ಕ್ರೀಡೆ
ಬೆಳಗಿನ ಪ್ರಮುಖ ಸುದ್ದಿಗಳು

ಬೆಳಗಿನ ಪ್ರಮುಖ ಸುದ್ದಿಗಳು
- ರಾಜ್ಯಗಳಿಗೆ ಜಿಎಸ್ಟಿ ಪರಿಹಾರ ವಿಸ್ತರಿಸುವ ಬಗ್ಗೆ ಜಿಎಸ್‌ಟಿ ಮಂಡಳಿ ಸಭೆಯಲ್ಲಿ ಚರ್ಚೆಯಾಗಿದೆ. ಆಗಸ್ಟ್‌ನಲ್ಲಿ ಇದರ ಬಗ್ಗೆ ಅಂತಿಮ ನಿರ್ಣಯ ಕೈಗೊಳ್ಳುವುದಾಗಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿರುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬೆಂಗಳೂರಿನಲ್ಲಿ ನಿನ್ನೆ ಹೇಳಿದ್ದಾರೆ.
- ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದ ಪೌರ ಕಾರ್ಮಿಕರಿಗೆ ವಸತಿ ಸೌಲಭ್ಯ ಕಲ್ಪಿಸಲು ನಿವೇಶನಕ್ಕಾಗಿ ಪುರಸಭೆಯ ಅಧೀನದಲ್ಲಿರುವ ಸ್ಥಳವನ್ನು ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಎಸ್.ಅಶ್ವತಿ ಶ್ರೀರಂಗಪಟ್ಟಣ ಪುರಸಭೆ ಮುಖ್ಯಾಧಿಕಾರಿಗೆ ಸೂಚನೆ ನೀಡಿದ್ದಾರೆ.
- ಮುಂಗಾರು ಆರ್ಭಟ ಮುಂದುವರಿದಿರುವ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲ ಶಾಲಾ ಕಾಲೇಜುಗಳಿಗೆ ಇಂದು(1-7-22) ರಜೆ ಘೋಷಿಸಿ ಜಿಲ್ಲಾಧಿಕಾರಿ ಡಾ. ಕೆ.ವಿ.ರಾಜೇಂದ್ರ ಆದೇಶ ಹೊರಡಿಸಿದ್ದಾರೆ. ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್ ಜಾರಿಯಲ್ಲಿದ್ದು, ಇದರ ಮಧ್ಯೆಯೂ ಮಳೆ ಬಿರುಸಾಗಿದೆ. ಮಂಗಳೂರು ನಗರದಲ್ಲಿ ತಗ್ಗು ಪ್ರದೇಶಗಳು ಜಲಾವೃತವಾಗಿವೆ.
- ಶಿವಸೇನೆಯ ಬಂಡಾಯ ನಾಯಕ ಏಕನಾಥ್ ಶಿಂಧೆ ಮಹಾರಾಷ್ಟ್ರದ ನೂತನ ಮುಖ್ಯಮಂತ್ರಿಯಾಗಿ ನಿನ್ನೆ ಸಂಜೆ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಉಪಮುಖ್ಯಮಂತ್ರಿಯಾಗಿ ಬಿಜೆಪಿ ನಾಯಕ ದೇವೇಂದ್ರ ಫಡ್ನಾವೀಸ್ ಪ್ರಮಾಣ ವಚನ ಸ್ವೀಕರಿಸಿದರು. ರಾಜಭವನದಲ್ಲಿ ನಡೆದ ಸಮಾರಂಭದಲ್ಲಿ ರಾಜ್ಯಪಾಲ ಭಗತ್‌ಸಿಂಗ್ ಕೋಶಿಯಾರಿ ಉಭಯ ನಾಯಕರಿಗೆ ಅಧಿಕಾರ ಮತ್ತು ಗೌಪ್ಯತೆಯ ಪ್ರಮಾಣ ವಚನ ಬೋಧಿಸಿದರು.
- ದೇಶದಲ್ಲಿ ಸೂಕ್ಷ್ಮ, ಸಣ್ಣ ಹಾಗೂ ಮಧ್ಯಮ ಕೈಗಾರಿಕೆಗಳು-ಎಂಎಸ್‌ಎಂಇ ವಲಯವನ್ನು ಉತ್ತೇಜಿಸಲು ಸರ್ಕಾರ ನೀತಿಯಲ್ಲಿ ಅಗತ್ಯ ಬದಲಾವಣೆ ಮಾಡುತ್ತಿದೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಹೇಳಿದ್ದಾರೆ. ನವದೆಹಲಿಯಲ್ಲಿ ನಿನ್ನೆ ಉದ್ಯಮಿ ಭಾರತ್ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಅವರು, ಕಳೆದ 8 ವರ್ಷಗಳಲ್ಲಿ ಈ ವಲಯವನ್ನು ಬಲಪಡಿಸಲು ಬಜೆಟ್ ಅನುದಾನವನ್ನು ಶೇಕಡ 650ರಷ್ಟು ಹೆಚ್ಚಿಸಲಾಗಿದೆ ಎಂದು ತಿಳಿಸಿದರು.
- ಭಾರತ ಮತ್ತು ಇಂಗ್ಲೆಂಡ್ ನಡುವಿನ ಪೂರ್ವನಿಗದಿತ 5ನೇ ಟೆಸ್ಟ್ ಕ್ರಿಕೆಟ್ ಪಂದ್ಯ ಬರ್ನಿಂಗ್ ಹ್ಯಾಮ್‌ನ ಎಡ್ಜ್‌ಬಾಸ್ಟನ್‌ನಲ್ಲಿ ಇಂದು 3 ಗಂಟೆಗೆ ಆರಂಭಗೊಳ್ಳಲಿದೆ. ಇಂಗ್ಲೆಂಡ್ ವಿರುದ್ಧದ ಸರಣಿಯಲ್ಲಿ ಭಾರತ 2-1ರ ಮುನ್ನಡೆಯಲಿದೆ. ಕಪಿಲ್‌ದೇವ್ ನಂತರ ಭಾರತದ ತಂಡವನ್ನು ಜಪ್ರೀತ್ ಬೂಮ್ರಾ ಮುನ್ನಡೆಸಲಿದ್ದಾರೆ.
- ವೃಕ್ಷಮಾತೆ ಸಾಲುಮರದ ತಿಮ್ಮಕ್ಕ ಅವರಿಗೆ ಪರಿಸರ ರಾಯಭಾರಿ ಗೌರವ ನೀಡುವ ಜತೆಗೆ ಸಂಪುಟ ದರ್ಜೆಯ ಸ್ಥಾನಮಾನ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರಕಟಿಸಿದ್ದಾರೆ. ಬೆಂಗಳೂರಿನಲ್ಲಿ ನಿನ್ನೆ ನಡೆದ ಸಾಲುಮರದ ತಿಮ್ಮಕ್ಕನವರ 111ನೇ ಜನ್ಮದಿನದ ಸಂಭ್ರಮ ಹಾಗೂ ಸಾಲುಮರದ ತಿಮ್ಮಕ್ಕ ಗ್ರೀನರಿ ಅವಾರ್ಡ್ ಪ್ರದಾನ ಸಮಾರಂಭದಲ್ಲಿ ಮಾತನಾಡಿದ ಮುಖ್ಯಮಂತ್ರಿ, ವಾರ್ತಾ ಇಲಾಖೆಯಿಂದ ಸಾಲುಮರದ ತಿಮ್ಮಕ್ಕ ಅವರ ವೆಬ್‌ಸೀರಿಸ್ ಮಾಡಲಾಗುವುದು ಎಂದು ಹೇಳಿದರು.
- ಇಳಕಲ್ ಡ್ಯಾಂ ಬಳಿ ನೂತನ ಮೃಗಾಲಯ ತೆರೆಯಲು ರಾಜ್ಯ ಸರ್ಕಾರ ಚಿಂತನೆ ನಡೆಸಿದ್ದು, ಈಗಾಗಲೇ ಅನುಮತಿಗಾಗಿ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದೆ. ಉದ್ದೇಶಿತ 100 ಎಕರೆ ಪ್ರದೇಶದಲ್ಲಿ ಮೃಗಾಲಯ ನಿರ್ಮಾಣವಾದರೆ ಈ ಭಾಗದಲ್ಲಿ ಪ್ರವಾಸೋದ್ಯಮ ಅಭಿವೃದ್ಧಿಯಾಗಲಿದೆ ಎಂದು ಅರಣ್ಯ ಸಚಿವ ಉಮೇಶ್ ಕತ್ತಿ ಮೈಸೂರಿನಲ್ಲಿ ನಿನ್ನೆ ತಿಳಿಸಿದ್ದಾರೆ.
- ಕೊರೊನಾ ಸಾಂಕ್ರಾಮಿಕ ಕಾರಣ ಕಳೆದ ಎರಡು ವರ್ಷ ಸರಳ, ಸಂಪ್ರದಾಯ ಆಚರಣೆಗೆ ಮಾತ್ರ ಸೀಮಿತವಾಗಿದ್ದ ಮೈಸೂರಿನ ಚಾಮುಂಡಿ ಬೆಟ್ಟದಲ್ಲಿನ ಆಷಾಢ ಪೂಜೆ ಈ ಬಾರಿ ಅದ್ಧೂರಿಯಾಗಿ ನಡೆಯಲಿದೆ. ಇಂದು ಮೊದಲ ಆಷಾಢ ಶುಕ್ರವಾರವಾಗಿದ್ದು, ಚಾಮುಂಡಿ ಬೆಟ್ಟದಲ್ಲಿ ಸಿದ್ಧತೆಗಳು ನಡೆಯುತ್ತಿದೆ. ಆಷಾಢ ಶುಕ್ರವಾರದಲ್ಲಿ ನಾಡದೇವತೆ ಚಾಮುಂಡಿಗೆ ವಿಶೇಷ ಪೂಜೆ ಪುರಸ್ಕಾರ ನೆರವೇರಲಿದೆ.
- ವ್ಯಾಪಾರ ಸುಧಾರಣಾ ಕಾರ್ಯ ಯೋಜನೆ-ಬಿಆರ್‌ಎಪಿ-2020 ಅನ್ನು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ದೆಹಲಿಯಲ್ಲಿ ನಿನ್ನೆ ಬಿಡುಗಡೆ ಮಾಡಿದರು. ಈ ಯೋಜನೆಯ ಅನುಷ್ಠಾನದ ಆಧಾರದ ಮೇಲೆ 7 ರಾಜ್ಯಗಳನ್ನು ಅಗ್ರಗಣ್ಯ ಸಾಧಕ ರಾಜ್ಯಗಳೆಂದು ವರದಿಯಲ್ಲಿ ಗುರುತಿಸಲಾಗಿದೆ. ಈ 7 ರಾಜ್ಯಗಳ ಪೈಕಿ ಕರ್ನಾಟಕವೂ ಸೇರಿದೆ.
- ಖಾದಿ ಮತ್ತು ಗ್ರಾಮೀಣ ಕೈಗಾರಿಕೆಗಳ ಉತ್ಪನ್ನಗಳ ವಹಿವಾಟು 1 ಲಕ್ಷ ಕೋಟಿ ರೂಪಾಯಿಯನ್ನು ಮೀರಿದೆ. ಕಳೆದ 8 ವರ್ಷಗಳಲ್ಲಿ ಖಾದಿ ಉತ್ಪನ್ನಗಳ ಮಾರಾಟ ನಾಲ್ಕು ಪಟ್ಟು ಹೆಚ್ಚಾಗಿದೆ. ಉದ್ಯಮಗಳನ್ನು ಸ್ಥಾಪಿಸುವ ನಿಟ್ಟಿನಲ್ಲಿ ದುರ್ಬಲ ವರ್ಗದವರಿಗೆ ಖಾತರಿ ಇಲ್ಲದೆ ಸಾಲ ಪಡೆಯುವುದೇ ದುರ್ಲಬವಾಗಿದೆ. 2014ರ ನಂತರ ಸಬ್ ಕಾ ಸಾತ್, ಸಬ್ ಕಾ ವಿಕಾಸ್, ಸಬ್ ಕಾ ವಿಶ್ವಾಸ್ ಮತ್ತು ಸಬ್ ಕಾ ಪ್ರಯಾಸ್ ಘೋಷ ವಾಕ್ಯದ ಮೂಲಕ ಉದ್ಯಮಗಳ ಸ್ಥಾಪನೆಗೆ ಹೆಚ್ಚಿನ ಪ್ರೋತ್ಸಾಹ ನೀಡಲಾಗುತ್ತಿದೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ನವದೆಹಲಿಯಲ್ಲಿ ಹೇಳಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಕ್ರೀಡೆ
ದಾವಣಗೆರೆ | ಸರ್ಕಾರಿ ಪ್ರಥಮ ದರ್ಜೆ ಕಾಲೇಜು ವಿದ್ಯಾರ್ಥಿ ರಾಘವೇಂದ್ರ ಎನ್ ಬಿ ದೇಹದಾರ್ಢ್ಯ ಸ್ಪರ್ಧೆಯಲ್ಲಿ ಚಿನ್ನದ ಪದಕ ಗೆದ್ದು ರಾಷ್ಟ್ರೀಯ ಮಟ್ಟಕ್ಕೆ ಆಯ್ಕೆ

ಸುದ್ದಿದಿನ,ದಾವಣಗೆರೆ:ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆದ ದಾವಣಗೆರೆ ವಿಶ್ವವಿದ್ಯಾಲಯದ ಮಟ್ಟದ ದೇಹದಾರ್ಢ್ಯ ಸ್ಪರ್ಧೆಯಲ್ಲಿ 90ಕೆಜಿ ವಿಭಾಗದಲ್ಲಿ ರಾಘವೇಂದ್ರ ಚಿನ್ನದ ಪದಕ ಗೆಲ್ಲುವ ಮೂಲಕ ರಾಷ್ಟ್ರೀಯ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ..
ದಾವಣಗೆರೆ ನಗರದ ಜಿಎಫ್ ಜಿಸಿ ಕಾಲೇಜಿನಲ್ಲಿ ದಾವಣಗೆರೆ ವಿಶ್ವವಿದ್ಯಾಲಯ ಹಾಗೂ ದೈಹಿಕ ಶಿಕ್ಷಣ ನಿರ್ದೇಶಕರ ಸಂಘದಿಂದ ದೇಹದಾರ್ಢ್ಯ ಸ್ಪರ್ಧೆ ಹಾಗೂ ಆಯ್ಕೆ ಗಳು ನಡೆದವು, ಕಾಲೇಜಿನಲ್ಲಿ ಪ್ರಥಮ ಬಿಎ ವ್ಯಾಸಂಗ ಮಾಡುತ್ತಿರುವ ರಾಘವೇಂದ್ರ, ಹಳೇ ಕುಂದುವಾಡದ ಬಸವರಾಜ್, ಲಕ್ಷ್ಮಿದೇವಿ ದಂಪತಿಯ ಪುತ್ರನಾಗಿದ್ದು, ಸ್ಪರ್ಧೆಯಲ್ಲಿ 90ಕೆಜಿ ವಿಭಾಗದಲ್ಲಿ ದೇಹ ಪ್ರದರ್ಶಿಸಿ ಚಿನ್ನದ ಪದಕಕ್ಕೆ ಮುತ್ತಿಟ್ಟಿದ್ದಾನೆ.
ಓದಿನ ಜೊತೆಗೆ ತನ್ನ ತಂದೆಯ ಕಿರಾಣಿ ಅಂಗಡಿಯಲ್ಲಿ ಕೆಲಸ ಮಾಡುತ್ತಾ ತನ್ನ ಕನಸನ್ನು ನನಸು ಮಾಡಿಕೊಳ್ಳಲು ಬಿಡುವಿನ ವೇಳೆಯಲ್ಲಿ ಕೋಚ್ ಮಧು ಪೂಜಾರ್ ಮಾರ್ಗದರ್ಶನದಲ್ಲಿ ದೇಹ ಹುರಿಗೊಳಿಸಿ ಸ್ಪರ್ಧೆಯಲ್ಲಿ ಭಾಗವಹಿಸಿ ಚಿನ್ನದ ಪದಕ ಗಳಿಸಿದ್ದಾನೆ, ಸ್ಪರ್ಧೆಯಲ್ಲಿ ಬೈಸಿಪ್ಸ್, ಲ್ಯಾಟ್ ಸ್ಟ್ರೈಡ್ ಪೋಸ್ ಕೊಟ್ಟು ನೋಡುಗರನ್ನು, ತೀರ್ಪುಗಾರರನ್ನು ಬೆರಗುಗೊಳಿಸಿದ್ದಾನೆ.
ಇನ್ನೂ ರಾಘವೇಂದ್ರನ ದೇಹ ಪ್ರದರ್ಶನ ವೇಳೆ ಶಿಳ್ಳೆ, ಚಪ್ಪಾಳೆ ಕೇಳಿ ಬಂದವು, ರಾಘವೇಂದ್ರ ರಾಷ್ಟ್ರೀಯ ಮಟ್ಟಕ್ಕೆ ಆಯ್ಕೆಯಾಗಿದ್ದು ಬರುವ ಫೆಬ್ರುವರಿಯಲ್ಲಿ ಮಂಗಳೂರಿನಲ್ಲಿ ಸ್ಪರ್ಧೆ ನಡೆಯಲಿದೆ, ಇನ್ನೂ ಚಿನ್ನದ ಪದಕ ಗಳಿಸಿರುವ ರಾಘವೇಂದ್ರನಿಗೆ ಜಿಎಫ್ ಜಿಸಿ ಕಾಲೇಜು ಆಡಳಿತ ಮಂಡಳಿ, ಮಾರ್ಗದರ್ಶಕರು, ಹಳೇ ಕುಂದುವಾಡ ಗ್ರಾಮಸ್ಥರು ಅಭಿನಂದನೆ ಸಲ್ಲಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಕ್ರೀಡೆ
ಅದ್ವಿತೀಯ 2024ರಲ್ಲಿ ಜಿಎಂಐಟಿ ಕಾಲೇಜಿನ ಸಿಎಸ್ಇ ವಿದ್ಯಾರ್ಥಿಗಳ ಪೋಸ್ಟರ್ ಪ್ರಸ್ತುತಿಯಲ್ಲಿ ತೃತೀಯ ಸ್ಥಾನ

ಸುದ್ದಿದಿನ,ದಾವಣಗೆರೆ:ಜಿಎಂ ತಾಂತ್ರಿಕ ಮಹಾವಿದ್ಯಾಲಯದ ಕಂಪ್ಯೂಟರ್ ಸೈನ್ಸ್ ಅಂಡ್ ಇಂಜಿನಿಯರಿಂಗ್ (ಸಿ.ಎಸ್.ಇ) ವಿಭಾಗದ 5ನೇ ಸೆಮಿಸ್ಟರ್ ‘ಎ’ ವಿಭಾಗದ ವಿದ್ಯಾರ್ಥಿಗಳಾದ ಅಭಿಷೇಕ್ ಯು. ಮತ್ತು ಅಫ್ರಿದ್ ಆರ್.ಕೆ. ಈ ಇಬ್ಬರು ಇತ್ತೀಚಿಗೆ ಹುಬ್ಬಳ್ಳಿಯ ಕೆಎಲ್‌ಇ ತಾಂತ್ರಿಕ ಸಂಸ್ಥೆಯಲ್ಲಿ ನಡೆದ ಅದ್ವಿತೀಯ 2024ರಲ್ಲಿ ಪೋಸ್ಟರ್ ಪ್ರಸ್ತುತಿಯಲ್ಲಿ ತೃತೀಯ ಸ್ಥಾನವನ್ನು ಗಳಿಸಿದ್ದಾರೆ.
ಜಿಎಂ ತಾಂತ್ರಿಕ ಮಹಾವಿದ್ಯಾಲಯದ ಪ್ರಾಂಶುಪಾಲರಾದ ಡಾ. ಎಂ.ಬಿ. ಸಂಜಯ್ ಪಾಂಡೆ, ಕಂಪ್ಯೂಟರ್ ಸೈನ್ಸ್ ಇಂಜಿನಿಯರಿಂಗ್ ವಿಭಾಗದ ಮುಖ್ಯಸ್ಥರಾದ ಡಾ. ಬಿ.ಎನ್. ವೀರಪ್ಪ, ಇನ್ಫಾರ್ಮಶನ್ ಸೈನ್ಸ್ ಅಂಡ್ ಇಂಜಿನಿಯರಿಂಗ್ ವಿಭಾಗದ ಮುಖ್ಯಸ್ಥರಾದ ಡಾ. ಎಸ್. ನೀಲಾಂಬಿಕೆ, ವಿದ್ಯಾರ್ಥಿ ವ್ಯವಹಾರಗಳ ವಿಭಾಗದ ಉಪ ನಿರ್ದೇಶಕರಾದ ಎಂ. ಸಂತೋಷ ಕುಮಾರ್, ಜಿಎಂ ವಿಶ್ವವಿದ್ಯಾಲಯದ ಗಣಿತಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಕೆ.ಎಸ್. ಓಂಕಾರಪ್ಪ ಸೇರಿದಂತೆ ಆಡಳಿತ ಮಂಡಳಿ, ವಿಭಾಗದ ಮುಖ್ಯಸ್ಥರು ಮತ್ತು ಸಿಬ್ಬಂದಿಗಳು ಅಭಿನಂದಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಕ್ರೀಡೆ
ತುಮಕೂರಿನಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣಕ್ಕೆ ಭೂಮಿ ಪೂಜೆ ನೆರವೇರಿಸಿದ ಸಿಎಂ ಸಿದ್ದರಾಮಯ್ಯ

ಸುದ್ದಿದಿನ,ತುಮಕೂರು:ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣ ನಿರ್ಮಾಣಕ್ಕಾಗಿ ತುಮಕೂರಿನಲ್ಲಿ ಒಟ್ಟು 50 ಎಕರೆ ಜಾಗವನ್ನು ಕರ್ನಾಟಕ ಕ್ರಿಕೆಟ್ ಸಂಸ್ಥೆಗೆ ನೀಡಲಾಗಿದ್ದು ಇದು ಜಿಲ್ಲೆಯ ಆರ್ಥಿಕ ಬೆಳವಣಿಗೆ ಮತ್ತು ಅಭಿವೃದ್ಧಿಗೆ ಪೂರಕ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ತುಮಕೂರಿನ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣ ನಿರ್ಮಾಣಕ್ಕೆ ಬ್ಯಾಟಿಂಗ್ ಮಾಡುವ ಮೂಲಕ ಚಾಲನೆ ನೀಡಿ ಮಾತನಾಡಿದ ಅವರು ಆದಷ್ಟು ಶೀಘ್ರವೇ ಕ್ರೀಡಾಂಗಣ ನಿರ್ಮಾಣ ಮುಗಿಸಿ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆ ಪೂರೈಸಲಾಗುವುದು ಎಂದು ಹೇಳಿದ್ದಾರೆ. ಮೈಸೂರಿನಲ್ಲೂ ಕ್ರೀಡಾಂಗಣ ನಿರ್ಮಾಣಕ್ಕೆ ಕರ್ನಾಟಕ ಕ್ರಿಕೆಟ್ ಸಂಸ್ಥೆ ಬೇಡಿಕೆ ಮುಂದಿಟ್ಟಿದ್ದು ಮೈಸೂರಿನಲ್ಲೂ ಜಾಗ ನೀಡಲಾಗುವುದು ಎಂದು ಸ್ಪಷ್ಟಪಡಿಸಿದ್ದಾರೆ.
ಗೃಹ ಸಚಿವ ಡಾ.ಜಿ.ಪರಮೇಶ್ವರ್ ಮಾತನಾಡಿ, ಚೆನ್ನೈ-ಮುಂಬೈ ಇಂಡಸ್ಟ್ರೀಯಲ್ ಕಾರಿಡಾರ್ ಗಾಗಿ ಆರು ಹಂತದಲ್ಲಿ 20 ಸಾವಿರ ಎಕರೆ ಸ್ವಾಧೀನ ಮಾಡಲಾಗುವುದು ಎಂದು ತಿಳಿಸಿದ್ದಾರೆ.
ವಸಂತನರಸಾಪುರದಲ್ಲಿ ಏಷ್ಯಾದಲ್ಲಿಯೇ ಅತಿ ದೊಡ್ಡ ಟೌನ್ ಶಿಪ್ ಪ್ರಾರಂಭವಾಗಿದೆ ಎಂದು ತಿಳಿಸಿದ ಅವರು, ಸ್ಥಳೀಯರಿಗೆ ಉದ್ಯೋಗ ನೀಡಬೇಕು ಎಂದು ಕೈಗಾರಿಕೆಗಳಿಗೆ ಮನವಿ ಮಾಡಲಾಗಿದೆ ಎಂದು ಸ್ಪಷ್ಟಪಡಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ6 days ago
ಅಂತಾರಾಷ್ಟ್ರೀಯ, ನವೋದಯ ಮಟ್ಟದ ಉತ್ಕೃಷ್ಟ ಶಿಕ್ಷಣ ಸರ್ಕಾರಿ ಶಾಲೆಗಳಲ್ಲಿಯೂ ಸಿಗಬೇಕು: ಜಿ. ಬಿ. ವಿನಯ್ ಕುಮಾರ್
-
ದಿನದ ಸುದ್ದಿ6 days ago
ನ್ಯಾಕ್ ಗ್ರೇಡ್ ನೀಡಲು ಲಂಚ ಸ್ವೀಕಾರ ; ದಾವಣಗೆರೆ ವಿವಿ ಪ್ರಾಧ್ಯಾಪಕಿ ಬಂಧನ
-
ದಿನದ ಸುದ್ದಿ4 days ago
ಹಿಂದುಳಿದ ಸಮಾಜಗಳು ಸರ್ಕಾರದ ಸೌಲಭ್ಯ ಸದುಪಯೋಗ ಪಡೆದು ಸಂಘಟಿತರಾಗಲಿ: ಶಾಸಕ ಕೆ.ಎಸ್.ಬಸವಂತಪ್ಪ
-
ದಿನದ ಸುದ್ದಿ14 hours ago
ಸರ್ಕಾರಿ, ಅನುದಾನಿತ, ಕಲ್ಯಾಣ ಕರ್ನಾಟಕದಲ್ಲಿನ ಖಾಲಿ ಇರುವ 25 ಸಾವಿರ ಶಿಕ್ಷಕರ ಹುದ್ದೆಗಳ ಭರ್ತಿಗಾಗಿ ಬಜೆಟ್ನಲ್ಲಿ ಅನುಮೋದನೆಗೆ ಪ್ರಸ್ತಾವನೆ : ಸಚಿವ ಎಸ್.ಮಧು ಬಂಗಾರಪ್ಪ