಯದ ವಿಚಾರದಲ್ಲಿ ಎಚ್ಚರದಿಂದ ಇರುವುದು ಉತ್ತಮ. ನಾಗ ಪೂಜೆ ಮಾಡುವುದರಿಂದ ಕಂಕಣಬಲ ಕೂಡಿಬರುತ್ತದೆ. ಉದ್ಯೋಗಸ್ಥರು ಉತ್ಸಾಹದಲ್ಲಿ ಯಾವುದೇ ನಿರ್ಧಾರಗಳನ್ನು ಕೈ ಗೊಳ್ಳಬಾರದು. ಆರೋಗ್ಯ ಗಮನದಲ್ಲಿಟ್ಟುಕೊಂಡು ನಾಗರಾಧನೆ ಪೂಜೆ ಮಾಡಬೇಕು. (ಪರಿಹಾರಕ್ಕೆ ಕರೆಮಾಡಿ) 9900494333.
ಸಿಂಹ ರಾಶಿ
ವಿದ್ಯಾಭ್ಯಾಸದಲ್ಲಿ ಚುರುಕಾದ ಬೆಳವಣಿಗೆ ನಡೆಯುವುದು. ಕುಟುಂಬದ ವತಿಯಿಂದ ಹಣಕಾಸಿನ ಸಮೃದ್ಧಿಗಾಗಿ ಶ್ರೀ ಕ್ಷೇತ್ರ ದರ್ಶನ ಮಾಡಬೇಕು. ದಾಂಪತ್ಯದಲ್ಲಿ ಮಡದಿಯೊಂದಿಗೆ ಸುಖಕರ ಜೀವನ ಕಾಣಿಸಿಕೊಳ್ಳುತ್ತದೆ. ಉದ್ಯೋಗಿಗಳಿಗೆ ಸಣ್ಣಪುಟ್ಟ ಲಾಭ ದೊರೆಯುತ್ತದೆ. ಆರೋಗ್ಯದಲ್ಲಿ ಮಾನಸಿಕವಾಗಿ ಚೈತನ್ಯ ಹೊಂದುವಿರಿ. ಶ್ರೀ ಸುಬ್ರಹ್ಮಣ್ಯ ಸ್ವಾಮಿ ಪೂಜೆ ಮಾಡಬೇಕು. ಹಣಕಾಸು ವ್ಯವಹಾರ ಚೆನ್ನಾಗಿರುತ್ತದೆ. (ಪರಿಹಾರಕ್ಕೆ ಕರೆಮಾಡಿ) 9900494333.
ಕನ್ಯಾ ರಾಶಿ
ಹಣಕಾಸಿನ ವಹಿವಾಟಿಕೆಗಳು ಲಾಭ ತಂದು ಕೊಡುತ್ತವೆ. ಕುಟುಂಬದಲ್ಲಿ ಮನಸ್ಸಿಗೆ ತೊಂದರೆ ನಡೆಯುವ ಸಂಗತಿಗಳು ನಡೆಯುವುದು. ಬೇರೆಯವರಿಗೆ ಹಣಕಾಸು ಸಾಲದ ರೂಪವಾಗಿ ನೀಡಬಾರದು. ಉದ್ಯೋಗಿಗಳಿಗೆ ಅಧಿಕ ಲಾಭ ದೊರೆಯುತ್ತದೆ. ವಿವಾಹ ಕಾರ್ಯಕ್ರಮ ನಡೆಯಲಿದೆ. ಸಂಬಂಧಗಳು ಬರುತ್ತವೆ. ಬಹಳ ಬುದ್ಧಿವಂತರಾಗಿ ನಿರ್ಧಾರ ತೆಗೆದು ಕೊಳ್ಳಬೇಕು. (ಪರಿಹಾರಕ್ಕೆ ಕರೆಮಾಡಿ) 9900494333.
ತುಲಾ ರಾಶಿ
ನಿಮ್ಮ ಉದ್ಯೋಗದಲ್ಲಿ ಗಂಭೀರತೆ ಇರುತ್ತದೆ. ಹಣಕಾಸು ಒದಗಿ ಬರುತ್ತದೆ. ಕೌಟುಂಬಿಕ ಬದುಕು ಚೆಂದವಾಗಿ ಕಾಣುತ್ತದೆ. ಇಷ್ಟ ಪ್ರಿಯವಾದ ಕೆಲಸ ಕಾರ್ಯಗಳು ನಡೆಯುತ್ತವೆ. ಪ್ರಯಾಣದಲ್ಲಿ ಬಹಳ ಹುಷಾರಾಗಿ ಮುಂದುವರಿಯಿರಿ. ದಾಂಪತ್ಯದಲ್ಲಿ ಭಿನ್ನಾಭಿಪ್ರಾಯಗಳು ತಲೆದೋರಲಿವೆ. ಬೇರೆಯವರ ಮಾತು ಕೇಳಿ ಮನೆಯಲ್ಲಿ ವಾಗ್ವವಾದವನ್ನು ನಡೆಸಬಾರದು. (ಪರಿಹಾರಕ್ಕೆ ಕರೆಮಾಡಿ) 9900494333.
ವೃಶ್ಚಿಕ ರಾಶಿ
ಭವಿಷ್ಯದಲ್ಲಿ ಸಮಸ್ಯೆಗಳು ನಿಮಗೆ ಹೆಚ್ಚಾಗಿ ಕಾಡುತ್ತಿದ್ದರೆ ನೀವು ನಾಗರ ಪಂಚಮಿ ಪೂಜೆಯನ್ನು ಬಹಳ ಶ್ರದ್ದೆಯಿಂದ ಭಕ್ತಿಯಿಂದ ಮನೆಯವರ ಜೊತೆಯಲ್ಲಿ ನೇರವೆರಿಸಿ ಮನೆಯಲ್ಲಿ ಸಿಹಿ ತಿನಿಸುಗಳು ಮಾಡಿ ಸೇವಿಸಬೇಕು ಇದರಿಂದ ನಿಮ್ಮ ಬಾಳು ಬಂಗಾರ ಆಗುತ್ತದೆ. ಪ್ರಯತ್ನ ಮಾಡಿ. (ಪರಿಹಾರಕ್ಕೆ ಕರೆಮಾಡಿ) 9900494333.
ಧನಸ್ಸು ರಾಶಿ
ಗುರು ಹಿರಿಯರ ಜೊತೆಗೆ ನಾಗಪೂಜೆ ಸಲ್ಲಿಸಿ. ನಿಮಗೆ ಒಳ್ಳೆಯ ಬೆಳವಣಿಗೆ ತಂದು ಕೊಡುತ್ತದೆ. ಉದ್ಯೋಗದಲ್ಲಿ ಸನ್ಮಾರ್ಗದಲ್ಲಿ ಮುಂದುವರಿಯಿರಿ ಅತ್ಯಂತ ಯಶಸ್ಸು ನಿಮ್ಮದಾಗುತ್ತದೆ. ಕಂಕಣ ಬಲ ಭಾಗ್ಯ ಕೂಡಿ ಬರುವ ಸಕಾಲವಾಗಿದೆ. ಮನೆಯಲ್ಲಿನ ಸಮಸ್ಯೆಗಳಿಗೆ ಪರಿಹಾರ ಕಾಣಬಹುದು. ಹೊಸ ಹೊಸ ಯೋಜನೆಗಳನ್ನು ಪ್ರಾರಂಭಿಸಬಹುದು. ( ಪರಿಹಾರಕ್ಕೆ ಕರೆಮಾಡಿ) 9900494333.
ಮಕರ ರಾಶಿ
ಶಾಂತ ಚಿತ್ತರಾಗಿ ಕೆಲಸ ಕಾರ್ಯಗಳು ನಿರ್ವಹಿಸಬೇಕು. ನಿಮಗೆ ಒಳ್ಳೆಯ ಫಲಿತಾಂಶ ದೊರಕುತ್ತದೆ. ದಾನ ಧರ್ಮ ಮಾಡಿ. ಉದ್ಯೋಗದಲ್ಲಿ ಉದ್ಯಮದ ಸಲುವಾಗಿ ಕೆಲಸ ನಿರ್ವಯಿಸಬೇಕು. ಕುಟುಂಬದ ಶುಭ ಕಾರ್ಯಗಳನ್ನು ನೆರವೇರಿಸಬೇಕು ವಿದ್ಯಾಭ್ಯಾಸ ಒಳ್ಳೆಯ ಬೆಳವಣಿಗೆ ತಂದು ಕೊಡುತ್ತದೆ. ಆರೋಗ್ಯದಲ್ಲಿ ಯೋಗ ಮಾಡುವುದರಿಂದ ಆಯಾಸ ಕಡಿಮೆ ಇರುತ್ತದೆ. (ಪರಿಹಾರಕ್ಕೆ ಕರೆಮಾಡಿ) 9900494333.
ಕುಂಭ ರಾಶಿ
ಈ ದಿನದಲ್ಲಿ ಉದ್ಯೋಗಿಗಳಿಗೆ ಹೆಚ್ಚಾಗಿ ಕೆಲಸ ಕಂಡುಬರುತ್ತದೆ. ಶ್ರಮವಹಿಸಿ ನಡೆಯುವುದು ಉತ್ತಮ. ಪ್ರೇಮ ವೈಫಲ್ಯಗಳನ್ನು ಎದುರಿಸಬೇಕಾಗುತ್ತದೆ. ಹಣಕಾಸಿನಲ್ಲಿ ಶುಭ ಲಾಭವಿದೆ. ಮನೆಯಲ್ಲಿ ಭಕ್ತಿ ಭಾವದಿಂದ ಮುಂದುವರಿಯಿರಿ. ಹೊರಗಡೆ ಊಟ ತಿಂಡಿ ಕಡಿಮೆ ಮಾಡಬೇಕು. ಸ್ನೇಹಿತರೊಂದಿಗೆ ವಿದ್ಯಾಭ್ಯಾಸ ಕಾಣುವುದು. ನಾಗಪೂಜೆ ವೈಶಿಷ್ಟ್ಯವಾಗಿ ನಡೆಸಿಕೊಳ್ಳಿ ವಿಶೇಷ ಫಲ ನಿಮ್ಮದಾಗುತ್ತದೆ. (ಪರಿಹಾರಕ್ಕೆ ಕರೆಮಾಡಿ) 9900494333.
ಮೀನಾ ರಾಶಿ
ವಿದ್ಯಾಭ್ಯಾಸ ಮಾಡುವವರು ತಂದೆ ತಾಯಿಯೊಂದಿಗೆ ದೇವಸ್ಥಾನಗಳಿಗೆ ಹೋಗಿ ಪೂಜೆ ಮಾಡಬೇಕು. ಉದ್ಯೋಗದಲ್ಲಿ ಪ್ರವೃತ್ತಿ ಪಡೆಯುವುದು. ಶತೃಗಳಿಂದ ತೊಂದರೆ ಇದೆ. ಜಾತಕದಲ್ಲಿ ನಾಗದೋಷ ಇದ್ದರೆ ಈ ದಿನ ಪೂಜೆ ಪುರಸ್ಕಾರ ಮಾಡುವುದು ಅದೃೃಷ್ಟ ಫಲ ಒದಗಿ ಬರುತ್ತದೆ. ಮನೆಯಲ್ಲಿ ಶಾಂತಿ ನೆಮ್ಮದಿ ಕಾಣಬಹುದು. ನಿಮಗೆ ಒಳ್ಳೆಯ ಭವಿಷ್ಯ ಇದೆ ಕಾಪಾಡಿಕೊಳ್ಳಲು ಪ್ರಯತ್ನ ಮಾಡಬೇಕು. (ಪರಿಹಾರಕ್ಕೆ ಕರೆಮಾಡಿ) 9900494333.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂಕಣ
ದೀಪಾವಳಿ ವಿಶೇಷಾಂಕ | ದೇವನಗರಿ ಸುದ್ದಿದಿನ ಪತ್ರಿಕೆಯಿಂದ ಕತೆ- ಕವಿತೆ- ಲೇಖನ- ರೂಪದರ್ಶಿ ಫೋಟೋ ಗಳಿಗೆ ಆಹ್ವಾನ
ಸುದ್ದಿದಿನ,ದಾವಣಗೆರೆ: ಪ್ರಿಯ ಓದುಗರೆ, ಬೆಳಕಿನ ಹಬ್ಬ ದೀಪಾವಳಿಯ ಪ್ರಯುಕ್ತ ದೇವನಗರಿ ಸುದ್ದಿದಿನ – ಕನ್ನಡ ದಿನ ಪತ್ರಿಕೆ ಹಾಗೂ ಶ್ಯಾಮ್ ಪ್ರಕಾಶನದವತಿಯಿಂದ ‘ ದೀಪಾವಳಿ ವಿಶೇಷಾಂಕ’-2026ನ್ನು ತರಲಾಗುತ್ತಿದೆ.
ಈ ಹಿನ್ನೆಲೆಯಲ್ಲಿ ದೀಪಾವಳಿ ವಿಷೇಶಾಂಕ 2026ರ ವಿಭಾಗಕ್ಕೆ ಕತೆ, ಕವಿತೆ ಹಾಗೂ ಲೇಖನ ಹಾಗೂ ರೂಪದರ್ಶಿಗಳ ಛಾಯಾಚಿತ್ರಗಳನ್ನು ಆಹ್ವಾನಿಸಿದ್ದೇವೆ.
ಕತೆ – ಕವಿತೆಗಳನ್ನು ಕಳುಹಿಸಲು ಇರುವ ನಿಯಮಗಳು
ಕತೆ/ಕವಿತೆ ಸ್ವತಂತ್ರ ರಚನೆಯಾಗಿರಬೇಕು. ಈ ಮೊದಲು ಯಾವ ಮಾಧ್ಯಮಗಳಲ್ಲಿಯೂ ಪ್ರಕಟ ಅಥವಾ ಪ್ರಸಾರ ಆಗಿರಬಾರದು.
ಕತೆ 1500 ಸಾವಿರ ಪದಗಳ ಮಿತಿಯಲ್ಲಿರಲಿ. ಕವಿತೆಗೆ 40 ಸಾಲಿನ ಮಿತಿಯಿರಲಿ, ನುಡಿ ಅಥವಾ ಬರಹ ತಂತ್ರಾಂಶದಲ್ಲಿ ಇಲ್ಲವೆ ಯೂನಿಕೋಡ್‌ನಲ್ಲಿ ಇರಬೇಕು. ವಯಸ್ಸಿನ ಮಿತಿ ಇರುವುದಿಲ್ಲ.
ಕತೆ/ಕವಿತೆ ಇರುವ ಪುಟದಲ್ಲಿ ಹೆಸರು, ವಿವರ ಬರೆಯುವಂತಿಲ್ಲ. ಪ್ರತ್ಯೇಕ ಪುಟದಲ್ಲಿ ಹೆಸರು, ಅಂಚೆ ವಿಳಾಸ, ಮೊಬೈಲ್ ನಂಬರ್, ಇ-ಮೇಲ್ ವಿಳಾಸ ಒದಗಿಸಬೇಕು.
ಇತ್ತೀಚಿನ ಪಾಸ್‌ಪೋರ್ಟ್ ಅಳತೆಯ ವರ್ಣಮಯ ಭಾವಚಿತ್ರದೊಂದಿಗೆ 100 ಪದಗಳ ಒಳಗೆ ಕಿರು ಪರಿಚಯ ಕಳುಹಿಸಬೇಕು.
ಸ್ಪರ್ಧೆಗೆ ಕಳುಹಿಸಿರುವ ಬರಹಗಳನ್ನು ಹಿಂದಿರುಗಿಸುವುದಿಲ್ಲ. ಬರಹಗಳು ಕಡ್ಡಾಯವಾಗಿ ಎಂಎಸ್ ವರ್ಡ್ ಫೈಲ್ (MS word File) ನಲ್ಲಿರಲಿ.
ಬರಹ ಮತ್ತು ಫೋಟೋಗಳನ್ನು ಇ-ಮೇಲ್ ಮೂಲಕವಷ್ಟೇ ಕಳಿಸಿ.
ಲೇಖನಗಳಿಗೆ ಆಹ್ವಾನ : ವೈಚಾರಿಕತೆ, ವಿಮರ್ಶೆ, ಕಾನೂನು, ಸಾಹಿತ್ಯ, ತಂತ್ರಜ್ಞಾನ, ವಿಜ್ಞಾನ, ಡಿಜಿಟಲ್ ಮಾಧ್ಯಮ, ಸಿನೆಮಾ, ಪ್ರೇಮಪತ್ರ, ಕೃಷಿ, ರಾಜಕೀಯ, ಕಲೆ, ಆರೋಗ್ಯ, ಪ್ರವಾಸ, ಅಡುಗೆ, ಫೋಟೋಗ್ರಫಿ, ವೈಲ್ಡ್ ಲೈಫ್, ಹಾಸ್ಯ ಕುರಿತಾದ ಲೇಖನಗಳನ್ನು 450 ಪದಗಳನ್ನು ಮೀರದಂತೆ ಬರೆದು ಕಳುಹಿಸಿ.
ಹಾಗೆಯೇ, ವಿಶೇಷಾಂಕದ ಮುಖಪುಟದ ರೂಪದರ್ಶಿಯಾಗಲು ಅವಕಾಶವನ್ನು ಕಲ್ಪಸಿಲಾಗಿದೆ. ಆಸಕ್ತ ರೂಪದರ್ಶಿಗಳು ಸ್ಟುಡಿಯೋ ಅಥವಾ ಫೋಟೋಗ್ರಾಫರ್ ಮೂಲಕ ತೆಗೆದ ‘6*4 ಅಳತೆಯ ಮುದ್ರಿತ ಫೋಟೋ ಮತ್ತು ಇ-ಮೇಲ್ ಮೂಲಕವೂ ಕಳಿಸಬಹುದು. 80 ಪದಗಳಮಿತಿಯೊಳಗೆ ನಿಮ್ಮ ಪರಿಚಯದೊಂದಿಗೆ, ಒಬ್ಬರು 4 ಫೋಟೋ ಕಳುಹಿಸಬೇಕು. ವಯಸ್ಸಿನ ಮಿತಿಯಿಲ್ಲ ಇರುವುದಿಲ್ಲ.
ಕತೆಯ ವಿಜೇತರಿಗೆ ಪ್ರಥಮ ಬಹುಮಾನ : 10000, ದ್ವಿತೀಯ ಬಹುಮಾನ : 5000, ತೃತೀಯ ಬಹುಮಾನ : 3000 ಹಾಗೂ ಕವಿತೆ ಬಹುಮಾನ ವಿಜೇತರಿಗೆ ಪ್ರಥಮ ಬಹುಮಾನ : 5000 ದ್ವಿತೀಯ ಬಹುಮಾನ : 3000 ಹಾಗೂ ತೃತೀಯ ಬಹುಮಾನ : ₹2000 ಸಿಗಲಿದೆ.
ಆಗಸ್ಟ್ 30ರೊಳಗೆ ಬರಹಗಳನ್ನು ಇ-ಮೇಲ್: deepasuddidina@gmail.com ಗೆ ಕಳುಹಿಸಲು ತಿಳಿಸಿದೆ. ಈ ಕುರಿತು ಹೆಚ್ಚಿನ ಮಾಹಿತಿಗಾಗಿ :9980346243 ಹಾಗೂ visit: www.suddidina.com ಅನ್ನು ವೀಕ್ಷಿಸಬಹುದಾಗಿದೆ.
ಕಚೇರಿ ವಿಳಾಸ
ದೇವನಗರಿ ಸುದ್ದಿದಿನ- ಕನ್ನಡ ದಿನ ಪತ್ರಿಕೆ
ದೀಪಾವಳಿ ವಿಶೇಷಾಂಕ ವಿಭಾಗ
#3231/1, ಸಂಜೀವ ಸದನ, 11ನೇ ಮುಖ್ಯರಸ್ತೆ, 4 ನೇ ಅಡ್ಡರಸ್ತೆ, ಎಂಸಿಸಿ ಬಿ ಬ್ಲಾಕ್, ದಾವಣಗೆರೆ, 577004
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಕ್ರೀಡೆ
ರಾಜ್ಯದ ವಿವಿಧ ನೀರಾವರಿ ಯೋಜನೆಗಳಿಗೆ ಹೆಚ್ಚಿನ ಅನುದಾನ ; ಇ-ಖಾತೆ ಅಭಿಯಾನ ಹಾಗೂ ಇತರೆ ಪ್ರಮುಖ ಸುದ್ದಿಗಳು
ರಾಜ್ಯದ ವಿವಿಧ ನೀರಾವರಿ ಯೋಜನೆಗಳಿಗೆ ಹೆಚ್ಚಿನ ಅನುದಾನ ; ಇ-ಖಾತೆ ಅಭಿಯಾನ ಹಾಗೂ ಇತರೆ ಪ್ರಮುಖ ಸುದ್ದಿಗಳು
1. ಮುಖ್ಯಮಂತ್ರಿ ಸಿದ್ದರಾಮಯ್ಯ ನವದೆಹಲಿ ತಲುಪಿದ್ದಾರೆ. ಇಂದು ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿ ಮಾಡಿ, 5 ಪ್ರಮುಖ ಮಸೂದೆಗಳಿಗೆ ಅಂಗೀಕಾರ ನೀಡುವಂತೆ ಮನವಿ ಮಾಡಲಿದ್ದಾರೆ ಎಂದು ಉನ್ನತ ಮೂಲಗಳು ತಿಳಿಸಿವೆ. ಭದ್ರಾ ಮೇಲ್ದಂಡೆ ಯೋಜನೆ ಸೇರಿದಂತೆ ರಾಜ್ಯದ ವಿವಿಧ ನೀರಾವರಿ ಯೋಜನೆಗಳಿಗೆ, ಹೆಚ್ಚಿನ ಅನುದಾನ ಬಿಡುಗಡೆ ಮಾಡುವಂತೆ, ಕೇಂದ್ರದ ಜಲಶಕ್ತಿ ಖಾತೆ ಸಚಿವರನ್ನು ಕೋರುವುದಾಗಿ, ಇದೇ ವೇಳೆ ಸಾಮಾಜಿಕ ಜಾಲತಾಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
2. ರಾಜ್ಯದ ಗ್ರಾಮ ಪಂಚಾಯ್ತಿಗಳ ಹಂತದಲ್ಲಿ ಜುಲೈ 15ರಿಂದ, ಸಾರ್ವಜನಿಕರ ಆಸ್ತಿಗಳ ಇ-ಖಾತೆ ರೂಪಿಸುವ ಅಭಿಯಾನವನ್ನು ಕಂದಾಯ ಇಲಾಖೆ ಆಯೋಜಿಸಲಿದೆ ಎಂದು ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.
3. ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆಗೆ ಸಂಬಂಧಿಸಿ, ಇಲ್ಲಿಯವರೆಗೆ ಹೆಸರು ನೋಂದಾಯಿಸದವರು, ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ, ಈ ತಿಂಗಳ 30ರವರೆಗೆ ಮಾಹಿತಿ ನೀಡಲು ಅವಕಾಶವಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಎ.ಬಿ.ಬಸವರಾಜು ತಿಳಿಸಿದ್ದಾರೆ.
4. ಕಾವೇರಿ ಜಲಾನಯನ ಪ್ರದೇಶದಲ್ಲಿ ವ್ಯಾಪಕವಾಗಿ ಸುರಿಯುತ್ತಿರುವ ಮಳೆಯಿಂದ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆ.ಆರ್.ಎಸ್. ಅಣೆಕಟ್ಟೆ ಭಾಗಶ: ಭರ್ತಿಯಾಗಿದ್ದು, ಒಳ ಹರಿವು ಇನ್ನಷ್ಟು ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಅಣೆಕಟ್ಟೆಯಿಂದ 5 ಸಾವಿರದಿಂದ 15 ಸಾವಿರ ಕ್ಯುಸೆಕ್ ನೀರನ್ನು ನದಿಗೆ ಹರಿಸಲಾಗಿದೆ.
5. ಕತಾರ್‌ನಲ್ಲಿರುವ ಅಲ್ ಉದೈದ್ ಅಮೇರಿಕ ವಾಯುನೆಲೆಯ ಮೇಲೆ ಇರಾನ್ ನಡೆಸಿದ ದಾಳಿಯ ನಂತರ ಜಾಗತಿಕ ತೈಲ ಬೆಲೆಗಳು ಐದು ವರ್ಷಗಳಲ್ಲಿ ನಿನ್ನೆ ಒಂದೇ ದಿನದಲ್ಲಿ ತೀವ್ರ ಕುಸಿತವನ್ನು ದಾಖಲಿಸಿದೆ.
6. ಕರ್ನಾಟಕ, ಮಧ್ಯಪ್ರದೇಶ, ಬಿಹಾರ, ಜಾಖಂಡ್, ಒಡಿಶಾ, ಛತ್ತೀಸ್‌ಗಢ, ಪಶ್ಚಿಮ ಬಂಗಾಳ, ಸಿಕ್ಕಿಂ, ಅರುಣಾಚಲ ಪ್ರದೇಶ, ಕೊಂಕಣ, ಗೋವಾ, ಮಹಾರಾಷ್ಟ್ರ, ಗುಜರಾತ್, ಹಿಮಾಚಲ ಪ್ರದೇಶ, ಉತ್ತರಾಖಂಡ, ಪಶ್ಚಿಮ ಉತ್ತರ ಪ್ರದೇಶ, ರಾಜಸ್ಥಾನ, ಕೇರಳದ ಕೆಲವು ಸ್ಥಳಗಳಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
7. ಅಯೋವಾದಲ್ಲಿ ನಾಳೆ ಆರಂಭವಾಗಲಿರುವ ಯುಎಸ್ ಓಪನ್ 2025 ಬ್ಯಾಡ್ಮಿಂಟನ್ ಪಂದ್ಯಾವಳಿಯ ಪುರುಷರ ಡಬಲ್ಸ್ ವಿಭಾಗದಲ್ಲಿ ಹರಿಹರನ್ ಅಂಶಕರುಣನ್ ಮತ್ತು ರೂಬನ್ ಕುಮಾರ್ ರೆಥಿನಸಬಪತಿ, ಭಾರತವನ್ನು ಮುನ್ನಡೆಸಲಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಈರುಳ್ಳಿ ಕೇವಲ ತರಕಾರಿಯಲ್ಲ ; ಅದ್ಭುತ ಔಷಧ
ನಾವು ನಿತ್ಯವೂ ತಯಾರಿಸುವ ಅಡುಗೆ ಪದಾರ್ಥಗಳಿಗೆ ಈರುಳ್ಳಿಯನ್ನು ಹಾಕದಿದ್ದಾಗ ಒಂದು ರುಚಿಯಾದರೆ ಅದನ್ನು ಹಾಕಿದಾಗ ಆ ಪದಾರ್ಥದ ರುಚಿಯೇ ಬೇರೆಯಾಗುತ್ತದೆ. ನಾವು ಈರುಳ್ಳಿಯ ಗುಣಗಳು, ಅದರ ಉಪಯೋಗಗಳು ಮತ್ತು ಮನೆ ಮದ್ದುಗಳ ಬಗ್ಗೆ ತಿಳಿದುಕೊಳ್ಳೋಣ.
ಆಯುರ್ವೇದದಲ್ಲಿ ಈರುಳ್ಳಿಯ ಬಗ್ಗೆ ವಿಸ್ತೃತ ವಿವರಣೆ ಇದೆ. ಆಯುರ್ವೇದ ಗ್ರಂಥಗಳ ಪ್ರಕಾರ ಈರುಳ್ಳಿಗೆ ಬೆಳ್ಳುಳ್ಳಿಯ ಗುಣಗಳಿವೆ. ಆದರೆ ಬೆಳ್ಳುಳ್ಳಿಯಂತೆ ಇದು ಉಷ್ಣವಲ್ಲ. ಹಾಗಾಗಿ ಬೆಳ್ಳುಳ್ಳಿಯ ಅದ್ಭುತ ಗುಣಗಳನ್ನು ಪಡೆಯಬೇಕು ಎಂದಾದರೆ ಮತ್ತು ಬೆಳ್ಳುಳ್ಳಿಯನ್ನು ಸೇವಿಸಿದರೆ ಉಷ್ಣವಾಗುತ್ತದೆ ಎಂಬ ಯೋಚನೆ ಇದ್ದರೆ ಬದಲಿಗೆ ಈರುಳ್ಳಿಯನ್ನು ಬಳಸಬಹುದು.
ಭಾವ ಪ್ರಕಾಶ ನಿಘಂಟು ಎಂಬ ಗ್ರಂಥದಲ್ಲಿ “ಬಲವೀರ್ಯ ಕೈರೋ ಗುರುಃ” ಎಂದಿದ್ದಾರೆ. ಅಂದರೆ ಈರುಳ್ಳಿಯು ದೇಹದ ಬಲವನ್ನು, ವೀರ್ಯದ ಗುಣಮಟ್ಟವನ್ನು, ಲೈಂಗಿಕ ಶಕ್ತಿಯನ್ನು ಹೆಚ್ಚಿಸುತ್ತದೆ ಎಂದರ್ಥ. ಬಹುತೇಕ ಎಲ್ಲಾ ಆಯುರ್ವೇದ ಗ್ರಂಥಗಳಲ್ಲಿಯೂ ಈರುಳ್ಳಿಯಿಂದ ಲೈಂಗಿಕ ಶಕ್ತಿ ವೃದ್ಧಿಯಾಗುತ್ತದೆ ಎಂಬುದನ್ನು ಹೇಳಲಾಗಿದೆ. ಇದು ಚರ್ಮಕ್ಕೆ ಕೂಡ ಅತ್ಯಂತ ಅನುಕೂಲಕರವಾದದ್ದು. ಚರ್ಮವನ್ನು ಸ್ನಿಗ್ಧಗೊಳಿಸಿ ಒರಟುತನವನ್ನು ಹೋಗಲಾಡಿಸುತ್ತದೆ; ಚರ್ಮಕ್ಕೆ ಕಾಂತಿಯನ್ನು ಕೊಡುತ್ತದೆ; ಜೊತೆಗೆ ಚರ್ಮದ ಶುದ್ಧಿಯನ್ನೂ ಮಾಡುತ್ತದೆ ಎಂದು ವಿವರಿಸಲಾಗಿದೆ. ಈರುಳ್ಳಿಯನ್ನು ನಿಯಮಿತವಾಗಿ ಸೇವಿಸುವುದರಿಂದ ದೇಹದ ಬಾಹ್ಯ ಮತ್ತು ಆಂತರಿಕ ಕಾಂತಿ ಹೆಚ್ಚುತ್ತದೆ.
ಅಂದರೆ ಕೇವಲ ಸೌಂದರ್ಯವೃದ್ಧಿಯಷ್ಟೇ ಅಲ್ಲ ದೇಹದೊಳಗಿನ ರೋಗನಿರೋಧಕ ಶಕ್ತಿ ತುಂಬಾ ಚೆನ್ನಾಗಿ ಹೆಚ್ಚುತ್ತದೆ. ಈರುಳ್ಳಿಯು ಧ್ವನಿಗೆ ಸಂಬಂಧಿಸಿದ ಸಮಸ್ಯೆಗಳನ್ನು ಹೋಗಲಾಡಿಸಿ ಒಳ್ಳೆಯ ಧ್ವನಿಯನ್ನು ನೀಡುತ್ತದೆ ಎಂದು ವಿವರಿಸಲಾಗಿದೆ. ಹೀಗಾಗಿ ಹಾಡುಗಾರರು, ಅಧ್ಯಾಪಕರಂಥವರಿಗೆ ನಿಯಮಿತ ಈರುಳ್ಳಿ ಸೇವನೆ ಅನುಕೂಲಕರ. ಇದು ಕಣ್ಣಿನ ಆರೋಗ್ಯವನ್ನು ಹೆಚ್ಚಿಸುವುದರಿಂದ ಹತ್ತರಿಂದ ಹದಿನೈದು ಮಿಲೀ ಈರುಳ್ಳಿ ರಸವನ್ನು ಸುಮಾರು ಒಂದು ತಿಂಗಳು ದಿನಕ್ಕೊಮ್ಮೆ ಸೇವಿಸುವುದರಿಂದ ಚಿಕ್ಕಪುಟ್ಟ ಕಣ್ಣಿನ ತೊಂದರೆಗಳು ನಿವಾರಣೆಯಾಗುತ್ತವೆ. ಸ್ವಲ್ಪ ಸಿಹಿ ಇರುವ ಅಂದರೆ ಖಾರ ಕಡಿಮೆ ಇರುವ ಈರುಳ್ಳಿಯನ್ನು ಚಿಕ್ಕ ಚಿಕ್ಕ ತುಂಡುಗಳನ್ನಾಗಿ ಕತ್ತರಿಸಿ ತುಪ್ಪದಲ್ಲಿ ಹುರಿದು ನಿಯಮಿತವಾಗಿ ಸೇವಿಸಿದರೆ ಲೈಂಗಿಕ ಶಕ್ತಿಯ ವೃದ್ಧಿಯಾಗುತ್ತದೆ.
ಕೂದಲು ಉದುರುವುದನ್ನು ಕಡಿಮೆ ಮಾಡಲು ಈರುಳ್ಳಿಯು ಸಹಕಾರಿ. ಈರುಳ್ಳಿಯ ರಸ ತೆಗೆದು ತಲೆ ಸ್ನಾನ ಮಾಡುವ ಹತ್ತು ನಿಮಿಷ ಮೊದಲು ಕೂದಲಿನ ಬುಡಕ್ಕೆ ಹಚ್ಚಬೇಕು. ಇದರಿಂದ ಕೂದಲಿನ ಬೆಳವಣಿಗೆ ಚೆನ್ನಾಗಿ ಆಗಲು ಮತ್ತು ಕೂದಲು ಉದುರುವುದು ನಿಲ್ಲಲು ಸಹಾಯವಾಗುತ್ತದೆ. ಬೊಜ್ಜನ್ನು ಕಡಿಮೆ ಮಾಡಲು ಕೂಡ ಈರುಳ್ಳಿಯು ಸಹಕಾರಿ. ಬೆಳ್ಳುಳ್ಳಿಯ ಇನ್ನೊಂದು ಅದ್ಭುತ ಗುಣವೆಂದರೆ ಅದು ನರದ ಶಕ್ತಿಯನ್ನು ಹೆಚ್ಚಿಸುತ್ತದೆ. ಹಾಗಾಗಿ ಸಯಾಟಿಕಾದಂತಹ ಸಮಸ್ಯೆಗಳನ್ನು ಅನುಭವಿಸುತ್ತಿರುವವರಿಗೆ ಈರುಳ್ಳಿ ತುಂಬಾ ಲಾಭದಾಯಕ.
ಕಫದ ಸಮಸ್ಯೆಯಿಂದ ಬಳಲುತ್ತಿದ್ದು ಕಫ ಹೊರಗೆ ಬರುತ್ತಿಲ್ಲದಿದ್ದರೆ ಎರಡು ಚಮಚದಷ್ಟು ಈರುಳ್ಳಿ ರಸ, ಅರ್ಧ ಚಮಚದಷ್ಟು ಶುಂಠಿ ರಸ, ಅರ್ಧ ಚಮಚದಷ್ಟು ತುಳಸಿ ಎಲೆಗಳ ರಸ ಮತ್ತು ಒಂದು ಚಮಚ ಜೇನುತುಪ್ಪವನ್ನು ಸೇರಿಸಿ ದಿನಕ್ಕೆ ಒಂದು ಅಥವಾ ಎರಡು ಬಾರಿ ಸೇವಿಸಿದರೆ ಕಫ ಹೊರಗೆ ಬಂದು ಸಮಸ್ಯೆ ನಿವಾರಣೆಯಾಗುತ್ತದೆ.
ಈರುಳ್ಳಿ ಒಳ್ಳೆಯ ಜೀರ್ಣಕಾರಿಯೂ ಹೌದು ಹಾಗಾಗಿ ಅಜೀರ್ಣ ಇರುವವರಿಗೆ ಹೆಚ್ಚಿನ ಪ್ರಮಾಣದಲ್ಲಿ ಈರುಳ್ಳಿಯನ್ನು ಹಾಕಿ ಹೆಸರುಬೇಳೆಯ ತಿಳಿಸಾರು ಮಾಡಿ ಊಟಕ್ಕೆ ನೀಡಿದರೆ ಅಜೀರ್ಣದ ಸಮಸ್ಯೆ ತುಂಬಾ ಚೆನ್ನಾಗಿ ಹತೋಟಿಗೆ ಬರುತ್ತದೆ. ಜೊತೆಗೆ ಶಕ್ತಿ ವೃದ್ಧಿಯೂ ಆಗುತ್ತದೆ. ಒಟ್ಟಿನಲ್ಲಿ ಈರುಳ್ಳಿಯನ್ನು ಸರಿಯಾಗಿ ಬಳಸಿಕೊಂಡರೆ ಅದು ಕೇವಲ ತರಕಾರಿಯಲ್ಲ ಅದ್ಭುತ ಔಷಧ.(ಬರಹ-ಡಾ|| ವೆಂಕಟ್ರಮಣ ಹೆಗಡೆ
ವೇದ ವೆಲ್ನೆಸ್ ಸೆಂಟರ್, ನಿಸರ್ಗಮನೆ, ಶಿರಸಿ, ಉ.ಕನ್ನಡ)
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ6 days agoಮಾಯಕೊಂಡ ಶಾಸಕ ಕೆ.ಎಸ್. ಬಸವಂತಪ್ಪ ಸಚಿವರಾಗಿ ಆಯ್ಕೆ: ದಾವಣಗೆರೆಯಲ್ಲಿ ಸಂಭ್ರಮ ಆಚರಣೆ
-
ಅಂತರಂಗ3 days agoಪ್ರಪ್ರಥಮ ಮಹಿಳಾ ಸಾಹಿತ್ಯ ಸಮ್ಮೇಳನ : ಸರ್ವ ಕ್ಷೇತ್ರದಲ್ಲಿಯೂ ರಾರಾಜಿಸುವ ಶಿಖರ ಶಿರೋಮಣಿಗಳು
-
ದಿನದ ಸುದ್ದಿ3 days agoನಾನೇ ಮುಖ್ಯಮಂತ್ರಿ ಇದ್ದಂತೆ : ಶಾಸಕ ಶಿವಗಂಗಾ ಬಸವರಾಜ್
-
ದಿನದ ಸುದ್ದಿ4 days agoದಾವಣಗೆರೆ ವಿಶ್ವವಿದ್ಯಾಲಯ | ಗುಣಮಟ್ಟದ ಸಂಶೋಧನೆ ಶೈಕ್ಷಣಿಕ ಪ್ರಗತಿ – ಜಾಗತಿಕ ಮಾನ್ಯತೆಯ ಮೂಲಾಧಾರ : ಕುಲಪತಿ ಪ್ರೊ. ಬಿ. ಇ. ರಂಗಸ್ವಾಮಿ


