ನಿತ್ಯ ಭವಿಷ್ಯ
ರಾಶಿ ಭವಿಷ್ಯ ವಾಣಿ ಹಾಗೂ ಸಮಸ್ಯೆಗಳ ಪರಿಹಾರ ಮಾರ್ಗದರ್ಶನ : 31/07/2019 ಬುಧವಾರ
ದೈವಶಕ್ತಿಯನ್ನು ಆಹ್ವಾನಿಸಿಕೊಂಡು ನಿಮ್ಮ ಎಲ್ಲಾ ಸಮಸ್ಯೆಗಳಿಗೆ ಸೂಕ್ತವಾದ ಶಾಶ್ವತವಾದ ಪರಿಹಾರ ಕಂಡುಕೊಳ್ಳಬಹುದು. ಇಂದೇ ಕರೆಮಾಡಿ ಪಂಡಿತ್ ಶ್ರೀ ಸೂರ್ಯ ನಾರಾಯಣಭಟ್ ಪ್ರಸಿದ್ಧ ಜ್ಯೋತಿಷ್ಯರು 9900494333.
ಷಣ್ಮುಖ ಧ್ಯಾನಂ : ಧ್ಯಾಯೇತ್ ಷಣ್ಮುಖ ಮಿಂದುಕೋಟಿ ಸದೃಶಂ ರತ್ನ ಪ್ರಭಾಶೋಭಿತಂ | ಬಾಲಾರ್ಕದ್ಯುತಿ ಷಟಕಿರೀಟ ವಿಲಸತ್ ಕೇಯೂರಹಾರಾನ್ವಿತಂ | ಕರ್ಣಾಲಂಬಿತ ಕುಂಡಲ ಪ್ರವಿಲಸತ್ ಗಂಡಸ್ಥಲಾ ಶೋಭಿತಂ | ಕಿಂಚತ್ಕಂಕಣ ಕಿಂಕಿಣೀ ರವಯುತಂ ಶೃಂಗಾರ ಮೂರ್ತಿಂ ಭಜೇ ||
ಮೇಷ ರಾಶಿ
ನಿಮ್ಮ ಕೆಲಸ ವ್ಯಾಪಾರದಲ್ಲಿ ಆದಾಯ ಹೆಚ್ಚಿರುತ್ತದೆ ವೃತ್ತಿಜೀವನದಲ್ಲಿ ಏಳ್ಗೆ ಕಾಣಬಹುದು. ಆರೋಗ್ಯದಲ್ಲಿ ಏರುಪೇರು ಉಂಟಾಗಬಹುದು. ವೈವಾಹಿಕ ಜೀವನದಲ್ಲಿ ನೀವು ಹೆಚ್ಚು ಸಮಯ ಮೀಸಲಿಡಬೇಕಾಗುತ್ತದೆ. ಕುಟುಂಬದ ಖರ್ಚು ಹೆಚ್ಚಾಗಿ ಕಂಡುಬರುತ್ತದೆ. ಧನ ವ್ಯಯ ಉಂಟಾಗಬಹುದು. ವಿದ್ಯಾರ್ಥಿಗಳಿಗೆ ಮನಸ್ಸಿನ ಉಲ್ಲಾಸ ಕಾಣಬಹುದು. ( ಪರಿಹಾರಕ್ಕೆ ಕರೆಮಾಡಿ) 900494333.
ವೃಷಭ ರಾಶಿ
ನಿಮಗೆ ಗುರುಬಲ ಕಾಣುವುದರಿಂದ ವಿವಾಹಯೋಗ ಕೂಡಿಬರುತ್ತದೆ. ವಿದ್ಯಾರ್ಥಿಗಳು ಗೆಳೆಯರ ಸಹವಾಸದಿಂದ ಓದಿನಲ್ಲಿ ಗಮನ ಹರಿಯುವುದಿಲ್ಲ. ಉದ್ಯೋಗಸ್ಥರಿಗೆ ಕೆಲಸದಲ್ಲಿ ಹಣಕಾಸಿನ ಲಾಭ ಮತ್ತು ಶತ್ರುಗಳ ಕಾಟ ಇರುತ್ತದೆ. ಕುಟುಂಬದ ವೈ ಮನಸ್ಸುಗಳಿಗೆ ತಲೆಕೆಡಿಸಿಕೊಳ್ಳಬೇಡಿ. ತಾಳ್ಮೆಯಿಂದ ವಿಚಾರ ಮಾಡಿ ನಿಮಗೆ ಒಳ್ಳೆಯ ಪ್ರತಿಫಲ ಬರಲಿದೆ (ಪರಿಹಾರಕ್ಕೆ ಕರೆಮಾಡಿ) 9900494333.
ಮಿಥುನ ರಾಶಿ
ವೈವಾಹಿಕ ಜೀವನದಲ್ಲಿ ಸ್ವಲ್ಪ ಜಗಳ ಬಂದರು ಸಾಮಾಜಿಕವಾಗಿ ಹಣಕಾಸಿನ ವಿಷಯದಲ್ಲಿ ನೀವು ಪ್ರಬಲತೆಯನ್ನು ಸಾಧಿಸುವಿರಿ. ಉದ್ಯೋಗಸ್ಥರಿಗೆ ಎಲ್ಲಿಲ್ಲದ ಅವಕಾಶಗಳು ಒಲಿದು ಬರಲಿವೆ. ನೀವು ಊಹಿಸದ ಆರ್ಥಿಕ ಪ್ರಯೋಜನಗಳ ಜೊತೆ ಹೊಸ ಉತ್ತೇಜನದಿಂದ ನಿಮ್ಮ ಮನಸ್ಸು ಉಲ್ಲಾಸಭರಿತವಾಗಿರುತ್ತದೆ. ಆರೋಗ್ಯದಲ್ಲಿ ನಿಧಾನವಾಗಿ ಚೇತರಿಕೆಗೊಳ್ಳುತ್ತದೆ. ಕುಟುಂಬದಲ್ಲಿ ಬೇಸರವಿರುತ್ತದೆ. (ಪರಿಹಾರಕ್ಕೆ ಕರೆಮಾಡಿ) 9900494333.
ಕರ್ಕಾಟಕ ರಾಶಿ
ಉದ್ಯೋಗದಲ್ಲಿ ನೀವು ಅನುಭವಿಸುತ್ತಿರುವ ಕಷ್ಟಗಳಿಂದ ಹಂತಹಂತವಾಗಿ ಹೊರಬರುತ್ತೀರಿ. ಕುಟುಂಬದ ವಿಷಯಗಳಲ್ಲಿ ಅನುಭವಿಸಿದ ನೋವುಗಳು ನಿಮ್ಮಿಂದ ದೂರವಾಗುತ್ತವೆ.ಆರೋಗ್ಯದಲ್ಲಿ ಜಾಗೂರುಕತೆಯಿಂದ ಇರಬೇಕು. ಅನಿರೀಕ್ಷಿತ ಪ್ರಯಾಣ ಕಿರಿಕಿರಿ ಉಂಟು ಮಾಡುತ್ತದೆ. ಧನಲಾಭವಾಗುವ ಲಕ್ಷಣವಿದೆ. ಕೈಗೊಂಡ ಕಾರ್ಯಗಳು ಸಂಪೂರ್ಣವಾಗುತ್ತದೆ. (ಪರಿಹಾರಕ್ಕೆ ಕರೆಮಾಡಿ) 9900494333.
ಸಿಂಹ ರಾಶಿ
ಮಕ್ಕಳ ವಿದ್ಯಾಭ್ಯಾಸದ ಪ್ರಗತಿಯಿಂದ ಸಂತಸವಿರುತ್ತದೆ. ಕೆಲಸ ಕಾರ್ಯದಲ್ಲಿ ನಿರೀಕ್ಷಿತವಾಗಿ ಆದಾಯವು ಸಕಾಲದಲ್ಲಿ ಪ್ರವಹಿಸಿ ನೀವು ಸಂತುಷ್ಟರಾಗುವಿರಿ. ಅನಾರೋಗ್ಯ ಚೋರಭಯ ನಿಮ್ಮನ್ನು ಕಾಡುತ್ತದೆ. ಮನೆಯಲ್ಲಿ ಶುಭಕಾರ್ಯಗಳ ಕುರಿತು ಹೆಚ್ಚಾಗಿ ಚರ್ಚೆ. ಶತ್ರುಗಳು ಸಿಗುತ್ತಾರೆ. ಮನೆ ಕಟ್ಟುವ ಭಾಗ್ಯ ಇದೆ. (ಪರಿಹಾರಕ್ಕೆ ಕರೆಮಾಡಿ) 9900494333.
ಕನ್ಯಾ ರಾಶಿ
ಉದ್ಯೋಗದಲ್ಲಿ ತಾವು ಅಂದುಕೊಂಡಂತಹ ಕಾರ್ಯಗಳು ಮಂದಗತಿಯಲ್ಲಿ ಸಾಗುವುದು. ದೇಹಾರೋಗ್ಯ, ಪ್ರಯಾಣದಲ್ಲಿ ಮುನ್ನೆಚ್ಚರಿಕೆ ಕ್ರಮ ವಹಿಸಬೇಕು. ಕುಟುಂಬದಲ್ಲಿ ಮಾಡದೇ ಇರುವ ತಪ್ಪಿಗೆ ಅಪಮಾನವಾಗುತ್ತದೆ. ಅದೃಷ್ಟ ಬಲಕ್ಕಿಂತಲೂ ಸ್ವಯಂ ಪ್ರಯತ್ನ ನಡೆಸಬಹುದು. ವಿವಾಹವಾಗುವವರಿಗೆ ಬಹು ದಿನಗಳ ಯೋಚಿತ ಕಾರ್ಯಗಳು ಕೈಗೂಡುವುದು. (ಪರಿಹಾರಕ್ಕೆ ಕರೆಮಾಡಿ) 9900494333.
ತುಲಾ ರಾಶಿ
ಉದ್ಯೋಗದಲ್ಲಿ ನೀವು ಮೊದಲೇ ಪ್ರಯತ್ನಿಸಿದ ಕೆಲಸಗಳು ಒಂದೊಂದಾಗಿ ಪೂರ್ಣ ಗೊಂಡು ಯಶಸ್ಸಿನ ಮೆಟ್ಟಿಲುಗಳನ್ನು ಹತ್ತುವಿರಿ. ಜಿರ್ಣಾಂಗದ ತೊಂದರೆಗೆ ಸಿಲುಕಿ ಆರೋಗ್ಯ ಹದಗೆಡುತ್ತದೆ. ಕುಟುಂಬದ ಎಲ್ಲಾ ಲೆಕ್ಕಾಚಾರ ಉಲ್ಟಾ ಪಲ್ಟಾ ಆಗಬಹುದು. ದಾಂಪತ್ಯದಲ್ಲಿ ಮಡದಿಯೊಂದಿಗೆ ಸುಖ-ಸಂತೋಷದಿಂದ ಇರಬಹುದು. ಕಂಕಣ ಭಾಗ್ಯ ಕೂಡಿ ವಿವಾಹ ಕಾರ್ಯಕ್ರಮ ಜರುಗುವ ಸಮಯ ಬರಬಹುದು. ಹಣಕಾಸು ಸಮಸ್ಯೆಗಳು ಕಾಡಿಸುತ್ತದೆ. (ಪರಿಹಾರಕ್ಕೆ ಕರೆಮಾಡಿ) 9900494333.
ವೃಶ್ಚಿಕ ರಾಶಿ
ಉದ್ಯೋಗಸ್ಥರು ಯಾವುದೇ ವಿವೇಚನೆ ಇಲ್ಲದೆ ಅತಿಯಾದ ಆತ್ಮವಿಶ್ವಾಸ ಹೊಂದುವವರು ಕಷ್ಟ ಪಡಬೇಕಾಗುತ್ತದೆ. ವಿದ್ಯಾಭ್ಯಾಸ ಕಲಿಕೆಯಲ್ಲಿ ಹೆಚ್ಚಿನ ಶ್ರಮ ಪ್ರತಿಫಲ ಕಾಣಿಸಿಕೊಳ್ಳುತ್ತದೆ. ಶೀತ ಕಫದಿಂದ ವ್ಯಾಧಿಗಳಿಂದ ಆರೋಗ್ಯ ತೊಂದರೆ ಆಗಬಹುದು. ಶತ್ರುಗಳ ಪೀಡೆ ಇರುವಂತೆ ಕಾಣಿಸುತ್ತವೆ. ಮಕ್ಕಳ ವಿಷಯದಲ್ಲಿ ಹಿರಿಯರಿಂದ ಮನಸ್ತಾಪ ಉಂಟಾಗುತ್ತದೆ. ಪ್ರೇಮಿಗಳಲ್ಲಿ ಆಂತರಿಕ ವೈ ಮನಸ್ಸು ಇರುತ್ತದೆ. (ಪರಿಹಾರಕ್ಕೆ ಕರೆಮಾಡಿ) 9900494333.
ಧನಸ್ಸುರಾಶಿ
ಆರೋಗ್ಯ ಭಾಗದಲ್ಲಿ ಗ್ರಹಗಳ ದುಃಸ್ಥಿತಿಯಿಂದಾಗಿ ಸಂಕಷ್ಟದ ಪರಿಸ್ಥಿತಿ ಎದುರಾಗಬಹುದು. ಉದ್ಯೋಗಿಗಳಿಗೆ ವ್ಯಾಪಾರಿಗಳಿಗೆ ಹೆಚ್ಚು ಕೆಲಸ ಹೆಚ್ಚು ಲಾಭ ಒದಗಿ ಬರುತ್ತದೆ. ಕುಟುಂಬದವರಿಗೆ ಆರ್ಥಿಕವಾಗಿ ಸಹಕರಿಸಲು ಹಲವು ತಿರುಗಾಟಗಳು ನಡೆಸಬೇಕಾಗುತ್ತದೆ. ಮದುವೆ ವಿಷಯದಲ್ಲಿ ಹಲವು ಜನರು ಬಂದು ಹೋದರು ಬೇಗನೆ ಕೈಗೂಡುವುದಿಲ್ಲ. ವಿದ್ಯಾಭ್ಯಾಸ ನೆಮ್ಮದಿ ಸಿಗುತ್ತದೆ. ಹಣಕಾಸಿನಲ್ಲಿ ಉತ್ತಮ ಲಾಭವಿದೆ. (ಪರಿಹಾರಕ್ಕೆ ಕರೆಮಾಡಿ) 9900494333.
ಮಕರ ರಾಶಿ
ಉದ್ಯೋಗದಲ್ಲಿ ನಿಮ್ಮ ಉನ್ನತಿಯನ್ನು ಕಂಡು ಅಸೂಯೆ ಪಡುತ್ತಾರೆ. ಕುಟುಂಬದಲ್ಲಿ ಕೆಲವೊಮ್ಮೆ ಮಾತಿನಿಂದ ನಿಷ್ಠುರಗಳು ಸಂಭವಿಸುತ್ತದೆ. ವಿದ್ಯಾಭ್ಯಾಸ ಕಲಿಯಲು ನಿರಾಯಾಸವಾಗಿ ಆಸಕ್ತಿ ಒದಗಿ ಬರುತ್ತದೆ. ವಿವಾಹದಲ್ಲಿ ಅಂದುಕೊಂಡಂತೆ ಸಂಬಂಧಗಳು ಸಿಗುವುದಿಲ್ಲ. ಹಣಕಾಸಿನಲ್ಲಿ ವಿಶೇಷ ಫಲಗಳು ಇರುತ್ತದೆ. ತಾಳ್ಮೆಯಿಂದ ಇರಬೇಕು. ( ಪರಿಹಾರಕ್ಕೆ ಕರೆಮಾಡಿ) 9900494333.
ಕುಂಭ ರಾಶಿ
ವಿದ್ಯಾಭ್ಯಾಸದಲ್ಲಿ ಉತ್ತಮ ಜವಾಬ್ದಾರಿ ಕಾಣಿಸಿಕೊಳ್ಳುತ್ತದೆ. ಮನೆ ಕಟ್ಟುವವರಿಗೆ ಕಿರಿಕಿರಿ ಉಂಟಾಗುವ ಸಾಧ್ಯತೆಗಳು ಹೆಚ್ಚು. ಪ್ರೀತಿ ಮಾಡುವವರು ಅಗಲುವಿಕೆಯಿಂದ ವಿಚಲಿತರಾಗುವ ಸಂದರ್ಭ ಬರುವುದು. ಮನೆಯಲ್ಲಿ ಪತ್ನಿ ಪುತ್ರಾದಿಗಳ ಸಹಕಾರದಿಂದ ಸಂಸಾರ ಸುಖಮಯವಾಗಿರುತ್ತದೆ. ಉದ್ಯೋಗಿಗಳು ಶುಭದಾಯಕವಾಗಿ ಎಲ್ಲಾ ಕೆಲಸ ಕಾರ್ಯಗಳು ನಿರ್ವಹಿಸುತ್ತಾರೆ. ಬಹಳ ಆಯಾಸದಿಂದ ಆರೋಗ್ಯದಲ್ಲಿ ನಿಶ್ಯಕ್ತಿ ಕಾಣಿಸುತ್ತದೆ ಮದುವೆ ಕಾರ್ಯಗಳು ವಿಳಂಬ. ಧನಕನಕ ಉತ್ತಮವಾಗಿರುತ್ತದೆ. (ಪರಿಹಾರಕ್ಕೆ ಕರೆಮಾಡಿ) 9900494333.
ಮೀನಾ ರಾಶಿ
ಉದ್ಯೋಗದಲ್ಲಿ ನೀವು ಎಣಿಸಿಕೊಂಡ ಹಳೆಯ ಬಾಕಿ ಕೆಲಸಗಳು ಅತಿ ಶೀಘ್ರದಲ್ಲಿ ನೆರವೇರುವವು. ಬಂಧುಗಳಲ್ಲಿ ನೆರೆಹೊರೆಯವರಲ್ಲಿ ಉತ್ತಮ ಹೆಸರು ಪಡೆಯುವಿರಿ. ಮನೆಯಲ್ಲಿ ಶುಭ ವಾತವರಣವಿರುತ್ತದೆ. ಬರಬೇಕಾದ ಬಾಕಿ ಹಣಕಾಸು ವಾಪಸ್ಸು ಬರುವಂತಹ ಸೂಚನೆಗಳು ಕಂಡುಬರುತ್ತದೆ. ವಿವಾಹ ವಿಚಾರಗಳು ಮುಂದೂಡಲ್ಪಡುತ್ತದೆ. (ಪರಿಹಾರಕ್ಕೆ ಕರೆಮಾಡಿ) 9900494333.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂಕಣ
ದೀಪಾವಳಿ ವಿಶೇಷಾಂಕ | ದೇವನಗರಿ ಸುದ್ದಿದಿನ ಪತ್ರಿಕೆಯಿಂದ ಕತೆ- ಕವಿತೆ- ಲೇಖನ- ರೂಪದರ್ಶಿ ಫೋಟೋ ಗಳಿಗೆ ಆಹ್ವಾನ
ಸುದ್ದಿದಿನ,ದಾವಣಗೆರೆ: ಪ್ರಿಯ ಓದುಗರೆ, ಬೆಳಕಿನ ಹಬ್ಬ ದೀಪಾವಳಿಯ ಪ್ರಯುಕ್ತ ದೇವನಗರಿ ಸುದ್ದಿದಿನ – ಕನ್ನಡ ದಿನ ಪತ್ರಿಕೆ ಹಾಗೂ ಶ್ಯಾಮ್ ಪ್ರಕಾಶನದವತಿಯಿಂದ ‘ ದೀಪಾವಳಿ ವಿಶೇಷಾಂಕ’-2026ನ್ನು ತರಲಾಗುತ್ತಿದೆ.
ಈ ಹಿನ್ನೆಲೆಯಲ್ಲಿ ದೀಪಾವಳಿ ವಿಷೇಶಾಂಕ 2026ರ ವಿಭಾಗಕ್ಕೆ ಕತೆ, ಕವಿತೆ ಹಾಗೂ ಲೇಖನ ಹಾಗೂ ರೂಪದರ್ಶಿಗಳ ಛಾಯಾಚಿತ್ರಗಳನ್ನು ಆಹ್ವಾನಿಸಿದ್ದೇವೆ.
ಕತೆ – ಕವಿತೆಗಳನ್ನು ಕಳುಹಿಸಲು ಇರುವ ನಿಯಮಗಳು
ಕತೆ/ಕವಿತೆ ಸ್ವತಂತ್ರ ರಚನೆಯಾಗಿರಬೇಕು. ಈ ಮೊದಲು ಯಾವ ಮಾಧ್ಯಮಗಳಲ್ಲಿಯೂ ಪ್ರಕಟ ಅಥವಾ ಪ್ರಸಾರ ಆಗಿರಬಾರದು.
ಕತೆ 1500 ಸಾವಿರ ಪದಗಳ ಮಿತಿಯಲ್ಲಿರಲಿ. ಕವಿತೆಗೆ 40 ಸಾಲಿನ ಮಿತಿಯಿರಲಿ, ನುಡಿ ಅಥವಾ ಬರಹ ತಂತ್ರಾಂಶದಲ್ಲಿ ಇಲ್ಲವೆ ಯೂನಿಕೋಡ್ನಲ್ಲಿ ಇರಬೇಕು. ವಯಸ್ಸಿನ ಮಿತಿ ಇರುವುದಿಲ್ಲ.
ಕತೆ/ಕವಿತೆ ಇರುವ ಪುಟದಲ್ಲಿ ಹೆಸರು, ವಿವರ ಬರೆಯುವಂತಿಲ್ಲ. ಪ್ರತ್ಯೇಕ ಪುಟದಲ್ಲಿ ಹೆಸರು, ಅಂಚೆ ವಿಳಾಸ, ಮೊಬೈಲ್ ನಂಬರ್, ಇ-ಮೇಲ್ ವಿಳಾಸ ಒದಗಿಸಬೇಕು.
ಇತ್ತೀಚಿನ ಪಾಸ್ಪೋರ್ಟ್ ಅಳತೆಯ ವರ್ಣಮಯ ಭಾವಚಿತ್ರದೊಂದಿಗೆ 100 ಪದಗಳ ಒಳಗೆ ಕಿರು ಪರಿಚಯ ಕಳುಹಿಸಬೇಕು.
ಸ್ಪರ್ಧೆಗೆ ಕಳುಹಿಸಿರುವ ಬರಹಗಳನ್ನು ಹಿಂದಿರುಗಿಸುವುದಿಲ್ಲ. ಬರಹಗಳು ಕಡ್ಡಾಯವಾಗಿ ಎಂಎಸ್ ವರ್ಡ್ ಫೈಲ್ (MS word File) ನಲ್ಲಿರಲಿ.
ಬರಹ ಮತ್ತು ಫೋಟೋಗಳನ್ನು ಇ-ಮೇಲ್ ಮೂಲಕವಷ್ಟೇ ಕಳಿಸಿ.
ಲೇಖನಗಳಿಗೆ ಆಹ್ವಾನ : ವೈಚಾರಿಕತೆ, ವಿಮರ್ಶೆ, ಕಾನೂನು, ಸಾಹಿತ್ಯ, ತಂತ್ರಜ್ಞಾನ, ವಿಜ್ಞಾನ, ಡಿಜಿಟಲ್ ಮಾಧ್ಯಮ, ಸಿನೆಮಾ, ಪ್ರೇಮಪತ್ರ, ಕೃಷಿ, ರಾಜಕೀಯ, ಕಲೆ, ಆರೋಗ್ಯ, ಪ್ರವಾಸ, ಅಡುಗೆ, ಫೋಟೋಗ್ರಫಿ, ವೈಲ್ಡ್ ಲೈಫ್, ಹಾಸ್ಯ ಕುರಿತಾದ ಲೇಖನಗಳನ್ನು 450 ಪದಗಳನ್ನು ಮೀರದಂತೆ ಬರೆದು ಕಳುಹಿಸಿ.
ಹಾಗೆಯೇ, ವಿಶೇಷಾಂಕದ ಮುಖಪುಟದ ರೂಪದರ್ಶಿಯಾಗಲು ಅವಕಾಶವನ್ನು ಕಲ್ಪಸಿಲಾಗಿದೆ. ಆಸಕ್ತ ರೂಪದರ್ಶಿಗಳು ಸ್ಟುಡಿಯೋ ಅಥವಾ ಫೋಟೋಗ್ರಾಫರ್ ಮೂಲಕ ತೆಗೆದ ‘6*4 ಅಳತೆಯ ಮುದ್ರಿತ ಫೋಟೋ ಮತ್ತು ಇ-ಮೇಲ್ ಮೂಲಕವೂ ಕಳಿಸಬಹುದು. 80 ಪದಗಳಮಿತಿಯೊಳಗೆ ನಿಮ್ಮ ಪರಿಚಯದೊಂದಿಗೆ, ಒಬ್ಬರು 4 ಫೋಟೋ ಕಳುಹಿಸಬೇಕು. ವಯಸ್ಸಿನ ಮಿತಿಯಿಲ್ಲ ಇರುವುದಿಲ್ಲ.
ಕತೆಯ ವಿಜೇತರಿಗೆ ಪ್ರಥಮ ಬಹುಮಾನ : 10000, ದ್ವಿತೀಯ ಬಹುಮಾನ : 5000, ತೃತೀಯ ಬಹುಮಾನ : 3000 ಹಾಗೂ ಕವಿತೆ ಬಹುಮಾನ ವಿಜೇತರಿಗೆ ಪ್ರಥಮ ಬಹುಮಾನ : 5000 ದ್ವಿತೀಯ ಬಹುಮಾನ : 3000 ಹಾಗೂ ತೃತೀಯ ಬಹುಮಾನ : ₹2000 ಸಿಗಲಿದೆ.
ಆಗಸ್ಟ್ 30ರೊಳಗೆ ಬರಹಗಳನ್ನು ಇ-ಮೇಲ್: deepasuddidina@gmail.com ಗೆ ಕಳುಹಿಸಲು ತಿಳಿಸಿದೆ. ಈ ಕುರಿತು ಹೆಚ್ಚಿನ ಮಾಹಿತಿಗಾಗಿ :9980346243 ಹಾಗೂ visit: www.suddidina.com ಅನ್ನು ವೀಕ್ಷಿಸಬಹುದಾಗಿದೆ.
ಕಚೇರಿ ವಿಳಾಸ
ದೇವನಗರಿ ಸುದ್ದಿದಿನ- ಕನ್ನಡ ದಿನ ಪತ್ರಿಕೆ
ದೀಪಾವಳಿ ವಿಶೇಷಾಂಕ ವಿಭಾಗ
#3231/1, ಸಂಜೀವ ಸದನ, 11ನೇ ಮುಖ್ಯರಸ್ತೆ, 4 ನೇ ಅಡ್ಡರಸ್ತೆ, ಎಂಸಿಸಿ ಬಿ ಬ್ಲಾಕ್, ದಾವಣಗೆರೆ, 577004
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಕ್ರೀಡೆ
ರಾಜ್ಯದ ವಿವಿಧ ನೀರಾವರಿ ಯೋಜನೆಗಳಿಗೆ ಹೆಚ್ಚಿನ ಅನುದಾನ ; ಇ-ಖಾತೆ ಅಭಿಯಾನ ಹಾಗೂ ಇತರೆ ಪ್ರಮುಖ ಸುದ್ದಿಗಳು
ರಾಜ್ಯದ ವಿವಿಧ ನೀರಾವರಿ ಯೋಜನೆಗಳಿಗೆ ಹೆಚ್ಚಿನ ಅನುದಾನ ; ಇ-ಖಾತೆ ಅಭಿಯಾನ ಹಾಗೂ ಇತರೆ ಪ್ರಮುಖ ಸುದ್ದಿಗಳು
1. ಮುಖ್ಯಮಂತ್ರಿ ಸಿದ್ದರಾಮಯ್ಯ ನವದೆಹಲಿ ತಲುಪಿದ್ದಾರೆ. ಇಂದು ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿ ಮಾಡಿ, 5 ಪ್ರಮುಖ ಮಸೂದೆಗಳಿಗೆ ಅಂಗೀಕಾರ ನೀಡುವಂತೆ ಮನವಿ ಮಾಡಲಿದ್ದಾರೆ ಎಂದು ಉನ್ನತ ಮೂಲಗಳು ತಿಳಿಸಿವೆ. ಭದ್ರಾ ಮೇಲ್ದಂಡೆ ಯೋಜನೆ ಸೇರಿದಂತೆ ರಾಜ್ಯದ ವಿವಿಧ ನೀರಾವರಿ ಯೋಜನೆಗಳಿಗೆ, ಹೆಚ್ಚಿನ ಅನುದಾನ ಬಿಡುಗಡೆ ಮಾಡುವಂತೆ, ಕೇಂದ್ರದ ಜಲಶಕ್ತಿ ಖಾತೆ ಸಚಿವರನ್ನು ಕೋರುವುದಾಗಿ, ಇದೇ ವೇಳೆ ಸಾಮಾಜಿಕ ಜಾಲತಾಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
2. ರಾಜ್ಯದ ಗ್ರಾಮ ಪಂಚಾಯ್ತಿಗಳ ಹಂತದಲ್ಲಿ ಜುಲೈ 15ರಿಂದ, ಸಾರ್ವಜನಿಕರ ಆಸ್ತಿಗಳ ಇ-ಖಾತೆ ರೂಪಿಸುವ ಅಭಿಯಾನವನ್ನು ಕಂದಾಯ ಇಲಾಖೆ ಆಯೋಜಿಸಲಿದೆ ಎಂದು ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.
3. ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆಗೆ ಸಂಬಂಧಿಸಿ, ಇಲ್ಲಿಯವರೆಗೆ ಹೆಸರು ನೋಂದಾಯಿಸದವರು, ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ, ಈ ತಿಂಗಳ 30ರವರೆಗೆ ಮಾಹಿತಿ ನೀಡಲು ಅವಕಾಶವಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಎ.ಬಿ.ಬಸವರಾಜು ತಿಳಿಸಿದ್ದಾರೆ.
4. ಕಾವೇರಿ ಜಲಾನಯನ ಪ್ರದೇಶದಲ್ಲಿ ವ್ಯಾಪಕವಾಗಿ ಸುರಿಯುತ್ತಿರುವ ಮಳೆಯಿಂದ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆ.ಆರ್.ಎಸ್. ಅಣೆಕಟ್ಟೆ ಭಾಗಶ: ಭರ್ತಿಯಾಗಿದ್ದು, ಒಳ ಹರಿವು ಇನ್ನಷ್ಟು ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಅಣೆಕಟ್ಟೆಯಿಂದ 5 ಸಾವಿರದಿಂದ 15 ಸಾವಿರ ಕ್ಯುಸೆಕ್ ನೀರನ್ನು ನದಿಗೆ ಹರಿಸಲಾಗಿದೆ.
5. ಕತಾರ್‌ನಲ್ಲಿರುವ ಅಲ್ ಉದೈದ್ ಅಮೇರಿಕ ವಾಯುನೆಲೆಯ ಮೇಲೆ ಇರಾನ್ ನಡೆಸಿದ ದಾಳಿಯ ನಂತರ ಜಾಗತಿಕ ತೈಲ ಬೆಲೆಗಳು ಐದು ವರ್ಷಗಳಲ್ಲಿ ನಿನ್ನೆ ಒಂದೇ ದಿನದಲ್ಲಿ ತೀವ್ರ ಕುಸಿತವನ್ನು ದಾಖಲಿಸಿದೆ.
6. ಕರ್ನಾಟಕ, ಮಧ್ಯಪ್ರದೇಶ, ಬಿಹಾರ, ಜಾಖಂಡ್, ಒಡಿಶಾ, ಛತ್ತೀಸ್‌ಗಢ, ಪಶ್ಚಿಮ ಬಂಗಾಳ, ಸಿಕ್ಕಿಂ, ಅರುಣಾಚಲ ಪ್ರದೇಶ, ಕೊಂಕಣ, ಗೋವಾ, ಮಹಾರಾಷ್ಟ್ರ, ಗುಜರಾತ್, ಹಿಮಾಚಲ ಪ್ರದೇಶ, ಉತ್ತರಾಖಂಡ, ಪಶ್ಚಿಮ ಉತ್ತರ ಪ್ರದೇಶ, ರಾಜಸ್ಥಾನ, ಕೇರಳದ ಕೆಲವು ಸ್ಥಳಗಳಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
7. ಅಯೋವಾದಲ್ಲಿ ನಾಳೆ ಆರಂಭವಾಗಲಿರುವ ಯುಎಸ್ ಓಪನ್ 2025 ಬ್ಯಾಡ್ಮಿಂಟನ್ ಪಂದ್ಯಾವಳಿಯ ಪುರುಷರ ಡಬಲ್ಸ್ ವಿಭಾಗದಲ್ಲಿ ಹರಿಹರನ್ ಅಂಶಕರುಣನ್ ಮತ್ತು ರೂಬನ್ ಕುಮಾರ್ ರೆಥಿನಸಬಪತಿ, ಭಾರತವನ್ನು ಮುನ್ನಡೆಸಲಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಈರುಳ್ಳಿ ಕೇವಲ ತರಕಾರಿಯಲ್ಲ ; ಅದ್ಭುತ ಔಷಧ
ನಾವು ನಿತ್ಯವೂ ತಯಾರಿಸುವ ಅಡುಗೆ ಪದಾರ್ಥಗಳಿಗೆ ಈರುಳ್ಳಿಯನ್ನು ಹಾಕದಿದ್ದಾಗ ಒಂದು ರುಚಿಯಾದರೆ ಅದನ್ನು ಹಾಕಿದಾಗ ಆ ಪದಾರ್ಥದ ರುಚಿಯೇ ಬೇರೆಯಾಗುತ್ತದೆ. ನಾವು ಈರುಳ್ಳಿಯ ಗುಣಗಳು, ಅದರ ಉಪಯೋಗಗಳು ಮತ್ತು ಮನೆ ಮದ್ದುಗಳ ಬಗ್ಗೆ ತಿಳಿದುಕೊಳ್ಳೋಣ.
ಆಯುರ್ವೇದದಲ್ಲಿ ಈರುಳ್ಳಿಯ ಬಗ್ಗೆ ವಿಸ್ತೃತ ವಿವರಣೆ ಇದೆ. ಆಯುರ್ವೇದ ಗ್ರಂಥಗಳ ಪ್ರಕಾರ ಈರುಳ್ಳಿಗೆ ಬೆಳ್ಳುಳ್ಳಿಯ ಗುಣಗಳಿವೆ. ಆದರೆ ಬೆಳ್ಳುಳ್ಳಿಯಂತೆ ಇದು ಉಷ್ಣವಲ್ಲ. ಹಾಗಾಗಿ ಬೆಳ್ಳುಳ್ಳಿಯ ಅದ್ಭುತ ಗುಣಗಳನ್ನು ಪಡೆಯಬೇಕು ಎಂದಾದರೆ ಮತ್ತು ಬೆಳ್ಳುಳ್ಳಿಯನ್ನು ಸೇವಿಸಿದರೆ ಉಷ್ಣವಾಗುತ್ತದೆ ಎಂಬ ಯೋಚನೆ ಇದ್ದರೆ ಬದಲಿಗೆ ಈರುಳ್ಳಿಯನ್ನು ಬಳಸಬಹುದು.
ಭಾವ ಪ್ರಕಾಶ ನಿಘಂಟು ಎಂಬ ಗ್ರಂಥದಲ್ಲಿ “ಬಲವೀರ್ಯ ಕೈರೋ ಗುರುಃ” ಎಂದಿದ್ದಾರೆ. ಅಂದರೆ ಈರುಳ್ಳಿಯು ದೇಹದ ಬಲವನ್ನು, ವೀರ್ಯದ ಗುಣಮಟ್ಟವನ್ನು, ಲೈಂಗಿಕ ಶಕ್ತಿಯನ್ನು ಹೆಚ್ಚಿಸುತ್ತದೆ ಎಂದರ್ಥ. ಬಹುತೇಕ ಎಲ್ಲಾ ಆಯುರ್ವೇದ ಗ್ರಂಥಗಳಲ್ಲಿಯೂ ಈರುಳ್ಳಿಯಿಂದ ಲೈಂಗಿಕ ಶಕ್ತಿ ವೃದ್ಧಿಯಾಗುತ್ತದೆ ಎಂಬುದನ್ನು ಹೇಳಲಾಗಿದೆ. ಇದು ಚರ್ಮಕ್ಕೆ ಕೂಡ ಅತ್ಯಂತ ಅನುಕೂಲಕರವಾದದ್ದು. ಚರ್ಮವನ್ನು ಸ್ನಿಗ್ಧಗೊಳಿಸಿ ಒರಟುತನವನ್ನು ಹೋಗಲಾಡಿಸುತ್ತದೆ; ಚರ್ಮಕ್ಕೆ ಕಾಂತಿಯನ್ನು ಕೊಡುತ್ತದೆ; ಜೊತೆಗೆ ಚರ್ಮದ ಶುದ್ಧಿಯನ್ನೂ ಮಾಡುತ್ತದೆ ಎಂದು ವಿವರಿಸಲಾಗಿದೆ. ಈರುಳ್ಳಿಯನ್ನು ನಿಯಮಿತವಾಗಿ ಸೇವಿಸುವುದರಿಂದ ದೇಹದ ಬಾಹ್ಯ ಮತ್ತು ಆಂತರಿಕ ಕಾಂತಿ ಹೆಚ್ಚುತ್ತದೆ.
ಅಂದರೆ ಕೇವಲ ಸೌಂದರ್ಯವೃದ್ಧಿಯಷ್ಟೇ ಅಲ್ಲ ದೇಹದೊಳಗಿನ ರೋಗನಿರೋಧಕ ಶಕ್ತಿ ತುಂಬಾ ಚೆನ್ನಾಗಿ ಹೆಚ್ಚುತ್ತದೆ. ಈರುಳ್ಳಿಯು ಧ್ವನಿಗೆ ಸಂಬಂಧಿಸಿದ ಸಮಸ್ಯೆಗಳನ್ನು ಹೋಗಲಾಡಿಸಿ ಒಳ್ಳೆಯ ಧ್ವನಿಯನ್ನು ನೀಡುತ್ತದೆ ಎಂದು ವಿವರಿಸಲಾಗಿದೆ. ಹೀಗಾಗಿ ಹಾಡುಗಾರರು, ಅಧ್ಯಾಪಕರಂಥವರಿಗೆ ನಿಯಮಿತ ಈರುಳ್ಳಿ ಸೇವನೆ ಅನುಕೂಲಕರ. ಇದು ಕಣ್ಣಿನ ಆರೋಗ್ಯವನ್ನು ಹೆಚ್ಚಿಸುವುದರಿಂದ ಹತ್ತರಿಂದ ಹದಿನೈದು ಮಿಲೀ ಈರುಳ್ಳಿ ರಸವನ್ನು ಸುಮಾರು ಒಂದು ತಿಂಗಳು ದಿನಕ್ಕೊಮ್ಮೆ ಸೇವಿಸುವುದರಿಂದ ಚಿಕ್ಕಪುಟ್ಟ ಕಣ್ಣಿನ ತೊಂದರೆಗಳು ನಿವಾರಣೆಯಾಗುತ್ತವೆ. ಸ್ವಲ್ಪ ಸಿಹಿ ಇರುವ ಅಂದರೆ ಖಾರ ಕಡಿಮೆ ಇರುವ ಈರುಳ್ಳಿಯನ್ನು ಚಿಕ್ಕ ಚಿಕ್ಕ ತುಂಡುಗಳನ್ನಾಗಿ ಕತ್ತರಿಸಿ ತುಪ್ಪದಲ್ಲಿ ಹುರಿದು ನಿಯಮಿತವಾಗಿ ಸೇವಿಸಿದರೆ ಲೈಂಗಿಕ ಶಕ್ತಿಯ ವೃದ್ಧಿಯಾಗುತ್ತದೆ.
ಕೂದಲು ಉದುರುವುದನ್ನು ಕಡಿಮೆ ಮಾಡಲು ಈರುಳ್ಳಿಯು ಸಹಕಾರಿ. ಈರುಳ್ಳಿಯ ರಸ ತೆಗೆದು ತಲೆ ಸ್ನಾನ ಮಾಡುವ ಹತ್ತು ನಿಮಿಷ ಮೊದಲು ಕೂದಲಿನ ಬುಡಕ್ಕೆ ಹಚ್ಚಬೇಕು. ಇದರಿಂದ ಕೂದಲಿನ ಬೆಳವಣಿಗೆ ಚೆನ್ನಾಗಿ ಆಗಲು ಮತ್ತು ಕೂದಲು ಉದುರುವುದು ನಿಲ್ಲಲು ಸಹಾಯವಾಗುತ್ತದೆ. ಬೊಜ್ಜನ್ನು ಕಡಿಮೆ ಮಾಡಲು ಕೂಡ ಈರುಳ್ಳಿಯು ಸಹಕಾರಿ. ಬೆಳ್ಳುಳ್ಳಿಯ ಇನ್ನೊಂದು ಅದ್ಭುತ ಗುಣವೆಂದರೆ ಅದು ನರದ ಶಕ್ತಿಯನ್ನು ಹೆಚ್ಚಿಸುತ್ತದೆ. ಹಾಗಾಗಿ ಸಯಾಟಿಕಾದಂತಹ ಸಮಸ್ಯೆಗಳನ್ನು ಅನುಭವಿಸುತ್ತಿರುವವರಿಗೆ ಈರುಳ್ಳಿ ತುಂಬಾ ಲಾಭದಾಯಕ.
ಕಫದ ಸಮಸ್ಯೆಯಿಂದ ಬಳಲುತ್ತಿದ್ದು ಕಫ ಹೊರಗೆ ಬರುತ್ತಿಲ್ಲದಿದ್ದರೆ ಎರಡು ಚಮಚದಷ್ಟು ಈರುಳ್ಳಿ ರಸ, ಅರ್ಧ ಚಮಚದಷ್ಟು ಶುಂಠಿ ರಸ, ಅರ್ಧ ಚಮಚದಷ್ಟು ತುಳಸಿ ಎಲೆಗಳ ರಸ ಮತ್ತು ಒಂದು ಚಮಚ ಜೇನುತುಪ್ಪವನ್ನು ಸೇರಿಸಿ ದಿನಕ್ಕೆ ಒಂದು ಅಥವಾ ಎರಡು ಬಾರಿ ಸೇವಿಸಿದರೆ ಕಫ ಹೊರಗೆ ಬಂದು ಸಮಸ್ಯೆ ನಿವಾರಣೆಯಾಗುತ್ತದೆ.
ಈರುಳ್ಳಿ ಒಳ್ಳೆಯ ಜೀರ್ಣಕಾರಿಯೂ ಹೌದು ಹಾಗಾಗಿ ಅಜೀರ್ಣ ಇರುವವರಿಗೆ ಹೆಚ್ಚಿನ ಪ್ರಮಾಣದಲ್ಲಿ ಈರುಳ್ಳಿಯನ್ನು ಹಾಕಿ ಹೆಸರುಬೇಳೆಯ ತಿಳಿಸಾರು ಮಾಡಿ ಊಟಕ್ಕೆ ನೀಡಿದರೆ ಅಜೀರ್ಣದ ಸಮಸ್ಯೆ ತುಂಬಾ ಚೆನ್ನಾಗಿ ಹತೋಟಿಗೆ ಬರುತ್ತದೆ. ಜೊತೆಗೆ ಶಕ್ತಿ ವೃದ್ಧಿಯೂ ಆಗುತ್ತದೆ. ಒಟ್ಟಿನಲ್ಲಿ ಈರುಳ್ಳಿಯನ್ನು ಸರಿಯಾಗಿ ಬಳಸಿಕೊಂಡರೆ ಅದು ಕೇವಲ ತರಕಾರಿಯಲ್ಲ ಅದ್ಭುತ ಔಷಧ.(ಬರಹ-ಡಾ|| ವೆಂಕಟ್ರಮಣ ಹೆಗಡೆ
ವೇದ ವೆಲ್ನೆಸ್ ಸೆಂಟರ್, ನಿಸರ್ಗಮನೆ, ಶಿರಸಿ, ಉ.ಕನ್ನಡ)
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ6 days agoಮಾಯಕೊಂಡ ಶಾಸಕ ಕೆ.ಎಸ್. ಬಸವಂತಪ್ಪ ಸಚಿವರಾಗಿ ಆಯ್ಕೆ: ದಾವಣಗೆರೆಯಲ್ಲಿ ಸಂಭ್ರಮ ಆಚರಣೆ
-
ಅಂತರಂಗ2 days agoಪ್ರಪ್ರಥಮ ಮಹಿಳಾ ಸಾಹಿತ್ಯ ಸಮ್ಮೇಳನ : ಸರ್ವ ಕ್ಷೇತ್ರದಲ್ಲಿಯೂ ರಾರಾಜಿಸುವ ಶಿಖರ ಶಿರೋಮಣಿಗಳು
-
ದಿನದ ಸುದ್ದಿ3 days agoನಾನೇ ಮುಖ್ಯಮಂತ್ರಿ ಇದ್ದಂತೆ : ಶಾಸಕ ಶಿವಗಂಗಾ ಬಸವರಾಜ್
-
ದಿನದ ಸುದ್ದಿ4 days agoದಾವಣಗೆರೆ ವಿಶ್ವವಿದ್ಯಾಲಯ | ಗುಣಮಟ್ಟದ ಸಂಶೋಧನೆ ಶೈಕ್ಷಣಿಕ ಪ್ರಗತಿ – ಜಾಗತಿಕ ಮಾನ್ಯತೆಯ ಮೂಲಾಧಾರ : ಕುಲಪತಿ ಪ್ರೊ. ಬಿ. ಇ. ರಂಗಸ್ವಾಮಿ


