Connect with us

ದಿನದ ಸುದ್ದಿ

ಹೊಸದುರ್ಗ | ತಹಶೀಲ್ದಾರರಿಗೆ ಅತಿಥಿ ಉಪನ್ಯಾಸಕರ ಮನವಿ

Published

on

ಸುದ್ದಿದಿನ,ಹೊಸದುರ್ಗ : ರಾಜ್ಯದ 430 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಅನೇಕ ವರ್ಷಗಳಿಂದ ಸೇವೆ ಸಲ್ಲುತ್ತಾ ಬಂದಿರುವ ಅತಿಥಿ ಉಪನ್ಯಾಸಕರನ್ನು ಸೇವೆಯಲ್ಲಿ ಸರ್ಕಾರ ವಿಲೀನಗೊಳಿಸಬೇಕೆಂದು ಪಟ್ಟಣದ ಸರ್ಕಾರಿ ಪ್ರಥಮದರ್ಜೆ ಕಾಲೇಜಿನ ಅತಿಥಿ ಉಪನ್ಯಾಸಕರು ಇತ್ತೀಚೆಗೆ ತಹಶಿಲ್ದಾರರಿಗೆ ಮನವಿ ಸಲ್ಲಿಸಿದರು.

ಸಂಬಂಧ ಕರ್ನಾಟಕ ನಾಗರೀಕ ಸೇವೆ (KCS 1977 General Recruitment Rule) 1(3) (2) ಮತ್ತು ನಿಯಮ 14ರ ಅಡಿಯಲ್ಲಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಸೇವೆ ಸಲ್ಲಿತ್ತಿರುವ ಅತಿಥಿ ಉಪನ್ಯಾಸಕರ ಸೇವೆಯನ್ನು ವಿಲೀನಗೊಳಿಸಿ, ನಿಯಮಬಾಹಿರ 2021ರ ಸಹಾಯಕ ಪ್ರಾಧ್ಯಾಪಕರ ನೇಮಕಾತಿ ಅಧಿಸೂಚನೆಯನ್ನು ತಡೆ ಹಿಡಿಯ ಬೇಕೆಂದು ಒತ್ತಾಯಿಸಿದರು.

ಕಾಲೇಜು ಶಿಕ್ಷಣ ಇಲಾಖೆಯ ಅಧಿಕಾರಿಗಳ ಜೊತೆ ಸೇವಾ ವಿಲೀನ ಸಂಬಂಧ 23/08/2021 ಮತ್ತು 05/09/2021ರಲ್ಲಿ ಕೈಗೊಂಡ ನಿರ್ಣಯಗಳ ಕಡತವನ್ನು ವಿಧಾನಸಭೆ ಮತ್ತು ವಿಧಾನಪರಿಷತ್ತಿನ ಪ್ರಸ್ತುತ 2021ರ ಬೆಳಗಾ ಅಧಿವೇಶನದಲ್ಲಿ ಚರ್ಚಿಸಿ ಸೂಕ್ತ ನಿರ್ಣಯವನ್ನು ಕೈಗೊಳ್ಳುವಂತೆ ಆಗ್ರಹಿಸಿ ರಾಜ್ಯದಂತೆ ದಿನಾಂಕ : 10/12/2021ರಿಂದ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲಾ ಅತಿಥಿ ಉಪನ್ಯಾಸಕರು ತರಗತಿಗಳನ್ನು ಬಹಿಷ್ಕರಿಸಿ ಮುಷ್ಕರವನ್ನು ಕೈಗೊಂಡಿರುತ್ತೇವೆ ಎಂದರು.

ಈ ಸಂದರ್ಭದಲ್ಲಿ ಕಾಲೇಜಿನ ಅತಿಥಿ ಉಪನ್ಯಾಸಕರು ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ವಸತಿ ಯೋಜನೆಗೆ ಅರ್ಜಿ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ: ಕರ್ನಾಟಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿ ಅಭಿವೃದ್ದಿ ನಿಗಮದ ವಸತಿ ಯೋಜನೆಗೆ ಅರ್ಜಿ ಆಹ್ವಾನಿಸಲಾಗಿದೆ.ಅರ್ಜಿ ಸಲ್ಲಿಸಲು ಜೂನ್ 12 ಕೊನೆಯ ದಿನವಾಗಿರುತ್ತದೆ.

ಈ ಯೋಜನೆಯಡಿ ಸೌಲಭ್ಯ ಒದಗಿಸಲು ನಿಗಧಿತ ಅರ್ಜಿ ನಮೂನೆಯಲ್ಲಿ ಅವಶ್ಯಕ ದಾಖಲಾತಿ ಹಾಗೂ ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರು ಗ್ರೇಡ್-1ರವರ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ಚನ್ನಗಿರಿ ಕಚೇರಿಯನ್ನು ಸಂಪರ್ಕಿಸಬಹುದೆಂದು ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

10 ಮುಖ್ಯ ಅಂಶಗಳನ್ನು ಪಾಲಿಸಿ ; ಸಕ್ಕರೆ ಕಾಯಿಲೆಗೆ ಗುಡ್ ಬೈ ಹೇಳಿ..

Published

on

1. ಸಮತೋಲಿತ ಆಹಾರ (Balanced Diet): ನಿಮ್ಮ ಆಹಾರದಲ್ಲಿ ಹೆಚ್ಚು ನಾರಿನಂಶವಿರುವ (fiber) ತರಕಾರಿ, ಸೊಪ್ಪು, ಮೊಳಕೆ ಬರಿಸಿದ ಕಾಳುಗಳು ಮತ್ತು ಸಿರಿಧಾನ್ಯಗಳನ್ನು ಬಳಸಿ. ಕಾರ್ಬೋಹೈಡ್ರೇಟ್ ಹಾಗೂ ಎಣ್ಣೆಯಂಶವಿರುವ ಆಹಾರವನ್ನು ಕಡಿಮೆ ಮಾಡಿ.

2. ಸಿಹಿ ಪದಾರ್ಥಗಳ ನಿಯಂತ್ರಣ (Avoid Sweets): ಸಕ್ಕರೆ, ಬೆಲ್ಲ, ಬೇಕರಿ ತಿಂಡಿಗಳು, ಐಸ್‌ಕ್ರೀಮ್ ಮತ್ತು ಕೃತಕ ಸಕ್ಕರೆ ಇರುವ ತಂಪು ಪಾನೀಯಗಳ ಬಳಕೆಯನ್ನು ಸಂಪೂರ್ಣವಾಗಿ ಕಡಿಮೆ ಮಾಡಿ ಅಥವಾ ದೂರವಿಡಿ.

3. ದಿನನಿತ್ಯದ ವ್ಯಾಯಾಮ (Regular Exercise): ಪ್ರತಿದಿನ ಕನಿಷ್ಠ 30 ರಿಂದ 45 ನಿಮಿಷಗಳ ಕಾಲ ವೇಗದ ನಡಿಗೆ (brisk walking), ಸೈಕ್ಲಿಂಗ್, ಈಜು ಅಥವಾ ಯೋಗ ಮಾಡುವುದರಿಂದ ರಕ್ತದಲ್ಲಿನ ಸಕ್ಕರೆ ಮಟ್ಟ ನಿಯಂತ್ರಣಕ್ಕೆ ಬರುತ್ತದೆ.

4. ದೇಹದ ತೂಕದ ನಿರ್ವಹಣೆ (Weight Management): ಅತಿಯಾದ ದೇಹದ ತೂಕವು ಇನ್ಸುಲಿನ್ ಕಾರ್ಯಕ್ಷಮತೆಯನ್ನು ಕುಂಠಿತಗೊಳಿಸುತ್ತದೆ. ಆದ್ದರಿಂದ ತೂಕವನ್ನು ಆರೋಗ್ಯಕರ ಮಿತಿಯಲ್ಲಿ ಇಟ್ಟುಕೊಳ್ಳುವುದು ಅತ್ಯಗತ್ಯ.

5. ನಿಯಮಿತ ರಕ್ತದ ಪರೀಕ್ಷೆ (Regular Blood Sugar Check): ವೈದ್ಯರ ಸಲಹೆಯಂತೆ ಕಾಲಕಾಲಕ್ಕೆ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು (Fasting ಮತ್ತು Post Prandial) ಹಾಗೂ ಮೂರು ತಿಂಗಳ ಸರಾಸರಿ ತಿಳಿಸುವ HbA1c ಪರೀಕ್ಷೆಯನ್ನು ಮಾಡಿಸಿಕೊಳ್ಳಿ.

6. ಸಮಯಕ್ಕೆ ಸರಿಯಾಗಿ ಔಷಧಿ ಸೇವನೆ (Timely Medication): ವೈದ್ಯರು ಸೂಚಿಸಿದ ಮಾತ್ರೆಗಳನ್ನು ಅಥವಾ ಇನ್ಸುಲಿನ್ ಅನ್ನು ನಿಗದಿತ ಸಮಯಕ್ಕೆ ತೆಗೆದುಕೊಳ್ಳಿ. ಸ್ವಂತ ನಿರ್ಧಾರದಿಂದ ಔಷಧಿಯನ್ನು ನಿಲ್ಲಿಸಬೇಡಿ.

7. ಮಾನಸಿಕ ಒತ್ತಡದ ನಿರ್ವಹಣೆ (Stress Management): ಅತಿಯಾದ ಮಾನಸಿಕ ಒತ್ತಡವು ದೇಹದಲ್ಲಿ ಸಕ್ಕರೆ ಮಟ್ಟವನ್ನು ಹೆಚ್ಚಿಸುವ ಹಾರ್ಮೋನ್‌ಗಳನ್ನು ಬಿಡುಗಡೆ ಮಾಡುತ್ತದೆ. ಒತ್ತಡ ಕಡಿಮೆ ಮಾಡಿಕೊಳ್ಳಲು ಧ್ಯಾನ (Meditation) ಅಥವಾ ಹವ್ಯಾಸಗಳಲ್ಲಿ ತೊಡಗಿಕೊಳ್ಳಿ.

8. ಪೂರಕ ನೀರು ಕುಡಿಯುವುದು (Stay Hydrated): ದಿನವಿಡೀ ಸಾಕಷ್ಟು ಪ್ರಮಾಣದಲ್ಲಿ ನೀರು ಕುಡಿಯಿರಿ. ಇದು ದೇಹದಲ್ಲಿರುವ ಹೆಚ್ಚುವರಿ ಗ್ಲೂಕೋಸ್ ಮೂತ್ರದ ಮೂಲಕ ಹೊರಹೋಗಲು ಸಹಾಯ ಮಾಡುತ್ತದೆ.

9. ಉತ್ತಮ ನಿದ್ರೆ (Good Sleep): ಪ್ರತಿದಿನ ರಾತ್ರಿ 7 ರಿಂದ 8 ಗಂಟೆಗಳ ಕಾಲ ಶಾಂತಿಯುತವಾದ ನಿದ್ರೆ ಮಾಡುವುದು ದೇಹದ ಚಯಾಪಚಯ ಕ್ರಿಯೆ (Metabolism) ಮತ್ತು ಹಾರ್ಮೋನ್‌ಗಳ ಸಮತೋಲನಕ್ಕೆ ಬಹಳ ಮುಖ್ಯ.

10. ದುರಭ್ಯಾಸಗಳಿಂದ ದೂರವಿರಿ (Avoid Smoking and Alcohol): ಧೂಮಪಾನ ಮತ್ತು ಮದ್ಯಪಾನವು ಸಕ್ಕರೆ ಕಾಯಿಲೆಯ ತೊಂದರೆಗಳನ್ನು (ಹೃದಯ ಮತ್ತು ನರಗಳ ಸಮಸ್ಯೆ) ಮತ್ತಷ್ಟು ಹೆಚ್ಚು ಮಾಡುವುದರಿಂದ ಇವುಗಳಿಂದ ದೂರವಿರುವುದು ಒಳ್ಳೆಯದು.

ಗಮನಿಸಿ: ಈ ಮೇಲಿನ ಮಾಹಿತಿ ರೋಗದ ನಿರ್ವಹಣೆಗೆ ಸಾಮಾನ್ಯ ಮಾರ್ಗದರ್ಶನವಾಗಿದೆ. ಪ್ರತಿಯೊಬ್ಬರ ದೇಹ ಪ್ರಕೃತಿ ವಿಭಿನ್ನವಾಗಿರುವುದರಿಂದ, ನಿಮ್ಮ ವೈದ್ಯರ ವೈಯಕ್ತಿಕ ಸಲಹೆ ಮತ್ತು ಚಿಕಿತ್ಸೆಯ ಕ್ರಮವೇ ಅಂತಿಮ ಹಾಗೂ ಸುರಕ್ಷಿತ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ರಾಷ್ಟ್ರೀಯ ಖಾದ್ಯ ತೈಲ ಅಭಿಯಾನ – ಎಣ್ಣೆಕಾಳು ಕಾರ್ಯಕ್ರಮದಡಿ ಸೌಲಭ್ಯ: ಅರ್ಜಿ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ: ಖಾದ್ಯ ತೈಲಗಳನ್ನು ಆಮದು ಮಾಡಿಕೊಳ್ಳುವಲ್ಲಿ ದೇಶದ ಅವಲಂಬನೆಯನ್ನು ಕಡಿಮೆ ಮಾಡಲು ಮತ್ತು ದೇಶಿಯ ಎಣ್ಣೆಕಾಳುಗಳ ಉತ್ಪಾದನೆಯನ್ನು ಹೆಚ್ಚಿಸುವ ಹಾಗೂ ರೈತರ ಆದಾಯವನ್ನು ಸುಧಾರಿಸಲು ಭಾರತ ಸರ್ಕಾರದ ಕೃಷಿ ಮತ್ತು ರೈತರ ಕಲ್ಯಾಣ ಇಲಾಖೆಯ ಕೇಂದ್ರ ಪುರಷ್ಕೃತ ಕೃಷಿಯೋನ್ನತಿ ಯೋಜನೆಯಡಿ ‘’ರಾಷ್ಟ್ರೀಯ ಖಾದ್ಯ ತೈಲ ಅಭಿಯಾನ – ಎಣ್ಣೆಕಾಳು’’ (National Mission on Edible Oil – Oilseeds (NMEO-OS) ಯೋಜನೆಯನ್ನು ಅನುಷ್ಠಾನ ಮಾಡಲಾಗುತ್ತಿದೆ.

ಎಣ್ಣೆಕಾಳು ಬೆಳೆಗಾರರು ಮತ್ತು ಮೌಲ್ಯ ಸರಪಳಿ ಪಾಲುದಾರರನ್ನು (Value Chain Partners) ಸಂಸ್ಕರಣಾದಾರರೊಂದಿಗೆ ಸಂಪರ್ಕಿಸಲು ಮತ್ತು ಅವರಿಗೆ ಮಾರುಕಟ್ಟೆ ಕಲ್ಪಿಸುವುದರೊಂದಿಗೆ ಉತ್ತಮ ಲಾಭವನ್ನು ಪಡೆಯುವಂತೆ ಖಾತ್ರಿಪಡಿಸುವುದು ಯೋಜನೆಯ ಗುರಿಗಳಲ್ಲಿ ಒಂದಾಗಿದೆ.

ಸದರಿ ಯೋಜನೆಯಡಿ ಸ್ಥಳೀಯವಾಗಿ ಉದ್ಯೋಗಾವಕಾಶ ಕಲ್ಪಿಸಲು ಹಾಗೂ ಶುದ್ಧ ಖಾದ್ಯ ತೈಲ ಉಪಯೋಗಿಸಲು ಅನುಕೂಲವಾಗುವಂತೆ ಪ್ರೇರೇಪಿಸಲು ಸೂಕ್ತವಾಗುವಂತೆ ಹಾಗೂ ಮೌಲ್ಯ ಸರಪಳಿಯನ್ನು ಉತ್ತೇಜಿಸಲು, ಸಂಸ್ಕರಣಾ ಘಟಕಗಳಿಗೆ ಅವಶ್ಯವಿರುವ ಯಂತ್ರೋಪಕರಣಗಳನ್ನು ಪಡೆಯಲು/ಪ್ರಾಥಮಿಕ ಮತ್ತು ದ್ವಿತೀಯ ಎಣ್ಣೆಕಾಳು ಕೊಯ್ಲೋತ್ತರ ಮೂಲ ಸೌಕರ್ಯ ಸೌಲಭ್ಯ ಪಡೆಯಲು ಗರಿಷ್ಠ ಯೋಜನಾ ವರದಿಯ ಶೇ.33 ರಷ್ಟು ಅಥವಾ ರೂ.9.99 ಲಕ್ಷಕ್ಕೆ ಮೀರದಂತೆ ಅನುದಾನವನ್ನು ನೀಡಲಾಗುವುದು. ಸದರಿ ಯೋಜನೆಯ ಘಟಕದಡಿ ಕಟ್ಟಡ ವೆಚ್ಚ ಮತ್ತು ಭೂಮಿ ಬಾಡಿಗೆಯನ್ನು ಪರಿಗಣಿಸಲಾಗುವುದಿಲ್ಲ.

ಸದರಿ ಯೋಜನೆಯಡಿ ಸೌಲಭ್ಯ ಪಡೆಯಲು ಸರ್ಕಾರ / ಸರ್ಕಾರೇತರ ಸಂಸ್ಥೆಗಳು, FPOs ಗಳು ಜುಲೈ 04 ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿರುತ್ತದೆ. ಯೋಜನೆಯ ಮಾರ್ಗಸೂಚಿಯನ್ವಯ ಜಿಲ್ಲಾ ಕಾರ್ಯಕಾರಿ ಸಮಿತಿಯಲ್ಲಿ ಫಲಾನುಭವಿ ಆಯ್ಕೆ ನಡೆಸಲಾಗುವುದು. ಹೆಚ್ಚಿನ ಮಾಹಿತಿಗಾಗಿ ಜಂಟಿ ಕೃಷಿ ನಿರ್ದೇಶಕರ ಕಛೇರಿ, ಉಪ ಕೃಷಿ ನಿರ್ದೇಶಕರ ಕಛೇರಿ ಅಥವಾ ಸಹಾಯಕ ಕೃಷಿ ನಿರ್ದೇಶಕರ ಕಛೇರಿಗಳನ್ನು ಸಂಪರ್ಕಿಸುವಂತೆ ಜಂಟಿ ಕೃಷಿ ನಿರ್ದೇಶಕರು ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

 

Continue Reading

Trending