ನಿತ್ಯ ಭವಿಷ್ಯ
ಈ ಹುಣ್ಣಿಮೆ 5 ರಾಶಿಗಳ ಮೇಲೆ ಧನಾತ್ಮಕ ಪ್ರಭಾವ ಬೀರುವುದು : ಈಗಲೇ ಕ್ಲಿಕ್ ಮಾಡಿ ಓದಿ 13/10/2019
ನಿಮ್ಮ ಎಲ್ಲಾ ಸಮಸ್ಯೆಗಳಿಗೆ ಶ್ರೀ ಮಹಾಕಾಳಿ ದೈವಿಕ ಮಾಂತ್ರಿಕ ಪೂಜಾಶಕ್ತಿಯಿಂದ ಶೀಘ್ರದಲ್ಲಿ ಸೂಕ್ತವಾದ ಶಾಶ್ವತವಾಗಿ ಪರಿಹಾರ ಮಾಡಿಕೊಡಲಾಗುತ್ತದೆ. ನೀವು ಎಷ್ಟೋ ಜ್ಯೋತಿಷ್ಯರಲ್ಲಿ ದೈವ ದೇವಸ್ಥಾನಗಳಲ್ಲಿ ಕೇಳಿ ಮನನೊಂದಿದ್ದರೆ ತಕ್ಷಣವೇ ಕರೆಮಾಡಿ. ದೈವಜ್ಞ ಶ್ರೀ ದೇವೇಂದ್ರನಾಥ್ ಭಟ್. PH:- 9945590266
ಮೇಷ ರಾಶಿ
ದೊಡ್ಡ ಬದಲಾವಣೆಯ ನಂತರ ವಿಷಯಗಳು ಸಾಮಾನ್ಯ ಸ್ಥಿತಿಗೆ ಮರಳುತ್ತವೆ. ನೀವು ಪರಿಸ್ಥಿತಿಯನ್ನು ಉತ್ತಮವಾಗಿ ನಿಭಾಯಿಸುವಿರಿ. ಕೆಲಸಕ್ಕೆ ಸಂಬಂಧಿಸಿದ ಪ್ರಯಾಣವನ್ನು ಕೈಗೊಳ್ಳುವಿರಿ. ಉದ್ಯೋಗಕ್ಕೆ ಸಂಬಂಧಿಸಿದಂತೆ ನಿಮಗೆ ಬಿಡುವಿಲ್ಲದ ದಿನವಾಗಬಹುದು. ವಿವಾಹಿತರು ಉತ್ತಮ ಸಮಯವನ್ನು ಕಳೆಯುವರು. ನಿಮ್ಮ ಯಾವುದೇ ಕಠಿಣ ಸಮಸ್ಯೆಗಳಿಗೆ ಶಾಶ್ವತವಾದ ಸೂಕ್ತವಾದ ಪರಿಹಾರ ಕಾಣಲು ಕರೆಮಾಡಿ. PH:- 9945590266
ವೃಷಭ ರಾಶಿ
ಉದ್ಯಮಿಗಳಿಗೆ ಇಂದು ಹೊಸ ದಿನವಾಗುವುದು. ಕೆಲಸಕ್ಕೆ ಸಂಬಂಧಿಸಿದ ಪ್ರಯಾಣವನ್ನು ಕೈಗೊಳ್ಳುವಿರಿ. ವಾದ ಮಾಡುವುದನ್ನು ತಪ್ಪಿಸಿ. ಆರೋಗ್ಯವು ಸಾಮಾನ್ಯವಾಗಿರುತ್ತದೆ. ಅಧಿಕ ನೀರನ್ನು ಸೇವಿಸಿ, ಆರೋಗ್ಯವನ್ನು ಕಾಪಾಡಿಕೊಳ್ಳಿ. ನಿಮ್ಮ ಯಾವುದೇ ಕಠಿಣ ಸಮಸ್ಯೆಗಳಿಗೆ ಸೂಕ್ತವಾದ ಶಾಶ್ವತವಾದ ಪರಿಹಾರ ಕಾಣಲು ಕರೆಮಾಡಿ. PH:- 9945590266.
ಮಿಥುನ ರಾಶಿ
ಬಹು ದಿನಗಳ ನಂತರ ಇಂದು ಬಹಳ ಸಂತೋಷದ ದಿನವಾಗುವುದು. ನಿಮ್ಮ ಸಮಯ ಹಾಗೂ ನಿಮಗೆ ದೊರೆಯುವ ಬೆಂಬಲಗಳು ಉತ್ತಮ ಫಲಿತಾಂಶವನ್ನು ನೀಡುತ್ತವೆ. ಹಾಗಾಗಿ ಇಂದು ನೀವು ಸಾಕಷ್ಟು ವಿಷಯದಲ್ಲಿ ಅನುಕೂಲಕರ ಪರಿಸ್ಥಿತಿಯನ್ನು ಎದುರಿಸುವಿರಿ. ನಿಮ್ಮ ಯಾವುದೇ ಕಠಿಣ ಸಮಸ್ಯೆಗಳಿಗೆ ಶಾಶ್ವತವಾದ ಸೂಕ್ತವಾದ ಪರಿಹಾರ ಕಾಣಲು ಕರೆಮಾಡಿ. PH:- 9945590266
ಕರ್ಕಾಟಕ ರಾಶಿ
ನಿಮ್ಮ ಗಂಭೀರ ವರ್ತನೆಗಳು ಇತರರಿಗೆ ಪ್ರೇರಕ ಅಂಶವಾಗಬಹುದು. ಜನರನ್ನು ಸುಲಭವಾಗಿ ನಂಬಬೇಡಿ. ನಿಮ್ಮ ಸಂಬಂಧಿಗಳು ನಿಮ್ಮನ್ನು ನೋಡಿ ಅಸೂಯೆ ಪಡಬಹುದು. ನಿಮ್ಮ ಯಾವುದೇ ಕಠಿಣ ಸಮಸ್ಯೆಗಳಿಗೆ ಶಾಶ್ವತವಾದ ಸೂಕ್ತವಾದ ಪರಿಹಾರ ಕಾಣಲು ಕರೆಮಾಡಿ. PH:- 9945590266.
ಸಿಂಹ ರಾಶಿ
ಇಂದು ನಿಮಗೆ ಅಸ್ಥಿರವಾದ ದಿನವಾಗಬಹುದು. ದಿನದ ಕೊನೆಯಲ್ಲಿ ಪರಿಸ್ಥಿತಿಯು ಸುಧಾರಿಸುವುದು. ಕುಟುಂಬದಲ್ಲಿ ಸಂತೋಷ ಸಿಗುತ್ತದೆ. ಸಂಗಾತಿಯೊಂದಿಗೆ ಸುಖಕರ ಜೀವನ ಹೊಂದುವಿರಿ. ಕೆಲಸದ ಕ್ಷೇತ್ರದಲ್ಲಿ ಇಂದು ನಿಮಗೆ ನಿಧಾನದ ದಿನವಾಗಿರುತ್ತದೆ. ನಿಮ್ಮ ಯಾವುದೇ ಕಠಿಣ ಸಮಸ್ಯೆಗಳಿಗೆ ಶಾಶ್ವತವಾದ ಸೂಕ್ತವಾದ ಪರಿಹಾರ ಕಾಣಲು ಕರೆಮಾಡಿ. PH:- 9945590266
ಕನ್ಯಾ ರಾಶಿ
ಅಲ್ಪಮಟ್ಟಿಗೆ ಈ ದಿನದ ಹಣಕಾಸು ಪರಿಸ್ಥಿತಿಗಳು ಸುಧಾರಿಸಬಹುದು. ಕುಟುಂಬದೊಡನೆ ಯಾವುದೇ ಭರವಸೆಗಳನ್ನು ನೀಡಬೇಡಿ ಅದರಿಂದ ನಿಮಗೆ ಪಶ್ಚಾತಾಪ ಉಂಟಾಗುತ್ತದೆ. ಉದ್ಯೋಗದಲ್ಲಿ ಕೆಲವು ನಿರಾಸೆಗಳನ್ನು ದೂರ ಮಾಡಬಹುದು. ಪ್ರೀತಿಯಲ್ಲಿ ಕೆಲವು ಸಂಕಷ್ಟಗಳು ಎದುರಾಗುತ್ತವೆ. ನಿಮ್ಮ ಯಾವುದೇ ಕಠಿಣ ಸಮಸ್ಯೆಗಳಿಗೆ ಶಾಶ್ವತವಾದ ಸೂಕ್ತವಾದ ಪರಿಹಾರ ಕಾಣಲು ಕರೆಮಾಡಿ. PH:- 9945590266.
ತುಲಾ ರಾಶಿ
ನೀವು ತುಂಬಾ ದಿನಗಳಿಂದ ಕಾಯುತ್ತಿದ್ದ ಕೆಲಸದ ಒತ್ತಡಗಳು ಇಂದು ದೂರ ಆಗಬಹುದು. ನಿಮಗೆ ಆರ್ಥಿಕ ಲಾಭವನ್ನು ತಂದುಕೊಡುತ್ತದೆ. ಕುಟುಂಬದಲ್ಲಿನ ಹೆಚ್ಚಿನ ವಿಷಯಗಳು ನೀವು ಬಯಸಿದಂತೆ ಇರುತ್ತದೆ. ಮದುವೆ ವಿಷಯದಲ್ಲಿ ಒಂದು ಒಳ್ಳೆಯ ನಿರ್ಧಾರವನ್ನು ಹಿರಿಯರ ಮುಂದೆ ಮಾತಾಡಬೇಕು. ನಿಮ್ಮ ಯಾವುದೇ ಕಠಿಣ ಸಮಸ್ಯೆಗಳಿಗೆ ಶಾಶ್ವತವಾದ ಸೂಕ್ತವಾದ ಪರಿಹಾರ ಕಾಣಲು ಕರೆಮಾಡಿ PH:- 9945590266
ವೃಶ್ಚಿಕ ರಾಶಿ
ನೀವು ನಿಮ್ಮ ಆತ್ಮವಿಶ್ವಾಸವನ್ನು ಕೆಲಸ ಕಾರ್ಯದಲ್ಲಿ ಸರಿಯಾದ ಕ್ರಮದಿಂದ ಬಳಸಿಕೊಳ್ಳಬೇಕು. ಪ್ರೀತಿಯಲ್ಲಿ ನಿಮ್ಮ ಚೈತನ್ಯವನ್ನು ಮರಳಿ ಪಡೆಯಲು ಸಾಧ್ಯವಾಗುತ್ತದೆ. ದುರ್ಬಲ ಆರ್ಥಿಕ ಸ್ಥಿತಿಯಿಂದ ಕೆಲವು ಪ್ರಮುಖ ಕೆಲಸಕಾರ್ಯಗಳು ಸ್ಥಗಿತವಾಗುತ್ತದೆ. ಕುಟುಂಬಗಳಲ್ಲಿ ಮದುವೆ ವಿಚಾರಗಳನ್ನು ಲಘುವಾಗಿ ಮಾತನಾಡಬಾರದು. ನಿಮ್ಮ ಯಾವುದೇ ಕಠಿಣ ಸಮಸ್ಯೆಗಳಿಗೆ ಶಾಶ್ವತವಾದ ಸೂಕ್ತವಾದ ಪರಿಹಾರ ಕಾಣಲು ಕರೆಮಾಡಿ. PH:- 9945590266.
ಧನಸ್ಸು ರಾಶಿ
ನಿಮ್ಮ ಕುಟುಂಬದ ಸದಸ್ಯರು ಹೇಳಿದ ಮಾತುಗಳಿಗೆ ನೀವು ಒಪ್ಪಿಗೆ ಕೊಡುವುದಿಲ್ಲ. ಒಬ್ಬಂಟಿಯಾಗಿ ನೀವು ಯೋಚನೆ ಮಾಡಲು ಸಹಾಕಾರ ಆಗುತ್ತದೆ. ಶತ್ರುಗಳು ತೀರಾ ಹತ್ತಿರದಲ್ಲೇ ಇದ್ದು ನಿಮಗೆ ಕಿರಿಕಿರಿ ಉಂಟುಮಾಡುತ್ತಾರೆ. ಆರೋಗ್ಯ ಸಮಸ್ಯೆ ಬಹುದಿನದಿಂದ ಹಾಗೆಯೇ ಉಳಿದುಕೊಳ್ಳುತ್ತದೆ. ನಿಮ್ಮ ಯಾವುದೇ ಕಠಿಣ ಸಮಸ್ಯೆಗಳಿಗೆ ಶಾಶ್ವತವಾದ ಸೂಕ್ತವಾದ ಪರಿಹಾರ ಕಾಣಲು ಕರೆಮಾಡಿ PH:- 9945590266.
ಮಕರ ರಾಶಿ
ಮನೆಯಲ್ಲಿ ಕೇಳಿದ ಹಾಗೆ ಕೆಲವು ಸಾಮಗ್ರಿಗಳನ್ನು ಒದಗಿಸಬೇಕು. ದಾಂಪತ್ಯದಲ್ಲಿ ರೋಮಾಂಚನಕರ ಕ್ಷಣದ ದಿನವಾಗಿರುತ್ತದೆ. ಆರೋಗ್ಯದಲ್ಲಿ ಆನಂದಮಯ ಕೂಡಿರುತ್ತದೆ. ಮುಂದಿನ ದಿನಗಳಲ್ಲಿ ನಿಮಗೆ ಯಾರು ಸಹಾಯಕರಾಗಿ ಇರುವುದಿಲ್ಲ. ನಿಮ್ಮ ಯಾವುದೇ ಕಠಿಣ ಸಮಸ್ಯೆಗಳಿಗೆ ಶಾಶ್ವತವಾದ ಸೂಕ್ತವಾದ ಪರಿಹಾರ ಕಾಣಲು ಕರೆಮಾಡಿ. PH:- 9945590266
ಕುಂಭ ರಾಶಿ
ನೀವು ಈ ದಿನ ಬಿಡುವಿಲ್ಲದೆ ಅತಿ ಶ್ರಮದಿಂದ ಕೆಲಸಗಳನ್ನು ಮಾಡುತ್ತೀರಿ. ಕುಟುಂಬದಲ್ಲಿ ಕೆಲವು ಪೂಜೆ ಮಾಡುವ ವಿಷಯಗಳನ್ನು ಸರಿಯಾದ ಕ್ರಮದಲ್ಲಿ ತಿಳಿದುಕೊಳ್ಳಬೇಕು. ಮಕ್ಕಳು ತುಂಬಾ ಕಿರಿಕಿರಿ ಉಂಟುಮಾಡುತ್ತಾರೆ. ಹಣಕಾಸು ಎಲ್ಲಿಲ್ಲದ ಹಾಗೆ ಖರ್ಚು ಉಂಟಾಗುತ್ತದೆ. ಹಳೆಯ ಸ್ನೇಹಿತರನ್ನು ಈ ದಿನ ನೆನಪು ಮಾಡಿಕೊಳ್ಳಬಹುದು. ನಿಮ್ಮ ಯಾವುದೇ ಕಠಿಣ ಸಮಸ್ಯೆಗಳಿಗೆ ಶಾಶ್ವತವಾದ ಸೂಕ್ತವಾದ ಪರಿಹಾರ ಕಾಣಲು ಕರೆಮಾಡಿ. PH:- 9945590266
ಮೀನಾ ರಾಶಿ
ಕೆಲಸದ ಬಗ್ಗೆ ಮೇಲಾಧಿಕಾರಿಗಳು ಆಕ್ರೋಶವನ್ನು ವ್ಯಕ್ತಪಡಿಸಬಹುದು. ನಿಮ್ಮ ಕೆಲಸದ ಬಗ್ಗೆ ನಿಮ್ಮ ಅಧಿಕಾರಿಗಳು ಅಸಮಧಾನವನ್ನು ವ್ಯಕ್ತಪಡಿಸಬಹುದು. ಶಾಂತಿಯುತವಾದ ಜೀವನ ನಡೆಸಲು ನೀವು ಕೆಲವು ವಿಷಯಗಳನ್ನು ನಿರ್ಲಕ್ಷಿಸಬೇಕಾಗುವುದು. ಆರೋಗ್ಯದ ಕಡೆಗೆ ಹೆಚ್ಚಿನ ಕಾಳಜಿ ನೀಡಿ. ನಿಮ್ಮ ಯಾವುದೇ ಕಠಿಣ ಸಮಸ್ಯೆಗಳಿಗೆ ಶಾಶ್ವತವಾದ ಸೂಕ್ತವಾದ ಪರಿಹಾರ ಕಾಣಲು ಕರೆಮಾಡಿ PH:- 9945590266

ಅಂಕಣ
ದೀಪಾವಳಿ ವಿಶೇಷಾಂಕ | ದೇವನಗರಿ ಸುದ್ದಿದಿನ ಪತ್ರಿಕೆಯಿಂದ ಕತೆ- ಕವಿತೆ- ಲೇಖನ- ರೂಪದರ್ಶಿ ಫೋಟೋ ಗಳಿಗೆ ಆಹ್ವಾನ
ಸುದ್ದಿದಿನ,ದಾವಣಗೆರೆ: ಪ್ರಿಯ ಓದುಗರೆ, ಬೆಳಕಿನ ಹಬ್ಬ ದೀಪಾವಳಿಯ ಪ್ರಯುಕ್ತ ದೇವನಗರಿ ಸುದ್ದಿದಿನ – ಕನ್ನಡ ದಿನ ಪತ್ರಿಕೆ ಹಾಗೂ ಶ್ಯಾಮ್ ಪ್ರಕಾಶನದವತಿಯಿಂದ ‘ ದೀಪಾವಳಿ ವಿಶೇಷಾಂಕ’-2026ನ್ನು ತರಲಾಗುತ್ತಿದೆ.
ಈ ಹಿನ್ನೆಲೆಯಲ್ಲಿ ದೀಪಾವಳಿ ವಿಷೇಶಾಂಕ 2026ರ ವಿಭಾಗಕ್ಕೆ ಕತೆ, ಕವಿತೆ ಹಾಗೂ ಲೇಖನ ಹಾಗೂ ರೂಪದರ್ಶಿಗಳ ಛಾಯಾಚಿತ್ರಗಳನ್ನು ಆಹ್ವಾನಿಸಿದ್ದೇವೆ.
ಕತೆ – ಕವಿತೆಗಳನ್ನು ಕಳುಹಿಸಲು ಇರುವ ನಿಯಮಗಳು
ಕತೆ/ಕವಿತೆ ಸ್ವತಂತ್ರ ರಚನೆಯಾಗಿರಬೇಕು. ಈ ಮೊದಲು ಯಾವ ಮಾಧ್ಯಮಗಳಲ್ಲಿಯೂ ಪ್ರಕಟ ಅಥವಾ ಪ್ರಸಾರ ಆಗಿರಬಾರದು.
ಕತೆ 1500 ಸಾವಿರ ಪದಗಳ ಮಿತಿಯಲ್ಲಿರಲಿ. ಕವಿತೆಗೆ 40 ಸಾಲಿನ ಮಿತಿಯಿರಲಿ, ನುಡಿ ಅಥವಾ ಬರಹ ತಂತ್ರಾಂಶದಲ್ಲಿ ಇಲ್ಲವೆ ಯೂನಿಕೋಡ್‌ನಲ್ಲಿ ಇರಬೇಕು. ವಯಸ್ಸಿನ ಮಿತಿ ಇರುವುದಿಲ್ಲ.
ಕತೆ/ಕವಿತೆ ಇರುವ ಪುಟದಲ್ಲಿ ಹೆಸರು, ವಿವರ ಬರೆಯುವಂತಿಲ್ಲ. ಪ್ರತ್ಯೇಕ ಪುಟದಲ್ಲಿ ಹೆಸರು, ಅಂಚೆ ವಿಳಾಸ, ಮೊಬೈಲ್ ನಂಬರ್, ಇ-ಮೇಲ್ ವಿಳಾಸ ಒದಗಿಸಬೇಕು.
ಇತ್ತೀಚಿನ ಪಾಸ್‌ಪೋರ್ಟ್ ಅಳತೆಯ ವರ್ಣಮಯ ಭಾವಚಿತ್ರದೊಂದಿಗೆ 100 ಪದಗಳ ಒಳಗೆ ಕಿರು ಪರಿಚಯ ಕಳುಹಿಸಬೇಕು.
ಸ್ಪರ್ಧೆಗೆ ಕಳುಹಿಸಿರುವ ಬರಹಗಳನ್ನು ಹಿಂದಿರುಗಿಸುವುದಿಲ್ಲ. ಬರಹಗಳು ಕಡ್ಡಾಯವಾಗಿ ಎಂಎಸ್ ವರ್ಡ್ ಫೈಲ್ (MS word File) ನಲ್ಲಿರಲಿ.
ಬರಹ ಮತ್ತು ಫೋಟೋಗಳನ್ನು ಇ-ಮೇಲ್ ಮೂಲಕವಷ್ಟೇ ಕಳಿಸಿ.
ಲೇಖನಗಳಿಗೆ ಆಹ್ವಾನ : ವೈಚಾರಿಕತೆ, ವಿಮರ್ಶೆ, ಕಾನೂನು, ಸಾಹಿತ್ಯ, ತಂತ್ರಜ್ಞಾನ, ವಿಜ್ಞಾನ, ಡಿಜಿಟಲ್ ಮಾಧ್ಯಮ, ಸಿನೆಮಾ, ಪ್ರೇಮಪತ್ರ, ಕೃಷಿ, ರಾಜಕೀಯ, ಕಲೆ, ಆರೋಗ್ಯ, ಪ್ರವಾಸ, ಅಡುಗೆ, ಫೋಟೋಗ್ರಫಿ, ವೈಲ್ಡ್ ಲೈಫ್, ಹಾಸ್ಯ ಕುರಿತಾದ ಲೇಖನಗಳನ್ನು 450 ಪದಗಳನ್ನು ಮೀರದಂತೆ ಬರೆದು ಕಳುಹಿಸಿ.
ಹಾಗೆಯೇ, ವಿಶೇಷಾಂಕದ ಮುಖಪುಟದ ರೂಪದರ್ಶಿಯಾಗಲು ಅವಕಾಶವನ್ನು ಕಲ್ಪಸಿಲಾಗಿದೆ. ಆಸಕ್ತ ರೂಪದರ್ಶಿಗಳು ಸ್ಟುಡಿಯೋ ಅಥವಾ ಫೋಟೋಗ್ರಾಫರ್ ಮೂಲಕ ತೆಗೆದ ‘6*4 ಅಳತೆಯ ಮುದ್ರಿತ ಫೋಟೋ ಮತ್ತು ಇ-ಮೇಲ್ ಮೂಲಕವೂ ಕಳಿಸಬಹುದು. 80 ಪದಗಳಮಿತಿಯೊಳಗೆ ನಿಮ್ಮ ಪರಿಚಯದೊಂದಿಗೆ, ಒಬ್ಬರು 4 ಫೋಟೋ ಕಳುಹಿಸಬೇಕು. ವಯಸ್ಸಿನ ಮಿತಿಯಿಲ್ಲ ಇರುವುದಿಲ್ಲ.
ಕತೆಯ ವಿಜೇತರಿಗೆ ಪ್ರಥಮ ಬಹುಮಾನ : 10000, ದ್ವಿತೀಯ ಬಹುಮಾನ : 5000, ತೃತೀಯ ಬಹುಮಾನ : 3000 ಹಾಗೂ ಕವಿತೆ ಬಹುಮಾನ ವಿಜೇತರಿಗೆ ಪ್ರಥಮ ಬಹುಮಾನ : 5000 ದ್ವಿತೀಯ ಬಹುಮಾನ : 3000 ಹಾಗೂ ತೃತೀಯ ಬಹುಮಾನ : ₹2000 ಸಿಗಲಿದೆ.
ಆಗಸ್ಟ್ 30ರೊಳಗೆ ಬರಹಗಳನ್ನು ಇ-ಮೇಲ್: deepasuddidina@gmail.com ಗೆ ಕಳುಹಿಸಲು ತಿಳಿಸಿದೆ. ಈ ಕುರಿತು ಹೆಚ್ಚಿನ ಮಾಹಿತಿಗಾಗಿ :9980346243 ಹಾಗೂ visit: www.suddidina.com ಅನ್ನು ವೀಕ್ಷಿಸಬಹುದಾಗಿದೆ.
ಕಚೇರಿ ವಿಳಾಸ
ದೇವನಗರಿ ಸುದ್ದಿದಿನ- ಕನ್ನಡ ದಿನ ಪತ್ರಿಕೆ
ದೀಪಾವಳಿ ವಿಶೇಷಾಂಕ ವಿಭಾಗ
#3231/1, ಸಂಜೀವ ಸದನ, 11ನೇ ಮುಖ್ಯರಸ್ತೆ, 4 ನೇ ಅಡ್ಡರಸ್ತೆ, ಎಂಸಿಸಿ ಬಿ ಬ್ಲಾಕ್, ದಾವಣಗೆರೆ, 577004
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಕ್ರೀಡೆ
ರಾಜ್ಯದ ವಿವಿಧ ನೀರಾವರಿ ಯೋಜನೆಗಳಿಗೆ ಹೆಚ್ಚಿನ ಅನುದಾನ ; ಇ-ಖಾತೆ ಅಭಿಯಾನ ಹಾಗೂ ಇತರೆ ಪ್ರಮುಖ ಸುದ್ದಿಗಳು
ರಾಜ್ಯದ ವಿವಿಧ ನೀರಾವರಿ ಯೋಜನೆಗಳಿಗೆ ಹೆಚ್ಚಿನ ಅನುದಾನ ; ಇ-ಖಾತೆ ಅಭಿಯಾನ ಹಾಗೂ ಇತರೆ ಪ್ರಮುಖ ಸುದ್ದಿಗಳು
1. ಮುಖ್ಯಮಂತ್ರಿ ಸಿದ್ದರಾಮಯ್ಯ ನವದೆಹಲಿ ತಲುಪಿದ್ದಾರೆ. ಇಂದು ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿ ಮಾಡಿ, 5 ಪ್ರಮುಖ ಮಸೂದೆಗಳಿಗೆ ಅಂಗೀಕಾರ ನೀಡುವಂತೆ ಮನವಿ ಮಾಡಲಿದ್ದಾರೆ ಎಂದು ಉನ್ನತ ಮೂಲಗಳು ತಿಳಿಸಿವೆ. ಭದ್ರಾ ಮೇಲ್ದಂಡೆ ಯೋಜನೆ ಸೇರಿದಂತೆ ರಾಜ್ಯದ ವಿವಿಧ ನೀರಾವರಿ ಯೋಜನೆಗಳಿಗೆ, ಹೆಚ್ಚಿನ ಅನುದಾನ ಬಿಡುಗಡೆ ಮಾಡುವಂತೆ, ಕೇಂದ್ರದ ಜಲಶಕ್ತಿ ಖಾತೆ ಸಚಿವರನ್ನು ಕೋರುವುದಾಗಿ, ಇದೇ ವೇಳೆ ಸಾಮಾಜಿಕ ಜಾಲತಾಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
2. ರಾಜ್ಯದ ಗ್ರಾಮ ಪಂಚಾಯ್ತಿಗಳ ಹಂತದಲ್ಲಿ ಜುಲೈ 15ರಿಂದ, ಸಾರ್ವಜನಿಕರ ಆಸ್ತಿಗಳ ಇ-ಖಾತೆ ರೂಪಿಸುವ ಅಭಿಯಾನವನ್ನು ಕಂದಾಯ ಇಲಾಖೆ ಆಯೋಜಿಸಲಿದೆ ಎಂದು ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.
3. ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆಗೆ ಸಂಬಂಧಿಸಿ, ಇಲ್ಲಿಯವರೆಗೆ ಹೆಸರು ನೋಂದಾಯಿಸದವರು, ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ, ಈ ತಿಂಗಳ 30ರವರೆಗೆ ಮಾಹಿತಿ ನೀಡಲು ಅವಕಾಶವಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಎ.ಬಿ.ಬಸವರಾಜು ತಿಳಿಸಿದ್ದಾರೆ.
4. ಕಾವೇರಿ ಜಲಾನಯನ ಪ್ರದೇಶದಲ್ಲಿ ವ್ಯಾಪಕವಾಗಿ ಸುರಿಯುತ್ತಿರುವ ಮಳೆಯಿಂದ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆ.ಆರ್.ಎಸ್. ಅಣೆಕಟ್ಟೆ ಭಾಗಶ: ಭರ್ತಿಯಾಗಿದ್ದು, ಒಳ ಹರಿವು ಇನ್ನಷ್ಟು ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಅಣೆಕಟ್ಟೆಯಿಂದ 5 ಸಾವಿರದಿಂದ 15 ಸಾವಿರ ಕ್ಯುಸೆಕ್ ನೀರನ್ನು ನದಿಗೆ ಹರಿಸಲಾಗಿದೆ.
5. ಕತಾರ್‌ನಲ್ಲಿರುವ ಅಲ್ ಉದೈದ್ ಅಮೇರಿಕ ವಾಯುನೆಲೆಯ ಮೇಲೆ ಇರಾನ್ ನಡೆಸಿದ ದಾಳಿಯ ನಂತರ ಜಾಗತಿಕ ತೈಲ ಬೆಲೆಗಳು ಐದು ವರ್ಷಗಳಲ್ಲಿ ನಿನ್ನೆ ಒಂದೇ ದಿನದಲ್ಲಿ ತೀವ್ರ ಕುಸಿತವನ್ನು ದಾಖಲಿಸಿದೆ.
6. ಕರ್ನಾಟಕ, ಮಧ್ಯಪ್ರದೇಶ, ಬಿಹಾರ, ಜಾಖಂಡ್, ಒಡಿಶಾ, ಛತ್ತೀಸ್‌ಗಢ, ಪಶ್ಚಿಮ ಬಂಗಾಳ, ಸಿಕ್ಕಿಂ, ಅರುಣಾಚಲ ಪ್ರದೇಶ, ಕೊಂಕಣ, ಗೋವಾ, ಮಹಾರಾಷ್ಟ್ರ, ಗುಜರಾತ್, ಹಿಮಾಚಲ ಪ್ರದೇಶ, ಉತ್ತರಾಖಂಡ, ಪಶ್ಚಿಮ ಉತ್ತರ ಪ್ರದೇಶ, ರಾಜಸ್ಥಾನ, ಕೇರಳದ ಕೆಲವು ಸ್ಥಳಗಳಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
7. ಅಯೋವಾದಲ್ಲಿ ನಾಳೆ ಆರಂಭವಾಗಲಿರುವ ಯುಎಸ್ ಓಪನ್ 2025 ಬ್ಯಾಡ್ಮಿಂಟನ್ ಪಂದ್ಯಾವಳಿಯ ಪುರುಷರ ಡಬಲ್ಸ್ ವಿಭಾಗದಲ್ಲಿ ಹರಿಹರನ್ ಅಂಶಕರುಣನ್ ಮತ್ತು ರೂಬನ್ ಕುಮಾರ್ ರೆಥಿನಸಬಪತಿ, ಭಾರತವನ್ನು ಮುನ್ನಡೆಸಲಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಈರುಳ್ಳಿ ಕೇವಲ ತರಕಾರಿಯಲ್ಲ ; ಅದ್ಭುತ ಔಷಧ
ನಾವು ನಿತ್ಯವೂ ತಯಾರಿಸುವ ಅಡುಗೆ ಪದಾರ್ಥಗಳಿಗೆ ಈರುಳ್ಳಿಯನ್ನು ಹಾಕದಿದ್ದಾಗ ಒಂದು ರುಚಿಯಾದರೆ ಅದನ್ನು ಹಾಕಿದಾಗ ಆ ಪದಾರ್ಥದ ರುಚಿಯೇ ಬೇರೆಯಾಗುತ್ತದೆ. ನಾವು ಈರುಳ್ಳಿಯ ಗುಣಗಳು, ಅದರ ಉಪಯೋಗಗಳು ಮತ್ತು ಮನೆ ಮದ್ದುಗಳ ಬಗ್ಗೆ ತಿಳಿದುಕೊಳ್ಳೋಣ.
ಆಯುರ್ವೇದದಲ್ಲಿ ಈರುಳ್ಳಿಯ ಬಗ್ಗೆ ವಿಸ್ತೃತ ವಿವರಣೆ ಇದೆ. ಆಯುರ್ವೇದ ಗ್ರಂಥಗಳ ಪ್ರಕಾರ ಈರುಳ್ಳಿಗೆ ಬೆಳ್ಳುಳ್ಳಿಯ ಗುಣಗಳಿವೆ. ಆದರೆ ಬೆಳ್ಳುಳ್ಳಿಯಂತೆ ಇದು ಉಷ್ಣವಲ್ಲ. ಹಾಗಾಗಿ ಬೆಳ್ಳುಳ್ಳಿಯ ಅದ್ಭುತ ಗುಣಗಳನ್ನು ಪಡೆಯಬೇಕು ಎಂದಾದರೆ ಮತ್ತು ಬೆಳ್ಳುಳ್ಳಿಯನ್ನು ಸೇವಿಸಿದರೆ ಉಷ್ಣವಾಗುತ್ತದೆ ಎಂಬ ಯೋಚನೆ ಇದ್ದರೆ ಬದಲಿಗೆ ಈರುಳ್ಳಿಯನ್ನು ಬಳಸಬಹುದು.
ಭಾವ ಪ್ರಕಾಶ ನಿಘಂಟು ಎಂಬ ಗ್ರಂಥದಲ್ಲಿ “ಬಲವೀರ್ಯ ಕೈರೋ ಗುರುಃ” ಎಂದಿದ್ದಾರೆ. ಅಂದರೆ ಈರುಳ್ಳಿಯು ದೇಹದ ಬಲವನ್ನು, ವೀರ್ಯದ ಗುಣಮಟ್ಟವನ್ನು, ಲೈಂಗಿಕ ಶಕ್ತಿಯನ್ನು ಹೆಚ್ಚಿಸುತ್ತದೆ ಎಂದರ್ಥ. ಬಹುತೇಕ ಎಲ್ಲಾ ಆಯುರ್ವೇದ ಗ್ರಂಥಗಳಲ್ಲಿಯೂ ಈರುಳ್ಳಿಯಿಂದ ಲೈಂಗಿಕ ಶಕ್ತಿ ವೃದ್ಧಿಯಾಗುತ್ತದೆ ಎಂಬುದನ್ನು ಹೇಳಲಾಗಿದೆ. ಇದು ಚರ್ಮಕ್ಕೆ ಕೂಡ ಅತ್ಯಂತ ಅನುಕೂಲಕರವಾದದ್ದು. ಚರ್ಮವನ್ನು ಸ್ನಿಗ್ಧಗೊಳಿಸಿ ಒರಟುತನವನ್ನು ಹೋಗಲಾಡಿಸುತ್ತದೆ; ಚರ್ಮಕ್ಕೆ ಕಾಂತಿಯನ್ನು ಕೊಡುತ್ತದೆ; ಜೊತೆಗೆ ಚರ್ಮದ ಶುದ್ಧಿಯನ್ನೂ ಮಾಡುತ್ತದೆ ಎಂದು ವಿವರಿಸಲಾಗಿದೆ. ಈರುಳ್ಳಿಯನ್ನು ನಿಯಮಿತವಾಗಿ ಸೇವಿಸುವುದರಿಂದ ದೇಹದ ಬಾಹ್ಯ ಮತ್ತು ಆಂತರಿಕ ಕಾಂತಿ ಹೆಚ್ಚುತ್ತದೆ.
ಅಂದರೆ ಕೇವಲ ಸೌಂದರ್ಯವೃದ್ಧಿಯಷ್ಟೇ ಅಲ್ಲ ದೇಹದೊಳಗಿನ ರೋಗನಿರೋಧಕ ಶಕ್ತಿ ತುಂಬಾ ಚೆನ್ನಾಗಿ ಹೆಚ್ಚುತ್ತದೆ. ಈರುಳ್ಳಿಯು ಧ್ವನಿಗೆ ಸಂಬಂಧಿಸಿದ ಸಮಸ್ಯೆಗಳನ್ನು ಹೋಗಲಾಡಿಸಿ ಒಳ್ಳೆಯ ಧ್ವನಿಯನ್ನು ನೀಡುತ್ತದೆ ಎಂದು ವಿವರಿಸಲಾಗಿದೆ. ಹೀಗಾಗಿ ಹಾಡುಗಾರರು, ಅಧ್ಯಾಪಕರಂಥವರಿಗೆ ನಿಯಮಿತ ಈರುಳ್ಳಿ ಸೇವನೆ ಅನುಕೂಲಕರ. ಇದು ಕಣ್ಣಿನ ಆರೋಗ್ಯವನ್ನು ಹೆಚ್ಚಿಸುವುದರಿಂದ ಹತ್ತರಿಂದ ಹದಿನೈದು ಮಿಲೀ ಈರುಳ್ಳಿ ರಸವನ್ನು ಸುಮಾರು ಒಂದು ತಿಂಗಳು ದಿನಕ್ಕೊಮ್ಮೆ ಸೇವಿಸುವುದರಿಂದ ಚಿಕ್ಕಪುಟ್ಟ ಕಣ್ಣಿನ ತೊಂದರೆಗಳು ನಿವಾರಣೆಯಾಗುತ್ತವೆ. ಸ್ವಲ್ಪ ಸಿಹಿ ಇರುವ ಅಂದರೆ ಖಾರ ಕಡಿಮೆ ಇರುವ ಈರುಳ್ಳಿಯನ್ನು ಚಿಕ್ಕ ಚಿಕ್ಕ ತುಂಡುಗಳನ್ನಾಗಿ ಕತ್ತರಿಸಿ ತುಪ್ಪದಲ್ಲಿ ಹುರಿದು ನಿಯಮಿತವಾಗಿ ಸೇವಿಸಿದರೆ ಲೈಂಗಿಕ ಶಕ್ತಿಯ ವೃದ್ಧಿಯಾಗುತ್ತದೆ.
ಕೂದಲು ಉದುರುವುದನ್ನು ಕಡಿಮೆ ಮಾಡಲು ಈರುಳ್ಳಿಯು ಸಹಕಾರಿ. ಈರುಳ್ಳಿಯ ರಸ ತೆಗೆದು ತಲೆ ಸ್ನಾನ ಮಾಡುವ ಹತ್ತು ನಿಮಿಷ ಮೊದಲು ಕೂದಲಿನ ಬುಡಕ್ಕೆ ಹಚ್ಚಬೇಕು. ಇದರಿಂದ ಕೂದಲಿನ ಬೆಳವಣಿಗೆ ಚೆನ್ನಾಗಿ ಆಗಲು ಮತ್ತು ಕೂದಲು ಉದುರುವುದು ನಿಲ್ಲಲು ಸಹಾಯವಾಗುತ್ತದೆ. ಬೊಜ್ಜನ್ನು ಕಡಿಮೆ ಮಾಡಲು ಕೂಡ ಈರುಳ್ಳಿಯು ಸಹಕಾರಿ. ಬೆಳ್ಳುಳ್ಳಿಯ ಇನ್ನೊಂದು ಅದ್ಭುತ ಗುಣವೆಂದರೆ ಅದು ನರದ ಶಕ್ತಿಯನ್ನು ಹೆಚ್ಚಿಸುತ್ತದೆ. ಹಾಗಾಗಿ ಸಯಾಟಿಕಾದಂತಹ ಸಮಸ್ಯೆಗಳನ್ನು ಅನುಭವಿಸುತ್ತಿರುವವರಿಗೆ ಈರುಳ್ಳಿ ತುಂಬಾ ಲಾಭದಾಯಕ.
ಕಫದ ಸಮಸ್ಯೆಯಿಂದ ಬಳಲುತ್ತಿದ್ದು ಕಫ ಹೊರಗೆ ಬರುತ್ತಿಲ್ಲದಿದ್ದರೆ ಎರಡು ಚಮಚದಷ್ಟು ಈರುಳ್ಳಿ ರಸ, ಅರ್ಧ ಚಮಚದಷ್ಟು ಶುಂಠಿ ರಸ, ಅರ್ಧ ಚಮಚದಷ್ಟು ತುಳಸಿ ಎಲೆಗಳ ರಸ ಮತ್ತು ಒಂದು ಚಮಚ ಜೇನುತುಪ್ಪವನ್ನು ಸೇರಿಸಿ ದಿನಕ್ಕೆ ಒಂದು ಅಥವಾ ಎರಡು ಬಾರಿ ಸೇವಿಸಿದರೆ ಕಫ ಹೊರಗೆ ಬಂದು ಸಮಸ್ಯೆ ನಿವಾರಣೆಯಾಗುತ್ತದೆ.
ಈರುಳ್ಳಿ ಒಳ್ಳೆಯ ಜೀರ್ಣಕಾರಿಯೂ ಹೌದು ಹಾಗಾಗಿ ಅಜೀರ್ಣ ಇರುವವರಿಗೆ ಹೆಚ್ಚಿನ ಪ್ರಮಾಣದಲ್ಲಿ ಈರುಳ್ಳಿಯನ್ನು ಹಾಕಿ ಹೆಸರುಬೇಳೆಯ ತಿಳಿಸಾರು ಮಾಡಿ ಊಟಕ್ಕೆ ನೀಡಿದರೆ ಅಜೀರ್ಣದ ಸಮಸ್ಯೆ ತುಂಬಾ ಚೆನ್ನಾಗಿ ಹತೋಟಿಗೆ ಬರುತ್ತದೆ. ಜೊತೆಗೆ ಶಕ್ತಿ ವೃದ್ಧಿಯೂ ಆಗುತ್ತದೆ. ಒಟ್ಟಿನಲ್ಲಿ ಈರುಳ್ಳಿಯನ್ನು ಸರಿಯಾಗಿ ಬಳಸಿಕೊಂಡರೆ ಅದು ಕೇವಲ ತರಕಾರಿಯಲ್ಲ ಅದ್ಭುತ ಔಷಧ.(ಬರಹ-ಡಾ|| ವೆಂಕಟ್ರಮಣ ಹೆಗಡೆ
ವೇದ ವೆಲ್ನೆಸ್ ಸೆಂಟರ್, ನಿಸರ್ಗಮನೆ, ಶಿರಸಿ, ಉ.ಕನ್ನಡ)
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ6 days agoಮಾಯಕೊಂಡ ಶಾಸಕ ಕೆ.ಎಸ್. ಬಸವಂತಪ್ಪ ಸಚಿವರಾಗಿ ಆಯ್ಕೆ: ದಾವಣಗೆರೆಯಲ್ಲಿ ಸಂಭ್ರಮ ಆಚರಣೆ
-
ಅಂತರಂಗ2 days agoಪ್ರಪ್ರಥಮ ಮಹಿಳಾ ಸಾಹಿತ್ಯ ಸಮ್ಮೇಳನ : ಸರ್ವ ಕ್ಷೇತ್ರದಲ್ಲಿಯೂ ರಾರಾಜಿಸುವ ಶಿಖರ ಶಿರೋಮಣಿಗಳು
-
ದಿನದ ಸುದ್ದಿ3 days agoನಾನೇ ಮುಖ್ಯಮಂತ್ರಿ ಇದ್ದಂತೆ : ಶಾಸಕ ಶಿವಗಂಗಾ ಬಸವರಾಜ್
-
ದಿನದ ಸುದ್ದಿ4 days agoದಾವಣಗೆರೆ ವಿಶ್ವವಿದ್ಯಾಲಯ | ಗುಣಮಟ್ಟದ ಸಂಶೋಧನೆ ಶೈಕ್ಷಣಿಕ ಪ್ರಗತಿ – ಜಾಗತಿಕ ಮಾನ್ಯತೆಯ ಮೂಲಾಧಾರ : ಕುಲಪತಿ ಪ್ರೊ. ಬಿ. ಇ. ರಂಗಸ್ವಾಮಿ


