Connect with us

ದಿನದ ಸುದ್ದಿ

ನಿಮ್ಮ‌ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ನೀಡಲಾಗುವುದು : ಇಂದೇ ಕರೆ ಮಾಡಿ

Published

on

ಶ್ರೀ ಕಾರ್ಯಸಿದ್ದಿ ಆಂಜನೇಯ ಸ್ವಾಮಿ ಸ್ಮರಣೆಯನ್ನು ಮಾಡುತ್ತಾ ಈ ದಿನದ ರಾಶಿಗಳ ಶುಭಾಶುಭಫಲಗಳನ್ನು ತಿಳಿಯೋಣ.

ಜ್ಯೋತಿಷ್ಯರು ಪ್ರಧಾನ ತಾಂತ್ರಿಕ್ ಶ್ರೀ ಗಿರಿಧರ ಭಟ್
ನಿಮ್ಮ ಸಮಸ್ಯೆಗಳಾದ ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ಪ್ರೇಮ ವಿಷಯ, ದಾಂಪತ್ಯ, ಕೌಟುಂಬಿಕ ಕಲಹ, ಇನ್ನು ಇತ್ಯಾದಿ ಗುಪ್ತ ಕಠಿಣ ಸಮಸ್ಯೆಗಳಿಗೆ ಶಾಸ್ತ್ರೋಕ್ತ ತಾಂತ್ರಿಕ್ ವಿಧಾನಗಳಿಂದ ಪರಿಹಾರ ಶತಸಿದ್ಧ.

ಇಂದೇ ಕರೆ ಮಾಡಿ.
9945410150

ಮೇಷ ರಾಶಿ

ಹಿರಿಯರ ಹಿತಾಸಕ್ತಿಯನ್ನು ಕಡೆಗಣಿಸಬೇಡಿ, ಅವರ ಬೇಕು ಬೇಡಗಳಿಗೆ ನಿಮ್ಮಿಂದ ಸಕಾರಾತ್ಮಕ ಉತ್ತರ ವಿರಲಿ. ಪಿತ್ರಾರ್ಜಿತ ಆಸ್ತಿಗಳಲ್ಲಿ ಜಯ ಸಂಪಾದನೆ ಆಗಲಿದೆ. ವೈಯಕ್ತಿಕ ಸಮಸ್ಯೆಗಳಿಗೆ ಸೂಕ್ತ ಪರಿಹಾರ ದೊರೆಯುವುದು ನಿಶ್ಚಿತ. ಗುರುಮುಖೇನ ಮಾರ್ಗದರ್ಶನದಿಂದ ಬಹುದೊಡ್ಡ ಯೋಜನೆಯನ್ನು ರೂಪಿಸುವಿರಿ. ಸಾಲಬಾಧೆಯಿಂದ ಮುಕ್ತರಾಗಲು ಪ್ರಯತ್ನಿಸುವುದು ಮುಖ್ಯ.

ಪ್ರಧಾನ ತಾಂತ್ರಿಕ್ ಗಿರಿಧರ ಭಟ್
9945410150

ವೃಷಭ ರಾಶಿ

ಕಚೇರಿ ಕೆಲಸಗಳಲ್ಲಿ ಹಾಗೂ ನಿಮ್ಮ ಕೌಟುಂಬಿಕ ವ್ಯಾಜ್ಯಗಳು ಮಾನಸಿಕ ಚಿಂತೆ ತರಲಿದೆ. ಉದ್ಯೋಗದಲ್ಲಿ ಹೊಸ ಕೆಲಸದ ಅವಕಾಶ ಸಿಗುವುದು. ಯಶಸ್ಸಿಗೆ ಬೇಕಾಗಿರುವ ಸೌಕರ್ಯ ಹಿರಿಯರಿಂದ ಪ್ರಾಪ್ತಿಯಾಗಲಿದೆ. ಸಂಗಾತಿಯೊಡನೆ ಪ್ರೇಮದಿಂದ ಕಾಲ ಕಳೆಯುತ್ತೀರಿ. ಮಕ್ಕಳ ಭವಿಷ್ಯಕ್ಕಾಗಿ ಉತ್ತಮವಾದ ಮಾರ್ಗವನ್ನು ಹುಡುಕುವ ಸಾಧ್ಯತೆ ಇದೆ.

ಪ್ರಧಾನ ತಾಂತ್ರಿಕ್ ಗಿರಿಧರ ಭಟ್
9945410150

ಮಿಥುನ ರಾಶಿ

ನಿಮ್ಮ ಮಾತುಗಳು ಹಾಗೂ ಕೆಲಸವು ಗೆಲುವಿನ ದಾರಿ ಸೂಚಿಸುತ್ತದೆ. ಜನಗಳ ಜೊತೆಗೆ ಹೆಚ್ಚಾಗಿ ಬೆರೆಯುವಿರಿ. ಒಡನಾಡಿಗಳ ಯೋಗ ಕ್ಷೇಮ ವಿಚಾರಿಸುವ ವ್ಯವಧಾನ ತೋರಿಸುತ್ತೀರಿ. ಕುಟುಂಬದಲ್ಲಿ ಸಂತೋಷಕರ ವಾತಾವರಣ ಪ್ರಾಪ್ತಿಯಾಗಲಿದೆ. ಮನಸ್ಸಿಗೆ ಮುದ ನೀಡುವ ಕಲಾ ಚಟುವಟಿಕೆಗಳಲ್ಲಿ ಪಾಲ್ಗೊಳ್ಳಲು ಇಚ್ಚಿಸುವಿರಿ.

ಪ್ರಧಾನ ತಾಂತ್ರಿಕ್ ಗಿರಿಧರ ಭಟ್
9945410150

ಕರ್ಕಾಟಕ ರಾಶಿ

ಕೆಲಸದ ಜಾಗದಲ್ಲಿ ಅನಗತ್ಯವಾಗಿ ನಿಮ್ಮ ವಿರುದ್ಧ ದೋಷಾರೋಪಗಳು ಮಾಡುವ ಸಾಧ್ಯತೆ ಇದೆ. ಆತ್ಮೀಯ ವ್ಯಕ್ತಿಗಳಿಂದ ಮೋಸ ಹೋಗುವ ಪ್ರಮೇಯ ಬರಬಹುದು. ಕೆಲವರು ನಿಮ್ಮ ಹಿತ ಬಯಸುವ ಜನಗಳು ನಿಮ್ಮ ಕಷ್ಟಕ್ಕೆ ಬೆಂಬಲವಾಗಿ ನಿಲ್ಲಲಿದ್ದಾರೆ. ಮಾನಸಿಕ ಸ್ಥಿಮಿತತೆಯನ್ನು ಕಳೆದುಕೊಳ್ಳಬೇಡಿ. ಆದಷ್ಟು ದೈಹಿಕ ಕ್ಷಮತೆಯನ್ನು ಕಾಪಾಡಿಕೊಳ್ಳಿ.

ಪ್ರಧಾನ ತಾಂತ್ರಿಕ್ ಗಿರಿಧರ ಭಟ್
9945410150

ಸಿಂಹ ರಾಶಿ

ಹಣಕಾಸಿನ ವ್ಯವಹಾರ ಉತ್ತಮ ರೀತಿಯಲ್ಲಿ ನಡೆಯಲಿದೆ. ಅಗತ್ಯ ಆರ್ಥಿಕ ಅಭಿವೃದ್ಧಿ ಕಾಣಬಹುದು. ಉದ್ಯಮ ವಲಯದಲ್ಲಿ ಬೆಳವಣಿಗೆ ಆಗಲಿದೆ. ಖರೀದಿ ಮತ್ತು ಮಾರಾಟ ಪ್ರಕ್ರಿಯೆಗಳು ಸರಾಗವಾಗಿ ನಡೆಯುವುದು. ಶೈಕ್ಷಣಿಕ ವಿಷಯ ಪ್ರಗತಿಯಲ್ಲಿದೆ.

ಪ್ರಧಾನ ತಾಂತ್ರಿಕ್ ಗಿರಿಧರ ಭಟ್
9945410150

ಕನ್ಯಾ ರಾಶಿ

ನಿಮ್ಮ ಪ್ರತಿಯೊಂದು ನಡೆಯು ಪ್ರಶಂಸೆಗೆ ಪೂರಕ ವಾತಾವರಣ ಸೃಷ್ಟಿಸುತ್ತದೆ. ಸಾಮಾಜಿಕ ಮತ್ತು ರಾಜಕೀಯ ಕ್ಷೇತ್ರದಲ್ಲಿ ಜನಮನ್ನಣೆ ಗಳಿಸುವಿರಿ. ಕೆಲಸದಲ್ಲಿ ಹೆಚ್ಚಿನ ಅವಕಾಶಗಳು ಪ್ರಾಪ್ತಿಯಾಗಲಿದೆ. ನಿಮ್ಮ ಪರಿಶ್ರಮಕ್ಕೆ ತಕ್ಕ ಬೆಲೆ ಸಿಗಲಿದೆ. ಕೆಲಸದ ಒತ್ತಡ ಹಾಗೂ ಓಡಾಟಗಳಿಂದ ಆರೋಗ್ಯದಲ್ಲಿ ಬದಲಾವಣೆಯಾಗಬಹುದು, ಆದಷ್ಟು ಎಚ್ಚರಿಕೆ ಇರಲಿ.

ಪ್ರಧಾನ ತಾಂತ್ರಿಕ್ ಗಿರಿಧರ ಭಟ್
9945410150

ತುಲಾ ರಾಶಿ

ಭಾವನಾ ಜೀವಿಯಾಗಿ ಕಂಡುಬರುತ್ತೀರಿ. ಕಷ್ಟದ ವಿಚಾರಗಳಿಗೆ ನೀವು ಸ್ಪಂದಿಸುವ ಮನೋಭಾವ ಎಲ್ಲರೂ ಶ್ಲಾಘಿಸಲಾದ್ದಾರೆ. ಮಕ್ಕಳ ಪ್ರಗತಿಯ ಬಗ್ಗೆ ಆದಷ್ಟು ಗಮನ ವಹಿಸಬೇಕಾಗಿದೆ. ನಿಮ್ಮಿಂದ ನಡೆಯಬೇಕಾಗಿರುವ ಶುಭಕಾರ್ಯವನ್ನು ಜ್ಞಾಪಿಸಿಕೊಳ್ಳಲಿದ್ದೀರಿ, ಇದಕ್ಕೆ ಅವಶ್ಯಕ ತಯಾರಿ ಸಹ ನಡೆಯುವ ಸಾಧ್ಯತೆಗಳು ಕಂಡು ಬರುತ್ತದೆ. ಕ್ರಯವಿಕ್ರಯ ಗಳಲ್ಲಿ ಗೆಲುವಿನ ನಗೆ ಕಂಡುಬರುತ್ತದೆ. ಸಂತೋಷದ ಸಮಾರಂಭಗಳಿಗೆ ಕುಟುಂಬದೊಡನೆ ಪಾಲ್ಗೊಳ್ಳಲಿದ್ದೀರಿ.

ಪ್ರಧಾನ ತಾಂತ್ರಿಕ್ ಗಿರಿಧರ ಭಟ್
9945410150

ವೃಶ್ಚಿಕ ರಾಶಿ

ಆರೋಗ್ಯದ ಸಮಸ್ಯೆ ನಿಮಗೆ ಹೆಚ್ಚು ತೊಂದರೆ ನೀಡಬಹುದಾಗಿದೆ. ಎಲ್ಲರಲ್ಲೂ ಬೆರೆಯುವ ನಿಮ್ಮ ಸ್ವಭಾವ ಆಕರ್ಷಣೆಯ ವ್ಯಕ್ತಿತ್ವವನ್ನು ರೂಪಿಸಿಕೊಳ್ಳುತ್ತದೆ. ಮೋಜಿನ ಮತ್ತು ಮನರಂಜನೆಗಾಗಿ ಅವಕಾಶ ಸಿಗಲಿದೆ. ಹೆಚ್ಚುವರಿ ಜ್ಞಾನ ಪಡೆಯಲು ಸಶಕ್ತರಾಗಿ, ಕೌಶಲ್ಯಗಳಲ್ಲಿ ಸಮಯವನ್ನು ವಿನಿಯೋಗಿಸುವುದು ಸೂಕ್ತ. ನಿಮ್ಮ ಮಡದಿಯು ಇಂದು ನಿಮ್ಮ ಕಣ್ಣಿಗೆ ಅತಿಸುಂದರವಾಗಿ ಕಾಣುತ್ತಾರೆ. ನಿಮ್ಮಲ್ಲಿನ ಉತ್ಸಾಹದಿಂದ ಅನುಕೂಲಕರ ಪಲಿತಾಂಶ ಬರಲಿದೆ.

ಪ್ರಧಾನ ತಾಂತ್ರಿಕ್ ಗಿರಿಧರ ಭಟ್
9945410150

ಧನಸ್ಸು ರಾಶಿ

ಹಣಕಾಸಿನ ಸಮಸ್ಯೆಗೆ ಉತ್ತಮ ಮಾರ್ಗಗಳನ್ನು ಯೋಚಿಸುತ್ತೀರಿ ಹಾಗೂ ಕಾರ್ಯಗಳನ್ನು ರಚನಾತ್ಮಕವಾಗಿ ಮಾಡಲಿದ್ದೀರಿ. ಬಾಲ್ಯ ಸ್ನೇಹಿತರನ್ನು ಸಂದಿಸ ಬಹುದಾದ ದಿನವಿದು. ಕುಟುಂಬದ ಸದಸ್ಯರೊಂದಿಗೆ ಒತ್ತಡದ ಪರಿಸ್ಥಿತಿಯನ್ನು ಅನುಭವಿಸುವ ಸಾಧ್ಯತೆ ಇದೆ. ಆದಷ್ಟು ವೈಯಕ್ತಿಕ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಿ.

ಪ್ರಧಾನ ತಾಂತ್ರಿಕ್ ಗಿರಿಧರ ಭಟ್
9945410150

ಮಕರ ರಾಶಿ

ವ್ಯಾಪಾರಗಳಲ್ಲಿ ನಿಮ್ಮ ಸ್ವಂತ ಅಭಿಪ್ರಾಯವಿರಲಿ ಇತರರ ನಿರ್ಧಾರಗಳಿಗೆ ನೀವು ಮಣಿಯಬೇಡಿ. ಆತ್ಮೀಯರು ಇಂದು ನಿಮಗಾಗಿ ಉಡುಗೊರೆಯನ್ನು ನೀಡುವ ಸಾಧ್ಯತೆ ಕಂಡುಬರುತ್ತದೆ, ಇದು ನಿಮಗೆ ಆಶ್ಚರ್ಯ ತರುವುದು ನಿಶ್ಚಿತ. ಮಾಡುವ ಕೆಲಸದಲ್ಲಿ ಸುಲಭ ದಾಯಕ ವಿಚಾರಗಳು ನಡೆಯಲಿದೆ. ನಿಮ್ಮಲ್ಲಿನ ಅಪಾರ ವಿಶ್ವಾಸ ಮತ್ತು ಜ್ಞಾನದಿಂದ ಕೆಲಸದಲ್ಲಿ ಉತ್ತಮ ಬದ್ಧತೆ ತೋರಿಸುತ್ತೀರಿ.

ಪ್ರಧಾನ ತಾಂತ್ರಿಕ್ ಗಿರಿಧರ ಭಟ್
9945410150

ಕುಂಭ ರಾಶಿ

ಆರ್ಥಿಕವಾಗಿ ಮುಂದುವರಿಯುವ ಎಲ್ಲ ಲಕ್ಷಣಗಳು ಕಂಡು ಬರುತ್ತದೆ. ಕೆಲಸವನ್ನು ಬೇಗನೆ ಮುಗಿಸಿ ವಿಶ್ರಾಂತಿ ತೆಗೆದುಕೊಳ್ಳುವ ಮನೋಭಾವನೆಯಲ್ಲಿ ಇರುವಿರಿ. ಹೂಡಿಕೆಗಳ ಬಗ್ಗೆ ಹೆಚ್ಚಿನ ಗಮನ ಅಗತ್ಯವಿದೆ. ಇರುಳು ಕಂಡ ಬಾವಿಗೆ ಹಗಲು ಬಿದ್ದಂತೆ, ವ್ಯವಹಾರಗಳನ್ನು ನೋಡಿ ಸಹ ಮೋಸ ಹೋಗುವ ಸಾಧ್ಯತೆ ಇದೆ ಎಚ್ಚರ. ಬಂದು ವರ್ಗಗಳೊಡನೆ ವಿಶ್ವಾಸವನ್ನು ಕಾಯ್ದುಕೊಳ್ಳಿ.

ಪ್ರಧಾನ ತಾಂತ್ರಿಕ್ ಗಿರಿಧರ ಭಟ್
9945410150

ಮೀನ ರಾಶಿ

ಉದ್ಯೋಗ ಸ್ಥಳದಲ್ಲಿ ಮೇಲಾಧಿಕಾರಿಗಳು ಹಾಗೂ ಸಹವರ್ತಿಗಳಿಂದ ಪ್ರಶಂಸೆ ದೊರೆಯಲಿದೆ. ನಿಮ್ಮ ಅಭಿಪ್ರಾಯಗಳನ್ನು ಕಡೆಗಣನೆ ಮಾಡುವರು ಆದಷ್ಟು ಕೆಲಸದ ಬಗ್ಗೆ ಮಾತ್ರ ಚಿಂತನೆ ನಡೆಸಿ. ಹಣಕಾಸಿನ ವ್ಯವಹಾರ ಉತ್ತಮವಾಗಿ ನಡೆಯಲಿದೆ. ಆರೋಗ್ಯವನ್ನು ಕಾಪಾಡಿಕೊಳ್ಳಿ. ಉತ್ತಮ ಆಹಾರ ಸೇವನೆಯು ಒಳಿತು.

ಪ್ರಧಾನ ತಾಂತ್ರಿಕ್ ಗಿರಿಧರ ಭಟ್
9945410150

ಕಾರ್ಯಸಿದ್ದಿ ಆಂಜನೇಯ ಜ್ಯೋತಿಷ್ಯಂ
ಜ್ಯೋತಿಷ್ಯರು ಪ್ರಧಾನ ತಾಂತ್ರಿಕ್ ಗಿರಿಧರ ಭಟ್
ನಿಮ್ಮ ಸಮಸ್ಯೆಗಳ ಸಮಾಲೋಚನೆಗಾಗಿ ಲಭ್ಯರಿದ್ದಾರೆ. ಪರಿಹಾರ ಮಾರ್ಗದರ್ಶನಕ್ಕಾಗಿ ಇಂದೇ ಕರೆ ಮಾಡಿ.
9945410150

ದಿನದ ಸುದ್ದಿ

ನಟ ದಿಲೀಪ್ ರಾಜ್ ಆ ಒಂದು ತಪ್ಪು ಪ್ರಾಣಕ್ಕೆ ಮುಳುವಾಯ್ತು

Published

on

ಸುದ್ದಿದಿನಡೆಸ್ಕ್:ಕನ್ನಡ ಚಿತ್ರರಂಗದ ಖ್ಯಾತ ನಟ ದಿಲೀಪ್ ರಾಜ್ (47) ಅವರ ಅಕಾಲಿಕ ನಿಧನವು ಇಡೀ ಸ್ಯಾಂಡಲ್‌ವುಡ್ ಅನ್ನು ದಿಗ್ಭ್ರಮೆಗೊಳಿಸಿದೆ. ಕೇವಲ 47 ವರ್ಷ ವಯಸ್ಸಿನ ಈ ಪ್ರತಿಭಾನ್ವಿತ ಕಲಾವಿದ ಇಂದು ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ. ಆದರೆ ಅವರ ಈ ಸಾವಿನ ಹಿಂದೆ ಒಂದು ಬೇಸರದ ಸಂಗತಿಯೂ ಅಡಗಿದೆ, ಅದೇನೆಂದರೆ ಅವರ ಆರೋಗ್ಯದ ಕುರಿತು ತೋರಿದ ಒಂದು ನಿರ್ಲಕ್ಷ್ಯ!

ನಟ ನಿರ್ಮಾಪಕ ದಿಲೀಪ್ ರಾಜ್ ಅವರು ಇಂದು ಹೃದಯಾಘಾತದಿಂದ ನಿಧನರಾಗಿದ್ದು, ಇಡೀ ಸ್ಯಾಂಡಲ್‌ವುಡ್ ದಿಗ್ಭ್ರಮೆಗೊಂಡಿದೆ. ಕೆಲವು ದಿನಗಳ ಹಿಂದೆ ಗೋವಾ ಪ್ರವಾಸದಲ್ಲಿದ್ದಾಗಲೇ ಅವರಿಗೆ ಆಗಾಗ ಎದೆನೋವು ಕಾಣಿಸಿಕೊಂಡಿತ್ತು, ಆದರೆ ಪ್ರವಾಸದ ಖುಷಿಯಲ್ಲಿದ್ದ ಅವರು ಅದನ್ನ ಗಂಭೀರವಾಗಿ ಪರಿಗಣಿಸಿರಲಿಲ್ಲ.. ಬೆಂಗಳೂರಿಗೆ ಮರಳಿದ ನಂತರ ಇಂದು ವೈದ್ಯಕೀಯ ತಪಾಸಣೆಗೆ ಅಪಾಯಿಂಟ್‌ಮೆಂಟ್ ಕೂಡ ಫಿಕ್ಸ್ ಆಗಿತ್ತು. ಆದರೆ ವಿಧಿ ಆಟವೇ ಬೇರೆಯಾಗಿತ್ತು;

ತಪಾಸಣೆಗೆ ಹೋಗುವ ಮುನ್ನವೇ ರಾತ್ರಿ ತೀವ್ರ ಎದೆನೋವು ಕಾಣಿಸಿಕೊಂಡು ಕುಮಾರಸ್ವಾಮಿ ಲೇಔಟ್‌ನ ಅಪೋಲೋ ಆಸ್ಪತ್ರೆಯಲ್ಲಿ ಅವರು ಕೊನೆಯುಸಿರೆಳೆದಿದ್ದಾರೆ.ನೋವು ಕಾಣಿಸಿಕೊಂಡ ತಕ್ಷಣವೇ ಆಸ್ಪತ್ರೆಗೆ ದಾಖಲಾಗಿದ್ದರೆ ಇಂದು ಪರಿಸ್ಥಿತಿ ಬೇರೆಯೇ ಇರುತ್ತಿತ್ತು ಎಂದು ಅವರ ಕುಟುಂಬಸ್ಥರು ಮತ್ತು ಅಭಿಮಾನಿಗಳು ಕಣ್ಣೀರು ಹಾಕುತ್ತಿದ್ದಾರೆ.
ನಟ ದಿಲೀಪ್ ರಾಜ್ ಅವರು ಕೆಲವೇ ದಿನಗಳ ಹಿಂದೆ ಗೋವಾಗೆ ಪ್ರವಾಸ ತೆರಳಿದ್ದರು.

ಅಲ್ಲಿ ಗೆಳೆಯರೊಂದಿಗೆ ಕಾಲ ಕಳೆಯುವಾಗಲೇ ಅವರಿಗೆ ಎದೆ ನೋವು ಕಾಣಿಸಿಕೊಂಡಿತ್ತು ಎನ್ನಲಾಗುತ್ತಿದೆ. ಅಂದೇ ಹೃದಯವು ಅಪಾಯದ ಮುನ್ಸೂಚನೆ ನೀಡಿದ್ದರೂ, ದಿಲೀಪ್ ಅವರು ಅದನ್ನು ಗಂಭೀರವಾಗಿ ಪರಿಗಣಿಸದೆ ನಿರ್ಲಕ್ಷ್ಯ ತೋರಿದ್ದರು. ಗೋವಾ ಟ್ರಿಪ್‌ನಲ್ಲಿದ್ದಾಗಲೇ ಆಗಾಗ ನೋವು ಕಾಣಿಸಿಕೊಂಡರೂ, ಅವರು ಅದನ್ನು ಕೇರ್ ಮಾಡಿರಲಿಲ್ಲ.

ಬೆಂಗಳೂರಿಗೆ ಮರಳಿದ ನಂತರ ಅವರು ಆರೋಗ್ಯ ತಪಾಸಣೆ ಮಾಡಿಸಿಕೊಳ್ಳಲು ನಿರ್ಧರಿಸಿದ್ದರು. ವಿಪರ್ಯಾಸವೆಂದರೆ, ಇಂದು ಅವರು ಆಸ್ಪತ್ರೆಗೆ ತೆರಳಿ ಹೃದಯ ತಪಾಸಣೆ ಮಾಡಿಸಿಕೊಳ್ಳಬೇಕಿತ್ತು ಮತ್ತು ಅದಕ್ಕಾಗಿ ವೈದ್ಯರ ಅಪಾಯಿಂಟ್‌ಮೆಂಟ್ ಕೂಡ ಫಿಕ್ಸ್ ಆಗಿತ್ತು. ಆದರೆ ವಿಧಿ ಆಟವೇ ಬೇರೆಯಾಗಿತ್ತು. ನಿನ್ನೆ ರಾತ್ರಿ ಕೂಡ ಧಾರಾವಾಹಿ ಕಲಾವಿದರ ಜೊತೆ ಫೋನ್‌ನಲ್ಲಿ ಆತ್ಮೀಯವಾಗಿ ಮಾತನಾಡಿದ್ದ ನಟನಿಗೆ, ಮಧ್ಯರಾತ್ರಿ ತೀವ್ರವಾದ ಎದೆನೋವು ಕಾಣಿಸಿಕೊಂಡಿದೆ. ಆಸ್ಪತ್ರೆಗೆ ತೆರಳುವ ಮುನ್ನವೇ ಅವರು ಏಕಾಏಕಿ ಕುಸಿದು ಬಿದ್ದು ಕೊನೆಯುಸಿರೆಳೆದಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಸಾವಿನಲ್ಲೂ ಒಂದಾದ ಪ್ರೇಮಿಗಳು: ಪ್ರೇಮಿಯ ಪಕ್ಕದಲ್ಲೇ ಪ್ರೇಯಸಿಯ ಅಂತ್ಯಸಂಸ್ಕಾರ!

Published

on

ಸುದ್ದಿದಿನ,ಕುಂಬಳೆ: ಪ್ರೀತಿ ಎನ್ನುವುದು ಸಾವಿನ ನಂತರವೂ ಶಾಶ್ವತ ಎಂಬುದಕ್ಕೆ ಕೇರಳದ ಕಾಸರಗೋಡಿನಲ್ಲಿ ನಡೆದ ಈ ಘಟನೆ ಸಾಕ್ಷಿಯಾಗಿದೆ. ನಿಶ್ಚಿತಾರ್ಥವಾಗಿದ್ದ ಯುವಕ ಮೃತಪಟ್ಟ ಬೆನ್ನಲ್ಲೇ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದ ಯುವತಿಯ ಅಂತ್ಯಸಂಸ್ಕಾರವನ್ನು ಆಕೆಯ ಇಚ್ಛೆಯಂತೆ ಯುವಕನ ಸಮಾಧಿಯ ಪಕ್ಕದಲ್ಲೇ ನೆರವೇರಿಸಲಾಗಿದೆ.

ನಡೆದಿದ್ದೇನು?

ಕಿದೂರು ಕುಂಟಂಗೇರಡ್ಕದ ಪ್ರಫುಲ್ಲ (26) ಮತ್ತು ತಮಿಳುನಾಡು ನಿವಾಸಿಯಾದ ಬ್ಯಾಂಕ್ ನೌಕರ ಮಣಿ ಎಂಬವರಿಗೆ ನಾಲ್ಕು ತಿಂಗಳ ಹಿಂದೆ ಅದ್ಧೂರಿಯಾಗಿ ಮದುವೆ ನಿಶ್ಚಿತಾರ್ಥ ನಡೆದಿತ್ತು. ಇನ್ನೇನು ದಾಂಪತ್ಯ ಜೀವನಕ್ಕೆ ಕಾಲಿಡಬೇಕು ಎನ್ನುವಷ್ಟರಲ್ಲಿ, ಒಂದು ತಿಂಗಳ ಹಿಂದೆ ಸಂಭವಿಸಿದ ಬೈಕ್ ಅಪಘಾತದಲ್ಲಿ ಮಣಿ ಮೃತಪಟ್ಟಿದ್ದರು.

ಡೆತ್ ನೋಟ್‌ನಲ್ಲಿತ್ತು ಕೊನೆಯ ಆಸೆ

ತನ್ನ ಭಾವಿ ಪತಿಯ ಅಗಲಿಕೆಯಿಂದ ತೀವ್ರವಾಗಿ ನೊಂದಿದ್ದ ಪ್ರಫುಲ್ಲ, ಕಳೆದ ಭಾನುವಾರ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದರು. ಸಾವಿಗೂ ಮುನ್ನ ಆಕೆ ಬರೆದಿದ್ದ ಡೆತ್ ನೋಟ್ ಎಲ್ಲರ ಕಣ್ಣಾಲಿಗಳನ್ನು ಒದ್ದೆ ಮಾಡಿದೆ. “ನನ್ನ ಮೃತದೇಹವನ್ನು ಮಣಿಯ ಸಮಾಧಿಯ ಸಮೀಪದಲ್ಲೇ ಅಂತ್ಯಸಂಸ್ಕಾರ ಮಾಡಬೇಕು” ಎಂದು ಆಕೆ ತನ್ನ ಕೊನೆಯ ಆಸೆಯನ್ನು ಬರೆದಿಟ್ಟಿದ್ದರು.

ತಮಿಳುನಾಡಿನಲ್ಲಿ ಅಂತ್ಯಕ್ರಿಯೆ

ಯುವತಿಯ ಆಸೆಯಂತೆ ಉಭಯ ಕುಟುಂಬದವರು ಮಾತುಕತೆ ನಡೆಸಿದರು. ಅದರಂತೆ ನಿನ್ನೆ ಕಾಸರಗೋಡಿನಿಂದ ಪ್ರಫುಲ್ಲರ ಮೃತದೇಹವನ್ನು ತಮಿಳುನಾಡಿನ ತಿರುನಲ್ವೇಲಿ ಜಿಲ್ಲೆಯ ವಳ್ಳಿಯೂರು ಎಂಬಲ್ಲಿಗೆ ಕೊಂಡೊಯ್ಯಲಾಯಿತು. ಅಲ್ಲಿ ಮಣಿಯ ಸಮಾಧಿಯ ಪಕ್ಕದಲ್ಲೇ ಪ್ರಫುಲ್ಲರ ಅಂತ್ಯಸಂಸ್ಕಾರವನ್ನು ನೆರವೇರಿಸುವ ಮೂಲಕ ಪ್ರೇಮಿಗಳಿಬ್ಬರನ್ನು ಸಾವಿನಲ್ಲೂ ಒಂದಾಗಿಸಲಾಯಿತು.

ಅಂತ್ಯಸಂಸ್ಕಾರದ ವೇಳೆ ಎರಡೂ ಕುಟುಂಬದ ಸದಸ್ಯರು ಉಪಸ್ಥಿತರಿದ್ದು, ಮರುಗುವ ಪ್ರೇಮಕಥೆಗೆ ಕಂಬನಿಯ ವಿದಾಯ ಹೇಳಿದರು. ಈ ವಿಡಿಯೋ ಮತ್ತು ಸುದ್ದಿ ಈಗ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗುತ್ತಿದ್ದು, ನೆಟ್ಟಿಗರು ಈ ಜೋಡಿಯ ಆತ್ಮಕ್ಕೆ ಶಾಂತಿ ಕೋರುತ್ತಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಕೈಮಗ್ಗ ಮತ್ತು ಜವಳಿ ತಂತ್ರಜ್ಞಾನ ಡಿಪ್ಲೋಮಾ ಕೋರ್ಸ್‌; ಪ್ರವೇಶಾತಿಗೆ ಅರ್ಜಿ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ: 2026-27ನೇ ಶೈಕ್ಷಣಿಕ ಸಾಲಿಗೆ ಕೈಮಗ್ಗ ಮತ್ತು ಜವಳಿ ತಂತ್ರಜ್ಞಾನದಲ್ಲಿನ ಮೂರು ವರ್ಷಗಳ ಡಿಪ್ಲೋಮಾ (ಡಿ.ಹೆಚ್.ಟಿ.ಟಿ) ಹಾಗೂ ಎರಡನೇ ವರ್ಷದ ನೇರ ಪ್ರವೇಶಕ್ಕೆ (Lateral Entry) ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ 2026 ರ ಜುಲೈ 01ಕ್ಕೆ ಅನ್ವಯಿಸುವಂತೆ ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 23 ವರ್ಷ ಹಾಗೂ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 25 ವರ್ಷ ಮೀರಿರಬಾರದು. ಒಟ್ಟು 39 ಅಭ್ಯರ್ಥಿಗಳನ್ನು (ಪುರುಷ ಮತ್ತು ಮಹಿಳಾ) ಆಯ್ಕೆ ಮಾಡಲಾಗುವುದು. ಆಯ್ಕೆಯಾದ ಪ್ರತಿಯೊಬ್ಬ ವಿದ್ಯಾರ್ಥಿಗೆ ಪ್ರತಿ ತಿಂಗಳು ರೂ. 2,500/- ಗಳ ಶಿಷ್ಯವೇತನ ನೀಡಲಾಗುವುದು., ಎಸ್.ಎಸ್.ಎಲ್.ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಇಂಗ್ಲಿಷ್ ಅನ್ನು ಒಂದು ವಿಷಯವಾಗಿ ಅಭ್ಯಸಿಸಿ ಉತ್ತೀರ್ಣರಾಗಿರಬೇಕು.

ಆಸಕ್ತ ಅಭ್ಯರ್ಥಿಗಳು ಅರ್ಜಿಗಳನ್ನು ಡಿಪ್ಲೋಮಾ ಕೋರ್ಸ್‌ಗೆ ನೇರ ಪ್ರವೇಶಕ್ಕೆ https://khtigadag.ac.in/AdmissionForm.pdf ಎರಡನೇ ವರ್ಷದ ನೇರ ಪ್ರವೇಶಕ್ಕೆ (Lateral Entry) https://khtigadag.ac.in/Lateralentryadmissionform.pdf ಈ ಲಿಂಕ್‌ಗಳ ಮೂಲಕ ಡೌನ್‌ಲೋಡ್ ಮಾಡಿಕೊಳ್ಳಬಹುದು. ಭರ್ತಿ ಮಾಡಿದ ಅರ್ಜಿಗಳನ್ನು ಅಗತ್ಯ ದಾಖಲಾತಿಗಳೊಂದಿಗೆ ಮೇ 30 ರೊಳಗೆ ಪ್ರಾಂಶುಪಾಲರು, ಕರ್ನಾಟಕ ಕೈಮಗ್ಗ ತಂತ್ರಜ್ಞಾನ ಸಂಸ್ಥೆ, ನರಸಾಪುರ, ಗದಗ-ಬೆಟಗೇರಿ-582102 ಇವರಿಗೆ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ ಹಾಗೂ ಅರ್ಜಿಗಳಿಗಾಗಿ ಉಪ ನಿರ್ದೇಶಕರು, ಕೈಮಗ್ಗ ಮತ್ತು ಜವಳಿ ಇಲಾಖೆ, ಜಿಲ್ಲಾ ಪಂಚಾಯತ್, ಕಾಲೇಜು ರಸ್ತೆ, ನಿಟ್ಟುವಳ್ಳಿ, ದಾವಣಗೆರೆ ಅಥವಾ ದೂರವಾಣಿ ಸಂಖ್ಯೆ: 08192-262362 ಸಂಪರ್ಕಿಸುವಂತೆ ಕೈಮಗ್ಗ ಮತ್ತು ಜವಳಿ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Continue Reading

Trending