Connect with us

ನಿತ್ಯ ಭವಿಷ್ಯ

ಶ್ರೀ ಮಂಜುನಾಥ ಸ್ವಾಮಿ ಹೆಸರಿನಲ್ಲಿ ಈ 5 ರಾಶಿಯವರು ಹೀಗೆ ದೀಪ ಹಚ್ಚಿ, ದೋಷ ಮುಕ್ತರಾಗಿ | ಸೋಮವಾರ 14/10/2019

Published

on

ನಿಮ್ಮ ಎಲ್ಲಾ ಸಮಸ್ಯೆಗಳಿಗೆ ಶ್ರೀ ಮಹಾಕಾಳಿ ದೈವಿಕ ಮಾಂತ್ರಿಕ ಪೂಜಾಶಕ್ತಿಯಿಂದ ಶೀಘ್ರದಲ್ಲಿ  ಸೂಕ್ತವಾದ ಶಾಶ್ವತವಾಗಿ ಪರಿಹಾರ ಮಾಡಿಕೊಡಲಾಗುತ್ತದೆ.  ನೀವು ಎಷ್ಟೋ ಜ್ಯೋತಿಷ್ಯರಲ್ಲಿ ದೈವ ದೇವಸ್ಥಾನಗಳಲ್ಲಿ ಕೇಳಿ ಮನನೊಂದಿದ್ದರೆ  ತಕ್ಷಣವೇ ಕರೆಮಾಡಿ. ದೈವಜ್ಞ ಶ್ರೀ ದೇವೇಂದ್ರನಾಥ್ ಭಟ್. PH:-  9945590266

ಮೇಷ ರಾಶಿ

ಎಲೆಕ್ಟ್ರಾನಿಕ್ಸ್  ಮಾಡುವವರು ತುಂಬಾ ಜಾಗ್ರತೆಯಿಂದ ಮುಂದುವರಿಯಿರಿ. ಪ್ರೀತಿ ಪ್ರೇಮ ವಿಷಯದಲ್ಲಿ ಅನಿಸಿದ್ದನ್ನು ಹೇಳಬೇಕು.   ಕೆಲಸದಲ್ಲಿ ಅಧಿಕ ಲಾಭ ದೊರೆಯುತ್ತದೆ. ಹಣಕಾಸಿನ ವಿಷಯಕ್ಕೆ ಸಂಬಂಧಿಸಿದಂತೆ ನೀವು ನಿಮ್ಮ ಸಂಗಾತಿಯ ಅಭಿಪ್ರಾಯವನ್ನು ಒಪ್ಪದ ಕಾರಣ ವಿಷಯಗಳನ್ನು ಭಿನ್ನವಾಗಿ ಕಾಣಬೇಕಾಗುವುದು. ನಿಮ್ಮ ಯಾವುದೇ ಕಠಿಣ ಸಮಸ್ಯೆಗಳಿಗೆ ಶಾಶ್ವತವಾದ ಸೂಕ್ತವಾದ ಪರಿಹಾರ ಕಾಣಲು ಕರೆಮಾಡಿ. PH:- 9945590266

ವೃಷಭ ರಾಶಿ

ಸಣ್ಣ ವಿಷಯಗಳು ಕುಟುಂಬದಲ್ಲಿ ವಿವಾದಕ್ಕೆ ಕಾರಣವಾಗುವುದು. ಇವೆಲ್ಲವನ್ನು ತಪ್ಪಿಸಲು ನೀವು ನಕಾರಾತ್ಮಕ ಭಾವನೆಯಲ್ಲಿ ಮುಳುಗಬೇಡಿ. ವೃತ್ತಿ ಕ್ಷೇತ್ರದಲ್ಲಿ ತೀವ್ರವಾದ ಸವಾಲನ್ನು ಎದುರಿಸಬೇಕಾಗುವುದು. ನಿಮ್ಮ ತಪ್ಪುಗಳಿಗೆ ಪಶ್ಚಾತಾಪ ಪಡುವ ಬದಲು ಜಾಗರೂಕರಾಗಿರಿ. ನಿಮ್ಮ ಬೇಜವಾಬ್ದಾರಿ ವರ್ತನೆಯು ಕಳವಳವನ್ನು ಹುಟ್ಟಿಸುವುದು. ನಿಮ್ಮ ಯಾವುದೇ ಕಠಿಣ ಸಮಸ್ಯೆಗಳಿಗೆ ಶಾಶ್ವತವಾದ ಸೂಕ್ತವಾದ ಪರಿಹಾರ ಕಾಣಲು ಕರೆಮಾಡಿ.  PH:- 9945590266

ಮಿಥುನ ರಾಶಿ

ಕುಟುಂಬದಲ್ಲಿ ತಪ್ಪು ಗ್ರಹಿಕೆ ಉಂಟಾಗುವ ಸಾಧ್ಯತೆಗಳಿವೆ. ಹಿರಿಯರ ಆರೋಗ್ಯದ ಬಗ್ಗೆ ಕಾಳಜಿ ವಹಿಸಿ. ನೀವು ನಿಮ್ಮ ದಿನವನ್ನು ಧ್ಯಾನದೊಂದಿಗೆ ಪ್ರಾರಂಭಿಸಿ. ಕುಟುಂಬದ ವಿಚಾರದಲ್ಲಿ ಇಂದು ನಿಮಗೆ ಸುಗಮವಾದ ದಿನ. ನವ ವಿವಾಹಿತರು ಇಂದು ಅತ್ಯುತ್ತಮ ದಿನವನ್ನಾಗಿ ಕಳೆಯುವರು. ನಿಮ್ಮ ಯಾವುದೇ ಕಠಿಣ ಸಮಸ್ಯೆಗಳಿಗೆ ಶಾಶ್ವತವಾದ ಸೂಕ್ತವಾದ ಪರಿಹಾರ ಕಾಣಲು ಕರೆಮಾಡಿ. PH:- 9945590266

ಕರ್ಕಾಟಕ   ರಾಶಿ

ಪ್ರೀತಿ ಪಾತ್ರರೊಂದಿಗೆ ಸಣ್ಣ ಪ್ರವಾಸವನ್ನು ಕೈಗೊಳ್ಳುವಿರಿ. ಹಿಂದೆ ನಡೆದ ಕಹಿ ಘಟನೆಯ ಬಗ್ಗೆ ನೀವು ದೂರ ಸರಿದುಕೊಳ್ಳುವಿರಿ. ಹಣಕಾಸಿನ ವಿಷಯದಲ್ಲಿ ಇಂದು ಪ್ರಯೋಜನಕಾರಿ ಫಲಿತಾಂಶವನ್ನು ಪಡೆಯುವಿರಿ. ಕೆಲವು ಸಂಗತಿಗಳಿಗೆ ಸಂಬಂಧಿಸಿದಂತೆ ನಷ್ಟವನ್ನು ಅನುಭವಿಸಬೇಕಾಗುವುದು. ನಿಮ್ಮ ಶ್ರಮದಾಯಕ ಪರಿಶ್ರಮವು ಪ್ರಕಾಶಮಾನ ಫಲ ದೊರೆಯುತ್ತದೆ.  ನಿಮ್ಮ ಯಾವುದೇ ಕಠಿಣ ಸಮಸ್ಯೆಗಳಿಗೆ ಶಾಶ್ವತವಾದ ಸೂಕ್ತವಾದ ಪರಿಹಾರ ಕಾಣಲು ಕರೆಮಾಡಿ. PH:- 9945590266.

ಸಿಂಹ ರಾಶಿ

ಕೆಲಸದ ಚಟುವಟಿಕೆಗಳಲ್ಲಿ ಮುಂದಾಗಿ ಉತ್ತಮ ಹೆಸರು ಸಿಗುವುದು. ಅತೀ ಸ್ನೇಹಿತರೆನಿಸಿದವರು ನಿಮ್ಮನ್ನು ಸುತ್ತುವರಿದು ಆರ್ಥಿಕ ಸಹಾಯವನ್ನು ಕೇಳುವ ಸಂದರ್ಭವಿರುತ್ತದೆ. ಆರೋಗ್ಯವೇ ಭಾಗ್ಯ ಎನ್ನುವಂತೆ  ಆರೋಗ್ಯದ ಕಡೆ ವಿಶೇಷ ಗಮನ ಹರಿಸಬೇಕು. ವೃತ್ತಿಯಲ್ಲಿ ನಿಮ್ಮ ಯಶಸ್ಸನ್ನು ಬೇರೆಯವರು ಪಡೆದುಕೊಂಡು ನಿಮಗೆ ಅನ್ಯಾಯವಾದರೂ ಸತ್ಯಾಂಶ ಹೊರಬಂದು ನೆಮ್ಮದಿ ಎನಿಸುವುದು. ನಿಮ್ಮ ಯಾವುದೇ ಕಠಿಣ ಸಮಸ್ಯೆಗಳಿಗೆ ಶಾಶ್ವತವಾದ ಸೂಕ್ತವಾದ ಪರಿಹಾರ ಕಾಣಲು ಕರೆಮಾಡಿ. PH:- 9945590266

ಕನ್ಯಾ ರಾಶಿ

ಭೂ ವ್ಯವಹಾರದಲ್ಲಿ ಲಾಭ ತರುವುದು. ಕೃಷಿಕರಿಗೆ ಬೆಳೆಗಳು ಉತ್ತಮವಾಗಿ ಧಾರಣೆಗೊಂಡು ಮಾನಸಿಕ ನೆಮ್ಮದಿ. ಮನೆಯಲ್ಲಿ ಶುಭ ವಾತಾವರಣವಿರುವುದು. ಹಣಕಾಸಿನಲ್ಲಿ ಏರುಪೇರು ಉಂಟಾಗುತ್ತದೆ.  ವಿದ್ಯಾರ್ಥಿಗಳಿಗೆ  ಉನ್ನತ ವಿದ್ಯಾಭ್ಯಾಸಕ್ಕೆ ಅನುಕೂಲವಾಗುವುದು. ನಿಮ್ಮ ಯಾವುದೇ ಕಠಿಣ ಸಮಸ್ಯೆಗಳಿಗೆ ಶಾಶ್ವತವಾದ ಸೂಕ್ತವಾದ ಪರಿಹಾರ ಕಾಣಲು ಕರೆಮಾಡಿ. PH:- 9945590266

ತುಲಾ ರಾಶಿ

ಇಂದು ಒಟ್ಟಾರೆಯಾಗಿ ಶುಭ ಫಲಗಳೇ ಅಧಿಕವಾಗಿರುತ್ತದೆ. ಬಂದುಗಳಲ್ಲಿ ಮತ್ತು ನೆರೆಹೊರೆಯವರಲ್ಲಿ ಉತ್ತಮ ಹೆಸರು ಪಡೆಯುತ್ತೀರಿ. ಸಾಮಾಜಿಕ ಕಾರ್ಯದಲ್ಲಿ ತೊಡಗಿಸಿಕೊಳ್ಳುವಿರಿ. ಅತೀ ಉತ್ಸುಕದಿಂದ ಕೆಲಸ ಮಾಡಿದರೂ ಜಾಗ್ರತೆಯಾಗಿರುವುದು ಮುಖ್ಯ. ಜೀವನದ ಬಹು ಮುಖ್ಯ ಗುರಿಯೊಂದನ್ನು ಸಾಧಿಸುವಿರಿ. ಸಂಪತ್ತು ಕೀರ್ತಿ ಹೆಚ್ಚಿ ಗೆಳೆಯರ ಸಂಖ್ಯೆ ಜಾಸ್ತಿಯಾಗುತ್ತದೆ.  ನಿಮ್ಮ ಯಾವುದೇ ಕಠಿಣ ಸಮಸ್ಯೆಗಳಿಗೆ ಶಾಶ್ವತವಾದ ಸೂಕ್ತವಾದ ಪರಿಹಾರ ಕಾಣಲು ಕರೆಮಾಡಿ. PH:- 9945590266

ವೃಶ್ಚಿಕ ರಾಶಿ

ಸಕಲ ಕಾರ್ಯಗಳಲ್ಲಿ ಮುನ್ನಡೆ ಆಗುತ್ತದೆ.  ಸಂಚಾರದಲ್ಲಿ ಸ್ವಲ್ಪ ಎಚ್ಚರಿಕೆ ಅಗತ್ಯ. ಬಂಧು ಬಾಂಧವರು ಇಂದು ನಿಮಗೆ ನೆರವಾಗುವರು.ಕಾಡುತ್ತಿದ್ದ ಆತಂಕಗಳೆಲ್ಲವೂ ಮರೆಯಾಗುವುದು. ಸಾಮಾಜಿಕವಾಗಿ ಹೆಚ್ಚಿನ ಪ್ರತಿಷ್ಠೆ ದೊರೆಯುವುದು. ಆಸ್ತಿ ಖರೀದಿಗೆ ಸಂಬಂಧಿಸಿದ ಮಾತುಕತೆಗಳು ಫಲಪ್ರದವಾಗುವುದು. ವ್ಯವಹಾರವು ಸುಲಲಿತವಾಗುವುದು.ನಿಮಗೆ ಬರಬೇಕಾಗಿದ್ದ ಹಣವು ಇಂದು ನಿಮ್ಮ ಕೈ ಸೇರುವ ನಿರೀಕ್ಷೆ ಇದೆ.ನಿಮ್ಮ ಯಾವುದೇ ಕಠಿಣ ಸಮಸ್ಯೆಗಳಿಗೆ ಶಾಶ್ವತವಾದ ಸೂಕ್ತವಾದ ಪರಿಹಾರ ಕಾಣಲು ಕರೆಮಾಡಿ. PH:- 9945590266

ಧನಸ್ಸು  ರಾಶಿ

ಗುರು-ಹಿರಿಯರ ಆಶೀರ್ವಾದ ಪಡೆಯಿರಿ. ಪರಾಕ್ರಮ ಕೆಲಸ-ಕಾರ್ಯಗಳಲ್ಲಿ ಯಶಸ್ಸು ದೊರೆಯುವುದು.ಈ ದಿನ ನೀವು ಅಂದುಕೊಂಡಿದ್ದನ್ನೆಲ್ಲ ಸಾಧಿಸುವಿರಿ. ಕೌಟುಂಬಿಕ ವ್ಯಾಜ್ಯವೊಂದು ದಿಢೀರ್‌ ಇತ್ಯರ್ಥವಾಗುವುದು. ಹಣಕಾಸಿನ ತೊಂದರೆ ಇರುವುದಿಲ್ಲ. ವಿದ್ಯಾರ್ಥಿಗಳಿಗೆ ಇಂದು ಉತ್ತಮ ದಿನ. ವ್ಯವಹಾರ ಮಾಡುವಾಗ ಯೋಚಿಸಿ ಮಾತನಾಡಿ. ಬಾಯಿ ತಪ್ಪಿ ಆಡಿದ ಮಾತಿಗೆ ಹೆಚ್ಚಿನ ಪಶ್ಚಾತ್ತಾಪ ಪಡಬೇಕಾಗುವುದು. ನಿಮ್ಮ ಯಾವುದೇ ಕಠಿಣ ಸಮಸ್ಯೆಗಳಿಗೆ ಶಾಶ್ವತವಾದ ಸೂಕ್ತವಾದ ಪರಿಹಾರ ಕಾಣಲು ಕರೆಮಾಡಿ. PH:- 9945590266

ಮಕರ ರಾಶಿ

ಹಮ್ಮಿಕೊಂಡ ಕಾರ್ಯಗಳು ಮಂದಗತಿಯಲ್ಲಿ ಸಾಗುವುದು. ಆತ್ಮಸ್ಥೈರ್ಯವೇ ಪ್ರಮುಖ ಅಸ್ತ್ರ ಮತ್ತು ಶಕ್ತಿ. ಎದುರಾಳಿಗಳು ನಿಮ್ಮತ್ತ ಆರೋಪಗಳ ಪಟ್ಟಿಯನ್ನೇ ತಂದರೂ ನೀವು ಶಾಂತವಾಗಿ ಎಲ್ಲದಕ್ಕೂ ಸಮಂಜಸ ಉತ್ತರ ಕೊಡುವ ಮೂಲಕ ಅವರ ಮನಸ್ಸನ್ನು ಗೆಲ್ಲುವಿರಿ. ನಿಮ್ಮ ಯಾವುದೇ ಕಠಿಣ ಸಮಸ್ಯೆಗಳಿಗೆ ಶಾಶ್ವತವಾದ ಸೂಕ್ತವಾದ ಪರಿಹಾರ ಕಾಣಲು ಕರೆಮಾಡಿ. PH:- 9945590266 .

ಕುಂಭ ರಾಶಿ

ಸ್ತ್ರೀಯರಿಗೆ  ಧಾರಾಳವಾಗಿ ಖರ್ಚು ಮಾಡುತ್ತೀರೆಂದು ಮನೆಯಲ್ಲಿ ಆಕ್ಷೇಪ. ಕೌಟುಂಬಿಕವಾಗಿ ಸೌಹಾರ್ದ ಮಾತುಕತೆಗಳು ನಡೆಯುವವು. ಹಣಕಾಸಿನ ಸ್ಥಿತಿ ಅಷ್ಟೇನೂ ಉತ್ತಮವಾಗಿರುವುದಿಲ್ಲ. ಮಹತ್ವದ ಕೆಲಸಕ್ಕೆ ನಿಯೋಜಿಸಲ್ಪಡುವಿರಿ.ನಿಮ್ಮ ಯಾವುದೇ ಕಠಿಣ ಸಮಸ್ಯೆಗಳಿಗೆ ಶಾಶ್ವತವಾದ ಸೂಕ್ತವಾದ ಪರಿಹಾರ ಕಾಣಲು ಕರೆಮಾಡಿ. PH:- 9945590266

ಮೀನಾ ರಾಶಿ

ಕೆಲಸದ ಅಧಿಕಾರಗಳ  ಕರುಣೆ ನಿಮ್ಮ ಮೇಲಿರುವುದರಿಂದ ನೀವು ಮಾಡುವ ತಪ್ಪನ್ನು ಕ್ಷ ಮಿಸುವರು. ಸಹೋದರರೊಡನೆ ಉತ್ತಮ ಬಾಂಧವ್ಯವನ್ನು ಇಟ್ಟುಕೊಳ್ಳುವಿರಿ. ಈ ದಿನ ಮಹತ್ವದ ಕೆಲಸಗಳನ್ನು ಕೈಗೆತ್ತಿಕೊಳ್ಳದಿರುವುದೇ ಒಳ್ಳೆಯದು. ಏಕೆಂದರೆ ಈ ದಿನ ಹಮ್ಮಿಕೊಂಡ ಕಾರ್ಯ ಅರ್ಧಕ್ಕೆ ನಿಲ್ಲುವ ಸಂಭವವಿದೆ. ಕುಲದೇವರ ಪ್ರಾರ್ಥನೆಯನ್ನು ತಪ್ಪದೆ ಮಾಡಿ. ನಿಮ್ಮ ಯಾವುದೇ ಕಠಿಣ ಸಮಸ್ಯೆಗಳಿಗೆ ಶಾಶ್ವತವಾದ ಸೂಕ್ತವಾದ ಪರಿಹಾರ ಕಾಣಲು ಕರೆಮಾಡಿ. PH:- 9945590266.

ಅಂಕಣ

ದೀಪಾವಳಿ ವಿಶೇಷಾಂಕ | ದೇವನಗರಿ ಸುದ್ದಿದಿನ ಪತ್ರಿಕೆಯಿಂದ ಕತೆ- ಕವಿತೆ- ಲೇಖನ- ರೂಪದರ್ಶಿ ಫೋಟೋ ಗಳಿಗೆ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ: ಪ್ರಿಯ ಓದುಗರೆ, ಬೆಳಕಿನ ಹಬ್ಬ ದೀಪಾವಳಿಯ ಪ್ರಯುಕ್ತ ದೇವನಗರಿ ಸುದ್ದಿದಿನ – ಕನ್ನಡ ದಿನ ಪತ್ರಿಕೆ ಹಾಗೂ ಶ್ಯಾಮ್ ಪ್ರಕಾಶನದವತಿಯಿಂದ ‘ ದೀಪಾವಳಿ ವಿಶೇಷಾಂಕ’-2026ನ್ನು ತರಲಾಗುತ್ತಿದೆ.

ಈ‌ ಹಿನ್ನೆಲೆಯಲ್ಲಿ ದೀಪಾವಳಿ ವಿಷೇಶಾಂಕ 2026ರ ವಿಭಾಗಕ್ಕೆ ಕತೆ, ಕವಿತೆ ಹಾಗೂ ಲೇಖನ ಹಾಗೂ ರೂಪದರ್ಶಿಗಳ ಛಾಯಾಚಿತ್ರಗಳನ್ನು ಆಹ್ವಾನಿಸಿದ್ದೇವೆ.

ಕತೆ – ಕವಿತೆಗಳನ್ನು ಕಳುಹಿಸಲು ಇರುವ ನಿಯಮಗಳು

ಕತೆ/ಕವಿತೆ ಸ್ವತಂತ್ರ ರಚನೆಯಾಗಿರಬೇಕು. ಈ ಮೊದಲು ಯಾವ ಮಾಧ್ಯಮಗಳಲ್ಲಿಯೂ ಪ್ರಕಟ ಅಥವಾ ಪ್ರಸಾರ ಆಗಿರಬಾರದು.

ಕತೆ 1500 ಸಾವಿರ ಪದಗಳ ಮಿತಿಯಲ್ಲಿರಲಿ. ಕವಿತೆಗೆ 40 ಸಾಲಿನ ಮಿತಿಯಿರಲಿ, ನುಡಿ ಅಥವಾ ಬರಹ ತಂತ್ರಾಂಶದಲ್ಲಿ ಇಲ್ಲವೆ ಯೂನಿಕೋಡ್‌ನಲ್ಲಿ ಇರಬೇಕು. ವಯಸ್ಸಿನ ಮಿತಿ ಇರುವುದಿಲ್ಲ.

ಕತೆ/ಕವಿತೆ ಇರುವ ಪುಟದಲ್ಲಿ ಹೆಸರು, ವಿವರ ಬರೆಯುವಂತಿಲ್ಲ. ಪ್ರತ್ಯೇಕ ಪುಟದಲ್ಲಿ ಹೆಸರು, ಅಂಚೆ ವಿಳಾಸ, ಮೊಬೈಲ್ ನಂಬರ್, ಇ-ಮೇಲ್ ವಿಳಾಸ ಒದಗಿಸಬೇಕು.

ಇತ್ತೀಚಿನ ಪಾಸ್‌ಪೋರ್ಟ್ ಅಳತೆಯ ವರ್ಣಮಯ ಭಾವಚಿತ್ರದೊಂದಿಗೆ 100 ಪದಗಳ ಒಳಗೆ ಕಿರು ಪರಿಚಯ ಕಳುಹಿಸಬೇಕು.

ಸ್ಪರ್ಧೆಗೆ ಕಳುಹಿಸಿರುವ ಬರಹಗಳನ್ನು ಹಿಂದಿರುಗಿಸುವುದಿಲ್ಲ. ಬರಹಗಳು ಕಡ್ಡಾಯವಾಗಿ ಎಂಎಸ್ ವರ್ಡ್ ಫೈಲ್ (MS word File) ನಲ್ಲಿರಲಿ.

ಬರಹ ಮತ್ತು ಫೋಟೋಗಳನ್ನು ಇ-ಮೇಲ್ ಮೂಲಕವಷ್ಟೇ ಕಳಿಸಿ.

ತೀರ್ಪುಗಾರರ ತೀರ್ಮಾನವೇ ಅಂತಿಮ.

ಲೇಖನಗಳಿಗೆ ಆಹ್ವಾನ : ವೈಚಾರಿಕತೆ, ವಿಮರ್ಶೆ, ಕಾನೂನು, ಸಾಹಿತ್ಯ, ತಂತ್ರಜ್ಞಾನ, ವಿಜ್ಞಾನ, ಡಿಜಿಟಲ್ ಮಾಧ್ಯಮ, ಸಿನೆಮಾ, ಪ್ರೇಮಪತ್ರ, ಕೃಷಿ, ರಾಜಕೀಯ, ಕಲೆ, ಆರೋಗ್ಯ, ಪ್ರವಾಸ, ಅಡುಗೆ, ಫೋಟೋಗ್ರಫಿ, ವೈಲ್ಡ್ ಲೈಫ್, ಹಾಸ್ಯ ಕುರಿತಾದ ಲೇಖನಗಳನ್ನು 450 ಪದಗಳನ್ನು ಮೀರದಂತೆ ಬರೆದು ಕಳುಹಿಸಿ.

ಹಾಗೆಯೇ, ವಿಶೇಷಾಂಕದ ಮುಖಪುಟದ ರೂಪದರ್ಶಿಯಾಗಲು ಅವಕಾಶವನ್ನು ಕಲ್ಪಸಿಲಾಗಿದೆ. ಆಸಕ್ತ ರೂಪದರ್ಶಿಗಳು ಸ್ಟುಡಿಯೋ ಅಥವಾ ಫೋಟೋಗ್ರಾಫರ್ ಮೂಲಕ ತೆಗೆದ ‘6*4 ಅಳತೆಯ ಮುದ್ರಿತ ಫೋಟೋ ಮತ್ತು ಇ-ಮೇಲ್ ಮೂಲಕವೂ ಕಳಿಸಬಹುದು. 80 ಪದಗಳಮಿತಿಯೊಳಗೆ ನಿಮ್ಮ ಪರಿಚಯದೊಂದಿಗೆ, ಒಬ್ಬರು 4 ಫೋಟೋ ಕಳುಹಿಸಬೇಕು. ವಯಸ್ಸಿನ ಮಿತಿಯಿಲ್ಲ ಇರುವುದಿಲ್ಲ.

ಕತೆಯ ವಿಜೇತರಿಗೆ ಪ್ರಥಮ ಬಹುಮಾನ : 10000, ದ್ವಿತೀಯ ಬಹುಮಾನ : 5000, ತೃತೀಯ ಬಹುಮಾನ : 3000 ಹಾಗೂ ಕವಿತೆ ಬಹುಮಾನ ವಿಜೇತರಿಗೆ ಪ್ರಥಮ ಬಹುಮಾನ : 5000 ದ್ವಿತೀಯ ಬಹುಮಾನ : 3000 ಹಾಗೂ ತೃತೀಯ ಬಹುಮಾನ : ₹2000 ಸಿಗಲಿದೆ.

ಆಗಸ್ಟ್‌ 30ರೊಳಗೆ ಬರಹಗಳನ್ನು ಇ-ಮೇಲ್‌: deepasuddidina@gmail.com ಗೆ ಕಳುಹಿಸಲು ತಿಳಿಸಿದೆ. ಈ ಕುರಿತು ಹೆಚ್ಚಿನ ಮಾಹಿತಿಗಾಗಿ :9980346243 ಹಾಗೂ visit: www.suddidina.com ಅನ್ನು ವೀಕ್ಷಿಸಬಹುದಾಗಿದೆ.

ಕಚೇರಿ ವಿಳಾಸ 

ದೇವನಗರಿ ಸುದ್ದಿದಿನ- ಕನ್ನಡ ದಿನ ಪತ್ರಿಕೆ
ದೀಪಾವಳಿ ವಿಶೇಷಾಂಕ ವಿಭಾಗ
#3231/1, ಸಂಜೀವ ಸದನ, 11ನೇ ಮುಖ್ಯರಸ್ತೆ, 4 ನೇ ಅಡ್ಡರಸ್ತೆ, ಎಂಸಿಸಿ ಬಿ ಬ್ಲಾಕ್, ದಾವಣಗೆರೆ, 577004

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ಕ್ರೀಡೆ

ರಾಜ್ಯದ ವಿವಿಧ ನೀರಾವರಿ ಯೋಜನೆಗಳಿಗೆ ಹೆಚ್ಚಿನ ಅನುದಾನ ; ಇ-ಖಾತೆ ಅಭಿಯಾನ ಹಾಗೂ ಇತರೆ ‌ಪ್ರಮುಖ ಸುದ್ದಿಗಳು

Published

on

ರಾಜ್ಯದ ವಿವಿಧ ನೀರಾವರಿ ಯೋಜನೆಗಳಿಗೆ ಹೆಚ್ಚಿನ ಅನುದಾನ ; ಇ-ಖಾತೆ ಅಭಿಯಾನ ಹಾಗೂ ಇತರೆ ‌ಪ್ರಮುಖ ಸುದ್ದಿಗಳು

1. ಮುಖ್ಯಮಂತ್ರಿ ಸಿದ್ದರಾಮಯ್ಯ ನವದೆಹಲಿ ತಲುಪಿದ್ದಾರೆ. ಇಂದು ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿ ಮಾಡಿ, 5 ಪ್ರಮುಖ ಮಸೂದೆಗಳಿಗೆ ಅಂಗೀಕಾರ ನೀಡುವಂತೆ ಮನವಿ ಮಾಡಲಿದ್ದಾರೆ ಎಂದು ಉನ್ನತ ಮೂಲಗಳು ತಿಳಿಸಿವೆ. ಭದ್ರಾ ಮೇಲ್ದಂಡೆ ಯೋಜನೆ ಸೇರಿದಂತೆ ರಾಜ್ಯದ ವಿವಿಧ ನೀರಾವರಿ ಯೋಜನೆಗಳಿಗೆ, ಹೆಚ್ಚಿನ ಅನುದಾನ ಬಿಡುಗಡೆ ಮಾಡುವಂತೆ, ಕೇಂದ್ರದ ಜಲಶಕ್ತಿ ಖಾತೆ ಸಚಿವರನ್ನು ಕೋರುವುದಾಗಿ, ಇದೇ ವೇಳೆ ಸಾಮಾಜಿಕ ಜಾಲತಾಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

2. ರಾಜ್ಯದ ಗ್ರಾಮ ಪಂಚಾಯ್ತಿಗಳ ಹಂತದಲ್ಲಿ ಜುಲೈ 15ರಿಂದ, ಸಾರ್ವಜನಿಕರ ಆಸ್ತಿಗಳ ಇ-ಖಾತೆ ರೂಪಿಸುವ ಅಭಿಯಾನವನ್ನು ಕಂದಾಯ ಇಲಾಖೆ ಆಯೋಜಿಸಲಿದೆ ಎಂದು ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.

3. ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆಗೆ ಸಂಬಂಧಿಸಿ, ಇಲ್ಲಿಯವರೆಗೆ ಹೆಸರು ನೋಂದಾಯಿಸದವರು, ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ, ಈ ತಿಂಗಳ 30ರವರೆಗೆ ಮಾಹಿತಿ ನೀಡಲು ಅವಕಾಶವಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಎ.ಬಿ.ಬಸವರಾಜು ತಿಳಿಸಿದ್ದಾರೆ.

4. ಕಾವೇರಿ ಜಲಾನಯನ ಪ್ರದೇಶದಲ್ಲಿ ವ್ಯಾಪಕವಾಗಿ ಸುರಿಯುತ್ತಿರುವ ಮಳೆಯಿಂದ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆ.ಆರ್.ಎಸ್. ಅಣೆಕಟ್ಟೆ ಭಾಗಶ: ಭರ್ತಿಯಾಗಿದ್ದು, ಒಳ ಹರಿವು ಇನ್ನಷ್ಟು ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಅಣೆಕಟ್ಟೆಯಿಂದ 5 ಸಾವಿರದಿಂದ 15 ಸಾವಿರ ಕ್ಯುಸೆಕ್ ನೀರನ್ನು ನದಿಗೆ ಹರಿಸಲಾಗಿದೆ.

5. ಕತಾರ್‌ನಲ್ಲಿರುವ ಅಲ್ ಉದೈದ್ ಅಮೇರಿಕ ವಾಯುನೆಲೆಯ ಮೇಲೆ ಇರಾನ್ ನಡೆಸಿದ ದಾಳಿಯ ನಂತರ ಜಾಗತಿಕ ತೈಲ ಬೆಲೆಗಳು ಐದು ವರ್ಷಗಳಲ್ಲಿ ನಿನ್ನೆ ಒಂದೇ ದಿನದಲ್ಲಿ ತೀವ್ರ ಕುಸಿತವನ್ನು ದಾಖಲಿಸಿದೆ.

6. ಕರ್ನಾಟಕ, ಮಧ್ಯಪ್ರದೇಶ, ಬಿಹಾರ, ಜಾಖಂಡ್, ಒಡಿಶಾ, ಛತ್ತೀಸ್‌ಗಢ, ಪಶ್ಚಿಮ ಬಂಗಾಳ, ಸಿಕ್ಕಿಂ, ಅರುಣಾಚಲ ಪ್ರದೇಶ, ಕೊಂಕಣ, ಗೋವಾ, ಮಹಾರಾಷ್ಟ್ರ, ಗುಜರಾತ್, ಹಿಮಾಚಲ ಪ್ರದೇಶ, ಉತ್ತರಾಖಂಡ, ಪಶ್ಚಿಮ ಉತ್ತರ ಪ್ರದೇಶ, ರಾಜಸ್ಥಾನ, ಕೇರಳದ ಕೆಲವು ಸ್ಥಳಗಳಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

7. ಅಯೋವಾದಲ್ಲಿ ನಾಳೆ ಆರಂಭವಾಗಲಿರುವ ಯುಎಸ್ ಓಪನ್ 2025 ಬ್ಯಾಡ್ಮಿಂಟನ್ ಪಂದ್ಯಾವಳಿಯ ಪುರುಷರ ಡಬಲ್ಸ್ ವಿಭಾಗದಲ್ಲಿ ಹರಿಹರನ್ ಅಂಶಕರುಣನ್ ಮತ್ತು ರೂಬನ್ ಕುಮಾರ್ ರೆಥಿನಸಬಪತಿ, ಭಾರತವನ್ನು ಮುನ್ನಡೆಸಲಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಈರುಳ್ಳಿ ಕೇವಲ ತರಕಾರಿಯಲ್ಲ ; ಅದ್ಭುತ ಔಷಧ

Published

on

ನಾವು ನಿತ್ಯವೂ ತಯಾರಿಸುವ ಅಡುಗೆ ಪದಾರ್ಥಗಳಿಗೆ ಈರುಳ್ಳಿಯನ್ನು ಹಾಕದಿದ್ದಾಗ ಒಂದು ರುಚಿಯಾದರೆ ಅದನ್ನು ಹಾಕಿದಾಗ ಆ ಪದಾರ್ಥದ ರುಚಿಯೇ ಬೇರೆಯಾಗುತ್ತದೆ. ನಾವು ಈರುಳ್ಳಿಯ ಗುಣಗಳು, ಅದರ ಉಪಯೋಗಗಳು ಮತ್ತು ಮನೆ ಮದ್ದುಗಳ ಬಗ್ಗೆ ತಿಳಿದುಕೊಳ್ಳೋಣ.

ಆಯುರ್ವೇದದಲ್ಲಿ ಈರುಳ್ಳಿಯ ಬಗ್ಗೆ ವಿಸ್ತೃತ ವಿವರಣೆ ಇದೆ. ಆಯುರ್ವೇದ ಗ್ರಂಥಗಳ ಪ್ರಕಾರ ಈರುಳ್ಳಿಗೆ ಬೆಳ್ಳುಳ್ಳಿಯ ಗುಣಗಳಿವೆ. ಆದರೆ ಬೆಳ್ಳುಳ್ಳಿಯಂತೆ ಇದು ಉಷ್ಣವಲ್ಲ. ಹಾಗಾಗಿ ಬೆಳ್ಳುಳ್ಳಿಯ ಅದ್ಭುತ ಗುಣಗಳನ್ನು ಪಡೆಯಬೇಕು ಎಂದಾದರೆ ಮತ್ತು ಬೆಳ್ಳುಳ್ಳಿಯನ್ನು ಸೇವಿಸಿದರೆ ಉಷ್ಣವಾಗುತ್ತದೆ ಎಂಬ ಯೋಚನೆ ಇದ್ದರೆ ಬದಲಿಗೆ ಈರುಳ್ಳಿಯನ್ನು ಬಳಸಬಹುದು.

ಭಾವ ಪ್ರಕಾಶ ನಿಘಂಟು ಎಂಬ ಗ್ರಂಥದಲ್ಲಿ “ಬಲವೀರ್ಯ ಕೈರೋ ಗುರುಃ” ಎಂದಿದ್ದಾರೆ. ಅಂದರೆ ಈರುಳ್ಳಿಯು ದೇಹದ ಬಲವನ್ನು, ವೀರ್ಯದ ಗುಣಮಟ್ಟವನ್ನು, ಲೈಂಗಿಕ ಶಕ್ತಿಯನ್ನು ಹೆಚ್ಚಿಸುತ್ತದೆ ಎಂದರ್ಥ. ಬಹುತೇಕ ಎಲ್ಲಾ ಆಯುರ್ವೇದ ಗ್ರಂಥಗಳಲ್ಲಿಯೂ ಈರುಳ್ಳಿಯಿಂದ ಲೈಂಗಿಕ ಶಕ್ತಿ ವೃದ್ಧಿಯಾಗುತ್ತದೆ ಎಂಬುದನ್ನು ಹೇಳಲಾಗಿದೆ. ಇದು ಚರ್ಮಕ್ಕೆ ಕೂಡ ಅತ್ಯಂತ ಅನುಕೂಲಕರವಾದದ್ದು. ಚರ್ಮವನ್ನು ಸ್ನಿಗ್ಧಗೊಳಿಸಿ ಒರಟುತನವನ್ನು ಹೋಗಲಾಡಿಸುತ್ತದೆ; ಚರ್ಮಕ್ಕೆ ಕಾಂತಿಯನ್ನು ಕೊಡುತ್ತದೆ; ಜೊತೆಗೆ ಚರ್ಮದ ಶುದ್ಧಿಯನ್ನೂ ಮಾಡುತ್ತದೆ ಎಂದು ವಿವರಿಸಲಾಗಿದೆ. ಈರುಳ್ಳಿಯನ್ನು ನಿಯಮಿತವಾಗಿ ಸೇವಿಸುವುದರಿಂದ ದೇಹದ ಬಾಹ್ಯ ಮತ್ತು ಆಂತರಿಕ ಕಾಂತಿ ಹೆಚ್ಚುತ್ತದೆ.

ಅಂದರೆ ಕೇವಲ ಸೌಂದರ್ಯವೃದ್ಧಿಯಷ್ಟೇ ಅಲ್ಲ ದೇಹದೊಳಗಿನ ರೋಗನಿರೋಧಕ ಶಕ್ತಿ ತುಂಬಾ ಚೆನ್ನಾಗಿ ಹೆಚ್ಚುತ್ತದೆ. ಈರುಳ್ಳಿಯು ಧ್ವನಿಗೆ ಸಂಬಂಧಿಸಿದ ಸಮಸ್ಯೆಗಳನ್ನು ಹೋಗಲಾಡಿಸಿ ಒಳ್ಳೆಯ ಧ್ವನಿಯನ್ನು ನೀಡುತ್ತದೆ ಎಂದು ವಿವರಿಸಲಾಗಿದೆ. ಹೀಗಾಗಿ ಹಾಡುಗಾರರು, ಅಧ್ಯಾಪಕರಂಥವರಿಗೆ ನಿಯಮಿತ ಈರುಳ್ಳಿ ಸೇವನೆ ಅನುಕೂಲಕರ. ಇದು ಕಣ್ಣಿನ ಆರೋಗ್ಯವನ್ನು ಹೆಚ್ಚಿಸುವುದರಿಂದ ಹತ್ತರಿಂದ ಹದಿನೈದು ಮಿಲೀ ಈರುಳ್ಳಿ ರಸವನ್ನು ಸುಮಾರು ಒಂದು ತಿಂಗಳು ದಿನಕ್ಕೊಮ್ಮೆ ಸೇವಿಸುವುದರಿಂದ ಚಿಕ್ಕಪುಟ್ಟ ಕಣ್ಣಿನ ತೊಂದರೆಗಳು ನಿವಾರಣೆಯಾಗುತ್ತವೆ. ಸ್ವಲ್ಪ ಸಿಹಿ ಇರುವ ಅಂದರೆ ಖಾರ ಕಡಿಮೆ ಇರುವ ಈರುಳ್ಳಿಯನ್ನು ಚಿಕ್ಕ ಚಿಕ್ಕ ತುಂಡುಗಳನ್ನಾಗಿ ಕತ್ತರಿಸಿ ತುಪ್ಪದಲ್ಲಿ ಹುರಿದು ನಿಯಮಿತವಾಗಿ ಸೇವಿಸಿದರೆ ಲೈಂಗಿಕ ಶಕ್ತಿಯ ವೃದ್ಧಿಯಾಗುತ್ತದೆ.

ಕೂದಲು ಉದುರುವುದನ್ನು ಕಡಿಮೆ ಮಾಡಲು ಈರುಳ್ಳಿಯು ಸಹಕಾರಿ. ಈರುಳ್ಳಿಯ ರಸ ತೆಗೆದು ತಲೆ ಸ್ನಾನ ಮಾಡುವ ಹತ್ತು ನಿಮಿಷ ಮೊದಲು ಕೂದಲಿನ ಬುಡಕ್ಕೆ ಹಚ್ಚಬೇಕು. ಇದರಿಂದ ಕೂದಲಿನ ಬೆಳವಣಿಗೆ ಚೆನ್ನಾಗಿ ಆಗಲು ಮತ್ತು ಕೂದಲು ಉದುರುವುದು ನಿಲ್ಲಲು ಸಹಾಯವಾಗುತ್ತದೆ. ಬೊಜ್ಜನ್ನು ಕಡಿಮೆ ಮಾಡಲು ಕೂಡ ಈರುಳ್ಳಿಯು ಸಹಕಾರಿ. ಬೆಳ್ಳುಳ್ಳಿಯ ಇನ್ನೊಂದು ಅದ್ಭುತ ಗುಣವೆಂದರೆ ಅದು ನರದ ಶಕ್ತಿಯನ್ನು ಹೆಚ್ಚಿಸುತ್ತದೆ. ಹಾಗಾಗಿ ಸಯಾಟಿಕಾದಂತಹ ಸಮಸ್ಯೆಗಳನ್ನು ಅನುಭವಿಸುತ್ತಿರುವವರಿಗೆ ಈರುಳ್ಳಿ ತುಂಬಾ ಲಾಭದಾಯಕ.

ಕಫದ ಸಮಸ್ಯೆಯಿಂದ ಬಳಲುತ್ತಿದ್ದು ಕಫ ಹೊರಗೆ ಬರುತ್ತಿಲ್ಲದಿದ್ದರೆ ಎರಡು ಚಮಚದಷ್ಟು ಈರುಳ್ಳಿ ರಸ, ಅರ್ಧ ಚಮಚದಷ್ಟು ಶುಂಠಿ ರಸ, ಅರ್ಧ ಚಮಚದಷ್ಟು ತುಳಸಿ ಎಲೆಗಳ ರಸ ಮತ್ತು ಒಂದು ಚಮಚ ಜೇನುತುಪ್ಪವನ್ನು ಸೇರಿಸಿ ದಿನಕ್ಕೆ ಒಂದು ಅಥವಾ ಎರಡು ಬಾರಿ ಸೇವಿಸಿದರೆ ಕಫ ಹೊರಗೆ ಬಂದು ಸಮಸ್ಯೆ ನಿವಾರಣೆಯಾಗುತ್ತದೆ.

ಈರುಳ್ಳಿ ಒಳ್ಳೆಯ ಜೀರ್ಣಕಾರಿಯೂ ಹೌದು ಹಾಗಾಗಿ ಅಜೀರ್ಣ ಇರುವವರಿಗೆ ಹೆಚ್ಚಿನ ಪ್ರಮಾಣದಲ್ಲಿ ಈರುಳ್ಳಿಯನ್ನು ಹಾಕಿ ಹೆಸರುಬೇಳೆಯ ತಿಳಿಸಾರು ಮಾಡಿ ಊಟಕ್ಕೆ ನೀಡಿದರೆ ಅಜೀರ್ಣದ ಸಮಸ್ಯೆ ತುಂಬಾ ಚೆನ್ನಾಗಿ ಹತೋಟಿಗೆ ಬರುತ್ತದೆ. ಜೊತೆಗೆ ಶಕ್ತಿ ವೃದ್ಧಿಯೂ ಆಗುತ್ತದೆ. ಒಟ್ಟಿನಲ್ಲಿ ಈರುಳ್ಳಿಯನ್ನು ಸರಿಯಾಗಿ ಬಳಸಿಕೊಂಡರೆ ಅದು ಕೇವಲ ತರಕಾರಿಯಲ್ಲ ಅದ್ಭುತ ಔಷಧ.(ಬರಹ-ಡಾ|| ವೆಂಕಟ್ರಮಣ ಹೆಗಡೆ
ವೇದ ವೆಲ್ನೆಸ್ ಸೆಂಟರ್, ನಿಸರ್ಗಮನೆ, ಶಿರಸಿ, ಉ.ಕನ್ನಡ)

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending