Connect with us

ನಿತ್ಯ ಭವಿಷ್ಯ

ರಾಶಿ ಭವಿಷ್ಯ : ನಿಮ್ಮ ಒಂದು ಕರೆ ಜೀವನವನ್ನು ಬದಲಾಯಿಸಬಹುದು | 31-12-2019

Published

on

ಶ್ರೀ ಕೇರಳ ಮಾಂತ್ರಿಕ ಜ್ಯೋತಿಷ್ಯ ಶಾಸ್ತ್ರಂ ಭಗವತಿ ಭದ್ರಾಕಾಳಿ ಅಮ್ಮನವರು ಉಪಾಸಕರು : ಪ್ರಧಾನ ಅರ್ಚಕರು: ಲಕ್ಷ್ಮಿಕಾಂತ್ ಭಟ್ : 9964584883

ಮೇಷ ರಾಶಿ

ಮಕ್ಕಳಿಗಾಗಿ ಇಂದು ನೀವು ಮಾಡುವ ಕೆಲಸಗಳು ನಿಧಾನಗತಿಯಲ್ಲಿ ಯಶಸ್ಸಾಗುವವು, ಇಂದು ನೀವು ಹಮ್ಮಿಕೊಳ್ಳುವ ಶುಭ ಕಾರ್ಯಗಳಿಗೆ ವಿರೋಧಿಗಳು ಅಡ್ಡಗಾಲು ಹಾಕುವ ಸಾಧ್ಯತೆ ಇರುವುದು. ಮುನೇಶ್ವರನಿಗೆ ಮೊಸರಿನ ಬುತ್ತಿಯನ್ನು ನಿವೇದನೆ ಮಾಡಿ. ಹಾಗು ಶ್ರಮವಹಿಸಿ ಮಾಡುವ ಕೆಲಸಗಳಿಗೆ ವಿಘ್ನ ಬರುವ ಸಾಧ್ಯತೆ ಇದೆ. ಗಣಪತಿ ಪ್ರಾರ್ಥನೆ ಮಾಡಿ.

ಪ್ರಧಾನ ಅರ್ಚಕರು:: ಲಕ್ಷ್ಮಿಕಾಂತ್ ಭಟ್
9964584883

ವೃಷಭ ರಾಶಿ

ಪರೋಪಕಾರಿಗಳಾದ ನೀವು ವಿಶ್ರಾಂತಿಯ ಅಗತ್ಯವಿಲ್ಲದಂತೆ ದುಡಿಯುತ್ತಿರುವಿರಿ. ಆದರೆ ಕೆಲ ಸಮಯವಾದರೂ ವಿಶ್ರಾಂತಿ ಪಡೆದಲ್ಲಿ ಮುಂದಿನ ಕೆಲಸವನ್ನು ಅತ್ಯುತ್ಸಾಹದಿಂದ ಮಾಡಲು ಅನುಕೂಲವಾಗುವುದು. ದೈಹಿಕ ಆರೋಗ್ಯ ಕೂಡಾ ಅಷ್ಟೆ ಪ್ರಮುಖವಾದುದು. ಕೌಟುಂಬಿಕ ಜೀವನದಲ್ಲಿ ಸ್ವಲ್ಪ ವಿರಸ ತೋರುವ ಸಾಧ್ಯತೆ ಇರುವುದು. ಶಿವಪಂಚಾಕ್ಷ ರಿ ಮಂತ್ರ ಜಪಿಸಿ.

ಪ್ರಧಾನ ಅರ್ಚಕರು:: ಲಕ್ಷ್ಮಿಕಾಂತ್ ಭಟ್
9964584883

ಮಿಥುನ ರಾಶಿ

ಮಾತೇ ಬಂಡವಾಳ ಮಾಡಿಕೊಂಡಿರುವ ವ್ಯಕ್ತಿಗಳಿಗೆ ಸುದಿನ. ಭೂ ವ್ಯವಹಾರದವರಿಗೆ ಉತ್ತಮ ಲಾಭ. ವ್ಯಾಪಾರ ವ್ಯವಹಾರದಲ್ಲಿ ಹೆಚ್ಚಿನ ಲಾಭ ಕಂಡು ಬರುವುದು. ಹಣಕಾಸಿನ ಪರಿಸ್ಥಿತಿ ಉತ್ತಮವಾಗಿರುತ್ತದೆ. ತಾಯಿ ದುರ್ಗಾಮಾತೆಯನ್ನು ಅನನ್ಯ ಭಕ್ತಿಯಿಂದ ಪ್ರಾರ್ಥಿಸಿ ಒಳಿತಾಗುವುದು.

ಪ್ರಧಾನ ಅರ್ಚಕರು:: ಲಕ್ಷ್ಮಿಕಾಂತ್ ಭಟ್
9964584883

ಕಟಕ ರಾಶಿ

ದೂರದ ಗೆಳೆಯರನ್ನು ಅನಿರೀಕ್ಷಿತವಾಗಿ ಸಂಧಿಸುವಿರಿ. ಇದರಿಂದ ನಿಮ್ಮ ಬಾಳಿಗೆ ಹೊಸ ತಿರುವೊಂದು ದೊರೆಯಲಿದೆ. ಕಾಣದ ಹಾದಿಗಾಗಿ ಕಾತರಿಸುತ್ತಿರುವಿರಿ. ಆದರೆ ಗುರುಸದೃಶವಾದ ವ್ಯಕ್ತಿಯೊಬ್ಬರಿಂದ ಬದುಕಿನ ಶಾಂತಿಗೆ ಉತ್ತಮ ಸಿದ್ಧಿ ದೊರೆಯುವುದು.
ಶನೇಶ್ಚರ ಮಂತ್ರ ಪಠಿಸಿ. ಬಡವರಿಗೆ ಆಹಾರ ನೀಡಿ. ಕಷ್ಟದಿಂದ ಕಾರ್ಯ ನೆರವೇರುವುದು.

ಪ್ರಧಾನ ಅರ್ಚಕರು:: ಲಕ್ಷ್ಮಿಕಾಂತ್ ಭಟ್
9964584883

ಸಿಂಹ ರಾಶಿ

ಧರ್ಮಕಾರ್ಯಗಳಿಗೆ ಹಣವನ್ನು ಖರ್ಚು ಮಾಡುವಿರಿ. ಆರೋಗ್ಯದ ಕಡೆ ಗಮನ ಹರಿಸುವುದು ಒಳ್ಳೆಯದು.ಪ್ರಯಾಣಕ್ಕೆ ನಿರಾಳವಾದ ಅವಕಾಶವೊಂದು ಸೃಷ್ಟಿಯಾಗುವುದು. ಇದರಿಂದ ನಿಮ್ಮ ವ್ಯಾಪಾರ ವ್ಯವಹಾರಗಳಿಗೆ ಹೆಚ್ಚಿನ ಲಾಭ ಉಂಟಾಗುವುದು.ಆಂಜನೇಯ ಸ್ವಾಮಿ ಸ್ತೋತ್ರ ಪಠಿಸಿ. ನಿಮ್ಮ ಕಾರ್ಯಗಳು ಯಶಸ್ಸಿನತ್ತ ಸಾಗುವವು.

ಪ್ರಧಾನ ಅರ್ಚಕರು:: ಲಕ್ಷ್ಮಿಕಾಂತ್ ಭಟ್
9964584883

ಕನ್ಯಾ ರಾಶಿ

ಎಲ್ಲಾ ಕಾಲದಲ್ಲೂ ನಿಮ್ಮ ಮಾತೇ ಅಂತಿಮ ಎನ್ನುವ ಧೋರಣೆ ಬಿಡಿ. ಇತರರ ಮಾತಿಗೂ ಬೆಲೆ ಕೊಡಿ, ಸಿಟ್ಟಿನಿಂದ ಕೂಗಾಡಲು ಮುಂದಾಗದಿರಿ. ಇದರಿಂದ ನಿಮ್ಮ ಪಾಲಿಗೆ ನೀವೇ ದೊಡ್ಡ ತಡೆಗೋಡೆ ಆಗುವಿರಿ. ಈ ಬಗ್ಗೆ ಎಚ್ಚರಿಕೆ ಇರಲಿ. ಜಗತ್ತನ್ನು ತಿದ್ದುವ ಪ್ರಯತ್ನ ಬೇಡ. ನೀವೇ ಬದಲಾಗಿ. ಇದರಿಂದ ಜಗತ್ತು ಸುಂದರವಾಗಿ ಕಾಣುವುದು.‌ ಕಾಳಿಕಾದೇವಿಯನ್ನು ಪ್ರಾರ್ಥಿಸಿ.

ಪ್ರಧಾನ ಅರ್ಚಕರು:: ಲಕ್ಷ್ಮಿಕಾಂತ್ ಭಟ್
9964584883

ತುಲಾ ರಾಶಿ

ಓದು ಬರಹದಿಂದ ಜ್ಞಾನ ಸಂವರ್ಧನೆಗೆ ದಾರಿ ಇದೆ. ಜ್ಞಾನ ನಿಮ್ಮ ಬದುಕಿನ ಪಾಲಿಗೆ ಕೈದೀಪವಾಗಲಿದೆ. ಜ್ಞಾನದ ಬಲದಿಂದ ಅಜ್ಞಾನದ ಕೇಡು ಎಂಬ ವಚನದಂತೆ ಬುದ್ಧಿಯ ಅಜ್ಞಾನ ಕಳೆದು ಸುಜ್ಞಾನ ಮೂಡುವುದು. ನಿಮ್ಮ ತೀರ್ಮಾನಗಳನ್ನು ಯಾರೂ ಪ್ರಶ್ನಿಸದೆ ಒಪ್ಪಿಕೊಳ್ಳುತ್ತಿದ್ದಾರೆ ಎಂದರೆ ಅದಕ್ಕೆ ನಿಮ್ಮ ದೃಢ ನಿರ್ಧಾರವೇ ಕಾರಣ. ಗುರುಹಿರಿಯರ ಆಶೀರ್ವಾದ ಪಡೆಯಿರಿ.

ಪ್ರಧಾನ ಅರ್ಚಕರು:: ಲಕ್ಷ್ಮಿಕಾಂತ್ ಭಟ್
9964584883

ವೃಶ್ಚಿಕ ರಾಶಿ

ಬಾಳಸಂಗಾತಿಯನ್ನು ನಿರ್ಲಕ್ಷಿಸದಿರಿ. ಬಾಳಸಂಗಾತಿಯ ಇಚ್ಛೆಯನ್ನು ಅರಿತು ಸ್ಪಂದಿಸಿದಲ್ಲಿ ಸಂಸಾರವು ಸುಖಮಯವಾಗಿರುವುದು. ಚರರಾಶಿಯಲ್ಲಿ ಜನ್ಮಿಸಿರುವ ನೀವು ಒಂದೇ ಕಡೆ ಕುಳಿತು ಕೆಲಸ ಮಾಡುವವರಾಗಿದ್ದೀರಿ. ಕುಟುಂಬದಲ್ಲಿ ಒಡಕು ಮೂಡುವ ಸಾಧ್ಯತೆ ಇದೆ. ಬಾಳಸಂಗಾತಿ ಮತ್ತು ಮಕ್ಕಳಿಂದ ಪದೇ ಪದೇ ಪ್ರಶ್ನೆಗಳು ಬರುತ್ತವೆ.ಸುಬ್ರಮಣ್ಯಸ್ವಾಮಿಯನ್ನು ಆರಾಧಿಸಿ.

ಪ್ರಧಾನ ಅರ್ಚಕರು:: ಲಕ್ಷ್ಮಿಕಾಂತ್ ಭಟ್
9964584883

ಧನಸ್ಸು ರಾಶಿ

ಸುಖಾ ಸುಮ್ಮನೆ ನೀವೇ ಅಪಾರ್ಥಗಳನ್ನು ಕಲ್ಪಿಸಿಕೊಂಡು ಸುಂದರ ಬದುಕನ್ನು ಹಾಳುಮಾಡಿಕೊಳ್ಳದಿರಿ.
ವಿವಾಹಯೋಗ್ಯರಿಗೆ ಸೂಕ್ತಕಾಲವಾದರೂ ದೃಢ ನಿರ್ಧಾರ ತಳೆಯುವಲ್ಲಿ ವಿಳಂಬ ಉಂಟಾಗುವುದು. ಆರ್ಥಿಕ ಸ್ಥಿತಿ ಉತ್ತಮವಾಗಿರುವುದು. ವಿಘ್ನನಾಶಕ ವಿಶ್ವಂಭರನನ್ನು ಪೂಜಿಸಿ. ಅವನು ಮಂಗಳಕಾರ್ಯಕ್ಕೆ ದಾರಿ ತೋರುವನು.

ಪ್ರಧಾನ ಅರ್ಚಕರು:: ಲಕ್ಷ್ಮಿಕಾಂತ್ ಭಟ್
9964584883

ಮಕರ ರಾಶಿ

ಸಾಧು ಪ್ರಾಣಿಗಳನ್ನೇ ಬಲಿಕೊಡುವರೇ ಹೊರತು ಹುಲಿ ಸಿಂಹಗಳನ್ನು ಬಲಿ ಕೊಡುವುದಿಲ್ಲ. ನೀವು ಬಯಸಿದ ಮಾರ್ಗದಲ್ಲಿಯೇ ಸಾಗಬೇಕೆಂಬ ಹಠ ಬಿಟ್ಟುಬಿಡಿ. ಹಠದಿಂದ ಒಳಿತಿಗೆ ತಡೆ ಉಂಟಾಗಲಿದೆ. ನೆರೆಹೊರೆಯವರೊಡನೆ ಉತ್ತಮ ಬಾಂಧವ್ಯ ಇಟ್ಟುಕೊಳ್ಳುವುದು ಒಳ್ಳೆಯದು. ಮಾತಾ ದುರ್ಗಾದೇವಿಯನ್ನು ಮನಸಾ ಸ್ಮರಿಸಿ.

ಪ್ರಧಾನ ಅರ್ಚಕರು:: ಲಕ್ಷ್ಮಿಕಾಂತ್ ಭಟ್
9964584883

ಕುಂಭ ರಾಶಿ

ಹೊಯ್ದಾಡುವ ಮನಸ್ಸನ್ನು ದೃಢವಾಗಿ ನಿಯಂತ್ರಿಸಿ. ಸ್ಥೈರ್ಯ ಧೈರ್ಯಗಳಿಂದ ಅನೇಕ ಲಾಭಗಳಿವೆ. ಹೊಸ ರಾಜಕೀಯ ಪಕ್ಷ ಕ್ಕೆ ಸೇರಿಕೊಳ್ಳಬೇಕೆಂಬ ನಿಮ್ಮ ಒಳಗಿನ ಆಸೆಗೆ ಹೊರಗಿನ ಜನರು ತಣ್ಣೀರು ಎರಚುತ್ತಿರುವರು. ಗ್ರಹಗಳು ನೀವು ಪಕ್ಷ ಕ್ಕೆ ಸೇರಬೇಕೆನ್ನುವವು. ಆಸ್ತಿ ಖರೀದಿಯ ಬಗ್ಗೆ ನಿಧಾನ ಪ್ರಗತಿಯುಂಟಾಗುವುದು. ಸ್ನೇಹಿತರು ಸಹಾಯ ಮಾಡುವರು. ಅಂಗವಿಕಲರಿಗೆ ಸಹಾಯ ಮಾಡಿ.

ಪ್ರಧಾನ ಅರ್ಚಕರು:: ಲಕ್ಷ್ಮಿಕಾಂತ್ ಭಟ್
9964584883

ಮೀನ ರಾಶಿ

ಭೂವ್ಯವಹಾರಕ್ಕೆ ಸಂಬಂಧಪಟ್ಟಂತೆ ಮೋಸ ಹೋಗುವ ಸಾಧ್ಯತೆ ಇದೆ. ಎಷ್ಟೇ ಪ್ರಾಮಾಣಿಕವಾಗಿ ದುಡಿದರೂ ಪ್ರಯೋಜನಕ್ಕೆ ಬರುತ್ತಿಲ್ಲ ಎಂಬ ಕೊರಗು ನಿಮ್ಮನ್ನು ಕಾಡುತ್ತಿದೆ. ಕೆಲ ಗ್ರಹಸ್ಥಿತಿಗಳು ನೀವು ಕೈಗೊಳ್ಳುವ ಕಾರ್ಯದಲ್ಲಿ ವಿಳಂಬ ಉಂಟು ಮಾಡುವುದು.
ಆಂಜನೇಯ ಸ್ಮರಣೆ ಮಾಡಿ.

ಪ್ರಧಾನ ಅರ್ಚಕರು:: ಲಕ್ಷ್ಮಿಕಾಂತ್ ಭಟ್
9964584883

ಕಠಿಣ ಸಮಸ್ಯೆಗಳಿಗೆ ಸೂಕ್ತವಾದ ಪರಿಹಾರ ಮತ್ತು ಮಾರ್ಗದರ್ಶನ ಸೂಚಿಸುತ್ತಾರೆ.
ಸಮಸ್ಯೆಗಳು ಹತ್ತು-ಹಲವಾರು ಪರಿಹಾರ ಮಾತ್ರ ಒಂದೇ ಅದುವೇ ಜ್ಯೋತಿಷ್ಯಶಾಸ್ತ್ರ.
ನಿಮ್ಮ ಒಂದು ಕರೆ ಜೀವನವನ್ನು ಬದಲಾಯಿಸಬಹುದು.

ಪ್ರಧಾನ ಅರ್ಚಕರು:: ಲಕ್ಷ್ಮಿಕಾಂತ್ ಭಟ್
9964584883

ಅಂಕಣ

ದೀಪಾವಳಿ ವಿಶೇಷಾಂಕ | ದೇವನಗರಿ ಸುದ್ದಿದಿನ ಪತ್ರಿಕೆಯಿಂದ ಕತೆ- ಕವಿತೆ- ಲೇಖನ- ರೂಪದರ್ಶಿ ಫೋಟೋ ಗಳಿಗೆ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ: ಪ್ರಿಯ ಓದುಗರೆ, ಬೆಳಕಿನ ಹಬ್ಬ ದೀಪಾವಳಿಯ ಪ್ರಯುಕ್ತ ದೇವನಗರಿ ಸುದ್ದಿದಿನ – ಕನ್ನಡ ದಿನ ಪತ್ರಿಕೆ ಹಾಗೂ ಶ್ಯಾಮ್ ಪ್ರಕಾಶನದವತಿಯಿಂದ ‘ ದೀಪಾವಳಿ ವಿಶೇಷಾಂಕ’-2026ನ್ನು ತರಲಾಗುತ್ತಿದೆ.

ಈ‌ ಹಿನ್ನೆಲೆಯಲ್ಲಿ ದೀಪಾವಳಿ ವಿಷೇಶಾಂಕ 2026ರ ವಿಭಾಗಕ್ಕೆ ಕತೆ, ಕವಿತೆ ಹಾಗೂ ಲೇಖನ ಹಾಗೂ ರೂಪದರ್ಶಿಗಳ ಛಾಯಾಚಿತ್ರಗಳನ್ನು ಆಹ್ವಾನಿಸಿದ್ದೇವೆ.

ಕತೆ – ಕವಿತೆಗಳನ್ನು ಕಳುಹಿಸಲು ಇರುವ ನಿಯಮಗಳು

ಕತೆ/ಕವಿತೆ ಸ್ವತಂತ್ರ ರಚನೆಯಾಗಿರಬೇಕು. ಈ ಮೊದಲು ಯಾವ ಮಾಧ್ಯಮಗಳಲ್ಲಿಯೂ ಪ್ರಕಟ ಅಥವಾ ಪ್ರಸಾರ ಆಗಿರಬಾರದು.

ಕತೆ 1500 ಸಾವಿರ ಪದಗಳ ಮಿತಿಯಲ್ಲಿರಲಿ. ಕವಿತೆಗೆ 40 ಸಾಲಿನ ಮಿತಿಯಿರಲಿ, ನುಡಿ ಅಥವಾ ಬರಹ ತಂತ್ರಾಂಶದಲ್ಲಿ ಇಲ್ಲವೆ ಯೂನಿಕೋಡ್‌ನಲ್ಲಿ ಇರಬೇಕು. ವಯಸ್ಸಿನ ಮಿತಿ ಇರುವುದಿಲ್ಲ.

ಕತೆ/ಕವಿತೆ ಇರುವ ಪುಟದಲ್ಲಿ ಹೆಸರು, ವಿವರ ಬರೆಯುವಂತಿಲ್ಲ. ಪ್ರತ್ಯೇಕ ಪುಟದಲ್ಲಿ ಹೆಸರು, ಅಂಚೆ ವಿಳಾಸ, ಮೊಬೈಲ್ ನಂಬರ್, ಇ-ಮೇಲ್ ವಿಳಾಸ ಒದಗಿಸಬೇಕು.

ಇತ್ತೀಚಿನ ಪಾಸ್‌ಪೋರ್ಟ್ ಅಳತೆಯ ವರ್ಣಮಯ ಭಾವಚಿತ್ರದೊಂದಿಗೆ 100 ಪದಗಳ ಒಳಗೆ ಕಿರು ಪರಿಚಯ ಕಳುಹಿಸಬೇಕು.

ಸ್ಪರ್ಧೆಗೆ ಕಳುಹಿಸಿರುವ ಬರಹಗಳನ್ನು ಹಿಂದಿರುಗಿಸುವುದಿಲ್ಲ. ಬರಹಗಳು ಕಡ್ಡಾಯವಾಗಿ ಎಂಎಸ್ ವರ್ಡ್ ಫೈಲ್ (MS word File) ನಲ್ಲಿರಲಿ.

ಬರಹ ಮತ್ತು ಫೋಟೋಗಳನ್ನು ಇ-ಮೇಲ್ ಮೂಲಕವಷ್ಟೇ ಕಳಿಸಿ.

ತೀರ್ಪುಗಾರರ ತೀರ್ಮಾನವೇ ಅಂತಿಮ.

ಲೇಖನಗಳಿಗೆ ಆಹ್ವಾನ : ವೈಚಾರಿಕತೆ, ವಿಮರ್ಶೆ, ಕಾನೂನು, ಸಾಹಿತ್ಯ, ತಂತ್ರಜ್ಞಾನ, ವಿಜ್ಞಾನ, ಡಿಜಿಟಲ್ ಮಾಧ್ಯಮ, ಸಿನೆಮಾ, ಪ್ರೇಮಪತ್ರ, ಕೃಷಿ, ರಾಜಕೀಯ, ಕಲೆ, ಆರೋಗ್ಯ, ಪ್ರವಾಸ, ಅಡುಗೆ, ಫೋಟೋಗ್ರಫಿ, ವೈಲ್ಡ್ ಲೈಫ್, ಹಾಸ್ಯ ಕುರಿತಾದ ಲೇಖನಗಳನ್ನು 450 ಪದಗಳನ್ನು ಮೀರದಂತೆ ಬರೆದು ಕಳುಹಿಸಿ.

ಹಾಗೆಯೇ, ವಿಶೇಷಾಂಕದ ಮುಖಪುಟದ ರೂಪದರ್ಶಿಯಾಗಲು ಅವಕಾಶವನ್ನು ಕಲ್ಪಸಿಲಾಗಿದೆ. ಆಸಕ್ತ ರೂಪದರ್ಶಿಗಳು ಸ್ಟುಡಿಯೋ ಅಥವಾ ಫೋಟೋಗ್ರಾಫರ್ ಮೂಲಕ ತೆಗೆದ ‘6*4 ಅಳತೆಯ ಮುದ್ರಿತ ಫೋಟೋ ಮತ್ತು ಇ-ಮೇಲ್ ಮೂಲಕವೂ ಕಳಿಸಬಹುದು. 80 ಪದಗಳಮಿತಿಯೊಳಗೆ ನಿಮ್ಮ ಪರಿಚಯದೊಂದಿಗೆ, ಒಬ್ಬರು 4 ಫೋಟೋ ಕಳುಹಿಸಬೇಕು. ವಯಸ್ಸಿನ ಮಿತಿಯಿಲ್ಲ ಇರುವುದಿಲ್ಲ.

ಕತೆಯ ವಿಜೇತರಿಗೆ ಪ್ರಥಮ ಬಹುಮಾನ : 10000, ದ್ವಿತೀಯ ಬಹುಮಾನ : 5000, ತೃತೀಯ ಬಹುಮಾನ : 3000 ಹಾಗೂ ಕವಿತೆ ಬಹುಮಾನ ವಿಜೇತರಿಗೆ ಪ್ರಥಮ ಬಹುಮಾನ : 5000 ದ್ವಿತೀಯ ಬಹುಮಾನ : 3000 ಹಾಗೂ ತೃತೀಯ ಬಹುಮಾನ : ₹2000 ಸಿಗಲಿದೆ.

ಆಗಸ್ಟ್‌ 30ರೊಳಗೆ ಬರಹಗಳನ್ನು ಇ-ಮೇಲ್‌: deepasuddidina@gmail.com ಗೆ ಕಳುಹಿಸಲು ತಿಳಿಸಿದೆ. ಈ ಕುರಿತು ಹೆಚ್ಚಿನ ಮಾಹಿತಿಗಾಗಿ :9980346243 ಹಾಗೂ visit: www.suddidina.com ಅನ್ನು ವೀಕ್ಷಿಸಬಹುದಾಗಿದೆ.

ಕಚೇರಿ ವಿಳಾಸ 

ದೇವನಗರಿ ಸುದ್ದಿದಿನ- ಕನ್ನಡ ದಿನ ಪತ್ರಿಕೆ
ದೀಪಾವಳಿ ವಿಶೇಷಾಂಕ ವಿಭಾಗ
#3231/1, ಸಂಜೀವ ಸದನ, 11ನೇ ಮುಖ್ಯರಸ್ತೆ, 4 ನೇ ಅಡ್ಡರಸ್ತೆ, ಎಂಸಿಸಿ ಬಿ ಬ್ಲಾಕ್, ದಾವಣಗೆರೆ, 577004

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ಕ್ರೀಡೆ

ರಾಜ್ಯದ ವಿವಿಧ ನೀರಾವರಿ ಯೋಜನೆಗಳಿಗೆ ಹೆಚ್ಚಿನ ಅನುದಾನ ; ಇ-ಖಾತೆ ಅಭಿಯಾನ ಹಾಗೂ ಇತರೆ ‌ಪ್ರಮುಖ ಸುದ್ದಿಗಳು

Published

on

ರಾಜ್ಯದ ವಿವಿಧ ನೀರಾವರಿ ಯೋಜನೆಗಳಿಗೆ ಹೆಚ್ಚಿನ ಅನುದಾನ ; ಇ-ಖಾತೆ ಅಭಿಯಾನ ಹಾಗೂ ಇತರೆ ‌ಪ್ರಮುಖ ಸುದ್ದಿಗಳು

1. ಮುಖ್ಯಮಂತ್ರಿ ಸಿದ್ದರಾಮಯ್ಯ ನವದೆಹಲಿ ತಲುಪಿದ್ದಾರೆ. ಇಂದು ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿ ಮಾಡಿ, 5 ಪ್ರಮುಖ ಮಸೂದೆಗಳಿಗೆ ಅಂಗೀಕಾರ ನೀಡುವಂತೆ ಮನವಿ ಮಾಡಲಿದ್ದಾರೆ ಎಂದು ಉನ್ನತ ಮೂಲಗಳು ತಿಳಿಸಿವೆ. ಭದ್ರಾ ಮೇಲ್ದಂಡೆ ಯೋಜನೆ ಸೇರಿದಂತೆ ರಾಜ್ಯದ ವಿವಿಧ ನೀರಾವರಿ ಯೋಜನೆಗಳಿಗೆ, ಹೆಚ್ಚಿನ ಅನುದಾನ ಬಿಡುಗಡೆ ಮಾಡುವಂತೆ, ಕೇಂದ್ರದ ಜಲಶಕ್ತಿ ಖಾತೆ ಸಚಿವರನ್ನು ಕೋರುವುದಾಗಿ, ಇದೇ ವೇಳೆ ಸಾಮಾಜಿಕ ಜಾಲತಾಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

2. ರಾಜ್ಯದ ಗ್ರಾಮ ಪಂಚಾಯ್ತಿಗಳ ಹಂತದಲ್ಲಿ ಜುಲೈ 15ರಿಂದ, ಸಾರ್ವಜನಿಕರ ಆಸ್ತಿಗಳ ಇ-ಖಾತೆ ರೂಪಿಸುವ ಅಭಿಯಾನವನ್ನು ಕಂದಾಯ ಇಲಾಖೆ ಆಯೋಜಿಸಲಿದೆ ಎಂದು ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.

3. ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆಗೆ ಸಂಬಂಧಿಸಿ, ಇಲ್ಲಿಯವರೆಗೆ ಹೆಸರು ನೋಂದಾಯಿಸದವರು, ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ, ಈ ತಿಂಗಳ 30ರವರೆಗೆ ಮಾಹಿತಿ ನೀಡಲು ಅವಕಾಶವಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಎ.ಬಿ.ಬಸವರಾಜು ತಿಳಿಸಿದ್ದಾರೆ.

4. ಕಾವೇರಿ ಜಲಾನಯನ ಪ್ರದೇಶದಲ್ಲಿ ವ್ಯಾಪಕವಾಗಿ ಸುರಿಯುತ್ತಿರುವ ಮಳೆಯಿಂದ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆ.ಆರ್.ಎಸ್. ಅಣೆಕಟ್ಟೆ ಭಾಗಶ: ಭರ್ತಿಯಾಗಿದ್ದು, ಒಳ ಹರಿವು ಇನ್ನಷ್ಟು ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಅಣೆಕಟ್ಟೆಯಿಂದ 5 ಸಾವಿರದಿಂದ 15 ಸಾವಿರ ಕ್ಯುಸೆಕ್ ನೀರನ್ನು ನದಿಗೆ ಹರಿಸಲಾಗಿದೆ.

5. ಕತಾರ್‌ನಲ್ಲಿರುವ ಅಲ್ ಉದೈದ್ ಅಮೇರಿಕ ವಾಯುನೆಲೆಯ ಮೇಲೆ ಇರಾನ್ ನಡೆಸಿದ ದಾಳಿಯ ನಂತರ ಜಾಗತಿಕ ತೈಲ ಬೆಲೆಗಳು ಐದು ವರ್ಷಗಳಲ್ಲಿ ನಿನ್ನೆ ಒಂದೇ ದಿನದಲ್ಲಿ ತೀವ್ರ ಕುಸಿತವನ್ನು ದಾಖಲಿಸಿದೆ.

6. ಕರ್ನಾಟಕ, ಮಧ್ಯಪ್ರದೇಶ, ಬಿಹಾರ, ಜಾಖಂಡ್, ಒಡಿಶಾ, ಛತ್ತೀಸ್‌ಗಢ, ಪಶ್ಚಿಮ ಬಂಗಾಳ, ಸಿಕ್ಕಿಂ, ಅರುಣಾಚಲ ಪ್ರದೇಶ, ಕೊಂಕಣ, ಗೋವಾ, ಮಹಾರಾಷ್ಟ್ರ, ಗುಜರಾತ್, ಹಿಮಾಚಲ ಪ್ರದೇಶ, ಉತ್ತರಾಖಂಡ, ಪಶ್ಚಿಮ ಉತ್ತರ ಪ್ರದೇಶ, ರಾಜಸ್ಥಾನ, ಕೇರಳದ ಕೆಲವು ಸ್ಥಳಗಳಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

7. ಅಯೋವಾದಲ್ಲಿ ನಾಳೆ ಆರಂಭವಾಗಲಿರುವ ಯುಎಸ್ ಓಪನ್ 2025 ಬ್ಯಾಡ್ಮಿಂಟನ್ ಪಂದ್ಯಾವಳಿಯ ಪುರುಷರ ಡಬಲ್ಸ್ ವಿಭಾಗದಲ್ಲಿ ಹರಿಹರನ್ ಅಂಶಕರುಣನ್ ಮತ್ತು ರೂಬನ್ ಕುಮಾರ್ ರೆಥಿನಸಬಪತಿ, ಭಾರತವನ್ನು ಮುನ್ನಡೆಸಲಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಈರುಳ್ಳಿ ಕೇವಲ ತರಕಾರಿಯಲ್ಲ ; ಅದ್ಭುತ ಔಷಧ

Published

on

ನಾವು ನಿತ್ಯವೂ ತಯಾರಿಸುವ ಅಡುಗೆ ಪದಾರ್ಥಗಳಿಗೆ ಈರುಳ್ಳಿಯನ್ನು ಹಾಕದಿದ್ದಾಗ ಒಂದು ರುಚಿಯಾದರೆ ಅದನ್ನು ಹಾಕಿದಾಗ ಆ ಪದಾರ್ಥದ ರುಚಿಯೇ ಬೇರೆಯಾಗುತ್ತದೆ. ನಾವು ಈರುಳ್ಳಿಯ ಗುಣಗಳು, ಅದರ ಉಪಯೋಗಗಳು ಮತ್ತು ಮನೆ ಮದ್ದುಗಳ ಬಗ್ಗೆ ತಿಳಿದುಕೊಳ್ಳೋಣ.

ಆಯುರ್ವೇದದಲ್ಲಿ ಈರುಳ್ಳಿಯ ಬಗ್ಗೆ ವಿಸ್ತೃತ ವಿವರಣೆ ಇದೆ. ಆಯುರ್ವೇದ ಗ್ರಂಥಗಳ ಪ್ರಕಾರ ಈರುಳ್ಳಿಗೆ ಬೆಳ್ಳುಳ್ಳಿಯ ಗುಣಗಳಿವೆ. ಆದರೆ ಬೆಳ್ಳುಳ್ಳಿಯಂತೆ ಇದು ಉಷ್ಣವಲ್ಲ. ಹಾಗಾಗಿ ಬೆಳ್ಳುಳ್ಳಿಯ ಅದ್ಭುತ ಗುಣಗಳನ್ನು ಪಡೆಯಬೇಕು ಎಂದಾದರೆ ಮತ್ತು ಬೆಳ್ಳುಳ್ಳಿಯನ್ನು ಸೇವಿಸಿದರೆ ಉಷ್ಣವಾಗುತ್ತದೆ ಎಂಬ ಯೋಚನೆ ಇದ್ದರೆ ಬದಲಿಗೆ ಈರುಳ್ಳಿಯನ್ನು ಬಳಸಬಹುದು.

ಭಾವ ಪ್ರಕಾಶ ನಿಘಂಟು ಎಂಬ ಗ್ರಂಥದಲ್ಲಿ “ಬಲವೀರ್ಯ ಕೈರೋ ಗುರುಃ” ಎಂದಿದ್ದಾರೆ. ಅಂದರೆ ಈರುಳ್ಳಿಯು ದೇಹದ ಬಲವನ್ನು, ವೀರ್ಯದ ಗುಣಮಟ್ಟವನ್ನು, ಲೈಂಗಿಕ ಶಕ್ತಿಯನ್ನು ಹೆಚ್ಚಿಸುತ್ತದೆ ಎಂದರ್ಥ. ಬಹುತೇಕ ಎಲ್ಲಾ ಆಯುರ್ವೇದ ಗ್ರಂಥಗಳಲ್ಲಿಯೂ ಈರುಳ್ಳಿಯಿಂದ ಲೈಂಗಿಕ ಶಕ್ತಿ ವೃದ್ಧಿಯಾಗುತ್ತದೆ ಎಂಬುದನ್ನು ಹೇಳಲಾಗಿದೆ. ಇದು ಚರ್ಮಕ್ಕೆ ಕೂಡ ಅತ್ಯಂತ ಅನುಕೂಲಕರವಾದದ್ದು. ಚರ್ಮವನ್ನು ಸ್ನಿಗ್ಧಗೊಳಿಸಿ ಒರಟುತನವನ್ನು ಹೋಗಲಾಡಿಸುತ್ತದೆ; ಚರ್ಮಕ್ಕೆ ಕಾಂತಿಯನ್ನು ಕೊಡುತ್ತದೆ; ಜೊತೆಗೆ ಚರ್ಮದ ಶುದ್ಧಿಯನ್ನೂ ಮಾಡುತ್ತದೆ ಎಂದು ವಿವರಿಸಲಾಗಿದೆ. ಈರುಳ್ಳಿಯನ್ನು ನಿಯಮಿತವಾಗಿ ಸೇವಿಸುವುದರಿಂದ ದೇಹದ ಬಾಹ್ಯ ಮತ್ತು ಆಂತರಿಕ ಕಾಂತಿ ಹೆಚ್ಚುತ್ತದೆ.

ಅಂದರೆ ಕೇವಲ ಸೌಂದರ್ಯವೃದ್ಧಿಯಷ್ಟೇ ಅಲ್ಲ ದೇಹದೊಳಗಿನ ರೋಗನಿರೋಧಕ ಶಕ್ತಿ ತುಂಬಾ ಚೆನ್ನಾಗಿ ಹೆಚ್ಚುತ್ತದೆ. ಈರುಳ್ಳಿಯು ಧ್ವನಿಗೆ ಸಂಬಂಧಿಸಿದ ಸಮಸ್ಯೆಗಳನ್ನು ಹೋಗಲಾಡಿಸಿ ಒಳ್ಳೆಯ ಧ್ವನಿಯನ್ನು ನೀಡುತ್ತದೆ ಎಂದು ವಿವರಿಸಲಾಗಿದೆ. ಹೀಗಾಗಿ ಹಾಡುಗಾರರು, ಅಧ್ಯಾಪಕರಂಥವರಿಗೆ ನಿಯಮಿತ ಈರುಳ್ಳಿ ಸೇವನೆ ಅನುಕೂಲಕರ. ಇದು ಕಣ್ಣಿನ ಆರೋಗ್ಯವನ್ನು ಹೆಚ್ಚಿಸುವುದರಿಂದ ಹತ್ತರಿಂದ ಹದಿನೈದು ಮಿಲೀ ಈರುಳ್ಳಿ ರಸವನ್ನು ಸುಮಾರು ಒಂದು ತಿಂಗಳು ದಿನಕ್ಕೊಮ್ಮೆ ಸೇವಿಸುವುದರಿಂದ ಚಿಕ್ಕಪುಟ್ಟ ಕಣ್ಣಿನ ತೊಂದರೆಗಳು ನಿವಾರಣೆಯಾಗುತ್ತವೆ. ಸ್ವಲ್ಪ ಸಿಹಿ ಇರುವ ಅಂದರೆ ಖಾರ ಕಡಿಮೆ ಇರುವ ಈರುಳ್ಳಿಯನ್ನು ಚಿಕ್ಕ ಚಿಕ್ಕ ತುಂಡುಗಳನ್ನಾಗಿ ಕತ್ತರಿಸಿ ತುಪ್ಪದಲ್ಲಿ ಹುರಿದು ನಿಯಮಿತವಾಗಿ ಸೇವಿಸಿದರೆ ಲೈಂಗಿಕ ಶಕ್ತಿಯ ವೃದ್ಧಿಯಾಗುತ್ತದೆ.

ಕೂದಲು ಉದುರುವುದನ್ನು ಕಡಿಮೆ ಮಾಡಲು ಈರುಳ್ಳಿಯು ಸಹಕಾರಿ. ಈರುಳ್ಳಿಯ ರಸ ತೆಗೆದು ತಲೆ ಸ್ನಾನ ಮಾಡುವ ಹತ್ತು ನಿಮಿಷ ಮೊದಲು ಕೂದಲಿನ ಬುಡಕ್ಕೆ ಹಚ್ಚಬೇಕು. ಇದರಿಂದ ಕೂದಲಿನ ಬೆಳವಣಿಗೆ ಚೆನ್ನಾಗಿ ಆಗಲು ಮತ್ತು ಕೂದಲು ಉದುರುವುದು ನಿಲ್ಲಲು ಸಹಾಯವಾಗುತ್ತದೆ. ಬೊಜ್ಜನ್ನು ಕಡಿಮೆ ಮಾಡಲು ಕೂಡ ಈರುಳ್ಳಿಯು ಸಹಕಾರಿ. ಬೆಳ್ಳುಳ್ಳಿಯ ಇನ್ನೊಂದು ಅದ್ಭುತ ಗುಣವೆಂದರೆ ಅದು ನರದ ಶಕ್ತಿಯನ್ನು ಹೆಚ್ಚಿಸುತ್ತದೆ. ಹಾಗಾಗಿ ಸಯಾಟಿಕಾದಂತಹ ಸಮಸ್ಯೆಗಳನ್ನು ಅನುಭವಿಸುತ್ತಿರುವವರಿಗೆ ಈರುಳ್ಳಿ ತುಂಬಾ ಲಾಭದಾಯಕ.

ಕಫದ ಸಮಸ್ಯೆಯಿಂದ ಬಳಲುತ್ತಿದ್ದು ಕಫ ಹೊರಗೆ ಬರುತ್ತಿಲ್ಲದಿದ್ದರೆ ಎರಡು ಚಮಚದಷ್ಟು ಈರುಳ್ಳಿ ರಸ, ಅರ್ಧ ಚಮಚದಷ್ಟು ಶುಂಠಿ ರಸ, ಅರ್ಧ ಚಮಚದಷ್ಟು ತುಳಸಿ ಎಲೆಗಳ ರಸ ಮತ್ತು ಒಂದು ಚಮಚ ಜೇನುತುಪ್ಪವನ್ನು ಸೇರಿಸಿ ದಿನಕ್ಕೆ ಒಂದು ಅಥವಾ ಎರಡು ಬಾರಿ ಸೇವಿಸಿದರೆ ಕಫ ಹೊರಗೆ ಬಂದು ಸಮಸ್ಯೆ ನಿವಾರಣೆಯಾಗುತ್ತದೆ.

ಈರುಳ್ಳಿ ಒಳ್ಳೆಯ ಜೀರ್ಣಕಾರಿಯೂ ಹೌದು ಹಾಗಾಗಿ ಅಜೀರ್ಣ ಇರುವವರಿಗೆ ಹೆಚ್ಚಿನ ಪ್ರಮಾಣದಲ್ಲಿ ಈರುಳ್ಳಿಯನ್ನು ಹಾಕಿ ಹೆಸರುಬೇಳೆಯ ತಿಳಿಸಾರು ಮಾಡಿ ಊಟಕ್ಕೆ ನೀಡಿದರೆ ಅಜೀರ್ಣದ ಸಮಸ್ಯೆ ತುಂಬಾ ಚೆನ್ನಾಗಿ ಹತೋಟಿಗೆ ಬರುತ್ತದೆ. ಜೊತೆಗೆ ಶಕ್ತಿ ವೃದ್ಧಿಯೂ ಆಗುತ್ತದೆ. ಒಟ್ಟಿನಲ್ಲಿ ಈರುಳ್ಳಿಯನ್ನು ಸರಿಯಾಗಿ ಬಳಸಿಕೊಂಡರೆ ಅದು ಕೇವಲ ತರಕಾರಿಯಲ್ಲ ಅದ್ಭುತ ಔಷಧ.(ಬರಹ-ಡಾ|| ವೆಂಕಟ್ರಮಣ ಹೆಗಡೆ
ವೇದ ವೆಲ್ನೆಸ್ ಸೆಂಟರ್, ನಿಸರ್ಗಮನೆ, ಶಿರಸಿ, ಉ.ಕನ್ನಡ)

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending