Connect with us

ನಿತ್ಯ ಭವಿಷ್ಯ

ಸೋಮವಾರದ ಭವಿಷ್ಯ | ನಿಮ್ಮ ಸರ್ವ ಸಮಸ್ಯೆಗಳ ಪರಿಹಾರ ಮತ್ತು ಮಾರ್ಗದರ್ಶನಕ್ಕಾಗಿ ಇಂದೇ ಕರೆ ಮಾಡಿ

Published

on

ಶ್ರೀ ಮಂಜುನಾಥ ಸ್ವಾಮಿ ಸ್ಮರಣೆ ಮಾಡುತ್ತಾ ಈ ದಿನದ ದ್ವಾದಶ ರಾಶಿ ಫಲಗಳನ್ನು ತಿಳಿಯೋಣ.

ಖ್ಯಾತ ಜ್ಯೋತಿಷ್ಯರು ಗಿರಿಧರಭಟ್
ನಿಮ್ಮ ಸರ್ವ ಸಮಸ್ಯೆಗಳ ಪರಿಹಾರ ಮತ್ತು ಮಾರ್ಗದರ್ಶನಕ್ಕಾಗಿ ಇಂದೇ ಕರೆ ಮಾಡಿ.
9945410150

ಮೇಷ ರಾಶಿ

ಆರೋಗ್ಯದಲ್ಲಿ ಹೆಚ್ಚಿನ ಮುತುವರ್ಜಿ ಅಗತ್ಯವಾಗಿ ಬೇಕಾಗಿದೆ. ವ್ಯವಹಾರದಲ್ಲಿ ಹಣದ ಸಮಸ್ಯೆಗೆ ಈ ದಿನ ಸ್ನೇಹಿತರಿಂದ ಸಹಕಾರ ದೊರೆಯಲಿದೆ. ಬಾಕಿಯ ಹಣವನ್ನು ಯಶಸ್ವಿಯಾಗಿ ವಸೂಲಿ ಮಾಡುವಿರಿ. ಹೊಸದಾದ ಕಾರ್ಯಗಳನ್ನು ಮಾಡಲು ಬಯಸುತ್ತೀರಿ. ಕುಟುಂಬಸ್ಥರ ಜೊತೆ ಕಾಲಕಳೆಯಲು ಪ್ರಯತ್ನಿಸಿ. ಕೆಲಸದಲ್ಲಿ ಒಬ್ಬಂಟಿಯಾಗುವ ಸಾಧ್ಯತೆ ಇದೆ.

ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ವೃಷಭ ರಾಶಿ

ಸಾಲ ಕೊಡುವ ಅಥವಾ ತೆಗೆದುಕೊಳ್ಳುವ ವಿಷಯಗಳಿಂದ ದೂರವಿದ್ದು ಬಿಡಿ. ನಿಮ್ಮ ಆತ್ಮಸ್ಥೈರ್ಯವನ್ನು ಕುಂದಿಸುವ ವ್ಯವಸ್ಥಿತವಾದ ತಂತ್ರ ನಡೆಯಬಹುದು ಎಚ್ಚರವಿರಲಿ. ಆರೋಗ್ಯದ ದೃಷ್ಟಿಕೋನದಿಂದ ಆಹಾರ ಹಾಗೂ ನಿಯಮಿತ ವ್ಯಾಯಾಮವನ್ನು ಮಾಡುವುದು ಒಳಿತು. ಆರ್ಥಿಕ ವಿಷಯವಾಗಿ ನಿಧಾನಗತಿಯ ಪ್ರಗತಿ ಕಂಡು ಬರಲಿದೆ. ಕೆಲವು ಹೂಡಿಕೆಗಳು ನಿಮ್ಮ ವ್ಯವಸ್ಥೆಗೆ ವ್ಯತಿರಿಕ್ತ ಪರಿಣಾಮ ಬೀರಬಹುದು.

ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಮಿಥುನ ರಾಶಿ

ಕುಟುಂಬಸ್ಥರ ನೆರವಿನಿಂದ ಸಮಸ್ಯೆಗಳನ್ನು ಪರಿಹಾರ ಮಾಡಲು ಮುಂದಾಗುವಿರಿ. ಕೆಲಸಕಾರ್ಯಗಳಲ್ಲಿ ವೇಗ ಪಡೆಯಲಿದೆ ಹಾಗೂ ಸುಲಭವಾಗಿ ಯಾವುದೇ ಅಡ್ಡಿ ಆತಂಕವಿಲ್ಲದೆ ನೆರವೇರುವುದು ಈ ದಿನದ ವಿಶೇಷತೆ. ಕುಟುಂಬದ ಕೆಲವು ವೈಯುಕ್ತಿಕ ನಿಲುವುಗಳನ್ನು ಪಡೆಯುವ ಮೊದಲು ಹಿರಿಯರ ಮಾರ್ಗದರ್ಶನ ಅನುಸರಿಸುವುದು ಒಳ್ಳೆಯದು.

ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಕರ್ಕಾಟಕ ರಾಶಿ

ನಿಮ್ಮ ಕೆಲವು ವಿಷಯಗಳಲ್ಲಿ ಸಾಮರ್ಥ್ಯ ಹಾಗೂ ದೃಷ್ಟಿಕೋನ ರೂಪಿಸುವಂತಹ ಅವಕಾಶಗಳು ಸಿಗಲಿದೆ ಇದರಿಂದ ನಿಮ್ಮ ಯೋಜನೆಗಳಿಗೆ ಹೊರಗಿನಿಂದ ಬೆಂಬಲ ಸಿಗಬಹುದು ಹಾಗೂ ನಿಮ್ಮ ವ್ಯವಸ್ಥೆಯನ್ನು ಮನಗಂಡು ಹೆಚ್ಚಿನ ಕೆಲಸ ನೀಡುವ ಸಾಧ್ಯತೆ ಇದೆ. ಇಂದು ಕ್ರೀಡಾ ಚಟುವಟಿಕೆಗಳಲ್ಲಿ ನಿಮ್ಮ ಪಾಲ್ಗೊಳ್ಳುವಿಕೆ ಅತ್ಯುತ್ತಮವಾಗಿ ಮೂಡಿಬರಲಿದೆ. ಸಂಗಾತಿಯೊಡನೆ ಸುತ್ತಾಡುವ ಸಾಧ್ಯತೆ ಕಂಡುಬರುತ್ತದೆ, ಅವರ ಮನೋಭಾವನೆಗಳಿಗೆ ನಿಮ್ಮಿಂದ ಸೂಕ್ತ ಸ್ಪಂದನೆ ಸಿಗಲಿದೆ.

ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಸಿಂಹ ರಾಶಿ

ಮಾನಸಿಕ ಗೊಂದಲಗಳು ನಿಮಗೆ ಆವರಿಸಬಹುದು. ಸ್ನೇಹಿತ ವರ್ಗದಿಂದ ಅನಗತ್ಯ ಕಿರುಕುಳ ಎದುರಿಸಬೇಕಾದ ಪ್ರಮೇಯ ಬರಲಿದೆ. ನಿಮ್ಮ ಕೆಲವು ಯೋಜನೆಗಳು ಸೂಕ್ತವಾದ ಬಂಡವಾಳವಿಲ್ಲದೆ ಹಳ್ಳ ಹಿಡಿಯಬಹುದಾದ ಸಾಧ್ಯತೆ ಕಂಡುಬರುತ್ತದೆ. ಅನಗತ್ಯ ಪ್ರಯಾಣದಿಂದ ದೇಹಾರೋಗ್ಯ ಸಮಸ್ಯೆಗೆ ಕಾರಣವಾಗಬಹುದು. ಆಹಾರ ಸೇವನೆಯ ಬಗ್ಗೆ ವಿಶೇಷ ಕಾಳಜಿವಹಿಸಿ.

ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಕನ್ಯಾ ರಾಶಿ

ಕುಟುಂಬದಲ್ಲಿ ಖರ್ಚುಗಳ ಹೊರೆ ಹೆಚ್ಚಾಗುವ ಸಾಧ್ಯತೆ ಇದೆ. ಗೃಹ ಕಾಮಗಾರಿಗಳು ಕುಂಟುತ್ತಾ ವೃತ್ತ ತೆವಳುತ್ತಾ ಸಾಗುತ್ತದೆ. ಕುಲದೇವತಾರಾಧನೆ ಮಾಡುವುದು ಒಳಿತು. ಮಾಡುವ ಕಾರ್ಯಗಳಲ್ಲಿ ಸಕಾರಾತ್ಮಕವಾಗಿ ಯೋಚಿಸುವುದು ಒಳ್ಳೆಯದು. ಹಿರಿಯರು ಉತ್ತಮ ಲಾಭ ಪಡೆಯುವ ಮಾರ್ಗವನ್ನು ಸೂಚಿಸಲಿದ್ದಾರೆ.

ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ತುಲಾ ರಾಶಿ

ಹಿರಿಯರ ಹಿತಾಸಕ್ತಿಯನ್ನು ಕಡೆಗಣಿಸಬೇಡಿ, ಅವರ ಬೇಕು ಬೇಡಗಳಿಗೆ ನಿಮ್ಮಿಂದ ಸಕಾರಾತ್ಮಕ ಉತ್ತರ ವಿರಲಿ. ಪಿತ್ರಾರ್ಜಿತ ಆಸ್ತಿಗಳಲ್ಲಿ ಜಯ ಸಂಪಾದನೆ ಆಗಲಿದೆ. ವೈಯಕ್ತಿಕ ಸಮಸ್ಯೆಗಳಿಗೆ ಸೂಕ್ತ ಪರಿಹಾರ ದೊರೆಯುವುದು ನಿಶ್ಚಿತ. ಗುರುಮುಖೇನ ಮಾರ್ಗದರ್ಶನದಿಂದ ಬಹುದೊಡ್ಡ ಯೋಜನೆಯನ್ನು ರೂಪಿಸುವಿರಿ. ಸಾಲಬಾಧೆಯಿಂದ ಮುಕ್ತರಾಗಲು ಪ್ರಯತ್ನಿಸುವುದು ಮುಖ್ಯ.

ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ವೃಶ್ಚಿಕ ರಾಶಿ

ಕಚೇರಿ ಕೆಲಸಗಳಲ್ಲಿ ಹಾಗೂ ನಿಮ್ಮ ಕೌಟುಂಬಿಕ ವ್ಯಾಜ್ಯಗಳು ಮಾನಸಿಕ ಚಿಂತೆ ತರಲಿದೆ. ಉದ್ಯೋಗದಲ್ಲಿ ಹೊಸ ಕೆಲಸದ ಅವಕಾಶ ಸಿಗುವುದು. ಯಶಸ್ಸಿಗೆ ಬೇಕಾಗಿರುವ ಸೌಕರ್ಯ ಹಿರಿಯರಿಂದ ಪ್ರಾಪ್ತಿಯಾಗಲಿದೆ. ಸಂಗಾತಿಯೊಡನೆ ಪ್ರೇಮದಿಂದ ಕಾಲ ಕಳೆಯುತ್ತೀರಿ. ಮಕ್ಕಳ ಭವಿಷ್ಯಕ್ಕಾಗಿ ಉತ್ತಮವಾದ ಮಾರ್ಗವನ್ನು ಹುಡುಕುವ ಸಾಧ್ಯತೆ ಇದೆ.

ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಧನಸ್ಸು ರಾಶಿ

ನಿಮ್ಮ ಮಾತುಗಳು ಹಾಗೂ ಕೆಲಸವು ಗೆಲುವಿನ ದಾರಿ ಸೂಚಿಸುತ್ತದೆ. ಜನಗಳ ಜೊತೆಗೆ ಹೆಚ್ಚಾಗಿ ಬೆರೆಯುವಿರಿ. ಒಡನಾಡಿಗಳ ಯೋಗ ಕ್ಷೇಮ ವಿಚಾರಿಸುವ ವ್ಯವಧಾನ ತೋರಿಸುತ್ತೀರಿ. ಕುಟುಂಬದಲ್ಲಿ ಸಂತೋಷಕರ ವಾತಾವರಣ ಪ್ರಾಪ್ತಿಯಾಗಲಿದೆ. ಮನಸ್ಸಿಗೆ ಮುದ ನೀಡುವ ಕಲಾ ಚಟುವಟಿಕೆಗಳಲ್ಲಿ ಪಾಲ್ಗೊಳ್ಳಲು ಇಚ್ಚಿಸುವಿರಿ.

ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಮಕರ ರಾಶಿ

ಕೆಲಸದ ಜಾಗದಲ್ಲಿ ಅನಗತ್ಯವಾಗಿ ನಿಮ್ಮ ವಿರುದ್ಧ ದೋಷಾರೋಪಗಳು ಮಾಡುವ ಸಾಧ್ಯತೆ ಇದೆ. ಆತ್ಮೀಯ ವ್ಯಕ್ತಿಗಳಿಂದ ಮೋಸ ಹೋಗುವ ಪ್ರಮೇಯ ಬರಬಹುದು. ಕೆಲವರು ನಿಮ್ಮ ಹಿತ ಬಯಸುವ ಜನಗಳು ನಿಮ್ಮ ಕಷ್ಟಕ್ಕೆ ಬೆಂಬಲವಾಗಿ ನಿಲ್ಲಲಿದ್ದಾರೆ. ಮಾನಸಿಕ ಸ್ಥಿಮಿತತೆಯನ್ನು ಕಳೆದುಕೊಳ್ಳಬೇಡಿ. ಆದಷ್ಟು ದೈಹಿಕ ಕ್ಷಮತೆಯನ್ನು ಕಾಪಾಡಿಕೊಳ್ಳಿ.

ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಕುಂಭ ರಾಶಿ

ಹಣಕಾಸಿನ ವ್ಯವಹಾರ ಉತ್ತಮ ರೀತಿಯಲ್ಲಿ ನಡೆಯಲಿದೆ. ಅಗತ್ಯ ಆರ್ಥಿಕ ಅಭಿವೃದ್ಧಿ ಕಾಣಬಹುದು. ಉದ್ಯಮ ವಲಯದಲ್ಲಿ ಬೆಳವಣಿಗೆ ಆಗಲಿದೆ. ಖರೀದಿ ಮತ್ತು ಮಾರಾಟ ಪ್ರಕ್ರಿಯೆಗಳು ಸರಾಗವಾಗಿ ನಡೆಯುವುದು. ಶೈಕ್ಷಣಿಕ ವಿಷಯ ಪ್ರಗತಿಯಲ್ಲಿದೆ.

ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಮೀನ ರಾಶಿ

ನಿಮ್ಮ ಪ್ರತಿಯೊಂದು ನಡೆಯು ಪ್ರಶಂಸೆಗೆ ಪೂರಕ ವಾತಾವರಣ ಸೃಷ್ಟಿಸುತ್ತದೆ. ಸಾಮಾಜಿಕ ಮತ್ತು ರಾಜಕೀಯ ಕ್ಷೇತ್ರದಲ್ಲಿ ಜನಮನ್ನಣೆ ಗಳಿಸುವಿರಿ. ಕೆಲಸದಲ್ಲಿ ಹೆಚ್ಚಿನ ಅವಕಾಶಗಳು ಪ್ರಾಪ್ತಿಯಾಗಲಿದೆ. ನಿಮ್ಮ ಪರಿಶ್ರಮಕ್ಕೆ ತಕ್ಕ ಬೆಲೆ ಸಿಗಲಿದೆ. ಕೆಲಸದ ಒತ್ತಡ ಹಾಗೂ ಓಡಾಟಗಳಿಂದ ಆರೋಗ್ಯದಲ್ಲಿ ಬದಲಾವಣೆಯಾಗಬಹುದು, ಆದಷ್ಟು ಎಚ್ಚರಿಕೆ ಇರಲಿ

ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಜ್ಯೋತಿಷ್ಯರು ಗಿರಿಧರ ಭಟ್
ನಿಮ್ಮ ಸಮಸ್ಯೆಗಳಾದ ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ಹಣಕಾಸು, ಸಾಲಬಾದೆ, ಪ್ರೇಮ ವಿಚಾರ, ದಾಂಪತ್ಯ, ಶತ್ರುಬಾಧೆ, ಕೌಟುಂಬಿಕ ಸಮಸ್ಯೆ ಇನ್ನೂ ಹತ್ತು ಹಲವಾರು ಸಮಸ್ಯೆಗಳ ಪರಿಹಾರಕ್ಕಾಗಿ ಇಂದೇ ಕರೆ ಮಾಡಿ.
9945410150

ಅಂಕಣ

ದೀಪಾವಳಿ ವಿಶೇಷಾಂಕ | ದೇವನಗರಿ ಸುದ್ದಿದಿನ ಪತ್ರಿಕೆಯಿಂದ ಕತೆ- ಕವಿತೆ- ಲೇಖನ- ರೂಪದರ್ಶಿ ಫೋಟೋ ಗಳಿಗೆ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ: ಪ್ರಿಯ ಓದುಗರೆ, ಬೆಳಕಿನ ಹಬ್ಬ ದೀಪಾವಳಿಯ ಪ್ರಯುಕ್ತ ದೇವನಗರಿ ಸುದ್ದಿದಿನ – ಕನ್ನಡ ದಿನ ಪತ್ರಿಕೆ ಹಾಗೂ ಶ್ಯಾಮ್ ಪ್ರಕಾಶನದವತಿಯಿಂದ ‘ ದೀಪಾವಳಿ ವಿಶೇಷಾಂಕ’-2026ನ್ನು ತರಲಾಗುತ್ತಿದೆ.

ಈ‌ ಹಿನ್ನೆಲೆಯಲ್ಲಿ ದೀಪಾವಳಿ ವಿಷೇಶಾಂಕ 2026ರ ವಿಭಾಗಕ್ಕೆ ಕತೆ, ಕವಿತೆ ಹಾಗೂ ಲೇಖನ ಹಾಗೂ ರೂಪದರ್ಶಿಗಳ ಛಾಯಾಚಿತ್ರಗಳನ್ನು ಆಹ್ವಾನಿಸಿದ್ದೇವೆ.

ಕತೆ – ಕವಿತೆಗಳನ್ನು ಕಳುಹಿಸಲು ಇರುವ ನಿಯಮಗಳು

ಕತೆ/ಕವಿತೆ ಸ್ವತಂತ್ರ ರಚನೆಯಾಗಿರಬೇಕು. ಈ ಮೊದಲು ಯಾವ ಮಾಧ್ಯಮಗಳಲ್ಲಿಯೂ ಪ್ರಕಟ ಅಥವಾ ಪ್ರಸಾರ ಆಗಿರಬಾರದು.

ಕತೆ 1500 ಸಾವಿರ ಪದಗಳ ಮಿತಿಯಲ್ಲಿರಲಿ. ಕವಿತೆಗೆ 40 ಸಾಲಿನ ಮಿತಿಯಿರಲಿ, ನುಡಿ ಅಥವಾ ಬರಹ ತಂತ್ರಾಂಶದಲ್ಲಿ ಇಲ್ಲವೆ ಯೂನಿಕೋಡ್‌ನಲ್ಲಿ ಇರಬೇಕು. ವಯಸ್ಸಿನ ಮಿತಿ ಇರುವುದಿಲ್ಲ.

ಕತೆ/ಕವಿತೆ ಇರುವ ಪುಟದಲ್ಲಿ ಹೆಸರು, ವಿವರ ಬರೆಯುವಂತಿಲ್ಲ. ಪ್ರತ್ಯೇಕ ಪುಟದಲ್ಲಿ ಹೆಸರು, ಅಂಚೆ ವಿಳಾಸ, ಮೊಬೈಲ್ ನಂಬರ್, ಇ-ಮೇಲ್ ವಿಳಾಸ ಒದಗಿಸಬೇಕು.

ಇತ್ತೀಚಿನ ಪಾಸ್‌ಪೋರ್ಟ್ ಅಳತೆಯ ವರ್ಣಮಯ ಭಾವಚಿತ್ರದೊಂದಿಗೆ 100 ಪದಗಳ ಒಳಗೆ ಕಿರು ಪರಿಚಯ ಕಳುಹಿಸಬೇಕು.

ಸ್ಪರ್ಧೆಗೆ ಕಳುಹಿಸಿರುವ ಬರಹಗಳನ್ನು ಹಿಂದಿರುಗಿಸುವುದಿಲ್ಲ. ಬರಹಗಳು ಕಡ್ಡಾಯವಾಗಿ ಎಂಎಸ್ ವರ್ಡ್ ಫೈಲ್ (MS word File) ನಲ್ಲಿರಲಿ.

ಬರಹ ಮತ್ತು ಫೋಟೋಗಳನ್ನು ಇ-ಮೇಲ್ ಮೂಲಕವಷ್ಟೇ ಕಳಿಸಿ.

ತೀರ್ಪುಗಾರರ ತೀರ್ಮಾನವೇ ಅಂತಿಮ.

ಲೇಖನಗಳಿಗೆ ಆಹ್ವಾನ : ವೈಚಾರಿಕತೆ, ವಿಮರ್ಶೆ, ಕಾನೂನು, ಸಾಹಿತ್ಯ, ತಂತ್ರಜ್ಞಾನ, ವಿಜ್ಞಾನ, ಡಿಜಿಟಲ್ ಮಾಧ್ಯಮ, ಸಿನೆಮಾ, ಪ್ರೇಮಪತ್ರ, ಕೃಷಿ, ರಾಜಕೀಯ, ಕಲೆ, ಆರೋಗ್ಯ, ಪ್ರವಾಸ, ಅಡುಗೆ, ಫೋಟೋಗ್ರಫಿ, ವೈಲ್ಡ್ ಲೈಫ್, ಹಾಸ್ಯ ಕುರಿತಾದ ಲೇಖನಗಳನ್ನು 450 ಪದಗಳನ್ನು ಮೀರದಂತೆ ಬರೆದು ಕಳುಹಿಸಿ.

ಹಾಗೆಯೇ, ವಿಶೇಷಾಂಕದ ಮುಖಪುಟದ ರೂಪದರ್ಶಿಯಾಗಲು ಅವಕಾಶವನ್ನು ಕಲ್ಪಸಿಲಾಗಿದೆ. ಆಸಕ್ತ ರೂಪದರ್ಶಿಗಳು ಸ್ಟುಡಿಯೋ ಅಥವಾ ಫೋಟೋಗ್ರಾಫರ್ ಮೂಲಕ ತೆಗೆದ ‘6*4 ಅಳತೆಯ ಮುದ್ರಿತ ಫೋಟೋ ಮತ್ತು ಇ-ಮೇಲ್ ಮೂಲಕವೂ ಕಳಿಸಬಹುದು. 80 ಪದಗಳಮಿತಿಯೊಳಗೆ ನಿಮ್ಮ ಪರಿಚಯದೊಂದಿಗೆ, ಒಬ್ಬರು 4 ಫೋಟೋ ಕಳುಹಿಸಬೇಕು. ವಯಸ್ಸಿನ ಮಿತಿಯಿಲ್ಲ ಇರುವುದಿಲ್ಲ.

ಕತೆಯ ವಿಜೇತರಿಗೆ ಪ್ರಥಮ ಬಹುಮಾನ : 10000, ದ್ವಿತೀಯ ಬಹುಮಾನ : 5000, ತೃತೀಯ ಬಹುಮಾನ : 3000 ಹಾಗೂ ಕವಿತೆ ಬಹುಮಾನ ವಿಜೇತರಿಗೆ ಪ್ರಥಮ ಬಹುಮಾನ : 5000 ದ್ವಿತೀಯ ಬಹುಮಾನ : 3000 ಹಾಗೂ ತೃತೀಯ ಬಹುಮಾನ : ₹2000 ಸಿಗಲಿದೆ.

ಆಗಸ್ಟ್‌ 30ರೊಳಗೆ ಬರಹಗಳನ್ನು ಇ-ಮೇಲ್‌: deepasuddidina@gmail.com ಗೆ ಕಳುಹಿಸಲು ತಿಳಿಸಿದೆ. ಈ ಕುರಿತು ಹೆಚ್ಚಿನ ಮಾಹಿತಿಗಾಗಿ :9980346243 ಹಾಗೂ visit: www.suddidina.com ಅನ್ನು ವೀಕ್ಷಿಸಬಹುದಾಗಿದೆ.

ಕಚೇರಿ ವಿಳಾಸ 

ದೇವನಗರಿ ಸುದ್ದಿದಿನ- ಕನ್ನಡ ದಿನ ಪತ್ರಿಕೆ
ದೀಪಾವಳಿ ವಿಶೇಷಾಂಕ ವಿಭಾಗ
#3231/1, ಸಂಜೀವ ಸದನ, 11ನೇ ಮುಖ್ಯರಸ್ತೆ, 4 ನೇ ಅಡ್ಡರಸ್ತೆ, ಎಂಸಿಸಿ ಬಿ ಬ್ಲಾಕ್, ದಾವಣಗೆರೆ, 577004

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ಕ್ರೀಡೆ

ರಾಜ್ಯದ ವಿವಿಧ ನೀರಾವರಿ ಯೋಜನೆಗಳಿಗೆ ಹೆಚ್ಚಿನ ಅನುದಾನ ; ಇ-ಖಾತೆ ಅಭಿಯಾನ ಹಾಗೂ ಇತರೆ ‌ಪ್ರಮುಖ ಸುದ್ದಿಗಳು

Published

on

ರಾಜ್ಯದ ವಿವಿಧ ನೀರಾವರಿ ಯೋಜನೆಗಳಿಗೆ ಹೆಚ್ಚಿನ ಅನುದಾನ ; ಇ-ಖಾತೆ ಅಭಿಯಾನ ಹಾಗೂ ಇತರೆ ‌ಪ್ರಮುಖ ಸುದ್ದಿಗಳು

1. ಮುಖ್ಯಮಂತ್ರಿ ಸಿದ್ದರಾಮಯ್ಯ ನವದೆಹಲಿ ತಲುಪಿದ್ದಾರೆ. ಇಂದು ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿ ಮಾಡಿ, 5 ಪ್ರಮುಖ ಮಸೂದೆಗಳಿಗೆ ಅಂಗೀಕಾರ ನೀಡುವಂತೆ ಮನವಿ ಮಾಡಲಿದ್ದಾರೆ ಎಂದು ಉನ್ನತ ಮೂಲಗಳು ತಿಳಿಸಿವೆ. ಭದ್ರಾ ಮೇಲ್ದಂಡೆ ಯೋಜನೆ ಸೇರಿದಂತೆ ರಾಜ್ಯದ ವಿವಿಧ ನೀರಾವರಿ ಯೋಜನೆಗಳಿಗೆ, ಹೆಚ್ಚಿನ ಅನುದಾನ ಬಿಡುಗಡೆ ಮಾಡುವಂತೆ, ಕೇಂದ್ರದ ಜಲಶಕ್ತಿ ಖಾತೆ ಸಚಿವರನ್ನು ಕೋರುವುದಾಗಿ, ಇದೇ ವೇಳೆ ಸಾಮಾಜಿಕ ಜಾಲತಾಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

2. ರಾಜ್ಯದ ಗ್ರಾಮ ಪಂಚಾಯ್ತಿಗಳ ಹಂತದಲ್ಲಿ ಜುಲೈ 15ರಿಂದ, ಸಾರ್ವಜನಿಕರ ಆಸ್ತಿಗಳ ಇ-ಖಾತೆ ರೂಪಿಸುವ ಅಭಿಯಾನವನ್ನು ಕಂದಾಯ ಇಲಾಖೆ ಆಯೋಜಿಸಲಿದೆ ಎಂದು ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.

3. ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆಗೆ ಸಂಬಂಧಿಸಿ, ಇಲ್ಲಿಯವರೆಗೆ ಹೆಸರು ನೋಂದಾಯಿಸದವರು, ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ, ಈ ತಿಂಗಳ 30ರವರೆಗೆ ಮಾಹಿತಿ ನೀಡಲು ಅವಕಾಶವಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಎ.ಬಿ.ಬಸವರಾಜು ತಿಳಿಸಿದ್ದಾರೆ.

4. ಕಾವೇರಿ ಜಲಾನಯನ ಪ್ರದೇಶದಲ್ಲಿ ವ್ಯಾಪಕವಾಗಿ ಸುರಿಯುತ್ತಿರುವ ಮಳೆಯಿಂದ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆ.ಆರ್.ಎಸ್. ಅಣೆಕಟ್ಟೆ ಭಾಗಶ: ಭರ್ತಿಯಾಗಿದ್ದು, ಒಳ ಹರಿವು ಇನ್ನಷ್ಟು ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಅಣೆಕಟ್ಟೆಯಿಂದ 5 ಸಾವಿರದಿಂದ 15 ಸಾವಿರ ಕ್ಯುಸೆಕ್ ನೀರನ್ನು ನದಿಗೆ ಹರಿಸಲಾಗಿದೆ.

5. ಕತಾರ್‌ನಲ್ಲಿರುವ ಅಲ್ ಉದೈದ್ ಅಮೇರಿಕ ವಾಯುನೆಲೆಯ ಮೇಲೆ ಇರಾನ್ ನಡೆಸಿದ ದಾಳಿಯ ನಂತರ ಜಾಗತಿಕ ತೈಲ ಬೆಲೆಗಳು ಐದು ವರ್ಷಗಳಲ್ಲಿ ನಿನ್ನೆ ಒಂದೇ ದಿನದಲ್ಲಿ ತೀವ್ರ ಕುಸಿತವನ್ನು ದಾಖಲಿಸಿದೆ.

6. ಕರ್ನಾಟಕ, ಮಧ್ಯಪ್ರದೇಶ, ಬಿಹಾರ, ಜಾಖಂಡ್, ಒಡಿಶಾ, ಛತ್ತೀಸ್‌ಗಢ, ಪಶ್ಚಿಮ ಬಂಗಾಳ, ಸಿಕ್ಕಿಂ, ಅರುಣಾಚಲ ಪ್ರದೇಶ, ಕೊಂಕಣ, ಗೋವಾ, ಮಹಾರಾಷ್ಟ್ರ, ಗುಜರಾತ್, ಹಿಮಾಚಲ ಪ್ರದೇಶ, ಉತ್ತರಾಖಂಡ, ಪಶ್ಚಿಮ ಉತ್ತರ ಪ್ರದೇಶ, ರಾಜಸ್ಥಾನ, ಕೇರಳದ ಕೆಲವು ಸ್ಥಳಗಳಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

7. ಅಯೋವಾದಲ್ಲಿ ನಾಳೆ ಆರಂಭವಾಗಲಿರುವ ಯುಎಸ್ ಓಪನ್ 2025 ಬ್ಯಾಡ್ಮಿಂಟನ್ ಪಂದ್ಯಾವಳಿಯ ಪುರುಷರ ಡಬಲ್ಸ್ ವಿಭಾಗದಲ್ಲಿ ಹರಿಹರನ್ ಅಂಶಕರುಣನ್ ಮತ್ತು ರೂಬನ್ ಕುಮಾರ್ ರೆಥಿನಸಬಪತಿ, ಭಾರತವನ್ನು ಮುನ್ನಡೆಸಲಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಈರುಳ್ಳಿ ಕೇವಲ ತರಕಾರಿಯಲ್ಲ ; ಅದ್ಭುತ ಔಷಧ

Published

on

ನಾವು ನಿತ್ಯವೂ ತಯಾರಿಸುವ ಅಡುಗೆ ಪದಾರ್ಥಗಳಿಗೆ ಈರುಳ್ಳಿಯನ್ನು ಹಾಕದಿದ್ದಾಗ ಒಂದು ರುಚಿಯಾದರೆ ಅದನ್ನು ಹಾಕಿದಾಗ ಆ ಪದಾರ್ಥದ ರುಚಿಯೇ ಬೇರೆಯಾಗುತ್ತದೆ. ನಾವು ಈರುಳ್ಳಿಯ ಗುಣಗಳು, ಅದರ ಉಪಯೋಗಗಳು ಮತ್ತು ಮನೆ ಮದ್ದುಗಳ ಬಗ್ಗೆ ತಿಳಿದುಕೊಳ್ಳೋಣ.

ಆಯುರ್ವೇದದಲ್ಲಿ ಈರುಳ್ಳಿಯ ಬಗ್ಗೆ ವಿಸ್ತೃತ ವಿವರಣೆ ಇದೆ. ಆಯುರ್ವೇದ ಗ್ರಂಥಗಳ ಪ್ರಕಾರ ಈರುಳ್ಳಿಗೆ ಬೆಳ್ಳುಳ್ಳಿಯ ಗುಣಗಳಿವೆ. ಆದರೆ ಬೆಳ್ಳುಳ್ಳಿಯಂತೆ ಇದು ಉಷ್ಣವಲ್ಲ. ಹಾಗಾಗಿ ಬೆಳ್ಳುಳ್ಳಿಯ ಅದ್ಭುತ ಗುಣಗಳನ್ನು ಪಡೆಯಬೇಕು ಎಂದಾದರೆ ಮತ್ತು ಬೆಳ್ಳುಳ್ಳಿಯನ್ನು ಸೇವಿಸಿದರೆ ಉಷ್ಣವಾಗುತ್ತದೆ ಎಂಬ ಯೋಚನೆ ಇದ್ದರೆ ಬದಲಿಗೆ ಈರುಳ್ಳಿಯನ್ನು ಬಳಸಬಹುದು.

ಭಾವ ಪ್ರಕಾಶ ನಿಘಂಟು ಎಂಬ ಗ್ರಂಥದಲ್ಲಿ “ಬಲವೀರ್ಯ ಕೈರೋ ಗುರುಃ” ಎಂದಿದ್ದಾರೆ. ಅಂದರೆ ಈರುಳ್ಳಿಯು ದೇಹದ ಬಲವನ್ನು, ವೀರ್ಯದ ಗುಣಮಟ್ಟವನ್ನು, ಲೈಂಗಿಕ ಶಕ್ತಿಯನ್ನು ಹೆಚ್ಚಿಸುತ್ತದೆ ಎಂದರ್ಥ. ಬಹುತೇಕ ಎಲ್ಲಾ ಆಯುರ್ವೇದ ಗ್ರಂಥಗಳಲ್ಲಿಯೂ ಈರುಳ್ಳಿಯಿಂದ ಲೈಂಗಿಕ ಶಕ್ತಿ ವೃದ್ಧಿಯಾಗುತ್ತದೆ ಎಂಬುದನ್ನು ಹೇಳಲಾಗಿದೆ. ಇದು ಚರ್ಮಕ್ಕೆ ಕೂಡ ಅತ್ಯಂತ ಅನುಕೂಲಕರವಾದದ್ದು. ಚರ್ಮವನ್ನು ಸ್ನಿಗ್ಧಗೊಳಿಸಿ ಒರಟುತನವನ್ನು ಹೋಗಲಾಡಿಸುತ್ತದೆ; ಚರ್ಮಕ್ಕೆ ಕಾಂತಿಯನ್ನು ಕೊಡುತ್ತದೆ; ಜೊತೆಗೆ ಚರ್ಮದ ಶುದ್ಧಿಯನ್ನೂ ಮಾಡುತ್ತದೆ ಎಂದು ವಿವರಿಸಲಾಗಿದೆ. ಈರುಳ್ಳಿಯನ್ನು ನಿಯಮಿತವಾಗಿ ಸೇವಿಸುವುದರಿಂದ ದೇಹದ ಬಾಹ್ಯ ಮತ್ತು ಆಂತರಿಕ ಕಾಂತಿ ಹೆಚ್ಚುತ್ತದೆ.

ಅಂದರೆ ಕೇವಲ ಸೌಂದರ್ಯವೃದ್ಧಿಯಷ್ಟೇ ಅಲ್ಲ ದೇಹದೊಳಗಿನ ರೋಗನಿರೋಧಕ ಶಕ್ತಿ ತುಂಬಾ ಚೆನ್ನಾಗಿ ಹೆಚ್ಚುತ್ತದೆ. ಈರುಳ್ಳಿಯು ಧ್ವನಿಗೆ ಸಂಬಂಧಿಸಿದ ಸಮಸ್ಯೆಗಳನ್ನು ಹೋಗಲಾಡಿಸಿ ಒಳ್ಳೆಯ ಧ್ವನಿಯನ್ನು ನೀಡುತ್ತದೆ ಎಂದು ವಿವರಿಸಲಾಗಿದೆ. ಹೀಗಾಗಿ ಹಾಡುಗಾರರು, ಅಧ್ಯಾಪಕರಂಥವರಿಗೆ ನಿಯಮಿತ ಈರುಳ್ಳಿ ಸೇವನೆ ಅನುಕೂಲಕರ. ಇದು ಕಣ್ಣಿನ ಆರೋಗ್ಯವನ್ನು ಹೆಚ್ಚಿಸುವುದರಿಂದ ಹತ್ತರಿಂದ ಹದಿನೈದು ಮಿಲೀ ಈರುಳ್ಳಿ ರಸವನ್ನು ಸುಮಾರು ಒಂದು ತಿಂಗಳು ದಿನಕ್ಕೊಮ್ಮೆ ಸೇವಿಸುವುದರಿಂದ ಚಿಕ್ಕಪುಟ್ಟ ಕಣ್ಣಿನ ತೊಂದರೆಗಳು ನಿವಾರಣೆಯಾಗುತ್ತವೆ. ಸ್ವಲ್ಪ ಸಿಹಿ ಇರುವ ಅಂದರೆ ಖಾರ ಕಡಿಮೆ ಇರುವ ಈರುಳ್ಳಿಯನ್ನು ಚಿಕ್ಕ ಚಿಕ್ಕ ತುಂಡುಗಳನ್ನಾಗಿ ಕತ್ತರಿಸಿ ತುಪ್ಪದಲ್ಲಿ ಹುರಿದು ನಿಯಮಿತವಾಗಿ ಸೇವಿಸಿದರೆ ಲೈಂಗಿಕ ಶಕ್ತಿಯ ವೃದ್ಧಿಯಾಗುತ್ತದೆ.

ಕೂದಲು ಉದುರುವುದನ್ನು ಕಡಿಮೆ ಮಾಡಲು ಈರುಳ್ಳಿಯು ಸಹಕಾರಿ. ಈರುಳ್ಳಿಯ ರಸ ತೆಗೆದು ತಲೆ ಸ್ನಾನ ಮಾಡುವ ಹತ್ತು ನಿಮಿಷ ಮೊದಲು ಕೂದಲಿನ ಬುಡಕ್ಕೆ ಹಚ್ಚಬೇಕು. ಇದರಿಂದ ಕೂದಲಿನ ಬೆಳವಣಿಗೆ ಚೆನ್ನಾಗಿ ಆಗಲು ಮತ್ತು ಕೂದಲು ಉದುರುವುದು ನಿಲ್ಲಲು ಸಹಾಯವಾಗುತ್ತದೆ. ಬೊಜ್ಜನ್ನು ಕಡಿಮೆ ಮಾಡಲು ಕೂಡ ಈರುಳ್ಳಿಯು ಸಹಕಾರಿ. ಬೆಳ್ಳುಳ್ಳಿಯ ಇನ್ನೊಂದು ಅದ್ಭುತ ಗುಣವೆಂದರೆ ಅದು ನರದ ಶಕ್ತಿಯನ್ನು ಹೆಚ್ಚಿಸುತ್ತದೆ. ಹಾಗಾಗಿ ಸಯಾಟಿಕಾದಂತಹ ಸಮಸ್ಯೆಗಳನ್ನು ಅನುಭವಿಸುತ್ತಿರುವವರಿಗೆ ಈರುಳ್ಳಿ ತುಂಬಾ ಲಾಭದಾಯಕ.

ಕಫದ ಸಮಸ್ಯೆಯಿಂದ ಬಳಲುತ್ತಿದ್ದು ಕಫ ಹೊರಗೆ ಬರುತ್ತಿಲ್ಲದಿದ್ದರೆ ಎರಡು ಚಮಚದಷ್ಟು ಈರುಳ್ಳಿ ರಸ, ಅರ್ಧ ಚಮಚದಷ್ಟು ಶುಂಠಿ ರಸ, ಅರ್ಧ ಚಮಚದಷ್ಟು ತುಳಸಿ ಎಲೆಗಳ ರಸ ಮತ್ತು ಒಂದು ಚಮಚ ಜೇನುತುಪ್ಪವನ್ನು ಸೇರಿಸಿ ದಿನಕ್ಕೆ ಒಂದು ಅಥವಾ ಎರಡು ಬಾರಿ ಸೇವಿಸಿದರೆ ಕಫ ಹೊರಗೆ ಬಂದು ಸಮಸ್ಯೆ ನಿವಾರಣೆಯಾಗುತ್ತದೆ.

ಈರುಳ್ಳಿ ಒಳ್ಳೆಯ ಜೀರ್ಣಕಾರಿಯೂ ಹೌದು ಹಾಗಾಗಿ ಅಜೀರ್ಣ ಇರುವವರಿಗೆ ಹೆಚ್ಚಿನ ಪ್ರಮಾಣದಲ್ಲಿ ಈರುಳ್ಳಿಯನ್ನು ಹಾಕಿ ಹೆಸರುಬೇಳೆಯ ತಿಳಿಸಾರು ಮಾಡಿ ಊಟಕ್ಕೆ ನೀಡಿದರೆ ಅಜೀರ್ಣದ ಸಮಸ್ಯೆ ತುಂಬಾ ಚೆನ್ನಾಗಿ ಹತೋಟಿಗೆ ಬರುತ್ತದೆ. ಜೊತೆಗೆ ಶಕ್ತಿ ವೃದ್ಧಿಯೂ ಆಗುತ್ತದೆ. ಒಟ್ಟಿನಲ್ಲಿ ಈರುಳ್ಳಿಯನ್ನು ಸರಿಯಾಗಿ ಬಳಸಿಕೊಂಡರೆ ಅದು ಕೇವಲ ತರಕಾರಿಯಲ್ಲ ಅದ್ಭುತ ಔಷಧ.(ಬರಹ-ಡಾ|| ವೆಂಕಟ್ರಮಣ ಹೆಗಡೆ
ವೇದ ವೆಲ್ನೆಸ್ ಸೆಂಟರ್, ನಿಸರ್ಗಮನೆ, ಶಿರಸಿ, ಉ.ಕನ್ನಡ)

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending