ನಿತ್ಯ ಭವಿಷ್ಯ
ಬುಧವಾರದ ಭವಿಷ್ಯ | ನಿಮ್ಮ ಸರ್ವ ಸಮಸ್ಯೆಗಳ ಪರಿಹಾರ ಮತ್ತು ಮಾರ್ಗದರ್ಶನಕ್ಕಾಗಿ ಇಂದೇ ಕರೆ ಮಾಡಿ
ಶ್ರೀ ಮಹಾವಿಷ್ಣು ಸ್ಮರಣೆ ಮಾಡುತ್ತಾ ಈ ದಿನದ ದ್ವಾದಶ ರಾಶಿ ಫಲಗಳನ್ನು ತಿಳಿಯೋಣ.
ಖ್ಯಾತ ಜ್ಯೋತಿಷ್ಯರು ಗಿರಿಧರಭಟ್
ನಿಮ್ಮ ಸರ್ವ ಸಮಸ್ಯೆಗಳ ಪರಿಹಾರ ಮತ್ತು ಮಾರ್ಗದರ್ಶನಕ್ಕಾಗಿ ಇಂದೇ ಕರೆ ಮಾಡಿ.
9945410150
ಮೇಷ ರಾಶಿ
ಇಂದು ಲಾಭಗಳಿಕೆ ವಿಷಯದಲ್ಲಿ ಅತ್ಯುತ್ತಮವಾದ ಕಾರ್ಯ ನಿಮ್ಮಿಂದ ಆಗಲಿದೆ. ದಾಂಪತ್ಯದಲ್ಲಿನ ಸಣ್ಣ ಸಮಸ್ಯೆಗಳನ್ನು ಸರಿ ಮಾಡುವ ಜವಾಬ್ದಾರಿ ತೆಗೆದುಕೊಳ್ಳುವಿರಿ. ಪತ್ನಿಯ ಓಲೈಕೆಗಾಗಿ ಪ್ರಿಯವಾದ ಕೆಲಸವನ್ನು ಮಾಡಲು ಇಚ್ಛಿಸುವಿರಿ. ಮಕ್ಕಳ ಹಿತಾಸಕ್ತಿಯನ್ನು ಕಡೆಗಣಿಸಬೇಡಿ. ಗೃಹ ಖರೀದಿ ಬಯಕೆ ಸಕಾರಾತ್ಮಕ ಫಲಿತಾಂಶ ನೀಡಲಿದೆ. ಜಮೀನು ಸಂಬಂಧಿತ ಕೆಲಸಗಳಲ್ಲಿ ಉತ್ತಮ ಪಾಲ್ಗೊಳ್ಳುವಿಕೆ ಕಾಣಬಹುದಾಗಿದೆ.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ
ವೃಷಭ ರಾಶಿ
ಸಾಲ ಕೊಡುವ ವಿಷಯ ಬಂದರೆ ಹಿರಿಯರ ಜೊತೆ ಚರ್ಚಿಸಿ ನಿರ್ಧಾರ ಮಾಡಿ. ಕನಸುಗಳು ನನಸಾಗುವ ಮುನ್ಸೂಚನೆ. ಹೂಡಿಕೆಗಳು ಲಾಭಕರವಾಗಿ ಬರುತ್ತದೆ. ದೀರ್ಘಾವಧಿ ಹೂಡಿಕೆಗಳಿಂದ ಲಾಭ. ನಿಮ್ಮ ನಿಷ್ಕಲ್ಮಶವಾದಂತಹ ಬುದ್ಧಿ ಮಾತು ಪರರಿಗೆ ಹಾಸ್ಯಾಸ್ಪದ ವಾಗುವುದು. ಕೆಲವು ಮೂಲಗಳಿಂದ ಹಣಕಾಸಿನ ಹರಿವು.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ
ಮಿಥುನ ರಾಶಿ
ಆತ್ಮೀಯರಲ್ಲಿ ಗೌರವ ಅಭಿಮಾನ ಪಾತ್ರರಾಗುವಿರಿ. ಮತ್ಸರದ ಜನಗಳಿಂದ ಅಪಪ್ರಚಾರ. ಆರ್ಥಿಕತೆಯಲ್ಲಿ ಲಾಭ. ನಿಮ್ಮ ಕೆಲಸಗಳಿಗೆ ಸಂಗಾತಿಯಿಂದ ಬೆಂಗಾವಲು ಪಡೆಯುವಿರಿ. ಸರ್ಕಾರಿ ಕಚೇರಿಯಲ್ಲಿ ನಿರೀಕ್ಷಿತ ಲಾಭ. ಸಹವಾಸ ದೋಷದಿಂದ ಸಂಕಷ್ಟಗಳು ತಲೆದೋರಬಹುದು. ಹಣಕಾಸಿಗಾಗಿ ಕೆಲವರಿಂದ ಪೀಡನೆ. ಮಕ್ಕಳಿಂದ ಕೆಲವು ಸಾಧನೆಯ ನಿರೀಕ್ಷೆ.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ
ಕರ್ಕಟಾಕ ರಾಶಿ
ಕುಟುಂಬದಲ್ಲಿ ಶಾಂತಿ ನೆಲೆಸುವಂತೆ ಪ್ರಯತ್ನಪಡಿ. ದುಡುಕಿನ ನಿರ್ಧಾರ ಗಳಿಂದ ಕಷ್ಟಕ್ಕೆ ಸಿಲುಕಬಹುದು. ಮನೆ ಕಟ್ಟುವ ಯೋಜನೆ ಮುಂದಕ್ಕೆ ಹೋಗಬಹುದು. ಆರ್ಥಿಕ ಹೊಡೆತದಿಂದ ಸಾಲ ಬಾದೆ. ಉದ್ಯಮಿಗಳಿಗೆ ನಿರೀಕ್ಷಿತ ಲಾಭವಿಲ್ಲ. ಕುಟುಂಬದಲ್ಲಿ ಹೊಸ ಸದಸ್ಯರ ಆಗಮನ ಸಂತೋಷ. ಮಕ್ಕಳ ಶಿಕ್ಷಣಕ್ಕಾಗಿ ಹಣಕಾಸಿನಲ್ಲಿ ವೆಚ್ಚ.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ
ಸಿಂಹ ರಾಶಿ
ಒತ್ತಡದಿಂದ ಆಯಾಸ. ಹೊಸ ವಸ್ತುಗಳ ಖರೀದಿಯ ಭರಾಟೆ. ಮನೆಗಾಗಿ ವಿಶೇಷ ಕಾಣಿಕೆ ಕಂಡುಕೊಳ್ಳುವಿರಿ. ಸಂಗಾತಿಯಿಂದ ಪ್ರೇಮ ನಿರೀಕ್ಷೆ. ಸಮಗ್ರ ದೃಷ್ಟಿಕೋನದಿಂದ ಬಂಡವಾಳ ಹೂಡುವುದು ಸೂಕ್ತ. ಕ್ರೀಡಾ ಚಟುವಟಿಕೆಗಳಲ್ಲಿ ಉತ್ತಮ ಜಯ ಸಂಪಾದನೆ ಆಗಲಿದೆ.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ
ಕನ್ಯಾ ರಾಶಿ
ಪರೋಪಕಾರದ ಗುಣಗಳಿಂದ ಉತ್ತಮ ವ್ಯಕ್ತಿತ್ವ ರೂಪಿಸಿಕೊಳ್ಳುವಿರಿ. ಆತುರದ ಹೂಡಿಕೆಗಳು ನಷ್ಟದ ಹಾದಿ ಹಿಡಿಯಬಹುದು. ತ್ವರಿತ ಹಣಗಳಿಕೆಯ ಮಾರ್ಗಗಳು ಕಾಣಸಿಗುತ್ತದೆ, ಕೂಲಂಕಶವಾಗಿ ನೀವು ನಡೆಯುವ ದಾರಿಯನ್ನು ಯೋಚನೆ ಮಾಡಿ. ಇಂದು ಕೆಲವರು ಸುಖಾಸುಮ್ಮನೆ ಆಕ್ರಮಣಕಾರಿಯಾದ ವರ್ತನೆ ತೋರುವರು ಆದಷ್ಟು ತಾಳ್ಮೆಯಿಂದ ಮುಂದಿನ ದಾರಿ ನೋಡಿ. ಯೋಜನೆಗಳಲ್ಲಿ ಇತರರ ಹಸ್ತಕ್ಷೇಪದಿಂದ ಅಡ್ಡಿ-ಆತಂಕಗಳು ಸೃಷ್ಟಿಯಾಗಲಿದೆ, ನಿಮ್ಮ ಬುದ್ಧಿವಂತಿಕೆಗೆ ಕೆಲಸ ನೀಡುವುದು ಉತ್ತಮ. ಪಾಲುದಾರರ ವ್ಯವಹಾರಗಳಲ್ಲಿ ಅನುಮಾನಸ್ಪದ ವಾತಾವರಣ ಉಂಟಾಗಲಿದೆ.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ
ತುಲಾ ರಾಶಿ
ನಿಮ್ಮಲ್ಲಿನ ಮುನಿಸಿಕೊಳ್ಳುವ ಸ್ವಭಾವವು ಕಷ್ಟಗಳನ್ನು ಹೆಚ್ಚು ಮಾಡುತ್ತದೆ. ಆದಷ್ಟು ಪ್ರೀತಿಯಿಂದ ಮುಂದೆ ಸಾಗುವುದು ಸುಂದರ ಜೀವನ ಕಟ್ಟಿಕೊಳ್ಳುವುದನ್ನು ಕಲಿಯುವುದು ಉತ್ತಮ.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ
ವೃಶ್ಚಿಕ ರಾಶಿ
ಸ್ವತಂತ್ರ ಜೀವಿಯಾದ ನಿಮಗೆ ಪಂಜರದಲ್ಲಿ ಕೂಡಿ ಹಾಕಲು ಪ್ರಯತ್ನ ನಡೆಯುತ್ತಿದೆ, ನಿಮ್ಮ ವಿಚಾರಗಳಿಗೆ, ನಿಮ್ಮ ಕಾರ್ಯದಲ್ಲಿ ಅಥವಾ ನಿಮ್ಮಲ್ಲಿನ ವ್ಯಕ್ತಿತ್ವವನ್ನು ತಮ್ಮ ಉಪಯೋಗಕ್ಕಾಗಿ ಉಪಯೋಗಿಸಿ ಕೊಳ್ಳುವವರು ಇದ್ದಾರೆ ಎಚ್ಚರಿಕೆ ಇರಲಿ. ಸ್ವಂತ ಉದ್ಯಮ ಪ್ರಾರಂಭ ಮಾಡುವ ನಿಮ್ಮ ಬಯಕೆಗೆ ಆಘಾತಕಾರಿ ಆದಂತಹ ಕೆಲವು ಪಟ್ಟಭದ್ರ ಹಿತಾಸಕ್ತಿಗಳು ನಿಮ್ಮ ಕಾರ್ಯ ನಾಶ ಮಾಡಬಹುದಾಗಿದೆ ಯಾವುದೇ ಕಾರಣಕ್ಕೂ ಭಯ ಪಡದಿರಿ ಗ್ರಹಗತಿಗಳ ಶುಭ ಫಲಗಳಿಂದ ಗೆಲುವು ನಿಮ್ಮದೇ ಆಗಲಿದೆ.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ
ಧನಸ್ಸು ರಾಶಿ
ನಿಮ್ಮ ಪತ್ನಿ ಮಾತುಗಳು ನಿಮಗೆ ಸ್ಪೂರ್ತಿ ನೀಡುತ್ತದೆ ಅವರ ಬಯಕೆಗಳನ್ನು ಪೂರ್ಣಗೊಳಿಸುವರಿಂದ ನಿಮ್ಮ ಅದೃಷ್ಟ ಕುಲಾಯಿಸುತ್ತದೆ. ತುಂಬಿದ ಕೊಡ ತುಳುಕುವುದಿಲ್ಲ ಎಂಬಂತೆ ನಿಮ್ಮ ಉತ್ತಮ ಜ್ಞಾನ ಹಾಗೂ ವಿನಯತೆಯಿಂದ ಅತ್ಯುತ್ತಮವಾದದ್ದನ್ನು ಪಡೆದುಕೊಳ್ಳುವ ಸುವರ್ಣ ಅವಕಾಶ ಲಭಿಸಲಿದೆ.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ
ಮಕರ ರಾಶಿ
ನಿಮ್ಮ ಚಿಂತನೆಗಳು ಹಲವು ರೀತಿಯ ಲಾಭಕ್ಕೆ ಕಾರಣವಾಗುತ್ತದೆ. ವ್ಯವಹಾರದಲ್ಲಿನ ಚಾಣಾಕ್ಷತೆ ಯು ನಿಮ್ಮ ವಿರೋಧಿ ವರ್ಗಗಳನ್ನು ಬಾಯಿ ಮುಚ್ಚಿಸುತ್ತದೆ. ಪ್ರೇಮ ಜೀವಿ ಆದ ನೀವು ನಿಮಗೆ ಪ್ರೇಮಾಂಕುರವಾಗುವ ಎಲ್ಲಾ ಲಕ್ಷಣಗಳು ಗೋಚರವಾಗುತ್ತಿದೆ. ದೊಡ್ಡ ಮಟ್ಟದ ಖರೀದಿ ಪ್ರಕ್ರಿಯೆಗಳು ಅನಾಯಾಸವಾಗಿ ಮಾಡುವಿರಿ.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ
ಕುಂಭ ರಾಶಿ
ನಿಮ್ಮ ಕೆಲಸದ ನಿಷ್ಠೆಯೂ ಮತ್ತಷ್ಟು ಹೆಚ್ಚಿನ ಜವಾಬ್ದಾರಿ ತಂದು ಕೊಡುತ್ತದೆ. ಹಿರಿಯರು ನಿಮ್ಮ ಮೇಲೆ ಹೆಚ್ಚು ಅವಲಂಬಿತರಾಗಿರುತ್ತಾರೆ. ಅವರ ಪ್ರತಿಯೊಂದು ಆಶಾ ಕಿರಣ ನೀವೇ ಆಗಿರುವಿರಿ. ಕೆಲವು ಸಮಸ್ಯೆಗಳನ್ನು ಮೈಮೇಲೆ ಎಳೆದುಕೊಂಡು ಸಂದಿಗ್ಧ ಪರಿಸ್ಥಿತಿಗೆ ಸಿಲುಕುವ ನೀವು ಮಾನಸಿಕವಾಗಿ ತೊಂದರೆ ಅನುಭವಿಸುವ ಸ್ಥಿತಿ ಇದೆ. ಆದಷ್ಟು ಬೇರೆಯವರ ವಿಚಾರದಲ್ಲಿ ಯೋಚಿಸಿ ಕೈ ಹಾಕಿ.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ
ಮೀನ ರಾಶಿ
ಇಂದು ನೀವು ನಿಜವಾದ ಆನಂದ ಏನು ಎಂಬುದನ್ನು ತಿಳಿದುಕೊಳ್ಳಲು ಪ್ರಯತ್ನ ಮಾಡುತ್ತೀರಿ. ಕುಟುಂಬದ ಜೊತೆ ಸಂತೋಷ ಕೂಟಗಳಲ್ಲಿ ಹಾಗೂ ಸಮಾರಂಭಗಳಲ್ಲಿ ಪಾಲ್ಗೊಳ್ಳುವುದರಿಂದ ನಿಮ್ಮಲ್ಲಿ ಚೈತನ್ಯ ಹೆಚ್ಚಾಗುತ್ತದೆ. ಭೂಮಿಗೆ ಸಂಬಂಧಪಟ್ಟಂತಹ ಹೂಡಿಕೆಗಳು ನಿಮಗೆ ಅತಿ ಹೆಚ್ಚಿನ ಲಾಭ ತಂದುಕೊಡುತ್ತದೆ. ಕುಟುಂಬದ ಸ್ಥಿತಿಗತಿಗಳು ಹಾಗೂ ಅವರ ಕಷ್ಟಗಳನ್ನು ನಿಮ್ಮದಲ್ಲ ಎಂಬ ಭಾವನೆ ನಿಮ್ಮಲ್ಲಿ ಇದ್ದರೆ ಅದನ್ನು ತೆಗೆದು ಹಾಕಿ.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ
ಜ್ಯೋತಿಷ್ಯರು ಗಿರಿಧರ ಭಟ್
ನಿಮ್ಮ ಸಮಸ್ಯೆಗಳಾದ ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ಹಣಕಾಸು, ಸಾಲಬಾದೆ, ಪ್ರೇಮ ವಿಚಾರ, ದಾಂಪತ್ಯ, ಶತ್ರುಬಾಧೆ, ಕೌಟುಂಬಿಕ ಸಮಸ್ಯೆ ಇನ್ನೂ ಹತ್ತು ಹಲವಾರು ಸಮಸ್ಯೆಗಳ ಪರಿಹಾರಕ್ಕಾಗಿ ಇಂದೇ ಕರೆ ಮಾಡಿ:
9945410150

ಅಂಕಣ
ದೀಪಾವಳಿ ವಿಶೇಷಾಂಕ | ದೇವನಗರಿ ಸುದ್ದಿದಿನ ಪತ್ರಿಕೆಯಿಂದ ಕತೆ- ಕವಿತೆ- ಲೇಖನ- ರೂಪದರ್ಶಿ ಫೋಟೋ ಗಳಿಗೆ ಆಹ್ವಾನ
ಸುದ್ದಿದಿನ,ದಾವಣಗೆರೆ: ಪ್ರಿಯ ಓದುಗರೆ, ಬೆಳಕಿನ ಹಬ್ಬ ದೀಪಾವಳಿಯ ಪ್ರಯುಕ್ತ ದೇವನಗರಿ ಸುದ್ದಿದಿನ – ಕನ್ನಡ ದಿನ ಪತ್ರಿಕೆ ಹಾಗೂ ಶ್ಯಾಮ್ ಪ್ರಕಾಶನದವತಿಯಿಂದ ‘ ದೀಪಾವಳಿ ವಿಶೇಷಾಂಕ’-2026ನ್ನು ತರಲಾಗುತ್ತಿದೆ.
ಈ ಹಿನ್ನೆಲೆಯಲ್ಲಿ ದೀಪಾವಳಿ ವಿಷೇಶಾಂಕ 2026ರ ವಿಭಾಗಕ್ಕೆ ಕತೆ, ಕವಿತೆ ಹಾಗೂ ಲೇಖನ ಹಾಗೂ ರೂಪದರ್ಶಿಗಳ ಛಾಯಾಚಿತ್ರಗಳನ್ನು ಆಹ್ವಾನಿಸಿದ್ದೇವೆ.
ಕತೆ – ಕವಿತೆಗಳನ್ನು ಕಳುಹಿಸಲು ಇರುವ ನಿಯಮಗಳು
ಕತೆ/ಕವಿತೆ ಸ್ವತಂತ್ರ ರಚನೆಯಾಗಿರಬೇಕು. ಈ ಮೊದಲು ಯಾವ ಮಾಧ್ಯಮಗಳಲ್ಲಿಯೂ ಪ್ರಕಟ ಅಥವಾ ಪ್ರಸಾರ ಆಗಿರಬಾರದು.
ಕತೆ 1500 ಸಾವಿರ ಪದಗಳ ಮಿತಿಯಲ್ಲಿರಲಿ. ಕವಿತೆಗೆ 40 ಸಾಲಿನ ಮಿತಿಯಿರಲಿ, ನುಡಿ ಅಥವಾ ಬರಹ ತಂತ್ರಾಂಶದಲ್ಲಿ ಇಲ್ಲವೆ ಯೂನಿಕೋಡ್‌ನಲ್ಲಿ ಇರಬೇಕು. ವಯಸ್ಸಿನ ಮಿತಿ ಇರುವುದಿಲ್ಲ.
ಕತೆ/ಕವಿತೆ ಇರುವ ಪುಟದಲ್ಲಿ ಹೆಸರು, ವಿವರ ಬರೆಯುವಂತಿಲ್ಲ. ಪ್ರತ್ಯೇಕ ಪುಟದಲ್ಲಿ ಹೆಸರು, ಅಂಚೆ ವಿಳಾಸ, ಮೊಬೈಲ್ ನಂಬರ್, ಇ-ಮೇಲ್ ವಿಳಾಸ ಒದಗಿಸಬೇಕು.
ಇತ್ತೀಚಿನ ಪಾಸ್‌ಪೋರ್ಟ್ ಅಳತೆಯ ವರ್ಣಮಯ ಭಾವಚಿತ್ರದೊಂದಿಗೆ 100 ಪದಗಳ ಒಳಗೆ ಕಿರು ಪರಿಚಯ ಕಳುಹಿಸಬೇಕು.
ಸ್ಪರ್ಧೆಗೆ ಕಳುಹಿಸಿರುವ ಬರಹಗಳನ್ನು ಹಿಂದಿರುಗಿಸುವುದಿಲ್ಲ. ಬರಹಗಳು ಕಡ್ಡಾಯವಾಗಿ ಎಂಎಸ್ ವರ್ಡ್ ಫೈಲ್ (MS word File) ನಲ್ಲಿರಲಿ.
ಬರಹ ಮತ್ತು ಫೋಟೋಗಳನ್ನು ಇ-ಮೇಲ್ ಮೂಲಕವಷ್ಟೇ ಕಳಿಸಿ.
ಲೇಖನಗಳಿಗೆ ಆಹ್ವಾನ : ವೈಚಾರಿಕತೆ, ವಿಮರ್ಶೆ, ಕಾನೂನು, ಸಾಹಿತ್ಯ, ತಂತ್ರಜ್ಞಾನ, ವಿಜ್ಞಾನ, ಡಿಜಿಟಲ್ ಮಾಧ್ಯಮ, ಸಿನೆಮಾ, ಪ್ರೇಮಪತ್ರ, ಕೃಷಿ, ರಾಜಕೀಯ, ಕಲೆ, ಆರೋಗ್ಯ, ಪ್ರವಾಸ, ಅಡುಗೆ, ಫೋಟೋಗ್ರಫಿ, ವೈಲ್ಡ್ ಲೈಫ್, ಹಾಸ್ಯ ಕುರಿತಾದ ಲೇಖನಗಳನ್ನು 450 ಪದಗಳನ್ನು ಮೀರದಂತೆ ಬರೆದು ಕಳುಹಿಸಿ.
ಹಾಗೆಯೇ, ವಿಶೇಷಾಂಕದ ಮುಖಪುಟದ ರೂಪದರ್ಶಿಯಾಗಲು ಅವಕಾಶವನ್ನು ಕಲ್ಪಸಿಲಾಗಿದೆ. ಆಸಕ್ತ ರೂಪದರ್ಶಿಗಳು ಸ್ಟುಡಿಯೋ ಅಥವಾ ಫೋಟೋಗ್ರಾಫರ್ ಮೂಲಕ ತೆಗೆದ ‘6*4 ಅಳತೆಯ ಮುದ್ರಿತ ಫೋಟೋ ಮತ್ತು ಇ-ಮೇಲ್ ಮೂಲಕವೂ ಕಳಿಸಬಹುದು. 80 ಪದಗಳಮಿತಿಯೊಳಗೆ ನಿಮ್ಮ ಪರಿಚಯದೊಂದಿಗೆ, ಒಬ್ಬರು 4 ಫೋಟೋ ಕಳುಹಿಸಬೇಕು. ವಯಸ್ಸಿನ ಮಿತಿಯಿಲ್ಲ ಇರುವುದಿಲ್ಲ.
ಕತೆಯ ವಿಜೇತರಿಗೆ ಪ್ರಥಮ ಬಹುಮಾನ : 10000, ದ್ವಿತೀಯ ಬಹುಮಾನ : 5000, ತೃತೀಯ ಬಹುಮಾನ : 3000 ಹಾಗೂ ಕವಿತೆ ಬಹುಮಾನ ವಿಜೇತರಿಗೆ ಪ್ರಥಮ ಬಹುಮಾನ : 5000 ದ್ವಿತೀಯ ಬಹುಮಾನ : 3000 ಹಾಗೂ ತೃತೀಯ ಬಹುಮಾನ : ₹2000 ಸಿಗಲಿದೆ.
ಆಗಸ್ಟ್ 30ರೊಳಗೆ ಬರಹಗಳನ್ನು ಇ-ಮೇಲ್: deepasuddidina@gmail.com ಗೆ ಕಳುಹಿಸಲು ತಿಳಿಸಿದೆ. ಈ ಕುರಿತು ಹೆಚ್ಚಿನ ಮಾಹಿತಿಗಾಗಿ :9980346243 ಹಾಗೂ visit: www.suddidina.com ಅನ್ನು ವೀಕ್ಷಿಸಬಹುದಾಗಿದೆ.
ಕಚೇರಿ ವಿಳಾಸ
ದೇವನಗರಿ ಸುದ್ದಿದಿನ- ಕನ್ನಡ ದಿನ ಪತ್ರಿಕೆ
ದೀಪಾವಳಿ ವಿಶೇಷಾಂಕ ವಿಭಾಗ
#3231/1, ಸಂಜೀವ ಸದನ, 11ನೇ ಮುಖ್ಯರಸ್ತೆ, 4 ನೇ ಅಡ್ಡರಸ್ತೆ, ಎಂಸಿಸಿ ಬಿ ಬ್ಲಾಕ್, ದಾವಣಗೆರೆ, 577004
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಕ್ರೀಡೆ
ರಾಜ್ಯದ ವಿವಿಧ ನೀರಾವರಿ ಯೋಜನೆಗಳಿಗೆ ಹೆಚ್ಚಿನ ಅನುದಾನ ; ಇ-ಖಾತೆ ಅಭಿಯಾನ ಹಾಗೂ ಇತರೆ ಪ್ರಮುಖ ಸುದ್ದಿಗಳು
ರಾಜ್ಯದ ವಿವಿಧ ನೀರಾವರಿ ಯೋಜನೆಗಳಿಗೆ ಹೆಚ್ಚಿನ ಅನುದಾನ ; ಇ-ಖಾತೆ ಅಭಿಯಾನ ಹಾಗೂ ಇತರೆ ಪ್ರಮುಖ ಸುದ್ದಿಗಳು
1. ಮುಖ್ಯಮಂತ್ರಿ ಸಿದ್ದರಾಮಯ್ಯ ನವದೆಹಲಿ ತಲುಪಿದ್ದಾರೆ. ಇಂದು ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿ ಮಾಡಿ, 5 ಪ್ರಮುಖ ಮಸೂದೆಗಳಿಗೆ ಅಂಗೀಕಾರ ನೀಡುವಂತೆ ಮನವಿ ಮಾಡಲಿದ್ದಾರೆ ಎಂದು ಉನ್ನತ ಮೂಲಗಳು ತಿಳಿಸಿವೆ. ಭದ್ರಾ ಮೇಲ್ದಂಡೆ ಯೋಜನೆ ಸೇರಿದಂತೆ ರಾಜ್ಯದ ವಿವಿಧ ನೀರಾವರಿ ಯೋಜನೆಗಳಿಗೆ, ಹೆಚ್ಚಿನ ಅನುದಾನ ಬಿಡುಗಡೆ ಮಾಡುವಂತೆ, ಕೇಂದ್ರದ ಜಲಶಕ್ತಿ ಖಾತೆ ಸಚಿವರನ್ನು ಕೋರುವುದಾಗಿ, ಇದೇ ವೇಳೆ ಸಾಮಾಜಿಕ ಜಾಲತಾಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
2. ರಾಜ್ಯದ ಗ್ರಾಮ ಪಂಚಾಯ್ತಿಗಳ ಹಂತದಲ್ಲಿ ಜುಲೈ 15ರಿಂದ, ಸಾರ್ವಜನಿಕರ ಆಸ್ತಿಗಳ ಇ-ಖಾತೆ ರೂಪಿಸುವ ಅಭಿಯಾನವನ್ನು ಕಂದಾಯ ಇಲಾಖೆ ಆಯೋಜಿಸಲಿದೆ ಎಂದು ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.
3. ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆಗೆ ಸಂಬಂಧಿಸಿ, ಇಲ್ಲಿಯವರೆಗೆ ಹೆಸರು ನೋಂದಾಯಿಸದವರು, ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ, ಈ ತಿಂಗಳ 30ರವರೆಗೆ ಮಾಹಿತಿ ನೀಡಲು ಅವಕಾಶವಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಎ.ಬಿ.ಬಸವರಾಜು ತಿಳಿಸಿದ್ದಾರೆ.
4. ಕಾವೇರಿ ಜಲಾನಯನ ಪ್ರದೇಶದಲ್ಲಿ ವ್ಯಾಪಕವಾಗಿ ಸುರಿಯುತ್ತಿರುವ ಮಳೆಯಿಂದ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆ.ಆರ್.ಎಸ್. ಅಣೆಕಟ್ಟೆ ಭಾಗಶ: ಭರ್ತಿಯಾಗಿದ್ದು, ಒಳ ಹರಿವು ಇನ್ನಷ್ಟು ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಅಣೆಕಟ್ಟೆಯಿಂದ 5 ಸಾವಿರದಿಂದ 15 ಸಾವಿರ ಕ್ಯುಸೆಕ್ ನೀರನ್ನು ನದಿಗೆ ಹರಿಸಲಾಗಿದೆ.
5. ಕತಾರ್‌ನಲ್ಲಿರುವ ಅಲ್ ಉದೈದ್ ಅಮೇರಿಕ ವಾಯುನೆಲೆಯ ಮೇಲೆ ಇರಾನ್ ನಡೆಸಿದ ದಾಳಿಯ ನಂತರ ಜಾಗತಿಕ ತೈಲ ಬೆಲೆಗಳು ಐದು ವರ್ಷಗಳಲ್ಲಿ ನಿನ್ನೆ ಒಂದೇ ದಿನದಲ್ಲಿ ತೀವ್ರ ಕುಸಿತವನ್ನು ದಾಖಲಿಸಿದೆ.
6. ಕರ್ನಾಟಕ, ಮಧ್ಯಪ್ರದೇಶ, ಬಿಹಾರ, ಜಾಖಂಡ್, ಒಡಿಶಾ, ಛತ್ತೀಸ್‌ಗಢ, ಪಶ್ಚಿಮ ಬಂಗಾಳ, ಸಿಕ್ಕಿಂ, ಅರುಣಾಚಲ ಪ್ರದೇಶ, ಕೊಂಕಣ, ಗೋವಾ, ಮಹಾರಾಷ್ಟ್ರ, ಗುಜರಾತ್, ಹಿಮಾಚಲ ಪ್ರದೇಶ, ಉತ್ತರಾಖಂಡ, ಪಶ್ಚಿಮ ಉತ್ತರ ಪ್ರದೇಶ, ರಾಜಸ್ಥಾನ, ಕೇರಳದ ಕೆಲವು ಸ್ಥಳಗಳಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
7. ಅಯೋವಾದಲ್ಲಿ ನಾಳೆ ಆರಂಭವಾಗಲಿರುವ ಯುಎಸ್ ಓಪನ್ 2025 ಬ್ಯಾಡ್ಮಿಂಟನ್ ಪಂದ್ಯಾವಳಿಯ ಪುರುಷರ ಡಬಲ್ಸ್ ವಿಭಾಗದಲ್ಲಿ ಹರಿಹರನ್ ಅಂಶಕರುಣನ್ ಮತ್ತು ರೂಬನ್ ಕುಮಾರ್ ರೆಥಿನಸಬಪತಿ, ಭಾರತವನ್ನು ಮುನ್ನಡೆಸಲಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಈರುಳ್ಳಿ ಕೇವಲ ತರಕಾರಿಯಲ್ಲ ; ಅದ್ಭುತ ಔಷಧ
ನಾವು ನಿತ್ಯವೂ ತಯಾರಿಸುವ ಅಡುಗೆ ಪದಾರ್ಥಗಳಿಗೆ ಈರುಳ್ಳಿಯನ್ನು ಹಾಕದಿದ್ದಾಗ ಒಂದು ರುಚಿಯಾದರೆ ಅದನ್ನು ಹಾಕಿದಾಗ ಆ ಪದಾರ್ಥದ ರುಚಿಯೇ ಬೇರೆಯಾಗುತ್ತದೆ. ನಾವು ಈರುಳ್ಳಿಯ ಗುಣಗಳು, ಅದರ ಉಪಯೋಗಗಳು ಮತ್ತು ಮನೆ ಮದ್ದುಗಳ ಬಗ್ಗೆ ತಿಳಿದುಕೊಳ್ಳೋಣ.
ಆಯುರ್ವೇದದಲ್ಲಿ ಈರುಳ್ಳಿಯ ಬಗ್ಗೆ ವಿಸ್ತೃತ ವಿವರಣೆ ಇದೆ. ಆಯುರ್ವೇದ ಗ್ರಂಥಗಳ ಪ್ರಕಾರ ಈರುಳ್ಳಿಗೆ ಬೆಳ್ಳುಳ್ಳಿಯ ಗುಣಗಳಿವೆ. ಆದರೆ ಬೆಳ್ಳುಳ್ಳಿಯಂತೆ ಇದು ಉಷ್ಣವಲ್ಲ. ಹಾಗಾಗಿ ಬೆಳ್ಳುಳ್ಳಿಯ ಅದ್ಭುತ ಗುಣಗಳನ್ನು ಪಡೆಯಬೇಕು ಎಂದಾದರೆ ಮತ್ತು ಬೆಳ್ಳುಳ್ಳಿಯನ್ನು ಸೇವಿಸಿದರೆ ಉಷ್ಣವಾಗುತ್ತದೆ ಎಂಬ ಯೋಚನೆ ಇದ್ದರೆ ಬದಲಿಗೆ ಈರುಳ್ಳಿಯನ್ನು ಬಳಸಬಹುದು.
ಭಾವ ಪ್ರಕಾಶ ನಿಘಂಟು ಎಂಬ ಗ್ರಂಥದಲ್ಲಿ “ಬಲವೀರ್ಯ ಕೈರೋ ಗುರುಃ” ಎಂದಿದ್ದಾರೆ. ಅಂದರೆ ಈರುಳ್ಳಿಯು ದೇಹದ ಬಲವನ್ನು, ವೀರ್ಯದ ಗುಣಮಟ್ಟವನ್ನು, ಲೈಂಗಿಕ ಶಕ್ತಿಯನ್ನು ಹೆಚ್ಚಿಸುತ್ತದೆ ಎಂದರ್ಥ. ಬಹುತೇಕ ಎಲ್ಲಾ ಆಯುರ್ವೇದ ಗ್ರಂಥಗಳಲ್ಲಿಯೂ ಈರುಳ್ಳಿಯಿಂದ ಲೈಂಗಿಕ ಶಕ್ತಿ ವೃದ್ಧಿಯಾಗುತ್ತದೆ ಎಂಬುದನ್ನು ಹೇಳಲಾಗಿದೆ. ಇದು ಚರ್ಮಕ್ಕೆ ಕೂಡ ಅತ್ಯಂತ ಅನುಕೂಲಕರವಾದದ್ದು. ಚರ್ಮವನ್ನು ಸ್ನಿಗ್ಧಗೊಳಿಸಿ ಒರಟುತನವನ್ನು ಹೋಗಲಾಡಿಸುತ್ತದೆ; ಚರ್ಮಕ್ಕೆ ಕಾಂತಿಯನ್ನು ಕೊಡುತ್ತದೆ; ಜೊತೆಗೆ ಚರ್ಮದ ಶುದ್ಧಿಯನ್ನೂ ಮಾಡುತ್ತದೆ ಎಂದು ವಿವರಿಸಲಾಗಿದೆ. ಈರುಳ್ಳಿಯನ್ನು ನಿಯಮಿತವಾಗಿ ಸೇವಿಸುವುದರಿಂದ ದೇಹದ ಬಾಹ್ಯ ಮತ್ತು ಆಂತರಿಕ ಕಾಂತಿ ಹೆಚ್ಚುತ್ತದೆ.
ಅಂದರೆ ಕೇವಲ ಸೌಂದರ್ಯವೃದ್ಧಿಯಷ್ಟೇ ಅಲ್ಲ ದೇಹದೊಳಗಿನ ರೋಗನಿರೋಧಕ ಶಕ್ತಿ ತುಂಬಾ ಚೆನ್ನಾಗಿ ಹೆಚ್ಚುತ್ತದೆ. ಈರುಳ್ಳಿಯು ಧ್ವನಿಗೆ ಸಂಬಂಧಿಸಿದ ಸಮಸ್ಯೆಗಳನ್ನು ಹೋಗಲಾಡಿಸಿ ಒಳ್ಳೆಯ ಧ್ವನಿಯನ್ನು ನೀಡುತ್ತದೆ ಎಂದು ವಿವರಿಸಲಾಗಿದೆ. ಹೀಗಾಗಿ ಹಾಡುಗಾರರು, ಅಧ್ಯಾಪಕರಂಥವರಿಗೆ ನಿಯಮಿತ ಈರುಳ್ಳಿ ಸೇವನೆ ಅನುಕೂಲಕರ. ಇದು ಕಣ್ಣಿನ ಆರೋಗ್ಯವನ್ನು ಹೆಚ್ಚಿಸುವುದರಿಂದ ಹತ್ತರಿಂದ ಹದಿನೈದು ಮಿಲೀ ಈರುಳ್ಳಿ ರಸವನ್ನು ಸುಮಾರು ಒಂದು ತಿಂಗಳು ದಿನಕ್ಕೊಮ್ಮೆ ಸೇವಿಸುವುದರಿಂದ ಚಿಕ್ಕಪುಟ್ಟ ಕಣ್ಣಿನ ತೊಂದರೆಗಳು ನಿವಾರಣೆಯಾಗುತ್ತವೆ. ಸ್ವಲ್ಪ ಸಿಹಿ ಇರುವ ಅಂದರೆ ಖಾರ ಕಡಿಮೆ ಇರುವ ಈರುಳ್ಳಿಯನ್ನು ಚಿಕ್ಕ ಚಿಕ್ಕ ತುಂಡುಗಳನ್ನಾಗಿ ಕತ್ತರಿಸಿ ತುಪ್ಪದಲ್ಲಿ ಹುರಿದು ನಿಯಮಿತವಾಗಿ ಸೇವಿಸಿದರೆ ಲೈಂಗಿಕ ಶಕ್ತಿಯ ವೃದ್ಧಿಯಾಗುತ್ತದೆ.
ಕೂದಲು ಉದುರುವುದನ್ನು ಕಡಿಮೆ ಮಾಡಲು ಈರುಳ್ಳಿಯು ಸಹಕಾರಿ. ಈರುಳ್ಳಿಯ ರಸ ತೆಗೆದು ತಲೆ ಸ್ನಾನ ಮಾಡುವ ಹತ್ತು ನಿಮಿಷ ಮೊದಲು ಕೂದಲಿನ ಬುಡಕ್ಕೆ ಹಚ್ಚಬೇಕು. ಇದರಿಂದ ಕೂದಲಿನ ಬೆಳವಣಿಗೆ ಚೆನ್ನಾಗಿ ಆಗಲು ಮತ್ತು ಕೂದಲು ಉದುರುವುದು ನಿಲ್ಲಲು ಸಹಾಯವಾಗುತ್ತದೆ. ಬೊಜ್ಜನ್ನು ಕಡಿಮೆ ಮಾಡಲು ಕೂಡ ಈರುಳ್ಳಿಯು ಸಹಕಾರಿ. ಬೆಳ್ಳುಳ್ಳಿಯ ಇನ್ನೊಂದು ಅದ್ಭುತ ಗುಣವೆಂದರೆ ಅದು ನರದ ಶಕ್ತಿಯನ್ನು ಹೆಚ್ಚಿಸುತ್ತದೆ. ಹಾಗಾಗಿ ಸಯಾಟಿಕಾದಂತಹ ಸಮಸ್ಯೆಗಳನ್ನು ಅನುಭವಿಸುತ್ತಿರುವವರಿಗೆ ಈರುಳ್ಳಿ ತುಂಬಾ ಲಾಭದಾಯಕ.
ಕಫದ ಸಮಸ್ಯೆಯಿಂದ ಬಳಲುತ್ತಿದ್ದು ಕಫ ಹೊರಗೆ ಬರುತ್ತಿಲ್ಲದಿದ್ದರೆ ಎರಡು ಚಮಚದಷ್ಟು ಈರುಳ್ಳಿ ರಸ, ಅರ್ಧ ಚಮಚದಷ್ಟು ಶುಂಠಿ ರಸ, ಅರ್ಧ ಚಮಚದಷ್ಟು ತುಳಸಿ ಎಲೆಗಳ ರಸ ಮತ್ತು ಒಂದು ಚಮಚ ಜೇನುತುಪ್ಪವನ್ನು ಸೇರಿಸಿ ದಿನಕ್ಕೆ ಒಂದು ಅಥವಾ ಎರಡು ಬಾರಿ ಸೇವಿಸಿದರೆ ಕಫ ಹೊರಗೆ ಬಂದು ಸಮಸ್ಯೆ ನಿವಾರಣೆಯಾಗುತ್ತದೆ.
ಈರುಳ್ಳಿ ಒಳ್ಳೆಯ ಜೀರ್ಣಕಾರಿಯೂ ಹೌದು ಹಾಗಾಗಿ ಅಜೀರ್ಣ ಇರುವವರಿಗೆ ಹೆಚ್ಚಿನ ಪ್ರಮಾಣದಲ್ಲಿ ಈರುಳ್ಳಿಯನ್ನು ಹಾಕಿ ಹೆಸರುಬೇಳೆಯ ತಿಳಿಸಾರು ಮಾಡಿ ಊಟಕ್ಕೆ ನೀಡಿದರೆ ಅಜೀರ್ಣದ ಸಮಸ್ಯೆ ತುಂಬಾ ಚೆನ್ನಾಗಿ ಹತೋಟಿಗೆ ಬರುತ್ತದೆ. ಜೊತೆಗೆ ಶಕ್ತಿ ವೃದ್ಧಿಯೂ ಆಗುತ್ತದೆ. ಒಟ್ಟಿನಲ್ಲಿ ಈರುಳ್ಳಿಯನ್ನು ಸರಿಯಾಗಿ ಬಳಸಿಕೊಂಡರೆ ಅದು ಕೇವಲ ತರಕಾರಿಯಲ್ಲ ಅದ್ಭುತ ಔಷಧ.(ಬರಹ-ಡಾ|| ವೆಂಕಟ್ರಮಣ ಹೆಗಡೆ
ವೇದ ವೆಲ್ನೆಸ್ ಸೆಂಟರ್, ನಿಸರ್ಗಮನೆ, ಶಿರಸಿ, ಉ.ಕನ್ನಡ)
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ5 days agoಅನುದಾನ ದುರುಪಯೋಗ | ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ನಿರ್ದೇಶಕ ಡಾ. ಅಶೋಕ್ ಡಿ.ಆರ್ ವಿರುದ್ಧ ಲೋಕಾಗೆ ದೂರು
-
ದಿನದ ಸುದ್ದಿ5 days agoತುರ್ತು ಕುಡಿಯುವ ನೀರಿನ ಯೋಜನೆ ; 7 ಕೋಟಿ ಅನುದಾನದಲ್ಲಿ ಅವ್ಯವಹಾರ : ತನಿಖೆಗೆ ಆದೇಶಿಸಿ ವಕೀಲ ಡಾ.ಕೆ.ಎ.ಓಬಳಪ್ಪ ಲೋಕಾಗೆ ದೂರು
-
ದಿನದ ಸುದ್ದಿ5 days agoಸುಶೋಭನ್ ಸೋನು ರಾಯ್ ಬೆಳ್ಳಿತೆರೆಗೆ
-
ದಿನದ ಸುದ್ದಿ3 days agoಡಾ. ಪ್ರೀತಿ ಅವರಿಗೆ ‘ಪರಮ್ ಭೂಷಣ್ ನ್ಯಾಷನಲ್ ಎಕ್ಸಲೆನ್ಸ್ ಅವಾರ್ಡ್


