Connect with us

ನಿತ್ಯ ಭವಿಷ್ಯ

ಭವ್ಯ ಭವಿಷ್ಯದ ಕನಸು ನನಸಾಗಲು ಇಂದೇ ಕರೆ ಮಾಡಿ | 05-01-2020 ಭಾನುವಾರ

Published

on

ಶ್ರೀ ಕೇರಳ ಮಾಂತ್ರಿಕ ಜ್ಯೋತಿಷ್ಯ ಶಾಸ್ತ್ರಂಇವರು ಕೇರಳ ಭದ್ರಕಾಳಿ ಅಮ್ಮನವರ ಪರಮ ಭಕ್ತರ‌ ದೈವಜ್ಞ ಪಂಡಿತ್ :: ಲಕ್ಷ್ಮಿಕಾಂತ್ ಭಟ್9964584883

ಮೇಷ ರಾಶಿ

ಪರರ ವಿಷಯಗಳಲ್ಲಿ ಹೆಚ್ಚಿನ ಆಸಕ್ತಿ ವಹಿಸುವುದು ಬೇಡ. ನೀವು ಕೊಟ್ಟಿರುವ ಕೆಲಸವನ್ನು ಪೂರ್ಣ ಮಾಡಲು ತಯಾರಿ ನಡೆಸಿ ಇಲ್ಲವಾದಲ್ಲಿ ವಿಶ್ರಾಮ ತೆಗೆದುಕೊಳ್ಳುವುದು ಕಷ್ಟವಾಗಬಹುದು. ಆರ್ಥಿಕ ವ್ಯವಹಾರಗಳಲ್ಲಿ ಹಿರಿಯರನ್ನು ಸಂಪರ್ಕಿಸುವುದು ಸೂಕ್ತ. ಪತ್ನಿಯ ಮನೆ ಕಡೆಯಿಂದ ಬಳುವಳಿ ರೂಪದಲ್ಲಿ ಸೌಲತ್ತುಗಳು ದೊರೆಯಲಿದೆ.

ಜ್ಯೋತಿಷ್ಯರು ಲಕ್ಷ್ಮಿಕಾಂತ್ ಭಟ್
9964584883
ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿ

ವೃಷಭ ರಾಶಿ

ಉದ್ಯೋಗ ನಿಮಿತ್ತ ಪರಸ್ಥಳ ವಾಸ ಆಗಬಹುದಾದ ಸಾಧ್ಯತೆ ಕಾಣಬಹುದು. ಸ್ವತಂತ್ರ ಯೋಜನೆಗಳನ್ನು ಮಾಡುವ ನಿಮ್ಮ ಹಲವು ದಿನದ ಆಕಾಂಕ್ಷೆಗಳಿಗೆ ಮೂರ್ತಸ್ವರೂಪ ದೊರೆಯಲಿದೆ. ನಿಮ್ಮ ಚಿಂತನೆಗಳು ಸಕಾರಾತ್ಮಕವಾಗಿದ್ದು ಇವುಗಳು ಭವಿಷ್ಯಕ್ಕೆ ಉತ್ತಮ ರೂಪರೇಷೆಗಳನ್ನು ನೀಡಲಿದೆ.

ಜ್ಯೋತಿಷ್ಯರು ಲಕ್ಷ್ಮಿಕಾಂತ್ ಭಟ್
9964584883
ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿ

ಮಿಥುನ ರಾಶಿ

ಆದಾಯಗಳಲ್ಲಿ ಹೆಚ್ಚಳವಾಗುವ ಸಾಧ್ಯತೆ ಕಂಡುಬರುತ್ತದೆ. ಕೊಟ್ಟಿರುವ ಸಾಲಗಳನ್ನು ಯಶಸ್ವಿಯಾಗಿ ಮರುಪಾವತಿ ಮಾಡಿಕೊಳ್ಳುವಿರಿ. ಬ್ಯಾಂಕಿಂಗ್ ವ್ಯವಹಾರಗಳಲ್ಲಿ ಆದಷ್ಟು ಎಚ್ಚರಿಕೆ ಇರಲಿ. ಸಂಗಾತಿಯ ನಡುವೆ ಪ್ರೀತಿಯ ಭಾವನೆಗಳನ್ನು ವ್ಯಕ್ತಪಡಿಸುತ್ತೀರಿ.

ಜ್ಯೋತಿಷ್ಯರು ಲಕ್ಷ್ಮಿಕಾಂತ್ ಭಟ್
9964584883
ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿ

ಕರ್ಕಾಟಕ ರಾಶಿ

ಕೋಪ ವೇಷಗಳನ್ನು ಬದಿಗೊತ್ತಿ ಪ್ರೇಮದಿಂದ ವರ್ತಿಸಿ. ಮಕ್ಕಳೊಡನೆ ಸ್ನೇಹಿತರಂತೆ ನಿಮ್ಮ ವಿಚಾರಗಳನ್ನು ಮಂಡನೆ ಮಾಡುವುದು ಒಳ್ಳೆಯದು. ಉದ್ಯೋಗದಲ್ಲಿ ಸಹವರ್ತಿಗಳನ್ನು ಕಡೆಗಣಿಸುವುದು ಬೇಡ. ಎಲ್ಲಾ ವಿಚಾರಗಳು ತಿಳಿದಿದೆ ಎಂಬ ಭಾವನೆಯಲ್ಲಿ ಇರಬೇಡಿ ಕಲಿಯಲು ಪ್ರಯತ್ನಿಸುವುದು ಸೂಕ್ತ.

ಜ್ಯೋತಿಷ್ಯರು ಲಕ್ಷ್ಮಿಕಾಂತ್ ಭಟ್
9964584883
ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿ

ಸಿಂಹ ರಾಶಿ

ಶೈಕ್ಷಣಿಕ ಅಧ್ಯಯನಗಳು ಉತ್ತಮ ರೂಪದಲ್ಲಿ ಸಾಗಲಿದೆ. ಕ್ರಿಯಾಶೀಲತೆಗಳು ನಿಮ್ಮನ್ನು ಚೈತನ್ಯದಲ್ಲಿ ಇರಿಸುತ್ತದೆ. ನಿಗದಿತ ಸಮಯದಲ್ಲಿ ಈ ದಿನ ಕೆಲಸವನ್ನು ಪೂರ್ಣ ಮಾಡುವಿರಿ. ಕೆಲವು ಆಪಾದನೆಗಳಿಂದ ಮನಸ್ಸು ಗೊಂದಲವಾಗಬಹುದು ನಿಮ್ಮ ಬುದ್ಧಿವಂತಿಕೆಗೆ ಒತ್ತು ನೀಡುವುದು ಸೂಕ್ತ.

ಜ್ಯೋತಿಷ್ಯರು ಲಕ್ಷ್ಮಿಕಾಂತ್ ಭಟ್
9964584883
ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿ

ಕನ್ಯಾ ರಾಶಿ

ಸಂಗಾತಿಯ ನಡುವೆ ಇರುವ ಭಿನ್ನಾಭಿಪ್ರಾಯಗಳನ್ನು ಸರಿಪಡಿಸಿಕೊಳ್ಳುವ ಗುಣ ಬೆಳೆಸಿಕೊಳ್ಳಿ. ಪ್ರವಾಸದ ಯೋಜನೆಗೆ ಮೂರ್ತಸ್ವರೂಪ ದೊರೆಯಲಿದೆ. ಅತಿ ವಿನಯದಿಂದ ವರ್ತಿಸುವ ಜನಗಳು ನಿಮ್ಮನ್ನು ಮೋಸ ಗೊಳಿಸಬಹುದು ಎಚ್ಚರವಿರಲಿ.

ಜ್ಯೋತಿಷ್ಯರು ಲಕ್ಷ್ಮಿಕಾಂತ್ ಭಟ್
9964584883
ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿ

ತುಲಾ ರಾಶಿ

ಈ ದಿನ ದೈವ ದೇವಸ್ಥಾನಗಳಿಗೆ ಭೇಟಿ ನೀಡುವ ಸಾಧ್ಯತೆ ಕಂಡುಬರುತ್ತದೆ. ಕುಟುಂಬದಲ್ಲಿ ಶುಭ ಕಾರ್ಯದ ಬಗ್ಗೆ ಚಿಂತನೆ ನಡೆಯುತ್ತದೆ. ಉದ್ಯೋಗಸ್ಥರಿಗೆ ಉತ್ತಮ ಅವಕಾಶಗಳು ಮತ್ತು ಅಂದುಕೊಂಡ ಸ್ಥಾನದಲ್ಲಿ ಮರೆಯುವಂತಹ ಸುಸಂದರ್ಭ ಬರಲಿದೆ. ಆರ್ಥಿಕ ವ್ಯವಹಾರಗಳು ನಿಮ್ಮ ಕೆಲವು ತಪ್ಪುಗಳಿಂದ ನಷ್ಟವಾಗುವ ಸಾಧ್ಯತೆ ಕಾಣಬಹುದು.

ಜ್ಯೋತಿಷ್ಯರು ಲಕ್ಷ್ಮಿಕಾಂತ್ ಭಟ್
9964584883
ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿ

ವೃಶ್ಚಿಕ ರಾಶಿ

ವ್ಯಾಜ್ಯಗಳನ್ನು ಪರಿಹರಿಸಲು ಹೆಚ್ಚಿನ ಶ್ರಮ ಪಡುವಿರಿ. ನಿಮ್ಮ ವಿಚಾರಗಳಿಗೆ ಬೆಲೆ ನೀಡಿಲ್ಲ ಎಂಬ ಭಾವನೆಯನ್ನು ಬಿಡಿ ಕೆಲಸದಲ್ಲಿ ತೊಡಗಿ ಮುಂದೆ ತಾನಾಗಿಯೇ ಎಲ್ಲರೂ ಪ್ರಶಂಸೆ ನೀಡಲಿದ್ದಾರೆ. ಆರೋಗ್ಯದಲ್ಲಿ ಹೆಚ್ಚಿನ ಗಮನ ವಹಿಸಬೇಕಾದ ಸಂದರ್ಭವಿದು. ಉದರ ಸಂಬಂಧಿತ ಬಾದೆಗಳು ಬರಬಹುದು ಎಚ್ಚರ.

ಜ್ಯೋತಿಷ್ಯರು ಲಕ್ಷ್ಮಿಕಾಂತ್ ಭಟ್
9964584883
ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿ

ಧನಸ್ಸು ರಾಶಿ

ಅನಗತ್ಯವಾಗಿ ಮೂರನೆಯ ವ್ಯಕ್ತಿಗಳಾಗಿ ಇನ್ನೊಬ್ಬರ ವಿಚಾರಗಳಲ್ಲಿ ಪಾಲ್ಗೊಳ್ಳ ಬೇಡಿ. ವ್ಯವಹಾರಗಳಲ್ಲಿ ಬಾಲಿಶವಾಗಿ ವರ್ತಿಸುವುದು ಸರಿಯಲ್ಲ. ನಿಮ್ಮ ಕಾರ್ಯಗಳನ್ನು ನೀವೇ ಮಾಡಿಕೊಳ್ಳಲು ಮುಂದಾಗಿ ಇನ್ನೊಬ್ಬರ ಸಹಾಯಕ್ಕಾಗಿ ಕಾಯುತ್ತಾ ಕೊಡುವುದು ಸರಿ ಕಾಣುವುದಿಲ್ಲ. ನಿಮ್ಮಲ್ಲಿನ ಪ್ರತಿಭೆಗೆ ಈ ದಿನ ಸೂಕ್ತ ವೇದಿಕೆ ಸಿಗುವ ಸಾಧ್ಯತೆಯಿದೆ.

ಜ್ಯೋತಿಷ್ಯರು ಲಕ್ಷ್ಮಿಕಾಂತ್ ಭಟ್
9964584883
ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿ

ಮಕರ ರಾಶಿ

ಈ ದಿನದ ವೇಳಾಪಟ್ಟಿ ಬದಲಾವಣೆಯ ಆಗುವ ಸಾಧ್ಯತೆಯಿದೆ. ಕುಟುಂಬದಲ್ಲಿನ ಸಮಸ್ಯೆಗಳನ್ನು ಪರಸ್ಪರ ಚರ್ಚಿಸಿ ಸರಿ ಪಡಿಸಿಕೊಳ್ಳಬೇಕಾಗಿದೆ. ಮಕ್ಕಳಿಂದ ಮನೆಯಲ್ಲಿ ಸಂತಸದ ವಾತಾವರಣ ಕಂಡುಬರುತ್ತದೆ. ಚಂಚಲ ಮನಸ್ಸನ್ನು ತೆಗೆದುಹಾಕಿ ಮಾನಸಿಕ ಸಮತೋಲನವನ್ನು ಕಾಪಾಡಿಕೊಳ್ಳಿ. ಉದ್ಯೋಗದಲ್ಲಿರುವ ಅಸ್ಥಿರತೆಯನ್ನು ಸರಿಪಡಿಸಿಕೊಳ್ಳುವ ವ್ಯವಸ್ಥೆ ಮಾಡಿಕೊಳ್ಳಿ.

ಜ್ಯೋತಿಷ್ಯರು ಲಕ್ಷ್ಮಿಕಾಂತ್ ಭಟ್
9964584883
ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿ

ಕುಂಭ ರಾಶಿ

ಈ ದಿನ ನಿಮ್ಮ ಕೆಲವು ನಿರ್ಧಾರಗಳು ಬದಲಾವಣೆಗೆ ಮಾಡಿಕೊಳ್ಳುವ ವ್ಯವಸ್ಥೆ ಮಾಡುವಿರಿ. ಸದಾ ನಿಮ್ಮ ಹಿಂದೆ ಬೆಂಬಲಿಗರು ದೂರ ಹೋಗುವ ಸಾಧ್ಯತೆ ಕಂಡುಬರುತ್ತದೆ. ನಿಮ್ಮ ಕಾರ್ಯಯೋಜನೆಗಳಲ್ಲಿ ಕುಟುಂಬ ಮತ್ತು ಸಹೋದ್ಯೋಗಿಗಳನ್ನು ವಿಶ್ವಾಸದಿಂದ ತೆಗೆದುಕೊಂಡು ಮುನ್ನಡೆ ಸಾಧಿಸುವುದು ಅಗತ್ಯವಿದೆ. ಪತ್ನಿಯ ಸಂಗಡ ಕಿರಿಕಿರಿ ಮಾಡಿಕೊಳ್ಳುವ ಸಾಧ್ಯತೆ.

ಜ್ಯೋತಿಷ್ಯರು ಲಕ್ಷ್ಮಿಕಾಂತ್ ಭಟ್
9964584883
ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿ

ಮೀನ ರಾಶಿ

ನಿಮ್ಮ ಯೋಜನೆಗಳಲ್ಲಿ ಕೆಲವರು ಅವಿರತವಾಗಿ ತಡೆಹಿಡಿಯುವ ಸಾಧ್ಯತೆಗಳು ಕಾಣಬಹುದಾಗಿದೆ. ನಿಮ್ಮ ದೌರ್ಬಲ್ಯಗಳನ್ನು ಅಸ್ತ್ರವಾಗಿ ಪ್ರಯೋಗಿಸಬಹುದು ಆದಷ್ಟು ಎಚ್ಚರಿಕೆಯ ನಡೆ ಅಗತ್ಯವಿದೆ. ಹೂಡಿಕೆ ಮತ್ತು ಯೋಜನೆಗಳನ್ನು ಸಂಪೂರ್ಣ ಜ್ಞಾನ ಪಡೆದು ಮಾಡುವುದು ಒಳಿತು. ವಿನಾಕಾರಣ ಕಾದಾಟ ಮಾಡುವ ಮನಸ್ಥಿತಿಯಿಂದ ನಿಮ್ಮ ಮೇಲೆ ಎರಗುವ ಜನಗಳಿಂದ ದೂರವಿರಿ. ಕುಲದೇವತಾರಾಧನೆ ಮಾಡುವುದು ಒಳಿತು.

ಜ್ಯೋತಿಷ್ಯರು ಲಕ್ಷ್ಮಿಕಾಂತ್ ಭಟ್
9964584883
ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿ

ಜ್ಯೋತಿಷ್ಯರು ಲಕ್ಷ್ಮಿಕಾಂತ್ ಭಟ್
ನಿಮ್ಮ ಸಮಸ್ಯೆಗಳು ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಪರಿಹಾರ ನಿಶ್ಚಿತ.
ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ಆರೋಗ್ಯ, ಪ್ರೇಮ ವಿಚಾರ, ದಾಂಪತ್ಯ ಕಲಹ, ಇಷ್ಟಾರ್ಥಸಿದ್ಧಿಗಳು ಹೀಗೆ ಹತ್ತು-ಹಲವು ಗುಪ್ತ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ಸೂಚಿಸುವರು.

ಭವ್ಯ ಭವಿಷ್ಯದ ಕನಸು ನನಸಾಗಲು
ಇಂದೇ ಕರೆ ಮಾಡಿ.
9964584883

ಅಂಕಣ

ದೀಪಾವಳಿ ವಿಶೇಷಾಂಕ | ದೇವನಗರಿ ಸುದ್ದಿದಿನ ಪತ್ರಿಕೆಯಿಂದ ಕತೆ- ಕವಿತೆ- ಲೇಖನ- ರೂಪದರ್ಶಿ ಫೋಟೋ ಗಳಿಗೆ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ: ಪ್ರಿಯ ಓದುಗರೆ, ಬೆಳಕಿನ ಹಬ್ಬ ದೀಪಾವಳಿಯ ಪ್ರಯುಕ್ತ ದೇವನಗರಿ ಸುದ್ದಿದಿನ – ಕನ್ನಡ ದಿನ ಪತ್ರಿಕೆ ಹಾಗೂ ಶ್ಯಾಮ್ ಪ್ರಕಾಶನದವತಿಯಿಂದ ‘ ದೀಪಾವಳಿ ವಿಶೇಷಾಂಕ’-2026ನ್ನು ತರಲಾಗುತ್ತಿದೆ.

ಈ‌ ಹಿನ್ನೆಲೆಯಲ್ಲಿ ದೀಪಾವಳಿ ವಿಷೇಶಾಂಕ 2026ರ ವಿಭಾಗಕ್ಕೆ ಕತೆ, ಕವಿತೆ ಹಾಗೂ ಲೇಖನ ಹಾಗೂ ರೂಪದರ್ಶಿಗಳ ಛಾಯಾಚಿತ್ರಗಳನ್ನು ಆಹ್ವಾನಿಸಿದ್ದೇವೆ.

ಕತೆ – ಕವಿತೆಗಳನ್ನು ಕಳುಹಿಸಲು ಇರುವ ನಿಯಮಗಳು

ಕತೆ/ಕವಿತೆ ಸ್ವತಂತ್ರ ರಚನೆಯಾಗಿರಬೇಕು. ಈ ಮೊದಲು ಯಾವ ಮಾಧ್ಯಮಗಳಲ್ಲಿಯೂ ಪ್ರಕಟ ಅಥವಾ ಪ್ರಸಾರ ಆಗಿರಬಾರದು.

ಕತೆ 1500 ಸಾವಿರ ಪದಗಳ ಮಿತಿಯಲ್ಲಿರಲಿ. ಕವಿತೆಗೆ 40 ಸಾಲಿನ ಮಿತಿಯಿರಲಿ, ನುಡಿ ಅಥವಾ ಬರಹ ತಂತ್ರಾಂಶದಲ್ಲಿ ಇಲ್ಲವೆ ಯೂನಿಕೋಡ್‌ನಲ್ಲಿ ಇರಬೇಕು. ವಯಸ್ಸಿನ ಮಿತಿ ಇರುವುದಿಲ್ಲ.

ಕತೆ/ಕವಿತೆ ಇರುವ ಪುಟದಲ್ಲಿ ಹೆಸರು, ವಿವರ ಬರೆಯುವಂತಿಲ್ಲ. ಪ್ರತ್ಯೇಕ ಪುಟದಲ್ಲಿ ಹೆಸರು, ಅಂಚೆ ವಿಳಾಸ, ಮೊಬೈಲ್ ನಂಬರ್, ಇ-ಮೇಲ್ ವಿಳಾಸ ಒದಗಿಸಬೇಕು.

ಇತ್ತೀಚಿನ ಪಾಸ್‌ಪೋರ್ಟ್ ಅಳತೆಯ ವರ್ಣಮಯ ಭಾವಚಿತ್ರದೊಂದಿಗೆ 100 ಪದಗಳ ಒಳಗೆ ಕಿರು ಪರಿಚಯ ಕಳುಹಿಸಬೇಕು.

ಸ್ಪರ್ಧೆಗೆ ಕಳುಹಿಸಿರುವ ಬರಹಗಳನ್ನು ಹಿಂದಿರುಗಿಸುವುದಿಲ್ಲ. ಬರಹಗಳು ಕಡ್ಡಾಯವಾಗಿ ಎಂಎಸ್ ವರ್ಡ್ ಫೈಲ್ (MS word File) ನಲ್ಲಿರಲಿ.

ಬರಹ ಮತ್ತು ಫೋಟೋಗಳನ್ನು ಇ-ಮೇಲ್ ಮೂಲಕವಷ್ಟೇ ಕಳಿಸಿ.

ತೀರ್ಪುಗಾರರ ತೀರ್ಮಾನವೇ ಅಂತಿಮ.

ಲೇಖನಗಳಿಗೆ ಆಹ್ವಾನ : ವೈಚಾರಿಕತೆ, ವಿಮರ್ಶೆ, ಕಾನೂನು, ಸಾಹಿತ್ಯ, ತಂತ್ರಜ್ಞಾನ, ವಿಜ್ಞಾನ, ಡಿಜಿಟಲ್ ಮಾಧ್ಯಮ, ಸಿನೆಮಾ, ಪ್ರೇಮಪತ್ರ, ಕೃಷಿ, ರಾಜಕೀಯ, ಕಲೆ, ಆರೋಗ್ಯ, ಪ್ರವಾಸ, ಅಡುಗೆ, ಫೋಟೋಗ್ರಫಿ, ವೈಲ್ಡ್ ಲೈಫ್, ಹಾಸ್ಯ ಕುರಿತಾದ ಲೇಖನಗಳನ್ನು 450 ಪದಗಳನ್ನು ಮೀರದಂತೆ ಬರೆದು ಕಳುಹಿಸಿ.

ಹಾಗೆಯೇ, ವಿಶೇಷಾಂಕದ ಮುಖಪುಟದ ರೂಪದರ್ಶಿಯಾಗಲು ಅವಕಾಶವನ್ನು ಕಲ್ಪಸಿಲಾಗಿದೆ. ಆಸಕ್ತ ರೂಪದರ್ಶಿಗಳು ಸ್ಟುಡಿಯೋ ಅಥವಾ ಫೋಟೋಗ್ರಾಫರ್ ಮೂಲಕ ತೆಗೆದ ‘6*4 ಅಳತೆಯ ಮುದ್ರಿತ ಫೋಟೋ ಮತ್ತು ಇ-ಮೇಲ್ ಮೂಲಕವೂ ಕಳಿಸಬಹುದು. 80 ಪದಗಳಮಿತಿಯೊಳಗೆ ನಿಮ್ಮ ಪರಿಚಯದೊಂದಿಗೆ, ಒಬ್ಬರು 4 ಫೋಟೋ ಕಳುಹಿಸಬೇಕು. ವಯಸ್ಸಿನ ಮಿತಿಯಿಲ್ಲ ಇರುವುದಿಲ್ಲ.

ಕತೆಯ ವಿಜೇತರಿಗೆ ಪ್ರಥಮ ಬಹುಮಾನ : 10000, ದ್ವಿತೀಯ ಬಹುಮಾನ : 5000, ತೃತೀಯ ಬಹುಮಾನ : 3000 ಹಾಗೂ ಕವಿತೆ ಬಹುಮಾನ ವಿಜೇತರಿಗೆ ಪ್ರಥಮ ಬಹುಮಾನ : 5000 ದ್ವಿತೀಯ ಬಹುಮಾನ : 3000 ಹಾಗೂ ತೃತೀಯ ಬಹುಮಾನ : ₹2000 ಸಿಗಲಿದೆ.

ಆಗಸ್ಟ್‌ 30ರೊಳಗೆ ಬರಹಗಳನ್ನು ಇ-ಮೇಲ್‌: deepasuddidina@gmail.com ಗೆ ಕಳುಹಿಸಲು ತಿಳಿಸಿದೆ. ಈ ಕುರಿತು ಹೆಚ್ಚಿನ ಮಾಹಿತಿಗಾಗಿ :9980346243 ಹಾಗೂ visit: www.suddidina.com ಅನ್ನು ವೀಕ್ಷಿಸಬಹುದಾಗಿದೆ.

ಕಚೇರಿ ವಿಳಾಸ 

ದೇವನಗರಿ ಸುದ್ದಿದಿನ- ಕನ್ನಡ ದಿನ ಪತ್ರಿಕೆ
ದೀಪಾವಳಿ ವಿಶೇಷಾಂಕ ವಿಭಾಗ
#3231/1, ಸಂಜೀವ ಸದನ, 11ನೇ ಮುಖ್ಯರಸ್ತೆ, 4 ನೇ ಅಡ್ಡರಸ್ತೆ, ಎಂಸಿಸಿ ಬಿ ಬ್ಲಾಕ್, ದಾವಣಗೆರೆ, 577004

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ಕ್ರೀಡೆ

ರಾಜ್ಯದ ವಿವಿಧ ನೀರಾವರಿ ಯೋಜನೆಗಳಿಗೆ ಹೆಚ್ಚಿನ ಅನುದಾನ ; ಇ-ಖಾತೆ ಅಭಿಯಾನ ಹಾಗೂ ಇತರೆ ‌ಪ್ರಮುಖ ಸುದ್ದಿಗಳು

Published

on

ರಾಜ್ಯದ ವಿವಿಧ ನೀರಾವರಿ ಯೋಜನೆಗಳಿಗೆ ಹೆಚ್ಚಿನ ಅನುದಾನ ; ಇ-ಖಾತೆ ಅಭಿಯಾನ ಹಾಗೂ ಇತರೆ ‌ಪ್ರಮುಖ ಸುದ್ದಿಗಳು

1. ಮುಖ್ಯಮಂತ್ರಿ ಸಿದ್ದರಾಮಯ್ಯ ನವದೆಹಲಿ ತಲುಪಿದ್ದಾರೆ. ಇಂದು ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿ ಮಾಡಿ, 5 ಪ್ರಮುಖ ಮಸೂದೆಗಳಿಗೆ ಅಂಗೀಕಾರ ನೀಡುವಂತೆ ಮನವಿ ಮಾಡಲಿದ್ದಾರೆ ಎಂದು ಉನ್ನತ ಮೂಲಗಳು ತಿಳಿಸಿವೆ. ಭದ್ರಾ ಮೇಲ್ದಂಡೆ ಯೋಜನೆ ಸೇರಿದಂತೆ ರಾಜ್ಯದ ವಿವಿಧ ನೀರಾವರಿ ಯೋಜನೆಗಳಿಗೆ, ಹೆಚ್ಚಿನ ಅನುದಾನ ಬಿಡುಗಡೆ ಮಾಡುವಂತೆ, ಕೇಂದ್ರದ ಜಲಶಕ್ತಿ ಖಾತೆ ಸಚಿವರನ್ನು ಕೋರುವುದಾಗಿ, ಇದೇ ವೇಳೆ ಸಾಮಾಜಿಕ ಜಾಲತಾಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

2. ರಾಜ್ಯದ ಗ್ರಾಮ ಪಂಚಾಯ್ತಿಗಳ ಹಂತದಲ್ಲಿ ಜುಲೈ 15ರಿಂದ, ಸಾರ್ವಜನಿಕರ ಆಸ್ತಿಗಳ ಇ-ಖಾತೆ ರೂಪಿಸುವ ಅಭಿಯಾನವನ್ನು ಕಂದಾಯ ಇಲಾಖೆ ಆಯೋಜಿಸಲಿದೆ ಎಂದು ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.

3. ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆಗೆ ಸಂಬಂಧಿಸಿ, ಇಲ್ಲಿಯವರೆಗೆ ಹೆಸರು ನೋಂದಾಯಿಸದವರು, ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ, ಈ ತಿಂಗಳ 30ರವರೆಗೆ ಮಾಹಿತಿ ನೀಡಲು ಅವಕಾಶವಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಎ.ಬಿ.ಬಸವರಾಜು ತಿಳಿಸಿದ್ದಾರೆ.

4. ಕಾವೇರಿ ಜಲಾನಯನ ಪ್ರದೇಶದಲ್ಲಿ ವ್ಯಾಪಕವಾಗಿ ಸುರಿಯುತ್ತಿರುವ ಮಳೆಯಿಂದ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆ.ಆರ್.ಎಸ್. ಅಣೆಕಟ್ಟೆ ಭಾಗಶ: ಭರ್ತಿಯಾಗಿದ್ದು, ಒಳ ಹರಿವು ಇನ್ನಷ್ಟು ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಅಣೆಕಟ್ಟೆಯಿಂದ 5 ಸಾವಿರದಿಂದ 15 ಸಾವಿರ ಕ್ಯುಸೆಕ್ ನೀರನ್ನು ನದಿಗೆ ಹರಿಸಲಾಗಿದೆ.

5. ಕತಾರ್‌ನಲ್ಲಿರುವ ಅಲ್ ಉದೈದ್ ಅಮೇರಿಕ ವಾಯುನೆಲೆಯ ಮೇಲೆ ಇರಾನ್ ನಡೆಸಿದ ದಾಳಿಯ ನಂತರ ಜಾಗತಿಕ ತೈಲ ಬೆಲೆಗಳು ಐದು ವರ್ಷಗಳಲ್ಲಿ ನಿನ್ನೆ ಒಂದೇ ದಿನದಲ್ಲಿ ತೀವ್ರ ಕುಸಿತವನ್ನು ದಾಖಲಿಸಿದೆ.

6. ಕರ್ನಾಟಕ, ಮಧ್ಯಪ್ರದೇಶ, ಬಿಹಾರ, ಜಾಖಂಡ್, ಒಡಿಶಾ, ಛತ್ತೀಸ್‌ಗಢ, ಪಶ್ಚಿಮ ಬಂಗಾಳ, ಸಿಕ್ಕಿಂ, ಅರುಣಾಚಲ ಪ್ರದೇಶ, ಕೊಂಕಣ, ಗೋವಾ, ಮಹಾರಾಷ್ಟ್ರ, ಗುಜರಾತ್, ಹಿಮಾಚಲ ಪ್ರದೇಶ, ಉತ್ತರಾಖಂಡ, ಪಶ್ಚಿಮ ಉತ್ತರ ಪ್ರದೇಶ, ರಾಜಸ್ಥಾನ, ಕೇರಳದ ಕೆಲವು ಸ್ಥಳಗಳಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

7. ಅಯೋವಾದಲ್ಲಿ ನಾಳೆ ಆರಂಭವಾಗಲಿರುವ ಯುಎಸ್ ಓಪನ್ 2025 ಬ್ಯಾಡ್ಮಿಂಟನ್ ಪಂದ್ಯಾವಳಿಯ ಪುರುಷರ ಡಬಲ್ಸ್ ವಿಭಾಗದಲ್ಲಿ ಹರಿಹರನ್ ಅಂಶಕರುಣನ್ ಮತ್ತು ರೂಬನ್ ಕುಮಾರ್ ರೆಥಿನಸಬಪತಿ, ಭಾರತವನ್ನು ಮುನ್ನಡೆಸಲಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಈರುಳ್ಳಿ ಕೇವಲ ತರಕಾರಿಯಲ್ಲ ; ಅದ್ಭುತ ಔಷಧ

Published

on

ನಾವು ನಿತ್ಯವೂ ತಯಾರಿಸುವ ಅಡುಗೆ ಪದಾರ್ಥಗಳಿಗೆ ಈರುಳ್ಳಿಯನ್ನು ಹಾಕದಿದ್ದಾಗ ಒಂದು ರುಚಿಯಾದರೆ ಅದನ್ನು ಹಾಕಿದಾಗ ಆ ಪದಾರ್ಥದ ರುಚಿಯೇ ಬೇರೆಯಾಗುತ್ತದೆ. ನಾವು ಈರುಳ್ಳಿಯ ಗುಣಗಳು, ಅದರ ಉಪಯೋಗಗಳು ಮತ್ತು ಮನೆ ಮದ್ದುಗಳ ಬಗ್ಗೆ ತಿಳಿದುಕೊಳ್ಳೋಣ.

ಆಯುರ್ವೇದದಲ್ಲಿ ಈರುಳ್ಳಿಯ ಬಗ್ಗೆ ವಿಸ್ತೃತ ವಿವರಣೆ ಇದೆ. ಆಯುರ್ವೇದ ಗ್ರಂಥಗಳ ಪ್ರಕಾರ ಈರುಳ್ಳಿಗೆ ಬೆಳ್ಳುಳ್ಳಿಯ ಗುಣಗಳಿವೆ. ಆದರೆ ಬೆಳ್ಳುಳ್ಳಿಯಂತೆ ಇದು ಉಷ್ಣವಲ್ಲ. ಹಾಗಾಗಿ ಬೆಳ್ಳುಳ್ಳಿಯ ಅದ್ಭುತ ಗುಣಗಳನ್ನು ಪಡೆಯಬೇಕು ಎಂದಾದರೆ ಮತ್ತು ಬೆಳ್ಳುಳ್ಳಿಯನ್ನು ಸೇವಿಸಿದರೆ ಉಷ್ಣವಾಗುತ್ತದೆ ಎಂಬ ಯೋಚನೆ ಇದ್ದರೆ ಬದಲಿಗೆ ಈರುಳ್ಳಿಯನ್ನು ಬಳಸಬಹುದು.

ಭಾವ ಪ್ರಕಾಶ ನಿಘಂಟು ಎಂಬ ಗ್ರಂಥದಲ್ಲಿ “ಬಲವೀರ್ಯ ಕೈರೋ ಗುರುಃ” ಎಂದಿದ್ದಾರೆ. ಅಂದರೆ ಈರುಳ್ಳಿಯು ದೇಹದ ಬಲವನ್ನು, ವೀರ್ಯದ ಗುಣಮಟ್ಟವನ್ನು, ಲೈಂಗಿಕ ಶಕ್ತಿಯನ್ನು ಹೆಚ್ಚಿಸುತ್ತದೆ ಎಂದರ್ಥ. ಬಹುತೇಕ ಎಲ್ಲಾ ಆಯುರ್ವೇದ ಗ್ರಂಥಗಳಲ್ಲಿಯೂ ಈರುಳ್ಳಿಯಿಂದ ಲೈಂಗಿಕ ಶಕ್ತಿ ವೃದ್ಧಿಯಾಗುತ್ತದೆ ಎಂಬುದನ್ನು ಹೇಳಲಾಗಿದೆ. ಇದು ಚರ್ಮಕ್ಕೆ ಕೂಡ ಅತ್ಯಂತ ಅನುಕೂಲಕರವಾದದ್ದು. ಚರ್ಮವನ್ನು ಸ್ನಿಗ್ಧಗೊಳಿಸಿ ಒರಟುತನವನ್ನು ಹೋಗಲಾಡಿಸುತ್ತದೆ; ಚರ್ಮಕ್ಕೆ ಕಾಂತಿಯನ್ನು ಕೊಡುತ್ತದೆ; ಜೊತೆಗೆ ಚರ್ಮದ ಶುದ್ಧಿಯನ್ನೂ ಮಾಡುತ್ತದೆ ಎಂದು ವಿವರಿಸಲಾಗಿದೆ. ಈರುಳ್ಳಿಯನ್ನು ನಿಯಮಿತವಾಗಿ ಸೇವಿಸುವುದರಿಂದ ದೇಹದ ಬಾಹ್ಯ ಮತ್ತು ಆಂತರಿಕ ಕಾಂತಿ ಹೆಚ್ಚುತ್ತದೆ.

ಅಂದರೆ ಕೇವಲ ಸೌಂದರ್ಯವೃದ್ಧಿಯಷ್ಟೇ ಅಲ್ಲ ದೇಹದೊಳಗಿನ ರೋಗನಿರೋಧಕ ಶಕ್ತಿ ತುಂಬಾ ಚೆನ್ನಾಗಿ ಹೆಚ್ಚುತ್ತದೆ. ಈರುಳ್ಳಿಯು ಧ್ವನಿಗೆ ಸಂಬಂಧಿಸಿದ ಸಮಸ್ಯೆಗಳನ್ನು ಹೋಗಲಾಡಿಸಿ ಒಳ್ಳೆಯ ಧ್ವನಿಯನ್ನು ನೀಡುತ್ತದೆ ಎಂದು ವಿವರಿಸಲಾಗಿದೆ. ಹೀಗಾಗಿ ಹಾಡುಗಾರರು, ಅಧ್ಯಾಪಕರಂಥವರಿಗೆ ನಿಯಮಿತ ಈರುಳ್ಳಿ ಸೇವನೆ ಅನುಕೂಲಕರ. ಇದು ಕಣ್ಣಿನ ಆರೋಗ್ಯವನ್ನು ಹೆಚ್ಚಿಸುವುದರಿಂದ ಹತ್ತರಿಂದ ಹದಿನೈದು ಮಿಲೀ ಈರುಳ್ಳಿ ರಸವನ್ನು ಸುಮಾರು ಒಂದು ತಿಂಗಳು ದಿನಕ್ಕೊಮ್ಮೆ ಸೇವಿಸುವುದರಿಂದ ಚಿಕ್ಕಪುಟ್ಟ ಕಣ್ಣಿನ ತೊಂದರೆಗಳು ನಿವಾರಣೆಯಾಗುತ್ತವೆ. ಸ್ವಲ್ಪ ಸಿಹಿ ಇರುವ ಅಂದರೆ ಖಾರ ಕಡಿಮೆ ಇರುವ ಈರುಳ್ಳಿಯನ್ನು ಚಿಕ್ಕ ಚಿಕ್ಕ ತುಂಡುಗಳನ್ನಾಗಿ ಕತ್ತರಿಸಿ ತುಪ್ಪದಲ್ಲಿ ಹುರಿದು ನಿಯಮಿತವಾಗಿ ಸೇವಿಸಿದರೆ ಲೈಂಗಿಕ ಶಕ್ತಿಯ ವೃದ್ಧಿಯಾಗುತ್ತದೆ.

ಕೂದಲು ಉದುರುವುದನ್ನು ಕಡಿಮೆ ಮಾಡಲು ಈರುಳ್ಳಿಯು ಸಹಕಾರಿ. ಈರುಳ್ಳಿಯ ರಸ ತೆಗೆದು ತಲೆ ಸ್ನಾನ ಮಾಡುವ ಹತ್ತು ನಿಮಿಷ ಮೊದಲು ಕೂದಲಿನ ಬುಡಕ್ಕೆ ಹಚ್ಚಬೇಕು. ಇದರಿಂದ ಕೂದಲಿನ ಬೆಳವಣಿಗೆ ಚೆನ್ನಾಗಿ ಆಗಲು ಮತ್ತು ಕೂದಲು ಉದುರುವುದು ನಿಲ್ಲಲು ಸಹಾಯವಾಗುತ್ತದೆ. ಬೊಜ್ಜನ್ನು ಕಡಿಮೆ ಮಾಡಲು ಕೂಡ ಈರುಳ್ಳಿಯು ಸಹಕಾರಿ. ಬೆಳ್ಳುಳ್ಳಿಯ ಇನ್ನೊಂದು ಅದ್ಭುತ ಗುಣವೆಂದರೆ ಅದು ನರದ ಶಕ್ತಿಯನ್ನು ಹೆಚ್ಚಿಸುತ್ತದೆ. ಹಾಗಾಗಿ ಸಯಾಟಿಕಾದಂತಹ ಸಮಸ್ಯೆಗಳನ್ನು ಅನುಭವಿಸುತ್ತಿರುವವರಿಗೆ ಈರುಳ್ಳಿ ತುಂಬಾ ಲಾಭದಾಯಕ.

ಕಫದ ಸಮಸ್ಯೆಯಿಂದ ಬಳಲುತ್ತಿದ್ದು ಕಫ ಹೊರಗೆ ಬರುತ್ತಿಲ್ಲದಿದ್ದರೆ ಎರಡು ಚಮಚದಷ್ಟು ಈರುಳ್ಳಿ ರಸ, ಅರ್ಧ ಚಮಚದಷ್ಟು ಶುಂಠಿ ರಸ, ಅರ್ಧ ಚಮಚದಷ್ಟು ತುಳಸಿ ಎಲೆಗಳ ರಸ ಮತ್ತು ಒಂದು ಚಮಚ ಜೇನುತುಪ್ಪವನ್ನು ಸೇರಿಸಿ ದಿನಕ್ಕೆ ಒಂದು ಅಥವಾ ಎರಡು ಬಾರಿ ಸೇವಿಸಿದರೆ ಕಫ ಹೊರಗೆ ಬಂದು ಸಮಸ್ಯೆ ನಿವಾರಣೆಯಾಗುತ್ತದೆ.

ಈರುಳ್ಳಿ ಒಳ್ಳೆಯ ಜೀರ್ಣಕಾರಿಯೂ ಹೌದು ಹಾಗಾಗಿ ಅಜೀರ್ಣ ಇರುವವರಿಗೆ ಹೆಚ್ಚಿನ ಪ್ರಮಾಣದಲ್ಲಿ ಈರುಳ್ಳಿಯನ್ನು ಹಾಕಿ ಹೆಸರುಬೇಳೆಯ ತಿಳಿಸಾರು ಮಾಡಿ ಊಟಕ್ಕೆ ನೀಡಿದರೆ ಅಜೀರ್ಣದ ಸಮಸ್ಯೆ ತುಂಬಾ ಚೆನ್ನಾಗಿ ಹತೋಟಿಗೆ ಬರುತ್ತದೆ. ಜೊತೆಗೆ ಶಕ್ತಿ ವೃದ್ಧಿಯೂ ಆಗುತ್ತದೆ. ಒಟ್ಟಿನಲ್ಲಿ ಈರುಳ್ಳಿಯನ್ನು ಸರಿಯಾಗಿ ಬಳಸಿಕೊಂಡರೆ ಅದು ಕೇವಲ ತರಕಾರಿಯಲ್ಲ ಅದ್ಭುತ ಔಷಧ.(ಬರಹ-ಡಾ|| ವೆಂಕಟ್ರಮಣ ಹೆಗಡೆ
ವೇದ ವೆಲ್ನೆಸ್ ಸೆಂಟರ್, ನಿಸರ್ಗಮನೆ, ಶಿರಸಿ, ಉ.ಕನ್ನಡ)

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending