ದಿನದ ಸುದ್ದಿ
ತೋಟಗಾರಿಕಾ ಉತ್ಪಾದನೆಯಲ್ಲಿ ಕರ್ನಾಟಕ ರಾಜ್ಯ ದೇಶದಲ್ಲಿ 2ನೇ ಸ್ಥಾನದಲ್ಲಿದೆ : ಯಡಿಯೂರಪ್ಪ
ಸುದ್ದಿದಿನ,ಬಾಗಲಕೋಟೆ : ರೈತರಿಗೆ ಅನುಕೂಲಕರವಾಗುವ ರೀತಿಯಲ್ಲಿ ತೋವಿವಿಯ ವಿಜ್ಞಾನಿಗಳು ಹೆಚ್ಚು ಹೆಚ್ಚು ಸಂಶೋಧನೆಗಳನ್ನು ನಡೆಸಬೇಕೆಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದರು.
ತೋವಿವಿಯ ಉದ್ಯಾನಗಿರಿಯಲ್ಲಿ ಮೂರು ದಿನಗಳ ಕಾಲ ಹಮ್ಮಿಕೊಂಡ ತೋಟಗಾರಿಕೆ ಮೇಳಕ್ಕೆ ಶನಿವಾರ ಆನ್‍ಲೈನ್ ಮೂಲಕ ಚಾಲನೆ ನೀಡಿ ಮಾತನಾಡಿದ ಅವರು ತೋಟಗಾರಿಕಾ ಉತ್ಪಾಧನೆಯಲ್ಲಿ ಕರ್ನಾಟಕ ರಾಜ್ಯ ದೇಶದಲ್ಲಿಯೇ 2ನೇ ಸ್ಥಾನದಲ್ಲಿದ್ದು, ತೋಟಗಾರಿಕೆ ಕ್ಷೇತ್ರದ ಸಾಧನೆಯಿಂದ ಭಾರತದ ತೋಟಗಾರಿಕೆ ತೋಟಗಾರಿಕೆ ರಾಜ್ಯ ಎಂಬ ಹೆಗ್ಗಳಿಕೆಗೆ ರಾಜ್ಯ ಪಾತ್ರವಾಗಿದೆ. 44879 ಕೋಟಿ ರೂ.ಗಳ ಆದಾಯವನ್ನು ರಾಜ್ಯಕ್ಕೆ ನೀಡಿದೆ ಎಂದರು.
ತೋಟಗಾರಿಕೆ ಕ್ಷೇತ್ರದಲ್ಲಿ ಮುಂಚೂಣಿಯಲ್ಲಿರುವ ರಾಜ್ಯವು ತನ್ನ ಸ್ಥಾನವನ್ನು ಕಾಯ್ದುಕೊಂಡು ಹೆಚ್ಚಿನ ಸಾಧನೆ ಮಾಡಲು ಪೂರಕ ಸಂಶೋಧನೆ, ವಿಸ್ತರಣೆ ಹಾಗೂ ಇತರ ಮೂಲಕಸೌಕರ್ಯ ಒದಗಿಸಲು ಸರ್ಕಾರ ಬದ್ಧವಾಗಿದೆ ಎಂದು ತಿಳಿಸಿದರು. ರೈತರ ಆದಾಯ ಹೆಚ್ಚಿಸುವ ನಿಟ್ಟಿನಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಆಶಯವನ್ನು ಸಾಕಾರಗೊಳಿಸಲು ಸರ್ಕಾರ ಪೂರಕ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ತಿಳಿಸಿದರು. ತೋಟಗಾರಿಕೆಯನ್ನು ಉದ್ದಿಮೆಯಾಗಿ ಪರಿಗಣಿಸಲು ಅಗತ್ಯವಿರುವ ಎಲ್ಲ ಕ್ರಮಗಳನ್ನು ಸರ್ಕಾರ ಕೈಗೊಳ್ಳಲಿದೆ ಎಂದು ತಿಳಿಸಿದರು.
ಪ್ರಧಾನ ಮಂತ್ರಿಯವರು 100ನೇ ಕಿಸಾನ್ ರೈಲಿಗೆ ಇತ್ತೀಚೆಗಷ್ಟೇ ಚಾಲನೆ ನೀಡಿದ್ದಾರೆ. ಮೂರು ತಿಂಗಳ ಅವಧಿಯಲ್ಲಿ ಕಿಸಾನ್ ರೈಲುಗಳ ಮೂಲಕ 27 ಸಾವಿರ ಟನ್ ಕೃಷಿ ಉತ್ಪನ್ನಗಳನ್ನು ಸಾಗಿಸಲಾಗಿದೆ. ಶೀಘ್ರವಾಗಿ ಕೊಳೆತುಹೋಗಬಹುದಾದ ದಾಳಿಂಬೆ, ಕಿತ್ತಳೆ ಹಾಗೂ ಇತರ ತೋಟಗಾರಿಕಾ ಬೆಳೆಗಳನ್ನು ಇತರ ರಾಜ್ಯಗಳಿಗೆ ಸಾಗಿಸಲು ಕೃಷಿ ರೈಲ್ ಯೋಜನೆಯ ಸೌಲಭ್ಯವನ್ನು ಬಳಸಿಕೊಳ್ಳಲಾಗುವುದು ಎಂದು ಮುಖ್ಯಮಂತ್ರಿಗಳು ತಿಳಿಸಿದರು.
ಉಪ ಮುಖ್ಯಮಂತ್ರಿಗಳಾದ ಗೋವಿಂದ ಕಾರಜೋಳ ಅವರು ಮಾತನಾಡಿ, 2008 ರಲ್ಲಿ ಮುಖ್ಯಮಂತ್ರಿಗಳಾಗಿದ್ದ ಬಿ.ಎಸ್.ಯಡಿಯೂರಪ್ಪನವರು ಈ ತೋಟಗಾರಿಕೆ ವಿಶ್ವವಿದ್ಯಾಲಯವನ್ನು ಪ್ರಾರಂಭಿಸಿದರು. ಇದರಿಂದ ಉತ್ತರ ಕರ್ನಾಟಕದ ಅಭಿವೃದ್ಧಿಗೆ ಅದರಲ್ಲೂ ಬಾಗಲಕೋಟೆ ವಿಜಯಪುರ ಅವಳಿ ಜಿಲ್ಲೆಗಳ ತೋಟಗಾರಿಕೆ ಬೆಳೆಗಳ ವಿಸ್ತರಣೆ, ಸಂಶೋದನೆ, ತರಬೇತಿಗೆ ನೆರವಾಗಿದೆ. ರೈತ ಕುಟುಂಬದಿಂದ ಬಂದ ರೈತರ ಧ್ವನಿಯಾಗಿ ರೂಪುಗೊಂಡಿರುವ ಮುಖ್ಯಮಂತ್ರಿಗಳು ರೈತರ ಶ್ರೇಯೋಭಿವೃದ್ದಿಗಾಗಿ ಶ್ರಮಿಸುತ್ತಿದ್ದಾರೆ ಎಂದರು.
ರೈತರ ಹಿತ ಕಾಪಾಡಲು ಕಂಕಣಬದ್ದರಾಗಿದ್ದ ಮುಖ್ಯಮಂತ್ರಿಗಳು ಈ ತೋಟಗಾರಿಕಾ ಪ್ರದೇಶ ವಿಸ್ತರಣೆಯಾಗುತ್ತಿರುವುದು ರೈತರಿಗೆ ತೋಟಗಾರಿಕೆ ಲಾಭದಾಯಕ ಎಂಬುದಕ್ಕೆ ನಿದರ್ಶನ. ವಿಜ್ಞಾನಿಗಳು ರೈತರಿಗೆ ಇನ್ನೂ ಹೆಚ್ಚು ಹೆಚ್ಚು ಲಾಭ ತರುವ ತಳಿಗಳನ್ನು ಸಂಶೋಧಿಸಿ, ರೈತರ ಬದುಕು ಹಸನುಗೊಳಿಸಬೇಕು. ರೈತರು ಇದರ ಸದುಪಯೋಗ ಪಡೆದು ಮಾದರಿ ರೈತರಾಗಬೇಕು ಎಂದು ಸಲಹೆ ನೀಡಿದರು. ತೋಟಗಾರಿಕಾ ವಿವಿಯು ರೈತರಿಗೆ ಹಮ್ಮಿಕೊಳ್ಳುತ್ತಿರುವ ತರಬೇತಿ ಕಾರ್ಯಕ್ರಮಗಳ ಕುರಿತು ಅವರು ಮೆಚ್ಚುಗೆ ವ್ಯಕ್ತಪಡಿಸಿದರು.
ತೋಟಗಾರಿಕಾ ಸಚಿವರಾದ ಡಾ.ಕೆ.ಸಿ.ನಾರಾಯಣಗೌಡ ಮಾತನಾಡಿ, ರಾಜ್ಯದಲ್ಲಿ ತೋಟಗಾರಿಕೆ ಉತ್ತೇಜನಕ್ಕೆ ಸರ್ಕಾರ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದ್ದು, ತೋಟಗಾರಿಕೆ ಉತ್ಪನ್ನಗಳ ರಫ್ತು ಪ್ರಮಾಣ ಶೇ.2.5 ರಿಂದ ಶೇ. 5ಕ್ಕೆ ಹೆಚ್ಚಿಸಲಾಗಿದೆ. ಮುಂದಿನ ದಿನಗಳಲ್ಲಿ ಇದನ್ನು ಇನ್ನಷ್ಟು ಹೆಚ್ಚಿಸಲು ರೈತರಿಗೆ ಅಗತ್ಯ ಬೆಂಬಲ ನೀಡಲಾಗುವುದು ಎಂದು ತಿಳಿಸಿದರು.
ವಿಧಾನ ಪರಿಷತ್ತಿನ ವಿರೋಧ ಪಕ್ಷದ ನಾಯಕ ಎಸ್.ಆರ್.ಪಾಟೀಲ ಮಾತನಾಡಿ ದೇಶದಲ್ಲಿರುವ 6 ವಿಶ್ವವಿದ್ಯಾಲಯಗಳ ಪೈಕಿ ಬಾಗಲಕೋಟೆಯೂ ಒಂದಾಗಿದ್ದು, ದೇಶದ ಉತ್ಪಾದನೆಯಲ್ಲಿ 2ನೇ ಸ್ಥಾನ ಪಡೆದುಕೊಂಡಿದೆ. ಇನ್ನು ಜಾಗತಿಕ ಮಟ್ಟದಲ್ಲಿ ತಲುಪುವತ್ತ ವಿಜ್ಞಾನಿಗಳು ಶ್ರಮಿಸುವ ಅಗತ್ಯವಿದೆ ಎಂದು ತಿಳಿಸಿದರು. ತೋಟಗಾರಿಕೆ ವಿಶ್ವವಿದ್ಯಾಲಯ ಬೇಡಿಕೆಗಳಿಗೆ ಸ್ಪಂಧಿಸುವುದಾಗಿ ತಿಳಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಶಾಸಕ ವೀರಣ್ಣ ಚರಂತಿಮಠ ಮಾತನಾಡಿ ವಿಶ್ವ ವಿದ್ಯಾಲಯಕ್ಕೆ ಅವಶ್ಯವಿರು ಭೂಮಿಯನ್ನು ಸರಕಾರ ಕೊಡುವ ಕೆಲಸವಾಗಬೇಕು. ಇದರಿಂದ ವಿಸ್ತರಣಾ ಕೇಂದ್ರಗಳಿಗೆ ವಿಸ್ತರಣೆ ಮಾಡಲು ಅನುಕೂಲವಾಗಲಿದೆ. ಶಿಕ್ಷಕರ, ಶಿಕ್ಷಕೇತರ ಕೊರತೆ ಇದ್ದು, ಹುದ್ದೆ ಭರ್ತಿಗೆ ಅವಕಾಶ ಮಾಡಿಕೊಡಬೇಕು. ಬಾಗಲಕೋಟೆ ವಿವಿಗೆ ಹೆಚ್ಚಿನ ಅನುದಾನ ನೀಡುವಂತೆ ಮುಖ್ಯಮಂತ್ರಿಗಳ್ಲಿ ಮನವಿ ಮಾಡಿದರು.
ಇದೇ ಸಂದರ್ಭದಲ್ಲಿ ತೋವಿವಿಯಿಂದ ಕ್ಯಾಲೆಂಡರ್ ಬಿಡುಗಡೆ ಮಾಡಲಾಯಿತು. ಕಾರ್ಯಕ್ರಮದಲ್ಲಿ ಜಿ.ಪಂ ಅಧ್ಯಕ್ಷೆ ಬಾಯಕ್ಕ ಮೇಟಿ, ತಾ.ಪಂ ಅಧ್ಯಕ್ಷ ಚನ್ನನಗೌಡರ ಪರನಗೌಡರ, ನಗರಸಭೆ ಅಧ್ಯಕ್ಷೆ ಜ್ಯೋತಿ ಭಜಂತ್ರಿ, ರಾಜ್ಯ ನಿಂಬೆ ಅಭಿವೃದ್ದಿ ಮಂಡಳಿಯ ಅಧ್ಯಕ್ಷ ಅಶೋಕ ಸೋಲಾಪೂರ, ತೋವಿವಿಯ ಕುಲಪತಿ ಡಾ.ಕೆ.ಎಂ.ಇಂದಿರೇಶ, ರಾಯಚೂರಿನ ಕೃಷಿ ವಿಶ್ವವಿದ್ಯಾಲಯದ ಕುಲಪತಿ ಡಾ.ಕೆ.ಎನ್.ಕಟ್ಟಿಮನಿ. ತೋವಿವಿಯ ವಿಸ್ತರಣಾ ನಿರ್ದೇಶಕ ವೈ.ಕೆ.ಕೋಟಿಕಲ್ ಸೇರಿದಂತೆ ಇತರರು ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಕೆ.ಆರ್.ಐ.ಡಿ.ಎಲ್, ಮಾಯಕೊಂಡ ವ್ಯಾಪ್ತಿ ; 20 ಕೋಟಿ ಅನುದಾನ : ತನಿಖೆಗೆ ಒಳಪಡಿಸಲು ಲೋಕಾಗೆ ದೂರು
ಸುದ್ದಿದಿನ,ದಾವಣಗೆರೆ: ದಾವಣಗೆರೆ ಜಿಲ್ಲಾ ಕೆಆರ್.ಐ.ಡಿ.ಎಲ್ ವಿಭಾಗ-2ರ ವ್ಯಾಪ್ತಿಗೆ 2023-24ನೇ ಸಾಲಿನಲ್ಲಿ ಮಾನ್ಯ ಮುಖ್ಯಮಂತ್ರಿಗಳ ವಿಶೇಷ ಮಂಜೂರಾತಿ ಕಾರ್ಯಕ್ರಮದಡಿ ದಾವಣಗೆರೆ ಜಿಲ್ಲೆ ಮಾಯಕೊಂಡ ವಿಧಾನಸಭಾ ಕ್ಷೇತ್ರ ವ್ಯಾಪ್ತಿಗೆ ಬಿಡುಗಡೆಯಾದ ರೂ. 20 ಕೋಟಿ ಮೊತ್ತದ 51 ಕಾಮಗಾರಿಗಳನ್ನು ಸೂಕ್ತ ತನಿಖೆಗೆ ಒಳಪಡಿಸುವಂತೆ ದೂರು ನೀಡಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.
ಮಾಯಕೊಂಡ ವಿಧಾನಸಭಾ ಕ್ಷೇತ್ರ ವ್ಯಾಪ್ತಿಗೆ 2023-24ನೇ ಸಾಲಿನಲ್ಲಿ ಬಿಡುಗಡೆಯಾಗಿರುವ ರೂ. 20 ಕೋಟಿ ಅನುದಾನದಲ್ಲಿ ನಡೆದಿರುವ 51 ಕಾಮಗಾರಿಗಳ ಬಗ್ಗೆ ಅನುಮಾನ ಕಂಡುಬಂದಿದ್ದು, ಮಾಹಿತಿಹಕ್ಕು ಅಡಿಯಲ್ಲಿ ದಾಖಲೆ ಕೋರಿದಾಗ ಬಹುತೇಕ ಕಾಮಗಾರಿಗಳು ನಡೆದಿರುವುದಿಲ್ಲ ಎಂಬುದಾಗಿ ಹಿಂಬರಹ ನೀಡಿರುತ್ತಾರೆ. ಹೀಗಾಗಿ 51 ಕಾಮಗಾರಿಗೆ ಸಂಬಂಧಿಸಿದಂತೆ ನಿತೀನ್ ಎಸ್. ಜಾಧವ್, ಸಹಾಯಕ ಕಾರ್ಯಪಾಲಕ ಅಭಿಯಂತರು, ಕೆ.ಆರ್.ಐ.ಡಿ.ಎಲ್, ಮಾಯಕೊಂಡ ಇವರ ವಿರುದ್ಧ ಪ್ರಕರಣ ದಾಖಲಿಸಿ ರೂ. 20 ಕೋಟಿ ಮೊತ್ತದಲ್ಲಿ ನಡೆದಿರುವ 51 ಕಾಮಗಾರಿಗಳನ್ನು ನಿಯಮಾನುಸಾರ ತನಿಖೆಗೆ ಒಳಪಡಿಸುವಂತೆ ದೂರು ನೀಡಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.

ದಿನದ ಸುದ್ದಿ
ಕಾಲೇಜು ಶಿಕ್ಷಣ ಇಲಾಖೆ ಆಯುಕ್ತೆ ಮಂಜುಶ್ರೀ, ಉನ್ನತ ಶಿಕ್ಷಣ ಇಲಾಖೆ ಕಾರ್ಯದರ್ಶಿ ಖುಷ್ಬೂ ಗೋಯಲ್ ಚೌದರಿ ವಿರುದ್ಧ ಲೋಕಾಗೆ ದೂರು
ಸುದ್ದಿದಿನ,ದಾವಣಗೆರೆ:ಕಾಲೇಜು ಶಿಕ್ಷಣ ಇಲಾಖೆಯ ವ್ಯಾಪ್ತಿಯಲ್ಲಿ ದ್ವಿತೀಯ ದರ್ಜೆ ಸಹಾಯಕರಿಂದ ಪ್ರಥಮ ದರ್ಜೆ ಸಹಾಯಕ ಹುದ್ದೆಗೆ ನೀಡಿರುವ ಮುಂಬಡ್ತಿಯ ಸ್ಥಳ ನಿಯುಕ್ತಿಗೆ ಸಂಬAಧಿಸಿದ ಆನ್ಲೈನ್ ಕೌನ್ಸಿಲಿಂಗ್ನಲ್ಲಿ ಪಾರದರ್ಶಕತೆಯನ್ನು ಉಲ್ಲಂಘಿಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ತವ್ಯ ಲೋಪದ ಅಡಿಯಲ್ಲಿ ಕಾಲೇಜು ಶಿಕ್ಷಣ ಇಲಾಖೆಯ ಹಿಂದಿನ ಆಯುಕ್ತೆ ಮಂಜುಶ್ರೀ, ಉನ್ನತ ಶಿಕ್ಷಣ ಇಲಾಖೆ ಕಾರ್ಯದರ್ಶಿ ಖುಷ್ಬೂ ಗೋಯಲ್ ಚೌದರಿ ವಿರುದ್ಧ ಲೋಕಾಯುಕ್ತಗೆ ದೂರು ನೀಡಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.
ಕಾಲೇಜು ಶಿಕ್ಷಣ ಇಲಾಖೆಯಲ್ಲಿ ಖಾಲಿ ಇರುವ ಪ್ರಥಮ ದರ್ಜೆ ಸಹಾಯಕರ ಹುದ್ದೆಗಳನ್ನು ಸೇವಾ ಜೇಷ್ಠತೆ ಹಾಗೂ ಅರ್ಹತೆ ಆಧಾರದ ಮೇಲೆ ಅರ್ಹ ದ್ವಿತೀಯ ದರ್ಜೆ ಸಹಾಯಕರ ವೃಂದದಿAದ ಮುಂಬಡ್ತಿ ಮೂಲಕ ಭರ್ತಿ ಮಾಡಲು ಮುಂದಾಗಿದ್ದು, ಖಾಲಿ ಇರುವ ಪ್ರಥಮ ದರ್ಜೆ ಸಹಾಯಕರ ಹುದ್ದೆಗಳ ಸಂಖ್ಯೆಗೆ ಅನುಗುಣವಾಗಿ ದಿನಾಂಕ: 12-11-2025 ರಂದು ಆನ್ಲೈನ್ ಕೌನ್ಸಿಲಿಂಗ್ ನಡೆಸಿ, ಸ್ಥಳ ನಿಯುಕ್ತಿ ಮಾಡಿ, ಕೌನ್ಸಿಲಿಂಗ್ ಮೂಲಕ ಸ್ಥಳ ಆಯ್ಕೆ ಮಾಡಿಕೊಂಡ ಪ್ರಥಮ ದರ್ಜೆ ಸಹಾಯಕರ ಪಟ್ಟಿಯನ್ನು ಬಿಡುಗಡೆಗೊಸಲಾಗಿರುತ್ತದೆ.
ಆದರೆ ಕಾಲೇಜು ಶಿಕ್ಷಣ ಇಲಾಖೆಯಿಂದ ಹೊರಡಿಸಿರುವ ಪಟ್ಟಿಯಲ್ಲಿ ಆಯುಕ್ತರ ಕಛೇರಿ, ಬೆಂಗಳೂರು ಇಲ್ಲಿ 03 ಖಾಲಿ ಇರುವ ಪ್ರಥಮ ದರ್ಜೆ ಸಹಾಯಕರ ಹುದ್ದೆಯನ್ನು ಗುರುತಿಸಲಾಗಿರುತ್ತದೆ. ಆದರೆ ಆದೇಶ ಪ್ರತಿಯಲ್ಲಿ ದ್ವಿತೀಯ ದರ್ಜೆ ಸಹಾಯಕರಿಂದ ಪ್ರಥಮ ದರ್ಜೆ ಸಹಾಯಕರ ಮುಂಬಡ್ತಿಯಲ್ಲಿ 10 ಪ್ರಥಮ ದರ್ಜೆ ಸಹಾಯಕರ ಹುದ್ದೆಗೆ ಅವಕಾಶ ಕಲ್ಪಿಸಲಾಗಿದೆ. ಕೇಂದ್ರ ಕಛೇರಿ, ಬೆಂಗಳೂರು ಇಲ್ಲಿಗೆ ಆಯ್ಕೆ ಮಾಡಿಕೊಂಡಿರುವ 10 ಅಭ್ಯರ್ಥಿಗಳಲ್ಲಿ 05 ಅಭ್ಯರ್ಥಿಗಳನ್ನು ದ್ವಿತೀಯ ದರ್ಜೆ ಸಹಾಯಕರಿಂದ ಪ್ರಥಮ ದರ್ಜೆ ಸಹಾಯಕರ ಹುದ್ದೆಗೆ ಮುಂಬಡ್ತಿ ನೀಡಿ ಯಥಾ ಪ್ರಕಾರ ಮುಂದುವರೆಸಲಾಗಿರುತ್ತದೆ.
ಹೀಗಾಗಿ ಸದರಿ ಮುಂಬಡ್ತಿ ಪ್ರಕ್ರಿಯೆಯು ನಿಯಮಬಾಹಿರವಾಗಿದ್ದು ಸೂಕ್ತ ಕ್ರಮ ಕೈಗೊಳ್ಳುವಂತೆ ದೂರು ನೀಡಿ 10 ತಿಂಗಳು ಕಳೆಯುತ್ತ ಬಂದರೂ ಯಾವುದೇ ಕ್ರಮ ಕೈಗೊಳ್ಳದ ಕಾಲೇಜು ಶಿಕ್ಷಣ ಇಲಾಖೆಯ ಹಿಂದಿನ ಆಯುಕ್ತೆ ಮಂಜುಶ್ರೀ, ಉನ್ನತ ಶಿಕ್ಷಣ ಇಲಾಖೆ ಕಾರ್ಯದರ್ಶಿ ಖುಷ್ಬೂ ಗೋಯಲ್ ಚೌದರಿ ವಿರುದ್ಧ ದೂರು ನೀಡಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ಮಾಹಿತಿ ನೀಡಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂತರಂಗ
ದೇವನಗರಿ ಸುದ್ದಿದಿನ – ದೀಪಾವಳಿ ವಿಶೇಷ ಸಂಚಿಕೆ 2026 : ಕತಾ ಸ್ಪರ್ಧೆ ; ಅನಂತ ಕುಣಿಗಲ್ ಅವರ ಸಂಸ ಕತೆ ಪಡೆದ ಪ್ರಥಮ ಸ್ಥಾನ ಅಮಾನ್ಯ ; ಪರಿಷ್ಕೃತ ಫಲಿತಾಂಶ ಪ್ರಕಟ
ಸುದ್ದಿದಿನ,ದಾವಣಗೆರೆ:ದೇವನಗರಿ ಸುದ್ದಿದಿನ – ದೀಪಾವಳಿ ವಿಶೇಷ ಸಂಚಿಕೆ 2026ರ ಕತಾ ಸ್ಪರ್ಧೆಯ ನಿಯಮಾವಳಿಯನ್ನು ಉಲಂಘಿಸಿರುವ ಕಾರಣ ಅನಂತ ಕುಣಿಗಲ್ ಅವರ ಸಂಸ ಕತೆ ಪಡೆದ ಪ್ರಥಮ ಸ್ಥಾನವನ್ನು ಅಮಾನ್ಯ ಮಾಡಲಾಗಿದೆ ಎಂದು ಪತ್ರಿಕೆಯ ಸಂಪಾದಕ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕತೆ-ಕವಿತೆ ಸ್ಪರ್ಧೆಯ ನಿಯಮಾವಳಿಗಳ ಪ್ರಕಾರ ‘ “ಸ್ವತಂತ್ರ ರಚನೆಯಾಗಿರ ಬೇಕು. ಈ ಮೊದಲು ಯಾವ ಮಾಧ್ಯಮಗಳಲ್ಲಿಯೂ ಪ್ರಕಟ ಅಥವಾ ಪ್ರಸಾರ ಆಗಿರಬಾರದು” ಎನ್ನುವ ನಿಯಮಾವಳಿಗಳನ್ನು ಉಲಂಘಿಸಿರುವುದರಿಂದ ಪ್ರಥಮ ಸ್ಥಾನ ಪಡೆದ ” ಸಂಸ” ಕತೆಯನ್ನು ಅಮಾನ್ಯಗೊಳಿಸಲಾಗಿದೆ.
‘ಸಂಸ’ ಕತೆಯ ಕತೆಗಾರರಾದ ಅನಂತ ಕುಣಿಗಲ್ ಅವರು
ಸ್ವತಃ ತಮ್ಮ ಫೇಸ್ ಬುಕ್ ವಾಲ್ ನಲ್ಲಿ ‘ ಸಂಸ’ ಕತೆಯು ಈ ಹಿಂದೆ ಯಾವುದೋ ಕತಾ ಸ್ಪರ್ಧೆಯಲ್ಲಿ ಸಮಾಧಾನಕರ ಬಹುಮಾನ ಪಡೆದಿತ್ತು. ಮತ್ತೊಂದೆಡೆ ತೃತೀಯ, ಮಗದೊಂದೆಡೆ ದ್ವಿತೀಯ ಬಹುಮಾನ ಲಭಿಸಿತ್ತು, ಅಲ್ಲದೆ ‘ಟೋಟೋ’ ಅವಾರ್ಡ್ ನ ಅಂತಿಮ ಸುತ್ತಿಗೆ ಎರಡು ಬಾರಿ ಶಾರ್ಟ್ ಲಿಸ್ಟ್ ಆಗಿತ್ತು ಎಂದು ಬರೆದು ಕೊಂಡಿರುತ್ತಾರೆ. ಆದಕಾರಣ ಈ ಕ್ರಮವನ್ನು ಕೈಗೊಳ್ಳಲಾಗಿದೆ.
ಕತಾ ಸ್ಪರ್ಧೆಯ ಪರಿಷ್ಕೃತ ಫಲಿತಾಂಶ
ಕತಾ ಸ್ಪರ್ಧೆಯಲ್ಲಿ ರವಿಮುಡೋಡಿ ಅವರ ʼಅರ್ಧ ರೇಖೆಯ ಚಿತ್ರʼ ಕತೆಗೆ ಪ್ರಥಮ ಬಹುಮಾನ, ವಿಜಯ ಶ್ರೀ ಹಾಲಾಡಿ ಅವರ ʼಮಳೆಹಾಡುʼ ಕತೆಗೆ ದ್ವಿತೀಯ ಬಹುಮಾನ ಹಾಗೂ ಅಜೇಯ ಸಿಂಹ ಕೆ.ವಿ ಅವರ ‘ ಮಾರ್ಜಕದ ಶ್ರೀಮುಡಿ’ ಕತೆಗೆ ತೃತೀಯ ಬಹುಮಾನ ದೊರೆತಿದೆ ಎಂದು ಸುದ್ದಿದಿನ ಪತ್ರಿಕೆ ಸಂಪಾದಕ ಮಾಹಿತಿ ನೀಡಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243


