ದಿನದ ಸುದ್ದಿ
ನುಡಿದಂತೆ ನಡೆದ ಸರ್ಕಾರಕ್ಕೆ 2 ವರ್ಷ | ಮೇ 20 ರಂದು ಹೊಸಪೇಟೆಯಲ್ಲಿ ಸಮರ್ಪಣಾ ಸಂಕಲ್ಪ ಸಮಾವೇಶ ; 1.03 ಲಕ್ಷ ಹಕ್ಕುಪತ್ರ ವಿತರಣೆ : ಸಿಎಂ ಸಿದ್ದರಾಮಯ್ಯ
1.03 ಲಕ್ಷಕ್ಕೂ ಹೆಚ್ಚು ಫಲಾನುಭವಿಗಳಿಗೆ ಹಕ್ಕುಪತ್ರ ವಿತರಣೆ: ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಅವರಿಂದ ಸ್ಥಳ ಪರಿಶೀಲನೆ
ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ
ಸುದ್ದಿದಿನ,ಬಳ್ಳಾರಿ:ರಾಜ್ಯ ಸರ್ಕಾರವು 2 ವ಼ರ್ಷ ಪೂರೈಸಿದ ಹಿನ್ನೆಲೆಯಲ್ಲಿ ಇದೇ ಮೇ 20 ರಂದು ವಿಜಯನಗರ ಜಿಲ್ಲೆಯ ಹೊಸಪೇಟೆಯ ಜಿಲ್ಲಾ ಕ್ರೀಡಾಂಗಣದಲ್ಲಿ ಸಮರ್ಪಣಾ ಸಂಕಲ್ಪ ಸಮಾವೇಶ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರೆ ನೀಡಿದರು.
ಕಾರ್ಯಕ್ರಮ ಆಯೋಜನೆ ಕುರಿತಂತೆ, ಶುಕ್ರವಾರ ಹೊಸಪೇಟೆಯ ಜಿಲ್ಲಾ ಕ್ರೀಡಾಂಗಣಕ್ಕೆ ಆಗಮಿಸಿ ಸ್ಥಳ ಪರಿಶೀಲನೆ ನಡೆಸಿ ಬಳಿಕ ಮಾಧ್ಯಮದವರೊಂದಿಗೆ ಅವರು ಮಾತನಾಡಿದರು.
2023 ರ ಮೇ 20 ರಂದು ರಾಜ್ಯ ಸರ್ಕಾರವು ಅಸ್ತಿತ್ವಕ್ಕೆ ಬಂದು ಈಗ ಎರಡು ವರ್ಷ ಪೂರೈಸುತ್ತಿದೆ. ಅಂದೇ ಕ್ಯಾಬಿನೆಟ್ ಸಭೆಯಲ್ಲಿ ಪಂಚ ಗ್ಯಾರಂಟಿ ಜಾರಿಗೆ ಕುರಿತಂತೆ ಚರ್ಚಿಸಲಾಗಿತ್ತು. ಪ್ರಥಮವಾಗಿ ಶಕ್ತಿ ಯೋಜನೆ, ಅನ್ನಭಾಗ್ಯ, ಗೃಹಜ್ಯೋತಿ, ಗೃಹಲಕ್ಷಿö್ಮ ಮತ್ತು ಯುವನಿಧಿ ಸೇರಿದಂತೆ ಹಂತ-ಹAತವಾಗಿ ಜಾರಿಗೆ ತಂದು ನುಡಿದಂತೆ ನಡೆದಿದ್ದೇವೆ ಎಂದು ಅವರು ಹೇಳಿದರು.
ಕಳೆದ ವಿಧಾನಸಭೆ ಚುನಾವಣೆ ಮತ್ತು ಉಪಚುನಾವಣೆಯಲ್ಲಿ ಬಹುಮತದಿಂದ ಆರಿಸಿ ಗೆಲ್ಲಿಸಿದಂತಹ ಪ್ರಜಾಪ್ರಭುತ್ವದ ಮತದಾರರಿಗೆ ನಮ್ಮ ಸರ್ಕಾರವು ಚುನಾವಣೆ ಪ್ರಣಾಳಿಕೆಯಲ್ಲಿ ಘೋಷಿಸಿದಂತೆ, ಕೊಟ್ಟ ಮಾತಿನಂತೆ ಪಂಚ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿದ್ದೇವೆ ಎಂದರು.
ರಾಜ್ಯದಲ್ಲಿ ಅಭಿವೃದ್ಧಿ ಕಾರ್ಯಗಳಿಗೆ ಹಣವಿಲ್ಲ ಎಂದು ಹಲವರು ಟೀಕಿಸುತ್ತಿದ್ದಾರೆ. ಈಗಾಗಲೇ ಗ್ಯಾರಂಟಿ ಯೋಜನೆಗಳಿಗೆ 90 ಸಾವಿರ ಕೋಟಿ ರೂ. ಖರ್ಚು ಮಾಡಲಾಗಿದೆ. 2024-25 ನೇ ಸಾಲಿನಲ್ಲಿ 51 ಸಾವಿರ ಕೋಟಿ ರೂ. ಗಳನ್ನು ಅಭಿವೃದ್ಧಿ ಕಾರ್ಯಗಳಿಗೆ ವಿನಿಯೋಗಿಸಲಾಗಿದೆ. ಕಳೆದ ವಷÀð ಗ್ಯಾರಂಟಿ ಯೋಜನೆಗಳಿಗಾಗಿಯೇ 52.9 ಸಾವಿರ ಕೋಟಿ ರೂ. ಮೀಸಲಿಡಲಾಗಿತ್ತು. ಈ ವರ್ಷ 50.18 ಸಾವಿರ ಕೋಟಿ ರೂ. ಮೀಸಲಿಡಲಾಗಿದೆ, ಅಗತ್ಯಬಿದ್ದಲ್ಲಿ ಇನ್ನು ಹೆಚ್ಚಿನ ಅನುದಾನ ನೀಡಲಾಗುವುದು.
2024-25 ನೇ ಸಾಲಿನಲ್ಲಿ 3,71,000 ಕೋಟಿ ರೂ. ಬಜೆಟ್ ಗಾತ್ರವಿತ್ತು. 2025-26 ನೇ ಸಾಲಿನಲ್ಲಿ ಬಜೆಟ್ ನ ಗಾತ್ರವನ್ನು 4,09,000 ಕೋಟಿ ರೂ. ಗೆ ಹೆಚ್ಚಿಸಲಾಗಿದೆ. ಅಂದರೆ ಸುಮಾರು 38,000 ಕೋಟಿ ರೂ. ಹೆಚ್ಚಳವಾಗಿದೆ ಎಂದು ತಿಳಿಸಿದ ಮುಖ್ಯಮಂತ್ರಿಗಳು, ನುಡಿದಂತೆ ನಡೆದ ಸರ್ಕಾರ ನಮ್ಮದು ಅಭಿವೃದ್ಧಿ ಕಾರ್ಯಗಳಿಗೆ ಯಾವುದೇ ರೀತಿಯ ಅನುದಾನದ ಕೊರತೆ ಇಲ್ಲ. ನಮ್ಮ ಸರ್ಕಾರ ಜಾರಿಗೊಳಿಸಿದ ಗ್ಯಾರಂಟಿ ಯೋಜನೆಗಳು ದೇಶಕ್ಕೆ ಮಾದರಿಯಾಗಿವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಕೆಕೆಆರ್ಡಿಬಿ ಗೆ 5 ಸಾವಿರ ಕೋಟಿ ರೂ
ಕಲ್ಯಾಣ ಕರ್ನಾಟಕ ಭಾಗದ ಏಳು ಜಿಲ್ಲೆಗಳ ಅಭಿವೃದ್ಧಿಗೆ ನಮ್ಮ ರಾಜ್ಯ ಸರ್ಕಾರವು 5 ಸಾವಿರ ಕೋಟಿ ರೂ. ನೀಡಿದೆ. ಈ ಭಾಗದ 371 (ಜೆ) ವಿಶೇಷ ಸ್ಥಾನಮಾನವನ್ನು ನಮ್ಮ ಸರ್ಕಾರವೇ ಜಾರಿಗೊಳಿಸಿದ್ದು ಎಂದು ಮನನ ಮಾಡಿದ ಅವರು, ಕೇಂದ್ರ ಸರ್ಕಾರವು ತಿದ್ದುಪಡಿ ಬಳಿಕ ವಿಶೇಷ ಸ್ಥಾನಮಾನ ನೀಡಲು ಪ್ರತಿಬಿಂಬಿಸಿತ್ತು, ಆದರೆ ಈವರೆಗೆ ಒಂದು ರೂ. ಕೂಡ ನೀಡಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಕಳೆದ ಸರ್ಕಾರವು ವಸತಿ ಯೋಜನೆಯಡಿ ಒಂದೇ ಒಂದು ಮನೆ ನೀಡಲಾಗಲಿಲ್ಲ, ಈ ಬಾರಿ ವಸತಿ ಯೋಜನೆಯಡಿ ಮನೆ ವಿತರಿಸುವ ಕುರಿತಂತೆ ವಸತಿ ಸಚಿವರು ಪ್ರಸ್ತಾಪಿಸಿದ್ದಾರೆ ಎಂದರು.
1.03 ಲಕ್ಷ ಹಕ್ಕುಪತ್ರ ವಿತರಣೆ
ನಮ್ಮ ಸರ್ಕಾರವು ಎರಡು ವರ್ಷ ಪೂರೈಸುತ್ತಿರುವ ಹಿನ್ನಲೆಯಲ್ಲಿ ನುಡಿದಂತೆ ನಡೆದ ಸರ್ಕಾರ ನಮ್ಮದಾಗಿದ್ದು, ಇನ್ನುಮುಂದೆಯೂ ನಡೆಯುತ್ತೇವೆ ಎಂದು ಜನರಿಗೆ ತಿಳಿಯಪಡಿಸಲು ಮೇ 20 ರಂದು ನಡೆಯುವ ಸಮರ್ಪಣಾ ಸಂಕಲ್ಪ ಸಮಾವೇಶ ಕಾರ್ಯಕ್ರಮದಲ್ಲಿ ಹಾಡಿ, ಹಟ್ಟಿ ಮತ್ತು ತಾಂಡಾ ಪ್ರದೇಶದ ಕನಿಷ್ಠ 1.03 ಲಕ್ಷ ಫಲಾನುಭವಿಗಳಿಗೆ ಕಂದಾಯ ಇಲಾಖೆಯಿಂದ ಹಕ್ಕುಪತ್ರಗಳನ್ನು ವಿತರಣೆ ಮಾಡಲಾಗುತ್ತದೆ. ಇದರಿಂದ ಜನರಿಗೆ ಸೌಲಭ್ಯ ಸಮರ್ಪಿಸುವ ಸಮರ್ಪಣಾ ಸಂಕಲ್ಪ ಸಮಾವೇಶ ಕಾರ್ಯಕ್ರಮ ಇದಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಅವರು ಹೇಳಿದರು.
ಕಾರ್ಯಕ್ರಮಕ್ಕೆ ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ವಿರೋಧ ಪಕ್ಷದ ನಾಯಕರು, ಶಾಸಕರುಗಳನ್ನು ಸಹ ಆಹ್ವಾನಿಸಲಾಗಿದೆ. ಕಾರ್ಯಕ್ರಮದಲ್ಲಿ ರಾಜ್ಯದ ವಿವಿಧ ಜಿಲ್ಲೆಗಳಿಂದ ಫಲಾನುಭವಿಗಳನ್ನು ಕರೆತರಲಾಗುವುದು. ಕನಿಷ್ಠ 3 ಲಕ್ಷಕ್ಕೂ ಹೆಚ್ಚಿನ ಸಂಖ್ಯೆಯಲ್ಲಿ ಜನಸ್ತೋಮ ಸೇರುವ ನಿರೀಕ್ಷೆ ಹೊಂದಲಾಗಿದೆ. ಇದಕ್ಕೆ ಬೇಕಾದ ಅಗತ್ಯ ವ್ಯವಸ್ಥೆ ಕೈಗೊಳ್ಳಲಾಗುತ್ತಿದೆ ಎಂದು ಅವರು ತಿಳಿಸಿದರು.
ಈ ಸಂದರ್ಭದಲ್ಲಿ ಉಪಮುಖ್ಯಮಂತ್ರಿ ಹಾಗೂ ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್, ವಸತಿ, ವಕ್ಫ್ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಬಿ. ಝೆಡ್.ಜಮೀರ್ ಅಹ್ಮದ್ ಖಾನ್, ಕಾನೂನು, ನ್ಯಾಯ, ಮಾನವ ಹಕ್ಕುಗಳು, ಸಂಸದೀಯ ವ್ಯವಹಾರಗಳು, ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವ ಡಾ.ಹೆಚ್.ಕೆ.ಪಾಟೀಲ್, ಕಂದಾಯ ಸಚಿವ ಕೃಷ್ಣ ಬೈರೇಗೌಡ, ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ ತಂಗಡಗಿ, ಕೃಷಿ ಸಚಿವ ಎನ್.ಚಲುವರಾಯಸ್ವಾಮಿ, ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್, ಸಣ್ಣನೀರಾವರಿ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್.ಎಸ್.ಭೋಸರಾಜು, ಸಂಸದ ಈ.ತುಕಾರಾಮ್, ಶಾಸಕರಾದ ಹೆಚ್.ಆರ್.ಗವಿಯಪ್ಪ, ಬಿ.ನಾಗೇಂದ್ರ, ಜೆ.ಎನ್.ಗಣೇಶ್, ಎಂ.ಪಿ.ಲತಾ, ಶ್ರೀನಿವಾಸ ನಾಯ್ಕ ಮತ್ತು ಜಿಲ್ಲಾಧಿಕಾರಿಗಳಾದ ಎಂ.ಎಸ್.ದಿವಾಕರ, ಪ್ರಶಾಂತ್ ಕುಮಾರ್ ಮಿಶ್ರಾ, ಜಿಪಂ ಸಿಇಒ ಮಹಮ್ಮದ್ ಹ್ಯಾರೀಸ್ ಸುಮೈರ್, ಮೊಹಮದ್ ನೊಂಗ್ಜಾಯ್ ಅಕ್ರಂ ಅಲಿ ಪಾಷಾ, ಎಸ್ಪಿಗಳಾದ ಡಾ.ಶೋಭರಾಣಿ.ವಿ.ಜೆ., ಶ್ರೀಹರಿಬಾಬು ಸೇರಿದಂತೆ ಅನೇಕರು ಹಾಜರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಚಿತ್ರದುರ್ಗ | ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯ ಡಿ.ಡಿ ಬಿ.ಮಲ್ಲಿಕಾರ್ಜುನ, ಕ್ರೈಸ್ ಇ.ಡಿ ಬಿ.ಶಿವಸ್ವಾಮಿ ವಿರುದ್ಧ ಲೋಕಾಗೆ ದೂರು
ಸುದ್ದಿದಿನ,ಚಿತ್ರದುರ್ಗ: ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯ ವ್ಯಾಪ್ತಿಗೆ ಒಳಪಡುವ ವಸತಿ ಶಾಲೆಗಳಿಗೆ (ಕ್ರೈಸ್) ನಿಯಮಾನುಸಾರ ಆಹಾರ ಸಾಮಾಗ್ರಿಗಳನ್ನು ಸರಬರಾಜು ಮಾಡದೆ ವಂಚಿಸುತ್ತಿರುವ ಶ್ರೀ ಶಿರಡಿ ಪ್ರಾವಿಜನ್ ಸ್ಟೋರ್, ಚಿಕ್ಕಬಳ್ಳಾಪುರ ಇವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ದೂರು ನೀಡಿ ನಿಗಧಿತ ಅವಧಿ ಮುಕ್ತಾಯವಾದರೂ ಯಾವುದೇ ಕ್ರಮ ಕೈಗೊಳ್ಳದೆ ನಿರ್ಲಕ್ಷ್ಯ ತೋರಿದ ಚಿತ್ರದುರ್ಗ ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಬಿ. ಮಲ್ಲಿಕಾರ್ಜುನ ಹಾಗೂ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ ಇದರ ಕಾರ್ಯನಿರ್ವಾಹಕ ನಿರ್ದೇಶಕರಾದ ಬಿ.ಶಿವಸ್ವಾಮಿ ವಿರುದ್ಧ ಕರ್ತವ್ಯ ಲೋಪದ ಅಡಿಯಲ್ಲಿ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಲೋಕಾಯುಕ್ತದಲ್ಲಿ ದೂರು ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.
ಚಿತ್ರದುರ್ಗ ಜಿಲ್ಲಾ ವ್ಯಾಪ್ತಿಯ ವಸತಿ ಶಾಲೆಗಳಿಗೆ ಅಧಿಕೃತ ಟೆಂಡರುದಾರರಾದ ಶ್ರೀ ಶಿರಡಿ ಸಾಯಿ ಪ್ರಾವಿಜನ್ ಸ್ಟೋರ್, ಚಿಕ್ಕಬಳ್ಳಾಪುರ ಇವರು ನಿಯಮಾನುಸಾರ ಆಹಾರ ಸಾಮಾಗ್ರಿಗಳನ್ನು ವಿತರಣೆ ಮಾಡದೆ ಇರುವ ಅಧಿಕೃತ ಮಾಹಿತಿ ತಿಳಿದು, ಸಮಾಜ ಕಲ್ಯಾಣ ಇಲಾಖೆ ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ, ಚಿತ್ರದುರ್ಗ ಇವುಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ವಸತಿ ಶಾಲೆಗಳ ಪ್ರಾಂಶುಪಾಲರುಗಳಿAದ ಮಾಹಿತಿಹಕ್ಕು ಅಡಿಯಲ್ಲಿ ಪಡೆದ ದೃಢೀಕೃತ ದಾಖಲೆಗಳನ್ನು ಪರಿಶೀಲನೆ ಮಾಡಿದಾಗ ಆಹಾರ ಸಾಮಾಗ್ರಿ ಸರಬರಾಜಿನಲ್ಲಿ ಹಲವಾರು ಲೋಪದೋಷಗಳು ಕಂಡು ಬಂದಿರುತ್ತವೆ.
ಆದ ಕಾರಣ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಉಪ ನಿರ್ದೇಶಕರು, ಜಿಲ್ಲಾ ಸಮಾಜ ಕಲ್ಯಾಣ ನಾವು ದೂರು ನೀಡಿ ನಿಗಧಿತ ಅವಧಿ ಮುಕ್ತಾಯವಾದರೂ ಯಾವುದೇ ಪ್ರತ್ಯುತ್ತರವನ್ನಾಗಲಿ ಅಥವಾ ಹಿಂಬರಹವನ್ನಾಗಲಿ ನೀಡದೆ ಇರುವ ಕಾರಣ ದಿನಾಂಕ: 21-04-2026 ರಂದು ಜ್ಞಾಪನವನ್ನು ನೀಡಲಾಗಿತ್ತು. ಆದರೆ ಜ್ಞಾಪನ ನೀಡಿ ನಿಗಧಿತ ಅವಧಿ ಮುಕ್ತಾಯವಾದರೂ ಉಪ ನಿರ್ದೇಶಕರು, ಜಿಲ್ಲಾ ಸಮಾಜ ಕಲ್ಯಾಣ ಇಲಾಖೆ, ಚಿತ್ರದುರ್ಗ ದೂರು ಅರ್ಜಿಗೆ ಸಂಬAಧಿಸಿದAತೆ ತನಿಖಾ ವರದಿಯನ್ನಾಗಲಿ ಅಥವಾ ಪ್ರತ್ಯುತ್ತರವನ್ನಾಗಲಿ ನೀಡಿರುವುದಿಲ್ಲ.
ಈ ಬಗ್ಗೆ ಕಾರ್ಯನಿರ್ವಾಹಕ ನಿರ್ದೇಶಕರು, ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ, ಬೆಂಗಳೂರು ಇವರಿಗೆ ದೂರು ನೀಡಲಾಗಿತ್ತು. ಆದರೆ ಇವರು ಕೂಡ ಯಾವುದೇ ಕ್ರಮ ಕೈಗೊಳ್ಳದ ಹಿನ್ನೆಲೆಯಲ್ಲಿ ಕರ್ತವ್ಯ ಲೋಪ ಎಸಗಿದ ಅಧಿಕಾರಿಗಳ ವಿರುದ್ದ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಲೋಕಾಯುಕ್ತದಲ್ಲಿ ದೂರು ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ನಾಳೆ ʼನಿರಾಕಾರ ವಿಶ್ವಕರ್ಮʼ ಕೃತಿ ಬಿಡುಗಡೆ
ಸುದ್ದಿದಿನ,ಬೆಂಗಳೂರು:ಕಾವ್ಯಸ್ಪಂದನ ಪ್ರಕಾಶನವು ಪ್ರಕಟಿಸಿರುವ ಪತ್ರಕರ್ತ, ಲೇಖಕ ಚಂದ್ರಶೇಖರ ಗಂಧನಹಳ್ಳಿ ಅವರ ʼನಿರಾಕಾರ ವಿಶ್ವಕರ್ಮʼ ಕೃತಿಯು ಸೆಪ್ಟೆಂಬರ್ 17ರಂದು ಬಿಡುಗಡೆಯಾಗಲಿದೆ. ಅಂದು ಬೆಳಗ್ಗೆ 10.30ಕ್ಕೆ ಮೈಸೂರು ಜಿಲ್ಲೆ, ಕೆ.ಆರ್.ನಗರ ತಾಲೂಕು ಆಡಳಿತ ಕಚೇರಿಯ ಸಭಾಂಗಣದಲ್ಲಿ ತಾಲೂಕು ಆಡಳಿತದ ಆಶ್ರಯ, ತಾಲೂಕು ವಿಶ್ವಕರ್ಮ ಸೇವಾ ಸಮಾಜ ಹಾಗೂ ತಾಲೂಕು ವಿಶ್ವಕರ್ಮ ಸಂಘದ ಜಂಟಿ ವತಿಯಿಂದ ಆಯೋಜಿಸಿರುವ ‘ವಿಶ್ವಕರ್ಮ ಜಯಂತಿ’ ಕಾರ್ಯಕ್ರಮದಲ್ಲಿ ಶಾಸಕರಾದ ಡಿ. ರವಿಶಂಕರ್ ಅವರು ಕೃತಿಯನ್ನು ಲೋಕಾರ್ಪಣೆ ಮಾಡಲಿದ್ದಾರೆ.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ತಹಶೀಲ್ದಾರ್ ಜಿ. ಸುರೇಂದ್ರ ಮೂರ್ತಿ ಅವರು ವಹಿಸಲಿದ್ದಾರೆ. ತಾಲೂಕು ವಿಶ್ವಕರ್ಮ ಸೇವಾ ಸಮಾಜದ ಅಧ್ಯಕ್ಷ ರೇವಣ್ಣ, ತಾಲೂಕು ವಿಶ್ವಕರ್ಮ ಸಂಘದ ಅಧ್ಯಕ್ಷ ವೇಣುಗೋಪಾಲ್ ಎನ್., ಪದಾಧಿಕಾರಿಗಳಾದ ಈಶ್ವರಾಚಾರ್, ಚೇತನ್ ಮೂರ್ತಿ ಸೇರಿದಂತೆ ವಿಶ್ವಕರ್ಮ ಸಮುದಾಯದ ಮುಖಂಡರು ಹಾಗೂ ತಾಲೂಕು ಆಡಳಿತದ ಅಧಿಕಾರಿಗಳು ಉಪಸ್ಥಿತರಿರಲಿದ್ದಾರೆ. ವೇದಿಕೆ ಕಾರ್ಯಕ್ರಮಕ್ಕೂ ಮುನ್ನ ಶ್ರೀ ಕಾಳಿಕಾಂಬಾ ದೇವಾಲಯದಲ್ಲಿ ವಿಶ್ವಕರ್ಮ ಜಯಂತಿ ಪ್ರಯುಕ್ತ ವಿಶೇಷ ಪೂಜೆ ನೆರವೇರಲಿದ್ದು, ಬಳಿಕ ಅಲ್ಲಿಂದ ತಾಲೂಕು ಆಡಳಿತ ಕಚೇರಿಯವರೆಗೆ ಮೆರವಣಿಗೆ ನಡೆಯಲಿದೆ.
ವಿಶೇಷವೆಂದರೆ, ಪ್ರಕಾಶಕರು ಹಾಗೂ ಆಯೋಜಕರ ಆಸಕ್ತಿಯ ಮೇರೆಗೆ ‘ನಿರಾಕಾರ ವಿಶ್ವಕರ್ಮ’ ಕೃತಿಯನ್ನು ತಿಂಗಳ ಅಂತರದಲ್ಲಿ ಮೂರು ಪ್ರತ್ಯೇಕ ಕಾರ್ಯಕ್ರಮಗಳಲ್ಲಿ ಬಿಡುಗಡೆ ಮಾಡಲಾಗುತ್ತಿದೆ. ಸೆಪ್ಟೆಂಬರ್ 17ರಂದು ಕೆ.ಆರ್.ನಗರದಲ್ಲಿ ಕೃತಿ ಬಿಡುಗಡೆಯಾದರೆ, ಸೆಪ್ಟೆಂಬರ್ 20ರಂದು ಬೆಂಗಳೂರಿನ ತಾತಗುಣಿಯ ವಿಶ್ವಕರ್ಮ ನಗರದಲ್ಲಿ ಕರ್ನಾಟಕ ರಾಜ್ಯ ವಿಶ್ವಕರ್ಮ ಮಹಾಮಂಡಳಿಯ ವತಿಯಿಂದ ಹಮ್ಮಿಕೊಂಡಿರುವ ಕಾರ್ಯಕ್ರಮದಲ್ಲಿ ಕೃತಿ ಲೋಕಾರ್ಪಣೆಗೊಳ್ಳಲಿದೆ. ಹಾಗೆಯೇ, ನವೆಂಬರ್ 22ರಂದು ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಕನ್ನಡ ಸಾಹಿತ್ಯ ಪರಿಷತ್ತಿನ ಸಭಾಂಗಣದಲ್ಲಿ ಕಾವ್ಯಸ್ಪಂದನ ಪ್ರಕಾಶನ ಏರ್ಪಡಿಸಿರುವ ಕಾರ್ಯಕ್ರಮದಲ್ಲಿಯೂ ಈ ಕೃತಿ ಬಿಡುಗಡೆಯಾಗಲಿದೆ.
ಮಾನವ ನಾಗರಿಕತೆಯ ಇತಿಹಾಸವನ್ನು ತೆರೆದರೆ, ಅದರ ಪ್ರತಿಯೊಂದು ಪುಟದ ಹಿಂದೆಯೂ ಶ್ರಮಿಸಿದ ಅನಾಮಿಕ ಕೈಗಳು ಕಾಣಿಸುತ್ತವೆ. ಆ ಕೈಗಳು ಕಲ್ಲನ್ನು ಕೆತ್ತಿ ದೇವಸ್ಥಾನವಾಗಿಸಿವೆ, ಕಬ್ಬಿಣವನ್ನು ಬಡಿದು ಆಯುಧವಾಗಿಸಿವೆ, ಮರಕ್ಕೆ ರೂಪ ಕೊಟ್ಟು ಬಾಗಿಲಾಗಿಸಿವೆ, ಮಣ್ಣಿಗೆ ಜೀವ ತುಂಬಿ ಮಡಕೆಯಾಗಿಸಿವೆ; ಹಾಗೆಯೇ ಬಣ್ಣಗಳ ಮೂಲಕ ಅಚ್ಚಳಿಯದ ಭಾವನೆಗಳನ್ನು ಮೂಡಿಸಿವೆ. ಆ ಸೃಷ್ಟಿಶೀಲ ಕೈಗಳಿಗೆ ಬಹುಶಃ ಇತಿಹಾಸದ ಅಧಿಕೃತ ಪುಟಗಳಲ್ಲಿ, ರಾಜ-ಮಹಾರಾಜರ ಕಥೆಗಳ ನಡುವೆ ದೊಡ್ಡ ಅಕ್ಷರಗಳಲ್ಲಿ ಹೆಸರು ಸಿಕ್ಕಿಲ್ಲದಿರಬಹುದು. ಆದರೆ ಅವರು ನಿರ್ಮಿಸಿದ ಕಲೆ, ಶಿಲ್ಪ, ವಾಸ್ತು, ಉಪಕರಣ ಮತ್ತು ಸೌಂದರ್ಯವೇ ನಮ್ಮ ನಾಗರಿಕತೆಯ ಉಸಿರಾಗಿ, ಜೀವಂತ ಸಾಕ್ಷಿಗಳಾಗಿ ಇಂದಿಗೂ ಉಳಿದಿವೆ. ಅಂತಹ ಸೃಜನಶೀಲ ಕೈಗಳ ಸಮೂಹ ಸ್ಮೃತಿಯನ್ನು, ಪರಂಪರೆಯನ್ನು ಮತ್ತು ಇತಿಹಾಸವನ್ನು ಅರಿಯುವ ಅರ್ಥಪೂರ್ಣ ಪ್ರಯತ್ನವನ್ನು ನಿರಾಕಾರ ವಿಶ್ವಕರ್ಮ ಕೃತಿಯಲ್ಲಿ ಲೇಖಕರಾದ ಚಂದ್ರಶೇಖರ ಗಂಧನಹಳ್ಳಿ ಅವರು ಮಾಡಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಗೃಹ ಜ್ಯೋತಿ ಯೋಜನೆಗೆ 3 ವರ್ಷಗಳ ಸಂಭ್ರಮ – 1.65 ಕೋಟಿ ಕುಟುಂಬಗಳ ಬದುಕಿಗೆ ಬೆಳಕು!
ಸುದ್ದಿದಿನ, ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹ ಜ್ಯೋತಿ ಯೋಜನೆ ತನ್ನ 3 ವರ್ಷಗಳ ಸಾರ್ಥಕ ಪಯಣವನ್ನು ಪೂರ್ಣಗೊಳಿಸಿದೆ. `ಕುಟುಂಬಗಳ ಆರ್ಥಿಕ ಸಬಲೀಕರಣಕ್ಕೆ ಸಹಕಾರ’ ಎಂಬ ಧ್ಯೇಯದೊಂದಿಗೆ ಆರಂಭವಾದ ಈ ಯೋಜನೆ ಇಂದು ಕೋಟ್ಯಂತರ ಕುಟುಂಬಗಳ ಬದುಕಿಗೆ ಬೆಳಕಾಗಿದೆ.
ಹೌದು! 2023ರ ಆಗಸ್ಟ್ನಲ್ಲಿ ಜಾರಿಗೆ ಬಂದ ಈ ಯೋಜನೆಯಡಿ ರಾಜ್ಯದ ಪ್ರತಿಯೊಂದು ಕುಟುಂಬಕ್ಕೂ ಪ್ರತಿ ತಿಂಗಳು 200 ಯೂನಿಟ್ಗಳವರೆಗೆ ಉಚಿತ ವಿದ್ಯುತ್ ನೀಡಲಾಗುತ್ತಿದ್ದು, ಬಡ ಮತ್ತು ಮಧ್ಯಮ ವರ್ಗದ ಕುಟುಂಬಗಳ ಮಾಸಿಕ ಬಜೆಟ್ಗೆ ದೊಡ್ಡ ಆಸರೆಯಾಗಿದೆ ಎಂದೇ ಹೇಳಬಹುದು.
http://Visit : www.suddidina.com
ಗೃಹಜ್ಯೋತಿ ಯೋಜನೆಯ ಸಾಧನೆಯ ಗಿರಿ:
ಇಂಧನ ಇಲಾಖೆ ಬಿಡುಗಡೆ ಮಾಡಿರುವ ಮಾಹಿತಿ ಪ್ರಕಾರ, ರಾಜ್ಯದ್ಯಂತ ಬರೋಬ್ಬರಿ 1.65 ಕೋಟಿ. ಫಲಾನುಭವಿಗಳು ಕುಟುಂಬಗಳು ಯೋಜನೆಯ ಪ್ರಯೋಜನ ಪಡೆದುಕೊಳ್ಳುತ್ತಿದ್ದರೆ, ಸೇವಾಸಿಂಧು ಪೋರ್ಟಲ್ನಲ್ಲಿ ಒಟ್ಟು 1,76,69,368 ಜನರು ನೋಂದಾಯಿಸಿಕೊಂಡಿದ್ದರೆ. ಒಟ್ಟು 2,06,65,451 ಗೃಹಬಳಕೆ ವಿದ್ಯುತ್ ಗ್ರಾಹಕರಿದ್ದಾರೆ. ಅಂದರೆ ಶೇ.85ಕ್ಕಿಂತ ಹೆಚ್ಚು ಗ್ರಾಹಕರು ಈ ಯೋಜನೆಯಡಿ ನೋಂದಾಯಿಸಿಕೊಂಡು ಲಾಭ ಪಡೆಯುತ್ತಿದ್ದಾರೆ.
ಆರ್ಥಿಕವಾಗಿ ನೋಡುವುದಾದರೆ, 2023ರ ಆಗಸ್ಟ್ನಿಂದ 2026ರ ಜುಲೈ ವರೆಗೆ, ಕಳೆದ ಮೂರು ವರ್ಷಗಳಲ್ಲಿ ಸರ್ಕಾರವು ಫಲಾನುಭವಿಗಳಿಗೆ ಒಟ್ಟು ₹28,759.54 ಕೋಟಿ ರೂಪಾಯಿ ಸಬ್ಸಿಡಿ ಬಿಡುಗಡೆ ಮಾಡಿದೆ. ಇದು ಸರ್ಕಾರದ ಬದ್ಧತೆ ಮತ್ತು ಜನಪರ ಕಾಳಜಿಗೆ ಹಿಡಿದ ಕನ್ನಡಿಯಾಗಿದೆ.
ಕುಟುಂಬದ ಬಜೆಟ್ಗೆ ಆಸರೆ, ಉಜ್ವಲ ಭವಿಷ್ಯಕ್ಕೆ ಬುನಾದಿ:
ಪ್ರತಿ ತಿಂಗಳು 1000 ದಿಂದ 1500 ರೂಪಾಯಿಗಳವರೆಗೆ ವಿದ್ಯುತ್ ಬಿಲ್ ಕಟ್ಟುತ್ತಿದ್ದ ಸಾಮಾನ್ಯ ಕುಟುಂಬಗಳಿಗೆ ಈಗ ಆ ಹಣ ಸಂಪೂರ್ಣವಾಗಿ ಉಳಿತಾಯವಾಗುತ್ತಿದೆ. ಈ ಉಳಿತಾಯದ ಹಣವನ್ನು ಅವರು ಮಕ್ಕಳ ಶಿಕ್ಷಣ, ಆರೋಗ್ಯ ಮತ್ತು ಇತರ ಅಗತ್ಯಗಳಿಗೆ ಬಳಸಿಕೊಳ್ಳುತ್ತಿದ್ದಾರೆ. ವಿಶೇಷವಾಗಿ ಗೃಹಿಣಿಯರಿಗೆ ಇದು ಆರ್ಥಿಕವಾಗಿ ದೊಡ್ಡ ನೆರವಾಗಿದೆ.
ಕೇವಲ ಉಚಿತ ವಿದ್ಯುತ್ ನೀಡುವುದಷ್ಟೇ ಅಲ್ಲ, ಜನರನ್ನು ಆರ್ಥಿಕವಾಗಿ ಸಬಲರನ್ನಾಗಿ ಮಾಡುವುದೇ ಈ ಯೋಜನೆಯ ಮುಖ್ಯ ಗುರಿಯಾಗಿದ್ದು, ರಾಜ್ಯದ ಜನರ ಜೀವನಮಟ್ಟ ಸುಧಾರಿಸಿದೆ. ಗೃಹ ಜ್ಯೋತಿ ಯೋಜನೆಯು ಕೇವಲ ಒಂದು ಯೋಜನೆಯಾಗಿ ಉಳಿಯದೆ, ಕರ್ನಾಟಕದ ಸಾಮಾಜಿಕ ಮತ್ತು ಆರ್ಥಿಕ ಪರಿವರ್ತನೆಯಲ್ಲಿ ಮಹತ್ವದ ಮೈಲಿಗಲ್ಲಾಗಿದೆ. ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಕುಟುಂಬಗಳನ್ನು ಈ ಯೋಜನೆಯಡಿ ತರಲು ಇಂಧನ ಇಲಾಖೆ ಕ್ರಮ ಕೈಗೊಳ್ಳುತ್ತಿದೆ.




