ನಿತ್ಯ ಭವಿಷ್ಯ
ಭಾನುವಾರದ ಭವಿಷ್ಯ | ನಿಮ್ಮ ಸರ್ವ ಸಮಸ್ಯೆಗಳ ಪರಿಹಾರ ಮತ್ತು ಮಾರ್ಗದರ್ಶನಕ್ಕಾಗಿ ಇಂದೇ ಕರೆ ಮಾಡಿ
ಶ್ರೀ ನರಸಿಂಹ ಸ್ವಾಮಿ ಸ್ಮರಣೆ ಮಾಡುತ್ತಾ ಈ ದಿನದ ದ್ವಾದಶ ರಾಶಿ ಫಲಗಳನ್ನು ತಿಳಿಯೋಣ.
ಖ್ಯಾತ ಜ್ಯೋತಿಷ್ಯರು ಗಿರಿಧರಭಟ್
ನಿಮ್ಮ ಸರ್ವ ಸಮಸ್ಯೆಗಳ ಪರಿಹಾರ ಮತ್ತು ಮಾರ್ಗದರ್ಶನಕ್ಕಾಗಿ ಇಂದೇ ಕರೆ ಮಾಡಿ.
9945410150
ಮೇಷ ರಾಶಿ
ಇಂದು ಉತ್ತಮ ಧನ ಆದಾಯವಿದೆ ಹಾಗೆಯೇ ನಿಮಗಾಗಿ ಕೆಲಸಗಳು ಬಹಳಷ್ಟು ಇವೆ. ಕುಟುಂಬದ ಸೌಖ್ಯ ಕಾಣುವಿರಿ. ಆರ್ಥಿಕ ಉತ್ತೇಜನಕ್ಕೆ ಹಲವು ಮಾರ್ಗೋಪಾಯಗಳನ್ನು ಸಹ ಮಾಡುವಿರಿ. ನಿಮ್ಮ ಕೆಲಸವು ಇಂದು ಜನ ಮನ್ನಣೆಗೆ ಪಾತ್ರವಾಗಲಿದೆ. ಶತ್ರುಗಳು ಮೆತ್ತಗಾಗಿ ಮೂಲೆ ಸೇರುವರು. ನಿಮ್ಮಿಂದ ದೊಡ್ಡ ಮಟ್ಟದ ಸಾಮಾಜಿಕ ಸೇವೆಯನ್ನು ನಿರೀಕ್ಷಿಸಬಹುದು.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ
ವೃಷಭ ರಾಶಿ
ಜೀವನದಲ್ಲಿ ಕಷ್ಟ ನಷ್ಟಗಳು ಸಹಜವಾಗಿಯೇ ಬರುತ್ತದೆ ಯಾವುದಕ್ಕೂ ಚಿಂತೆ ಮಾಡದೆ ನಿಮ್ಮ ಕಾರ್ಯದಲ್ಲಿ ಮಗ್ನರಾಗಿ ಮುಂದೆ ಒಳ್ಳೆಯ ದಾರಿ ಕಾಣ ಸಿಗುವುದು. ಕೆಲವು ಅಡೆತಡೆಗಳ ನಡುವೆಯೂ ಇಂದು ಕೆಲಸದಲ್ಲಿ ಉತ್ತಮ ನಿರ್ವಹಣೆ ತೋರುವಿರಿ. ನಿಮ್ಮ ಕಾರ್ಯಶೈಲಿಯನ್ನು ವಿರೋಧಿಗಳು ಸಹ ಮೆಚ್ಚುಗೆ ಸೂಚಿಸುತ್ತಾರೆ.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ
ಮಿಥುನ ರಾಶಿ
ಹಣಕಾಸಿನಲ್ಲಿ ಸ್ವಲ್ಪ ಮಟ್ಟಿಗೆ ತೊಂದರೆ ಆಗಬಹುದು ಆದರೆ ಸಹಾಯಕ್ಕಾಗಿ ನಿಮ್ಮ ಆಪ್ತ ವರ್ಗ ಜನರು ಬಂದೇ ಬರುತ್ತಾರೆ. ಮಕ್ಕಳ ಶಿಕ್ಷಣಕ್ಕಾಗಿ ಇಂದು ಅನೇಕ ಯೋಜನೆಗಳನ್ನು ರೂಪಿಸಲಿದ್ದೀರಿ. ಅವರ ಶಿಕ್ಷಣದ ಮೇಲೆ ನಿಮ್ಮ ಪ್ರಭಾವವನ್ನು ಬೀರದಿರುವುದು ಸೂಕ್ತ. ಅವರ ಕಲಿಕೆಯ ಆಸಕ್ತಿಗೆ ಸ್ವತಂತ್ರವನ್ನು ನೀಡಿ.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ
ಕರ್ಕಾಟಕ ರಾಶಿ
ಸಂಜೆಯೊಳಗೆ ಕುಟುಂಬದಿಂದ ಶುಭ ಸುದ್ದಿ ಬರುವ ನಿರೀಕ್ಷೆ ಇದೆ. ಹೆಚ್ಚಿನ ಕೆಲಸವು ನಿಮ್ಮನ್ನು ಒತ್ತಡಕ್ಕೆ ಸಿಲುಕಿಸುತ್ತದೆ. ಕೆಲಸ ಮುಗಿದ ಹಾಗೆ ಮತ್ತಷ್ಟು ಕೆಲಸ ನಿಮಗೆ ಸಿಗಲಿದೆ ಇದರಿಂದ ಆಯಾಸ ಹೆಚ್ಚಾಗಬಹುದು. ವಿಶ್ರಾಂತಿಗಾಗಿ ಸಮಯ ಹೊಂದಾಣಿಕೆ ಮಾಡಿಕೊಳ್ಳಿ.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ
ಸಿಂಹ ರಾಶಿ
ನೀವು ಮನಸ್ಸಿನಲ್ಲಿ ಇಟ್ಟ ಗುರಿಯೇ ಬೇರೆ ಮಾಡುತ್ತಿರುವುದು ಕೆಲಸ ಬೇರೆಯಾಗಿದೆ ಚಿಂತೆ ಇಲ್ಲ ನಿಮ್ಮ ಗುರಿ ನೆರವೇರಲು ಸದ್ಯದಲ್ಲೇ ಶುಭ ಸಮಯ ಬರಲಿದೆ. ನಿಮ್ಮ ವ್ಯವಸ್ಥಿತ ಕಾರ್ಯ ಶೈಲಿಗೆ ವಿರೋಧಿಗಳ ಸಹ ತಲೆ ಬಾಗುವರು. ಕುಟುಂಬದೊಡನೆ ಆನಂದ ಕ್ಷಣ ಕಳೆಯಲು ಪ್ರಯತ್ನಿಸಿ. ಮಕ್ಕಳ ಶೈಕ್ಷಣಿಕ ಚಟುವಟಿಕೆಗೆ ನಿಮ್ಮದು ಪುಟ್ಟ ಸಹಾಯ ಸಹಕಾರ ಇರಲಿ. ಬಂದು ವರ್ಗದ ಜೊತೆ ಹೆಚ್ಚು ದೂರವಾದಂತೆ ಇದ್ದೀರಿ ಎಲ್ಲರ ಜೊತೆಗೆ ಬೆರೆಯುವಿಕೆ ನಿಮ್ಮಲ್ಲಿ ಚೈತನ್ಯ ತುಂಬುತ್ತದೆ.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ
ಕನ್ಯಾ ರಾಶಿ
ನಿಮ್ಮ ಕಾರ್ಯಗಳಲ್ಲಿ ತೊಂದರೆ ನೀಡುವ ಜನರು ಬಹಳಷ್ಟು ಇರುವರು ಅವರನ್ನು ಆದಷ್ಟು ದೂರವಿಟ್ಟು ಕಾರ್ಯವನ್ನು ಪೂರ್ಣಗೊಳಿಸಿ. ಆಪ್ತ ವರ್ಗದ ಜನಗಳು ನಿಮ್ಮಲ್ಲಿ ವಿಶ್ವಾಸವಿಟ್ಟು ಹಲವು ಯೋಜನೆಗಳನ್ನು ನಿಮಗೆ ನೀಡುವರು ಇದರಿಂದ ಆದಾಯ ಹಾಗೂ ಕೆಲಸ ವೃದ್ಧಿಯಾಗುತ್ತದೆ. ನಿಮ್ಮಲ್ಲಿನ ಕೋಪ ಹಾಗೂ ಕಟು ಮಾತುಗಳನ್ನು ಇಂದು ನಿಯಂತ್ರಣದಲ್ಲಿಡಿ, ಇದರಿಂದ ಕುಟುಂಬದಲ್ಲಿ ಭಿನ್ನಾಭಿಪ್ರಾಯ ಬರಬಹುದು ಹಾಗೆಯೇ ಹಿರಿಯರು ನಿಮ್ಮ ಮೇಲಿನ ಗೌರವನ್ನು ಕಡಿಮೆ ಮಾಡಿಕೊಳ್ಳಬಹುದು ಎಚ್ಚರವಹಿಸಿ.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ
ತುಲಾ ರಾಶಿ
ಉದ್ಯೋಗದಲ್ಲಿ ಬಡ್ತಿ ಕಾಣಬಹುದಾಗಿದೆ. ಸಹವರ್ತಿಗಳು ನಿಮ್ಮ ಸಹಾಯಕ್ಕೆ ಈ ದಿನ ಬರಲಿದ್ದಾರೆ. ಹಳೆಯ ವಸ್ತುಗಳಲ್ಲಿ ಆಸಕ್ತಿ ಹೆಚ್ಚಾಗುತ್ತದೆ. ವಾಹನ ಖರೀದಿಯ ಬಗ್ಗೆ ಸ್ವಲ್ಪ ದಿನ ಕಾಯುವುದು ಒಳ್ಳೆಯದು. ನಿಮ್ಮ ಪ್ರತಿಭೆಗೆ ಸೂಕ್ತ ಮನ್ನಣೆ ಸಿಗಲಿದ್ದು ಚಿಂತೆ ಮಾಡುವ ಅಗತ್ಯವಿಲ್ಲ.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ
ವೃಶ್ಚಿಕ ರಾಶಿ
ಆರ್ಥಿಕ ವ್ಯವಹಾರಗಳು ಉತ್ತಮ ಮಟ್ಟದಲ್ಲಿ ನಡೆಯುತ್ತದೆ. ಸಾಹಿತ್ಯದ ಅಭಿರುಚಿ ಇರುವವರಿಗೆ ಪ್ರಶಂಸೆ ಹೆಚ್ಚಾಗಲಿದೆ. ಸಂಗಾತಿಯೊಡನೆ ಪ್ರೇಮಮಯವಾದ ಸಮಯವನ್ನು ಕಳೆಯಲಿದ್ದೀರಿ. ಮಕ್ಕಳ ಶೈಕ್ಷಣಿಕ ವ್ಯವಸ್ಥೆಗೆ ನಿಮ್ಮ ಅಗತ್ಯ ನೆರವು ಬೇಕಾಗಿದೆ.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ
ಧನಸ್ಸು ರಾಶಿ
ಸ್ನೇಹ ಸಂಪಾದನೆಯಲ್ಲಿ ಈ ದಿನ ನೀವು ಮುಂದೆ ಇರುವಿರಿ. ನಿಮ್ಮ ಅನಾಸಕ್ತಿಯಿಂದ ಯೋಜನೆಗಳಲ್ಲಿ ನಷ್ಟತೆ ಆವರಿಸುತ್ತದೆ ಎಚ್ಚರವಿರಲಿ. ಹಿರಿಯರು ನಿಮಗೆ ಹೆಚ್ಚಿನ ಜವಾಬ್ದಾರಿಯನ್ನು ನೀಡಲಿದ್ದಾರೆ, ನೀವು ಬಂದಂತ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ, ಯಾವುದೇ ಕಾರಣಕ್ಕೂ ತಾತ್ಸಾರ ಮಾಡದಿರುವುದು ಒಳ್ಳೆಯದು. ನಿಮ್ಮ ಮತ್ತು ಸಂಗಾತಿಯೊಡನೆ ಮನಸ್ಥಾಪ ಕಂಡುಬರಲಿದೆ. ಭಿನ್ನಾಭಿಪ್ರಾಯವನ್ನು ಬದಿಗೊತ್ತಿ ಜೀವನದ ಅಭಿವೃದ್ಧಿಗೆ ಇಬ್ಬರೂ ಪಾಲ್ಗೊಳ್ಳುವುದು ಸೂಕ್ತ.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ
ಮಕರ ರಾಶಿ
ಬಾಕಿ ವಸೂಲಿ ಕಾರ್ಯವನ್ನು ಯಶಸ್ವಿಯಾಗಿ ಮಾಡಲಿದ್ದೀರಿ. ಮನೆಯನ್ನು ಬದಲಾಯಿಸುವ ನಿಮ್ಮ ಚಿಂತನೆಗೆ ಸೂಕ್ತ ಸಮಯ ಅವಕಾಶ ಸಿಗಲಿದೆ. ಕುಟುಂಬದ ಸ್ವಾಸ್ಥವನ್ನು ಕಾಪಾಡಿಕೊಳ್ಳಿ. ಹಿರಿಯರ ಬಗ್ಗೆ ಉತ್ತಮ ಅಭಿಪ್ರಾಯವನ್ನು ವ್ಯಕ್ತಪಡಿಸುವುದು ಒಳ್ಳೆಯದು.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ
ಕುಂಭ ರಾಶಿ
ಮಕ್ಕಳ ನಡೆಯನ್ನು ಸೂಕ್ಷ್ಮವಾಗಿ ಗಮನಿಸಿ. ವ್ಯವಹಾರ ದೃಷ್ಟಿಯಿಂದ ಕಾರ್ಯಗಳಲ್ಲಿ ಪಾಲ್ಗೊಳ್ಳಿ, ಯಾವುದೇ ಕಾರಣಕ್ಕೂ ನೀವು ನೀವು ನಷ್ಟದ ವ್ಯವಹಾರಕ್ಕೆ ಆದ್ಯತೆ ನೀಡಬೇಡಿ. ಕೆಲವರು ನಿಮ್ಮನ್ನು ಪುಸಲಾಯಿಸಬಹುದು ಎಚ್ಚರದಿಂದಿರಿ. ದೈಹಿಕ ಆಯಾಸ ಹೆಚ್ಚಾಗಿ ಕಂಡುಬರುತ್ತದೆ.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ
ಮೀನ ರಾಶಿ
ಹಣಕಾಸಿನಲ್ಲಿ ಮಧ್ಯಮ ಸ್ಥಿತಿ ಗೋಚರವಾಗಲಿದೆ. ಸಂಗಾತಿಯ ವದನದಲ್ಲಿ ನಗು ತರಿಸುವ ಪ್ರಯತ್ನ ಆಗಬೇಕಾಗಿದೆ. ಮಕ್ಕಳಿಂದ ಉತ್ತಮ ಸಾಧನೆ ಆಗಲಿದೆ. ಖರ್ಚುಗಳ ಬಗ್ಗೆ ಆದಷ್ಟು ಗಮನವಿರಲಿ. ಯೋಜಿತ ಕಾರ್ಯಗಳಲ್ಲಿ ಆಲಸ್ಯ ಕಾಡಬಹುದು.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ
ಜ್ಯೋತಿಷ್ಯರು ಗಿರಿಧರ ಭಟ್
ನಿಮ್ಮ ಸಮಸ್ಯೆಗಳಾದ ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ಹಣಕಾಸು, ಸಾಲಬಾದೆ, ಪ್ರೇಮ ವಿಚಾರ, ದಾಂಪತ್ಯ, ಶತ್ರುಬಾಧೆ, ಕೌಟುಂಬಿಕ ಸಮಸ್ಯೆ ಇನ್ನೂ ಹತ್ತು ಹಲವಾರು ಸಮಸ್ಯೆಗಳ ಪರಿಹಾರಕ್ಕಾಗಿ ಇಂದೇ ಕರೆ ಮಾಡಿ.
9945410150

ಅಂಕಣ
ದೀಪಾವಳಿ ವಿಶೇಷಾಂಕ | ದೇವನಗರಿ ಸುದ್ದಿದಿನ ಪತ್ರಿಕೆಯಿಂದ ಕತೆ- ಕವಿತೆ- ಲೇಖನ- ರೂಪದರ್ಶಿ ಫೋಟೋ ಗಳಿಗೆ ಆಹ್ವಾನ
ಸುದ್ದಿದಿನ,ದಾವಣಗೆರೆ: ಪ್ರಿಯ ಓದುಗರೆ, ಬೆಳಕಿನ ಹಬ್ಬ ದೀಪಾವಳಿಯ ಪ್ರಯುಕ್ತ ದೇವನಗರಿ ಸುದ್ದಿದಿನ – ಕನ್ನಡ ದಿನ ಪತ್ರಿಕೆ ಹಾಗೂ ಶ್ಯಾಮ್ ಪ್ರಕಾಶನದವತಿಯಿಂದ ‘ ದೀಪಾವಳಿ ವಿಶೇಷಾಂಕ’-2026ನ್ನು ತರಲಾಗುತ್ತಿದೆ.
ಈ ಹಿನ್ನೆಲೆಯಲ್ಲಿ ದೀಪಾವಳಿ ವಿಷೇಶಾಂಕ 2026ರ ವಿಭಾಗಕ್ಕೆ ಕತೆ, ಕವಿತೆ ಹಾಗೂ ಲೇಖನ ಹಾಗೂ ರೂಪದರ್ಶಿಗಳ ಛಾಯಾಚಿತ್ರಗಳನ್ನು ಆಹ್ವಾನಿಸಿದ್ದೇವೆ.
ಕತೆ – ಕವಿತೆಗಳನ್ನು ಕಳುಹಿಸಲು ಇರುವ ನಿಯಮಗಳು
ಕತೆ/ಕವಿತೆ ಸ್ವತಂತ್ರ ರಚನೆಯಾಗಿರಬೇಕು. ಈ ಮೊದಲು ಯಾವ ಮಾಧ್ಯಮಗಳಲ್ಲಿಯೂ ಪ್ರಕಟ ಅಥವಾ ಪ್ರಸಾರ ಆಗಿರಬಾರದು.
ಕತೆ 1500 ಸಾವಿರ ಪದಗಳ ಮಿತಿಯಲ್ಲಿರಲಿ. ಕವಿತೆಗೆ 40 ಸಾಲಿನ ಮಿತಿಯಿರಲಿ, ನುಡಿ ಅಥವಾ ಬರಹ ತಂತ್ರಾಂಶದಲ್ಲಿ ಇಲ್ಲವೆ ಯೂನಿಕೋಡ್ನಲ್ಲಿ ಇರಬೇಕು. ವಯಸ್ಸಿನ ಮಿತಿ ಇರುವುದಿಲ್ಲ.
ಕತೆ/ಕವಿತೆ ಇರುವ ಪುಟದಲ್ಲಿ ಹೆಸರು, ವಿವರ ಬರೆಯುವಂತಿಲ್ಲ. ಪ್ರತ್ಯೇಕ ಪುಟದಲ್ಲಿ ಹೆಸರು, ಅಂಚೆ ವಿಳಾಸ, ಮೊಬೈಲ್ ನಂಬರ್, ಇ-ಮೇಲ್ ವಿಳಾಸ ಒದಗಿಸಬೇಕು.
ಇತ್ತೀಚಿನ ಪಾಸ್ಪೋರ್ಟ್ ಅಳತೆಯ ವರ್ಣಮಯ ಭಾವಚಿತ್ರದೊಂದಿಗೆ 100 ಪದಗಳ ಒಳಗೆ ಕಿರು ಪರಿಚಯ ಕಳುಹಿಸಬೇಕು.
ಸ್ಪರ್ಧೆಗೆ ಕಳುಹಿಸಿರುವ ಬರಹಗಳನ್ನು ಹಿಂದಿರುಗಿಸುವುದಿಲ್ಲ. ಬರಹಗಳು ಕಡ್ಡಾಯವಾಗಿ ಎಂಎಸ್ ವರ್ಡ್ ಫೈಲ್ (MS word File) ನಲ್ಲಿರಲಿ.
ಬರಹ ಮತ್ತು ಫೋಟೋಗಳನ್ನು ಇ-ಮೇಲ್ ಮೂಲಕವಷ್ಟೇ ಕಳಿಸಿ.
ಲೇಖನಗಳಿಗೆ ಆಹ್ವಾನ : ವೈಚಾರಿಕತೆ, ವಿಮರ್ಶೆ, ಕಾನೂನು, ಸಾಹಿತ್ಯ, ತಂತ್ರಜ್ಞಾನ, ವಿಜ್ಞಾನ, ಡಿಜಿಟಲ್ ಮಾಧ್ಯಮ, ಸಿನೆಮಾ, ಪ್ರೇಮಪತ್ರ, ಕೃಷಿ, ರಾಜಕೀಯ, ಕಲೆ, ಆರೋಗ್ಯ, ಪ್ರವಾಸ, ಅಡುಗೆ, ಫೋಟೋಗ್ರಫಿ, ವೈಲ್ಡ್ ಲೈಫ್, ಹಾಸ್ಯ ಕುರಿತಾದ ಲೇಖನಗಳನ್ನು 450 ಪದಗಳನ್ನು ಮೀರದಂತೆ ಬರೆದು ಕಳುಹಿಸಿ.
ಹಾಗೆಯೇ, ವಿಶೇಷಾಂಕದ ಮುಖಪುಟದ ರೂಪದರ್ಶಿಯಾಗಲು ಅವಕಾಶವನ್ನು ಕಲ್ಪಸಿಲಾಗಿದೆ. ಆಸಕ್ತ ರೂಪದರ್ಶಿಗಳು ಸ್ಟುಡಿಯೋ ಅಥವಾ ಫೋಟೋಗ್ರಾಫರ್ ಮೂಲಕ ತೆಗೆದ ‘6*4 ಅಳತೆಯ ಮುದ್ರಿತ ಫೋಟೋ ಮತ್ತು ಇ-ಮೇಲ್ ಮೂಲಕವೂ ಕಳಿಸಬಹುದು. 80 ಪದಗಳಮಿತಿಯೊಳಗೆ ನಿಮ್ಮ ಪರಿಚಯದೊಂದಿಗೆ, ಒಬ್ಬರು 4 ಫೋಟೋ ಕಳುಹಿಸಬೇಕು. ವಯಸ್ಸಿನ ಮಿತಿಯಿಲ್ಲ ಇರುವುದಿಲ್ಲ.
ಕತೆಯ ವಿಜೇತರಿಗೆ ಪ್ರಥಮ ಬಹುಮಾನ : 10000, ದ್ವಿತೀಯ ಬಹುಮಾನ : 5000, ತೃತೀಯ ಬಹುಮಾನ : 3000 ಹಾಗೂ ಕವಿತೆ ಬಹುಮಾನ ವಿಜೇತರಿಗೆ ಪ್ರಥಮ ಬಹುಮಾನ : 5000 ದ್ವಿತೀಯ ಬಹುಮಾನ : 3000 ಹಾಗೂ ತೃತೀಯ ಬಹುಮಾನ : ₹2000 ಸಿಗಲಿದೆ.
ಆಗಸ್ಟ್ 30ರೊಳಗೆ ಬರಹಗಳನ್ನು ಇ-ಮೇಲ್: deepasuddidina@gmail.com ಗೆ ಕಳುಹಿಸಲು ತಿಳಿಸಿದೆ. ಈ ಕುರಿತು ಹೆಚ್ಚಿನ ಮಾಹಿತಿಗಾಗಿ :9980346243 ಹಾಗೂ visit: www.suddidina.com ಅನ್ನು ವೀಕ್ಷಿಸಬಹುದಾಗಿದೆ.
ಕಚೇರಿ ವಿಳಾಸ
ದೇವನಗರಿ ಸುದ್ದಿದಿನ- ಕನ್ನಡ ದಿನ ಪತ್ರಿಕೆ
ದೀಪಾವಳಿ ವಿಶೇಷಾಂಕ ವಿಭಾಗ
#3231/1, ಸಂಜೀವ ಸದನ, 11ನೇ ಮುಖ್ಯರಸ್ತೆ, 4 ನೇ ಅಡ್ಡರಸ್ತೆ, ಎಂಸಿಸಿ ಬಿ ಬ್ಲಾಕ್, ದಾವಣಗೆರೆ, 577004
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಕ್ರೀಡೆ
ರಾಜ್ಯದ ವಿವಿಧ ನೀರಾವರಿ ಯೋಜನೆಗಳಿಗೆ ಹೆಚ್ಚಿನ ಅನುದಾನ ; ಇ-ಖಾತೆ ಅಭಿಯಾನ ಹಾಗೂ ಇತರೆ ಪ್ರಮುಖ ಸುದ್ದಿಗಳು
ರಾಜ್ಯದ ವಿವಿಧ ನೀರಾವರಿ ಯೋಜನೆಗಳಿಗೆ ಹೆಚ್ಚಿನ ಅನುದಾನ ; ಇ-ಖಾತೆ ಅಭಿಯಾನ ಹಾಗೂ ಇತರೆ ಪ್ರಮುಖ ಸುದ್ದಿಗಳು
1. ಮುಖ್ಯಮಂತ್ರಿ ಸಿದ್ದರಾಮಯ್ಯ ನವದೆಹಲಿ ತಲುಪಿದ್ದಾರೆ. ಇಂದು ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿ ಮಾಡಿ, 5 ಪ್ರಮುಖ ಮಸೂದೆಗಳಿಗೆ ಅಂಗೀಕಾರ ನೀಡುವಂತೆ ಮನವಿ ಮಾಡಲಿದ್ದಾರೆ ಎಂದು ಉನ್ನತ ಮೂಲಗಳು ತಿಳಿಸಿವೆ. ಭದ್ರಾ ಮೇಲ್ದಂಡೆ ಯೋಜನೆ ಸೇರಿದಂತೆ ರಾಜ್ಯದ ವಿವಿಧ ನೀರಾವರಿ ಯೋಜನೆಗಳಿಗೆ, ಹೆಚ್ಚಿನ ಅನುದಾನ ಬಿಡುಗಡೆ ಮಾಡುವಂತೆ, ಕೇಂದ್ರದ ಜಲಶಕ್ತಿ ಖಾತೆ ಸಚಿವರನ್ನು ಕೋರುವುದಾಗಿ, ಇದೇ ವೇಳೆ ಸಾಮಾಜಿಕ ಜಾಲತಾಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
2. ರಾಜ್ಯದ ಗ್ರಾಮ ಪಂಚಾಯ್ತಿಗಳ ಹಂತದಲ್ಲಿ ಜುಲೈ 15ರಿಂದ, ಸಾರ್ವಜನಿಕರ ಆಸ್ತಿಗಳ ಇ-ಖಾತೆ ರೂಪಿಸುವ ಅಭಿಯಾನವನ್ನು ಕಂದಾಯ ಇಲಾಖೆ ಆಯೋಜಿಸಲಿದೆ ಎಂದು ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.
3. ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆಗೆ ಸಂಬಂಧಿಸಿ, ಇಲ್ಲಿಯವರೆಗೆ ಹೆಸರು ನೋಂದಾಯಿಸದವರು, ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ, ಈ ತಿಂಗಳ 30ರವರೆಗೆ ಮಾಹಿತಿ ನೀಡಲು ಅವಕಾಶವಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಎ.ಬಿ.ಬಸವರಾಜು ತಿಳಿಸಿದ್ದಾರೆ.
4. ಕಾವೇರಿ ಜಲಾನಯನ ಪ್ರದೇಶದಲ್ಲಿ ವ್ಯಾಪಕವಾಗಿ ಸುರಿಯುತ್ತಿರುವ ಮಳೆಯಿಂದ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆ.ಆರ್.ಎಸ್. ಅಣೆಕಟ್ಟೆ ಭಾಗಶ: ಭರ್ತಿಯಾಗಿದ್ದು, ಒಳ ಹರಿವು ಇನ್ನಷ್ಟು ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಅಣೆಕಟ್ಟೆಯಿಂದ 5 ಸಾವಿರದಿಂದ 15 ಸಾವಿರ ಕ್ಯುಸೆಕ್ ನೀರನ್ನು ನದಿಗೆ ಹರಿಸಲಾಗಿದೆ.
5. ಕತಾರ್ನಲ್ಲಿರುವ ಅಲ್ ಉದೈದ್ ಅಮೇರಿಕ ವಾಯುನೆಲೆಯ ಮೇಲೆ ಇರಾನ್ ನಡೆಸಿದ ದಾಳಿಯ ನಂತರ ಜಾಗತಿಕ ತೈಲ ಬೆಲೆಗಳು ಐದು ವರ್ಷಗಳಲ್ಲಿ ನಿನ್ನೆ ಒಂದೇ ದಿನದಲ್ಲಿ ತೀವ್ರ ಕುಸಿತವನ್ನು ದಾಖಲಿಸಿದೆ.
6. ಕರ್ನಾಟಕ, ಮಧ್ಯಪ್ರದೇಶ, ಬಿಹಾರ, ಜಾಖಂಡ್, ಒಡಿಶಾ, ಛತ್ತೀಸ್ಗಢ, ಪಶ್ಚಿಮ ಬಂಗಾಳ, ಸಿಕ್ಕಿಂ, ಅರುಣಾಚಲ ಪ್ರದೇಶ, ಕೊಂಕಣ, ಗೋವಾ, ಮಹಾರಾಷ್ಟ್ರ, ಗುಜರಾತ್, ಹಿಮಾಚಲ ಪ್ರದೇಶ, ಉತ್ತರಾಖಂಡ, ಪಶ್ಚಿಮ ಉತ್ತರ ಪ್ರದೇಶ, ರಾಜಸ್ಥಾನ, ಕೇರಳದ ಕೆಲವು ಸ್ಥಳಗಳಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
7. ಅಯೋವಾದಲ್ಲಿ ನಾಳೆ ಆರಂಭವಾಗಲಿರುವ ಯುಎಸ್ ಓಪನ್ 2025 ಬ್ಯಾಡ್ಮಿಂಟನ್ ಪಂದ್ಯಾವಳಿಯ ಪುರುಷರ ಡಬಲ್ಸ್ ವಿಭಾಗದಲ್ಲಿ ಹರಿಹರನ್ ಅಂಶಕರುಣನ್ ಮತ್ತು ರೂಬನ್ ಕುಮಾರ್ ರೆಥಿನಸಬಪತಿ, ಭಾರತವನ್ನು ಮುನ್ನಡೆಸಲಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಈರುಳ್ಳಿ ಕೇವಲ ತರಕಾರಿಯಲ್ಲ ; ಅದ್ಭುತ ಔಷಧ
ನಾವು ನಿತ್ಯವೂ ತಯಾರಿಸುವ ಅಡುಗೆ ಪದಾರ್ಥಗಳಿಗೆ ಈರುಳ್ಳಿಯನ್ನು ಹಾಕದಿದ್ದಾಗ ಒಂದು ರುಚಿಯಾದರೆ ಅದನ್ನು ಹಾಕಿದಾಗ ಆ ಪದಾರ್ಥದ ರುಚಿಯೇ ಬೇರೆಯಾಗುತ್ತದೆ. ನಾವು ಈರುಳ್ಳಿಯ ಗುಣಗಳು, ಅದರ ಉಪಯೋಗಗಳು ಮತ್ತು ಮನೆ ಮದ್ದುಗಳ ಬಗ್ಗೆ ತಿಳಿದುಕೊಳ್ಳೋಣ.
ಆಯುರ್ವೇದದಲ್ಲಿ ಈರುಳ್ಳಿಯ ಬಗ್ಗೆ ವಿಸ್ತೃತ ವಿವರಣೆ ಇದೆ. ಆಯುರ್ವೇದ ಗ್ರಂಥಗಳ ಪ್ರಕಾರ ಈರುಳ್ಳಿಗೆ ಬೆಳ್ಳುಳ್ಳಿಯ ಗುಣಗಳಿವೆ. ಆದರೆ ಬೆಳ್ಳುಳ್ಳಿಯಂತೆ ಇದು ಉಷ್ಣವಲ್ಲ. ಹಾಗಾಗಿ ಬೆಳ್ಳುಳ್ಳಿಯ ಅದ್ಭುತ ಗುಣಗಳನ್ನು ಪಡೆಯಬೇಕು ಎಂದಾದರೆ ಮತ್ತು ಬೆಳ್ಳುಳ್ಳಿಯನ್ನು ಸೇವಿಸಿದರೆ ಉಷ್ಣವಾಗುತ್ತದೆ ಎಂಬ ಯೋಚನೆ ಇದ್ದರೆ ಬದಲಿಗೆ ಈರುಳ್ಳಿಯನ್ನು ಬಳಸಬಹುದು.
ಭಾವ ಪ್ರಕಾಶ ನಿಘಂಟು ಎಂಬ ಗ್ರಂಥದಲ್ಲಿ “ಬಲವೀರ್ಯ ಕೈರೋ ಗುರುಃ” ಎಂದಿದ್ದಾರೆ. ಅಂದರೆ ಈರುಳ್ಳಿಯು ದೇಹದ ಬಲವನ್ನು, ವೀರ್ಯದ ಗುಣಮಟ್ಟವನ್ನು, ಲೈಂಗಿಕ ಶಕ್ತಿಯನ್ನು ಹೆಚ್ಚಿಸುತ್ತದೆ ಎಂದರ್ಥ. ಬಹುತೇಕ ಎಲ್ಲಾ ಆಯುರ್ವೇದ ಗ್ರಂಥಗಳಲ್ಲಿಯೂ ಈರುಳ್ಳಿಯಿಂದ ಲೈಂಗಿಕ ಶಕ್ತಿ ವೃದ್ಧಿಯಾಗುತ್ತದೆ ಎಂಬುದನ್ನು ಹೇಳಲಾಗಿದೆ. ಇದು ಚರ್ಮಕ್ಕೆ ಕೂಡ ಅತ್ಯಂತ ಅನುಕೂಲಕರವಾದದ್ದು. ಚರ್ಮವನ್ನು ಸ್ನಿಗ್ಧಗೊಳಿಸಿ ಒರಟುತನವನ್ನು ಹೋಗಲಾಡಿಸುತ್ತದೆ; ಚರ್ಮಕ್ಕೆ ಕಾಂತಿಯನ್ನು ಕೊಡುತ್ತದೆ; ಜೊತೆಗೆ ಚರ್ಮದ ಶುದ್ಧಿಯನ್ನೂ ಮಾಡುತ್ತದೆ ಎಂದು ವಿವರಿಸಲಾಗಿದೆ. ಈರುಳ್ಳಿಯನ್ನು ನಿಯಮಿತವಾಗಿ ಸೇವಿಸುವುದರಿಂದ ದೇಹದ ಬಾಹ್ಯ ಮತ್ತು ಆಂತರಿಕ ಕಾಂತಿ ಹೆಚ್ಚುತ್ತದೆ.
ಅಂದರೆ ಕೇವಲ ಸೌಂದರ್ಯವೃದ್ಧಿಯಷ್ಟೇ ಅಲ್ಲ ದೇಹದೊಳಗಿನ ರೋಗನಿರೋಧಕ ಶಕ್ತಿ ತುಂಬಾ ಚೆನ್ನಾಗಿ ಹೆಚ್ಚುತ್ತದೆ. ಈರುಳ್ಳಿಯು ಧ್ವನಿಗೆ ಸಂಬಂಧಿಸಿದ ಸಮಸ್ಯೆಗಳನ್ನು ಹೋಗಲಾಡಿಸಿ ಒಳ್ಳೆಯ ಧ್ವನಿಯನ್ನು ನೀಡುತ್ತದೆ ಎಂದು ವಿವರಿಸಲಾಗಿದೆ. ಹೀಗಾಗಿ ಹಾಡುಗಾರರು, ಅಧ್ಯಾಪಕರಂಥವರಿಗೆ ನಿಯಮಿತ ಈರುಳ್ಳಿ ಸೇವನೆ ಅನುಕೂಲಕರ. ಇದು ಕಣ್ಣಿನ ಆರೋಗ್ಯವನ್ನು ಹೆಚ್ಚಿಸುವುದರಿಂದ ಹತ್ತರಿಂದ ಹದಿನೈದು ಮಿಲೀ ಈರುಳ್ಳಿ ರಸವನ್ನು ಸುಮಾರು ಒಂದು ತಿಂಗಳು ದಿನಕ್ಕೊಮ್ಮೆ ಸೇವಿಸುವುದರಿಂದ ಚಿಕ್ಕಪುಟ್ಟ ಕಣ್ಣಿನ ತೊಂದರೆಗಳು ನಿವಾರಣೆಯಾಗುತ್ತವೆ. ಸ್ವಲ್ಪ ಸಿಹಿ ಇರುವ ಅಂದರೆ ಖಾರ ಕಡಿಮೆ ಇರುವ ಈರುಳ್ಳಿಯನ್ನು ಚಿಕ್ಕ ಚಿಕ್ಕ ತುಂಡುಗಳನ್ನಾಗಿ ಕತ್ತರಿಸಿ ತುಪ್ಪದಲ್ಲಿ ಹುರಿದು ನಿಯಮಿತವಾಗಿ ಸೇವಿಸಿದರೆ ಲೈಂಗಿಕ ಶಕ್ತಿಯ ವೃದ್ಧಿಯಾಗುತ್ತದೆ.
ಕೂದಲು ಉದುರುವುದನ್ನು ಕಡಿಮೆ ಮಾಡಲು ಈರುಳ್ಳಿಯು ಸಹಕಾರಿ. ಈರುಳ್ಳಿಯ ರಸ ತೆಗೆದು ತಲೆ ಸ್ನಾನ ಮಾಡುವ ಹತ್ತು ನಿಮಿಷ ಮೊದಲು ಕೂದಲಿನ ಬುಡಕ್ಕೆ ಹಚ್ಚಬೇಕು. ಇದರಿಂದ ಕೂದಲಿನ ಬೆಳವಣಿಗೆ ಚೆನ್ನಾಗಿ ಆಗಲು ಮತ್ತು ಕೂದಲು ಉದುರುವುದು ನಿಲ್ಲಲು ಸಹಾಯವಾಗುತ್ತದೆ. ಬೊಜ್ಜನ್ನು ಕಡಿಮೆ ಮಾಡಲು ಕೂಡ ಈರುಳ್ಳಿಯು ಸಹಕಾರಿ. ಬೆಳ್ಳುಳ್ಳಿಯ ಇನ್ನೊಂದು ಅದ್ಭುತ ಗುಣವೆಂದರೆ ಅದು ನರದ ಶಕ್ತಿಯನ್ನು ಹೆಚ್ಚಿಸುತ್ತದೆ. ಹಾಗಾಗಿ ಸಯಾಟಿಕಾದಂತಹ ಸಮಸ್ಯೆಗಳನ್ನು ಅನುಭವಿಸುತ್ತಿರುವವರಿಗೆ ಈರುಳ್ಳಿ ತುಂಬಾ ಲಾಭದಾಯಕ.
ಕಫದ ಸಮಸ್ಯೆಯಿಂದ ಬಳಲುತ್ತಿದ್ದು ಕಫ ಹೊರಗೆ ಬರುತ್ತಿಲ್ಲದಿದ್ದರೆ ಎರಡು ಚಮಚದಷ್ಟು ಈರುಳ್ಳಿ ರಸ, ಅರ್ಧ ಚಮಚದಷ್ಟು ಶುಂಠಿ ರಸ, ಅರ್ಧ ಚಮಚದಷ್ಟು ತುಳಸಿ ಎಲೆಗಳ ರಸ ಮತ್ತು ಒಂದು ಚಮಚ ಜೇನುತುಪ್ಪವನ್ನು ಸೇರಿಸಿ ದಿನಕ್ಕೆ ಒಂದು ಅಥವಾ ಎರಡು ಬಾರಿ ಸೇವಿಸಿದರೆ ಕಫ ಹೊರಗೆ ಬಂದು ಸಮಸ್ಯೆ ನಿವಾರಣೆಯಾಗುತ್ತದೆ.
ಈರುಳ್ಳಿ ಒಳ್ಳೆಯ ಜೀರ್ಣಕಾರಿಯೂ ಹೌದು ಹಾಗಾಗಿ ಅಜೀರ್ಣ ಇರುವವರಿಗೆ ಹೆಚ್ಚಿನ ಪ್ರಮಾಣದಲ್ಲಿ ಈರುಳ್ಳಿಯನ್ನು ಹಾಕಿ ಹೆಸರುಬೇಳೆಯ ತಿಳಿಸಾರು ಮಾಡಿ ಊಟಕ್ಕೆ ನೀಡಿದರೆ ಅಜೀರ್ಣದ ಸಮಸ್ಯೆ ತುಂಬಾ ಚೆನ್ನಾಗಿ ಹತೋಟಿಗೆ ಬರುತ್ತದೆ. ಜೊತೆಗೆ ಶಕ್ತಿ ವೃದ್ಧಿಯೂ ಆಗುತ್ತದೆ. ಒಟ್ಟಿನಲ್ಲಿ ಈರುಳ್ಳಿಯನ್ನು ಸರಿಯಾಗಿ ಬಳಸಿಕೊಂಡರೆ ಅದು ಕೇವಲ ತರಕಾರಿಯಲ್ಲ ಅದ್ಭುತ ಔಷಧ.(ಬರಹ-ಡಾ|| ವೆಂಕಟ್ರಮಣ ಹೆಗಡೆ
ವೇದ ವೆಲ್ನೆಸ್ ಸೆಂಟರ್, ನಿಸರ್ಗಮನೆ, ಶಿರಸಿ, ಉ.ಕನ್ನಡ)
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ4 days agoನವಿಲೇಹಾಳು | 80ನೇ ಸ್ವಾತಂತ್ರ್ಯ ದಿನಾಚರಣೆ ; ಗ್ರಾಮೀಣ ಅಭಿವೃದ್ಧಿ ಹೋರಾಟ ಸಮಿತಿಯಿಂದ ಸಿಹಿ ಹಂಚಿ ಸಂಭ್ರಮ
-
ದಿನದ ಸುದ್ದಿ4 days agoಸ್ವಾತಂತ್ರ್ಯವೆಂದರೆ ಬರಿ ಹಕ್ಕಲ್ಲ ದೇಶದ ಬಗ್ಗೆ ಜವಾಬ್ದಾರಿ ಹೊಂದುವುದೂ ಕೂಡ : ಯೋಗೀಶ್ ಸಹ್ಯಾದ್ರಿ
-
ದಿನದ ಸುದ್ದಿ1 day agoಶಿಕ್ಷಣ ಸಂಸ್ಥೆಗಳು ವೈಚಾರಿಕತೆ ; ವೈಜ್ಞಾನಿಕತೆಯ ಬೆಳಕು ಚೆಲ್ಲುವ ದೀಪಗಳಾಗಲಿ
-
ಅಂತರಂಗ2 days agoದಿಮಾಗಿ ನಕ್ಸಲ್-ನಗರ ನಕ್ಸಲ್
-
ದಿನದ ಸುದ್ದಿ3 days agoಸ್ವಾತಂತ್ರ್ಯವನ್ನು ಗೌರವಿಸಿ, ಭವಿಷ್ಯವನ್ನು ಪ್ರೇರೇಪಿಸೋಣ: ವಿವಿಐಎಸ್ನಲ್ಲಿ ಅರ್ಥಪೂರ್ಣ ಸ್ವಾತಂತ್ರ್ಯೋತ್ಸವ
-
ಅಂತರಂಗ3 hours agoಡಾ. ಆತ್ಮಾರಾಮನ ಆತ್ಮನಿವೇದನೆ ; ಒಳಗನ್ನಡಿಯಲ್ಲಿ ಮೌನದ ಮುಖ


