ನಿತ್ಯ ಭವಿಷ್ಯ
ಶನಿವಾರದ ಭವಿಷ್ಯ | ನಿಮ್ಮ ಸರ್ವ ಸಮಸ್ಯೆಗಳ ಪರಿಹಾರ ಮತ್ತು ಮಾರ್ಗದರ್ಶನಕ್ಕಾಗಿ ಇಂದೇ ಕರೆ ಮಾಡಿ
ಶ್ರೀ ವೆಂಕಟೇಶ್ವರ ಸ್ವಾಮಿಯ ಸ್ಮರಣೆ ಮಾಡುತ್ತಾ ಈ ದಿನದ ದ್ವಾದಶ ರಾಶಿ ಫಲಗಳನ್ನು ತಿಳಿಯೋಣ.
ಖ್ಯಾತ ಜ್ಯೋತಿಷ್ಯರು ಗಿರಿಧರಭಟ್
ನಿಮ್ಮ ಸರ್ವ ಸಮಸ್ಯೆಗಳ ಪರಿಹಾರ ಮತ್ತು ಮಾರ್ಗದರ್ಶನಕ್ಕಾಗಿ ಇಂದೇ ಕರೆ ಮಾಡಿ:
9945410150
ಮೇಷ ರಾಶಿ
ಮಾತಿನಿಂದ ಸೌಧವನ್ನು ನಿರ್ಮಿಸುವುದು ನಿಮ್ಮ ಕೌಶಲ್ಯ ಇದರಿಂದಲೇ ವ್ಯಾಪಾರ ವ್ಯವಹಾರದಲ್ಲಿ ಧನ ಸಂಪತ್ತು ವೃದ್ಧಿ ಆಗುತ್ತದೆ. ಕುಟುಂಬದಲ್ಲಿ ಶಾಂತಿ ನೆಲೆಸಲಿದೆ. ನಿಮ್ಮ ವೃತ್ತಿರಂಗದಲ್ಲಿ ವಿನೂತನ ಪ್ರಯೋಗಕ್ಕೆ ಸಿದ್ಧತೆ ಮಾಡಿಕೊಳ್ಳುವುದು ಆದಷ್ಟು ಎಚ್ಚರಿಕೆ ವಹಿಸಿ ಇದರಿಂದ ನಿಮ್ಮ ಲಾಭಾಂಶದ ಲೆಕ್ಕಾಚಾರವನ್ನು ಪರಿಗಣಿಸಿ.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ
ವೃಷಭ ರಾಶಿ
ನಿಮ್ಮ ಮನಸ್ಸಿನಲ್ಲಿ ಇರುವಂತಹ ಜಮೀನು ಖರೀದಿ ಅಥವಾ ಗೃಹ ಖರೀದಿಯ ಬಯಕೆಯ ಪೂರ್ಣಗೊಳ್ಳುತ್ತದೆ. ಮಕ್ಕಳ ವಿಷಯದಲ್ಲಿ ಇಂದು ಹೆಚ್ಚು ಸಂತೋಷ ಪಡುವಿರಿ ಅವರ ಜ್ಞಾನಾರ್ಜನೆಗಾಗಿ ವಿಶೇಷವಾದಂತಹ ಕಾರ್ಯ ಸಂಕಲ್ಪಗಳ ಗಳನ್ನು ಮಾಡುವಿರಿ. ಪತ್ನಿಯು ನಿಮ್ಮನ್ನು ಅತಿ ಹೆಚ್ಚಾಗಿ ಬೇಕು ಬೇಡಗಳ ಪಟ್ಟಿಯನ್ನು ತಯಾರಿಸುವರು, ಪ್ರೇಮ ಪ್ರೀತಿ ಇಂದ ನಿಮಗಾಗಿ ವಿಶೇಷವಾದ ಖಾದ್ಯಗಳನ್ನು ತಯಾರಿ ಮಾಡಿ ಕೊಡುವರು.ಕಾರ್ಯ ಪೂರ್ಣಗೊಳಿಸಲಾಗದೆ ಒದ್ದಾಡುವ ಪರಿಸ್ಥಿತಿ ನಿಮ್ಮದಾಗಿದೆ. ಮಾನಸಿಕ ಖಿನ್ನತೆಗಳು ನಿಮ್ಮನ್ನು ಆವರಿಸಲಿದೆ.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ
ಮಿಥುನ ರಾಶಿ
ನಿಮ್ಮ ಕೌಶಲ್ಯದಲ್ಲಿ ಹೊಸ ವಿಚಾರಗಳನ್ನು ರೂಢಿಸಿಕೊಳ್ಳಿ. ನಿಮ್ಮ ವಿರುದ್ದವಾಗಿ ಮಾತನಾಡುವ ಮಂದಿಯನ್ನು ಆದಷ್ಟು ನಿರ್ಲಕ್ಷಿಸಿ. ಆರೋಪಗಳನ್ನು ಮಾಡುವವರು ಮಾಡಲಿ ನಿಮ್ಮ ಕೃತಿಯಿಂದ ಅವರಿಗೆ ತಕ್ಕ ಫಲಿತಾಂಶ ವನ್ನು ನೀಡಲು ತಯಾರಾಗಿ. ನಿಮ್ಮಲ್ಲಿರುವ ಆಲಸ್ಯತನ ಜಡತ್ವ ನಿಮಗೆ ಸಮಸ್ಯೆಯನ್ನು ತಂದೊಡ್ಡಬಹುದು ಆದಕಾರಣ ಹೆಚ್ಚಾಗಿ ಕ್ರಿಯಾಶೀಲತೆಯನ್ನು ಬೆಳೆಸಿಕೊಳ್ಳಿ. ಕುಲದೇವತಾರಾಧನೆ ಮಾಡುವುದು ಒಳಿತು.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ
ಕರ್ಕಾಟಕ ರಾಶಿ
ದಾಖಲೆಗಳು ಹಾಗೂ ಹಣಕಾಸಿನ ಎಲ್ಲಾ ವಿಷಯಗಳಿಗೂ ಭದ್ರತೆಯನ್ನು ನೀಡಿ ಎಲ್ಲೆಂದರಲ್ಲಿ ಇಟ್ಟು ಮರೆಯುವುದು ನಿಮ್ಮ ಸ್ವಭಾವವಾಗಿದೆ ಇದರಿಂದ ಕುಟುಂಬದಲ್ಲಿ ಅಥವಾ ನಿಮಗೆ ವೈಯಕ್ತಿಕವಾಗಿ ಸಮಸ್ಯೆಗಳು ತರಬಹುದು. ಯೋಗ, ಧ್ಯಾನದಿಂದ ಮನಸ್ಸನ್ನು ಹತೋಟಿಗೆ ತರುವುದು ಒಳಿತು. ಇಂದು ಕೆಲವು ವಿಷಯಗಳಲ್ಲಿ ಮನಸ್ಸು ಹೆಚ್ಚು ಕೇಂದ್ರೀಕರಿಸುತ್ತದೆ ಅದು ಒಳ್ಳೆಯ ವಿಷಯ ಇದ್ದರೆ ತೊಂದರೆ ಇಲ್ಲ, ಆದರೆ ಕೆಟ್ಟ ಆಲೋಚನೆ ಇದ್ದರೆ ಆದಷ್ಟು ನಿಮ್ಮ ಮನಸ್ಸನ್ನು ನಿಯಂತ್ರಿಸಿ.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ
ಸಿಂಹ ರಾಶಿ
ಸ್ನೇಹದ ರೂಪದಲ್ಲಿ ಬಂದು ನಿಮಗೆ ಸಮಸ್ಯೆಯನ್ನು ತಂದುಕೊಡಬಹುದು ಆದಷ್ಟು ನಿಜ ಸ್ನೇಹವನ್ನು ಮಾತ್ರ ಬೆಂಬಲಿಸಿ. ಉದ್ಯೋಗ ನಿಮಿತ್ತ ಪರಸ್ಥಳ ವಾಸವೂ ನಿಮ್ಮ ಮನಸ್ಸನ್ನು ಕಾಡಬಹುದು. ಆರ್ಥಿಕ ವಿಷಯದಲ್ಲಿ ಹೆಚ್ಚಿನ ನಿರೀಕ್ಷೆ
ಇದೆ. ನಿಮ್ಮಿಂದ ಲೇವಾದೇವಿ ವ್ಯವಹಾರವನ್ನು ಇಂದು ಆದಷ್ಟು ಮಾಡದಿರುವುದು ಒಳಿತು.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ
ಕನ್ಯಾ ರಾಶಿ
ಹಲವು ದಿನಗಳಿಂದ ಮದುವೆಗಾಗಿ ಕಾಯುತ್ತಿರುವವರಿಗೆ ಇಂದು ಒಳ್ಳೆಯ ಸುದ್ದಿ ನಿಮಗೆ ಸಿಗಲಿದೆ. ಆರ್ಥಿಕ ಯೋಜನೆಗಳಲ್ಲಿ ಹಿನ್ನಡೆ ಕಾಣಬಹುದು ಆದರೆ ಮುಂದಿನ ದಿನಗಳಲ್ಲಿ ನೀವು ಮಾಡುತ್ತಿರುವ ಕೆಲಸದ ಶ್ರಮವೂ ಖಂಡಿತವಾಗಿಯೂ ಲಾಭ ಕಾರಿಯಾಗಿ ಬರುವುದು ನಿಶ್ಚಿತ. ಬಂದು ವರ್ಗದಲ್ಲಿ ನಿಮ್ಮ ವಿರುದ್ದವಾಗಿ ಅಪ ಪ್ರಚಾರ ಮಾಡುವಂತಹ ಜನರಿದ್ದಾರೆ ಇಂತಹ ಹಿತಶತ್ರುಗಳಿಂದ ಆದಷ್ಟು ದೂರವಿರಿ.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ
ತುಲಾ ರಾಶಿ
ಹೊಸ ಪರಿಚಯಸ್ಥರು ನಿಮ್ಮನ್ನು ಮೋಸಗೊಳಿಸಲು ಹಲವು ಬಗೆಯ ಆಮಿಷಗಳನ್ನು ತೋರಿಸುವ ಸಾಧ್ಯತೆ ಇದೆ. ಕೆಲವು ಯೋಜನೆಗಳು ಇನ್ನೇನು ಕಾರ್ಯ ಕೈ ಗೂಡಬಹುದು ಎನ್ನುವಷ್ಟರಲ್ಲಿ ನಷ್ಟದ ಹಾದಿ ಹಿಡಿಯಬಹುದಾದ ಪರಿಸ್ಥಿತಿ ಬರಬಹುದಾಗಿದೆ. ವ್ಯವಹಾರದಲ್ಲಿ ಮಧ್ಯವರ್ತಿ ಜನಗಳು ನಿಮ್ಮನ್ನು ತಪ್ಪು ದಾರಿಗೆ ಸಿಲುಕಿಸಬಹುದು ಎಚ್ಚರವಿರಿ.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ
ವೃಶ್ಚಿಕ ರಾಶಿ
ಸಂಗಾತಿಯೊಡನೆ ವಿನಾಕಾರಣ ವಾಗ್ವಾದ ನಡೆಸುತ್ತಾ ಇರುವುದು ನಿಮಗೆ ಅಷ್ಟು ಸಮಂಜಸವಲ್ಲ. ಮಕ್ಕಳ ಜ್ಞಾನ ಮಟ್ಟ ಉನ್ನತ ವಾಗಿರುತ್ತದೆ ಅವರನ್ನು ಸಂಪನ್ಮೂಲ ವ್ಯಕ್ತಿಗಳನ್ನಾಗಿ ಮಾಡುವುದು ನಿಮ್ಮ ಜವಾಬ್ದಾರಿಯಾಗಿದೆ. ನಿಮ್ಮ ಬಗ್ಗೆ ಅಪಪ್ರಚಾರ ಮಾಡುವ ಜನಗಳು ನಿಮ್ಮ ಸುತ್ತಲೂ ಇರುವರು ನೀವು ಏನೇ ಮಾಡಿದರೂ ಅವರ ಕಣ್ಣಿಗೆ ಕೆಟ್ಟದಾಗಿ ಕಾಣುವುದು ಚಿಂತಿಸಬೇಡಿ ನಿಮ್ಮ ದಾರಿ ಉತ್ತಮವಾಗಿದ್ದು ದೊಡ್ಡ ಮಟ್ಟದ ಬೆಳವಣಿಗೆ ಸಾಧಿಸುವಿರಿ.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ
ಧನಸ್ಸು ರಾಶಿ
ಆರ್ಥಿಕ ಕ್ಷೇತ್ರದಲ್ಲಿ ಮಹತ್ವದ ಬದಲಾವಣೆ ಆಗುವುದು ನಿಶ್ಚಿತವಾಗಿದೆ. ಕೆಲವು ಆರ್ಥಿಕ ವ್ಯವಹಾರಗಳು ಅನಿರೀಕ್ಷಿತವಾಗಿ ಲಾಭ ತಂದುಕೊಡುತ್ತದೆ. ಕುಟುಂಬ ವರ್ಗದೊಡನೆ ಹಣಕಾಸಿನ ಅಥವಾ ಆಸ್ತಿ ವ್ಯಾಜ್ಯಗಳಿಂದ ಮನಸ್ತಾಪ ಮಾಡಿಕೊಳ್ಳುವಿರಿ. ಇಂದು ಎಷ್ಟೇ ಕೆಲಸವಿದ್ದರೂ ನಿಮ್ಮ ಕುಟುಂಬದ ಜೊತೆಗೆ ಸವಿಯಾದ ಪ್ರೇಮದಿಂದ ಕಾಲ ಕಳೆಯುವಿರಿ. ನಿಮ್ಮಿಷ್ಟದ ಭೋಜನದ ವ್ಯವಸ್ಥೆ ನಿಮಗಾಗಿ ಮನೆಯಲ್ಲಿ ಕಾಯುತ್ತಿರುತ್ತದೆ. ಕೆಲವು ಹೊಸ ಆಲೋಚನೆ ಮಾರ್ಗಗಳು ನಿಮ್ಮನ್ನು ಮತ್ತಷ್ಟು ಸದೃಢರನ್ನಾಗಿ ಮಾಡುತ್ತದೆ.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ
ಮಕರ ರಾಶಿ
ಹೊಸ ಸಂಶೋಧನೆ ಅಥವಾ ಕುತೂಹಲಕಾರಿ ವಿಷಯಗಳು ಅಧ್ಯಯನ ಮಾಡುವ ದೃಷ್ಟಿಕೋನ ತುಂಬಾ ಉತ್ತಮವಾಗಿ ಮೂಡಿ ಬರಲಿದೆ. ಯಾರೋ ಹೇಳಿದ್ದು ವಿಷಯವನ್ನು ನಂಬಿ ಕೂರಬೇಡಿ ಅದರ ಸತ್ಯಾಸತ್ಯತೆ ಪರಾಮರ್ಶಿಸಿ. ಮಕ್ಕಳ ದುರ್ವರ್ತನೆಯನ್ನು ಸರಿಪಡಿಸುವ ಜವಾಬ್ದಾರಿ ತೆಗೆದುಕೊಳ್ಳಿ. ನಿಮ್ಮ ಕಾರ್ಯಗಳಲ್ಲಿ ಉತ್ತಮ ಪ್ರಶಂಸೆ ಹಾಗೂ ಹೆಚ್ಚಿನ ಸ್ಥಾನ ಗಳಿಸುವ ಸಾಧ್ಯತೆ ಈ ದಿನ ಕಾಣಬಹುದು. ನಿಮ್ಮ ಬಹು ಒತ್ತಡದ ಕೆಲಸ ಕುಟುಂಬದ ಅಪೇಕ್ಷೆಗೆ ಸ್ಪಂದಿಸದೆ ಇರುವಹಾಗೆ ಮಾಡಲಿದೆ, ಇದರಿಂದ ಕೌಟುಂಬಿಕ ವಾತಾವರಣವನ್ನು ಹಾಗೂ ಅದರ ಸಂತೋಷವನ್ನು ಕಳೆದುಕೊಳ್ಳುವಿರಿ ಆದಷ್ಟು ಸ್ವಲ್ಪ ಸಮಯ ಕುಟುಂಬದವರೊಡನೆ ಸಮಯ ವಿನಿಯೋಗಿಸಲು ಮುಂದಾಗಿ.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ
ಕುಂಭ ರಾಶಿ
ಹೊಸ ಆರ್ಥಿಕ ವ್ಯವಹಾರಗಳಲ್ಲಿ ಮನಸ್ಸು ಮೂಡುತ್ತದೆ. ಕುಟುಂಬದಲ್ಲಿ ಒಳ್ಳೆಯ ಸುದ್ದಿಯನ್ನು ಕೇಳುವಿರಿ. ಮಕ್ಕಳ ವಿದ್ಯಾ ಹಾಗೂ ಅವರ ಬೆಳವಣಿಗೆ ನಿಮಗೆ ಆನಂದ ತರಲಿದೆ. ಸ್ನೇಹಿತರಿಂದ ಮೋಜಿನಕೂಟಕ್ಕೆ ಆಹ್ವಾನ ಬರಲಿದೆ, ಅವರೊಡನೆ ಹೆಚ್ಚು ಹೊತ್ತು ಕಾಲ ಕಳೆಯದೆ ಬೇಗ ಮನೆಗೆ ಹೋಗುವುದು ಒಳ್ಳೆಯದು. ದುಂದುವೆಚ್ಚಗಳಿಂದ ಕುಟುಂಬದಲ್ಲಿ ಅಶಾಂತಿ ಮೂಡಬಹುದು.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ
ಮೀನ ರಾಶಿ
ಅನುಪಯುಕ್ತ ಕೆಲಸಗಳಲ್ಲಿ ಕಾಲಹರಣ ಮಾಡುವುದಕ್ಕಿಂತ ವ್ಯವಸ್ಥಿತ ಕಾರ್ಯಗಳಲ್ಲಿ ತೊಡಗಿ ಆರ್ಥಿಕ ವೃದ್ಧಿ ಮಾಡಿಕೊಳ್ಳಲು ಮುಂದಾಗಿ. ಸ್ಪರ್ಧಾತ್ಮಕ ಪರೀಕ್ಷೆಯ ಆಕಾಂಕ್ಷೆಯ ವಿದ್ಯಾರ್ಥಿಗಳಿಗೆ ಈ ದಿನ ಹಲವು ನಿರೀಕ್ಷೆಯನ್ನು ತಂದುಕೊಡಲಿದೆ. ನಿಮ್ಮ ದಾರಿ ಉತ್ತಮವಾಗಿದೆ ಆದರೆ ಕೆಲವರು ನಿಮ್ಮ ಗುರಿಯನ್ನು ಹಾಳುಗೆಡವಬಹುದು. ನಿಮ್ಮ ಮನಸ್ಥಿತಿಯನ್ನು ನೇರವಾಗಿಟ್ಟುಕೊಂಡು ಮುಂದೆ ಸಾಗುವುದು ಕ್ಷೇಮ. ಬಹುದಿನದ ಕಾರ್ಯಗಳು ಈ ದಿನ ಮಾಡಿ ಪೂರ್ಣಗೊಳಿಸುವಿರಿ.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ
ಜ್ಯೋತಿಷ್ಯರು ಗಿರಿಧರ ಭಟ್
ನಿಮ್ಮ ಸಮಸ್ಯೆಗಳಾದ ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ಹಣಕಾಸು, ಸಾಲಬಾದೆ, ಪ್ರೇಮ ವಿಚಾರ, ದಾಂಪತ್ಯ, ಶತ್ರುಬಾಧೆ, ಕೌಟುಂಬಿಕ ಸಮಸ್ಯೆ ಇನ್ನೂ ಹತ್ತು ಹಲವಾರು ಸಮಸ್ಯೆಗಳ ಪರಿಹಾರಕ್ಕಾಗಿ ಇಂದೇ ಕರೆ ಮಾಡಿ.
9945410150

ಅಂಕಣ
ದೀಪಾವಳಿ ವಿಶೇಷಾಂಕ | ದೇವನಗರಿ ಸುದ್ದಿದಿನ ಪತ್ರಿಕೆಯಿಂದ ಕತೆ- ಕವಿತೆ- ಲೇಖನ- ರೂಪದರ್ಶಿ ಫೋಟೋ ಗಳಿಗೆ ಆಹ್ವಾನ
ಸುದ್ದಿದಿನ,ದಾವಣಗೆರೆ: ಪ್ರಿಯ ಓದುಗರೆ, ಬೆಳಕಿನ ಹಬ್ಬ ದೀಪಾವಳಿಯ ಪ್ರಯುಕ್ತ ದೇವನಗರಿ ಸುದ್ದಿದಿನ – ಕನ್ನಡ ದಿನ ಪತ್ರಿಕೆ ಹಾಗೂ ಶ್ಯಾಮ್ ಪ್ರಕಾಶನದವತಿಯಿಂದ ‘ ದೀಪಾವಳಿ ವಿಶೇಷಾಂಕ’-2026ನ್ನು ತರಲಾಗುತ್ತಿದೆ.
ಈ ಹಿನ್ನೆಲೆಯಲ್ಲಿ ದೀಪಾವಳಿ ವಿಷೇಶಾಂಕ 2026ರ ವಿಭಾಗಕ್ಕೆ ಕತೆ, ಕವಿತೆ ಹಾಗೂ ಲೇಖನ ಹಾಗೂ ರೂಪದರ್ಶಿಗಳ ಛಾಯಾಚಿತ್ರಗಳನ್ನು ಆಹ್ವಾನಿಸಿದ್ದೇವೆ.
ಕತೆ – ಕವಿತೆಗಳನ್ನು ಕಳುಹಿಸಲು ಇರುವ ನಿಯಮಗಳು
ಕತೆ/ಕವಿತೆ ಸ್ವತಂತ್ರ ರಚನೆಯಾಗಿರಬೇಕು. ಈ ಮೊದಲು ಯಾವ ಮಾಧ್ಯಮಗಳಲ್ಲಿಯೂ ಪ್ರಕಟ ಅಥವಾ ಪ್ರಸಾರ ಆಗಿರಬಾರದು.
ಕತೆ 1500 ಸಾವಿರ ಪದಗಳ ಮಿತಿಯಲ್ಲಿರಲಿ. ಕವಿತೆಗೆ 40 ಸಾಲಿನ ಮಿತಿಯಿರಲಿ, ನುಡಿ ಅಥವಾ ಬರಹ ತಂತ್ರಾಂಶದಲ್ಲಿ ಇಲ್ಲವೆ ಯೂನಿಕೋಡ್‌ನಲ್ಲಿ ಇರಬೇಕು. ವಯಸ್ಸಿನ ಮಿತಿ ಇರುವುದಿಲ್ಲ.
ಕತೆ/ಕವಿತೆ ಇರುವ ಪುಟದಲ್ಲಿ ಹೆಸರು, ವಿವರ ಬರೆಯುವಂತಿಲ್ಲ. ಪ್ರತ್ಯೇಕ ಪುಟದಲ್ಲಿ ಹೆಸರು, ಅಂಚೆ ವಿಳಾಸ, ಮೊಬೈಲ್ ನಂಬರ್, ಇ-ಮೇಲ್ ವಿಳಾಸ ಒದಗಿಸಬೇಕು.
ಇತ್ತೀಚಿನ ಪಾಸ್‌ಪೋರ್ಟ್ ಅಳತೆಯ ವರ್ಣಮಯ ಭಾವಚಿತ್ರದೊಂದಿಗೆ 100 ಪದಗಳ ಒಳಗೆ ಕಿರು ಪರಿಚಯ ಕಳುಹಿಸಬೇಕು.
ಸ್ಪರ್ಧೆಗೆ ಕಳುಹಿಸಿರುವ ಬರಹಗಳನ್ನು ಹಿಂದಿರುಗಿಸುವುದಿಲ್ಲ. ಬರಹಗಳು ಕಡ್ಡಾಯವಾಗಿ ಎಂಎಸ್ ವರ್ಡ್ ಫೈಲ್ (MS word File) ನಲ್ಲಿರಲಿ.
ಬರಹ ಮತ್ತು ಫೋಟೋಗಳನ್ನು ಇ-ಮೇಲ್ ಮೂಲಕವಷ್ಟೇ ಕಳಿಸಿ.
ಲೇಖನಗಳಿಗೆ ಆಹ್ವಾನ : ವೈಚಾರಿಕತೆ, ವಿಮರ್ಶೆ, ಕಾನೂನು, ಸಾಹಿತ್ಯ, ತಂತ್ರಜ್ಞಾನ, ವಿಜ್ಞಾನ, ಡಿಜಿಟಲ್ ಮಾಧ್ಯಮ, ಸಿನೆಮಾ, ಪ್ರೇಮಪತ್ರ, ಕೃಷಿ, ರಾಜಕೀಯ, ಕಲೆ, ಆರೋಗ್ಯ, ಪ್ರವಾಸ, ಅಡುಗೆ, ಫೋಟೋಗ್ರಫಿ, ವೈಲ್ಡ್ ಲೈಫ್, ಹಾಸ್ಯ ಕುರಿತಾದ ಲೇಖನಗಳನ್ನು 450 ಪದಗಳನ್ನು ಮೀರದಂತೆ ಬರೆದು ಕಳುಹಿಸಿ.
ಹಾಗೆಯೇ, ವಿಶೇಷಾಂಕದ ಮುಖಪುಟದ ರೂಪದರ್ಶಿಯಾಗಲು ಅವಕಾಶವನ್ನು ಕಲ್ಪಸಿಲಾಗಿದೆ. ಆಸಕ್ತ ರೂಪದರ್ಶಿಗಳು ಸ್ಟುಡಿಯೋ ಅಥವಾ ಫೋಟೋಗ್ರಾಫರ್ ಮೂಲಕ ತೆಗೆದ ‘6*4 ಅಳತೆಯ ಮುದ್ರಿತ ಫೋಟೋ ಮತ್ತು ಇ-ಮೇಲ್ ಮೂಲಕವೂ ಕಳಿಸಬಹುದು. 80 ಪದಗಳಮಿತಿಯೊಳಗೆ ನಿಮ್ಮ ಪರಿಚಯದೊಂದಿಗೆ, ಒಬ್ಬರು 4 ಫೋಟೋ ಕಳುಹಿಸಬೇಕು. ವಯಸ್ಸಿನ ಮಿತಿಯಿಲ್ಲ ಇರುವುದಿಲ್ಲ.
ಕತೆಯ ವಿಜೇತರಿಗೆ ಪ್ರಥಮ ಬಹುಮಾನ : 10000, ದ್ವಿತೀಯ ಬಹುಮಾನ : 5000, ತೃತೀಯ ಬಹುಮಾನ : 3000 ಹಾಗೂ ಕವಿತೆ ಬಹುಮಾನ ವಿಜೇತರಿಗೆ ಪ್ರಥಮ ಬಹುಮಾನ : 5000 ದ್ವಿತೀಯ ಬಹುಮಾನ : 3000 ಹಾಗೂ ತೃತೀಯ ಬಹುಮಾನ : ₹2000 ಸಿಗಲಿದೆ.
ಆಗಸ್ಟ್ 30ರೊಳಗೆ ಬರಹಗಳನ್ನು ಇ-ಮೇಲ್: deepasuddidina@gmail.com ಗೆ ಕಳುಹಿಸಲು ತಿಳಿಸಿದೆ. ಈ ಕುರಿತು ಹೆಚ್ಚಿನ ಮಾಹಿತಿಗಾಗಿ :9980346243 ಹಾಗೂ visit: www.suddidina.com ಅನ್ನು ವೀಕ್ಷಿಸಬಹುದಾಗಿದೆ.
ಕಚೇರಿ ವಿಳಾಸ
ದೇವನಗರಿ ಸುದ್ದಿದಿನ- ಕನ್ನಡ ದಿನ ಪತ್ರಿಕೆ
ದೀಪಾವಳಿ ವಿಶೇಷಾಂಕ ವಿಭಾಗ
#3231/1, ಸಂಜೀವ ಸದನ, 11ನೇ ಮುಖ್ಯರಸ್ತೆ, 4 ನೇ ಅಡ್ಡರಸ್ತೆ, ಎಂಸಿಸಿ ಬಿ ಬ್ಲಾಕ್, ದಾವಣಗೆರೆ, 577004
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಕ್ರೀಡೆ
ರಾಜ್ಯದ ವಿವಿಧ ನೀರಾವರಿ ಯೋಜನೆಗಳಿಗೆ ಹೆಚ್ಚಿನ ಅನುದಾನ ; ಇ-ಖಾತೆ ಅಭಿಯಾನ ಹಾಗೂ ಇತರೆ ಪ್ರಮುಖ ಸುದ್ದಿಗಳು
ರಾಜ್ಯದ ವಿವಿಧ ನೀರಾವರಿ ಯೋಜನೆಗಳಿಗೆ ಹೆಚ್ಚಿನ ಅನುದಾನ ; ಇ-ಖಾತೆ ಅಭಿಯಾನ ಹಾಗೂ ಇತರೆ ಪ್ರಮುಖ ಸುದ್ದಿಗಳು
1. ಮುಖ್ಯಮಂತ್ರಿ ಸಿದ್ದರಾಮಯ್ಯ ನವದೆಹಲಿ ತಲುಪಿದ್ದಾರೆ. ಇಂದು ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿ ಮಾಡಿ, 5 ಪ್ರಮುಖ ಮಸೂದೆಗಳಿಗೆ ಅಂಗೀಕಾರ ನೀಡುವಂತೆ ಮನವಿ ಮಾಡಲಿದ್ದಾರೆ ಎಂದು ಉನ್ನತ ಮೂಲಗಳು ತಿಳಿಸಿವೆ. ಭದ್ರಾ ಮೇಲ್ದಂಡೆ ಯೋಜನೆ ಸೇರಿದಂತೆ ರಾಜ್ಯದ ವಿವಿಧ ನೀರಾವರಿ ಯೋಜನೆಗಳಿಗೆ, ಹೆಚ್ಚಿನ ಅನುದಾನ ಬಿಡುಗಡೆ ಮಾಡುವಂತೆ, ಕೇಂದ್ರದ ಜಲಶಕ್ತಿ ಖಾತೆ ಸಚಿವರನ್ನು ಕೋರುವುದಾಗಿ, ಇದೇ ವೇಳೆ ಸಾಮಾಜಿಕ ಜಾಲತಾಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
2. ರಾಜ್ಯದ ಗ್ರಾಮ ಪಂಚಾಯ್ತಿಗಳ ಹಂತದಲ್ಲಿ ಜುಲೈ 15ರಿಂದ, ಸಾರ್ವಜನಿಕರ ಆಸ್ತಿಗಳ ಇ-ಖಾತೆ ರೂಪಿಸುವ ಅಭಿಯಾನವನ್ನು ಕಂದಾಯ ಇಲಾಖೆ ಆಯೋಜಿಸಲಿದೆ ಎಂದು ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.
3. ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆಗೆ ಸಂಬಂಧಿಸಿ, ಇಲ್ಲಿಯವರೆಗೆ ಹೆಸರು ನೋಂದಾಯಿಸದವರು, ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ, ಈ ತಿಂಗಳ 30ರವರೆಗೆ ಮಾಹಿತಿ ನೀಡಲು ಅವಕಾಶವಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಎ.ಬಿ.ಬಸವರಾಜು ತಿಳಿಸಿದ್ದಾರೆ.
4. ಕಾವೇರಿ ಜಲಾನಯನ ಪ್ರದೇಶದಲ್ಲಿ ವ್ಯಾಪಕವಾಗಿ ಸುರಿಯುತ್ತಿರುವ ಮಳೆಯಿಂದ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆ.ಆರ್.ಎಸ್. ಅಣೆಕಟ್ಟೆ ಭಾಗಶ: ಭರ್ತಿಯಾಗಿದ್ದು, ಒಳ ಹರಿವು ಇನ್ನಷ್ಟು ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಅಣೆಕಟ್ಟೆಯಿಂದ 5 ಸಾವಿರದಿಂದ 15 ಸಾವಿರ ಕ್ಯುಸೆಕ್ ನೀರನ್ನು ನದಿಗೆ ಹರಿಸಲಾಗಿದೆ.
5. ಕತಾರ್‌ನಲ್ಲಿರುವ ಅಲ್ ಉದೈದ್ ಅಮೇರಿಕ ವಾಯುನೆಲೆಯ ಮೇಲೆ ಇರಾನ್ ನಡೆಸಿದ ದಾಳಿಯ ನಂತರ ಜಾಗತಿಕ ತೈಲ ಬೆಲೆಗಳು ಐದು ವರ್ಷಗಳಲ್ಲಿ ನಿನ್ನೆ ಒಂದೇ ದಿನದಲ್ಲಿ ತೀವ್ರ ಕುಸಿತವನ್ನು ದಾಖಲಿಸಿದೆ.
6. ಕರ್ನಾಟಕ, ಮಧ್ಯಪ್ರದೇಶ, ಬಿಹಾರ, ಜಾಖಂಡ್, ಒಡಿಶಾ, ಛತ್ತೀಸ್‌ಗಢ, ಪಶ್ಚಿಮ ಬಂಗಾಳ, ಸಿಕ್ಕಿಂ, ಅರುಣಾಚಲ ಪ್ರದೇಶ, ಕೊಂಕಣ, ಗೋವಾ, ಮಹಾರಾಷ್ಟ್ರ, ಗುಜರಾತ್, ಹಿಮಾಚಲ ಪ್ರದೇಶ, ಉತ್ತರಾಖಂಡ, ಪಶ್ಚಿಮ ಉತ್ತರ ಪ್ರದೇಶ, ರಾಜಸ್ಥಾನ, ಕೇರಳದ ಕೆಲವು ಸ್ಥಳಗಳಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
7. ಅಯೋವಾದಲ್ಲಿ ನಾಳೆ ಆರಂಭವಾಗಲಿರುವ ಯುಎಸ್ ಓಪನ್ 2025 ಬ್ಯಾಡ್ಮಿಂಟನ್ ಪಂದ್ಯಾವಳಿಯ ಪುರುಷರ ಡಬಲ್ಸ್ ವಿಭಾಗದಲ್ಲಿ ಹರಿಹರನ್ ಅಂಶಕರುಣನ್ ಮತ್ತು ರೂಬನ್ ಕುಮಾರ್ ರೆಥಿನಸಬಪತಿ, ಭಾರತವನ್ನು ಮುನ್ನಡೆಸಲಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಈರುಳ್ಳಿ ಕೇವಲ ತರಕಾರಿಯಲ್ಲ ; ಅದ್ಭುತ ಔಷಧ
ನಾವು ನಿತ್ಯವೂ ತಯಾರಿಸುವ ಅಡುಗೆ ಪದಾರ್ಥಗಳಿಗೆ ಈರುಳ್ಳಿಯನ್ನು ಹಾಕದಿದ್ದಾಗ ಒಂದು ರುಚಿಯಾದರೆ ಅದನ್ನು ಹಾಕಿದಾಗ ಆ ಪದಾರ್ಥದ ರುಚಿಯೇ ಬೇರೆಯಾಗುತ್ತದೆ. ನಾವು ಈರುಳ್ಳಿಯ ಗುಣಗಳು, ಅದರ ಉಪಯೋಗಗಳು ಮತ್ತು ಮನೆ ಮದ್ದುಗಳ ಬಗ್ಗೆ ತಿಳಿದುಕೊಳ್ಳೋಣ.
ಆಯುರ್ವೇದದಲ್ಲಿ ಈರುಳ್ಳಿಯ ಬಗ್ಗೆ ವಿಸ್ತೃತ ವಿವರಣೆ ಇದೆ. ಆಯುರ್ವೇದ ಗ್ರಂಥಗಳ ಪ್ರಕಾರ ಈರುಳ್ಳಿಗೆ ಬೆಳ್ಳುಳ್ಳಿಯ ಗುಣಗಳಿವೆ. ಆದರೆ ಬೆಳ್ಳುಳ್ಳಿಯಂತೆ ಇದು ಉಷ್ಣವಲ್ಲ. ಹಾಗಾಗಿ ಬೆಳ್ಳುಳ್ಳಿಯ ಅದ್ಭುತ ಗುಣಗಳನ್ನು ಪಡೆಯಬೇಕು ಎಂದಾದರೆ ಮತ್ತು ಬೆಳ್ಳುಳ್ಳಿಯನ್ನು ಸೇವಿಸಿದರೆ ಉಷ್ಣವಾಗುತ್ತದೆ ಎಂಬ ಯೋಚನೆ ಇದ್ದರೆ ಬದಲಿಗೆ ಈರುಳ್ಳಿಯನ್ನು ಬಳಸಬಹುದು.
ಭಾವ ಪ್ರಕಾಶ ನಿಘಂಟು ಎಂಬ ಗ್ರಂಥದಲ್ಲಿ “ಬಲವೀರ್ಯ ಕೈರೋ ಗುರುಃ” ಎಂದಿದ್ದಾರೆ. ಅಂದರೆ ಈರುಳ್ಳಿಯು ದೇಹದ ಬಲವನ್ನು, ವೀರ್ಯದ ಗುಣಮಟ್ಟವನ್ನು, ಲೈಂಗಿಕ ಶಕ್ತಿಯನ್ನು ಹೆಚ್ಚಿಸುತ್ತದೆ ಎಂದರ್ಥ. ಬಹುತೇಕ ಎಲ್ಲಾ ಆಯುರ್ವೇದ ಗ್ರಂಥಗಳಲ್ಲಿಯೂ ಈರುಳ್ಳಿಯಿಂದ ಲೈಂಗಿಕ ಶಕ್ತಿ ವೃದ್ಧಿಯಾಗುತ್ತದೆ ಎಂಬುದನ್ನು ಹೇಳಲಾಗಿದೆ. ಇದು ಚರ್ಮಕ್ಕೆ ಕೂಡ ಅತ್ಯಂತ ಅನುಕೂಲಕರವಾದದ್ದು. ಚರ್ಮವನ್ನು ಸ್ನಿಗ್ಧಗೊಳಿಸಿ ಒರಟುತನವನ್ನು ಹೋಗಲಾಡಿಸುತ್ತದೆ; ಚರ್ಮಕ್ಕೆ ಕಾಂತಿಯನ್ನು ಕೊಡುತ್ತದೆ; ಜೊತೆಗೆ ಚರ್ಮದ ಶುದ್ಧಿಯನ್ನೂ ಮಾಡುತ್ತದೆ ಎಂದು ವಿವರಿಸಲಾಗಿದೆ. ಈರುಳ್ಳಿಯನ್ನು ನಿಯಮಿತವಾಗಿ ಸೇವಿಸುವುದರಿಂದ ದೇಹದ ಬಾಹ್ಯ ಮತ್ತು ಆಂತರಿಕ ಕಾಂತಿ ಹೆಚ್ಚುತ್ತದೆ.
ಅಂದರೆ ಕೇವಲ ಸೌಂದರ್ಯವೃದ್ಧಿಯಷ್ಟೇ ಅಲ್ಲ ದೇಹದೊಳಗಿನ ರೋಗನಿರೋಧಕ ಶಕ್ತಿ ತುಂಬಾ ಚೆನ್ನಾಗಿ ಹೆಚ್ಚುತ್ತದೆ. ಈರುಳ್ಳಿಯು ಧ್ವನಿಗೆ ಸಂಬಂಧಿಸಿದ ಸಮಸ್ಯೆಗಳನ್ನು ಹೋಗಲಾಡಿಸಿ ಒಳ್ಳೆಯ ಧ್ವನಿಯನ್ನು ನೀಡುತ್ತದೆ ಎಂದು ವಿವರಿಸಲಾಗಿದೆ. ಹೀಗಾಗಿ ಹಾಡುಗಾರರು, ಅಧ್ಯಾಪಕರಂಥವರಿಗೆ ನಿಯಮಿತ ಈರುಳ್ಳಿ ಸೇವನೆ ಅನುಕೂಲಕರ. ಇದು ಕಣ್ಣಿನ ಆರೋಗ್ಯವನ್ನು ಹೆಚ್ಚಿಸುವುದರಿಂದ ಹತ್ತರಿಂದ ಹದಿನೈದು ಮಿಲೀ ಈರುಳ್ಳಿ ರಸವನ್ನು ಸುಮಾರು ಒಂದು ತಿಂಗಳು ದಿನಕ್ಕೊಮ್ಮೆ ಸೇವಿಸುವುದರಿಂದ ಚಿಕ್ಕಪುಟ್ಟ ಕಣ್ಣಿನ ತೊಂದರೆಗಳು ನಿವಾರಣೆಯಾಗುತ್ತವೆ. ಸ್ವಲ್ಪ ಸಿಹಿ ಇರುವ ಅಂದರೆ ಖಾರ ಕಡಿಮೆ ಇರುವ ಈರುಳ್ಳಿಯನ್ನು ಚಿಕ್ಕ ಚಿಕ್ಕ ತುಂಡುಗಳನ್ನಾಗಿ ಕತ್ತರಿಸಿ ತುಪ್ಪದಲ್ಲಿ ಹುರಿದು ನಿಯಮಿತವಾಗಿ ಸೇವಿಸಿದರೆ ಲೈಂಗಿಕ ಶಕ್ತಿಯ ವೃದ್ಧಿಯಾಗುತ್ತದೆ.
ಕೂದಲು ಉದುರುವುದನ್ನು ಕಡಿಮೆ ಮಾಡಲು ಈರುಳ್ಳಿಯು ಸಹಕಾರಿ. ಈರುಳ್ಳಿಯ ರಸ ತೆಗೆದು ತಲೆ ಸ್ನಾನ ಮಾಡುವ ಹತ್ತು ನಿಮಿಷ ಮೊದಲು ಕೂದಲಿನ ಬುಡಕ್ಕೆ ಹಚ್ಚಬೇಕು. ಇದರಿಂದ ಕೂದಲಿನ ಬೆಳವಣಿಗೆ ಚೆನ್ನಾಗಿ ಆಗಲು ಮತ್ತು ಕೂದಲು ಉದುರುವುದು ನಿಲ್ಲಲು ಸಹಾಯವಾಗುತ್ತದೆ. ಬೊಜ್ಜನ್ನು ಕಡಿಮೆ ಮಾಡಲು ಕೂಡ ಈರುಳ್ಳಿಯು ಸಹಕಾರಿ. ಬೆಳ್ಳುಳ್ಳಿಯ ಇನ್ನೊಂದು ಅದ್ಭುತ ಗುಣವೆಂದರೆ ಅದು ನರದ ಶಕ್ತಿಯನ್ನು ಹೆಚ್ಚಿಸುತ್ತದೆ. ಹಾಗಾಗಿ ಸಯಾಟಿಕಾದಂತಹ ಸಮಸ್ಯೆಗಳನ್ನು ಅನುಭವಿಸುತ್ತಿರುವವರಿಗೆ ಈರುಳ್ಳಿ ತುಂಬಾ ಲಾಭದಾಯಕ.
ಕಫದ ಸಮಸ್ಯೆಯಿಂದ ಬಳಲುತ್ತಿದ್ದು ಕಫ ಹೊರಗೆ ಬರುತ್ತಿಲ್ಲದಿದ್ದರೆ ಎರಡು ಚಮಚದಷ್ಟು ಈರುಳ್ಳಿ ರಸ, ಅರ್ಧ ಚಮಚದಷ್ಟು ಶುಂಠಿ ರಸ, ಅರ್ಧ ಚಮಚದಷ್ಟು ತುಳಸಿ ಎಲೆಗಳ ರಸ ಮತ್ತು ಒಂದು ಚಮಚ ಜೇನುತುಪ್ಪವನ್ನು ಸೇರಿಸಿ ದಿನಕ್ಕೆ ಒಂದು ಅಥವಾ ಎರಡು ಬಾರಿ ಸೇವಿಸಿದರೆ ಕಫ ಹೊರಗೆ ಬಂದು ಸಮಸ್ಯೆ ನಿವಾರಣೆಯಾಗುತ್ತದೆ.
ಈರುಳ್ಳಿ ಒಳ್ಳೆಯ ಜೀರ್ಣಕಾರಿಯೂ ಹೌದು ಹಾಗಾಗಿ ಅಜೀರ್ಣ ಇರುವವರಿಗೆ ಹೆಚ್ಚಿನ ಪ್ರಮಾಣದಲ್ಲಿ ಈರುಳ್ಳಿಯನ್ನು ಹಾಕಿ ಹೆಸರುಬೇಳೆಯ ತಿಳಿಸಾರು ಮಾಡಿ ಊಟಕ್ಕೆ ನೀಡಿದರೆ ಅಜೀರ್ಣದ ಸಮಸ್ಯೆ ತುಂಬಾ ಚೆನ್ನಾಗಿ ಹತೋಟಿಗೆ ಬರುತ್ತದೆ. ಜೊತೆಗೆ ಶಕ್ತಿ ವೃದ್ಧಿಯೂ ಆಗುತ್ತದೆ. ಒಟ್ಟಿನಲ್ಲಿ ಈರುಳ್ಳಿಯನ್ನು ಸರಿಯಾಗಿ ಬಳಸಿಕೊಂಡರೆ ಅದು ಕೇವಲ ತರಕಾರಿಯಲ್ಲ ಅದ್ಭುತ ಔಷಧ.(ಬರಹ-ಡಾ|| ವೆಂಕಟ್ರಮಣ ಹೆಗಡೆ
ವೇದ ವೆಲ್ನೆಸ್ ಸೆಂಟರ್, ನಿಸರ್ಗಮನೆ, ಶಿರಸಿ, ಉ.ಕನ್ನಡ)
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ5 days agoಅನುದಾನ ದುರುಪಯೋಗ | ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ನಿರ್ದೇಶಕ ಡಾ. ಅಶೋಕ್ ಡಿ.ಆರ್ ವಿರುದ್ಧ ಲೋಕಾಗೆ ದೂರು
-
ದಿನದ ಸುದ್ದಿ5 days agoತುರ್ತು ಕುಡಿಯುವ ನೀರಿನ ಯೋಜನೆ ; 7 ಕೋಟಿ ಅನುದಾನದಲ್ಲಿ ಅವ್ಯವಹಾರ : ತನಿಖೆಗೆ ಆದೇಶಿಸಿ ವಕೀಲ ಡಾ.ಕೆ.ಎ.ಓಬಳಪ್ಪ ಲೋಕಾಗೆ ದೂರು
-
ದಿನದ ಸುದ್ದಿ5 days agoಸುಶೋಭನ್ ಸೋನು ರಾಯ್ ಬೆಳ್ಳಿತೆರೆಗೆ
-
ದಿನದ ಸುದ್ದಿ3 days agoಡಾ. ಪ್ರೀತಿ ಅವರಿಗೆ ‘ಪರಮ್ ಭೂಷಣ್ ನ್ಯಾಷನಲ್ ಎಕ್ಸಲೆನ್ಸ್ ಅವಾರ್ಡ್


