ದಿನದ ಸುದ್ದಿ

ದಾವಣಗೆರೆ | ತೋಟಗಾರಿಕೆ ಮಿಷನ್ ಯೋಜನೆಯಡಿ ರೈತರಿಂದ ಅರ್ಜಿ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ: 2020-21 ನೇ ಸಾಲಿನಲ್ಲಿ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು, ಜಗಳೂರು ಈ ಕಚೇರಿಯಿಂದ ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯಡಿ ವಿವಿಧ ಬೆಳೆಗಳ ಪ್ರದೇಶ ವಿಸ್ತರಣೆ, ಕೃಷಿ ಹೊಂಡ, ಸಮುದಾಯ ಕೃಷಿಹೊಂಡ, ಪ್ಯಾಕ್ ಹೌಸ್ ಘಟಕ, ಸಂಸ್ಕರಣಾ ಘಟಕಗಳನ್ನು ಹಾಗೂ ಇತರೆ ಕಾರ್ಯಕ್ರಮಗಳನ್ನು ಅನುಷ್ಟಾನಗೊಳಿಸಲಾಗಿದೆ.

ಆಸಕ್ತ ರೈತರು ಈ ಯೋಜನೆಯ ಸೌಲಭ್ಯ ಪಡೆಯಲು ತೋಟಗಾರಿಕೆ ಇಲಾಖೆ ಜಗಳೂರು ಇಲ್ಲಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಜುಲೈ 20 ಕೊನೆಯ ದಿನಾಂಕವಾಗಿದೆ.

ಹೆಚ್ಚಿನ ಮಾಹಿತಿಗಾಗಿ ಹೋಬಳಿ ಮಟ್ಟದ ಅಧಿಕಾರಿಗಳ ಮೊಬೈಲ್ ಸಂಖ್ಯೆಗೆ ಸಂಪರ್ಕಿಸಿ

  • ಅನಂತ್ ಕುಮಾರ್ ಕೆ.ಪಿ (ರೈ.ಸಂ. ಕೇಂದ್ರ ಕಸಬಾ) ಮೋ ಸಂ : 9900796617
  • ಪ್ರಸನ್ನ ಕುಮಾರ್ ಜಿ.ಎಚ್ (ರೈ.ಸಂ ಕೇಂದ್ರ ಬಿಳಿಚೋಡು) ಮೊ ಸಂ: 7625078047
  • ಶಿವಣ್ಣ. ಜೆ (ರೈ.ಸಂ ಕೇಂದ್ರ ಸೊಕ್ಕೆ) ಮೋ ಸಂ: 6362315280

ಈ ಮೊಬೈಲ್ ಸಂಖ್ಯೆಗಳಿಗೆ ಸಂಪರ್ಕಿಸಬಹುದೆಂದು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version