Connect with us

ನಿತ್ಯ ಭವಿಷ್ಯ

ಈ ನಾಲ್ಕು ರಾಶಿಯವರಿಗೆ ದೀಪಾವಳಿ ಹಬ್ಬ ಧನಲಾಭ ಉಂಟು ಮಾಡುತ್ತದೆ : ಕ್ಲಿಕ್ ಮಾಡಿ ಓದಿ 23/10/2019 ಬುಧವಾರ

Published

on

ಮಹಾ ತಾಂತ್ರಿಕ ಜ್ಯೋತಿಷ್ಯರು ದೈವಜ್ಞ:ಶ್ರೀ ದೇವೇಂದ್ರನಾಥ್ ಭಟ್ 

ವಶೀಕರಣ, ಲೈಂಗಿಕ ಬಾಧೆ, ಶತ್ರುಕಾಟ, ದುಷ್ಟಶಕ್ತಿ ಭಯಭೀತಿ, ಸಮಸ್ಯೆಗಳಿಗೆ ಶ್ರೀ ಮಹಾಕಾಳಿ ದೈವಿಕ ಮಾಂತ್ರಿಕ ಪೂಜಾಶಕ್ತಿಯಿಂದ ಶೀಘ್ರದಲ್ಲಿ ಪರಿಹಾರ ಮಾಡಿಕೊಡಲಾಗುತ್ತದೆ. 9945590266

ಮೇಷ ರಾಶಿ

ನೀವು ಉದ್ಯೋಗಗಳಿಗೆ ಸಂಬಂಧಿಸಿದ ಸಮಸ್ಯೆಗಳಿಗೆ ಗಮನ ನೀಡಿ.  ಕುಟುಂಬದಲ್ಲಿ ಧರ್ಮಕಾರ್ಯಗಳು ಮತ್ತು ಸಮಾಜ ಸೇವೆ ಮಾಡುವಲ್ಲಿ ನಿಮ್ಮ ಗಮನ ಸೆಳೆಯುತ್ತದೆ. ಸ್ನೇಹಿತರನ್ನು ಅರ್ಥಮಾಡಿಕೊಳ್ಳುವ ಸಂಕೀರ್ಣತೆಯನ್ನು ಹೊಂದುವುದು ಮುಖ್ಯವಾಗಿರುತ್ತದೆ. ಸಮಯವೂ ವ್ಯರ್ಥ ಮಾಡಿದರೆ ಹಣಕಾಸಿನ ಲಾಭ ಕಡಿಮೆಯಾಗುತ್ತದೆ. ದಾಂಪತ್ಯ ಜೀವನ ಪ್ರಣಯದಲ್ಲಿ ತೇಲಾಡುತ್ತದೆ. ನಿಮ್ಮ ಯಾವುದೇ ಕಠಿಣ ಸಮಸ್ಯೆಗಳಿಗೆ ಶಾಶ್ವತವಾದ ಸೂಕ್ತವಾದ ಪರಿಹಾರ ಕಾಣಲು ಕರೆಮಾಡಿ. PH:- 9945590266

ವೃಷಭ ರಾಶಿ

ಕುಟುಂಬದ ವಿಷಯಗಳಲ್ಲಿ ಸಾಮರಸ್ಯ ತುಂಬಲು ಸಹಕಾರದೊಂದಿಗೆ ಇರಬೇಕು. ಉದ್ಯೋಗಸ್ಥರಲ್ಲಿ ಶಕ್ತಿಯ ಮಟ್ಟ ಹೆಚ್ಚಿರುತ್ತದೆ. ಮಡದಿಯು ಅಥವಾ ಸಂಗಾತಿಯು ನಿಮಗೆ ಪ್ರೀತಿ ಪಾತ್ರದಲ್ಲಿ ಅಪರ ಸಂತೋಷವನ್ನು ಉಂಟುಮಾಡಬಹುದು.  ಮಂಗಳಕರ ಸಮಾರಂಭಗಳು ನಡೆಯಬಹುದು. ಆರೋಗ್ಯದಲ್ಲಿ  ನೀವು ಗುಣವಂತರಾಗಿ ಕಾಣುತ್ತೀರಾ.  ನಿಮ್ಮ ಯಾವುದೇ ಕಠಿಣ ಸಮಸ್ಯೆಗಳಿಗೆ ಶಾಶ್ವತವಾದ ಸೂಕ್ತವಾದ ಪರಿಹಾರ ಕಾಣಲು ಕರೆಮಾಡಿ. PH:- 9945590266

ಮಿಥುನ ರಾಶಿ

ನಿಮ್ಮ ಉದ್ಯೋಗದಲ್ಲಿ ಮನಸ್ಥಿತಿ ಉಜ್ವಲವಾಗಿ ಕಾಣಿಸುತ್ತದೆ.  ಕುಟುಂಬದ ಪರಿಸ್ಥಿತಿ ನಿಯಂತ್ರಣ ಹೊಂದುತ್ತಿದ್ದಂತೆ ಆತಂಕವೂ ಕಡಿಮೆಯಾಗಬಹುದು. ವೈವಾಹಿಕ ಜೀವನದಲ್ಲಿ  ಮೊದಲ ಸ್ಪರ್ಶದ ಅನುಭವ ಆಗುತ್ತದೆ.  ವಿವಾಹದ ಮಾತುಗಳು ಇರುಸುಮುರುಸು ಆಗಬಹುದು. ಆದರೆ ನಿಮಗೆ ಒಳ್ಳೆಯದೇ ಆಗುತ್ತದೆ. ಧನಲಾಭವಿದೆ. ನಿಮ್ಮ ಯಾವುದೇ ಕಠಿಣ ಸಮಸ್ಯೆಗಳಿಗೆ ಶಾಶ್ವತವಾದ ಸೂಕ್ತವಾದ ಪರಿಹಾರ ಕಾಣಲು ಕರೆಮಾಡಿ. PH:- 9945590266

ಕರ್ಕಾಟಕ ರಾಶಿ

ಸ್ನೇಹಿತರ ಜೊತೆ ಕೆಲವು ಆಹ್ಲಾದಕರ ಕ್ಷಣಗಳನ್ನು ಕಳೆಯಲು ಪ್ರಯತ್ನಿಸಬೇಕು. ಕುಟುಂಬದಲ್ಲಿ ಪ್ರಭಾವಿ ಮತ್ತು ಪ್ರಮುಖ ಜನರು ನಿಮಗೆ ಅವಕಾಶಗಳನ್ನು ನೀಡುತ್ತಾರೆ. ನಿಮ್ಮ ಸಂಗಾತಿಯೊಂದಿಗೆ ಇಂದು ಸಭ್ಯತೆಯಿಂದ ವರ್ತಿಸಬೇಕು. ಅನಾರೋಗ್ಯದ ಸಮಸ್ಯೆಗಳು ಎದುರಾಗಬಹುದು. ಮದುವೆ ಕಾರ್ಯಗಳು ನಡೆಯುತ್ತವೆ ತಾಳ್ಮೆ ಇರಲಿ. ನಿಮ್ಮ ಯಾವುದೇ ಕಠಿಣ ಸಮಸ್ಯೆಗಳಿಗೆ ಶಾಶ್ವತವಾದ ಸೂಕ್ತವಾದ ಪರಿಹಾರ ಕಾಣಲು ಕರೆಮಾಡಿ. PH:- 9945590266

ಸಿಂಹ ರಾಶಿ

ನೀವು ಒಂದು ವಾದದಿಂದ ಸಿಲುಕಿಕೊಳ್ಳುತ್ತೀರಿ ಹುಷಾರಾಗಿ ಇದನ್ನು ನಿಭಾಯಿಸಿ ಕೊಳ್ಳಿ .ಹೊಸ ಆರ್ಥಿಕ ಒಪ್ಪಂದವನ್ನು ಮಾಡಿಕೊಳ್ಳಬೇಕಾಗುತ್ತದೆ. ಕುಟುಂಬದವರು ನಿಮ್ಮನ್ನು ದೂರ ತಳ್ಳಬಹುದು. ದಾಂಪತ್ಯದಲ್ಲಿ ಕೋಪವಂತೆ ಇದರಿಂದ ತೊಂದರೆ ಆಗುತ್ತದೆ. ಶತ್ರುಗಳು  ದಿನೇದಿನೇ ಹೆಚ್ಚಾಗುತ್ತಾರೆ. ನಿಮ್ಮ ಯಾವುದೇ ಕಠಿಣ ಸಮಸ್ಯೆಗಳಿಗೆ ಶಾಶ್ವತವಾದ ಸೂಕ್ತವಾದ ಪರಿಹಾರ ಕಾಣಲು ಕರೆಮಾಡಿ. PH:- 9945590266

ಕನ್ಯಾ ರಾಶಿ

ವೈವಾಹಿಕ ಜೀವನದಲ್ಲಿ ನಿಮ್ಮ ಪತ್ನಿಗೆ ನಿಮ್ಮ ಬೇಜವಾಬ್ದಾರಿಯಿಂದ ಕೋಪ.  ನಿಮ್ಮ ಕೆಲವೊಂದು ಸುಖಮಯ ಕಲ್ಪನೆಗಳು ಇಂದು ನಿಜವಾಗಬಹುದು. ಶತ್ರುವಿನ ಸಾಮರ್ಥ್ಯವನ್ನು ಗುರುತಿಸುವ ಶಕ್ತಿ ನಿಮ್ಮಲ್ಲಿ ಇರುತ್ತದೆ. ಹಣಕಾಸನ್ನು ದುರ್ಬಳಕೆ ಮಾಡುತ್ತೀರಿ. ಬಿಡುವಿನ ವೇಳೆಗೆ ವ್ಯಾಯಾಮವನ್ನು ಮಾಡುವುದು ಆರೋಗ್ಯಕರವಾಗಿರುತ್ತದೆ. ಮದುವೆ ವಿಚಾರಗಳು ಕೈಗೊಳ್ಳಬೇಕು. ನಿಮ್ಮ ಯಾವುದೇ ಕಠಿಣ ಸಮಸ್ಯೆಗಳಿಗೆ ಶಾಶ್ವತವಾದ ಸೂಕ್ತವಾದ ಪರಿಹಾರ ಕಾಣಲು ಕರೆಮಾಡಿ. PH:- 9945590266

ತುಲಾ ರಾಶಿ

ಉದ್ಯೋಗದಲ್ಲಿ  ಇತರರನ್ನು ಟೀಕಿಸುವ ಬದಲು ಸಮಯ ವ್ಯರ್ಥಮಾಡದೆ ಕೆಲಸದ ಮೇಲೆ ಗಮನ ಹರಿಸಬೇಕು. ಸ್ನೇಹಿತರು ಮತ್ತು ಕುಟುಂಬದ ಸದಸ್ಯರು ನಿಮಗೆ ಹೆಚ್ಚು ಪ್ರೋತ್ಸಾಹ ನೀಡುತ್ತಾರೆ. ದಾಂಪತ್ಯದಲ್ಲಿ ಪ್ರಣಯ ರೋಮಾಂಚಕಾರಿಯಾಗಿ ಇರುತ್ತದೆ. ಮದುವೆ ವಿಚಾರ ಸಂಬಂಧದಲ್ಲಿ ಆಗಬಹುದು. ಹಣಕಾಸನ್ನು ಉಳಿಸ ಬೇಕಾಗುತ್ತದೆ. ಆರೋಗ್ಯದ ತೊಂದರೆಯನ್ನು ಮನೆಯಲ್ಲಿ ಹೇಳಿಕೊಳ್ಳಬೇಕು. ನಿಮ್ಮ ಯಾವುದೇ ಕಠಿಣ ಸಮಸ್ಯೆಗಳಿಗೆ ಶಾಶ್ವತವಾದ ಸೂಕ್ತವಾದ ಪರಿಹಾರ ಕಾಣಲು ಕರೆಮಾಡಿ. PH:- 9945590266

ವೃಶ್ಚಿಕ ರಾಶಿ

ನೀವು ಮಾಡುವಂತಹ ಉದ್ಯೋಗದಲ್ಲಿ ನಿಮ್ಮ   ನಿರೀಕ್ಷೆಗಳನ್ನು  ಮೀರಿ ನಿಮಗೆ ಆದಾಯ ಒದಗಬಹುದು.   ಈ ದಿನ   ನಿಮ್ಮ ವೈವಾಹಿಕ ಜೀವನದ ಅತ್ಯುತ್ತಮ ದಿನಗಳಲ್ಲಿ ಒಂದಾಗಿರಬಹುದು. ಹಣಕಾಸು ಅತ್ಯುತ್ತಮ ಲಾಭ ಪಡೆಯುವಿರಿ. ಪೂರ್ವ ದಿಕ್ಕಿನಿಂದ ಬರುವ ಸಂಬಂಧ ವಿವಾಹ ಮಾಡಲು ಯೋಗ್ಯವಾಗಿರುತ್ತದೆ. ನಿಮ್ಮ ಯಾವುದೇ ಕಠಿಣ ಸಮಸ್ಯೆಗಳಿಗೆ ಶಾಶ್ವತವಾದ ಸೂಕ್ತವಾದ ಪರಿಹಾರ ಕಾಣಲು ಕರೆಮಾಡಿ. PH:- 9945590266

ಧನಸ್ಸು ರಾಶಿ

ನಿಮಗೆ ಹೆಚ್ಚು ದೈಹಿಕ ಸಮಸ್ಯೆಗಳು ಉಂಟಾಗುತ್ತ  ದಾಂಪತ್ಯದಲ್ಲಿ ಪ್ರಣಯ ಸಂಬಂಧಗಳು ಮತ್ತು ನೆನಪುಗಳು ಈದಿನ ಕಾಡುತ್ತದೆ. ಕೆಲವು ಹಣಕಾಸಿನ ಸಮಸ್ಯೆಗಳು ನಿವಾರಣೆ ಆದಂತೆ ಕಾಣಬಹುದು. ವಿವಾಹದ ಒಳ್ಳೆಯ ಆಲೋಚನೆಗಳನ್ನು ಮಾಡಬೇಕು. ಬಂದಿರುವಂತಹ ಸಂಬಂಧಗಳನ್ನು ಕೈಜೋಡಿಸಬೇಕು. ಉದ್ಯೋಗದಲ್ಲಿ ಬೇಗನೆ ಭಾಗವಹಿಸಿ ಬಾಕಿ ಇರುವಂತಹ ಕೆಲಸಗಳನ್ನು ಮುಗಿಸಬೇಕು. ನಿಮ್ಮ ಯಾವುದೇ ಕಠಿಣ ಸಮಸ್ಯೆಗಳಿಗೆ ಶಾಶ್ವತವಾದ ಸೂಕ್ತವಾದ ಪರಿಹಾರ ಕಾಣಲು ಕರೆಮಾಡಿ. PH:- 9945590266

ಮಕರ ರಾಶಿ

ನೀವು ಬಹುಕಾಲದಿಂದ ಎದುರುನೋಡುತ್ತಿದ್ದ ಕುಟುಂಬದ ಒತ್ತಡಗಳಿಂದ ಈದಿನ ಹೊರಗಡೆ ಬರಬಹುದು. ಹಣಕಾಸಿನಲ್ಲಿ ಸುಧಾರಣೆ ನೀವು ಪ್ರಮುಖ ಗೃಹಬಳಕೆ ವಸ್ತುಗಳನ್ನು ತೆಗೆದುಕೊಳ್ಳುವಿರಿ. ನಿಮ್ಮ ಮಕ್ಕಳು ಕ್ರೀಡೆ ಮತ್ತು ಹೊರಾಂಗಣ ಚಟುವಟಿಕೆಯಲ್ಲಿ ಭಾಗವಹಿಸುತ್ತಾರೆ. ಅನಾರೋಗ್ಯವನ್ನು ಶಾಶ್ವತವಾಗಿ ದೂರವಿರಿಸಲು ನಿಮ್ಮ ಜೀವನಶೈಲಿಯನ್ನು ಬದಲಿಸಬೇಕು. ಕಂಕಣಬಲ ಇರುತ್ತದೆ. ನಿಮ್ಮ ಯಾವುದೇ ಕಠಿಣ ಸಮಸ್ಯೆಗಳಿಗೆ ಶಾಶ್ವತವಾದ ಸೂಕ್ತವಾದ ಪರಿಹಾರ ಕಾಣಲು ಕರೆಮಾಡಿ. PH:- 9945590266

ಕುಂಭ ರಾಶಿ

ಕುಟುಂಬದಲ್ಲಿ ಒಳ್ಳೆಯ ಕಾರ್ಯಕ್ರಮಗಳು ನಡೆಸುವುದರಿಂದ ನಿಮ್ಮ ಖ್ಯಾತಿಯನ್ನು ಹೆಚ್ಚಿಸುತ್ತದೆ. ಸಮಾಜದಲ್ಲಿ ಗೌರವವನ್ನು ಸಂಪಾದಿಸುತ್ತೀರಿ. ಇಷ್ಟಪಟ್ಟಿದ್ದ ಸಂಗಾತಿಯೊಡನೆ ಕಾಲಕಳೆಯಲು ಈ ದಿನ ಹೆಚ್ಚು ಖರ್ಚು ಮಾಡುವಿರಿ. ಆರೋಗ್ಯದ ಪ್ರಯೋಜನಗಳನ್ನು ಪಡೆಯಬೇಕಾಗುತ್ತದೆ. ಹಣಕಾಸು ಸ್ಥಿತಿ ನಿರೀಕ್ಷಿತ ಲಾಭ ತೆಗೆದುಕೊಳ್ಳಬಹುದು. ಮದುವೆಯ ಚಿಂತನೆ ಮಾಡುವುದು ಅತ್ಯುತ್ತಮವಾಗಿರುತ್ತದೆ. ನಿಮ್ಮ ಯಾವುದೇ ಕಠಿಣ ಸಮಸ್ಯೆಗಳಿಗೆ ಶಾಶ್ವತವಾದ ಸೂಕ್ತವಾದ ಪರಿಹಾರ ಕಾಣಲು ಕರೆಮಾಡಿ. PH:- 9945590266

ಮೀನಾ ರಾಶಿ

ನಿಮ್ಮ ವಿಚಿತ್ರ ಕಾರಕ ಭಾವಗಳು     ಹತೋಟಿಯಲ್ಲಿಟ್ಟುಕೊಳ್ಳಬೇಕು. ಸಾಂಪ್ರದಾಯಿಕವಾಗಿ ಮದುವೆಯ ಸಿದ್ಧತೆಯನ್ನು ನಡೆಸಬೇಕು. ಸಂಬಂಧಿಗಳು ನಿಮ್ಮ ಪ್ರಗತಿಯನ್ನು ಕುಂಠಿತಗೊಳಿಸಲು ಹೊಂಚು ಹಾಕುತ್ತಾರೆ. ದಾಂಪತ್ಯದಲ್ಲಿ ವಿಚಿತ್ರ ನಡುವಳಿಕೆಯಿಂದ ಅಸಮಾಧಾನ ಉಂಟಾಗುತ್ತದೆ. ಆರೋಗ್ಯಕರವಾಗಿರಲು ಹಾಸ್ಯವನ್ನು ಮುಂದಿಟ್ಟು ಕೊಳ್ಳಬೇಕು. ಹಣಕಾಸಿನಲ್ಲಿ ಹೆಚ್ಚಿನ ಸುಧಾರಣೆ ನಿಶ್ಚಿತವಾಗಿ ಇರುತ್ತದೆ. ನಿಮ್ಮ ಯಾವುದೇ ಕಠಿಣ ಸಮಸ್ಯೆಗಳಿಗೆ ಶಾಶ್ವತವಾದ ಸೂಕ್ತವಾದ ಪರಿಹಾರ ಕಾಣಲು ಕರೆಮಾಡಿ. PH:- 9945590266

ಅಂಕಣ

ದೀಪಾವಳಿ ವಿಶೇಷಾಂಕ | ದೇವನಗರಿ ಸುದ್ದಿದಿನ ಪತ್ರಿಕೆಯಿಂದ ಕತೆ- ಕವಿತೆ- ಲೇಖನ- ರೂಪದರ್ಶಿ ಫೋಟೋ ಗಳಿಗೆ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ: ಪ್ರಿಯ ಓದುಗರೆ, ಬೆಳಕಿನ ಹಬ್ಬ ದೀಪಾವಳಿಯ ಪ್ರಯುಕ್ತ ದೇವನಗರಿ ಸುದ್ದಿದಿನ – ಕನ್ನಡ ದಿನ ಪತ್ರಿಕೆ ಹಾಗೂ ಶ್ಯಾಮ್ ಪ್ರಕಾಶನದವತಿಯಿಂದ ‘ ದೀಪಾವಳಿ ವಿಶೇಷಾಂಕ’-2026ನ್ನು ತರಲಾಗುತ್ತಿದೆ.

ಈ‌ ಹಿನ್ನೆಲೆಯಲ್ಲಿ ದೀಪಾವಳಿ ವಿಷೇಶಾಂಕ 2026ರ ವಿಭಾಗಕ್ಕೆ ಕತೆ, ಕವಿತೆ ಹಾಗೂ ಲೇಖನ ಹಾಗೂ ರೂಪದರ್ಶಿಗಳ ಛಾಯಾಚಿತ್ರಗಳನ್ನು ಆಹ್ವಾನಿಸಿದ್ದೇವೆ.

ಕತೆ – ಕವಿತೆಗಳನ್ನು ಕಳುಹಿಸಲು ಇರುವ ನಿಯಮಗಳು

ಕತೆ/ಕವಿತೆ ಸ್ವತಂತ್ರ ರಚನೆಯಾಗಿರಬೇಕು. ಈ ಮೊದಲು ಯಾವ ಮಾಧ್ಯಮಗಳಲ್ಲಿಯೂ ಪ್ರಕಟ ಅಥವಾ ಪ್ರಸಾರ ಆಗಿರಬಾರದು.

ಕತೆ 1500 ಸಾವಿರ ಪದಗಳ ಮಿತಿಯಲ್ಲಿರಲಿ. ಕವಿತೆಗೆ 40 ಸಾಲಿನ ಮಿತಿಯಿರಲಿ, ನುಡಿ ಅಥವಾ ಬರಹ ತಂತ್ರಾಂಶದಲ್ಲಿ ಇಲ್ಲವೆ ಯೂನಿಕೋಡ್‌ನಲ್ಲಿ ಇರಬೇಕು. ವಯಸ್ಸಿನ ಮಿತಿ ಇರುವುದಿಲ್ಲ.

ಕತೆ/ಕವಿತೆ ಇರುವ ಪುಟದಲ್ಲಿ ಹೆಸರು, ವಿವರ ಬರೆಯುವಂತಿಲ್ಲ. ಪ್ರತ್ಯೇಕ ಪುಟದಲ್ಲಿ ಹೆಸರು, ಅಂಚೆ ವಿಳಾಸ, ಮೊಬೈಲ್ ನಂಬರ್, ಇ-ಮೇಲ್ ವಿಳಾಸ ಒದಗಿಸಬೇಕು.

ಇತ್ತೀಚಿನ ಪಾಸ್‌ಪೋರ್ಟ್ ಅಳತೆಯ ವರ್ಣಮಯ ಭಾವಚಿತ್ರದೊಂದಿಗೆ 100 ಪದಗಳ ಒಳಗೆ ಕಿರು ಪರಿಚಯ ಕಳುಹಿಸಬೇಕು.

ಸ್ಪರ್ಧೆಗೆ ಕಳುಹಿಸಿರುವ ಬರಹಗಳನ್ನು ಹಿಂದಿರುಗಿಸುವುದಿಲ್ಲ. ಬರಹಗಳು ಕಡ್ಡಾಯವಾಗಿ ಎಂಎಸ್ ವರ್ಡ್ ಫೈಲ್ (MS word File) ನಲ್ಲಿರಲಿ.

ಬರಹ ಮತ್ತು ಫೋಟೋಗಳನ್ನು ಇ-ಮೇಲ್ ಮೂಲಕವಷ್ಟೇ ಕಳಿಸಿ.

ತೀರ್ಪುಗಾರರ ತೀರ್ಮಾನವೇ ಅಂತಿಮ.

ಲೇಖನಗಳಿಗೆ ಆಹ್ವಾನ : ವೈಚಾರಿಕತೆ, ವಿಮರ್ಶೆ, ಕಾನೂನು, ಸಾಹಿತ್ಯ, ತಂತ್ರಜ್ಞಾನ, ವಿಜ್ಞಾನ, ಡಿಜಿಟಲ್ ಮಾಧ್ಯಮ, ಸಿನೆಮಾ, ಪ್ರೇಮಪತ್ರ, ಕೃಷಿ, ರಾಜಕೀಯ, ಕಲೆ, ಆರೋಗ್ಯ, ಪ್ರವಾಸ, ಅಡುಗೆ, ಫೋಟೋಗ್ರಫಿ, ವೈಲ್ಡ್ ಲೈಫ್, ಹಾಸ್ಯ ಕುರಿತಾದ ಲೇಖನಗಳನ್ನು 450 ಪದಗಳನ್ನು ಮೀರದಂತೆ ಬರೆದು ಕಳುಹಿಸಿ.

ಹಾಗೆಯೇ, ವಿಶೇಷಾಂಕದ ಮುಖಪುಟದ ರೂಪದರ್ಶಿಯಾಗಲು ಅವಕಾಶವನ್ನು ಕಲ್ಪಸಿಲಾಗಿದೆ. ಆಸಕ್ತ ರೂಪದರ್ಶಿಗಳು ಸ್ಟುಡಿಯೋ ಅಥವಾ ಫೋಟೋಗ್ರಾಫರ್ ಮೂಲಕ ತೆಗೆದ ‘6*4 ಅಳತೆಯ ಮುದ್ರಿತ ಫೋಟೋ ಮತ್ತು ಇ-ಮೇಲ್ ಮೂಲಕವೂ ಕಳಿಸಬಹುದು. 80 ಪದಗಳಮಿತಿಯೊಳಗೆ ನಿಮ್ಮ ಪರಿಚಯದೊಂದಿಗೆ, ಒಬ್ಬರು 4 ಫೋಟೋ ಕಳುಹಿಸಬೇಕು. ವಯಸ್ಸಿನ ಮಿತಿಯಿಲ್ಲ ಇರುವುದಿಲ್ಲ.

ಕತೆಯ ವಿಜೇತರಿಗೆ ಪ್ರಥಮ ಬಹುಮಾನ : 10000, ದ್ವಿತೀಯ ಬಹುಮಾನ : 5000, ತೃತೀಯ ಬಹುಮಾನ : 3000 ಹಾಗೂ ಕವಿತೆ ಬಹುಮಾನ ವಿಜೇತರಿಗೆ ಪ್ರಥಮ ಬಹುಮಾನ : 5000 ದ್ವಿತೀಯ ಬಹುಮಾನ : 3000 ಹಾಗೂ ತೃತೀಯ ಬಹುಮಾನ : ₹2000 ಸಿಗಲಿದೆ.

ಆಗಸ್ಟ್‌ 30ರೊಳಗೆ ಬರಹಗಳನ್ನು ಇ-ಮೇಲ್‌: deepasuddidina@gmail.com ಗೆ ಕಳುಹಿಸಲು ತಿಳಿಸಿದೆ. ಈ ಕುರಿತು ಹೆಚ್ಚಿನ ಮಾಹಿತಿಗಾಗಿ :9980346243 ಹಾಗೂ visit: www.suddidina.com ಅನ್ನು ವೀಕ್ಷಿಸಬಹುದಾಗಿದೆ.

ಕಚೇರಿ ವಿಳಾಸ 

ದೇವನಗರಿ ಸುದ್ದಿದಿನ- ಕನ್ನಡ ದಿನ ಪತ್ರಿಕೆ
ದೀಪಾವಳಿ ವಿಶೇಷಾಂಕ ವಿಭಾಗ
#3231/1, ಸಂಜೀವ ಸದನ, 11ನೇ ಮುಖ್ಯರಸ್ತೆ, 4 ನೇ ಅಡ್ಡರಸ್ತೆ, ಎಂಸಿಸಿ ಬಿ ಬ್ಲಾಕ್, ದಾವಣಗೆರೆ, 577004

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ಕ್ರೀಡೆ

ರಾಜ್ಯದ ವಿವಿಧ ನೀರಾವರಿ ಯೋಜನೆಗಳಿಗೆ ಹೆಚ್ಚಿನ ಅನುದಾನ ; ಇ-ಖಾತೆ ಅಭಿಯಾನ ಹಾಗೂ ಇತರೆ ‌ಪ್ರಮುಖ ಸುದ್ದಿಗಳು

Published

on

ರಾಜ್ಯದ ವಿವಿಧ ನೀರಾವರಿ ಯೋಜನೆಗಳಿಗೆ ಹೆಚ್ಚಿನ ಅನುದಾನ ; ಇ-ಖಾತೆ ಅಭಿಯಾನ ಹಾಗೂ ಇತರೆ ‌ಪ್ರಮುಖ ಸುದ್ದಿಗಳು

1. ಮುಖ್ಯಮಂತ್ರಿ ಸಿದ್ದರಾಮಯ್ಯ ನವದೆಹಲಿ ತಲುಪಿದ್ದಾರೆ. ಇಂದು ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿ ಮಾಡಿ, 5 ಪ್ರಮುಖ ಮಸೂದೆಗಳಿಗೆ ಅಂಗೀಕಾರ ನೀಡುವಂತೆ ಮನವಿ ಮಾಡಲಿದ್ದಾರೆ ಎಂದು ಉನ್ನತ ಮೂಲಗಳು ತಿಳಿಸಿವೆ. ಭದ್ರಾ ಮೇಲ್ದಂಡೆ ಯೋಜನೆ ಸೇರಿದಂತೆ ರಾಜ್ಯದ ವಿವಿಧ ನೀರಾವರಿ ಯೋಜನೆಗಳಿಗೆ, ಹೆಚ್ಚಿನ ಅನುದಾನ ಬಿಡುಗಡೆ ಮಾಡುವಂತೆ, ಕೇಂದ್ರದ ಜಲಶಕ್ತಿ ಖಾತೆ ಸಚಿವರನ್ನು ಕೋರುವುದಾಗಿ, ಇದೇ ವೇಳೆ ಸಾಮಾಜಿಕ ಜಾಲತಾಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

2. ರಾಜ್ಯದ ಗ್ರಾಮ ಪಂಚಾಯ್ತಿಗಳ ಹಂತದಲ್ಲಿ ಜುಲೈ 15ರಿಂದ, ಸಾರ್ವಜನಿಕರ ಆಸ್ತಿಗಳ ಇ-ಖಾತೆ ರೂಪಿಸುವ ಅಭಿಯಾನವನ್ನು ಕಂದಾಯ ಇಲಾಖೆ ಆಯೋಜಿಸಲಿದೆ ಎಂದು ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.

3. ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆಗೆ ಸಂಬಂಧಿಸಿ, ಇಲ್ಲಿಯವರೆಗೆ ಹೆಸರು ನೋಂದಾಯಿಸದವರು, ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ, ಈ ತಿಂಗಳ 30ರವರೆಗೆ ಮಾಹಿತಿ ನೀಡಲು ಅವಕಾಶವಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಎ.ಬಿ.ಬಸವರಾಜು ತಿಳಿಸಿದ್ದಾರೆ.

4. ಕಾವೇರಿ ಜಲಾನಯನ ಪ್ರದೇಶದಲ್ಲಿ ವ್ಯಾಪಕವಾಗಿ ಸುರಿಯುತ್ತಿರುವ ಮಳೆಯಿಂದ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆ.ಆರ್.ಎಸ್. ಅಣೆಕಟ್ಟೆ ಭಾಗಶ: ಭರ್ತಿಯಾಗಿದ್ದು, ಒಳ ಹರಿವು ಇನ್ನಷ್ಟು ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಅಣೆಕಟ್ಟೆಯಿಂದ 5 ಸಾವಿರದಿಂದ 15 ಸಾವಿರ ಕ್ಯುಸೆಕ್ ನೀರನ್ನು ನದಿಗೆ ಹರಿಸಲಾಗಿದೆ.

5. ಕತಾರ್‌ನಲ್ಲಿರುವ ಅಲ್ ಉದೈದ್ ಅಮೇರಿಕ ವಾಯುನೆಲೆಯ ಮೇಲೆ ಇರಾನ್ ನಡೆಸಿದ ದಾಳಿಯ ನಂತರ ಜಾಗತಿಕ ತೈಲ ಬೆಲೆಗಳು ಐದು ವರ್ಷಗಳಲ್ಲಿ ನಿನ್ನೆ ಒಂದೇ ದಿನದಲ್ಲಿ ತೀವ್ರ ಕುಸಿತವನ್ನು ದಾಖಲಿಸಿದೆ.

6. ಕರ್ನಾಟಕ, ಮಧ್ಯಪ್ರದೇಶ, ಬಿಹಾರ, ಜಾಖಂಡ್, ಒಡಿಶಾ, ಛತ್ತೀಸ್‌ಗಢ, ಪಶ್ಚಿಮ ಬಂಗಾಳ, ಸಿಕ್ಕಿಂ, ಅರುಣಾಚಲ ಪ್ರದೇಶ, ಕೊಂಕಣ, ಗೋವಾ, ಮಹಾರಾಷ್ಟ್ರ, ಗುಜರಾತ್, ಹಿಮಾಚಲ ಪ್ರದೇಶ, ಉತ್ತರಾಖಂಡ, ಪಶ್ಚಿಮ ಉತ್ತರ ಪ್ರದೇಶ, ರಾಜಸ್ಥಾನ, ಕೇರಳದ ಕೆಲವು ಸ್ಥಳಗಳಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

7. ಅಯೋವಾದಲ್ಲಿ ನಾಳೆ ಆರಂಭವಾಗಲಿರುವ ಯುಎಸ್ ಓಪನ್ 2025 ಬ್ಯಾಡ್ಮಿಂಟನ್ ಪಂದ್ಯಾವಳಿಯ ಪುರುಷರ ಡಬಲ್ಸ್ ವಿಭಾಗದಲ್ಲಿ ಹರಿಹರನ್ ಅಂಶಕರುಣನ್ ಮತ್ತು ರೂಬನ್ ಕುಮಾರ್ ರೆಥಿನಸಬಪತಿ, ಭಾರತವನ್ನು ಮುನ್ನಡೆಸಲಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಈರುಳ್ಳಿ ಕೇವಲ ತರಕಾರಿಯಲ್ಲ ; ಅದ್ಭುತ ಔಷಧ

Published

on

ನಾವು ನಿತ್ಯವೂ ತಯಾರಿಸುವ ಅಡುಗೆ ಪದಾರ್ಥಗಳಿಗೆ ಈರುಳ್ಳಿಯನ್ನು ಹಾಕದಿದ್ದಾಗ ಒಂದು ರುಚಿಯಾದರೆ ಅದನ್ನು ಹಾಕಿದಾಗ ಆ ಪದಾರ್ಥದ ರುಚಿಯೇ ಬೇರೆಯಾಗುತ್ತದೆ. ನಾವು ಈರುಳ್ಳಿಯ ಗುಣಗಳು, ಅದರ ಉಪಯೋಗಗಳು ಮತ್ತು ಮನೆ ಮದ್ದುಗಳ ಬಗ್ಗೆ ತಿಳಿದುಕೊಳ್ಳೋಣ.

ಆಯುರ್ವೇದದಲ್ಲಿ ಈರುಳ್ಳಿಯ ಬಗ್ಗೆ ವಿಸ್ತೃತ ವಿವರಣೆ ಇದೆ. ಆಯುರ್ವೇದ ಗ್ರಂಥಗಳ ಪ್ರಕಾರ ಈರುಳ್ಳಿಗೆ ಬೆಳ್ಳುಳ್ಳಿಯ ಗುಣಗಳಿವೆ. ಆದರೆ ಬೆಳ್ಳುಳ್ಳಿಯಂತೆ ಇದು ಉಷ್ಣವಲ್ಲ. ಹಾಗಾಗಿ ಬೆಳ್ಳುಳ್ಳಿಯ ಅದ್ಭುತ ಗುಣಗಳನ್ನು ಪಡೆಯಬೇಕು ಎಂದಾದರೆ ಮತ್ತು ಬೆಳ್ಳುಳ್ಳಿಯನ್ನು ಸೇವಿಸಿದರೆ ಉಷ್ಣವಾಗುತ್ತದೆ ಎಂಬ ಯೋಚನೆ ಇದ್ದರೆ ಬದಲಿಗೆ ಈರುಳ್ಳಿಯನ್ನು ಬಳಸಬಹುದು.

ಭಾವ ಪ್ರಕಾಶ ನಿಘಂಟು ಎಂಬ ಗ್ರಂಥದಲ್ಲಿ “ಬಲವೀರ್ಯ ಕೈರೋ ಗುರುಃ” ಎಂದಿದ್ದಾರೆ. ಅಂದರೆ ಈರುಳ್ಳಿಯು ದೇಹದ ಬಲವನ್ನು, ವೀರ್ಯದ ಗುಣಮಟ್ಟವನ್ನು, ಲೈಂಗಿಕ ಶಕ್ತಿಯನ್ನು ಹೆಚ್ಚಿಸುತ್ತದೆ ಎಂದರ್ಥ. ಬಹುತೇಕ ಎಲ್ಲಾ ಆಯುರ್ವೇದ ಗ್ರಂಥಗಳಲ್ಲಿಯೂ ಈರುಳ್ಳಿಯಿಂದ ಲೈಂಗಿಕ ಶಕ್ತಿ ವೃದ್ಧಿಯಾಗುತ್ತದೆ ಎಂಬುದನ್ನು ಹೇಳಲಾಗಿದೆ. ಇದು ಚರ್ಮಕ್ಕೆ ಕೂಡ ಅತ್ಯಂತ ಅನುಕೂಲಕರವಾದದ್ದು. ಚರ್ಮವನ್ನು ಸ್ನಿಗ್ಧಗೊಳಿಸಿ ಒರಟುತನವನ್ನು ಹೋಗಲಾಡಿಸುತ್ತದೆ; ಚರ್ಮಕ್ಕೆ ಕಾಂತಿಯನ್ನು ಕೊಡುತ್ತದೆ; ಜೊತೆಗೆ ಚರ್ಮದ ಶುದ್ಧಿಯನ್ನೂ ಮಾಡುತ್ತದೆ ಎಂದು ವಿವರಿಸಲಾಗಿದೆ. ಈರುಳ್ಳಿಯನ್ನು ನಿಯಮಿತವಾಗಿ ಸೇವಿಸುವುದರಿಂದ ದೇಹದ ಬಾಹ್ಯ ಮತ್ತು ಆಂತರಿಕ ಕಾಂತಿ ಹೆಚ್ಚುತ್ತದೆ.

ಅಂದರೆ ಕೇವಲ ಸೌಂದರ್ಯವೃದ್ಧಿಯಷ್ಟೇ ಅಲ್ಲ ದೇಹದೊಳಗಿನ ರೋಗನಿರೋಧಕ ಶಕ್ತಿ ತುಂಬಾ ಚೆನ್ನಾಗಿ ಹೆಚ್ಚುತ್ತದೆ. ಈರುಳ್ಳಿಯು ಧ್ವನಿಗೆ ಸಂಬಂಧಿಸಿದ ಸಮಸ್ಯೆಗಳನ್ನು ಹೋಗಲಾಡಿಸಿ ಒಳ್ಳೆಯ ಧ್ವನಿಯನ್ನು ನೀಡುತ್ತದೆ ಎಂದು ವಿವರಿಸಲಾಗಿದೆ. ಹೀಗಾಗಿ ಹಾಡುಗಾರರು, ಅಧ್ಯಾಪಕರಂಥವರಿಗೆ ನಿಯಮಿತ ಈರುಳ್ಳಿ ಸೇವನೆ ಅನುಕೂಲಕರ. ಇದು ಕಣ್ಣಿನ ಆರೋಗ್ಯವನ್ನು ಹೆಚ್ಚಿಸುವುದರಿಂದ ಹತ್ತರಿಂದ ಹದಿನೈದು ಮಿಲೀ ಈರುಳ್ಳಿ ರಸವನ್ನು ಸುಮಾರು ಒಂದು ತಿಂಗಳು ದಿನಕ್ಕೊಮ್ಮೆ ಸೇವಿಸುವುದರಿಂದ ಚಿಕ್ಕಪುಟ್ಟ ಕಣ್ಣಿನ ತೊಂದರೆಗಳು ನಿವಾರಣೆಯಾಗುತ್ತವೆ. ಸ್ವಲ್ಪ ಸಿಹಿ ಇರುವ ಅಂದರೆ ಖಾರ ಕಡಿಮೆ ಇರುವ ಈರುಳ್ಳಿಯನ್ನು ಚಿಕ್ಕ ಚಿಕ್ಕ ತುಂಡುಗಳನ್ನಾಗಿ ಕತ್ತರಿಸಿ ತುಪ್ಪದಲ್ಲಿ ಹುರಿದು ನಿಯಮಿತವಾಗಿ ಸೇವಿಸಿದರೆ ಲೈಂಗಿಕ ಶಕ್ತಿಯ ವೃದ್ಧಿಯಾಗುತ್ತದೆ.

ಕೂದಲು ಉದುರುವುದನ್ನು ಕಡಿಮೆ ಮಾಡಲು ಈರುಳ್ಳಿಯು ಸಹಕಾರಿ. ಈರುಳ್ಳಿಯ ರಸ ತೆಗೆದು ತಲೆ ಸ್ನಾನ ಮಾಡುವ ಹತ್ತು ನಿಮಿಷ ಮೊದಲು ಕೂದಲಿನ ಬುಡಕ್ಕೆ ಹಚ್ಚಬೇಕು. ಇದರಿಂದ ಕೂದಲಿನ ಬೆಳವಣಿಗೆ ಚೆನ್ನಾಗಿ ಆಗಲು ಮತ್ತು ಕೂದಲು ಉದುರುವುದು ನಿಲ್ಲಲು ಸಹಾಯವಾಗುತ್ತದೆ. ಬೊಜ್ಜನ್ನು ಕಡಿಮೆ ಮಾಡಲು ಕೂಡ ಈರುಳ್ಳಿಯು ಸಹಕಾರಿ. ಬೆಳ್ಳುಳ್ಳಿಯ ಇನ್ನೊಂದು ಅದ್ಭುತ ಗುಣವೆಂದರೆ ಅದು ನರದ ಶಕ್ತಿಯನ್ನು ಹೆಚ್ಚಿಸುತ್ತದೆ. ಹಾಗಾಗಿ ಸಯಾಟಿಕಾದಂತಹ ಸಮಸ್ಯೆಗಳನ್ನು ಅನುಭವಿಸುತ್ತಿರುವವರಿಗೆ ಈರುಳ್ಳಿ ತುಂಬಾ ಲಾಭದಾಯಕ.

ಕಫದ ಸಮಸ್ಯೆಯಿಂದ ಬಳಲುತ್ತಿದ್ದು ಕಫ ಹೊರಗೆ ಬರುತ್ತಿಲ್ಲದಿದ್ದರೆ ಎರಡು ಚಮಚದಷ್ಟು ಈರುಳ್ಳಿ ರಸ, ಅರ್ಧ ಚಮಚದಷ್ಟು ಶುಂಠಿ ರಸ, ಅರ್ಧ ಚಮಚದಷ್ಟು ತುಳಸಿ ಎಲೆಗಳ ರಸ ಮತ್ತು ಒಂದು ಚಮಚ ಜೇನುತುಪ್ಪವನ್ನು ಸೇರಿಸಿ ದಿನಕ್ಕೆ ಒಂದು ಅಥವಾ ಎರಡು ಬಾರಿ ಸೇವಿಸಿದರೆ ಕಫ ಹೊರಗೆ ಬಂದು ಸಮಸ್ಯೆ ನಿವಾರಣೆಯಾಗುತ್ತದೆ.

ಈರುಳ್ಳಿ ಒಳ್ಳೆಯ ಜೀರ್ಣಕಾರಿಯೂ ಹೌದು ಹಾಗಾಗಿ ಅಜೀರ್ಣ ಇರುವವರಿಗೆ ಹೆಚ್ಚಿನ ಪ್ರಮಾಣದಲ್ಲಿ ಈರುಳ್ಳಿಯನ್ನು ಹಾಕಿ ಹೆಸರುಬೇಳೆಯ ತಿಳಿಸಾರು ಮಾಡಿ ಊಟಕ್ಕೆ ನೀಡಿದರೆ ಅಜೀರ್ಣದ ಸಮಸ್ಯೆ ತುಂಬಾ ಚೆನ್ನಾಗಿ ಹತೋಟಿಗೆ ಬರುತ್ತದೆ. ಜೊತೆಗೆ ಶಕ್ತಿ ವೃದ್ಧಿಯೂ ಆಗುತ್ತದೆ. ಒಟ್ಟಿನಲ್ಲಿ ಈರುಳ್ಳಿಯನ್ನು ಸರಿಯಾಗಿ ಬಳಸಿಕೊಂಡರೆ ಅದು ಕೇವಲ ತರಕಾರಿಯಲ್ಲ ಅದ್ಭುತ ಔಷಧ.(ಬರಹ-ಡಾ|| ವೆಂಕಟ್ರಮಣ ಹೆಗಡೆ
ವೇದ ವೆಲ್ನೆಸ್ ಸೆಂಟರ್, ನಿಸರ್ಗಮನೆ, ಶಿರಸಿ, ಉ.ಕನ್ನಡ)

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending