ನಿತ್ಯ ಭವಿಷ್ಯ
ನಿಮ್ಮ ರಾಶಿಗೆ ಅನುಗುಣವಾಗಿ ಉತ್ತಮ ಈ ದಿನದ ಭವಿಷ್ಯ : ಕ್ಲಿಕ್ ಮಾಡಿ ಓದಿ ಭಾನುವಾರ 20/10/2019
ನಿಮ್ಮ ಎಲ್ಲಾ ಸಮಸ್ಯೆಗಳಿಗೆ ಶ್ರೀ ಮಹಾಕಾಳಿ ದೈವಿಕ ಮಾಂತ್ರಿಕ ಪೂಜಾಶಕ್ತಿಯಿಂದ ಶೀಘ್ರದಲ್ಲಿ ಸೂಕ್ತವಾದ ಶಾಶ್ವತವಾಗಿ ಪರಿಹಾರ ಮಾಡಿಕೊಡಲಾಗುತ್ತದೆ. ನೀವು ಎಷ್ಟೋ ಜ್ಯೋತಿಷ್ಯರಲ್ಲಿ ದೈವ ದೇವಸ್ಥಾನಗಳಲ್ಲಿ ಕೇಳಿ ಮನನೊಂದಿದ್ದರೆ ತಕ್ಷಣವೇ ಕರೆಮಾಡಿ. ದೈವಜ್ಞ ಶ್ರೀ ದೇವೇಂದ್ರನಾಥ್ ಭಟ್. PH:- 9945590266
ಮೇಷ ರಾಶಿ
ಉದ್ಯೋಗದಲ್ಲಿ ಪ್ರಗತಿ ಕಾಣಿಸಿಕೊಳ್ಳುತ್ತದೆ. ಹೊಸ ಉಡುಪುಗಳ ಬಗ್ಗೆ ಯೋಚನೆ ಬರಬಹುದು. ಅಧಿಕ ಮಾತುಗಳಿಂದ ಆರೋಗ್ಯ ಆರಾಮಾಗಿ ಕಾಣಿಸುತ್ತದೆ. ಇಂದು ನಿಮ್ಮ ನಿರೀಕ್ಷೆಗೆ ಸರಿಹೊಂದುವ ಬಾಳಸಂಗಾತಿಯ ಆಯ್ಕೆ ಬಗ್ಗೆ ಯಶಸ್ವಿಯಾಗುವ ಅವಕಾಶಗಳಿವೆ. ಹೆಚ್ಚಿನ ಲಾಭ ಪಡೆಯಲು ಗುರು ಸ್ತೋತ್ರ ಪಠಿಸಿ. ನಿಮ್ಮ ಯಾವುದೇ ಕಠಿಣ ಸಮಸ್ಯೆಗಳಿಗೆ ಶಾಶ್ವತವಾದ ಸೂಕ್ತವಾದ ಪರಿಹಾರ ಕಾಣಲು ಕರೆಮಾಡಿ. PH:- 9945590266
ವೃಷಭ ರಾಶಿ
ವ್ಯಾಪಾರ ವ್ಯವಹಾರದಲ್ಲಿ ಜಾಗೂರುಕತೆಯಿಂದ ಮುಂದುವರಿಯಿರಿ. ಈ ದಿನ ನಿಮ್ಮ ಸಾಧನೆಗೆ ತಕ್ಕ ಗೌರವ ಆದರಗಳು ಸಿಗುವ ಸಾಧ್ಯತೆಯಿದೆ. ಜನರನ್ನು ವಿಶ್ವಾಸಕ್ಕೆ ಪಡೆದು ಅವರಿಂದ ಕೆಲಸ ಮಾಡಿಸಿಕೊಳ್ಳುವಿರಿ. ಸಹೋದ್ಯೋಗಿಗಳು ನಿಮ್ಮ ಬೆಂಬಲಕ್ಕೆ ನಿಲ್ಲುವರು. ಮನೆ ಕಟ್ಟುವ ಭಾಗ್ಯ ಇದೆ ಕುಟುಂಬದಲ್ಲಿ ಬೆಂಬಲತೆ ಸಿಗುವುದಿಲ್ಲ. ನಿಮ್ಮ ಯಾವುದೇ ಕಠಿಣ ಸಮಸ್ಯೆಗಳಿಗೆ ಶಾಶ್ವತವಾದ ಸೂಕ್ತವಾದ ಪರಿಹಾರ ಕಾಣಲು ಕರೆಮಾಡಿ. PH:- 9945590266
ಮಿಥುನ ರಾಶಿ
ಇಂದು ವೃತ್ತಿಯಲ್ಲಿ ಬದಲಾವಣೆಯ ಮನಸ್ಸು ಕಾಣಿಸಲಾರಂಭಿಸಿದೆ. ಹಾಗಾಗಿ ವೃತ್ತಿಯಲ್ಲಿ ಹೊಸ ರೀತಿಯ ಗಳಿಕೆ ಲಭ್ಯವಾಗಲಿದೆ. ಹೊಸ ಕಾರು ಖರೀದಿ ಮಾಡಲು ನೂತನ ಅವಕಾಶ ಸಿಗುವುದು. ದೂರ ಪ್ರಯಾಣ ನಡೆಯುವುದು. ಹಿರಿಯರ ಅನಾರೋಗ್ಯದ ಭೀತಿ ಮನೆಯಲ್ಲಿ ಅಶಾಂತಿ ಮೂಡುತ್ತದೆ. ನಿಮ್ಮ ಯಾವುದೇ ಕಠಿಣ ಸಮಸ್ಯೆಗಳಿಗೆ ಶಾಶ್ವತವಾದ ಸೂಕ್ತವಾದ ಪರಿಹಾರ ಕಾಣಲು ಕರೆಮಾಡಿ. PH:- 9945590266
ಕರ್ಕಾಟಕ ರಾಶಿ
ಎಲ್ಲಾ ತರಹದ ಕೆಲಸ ಕಾರ್ಯಗಳು ಮಾಡಿದರು ಏಳಿಗೆ ಸಿಗದೆ ಹೋದರೆ ಜಾತಕವನ್ನು ಸರಿಯಾದ ಕ್ರಮದಲ್ಲೇ ತಿಳಿಯಲು ಪ್ರಯತ್ನಿಸಿ. ಈ ದಿನ ತುಂಬಾ ದಿನಗಳಿಂದ ನೆನೆಗುದಿಗೆ ಬಿದ್ದಿದ್ದ ಕೆಲಸವೊಂದು ಅಲ್ಪ ಶ್ರಮಕ್ಕೆ ಸುಖಾಂತ್ಯವಾಗುವುದು. ಗುರು ಹಿರಿಯರ ಆಶೀರ್ವಾದ ಪಡೆದು ಕೆಲಸ ಆರಂಭಿಸಿ. ದಿನದ ಕೊನೆಗೆ ಸಿಹಿ ಸುದ್ದಿ ಕೇಳುವಿರಿ. ಕಪ್ಪು ಬಟ್ಟೆ ತೊಟ್ಟು ಉದ್ಯೋಗಕ್ಕೆ ಸಾಗಬಾರದು. ನಿಮ್ಮ ಯಾವುದೇ ಕಠಿಣ ಸಮಸ್ಯೆಗಳಿಗೆ ಶಾಶ್ವತವಾದ ಸೂಕ್ತವಾದ ಪರಿಹಾರ ಕಾಣಲು ಕರೆಮಾಡಿ. PH:- 9945590266
ಸಿಂಹ ರಾಶಿ
ಇಂದು ಸುಖಾಸುಮ್ಮನೆ ಹತ್ತಿರದವರೊಬ್ಬರನ್ನು ಎದುರು ಹಾಕಿಕೊಳ್ಳುವ ಭಯವಿರುತ್ತದೆ. ಹಾಗಾಗಿ ಇನ್ನೊಬ್ಬರ ವ್ಯವಹಾರದಲ್ಲಿ ಮೂಗು ತೂರಿಸದಿರುವುದು ಒಳ್ಳೆಯದು. ಉದ್ಯೋಗದಲ್ಲಿ ಅಪನಂಬಿಕೆ ಹುಟ್ಟುತ್ತದೆ. ಆಂಜನೇಯ ಸ್ತೋತ್ರ ಪಠಿಸಿ. ಆಹಾರ ದಾನ ಮಾಡಿ. ಸಂಗಾತಿಯೊಂದಿಗೆ ಸುಖಕರ ಜೀವನ ಹೊಂದಲು ನಿಮ್ಮ ಮನಸ್ಸಿನ ಚಿಂತನೆ ಬಿಡುತ್ತಿಲ್ಲ. ನಿಮ್ಮ ಯಾವುದೇ ಕಠಿಣ ಸಮಸ್ಯೆಗಳಿಗೆ ಶಾಶ್ವತವಾದ ಸೂಕ್ತವಾದ ಪರಿಹಾರ ಕಾಣಲು ಕರೆಮಾಡಿ. PH:- 9945590266
ಕನ್ಯಾ ರಾಶಿ
ನಿಮ್ಮ ಸಂಗಾತಿಯ ಮನಸ್ಸಿನ ಪ್ರೀತಿ ಪ್ರೇಮ ಮತ್ತು ಹೆಚ್ಚಿನ ಭರವಸೆ ನಿಮಗೆ ಖುಷಿ ನೀಡಬಹುದು. ಬೃಹತ್ ಯೋಜನೆಗಳು ಮತ್ತು ಕಲ್ಪನೆಗಳಿರುವ ಜನರು ನಿಮ್ಮ ಮನಸ್ಸನ್ನು ಸೆಳೆಯುತ್ತಾರೆ. ಹೂಡಿಕೆಗಳನ್ನು ಮಾಡುವ ಮೊದಲು ವ್ಯಕ್ತಿಯ ಪ್ರಾಮಾಣಿಕತೆಯನ್ನು ದೃಢೀಕರಿಸಿ.ಅನಿರೀಕ್ಷಿತ ಜವಾಬ್ದಾರಿಗಳು ತೆಗೆದುಕೊಂಡರೆ ನಿಮ್ಮ ದಿನದ ಯೋಜನೆಗಳ ಬಗ್ಗೆ ಕಷ್ಟ ಪಡಬೇಕಾಗುತ್ತದೆ. ಮದುವೆ ವಿಷಯದಲ್ಲಿ ಒಳ್ಳೆಯ ಆಯ್ಕೆ ನಿಮ್ಮ ಬಳಿ ಇರುವುದಿಲ್ಲ. ನಿಮ್ಮ ಯಾವುದೇ ಕಠಿಣ ಸಮಸ್ಯೆಗಳಿಗೆ ಶಾಶ್ವತವಾದ ಸೂಕ್ತವಾದ ಪರಿಹಾರ ಕಾಣಲು ಕರೆಮಾಡಿ. PH:- 9945590266.
ತುಲಾ ರಾಶಿ
ನೀವು ಇತರರಿಗೆ ಹೆಚ್ಚು ಪ್ರೀತಿ ಮನೆಯಲ್ಲಿ ಮಾತ್ರ ಕಡಿಮೆ ಪ್ರೀತಿ ಇರುವುದು ಸಂಗಾತಿಯಲ್ಲಿ ಬೇಸರ ತರುತ್ತದೆ. ನಿಮ್ಮ ಪ್ರೇಮಿಯಿಂದ ದೂರವುಳಿಯಲು ತುಂಬಾ ಕಷ್ಟವಾಗುತ್ತದೆ. ನೀವು ಮಾಡಿರುವ ಕೆಲಸಗಳಿಗೆ ಬೇರೆಯವರು ಗೌರವ ಪಡೆಯಲು ಬಿಡಬೇಡಿ. ಪ್ರಯಾಣ ಅನುಕೂಲಕರವಾಗಿದ್ದರೂ ದುಬಾರಿಯಾಗಿರುತ್ತದೆ. ಇಂದು ಯಾವುದೇ ಪರಿಸ್ಥಿತಿ ನೀವು ಬಯಸಿದಂತೆ ಇರುವುದಿಲ್ಲ. ನಿಮ್ಮ ಯಾವುದೇ ಕಠಿಣ ಸಮಸ್ಯೆಗಳಿಗೆ ಶಾಶ್ವತವಾದ ಸೂಕ್ತವಾದ ಪರಿಹಾರ ಕಾಣಲು ಕರೆಮಾಡಿ. PH:- 9945590266.
ವೃಶ್ಚಿಕ ರಾಶಿ
ನೀವು ನಿಮ್ಮ ಅರ್ಧಾಂಗಿಯ ಜೊತೆ ಒಂದು ಸುಂದರ ಸಮಯ ಕಳೆಯುತ್ತೀರಿ. ಮನೆ ಕಟ್ಟುವಲ್ಲಿ ನಿಮ್ಮ ಸಮಯ ವ್ಯರ್ಥ ಮಾಡಬೇಡಿ. ಅದರ ಜೊತೆಗೆ ಏನಾದರೂ ಅರ್ಥಪೂರ್ಣವಾದ ಕೆಲಸ ಮಾಡಲು ನಿಮ್ಮ ಶಕ್ತಿ ವ್ಯಯಿಸಿ. ಹಣಕಾಸು ಖಂಡಿತವಾಗಿಯೂ ವೃದ್ಧಿಯಾಗುತ್ತದೆ. ನಿಮ್ಮ ಯಾವುದೇ ಕಠಿಣ ಸಮಸ್ಯೆಗಳಿಗೆ ಶಾಶ್ವತವಾದ ಸೂಕ್ತವಾದ ಪರಿಹಾರ ಕಾಣಲು ಕರೆಮಾಡಿ. PH:- 9945590266
ಧನಸ್ಸು ರಾಶಿ
ಉದ್ಯೋಗ ಇಲ್ಲದೆ ಹೋದಾಗ ಅದೇ ಸಮಯದಲ್ಲಿ ಖರ್ಚೂ ತುಂಬಾ ಹೆಚ್ಚಾಗುತ್ತದೆ. ಹಳೆಯ ಸ್ನೇಹಿತರು ಬೆಂಬಲ ನೀಡುತ್ತಾರೆ. ಪ್ರಿಯತಮೆ ಪ್ರೀತಿ ಪ್ರೇಮ ಸಂಬಂಧದಲ್ಲಿ ನಿಮ್ಮನ್ನು ತಪ್ಪಾಗಿ ತಿಳಿದುಕೊಳ್ಳುವ ಸಾಧ್ಯತೆಯಿದೆ. ವ್ಯಾಪಾರ ವ್ಯವಹಾರದಲ್ಲಿ ನೇರ ಮಾತಿನವರೂ ಮತ್ತು ಭಾವನಾತ್ಮಕರೂ ಆಗಿರಬೇಡಿ.ನಿಮ್ಮ ಯಾವುದೇ ಕಠಿಣ ಸಮಸ್ಯೆಗಳಿಗೆ ಶಾಶ್ವತವಾದ ಸೂಕ್ತವಾದ ಪರಿಹಾರ ಕಾಣಲು ಕರೆಮಾಡಿ. PH:- 9945590266
ಮಕರ ರಾಶಿ
ನಿಮ್ಮ ಮಾತಿನ ಮೇಲೆ ನಿಯಂತ್ರಣ ಇರಬೇಕು. ಇಲ್ಲದಿದ್ದರೆ ಸುಲಭವಾಗಿ ನಿಮ್ಮ ಗೌರವಕ್ಕೆ ಧಕ್ಕೆ ತಂದುಕೊಳ್ಳಬಹುದು. ಹೆಚ್ಚಿನ ವಿಷಯಗಳು ನೀವು ನಿಮಗೆ ನೋವನ್ನು ಉಂಟು ಮಾಡುತ್ತದೆ. ಸತ್ಯ ಧರ್ಮ ನಿಮ್ಮ ಹತ್ತಿರ ಇದ್ದರೆ ಸಾಕು ನಿಮ್ಮನ್ನು ಕಾಪಾಡಬಹುದು. ಪ್ರಯಾಣ ಸಾಗುವುದು ಅನಿವಾರ್ಯ ಕಾರಣಗಳಿಂದ ಕಾಣುವುದು. ನಿಮ್ಮ ಯಾವುದೇ ಕಠಿಣ ಸಮಸ್ಯೆಗಳಿಗೆ ಶಾಶ್ವತವಾದ ಸೂಕ್ತವಾದ ಪರಿಹಾರ ಕಾಣಲು ಕರೆಮಾಡಿ. PH:- 9945590266
ಕುಂಭ ರಾಶಿ
ಈ ದಿನ ನೀವು ನಿಮ್ಮ ಶ್ರಮದಿಂದ ಮೂಲಕ ಹೊಸ ಆಸ್ತಿ ಮಾಡಲಿದ್ದೀರಿ. ವಾಸ ಸ್ಥಳ ನಿವೇಶನ ಇತ್ಯಾದಿ ಹೊಂದಲು ಒಳ್ಳೆ ಕಾಲ ಕೂಡಿ ಬರುತ್ತದೆ. ಇದರಿಂದ ಮನೆ ಸದಸ್ಯರು ಖುಷಿಯಾಗುವರು. ಗೆಳೆಯರು ಅಥವಾ ಆತ್ಮೀಯರು ನಿಮಗೆ ಸಹಾಯ ನೀಡುವರು. ಶುಭದಿನ ನಿಮಗೆ ಹತ್ತಿರವಾಗುತ್ತದೆ. ನಿಮ್ಮ ಯಾವುದೇ ಕಠಿಣ ಸಮಸ್ಯೆಗಳಿಗೆ ಶಾಶ್ವತವಾದ ಸೂಕ್ತವಾದ ಪರಿಹಾರ ಕಾಣಲು ಕರೆಮಾಡಿ. PH:- 9945590266
ಮೀನಾ ರಾಶಿ
ಈ ದಿನ ನಿಮಗೆ ತೋಟಗಾರಿಕೆಗೆ ಚಟುವಟಿಕೆಗಳಲ್ಲಿ ನಿಮ್ಮ ಪರಿಶ್ರಮ ಹಾಗೂ ಬಂಡವಾಳ ಸಫಲವಾಗುವವು. ಹಣಕಾಸಿನ ವಿಷಯದಲ್ಲಿ ಬುದ್ಧಿವಂತರುಗಳಾದ ನೀವು ವ್ಯವಹಾರದಲ್ಲಿ ಕುಶಲತೆಯಿಂದ ಇರುವಿರಿ. ಸುಪ್ರಸಿದ್ದ ಪಂಡಿತರ ಬಳಿ ಹೋದರೆ ಕಷ್ಟ ಪರಿಹಾರ ಮಾಡಿಕೊಡ್ತಾರೆ. ನಿಮ್ಮ ಯಾವುದೇ ಕಠಿಣ ಸಮಸ್ಯೆಗಳಿಗೆ ಶಾಶ್ವತವಾದ ಸೂಕ್ತವಾದ ಪರಿಹಾರ ಕಾಣಲು ಕರೆಮಾಡಿ. PH:- 9945590266

ಅಂಕಣ
ದೀಪಾವಳಿ ವಿಶೇಷಾಂಕ | ದೇವನಗರಿ ಸುದ್ದಿದಿನ ಪತ್ರಿಕೆಯಿಂದ ಕತೆ- ಕವಿತೆ- ಲೇಖನ- ರೂಪದರ್ಶಿ ಫೋಟೋ ಗಳಿಗೆ ಆಹ್ವಾನ
ಸುದ್ದಿದಿನ,ದಾವಣಗೆರೆ: ಪ್ರಿಯ ಓದುಗರೆ, ಬೆಳಕಿನ ಹಬ್ಬ ದೀಪಾವಳಿಯ ಪ್ರಯುಕ್ತ ದೇವನಗರಿ ಸುದ್ದಿದಿನ – ಕನ್ನಡ ದಿನ ಪತ್ರಿಕೆ ಹಾಗೂ ಶ್ಯಾಮ್ ಪ್ರಕಾಶನದವತಿಯಿಂದ ‘ ದೀಪಾವಳಿ ವಿಶೇಷಾಂಕ’-2026ನ್ನು ತರಲಾಗುತ್ತಿದೆ.
ಈ ಹಿನ್ನೆಲೆಯಲ್ಲಿ ದೀಪಾವಳಿ ವಿಷೇಶಾಂಕ 2026ರ ವಿಭಾಗಕ್ಕೆ ಕತೆ, ಕವಿತೆ ಹಾಗೂ ಲೇಖನ ಹಾಗೂ ರೂಪದರ್ಶಿಗಳ ಛಾಯಾಚಿತ್ರಗಳನ್ನು ಆಹ್ವಾನಿಸಿದ್ದೇವೆ.
ಕತೆ – ಕವಿತೆಗಳನ್ನು ಕಳುಹಿಸಲು ಇರುವ ನಿಯಮಗಳು
ಕತೆ/ಕವಿತೆ ಸ್ವತಂತ್ರ ರಚನೆಯಾಗಿರಬೇಕು. ಈ ಮೊದಲು ಯಾವ ಮಾಧ್ಯಮಗಳಲ್ಲಿಯೂ ಪ್ರಕಟ ಅಥವಾ ಪ್ರಸಾರ ಆಗಿರಬಾರದು.
ಕತೆ 1500 ಸಾವಿರ ಪದಗಳ ಮಿತಿಯಲ್ಲಿರಲಿ. ಕವಿತೆಗೆ 40 ಸಾಲಿನ ಮಿತಿಯಿರಲಿ, ನುಡಿ ಅಥವಾ ಬರಹ ತಂತ್ರಾಂಶದಲ್ಲಿ ಇಲ್ಲವೆ ಯೂನಿಕೋಡ್ನಲ್ಲಿ ಇರಬೇಕು. ವಯಸ್ಸಿನ ಮಿತಿ ಇರುವುದಿಲ್ಲ.
ಕತೆ/ಕವಿತೆ ಇರುವ ಪುಟದಲ್ಲಿ ಹೆಸರು, ವಿವರ ಬರೆಯುವಂತಿಲ್ಲ. ಪ್ರತ್ಯೇಕ ಪುಟದಲ್ಲಿ ಹೆಸರು, ಅಂಚೆ ವಿಳಾಸ, ಮೊಬೈಲ್ ನಂಬರ್, ಇ-ಮೇಲ್ ವಿಳಾಸ ಒದಗಿಸಬೇಕು.
ಇತ್ತೀಚಿನ ಪಾಸ್ಪೋರ್ಟ್ ಅಳತೆಯ ವರ್ಣಮಯ ಭಾವಚಿತ್ರದೊಂದಿಗೆ 100 ಪದಗಳ ಒಳಗೆ ಕಿರು ಪರಿಚಯ ಕಳುಹಿಸಬೇಕು.
ಸ್ಪರ್ಧೆಗೆ ಕಳುಹಿಸಿರುವ ಬರಹಗಳನ್ನು ಹಿಂದಿರುಗಿಸುವುದಿಲ್ಲ. ಬರಹಗಳು ಕಡ್ಡಾಯವಾಗಿ ಎಂಎಸ್ ವರ್ಡ್ ಫೈಲ್ (MS word File) ನಲ್ಲಿರಲಿ.
ಬರಹ ಮತ್ತು ಫೋಟೋಗಳನ್ನು ಇ-ಮೇಲ್ ಮೂಲಕವಷ್ಟೇ ಕಳಿಸಿ.
ಲೇಖನಗಳಿಗೆ ಆಹ್ವಾನ : ವೈಚಾರಿಕತೆ, ವಿಮರ್ಶೆ, ಕಾನೂನು, ಸಾಹಿತ್ಯ, ತಂತ್ರಜ್ಞಾನ, ವಿಜ್ಞಾನ, ಡಿಜಿಟಲ್ ಮಾಧ್ಯಮ, ಸಿನೆಮಾ, ಪ್ರೇಮಪತ್ರ, ಕೃಷಿ, ರಾಜಕೀಯ, ಕಲೆ, ಆರೋಗ್ಯ, ಪ್ರವಾಸ, ಅಡುಗೆ, ಫೋಟೋಗ್ರಫಿ, ವೈಲ್ಡ್ ಲೈಫ್, ಹಾಸ್ಯ ಕುರಿತಾದ ಲೇಖನಗಳನ್ನು 450 ಪದಗಳನ್ನು ಮೀರದಂತೆ ಬರೆದು ಕಳುಹಿಸಿ.
ಹಾಗೆಯೇ, ವಿಶೇಷಾಂಕದ ಮುಖಪುಟದ ರೂಪದರ್ಶಿಯಾಗಲು ಅವಕಾಶವನ್ನು ಕಲ್ಪಸಿಲಾಗಿದೆ. ಆಸಕ್ತ ರೂಪದರ್ಶಿಗಳು ಸ್ಟುಡಿಯೋ ಅಥವಾ ಫೋಟೋಗ್ರಾಫರ್ ಮೂಲಕ ತೆಗೆದ ‘6*4 ಅಳತೆಯ ಮುದ್ರಿತ ಫೋಟೋ ಮತ್ತು ಇ-ಮೇಲ್ ಮೂಲಕವೂ ಕಳಿಸಬಹುದು. 80 ಪದಗಳಮಿತಿಯೊಳಗೆ ನಿಮ್ಮ ಪರಿಚಯದೊಂದಿಗೆ, ಒಬ್ಬರು 4 ಫೋಟೋ ಕಳುಹಿಸಬೇಕು. ವಯಸ್ಸಿನ ಮಿತಿಯಿಲ್ಲ ಇರುವುದಿಲ್ಲ.
ಕತೆಯ ವಿಜೇತರಿಗೆ ಪ್ರಥಮ ಬಹುಮಾನ : 10000, ದ್ವಿತೀಯ ಬಹುಮಾನ : 5000, ತೃತೀಯ ಬಹುಮಾನ : 3000 ಹಾಗೂ ಕವಿತೆ ಬಹುಮಾನ ವಿಜೇತರಿಗೆ ಪ್ರಥಮ ಬಹುಮಾನ : 5000 ದ್ವಿತೀಯ ಬಹುಮಾನ : 3000 ಹಾಗೂ ತೃತೀಯ ಬಹುಮಾನ : ₹2000 ಸಿಗಲಿದೆ.
ಆಗಸ್ಟ್ 30ರೊಳಗೆ ಬರಹಗಳನ್ನು ಇ-ಮೇಲ್: deepasuddidina@gmail.com ಗೆ ಕಳುಹಿಸಲು ತಿಳಿಸಿದೆ. ಈ ಕುರಿತು ಹೆಚ್ಚಿನ ಮಾಹಿತಿಗಾಗಿ :9980346243 ಹಾಗೂ visit: www.suddidina.com ಅನ್ನು ವೀಕ್ಷಿಸಬಹುದಾಗಿದೆ.
ಕಚೇರಿ ವಿಳಾಸ
ದೇವನಗರಿ ಸುದ್ದಿದಿನ- ಕನ್ನಡ ದಿನ ಪತ್ರಿಕೆ
ದೀಪಾವಳಿ ವಿಶೇಷಾಂಕ ವಿಭಾಗ
#3231/1, ಸಂಜೀವ ಸದನ, 11ನೇ ಮುಖ್ಯರಸ್ತೆ, 4 ನೇ ಅಡ್ಡರಸ್ತೆ, ಎಂಸಿಸಿ ಬಿ ಬ್ಲಾಕ್, ದಾವಣಗೆರೆ, 577004
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಕ್ರೀಡೆ
ರಾಜ್ಯದ ವಿವಿಧ ನೀರಾವರಿ ಯೋಜನೆಗಳಿಗೆ ಹೆಚ್ಚಿನ ಅನುದಾನ ; ಇ-ಖಾತೆ ಅಭಿಯಾನ ಹಾಗೂ ಇತರೆ ಪ್ರಮುಖ ಸುದ್ದಿಗಳು
ರಾಜ್ಯದ ವಿವಿಧ ನೀರಾವರಿ ಯೋಜನೆಗಳಿಗೆ ಹೆಚ್ಚಿನ ಅನುದಾನ ; ಇ-ಖಾತೆ ಅಭಿಯಾನ ಹಾಗೂ ಇತರೆ ಪ್ರಮುಖ ಸುದ್ದಿಗಳು
1. ಮುಖ್ಯಮಂತ್ರಿ ಸಿದ್ದರಾಮಯ್ಯ ನವದೆಹಲಿ ತಲುಪಿದ್ದಾರೆ. ಇಂದು ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿ ಮಾಡಿ, 5 ಪ್ರಮುಖ ಮಸೂದೆಗಳಿಗೆ ಅಂಗೀಕಾರ ನೀಡುವಂತೆ ಮನವಿ ಮಾಡಲಿದ್ದಾರೆ ಎಂದು ಉನ್ನತ ಮೂಲಗಳು ತಿಳಿಸಿವೆ. ಭದ್ರಾ ಮೇಲ್ದಂಡೆ ಯೋಜನೆ ಸೇರಿದಂತೆ ರಾಜ್ಯದ ವಿವಿಧ ನೀರಾವರಿ ಯೋಜನೆಗಳಿಗೆ, ಹೆಚ್ಚಿನ ಅನುದಾನ ಬಿಡುಗಡೆ ಮಾಡುವಂತೆ, ಕೇಂದ್ರದ ಜಲಶಕ್ತಿ ಖಾತೆ ಸಚಿವರನ್ನು ಕೋರುವುದಾಗಿ, ಇದೇ ವೇಳೆ ಸಾಮಾಜಿಕ ಜಾಲತಾಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
2. ರಾಜ್ಯದ ಗ್ರಾಮ ಪಂಚಾಯ್ತಿಗಳ ಹಂತದಲ್ಲಿ ಜುಲೈ 15ರಿಂದ, ಸಾರ್ವಜನಿಕರ ಆಸ್ತಿಗಳ ಇ-ಖಾತೆ ರೂಪಿಸುವ ಅಭಿಯಾನವನ್ನು ಕಂದಾಯ ಇಲಾಖೆ ಆಯೋಜಿಸಲಿದೆ ಎಂದು ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.
3. ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆಗೆ ಸಂಬಂಧಿಸಿ, ಇಲ್ಲಿಯವರೆಗೆ ಹೆಸರು ನೋಂದಾಯಿಸದವರು, ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ, ಈ ತಿಂಗಳ 30ರವರೆಗೆ ಮಾಹಿತಿ ನೀಡಲು ಅವಕಾಶವಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಎ.ಬಿ.ಬಸವರಾಜು ತಿಳಿಸಿದ್ದಾರೆ.
4. ಕಾವೇರಿ ಜಲಾನಯನ ಪ್ರದೇಶದಲ್ಲಿ ವ್ಯಾಪಕವಾಗಿ ಸುರಿಯುತ್ತಿರುವ ಮಳೆಯಿಂದ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆ.ಆರ್.ಎಸ್. ಅಣೆಕಟ್ಟೆ ಭಾಗಶ: ಭರ್ತಿಯಾಗಿದ್ದು, ಒಳ ಹರಿವು ಇನ್ನಷ್ಟು ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಅಣೆಕಟ್ಟೆಯಿಂದ 5 ಸಾವಿರದಿಂದ 15 ಸಾವಿರ ಕ್ಯುಸೆಕ್ ನೀರನ್ನು ನದಿಗೆ ಹರಿಸಲಾಗಿದೆ.
5. ಕತಾರ್‌ನಲ್ಲಿರುವ ಅಲ್ ಉದೈದ್ ಅಮೇರಿಕ ವಾಯುನೆಲೆಯ ಮೇಲೆ ಇರಾನ್ ನಡೆಸಿದ ದಾಳಿಯ ನಂತರ ಜಾಗತಿಕ ತೈಲ ಬೆಲೆಗಳು ಐದು ವರ್ಷಗಳಲ್ಲಿ ನಿನ್ನೆ ಒಂದೇ ದಿನದಲ್ಲಿ ತೀವ್ರ ಕುಸಿತವನ್ನು ದಾಖಲಿಸಿದೆ.
6. ಕರ್ನಾಟಕ, ಮಧ್ಯಪ್ರದೇಶ, ಬಿಹಾರ, ಜಾಖಂಡ್, ಒಡಿಶಾ, ಛತ್ತೀಸ್‌ಗಢ, ಪಶ್ಚಿಮ ಬಂಗಾಳ, ಸಿಕ್ಕಿಂ, ಅರುಣಾಚಲ ಪ್ರದೇಶ, ಕೊಂಕಣ, ಗೋವಾ, ಮಹಾರಾಷ್ಟ್ರ, ಗುಜರಾತ್, ಹಿಮಾಚಲ ಪ್ರದೇಶ, ಉತ್ತರಾಖಂಡ, ಪಶ್ಚಿಮ ಉತ್ತರ ಪ್ರದೇಶ, ರಾಜಸ್ಥಾನ, ಕೇರಳದ ಕೆಲವು ಸ್ಥಳಗಳಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
7. ಅಯೋವಾದಲ್ಲಿ ನಾಳೆ ಆರಂಭವಾಗಲಿರುವ ಯುಎಸ್ ಓಪನ್ 2025 ಬ್ಯಾಡ್ಮಿಂಟನ್ ಪಂದ್ಯಾವಳಿಯ ಪುರುಷರ ಡಬಲ್ಸ್ ವಿಭಾಗದಲ್ಲಿ ಹರಿಹರನ್ ಅಂಶಕರುಣನ್ ಮತ್ತು ರೂಬನ್ ಕುಮಾರ್ ರೆಥಿನಸಬಪತಿ, ಭಾರತವನ್ನು ಮುನ್ನಡೆಸಲಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಈರುಳ್ಳಿ ಕೇವಲ ತರಕಾರಿಯಲ್ಲ ; ಅದ್ಭುತ ಔಷಧ
ನಾವು ನಿತ್ಯವೂ ತಯಾರಿಸುವ ಅಡುಗೆ ಪದಾರ್ಥಗಳಿಗೆ ಈರುಳ್ಳಿಯನ್ನು ಹಾಕದಿದ್ದಾಗ ಒಂದು ರುಚಿಯಾದರೆ ಅದನ್ನು ಹಾಕಿದಾಗ ಆ ಪದಾರ್ಥದ ರುಚಿಯೇ ಬೇರೆಯಾಗುತ್ತದೆ. ನಾವು ಈರುಳ್ಳಿಯ ಗುಣಗಳು, ಅದರ ಉಪಯೋಗಗಳು ಮತ್ತು ಮನೆ ಮದ್ದುಗಳ ಬಗ್ಗೆ ತಿಳಿದುಕೊಳ್ಳೋಣ.
ಆಯುರ್ವೇದದಲ್ಲಿ ಈರುಳ್ಳಿಯ ಬಗ್ಗೆ ವಿಸ್ತೃತ ವಿವರಣೆ ಇದೆ. ಆಯುರ್ವೇದ ಗ್ರಂಥಗಳ ಪ್ರಕಾರ ಈರುಳ್ಳಿಗೆ ಬೆಳ್ಳುಳ್ಳಿಯ ಗುಣಗಳಿವೆ. ಆದರೆ ಬೆಳ್ಳುಳ್ಳಿಯಂತೆ ಇದು ಉಷ್ಣವಲ್ಲ. ಹಾಗಾಗಿ ಬೆಳ್ಳುಳ್ಳಿಯ ಅದ್ಭುತ ಗುಣಗಳನ್ನು ಪಡೆಯಬೇಕು ಎಂದಾದರೆ ಮತ್ತು ಬೆಳ್ಳುಳ್ಳಿಯನ್ನು ಸೇವಿಸಿದರೆ ಉಷ್ಣವಾಗುತ್ತದೆ ಎಂಬ ಯೋಚನೆ ಇದ್ದರೆ ಬದಲಿಗೆ ಈರುಳ್ಳಿಯನ್ನು ಬಳಸಬಹುದು.
ಭಾವ ಪ್ರಕಾಶ ನಿಘಂಟು ಎಂಬ ಗ್ರಂಥದಲ್ಲಿ “ಬಲವೀರ್ಯ ಕೈರೋ ಗುರುಃ” ಎಂದಿದ್ದಾರೆ. ಅಂದರೆ ಈರುಳ್ಳಿಯು ದೇಹದ ಬಲವನ್ನು, ವೀರ್ಯದ ಗುಣಮಟ್ಟವನ್ನು, ಲೈಂಗಿಕ ಶಕ್ತಿಯನ್ನು ಹೆಚ್ಚಿಸುತ್ತದೆ ಎಂದರ್ಥ. ಬಹುತೇಕ ಎಲ್ಲಾ ಆಯುರ್ವೇದ ಗ್ರಂಥಗಳಲ್ಲಿಯೂ ಈರುಳ್ಳಿಯಿಂದ ಲೈಂಗಿಕ ಶಕ್ತಿ ವೃದ್ಧಿಯಾಗುತ್ತದೆ ಎಂಬುದನ್ನು ಹೇಳಲಾಗಿದೆ. ಇದು ಚರ್ಮಕ್ಕೆ ಕೂಡ ಅತ್ಯಂತ ಅನುಕೂಲಕರವಾದದ್ದು. ಚರ್ಮವನ್ನು ಸ್ನಿಗ್ಧಗೊಳಿಸಿ ಒರಟುತನವನ್ನು ಹೋಗಲಾಡಿಸುತ್ತದೆ; ಚರ್ಮಕ್ಕೆ ಕಾಂತಿಯನ್ನು ಕೊಡುತ್ತದೆ; ಜೊತೆಗೆ ಚರ್ಮದ ಶುದ್ಧಿಯನ್ನೂ ಮಾಡುತ್ತದೆ ಎಂದು ವಿವರಿಸಲಾಗಿದೆ. ಈರುಳ್ಳಿಯನ್ನು ನಿಯಮಿತವಾಗಿ ಸೇವಿಸುವುದರಿಂದ ದೇಹದ ಬಾಹ್ಯ ಮತ್ತು ಆಂತರಿಕ ಕಾಂತಿ ಹೆಚ್ಚುತ್ತದೆ.
ಅಂದರೆ ಕೇವಲ ಸೌಂದರ್ಯವೃದ್ಧಿಯಷ್ಟೇ ಅಲ್ಲ ದೇಹದೊಳಗಿನ ರೋಗನಿರೋಧಕ ಶಕ್ತಿ ತುಂಬಾ ಚೆನ್ನಾಗಿ ಹೆಚ್ಚುತ್ತದೆ. ಈರುಳ್ಳಿಯು ಧ್ವನಿಗೆ ಸಂಬಂಧಿಸಿದ ಸಮಸ್ಯೆಗಳನ್ನು ಹೋಗಲಾಡಿಸಿ ಒಳ್ಳೆಯ ಧ್ವನಿಯನ್ನು ನೀಡುತ್ತದೆ ಎಂದು ವಿವರಿಸಲಾಗಿದೆ. ಹೀಗಾಗಿ ಹಾಡುಗಾರರು, ಅಧ್ಯಾಪಕರಂಥವರಿಗೆ ನಿಯಮಿತ ಈರುಳ್ಳಿ ಸೇವನೆ ಅನುಕೂಲಕರ. ಇದು ಕಣ್ಣಿನ ಆರೋಗ್ಯವನ್ನು ಹೆಚ್ಚಿಸುವುದರಿಂದ ಹತ್ತರಿಂದ ಹದಿನೈದು ಮಿಲೀ ಈರುಳ್ಳಿ ರಸವನ್ನು ಸುಮಾರು ಒಂದು ತಿಂಗಳು ದಿನಕ್ಕೊಮ್ಮೆ ಸೇವಿಸುವುದರಿಂದ ಚಿಕ್ಕಪುಟ್ಟ ಕಣ್ಣಿನ ತೊಂದರೆಗಳು ನಿವಾರಣೆಯಾಗುತ್ತವೆ. ಸ್ವಲ್ಪ ಸಿಹಿ ಇರುವ ಅಂದರೆ ಖಾರ ಕಡಿಮೆ ಇರುವ ಈರುಳ್ಳಿಯನ್ನು ಚಿಕ್ಕ ಚಿಕ್ಕ ತುಂಡುಗಳನ್ನಾಗಿ ಕತ್ತರಿಸಿ ತುಪ್ಪದಲ್ಲಿ ಹುರಿದು ನಿಯಮಿತವಾಗಿ ಸೇವಿಸಿದರೆ ಲೈಂಗಿಕ ಶಕ್ತಿಯ ವೃದ್ಧಿಯಾಗುತ್ತದೆ.
ಕೂದಲು ಉದುರುವುದನ್ನು ಕಡಿಮೆ ಮಾಡಲು ಈರುಳ್ಳಿಯು ಸಹಕಾರಿ. ಈರುಳ್ಳಿಯ ರಸ ತೆಗೆದು ತಲೆ ಸ್ನಾನ ಮಾಡುವ ಹತ್ತು ನಿಮಿಷ ಮೊದಲು ಕೂದಲಿನ ಬುಡಕ್ಕೆ ಹಚ್ಚಬೇಕು. ಇದರಿಂದ ಕೂದಲಿನ ಬೆಳವಣಿಗೆ ಚೆನ್ನಾಗಿ ಆಗಲು ಮತ್ತು ಕೂದಲು ಉದುರುವುದು ನಿಲ್ಲಲು ಸಹಾಯವಾಗುತ್ತದೆ. ಬೊಜ್ಜನ್ನು ಕಡಿಮೆ ಮಾಡಲು ಕೂಡ ಈರುಳ್ಳಿಯು ಸಹಕಾರಿ. ಬೆಳ್ಳುಳ್ಳಿಯ ಇನ್ನೊಂದು ಅದ್ಭುತ ಗುಣವೆಂದರೆ ಅದು ನರದ ಶಕ್ತಿಯನ್ನು ಹೆಚ್ಚಿಸುತ್ತದೆ. ಹಾಗಾಗಿ ಸಯಾಟಿಕಾದಂತಹ ಸಮಸ್ಯೆಗಳನ್ನು ಅನುಭವಿಸುತ್ತಿರುವವರಿಗೆ ಈರುಳ್ಳಿ ತುಂಬಾ ಲಾಭದಾಯಕ.
ಕಫದ ಸಮಸ್ಯೆಯಿಂದ ಬಳಲುತ್ತಿದ್ದು ಕಫ ಹೊರಗೆ ಬರುತ್ತಿಲ್ಲದಿದ್ದರೆ ಎರಡು ಚಮಚದಷ್ಟು ಈರುಳ್ಳಿ ರಸ, ಅರ್ಧ ಚಮಚದಷ್ಟು ಶುಂಠಿ ರಸ, ಅರ್ಧ ಚಮಚದಷ್ಟು ತುಳಸಿ ಎಲೆಗಳ ರಸ ಮತ್ತು ಒಂದು ಚಮಚ ಜೇನುತುಪ್ಪವನ್ನು ಸೇರಿಸಿ ದಿನಕ್ಕೆ ಒಂದು ಅಥವಾ ಎರಡು ಬಾರಿ ಸೇವಿಸಿದರೆ ಕಫ ಹೊರಗೆ ಬಂದು ಸಮಸ್ಯೆ ನಿವಾರಣೆಯಾಗುತ್ತದೆ.
ಈರುಳ್ಳಿ ಒಳ್ಳೆಯ ಜೀರ್ಣಕಾರಿಯೂ ಹೌದು ಹಾಗಾಗಿ ಅಜೀರ್ಣ ಇರುವವರಿಗೆ ಹೆಚ್ಚಿನ ಪ್ರಮಾಣದಲ್ಲಿ ಈರುಳ್ಳಿಯನ್ನು ಹಾಕಿ ಹೆಸರುಬೇಳೆಯ ತಿಳಿಸಾರು ಮಾಡಿ ಊಟಕ್ಕೆ ನೀಡಿದರೆ ಅಜೀರ್ಣದ ಸಮಸ್ಯೆ ತುಂಬಾ ಚೆನ್ನಾಗಿ ಹತೋಟಿಗೆ ಬರುತ್ತದೆ. ಜೊತೆಗೆ ಶಕ್ತಿ ವೃದ್ಧಿಯೂ ಆಗುತ್ತದೆ. ಒಟ್ಟಿನಲ್ಲಿ ಈರುಳ್ಳಿಯನ್ನು ಸರಿಯಾಗಿ ಬಳಸಿಕೊಂಡರೆ ಅದು ಕೇವಲ ತರಕಾರಿಯಲ್ಲ ಅದ್ಭುತ ಔಷಧ.(ಬರಹ-ಡಾ|| ವೆಂಕಟ್ರಮಣ ಹೆಗಡೆ
ವೇದ ವೆಲ್ನೆಸ್ ಸೆಂಟರ್, ನಿಸರ್ಗಮನೆ, ಶಿರಸಿ, ಉ.ಕನ್ನಡ)
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ6 days agoಮಾಯಕೊಂಡ ಶಾಸಕ ಕೆ.ಎಸ್. ಬಸವಂತಪ್ಪ ಸಚಿವರಾಗಿ ಆಯ್ಕೆ: ದಾವಣಗೆರೆಯಲ್ಲಿ ಸಂಭ್ರಮ ಆಚರಣೆ
-
ಅಂತರಂಗ3 days agoಪ್ರಪ್ರಥಮ ಮಹಿಳಾ ಸಾಹಿತ್ಯ ಸಮ್ಮೇಳನ : ಸರ್ವ ಕ್ಷೇತ್ರದಲ್ಲಿಯೂ ರಾರಾಜಿಸುವ ಶಿಖರ ಶಿರೋಮಣಿಗಳು
-
ದಿನದ ಸುದ್ದಿ3 days agoನಾನೇ ಮುಖ್ಯಮಂತ್ರಿ ಇದ್ದಂತೆ : ಶಾಸಕ ಶಿವಗಂಗಾ ಬಸವರಾಜ್
-
ದಿನದ ಸುದ್ದಿ4 days agoದಾವಣಗೆರೆ ವಿಶ್ವವಿದ್ಯಾಲಯ | ಗುಣಮಟ್ಟದ ಸಂಶೋಧನೆ ಶೈಕ್ಷಣಿಕ ಪ್ರಗತಿ – ಜಾಗತಿಕ ಮಾನ್ಯತೆಯ ಮೂಲಾಧಾರ : ಕುಲಪತಿ ಪ್ರೊ. ಬಿ. ಇ. ರಂಗಸ್ವಾಮಿ


