ದಿನದ ಸುದ್ದಿ
ನಾಳೆ ಸೂಪರ್ ಸ್ಪೇಷಾಲಿಟಿ ಟ್ರಾಮಾ ಕೇರ್ಗೆ ಇ-ಲೋಕಾರ್ಪಣೆ : ಸೂಪರ್ ಸ್ಪೇಷಾಲಿಟಿ ಟ್ರಾಮಾಕೇರ್ ಕೇಂದ್ರದ ಬಗೆಗಿಷ್ಟು
- /home/u584543641/domains/suddidina.com/public_html/wp-content/plugins/mvp-social-buttons/mvp-social-buttons.php on line 27
https://suddidina.com/wp-content/uploads/2020/08/hospital_suddidina.jpg&description=ನಾಳೆ ಸೂಪರ್ ಸ್ಪೇಷಾಲಿಟಿ ಟ್ರಾಮಾ ಕೇರ್ಗೆ ಇ-ಲೋಕಾರ್ಪಣೆ : ಸೂಪರ್ ಸ್ಪೇಷಾಲಿಟಿ ಟ್ರಾಮಾಕೇರ್ ಕೇಂದ್ರದ ಬಗೆಗಿಷ್ಟು', 'pinterestShare', 'width=750,height=350'); return false;" title="Pin This Post">
- Share
- Tweet /home/u584543641/domains/suddidina.com/public_html/wp-content/plugins/mvp-social-buttons/mvp-social-buttons.php on line 72
https://suddidina.com/wp-content/uploads/2020/08/hospital_suddidina.jpg&description=ನಾಳೆ ಸೂಪರ್ ಸ್ಪೇಷಾಲಿಟಿ ಟ್ರಾಮಾ ಕೇರ್ಗೆ ಇ-ಲೋಕಾರ್ಪಣೆ : ಸೂಪರ್ ಸ್ಪೇಷಾಲಿಟಿ ಟ್ರಾಮಾಕೇರ್ ಕೇಂದ್ರದ ಬಗೆಗಿಷ್ಟು', 'pinterestShare', 'width=750,height=350'); return false;" title="Pin This Post">
ಸುದ್ದಿದಿನ,ಬಳ್ಳಾರಿ :ಪ್ರಧಾನಮಂತ್ರಿ ಸ್ವಸ್ಥ್ಯ ಸುರಕ್ಷಾ ಯೋಜನೆ ಅಡಿ ರೂ.150ಕೋಟಿ ವೆಚ್ಚದಲ್ಲಿ ನಿರ್ಮಿಸಲಾಗಿರುವ ವಿಜಯನಗರ ವೈದ್ಯಕೀಯ ವಿಜ್ಞಾನ ಸಂಸ್ಥೆಯ ಸೂಪರ್ ಸ್ಪೇಷಾಲಿಟಿ ಟ್ರಾಮಾ ಕೇರ್(ತುರ್ತು ಚಿಕಿತ್ಸಾ ಘಟಕ)ಗೆ ಇ-ಲೋಕಾರ್ಪಣೆ ಆ.31ರಂದು ಬೆಳಗ್ಗೆ 11.30ಕ್ಕೆ ನಡೆಯಲಿದೆ ಎಂದು ವಿಮ್ಸ್ ನಿರ್ದೇಶಕ ಡಾ.ದೇವಾನಂದ ಅವರು ತಿಳಿಸಿದ್ದಾರೆ.
ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಮಂತ್ರಾಲಯದ ಸಚಿವ ಡಾ.ಹರ್ಷವರ್ಧನ್ ಹಾಗೂ ರಾಜ್ಯದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಆ.31ರಂದು ಬೆಳಗ್ಗೆ 11.30ಕ್ಕೆ ಎಲೆಕ್ಟ್ರಾನಿಕ್ ಉದ್ಘಾಟನೆ(ಇ-ಉದ್ಘಾಟನೆ)ಮಾಡಲಿದ್ದಾರೆ. ಕೇಂದ್ರ ಸಚಿವರಿಗೆ ಆರೋಗ್ಯ ಖಾತೆಯ ಕೇಂದ್ರ ರಾಜ್ಯ ಸಚಿವ ಅಶ್ವೀನಿಕುಮಾರ್ ಚೌಬೆ, ಸಿಎಂ ಯಡಿಯೂರಪ್ಪ ಅವರೊಂದಿಗೆ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಅವರು ಉಪಸ್ಥಿತರಿರಲಿದ್ದಾರೆ.
ಬಳ್ಳಾರಿಯ ಟ್ರಾಮಾಕೇರ್ ಕೇಂದ್ರದ ಬಳಿ ನಡೆಯಲಿರುವ ವರ್ಚುವಲ್ ಕಾರ್ಯಕ್ರಮದಲ್ಲಿ ಅರಣ್ಯ,ಪರಿಸರ,ಜೀವವೈವಿಧ್ಯತೆ ಸಚಿವರು ಹಾಗೂ ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಎಸ್.ಆನಂದಸಿಂಗ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಬಿ.ಶ್ರೀರಾಮುಲು ಅವರು ಉಪಸ್ಥಿತರಿರಲಿದ್ದಾರೆ.ಬಳ್ಳಾರಿ ಗ್ರಾಮೀಣ ಶಾಸಕ ಬಿ.ನಾಗೇಂದ್ರ ಅವರು ಅಧ್ಯಕ್ಷತೆ ವಹಿಸಲಿದ್ದಾರೆ.
ಬಳ್ಳಾರಿ ಜಿಪಂ ಅಧ್ಯಕ್ಷೆ ಸಿ.ಭಾರತಿ ತಿಮ್ಮಾರೆಡ್ಡಿ,ಸಂಸದರಾದ ವೈ.ದೇವೇಂದ್ರಪ್ಪ,ಕರಡಿ ಸಂಗಣ್ಣ, ಸೈಯದ್ ನಾಸೀರ್ ಹುಸೇನ್, ಶಾಸಕರಾದಇ.ತುಕಾರಾಂ,ಪಿ.ಟಿ.ಪರಮೇಶ್ವರನಾಯಕ್, ಎನ್.ವೈ.ಗೋಪಾಲಕೃಷ್ಣ, ಎಲ್.ಬಿ.ಪಿ.ಭೀಮಾನಾಯಕ್, ಕೆ.ಸಿ.ಕೊಂಡಯ್ಯ, ಅಲ್ಲಂ ವೀರಭದ್ರಪ್ಪ, ಜಿ.ಕರುಣಾಕರರೆಡ್ಡಿ, ಜಿ.ಸೋಮಶೇಖರ ರೆಡ್ಡಿ, ಸೋಮಲಿಂಗಪ್ಪ, ಜೆ.ಎನ್.ಗಣೇಶ, ಎಸ್.ವಿ.ರಾಮಚಂದ್ರ, ಚಂದ್ರಶೇಖರ ಪಾಟೀಲ್, ತಾಪಂ ಅಧ್ಯಕ್ಷೆ ಎಸ್.ಆರ್.ಲೀಲಾವತಿ, ಬುಡಾ ಅಧ್ಯಕ್ಷ ದಮ್ಮೂರು ಶೇಖರ್ ಅತಿಥಿಗಳಾಗಿ ಆಗಮಿಸಲಿದ್ದಾರೆ.
ಕೇಂದ್ರ ಸರಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಮಂತ್ರಾಲಯದ ಜಂಟಿ ಕಾರ್ಯದರ್ಶಿ ಸುನೀಲ್ ಶರ್ಮಾ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಜಾವೇದ್ ಅಖ್ತರ್, ವೈದ್ಯಕೀಯ ಶಿಕ್ಷಣ ಇಲಾಖೆಯ ಟಿ.ಕೆ.ಅನಿಲಕುಮಾರ್, ಬಳ್ಳಾರಿ ಜಿಲ್ಲಾಧಿಕಾರಿ ಎಸ್.ಎಸ್.ನಕುಲ್, ಎಸ್ಪಿ ಸಿ.ಕೆ.ಬಾಬಾ, ಜಿಪಂ ಸಿಇಒ ಕೆ.ಆರ್.ನಂದಿನಿ, ವೈದ್ಯಕೀಯ ಶಿಕ್ಷಣ ಇಲಾಖೆಯ ನಿರ್ದೇಶಕ ಡಾ.ಪಿ.ಜಿ.ಗಿರೀಶ್ ಅವರು ವಿಶೇಷ ಆಹ್ವಾನಿತರಾಗಿ ಆಗಮಿಸಲಿದ್ದಾರೆ.
ಸೂಪರ್ ಸ್ಪೇಷಾಲಿಟಿ ಟ್ರಾಮಾಕೇರ್ ಕೇಂದ್ರದ ಬಗೆಗಿಷ್ಟು
ವಿಮ್ಸ್ ಸಂಸ್ಥೆಯ ಆಸ್ಪತ್ರೆಯಲ್ಲಿ ತುರ್ತು ಚಿಕಿತ್ಸೆಗಾಗಿ ಬರುವಂತಹ ರೋಗಿಗಳಲ್ಲಿ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿಗೆ ಮತ್ತು ಇತರೆ ಸ್ಥಳಗಳಿಗೆ ಕಳುಹಿಸಲಾಗುತ್ತಿತ್ತು, ಇದರಿಂದ ಸಾರ್ವಜನಿಕರಿಗೆ ಮತ್ತು ರೋಗಿಗಳಿಗೆ ತುಂಬಾ ತೊಂದರೆಯಾಗುತ್ತಿರುವುದನ್ನು ಗಮನಿಸಿದ ಸರ್ಕಾರವು ಈ ನಿಟ್ಟಿನಲ್ಲಿ ವಿಮ್ಸ್ ಸಂಸ್ಥೆಯನ್ನು ಏಮ್ಸ್ ಮಾದರಿಯನ್ನಾಗಿ ಪರಿವರ್ತಿಸಲು ಉನ್ನತೀಕರಣಕ್ಕಾಗಿ ಪ್ರಸ್ತಾವನೆಯನ್ನು ಸಲ್ಲಿಸಿತ್ತು.
ಈ ಪ್ರಸ್ತಾವನೆಗೆ ಕೇಂದ್ರ ಮತ್ತು ರಾಜ್ಯ ಸರ್ಕಾರವು ಸ್ಪಂದಿಸಿ ವಿಮ್ಸ್ ಸಂಸ್ಥೆಯಲ್ಲಿ ಪ್ರಧಾನಮಂತ್ರಿ ಸ್ವಸ್ಥ್ಯ ಸುರಕ್ಷಾ-3 ಯೋಜನೆ ಅಡಿಯಲ್ಲಿ ಟ್ರಾಮಾ ಕೇರ್ ಕೇಂದ್ರ (ತುರ್ತು ಚಿಕಿತ್ಸಾ ಘಟಕವನ್ನು) ಪ್ರಾರಂಭಿಸಲು ಮತ್ತು ಸೂಪರ್ ಸ್ಪೇಷಾಲಿಟಿ ಆಸ್ಪತ್ರೆಗೆ ಅವಶ್ಯಕವಿರುವ ಉಪಕರಣಗಳನ್ನು ಅಳವಡಿಸಲು ಅನುಮೋದನೆ ನೀಡಿತ್ತು.
ಅದರಂತೆ ವಿಮ್ಸ್ ಅಧೀನದಲ್ಲಿ ಪಿಎಂಎಸ್ಎಸ್ವೈ-3 ಯೋಜನೆ ಅಡಿ ಕೇಂದ್ರ ಮತ್ತು ರಾಜ್ಯ ಸರ್ಕಾರದ ಸಂಯೋಗದಲ್ಲಿ ರೂ.150ಕೋಟಿಗಳ ವೆಚ್ಚದಲ್ಲಿ ಸೂಪರ್ ಸ್ಪೇಷಾಲಿಟಿ ಟ್ರಾಮ ಕೇರ್ ಕೇಂದ್ರ ಕಟ್ಟಡ ಮತ್ತು ಹೈಟೆಕ್ ವೈದ್ಯಕೀಯ ಉಪಕರಣಗಳು ಒಳಗೊಂಡ ಯೋಜನೆ ರೂಪಿಸಲಾಗಿರುತ್ತದೆ.
ಕೇಂದ್ರ ಸರ್ಕಾರದ ವತಿಯಿಂದ ರೂ.120ಕೋಟಿಗಳು ಮತ್ತು ರಾಜ್ಯ ಸರ್ಕಾರದ ವತಿಯಿಂದ ರೂ.30 ಕೋಟಿಗಳು(80:20 ಅನುಪಾತದಲ್ಲಿ) ಟ್ರಾಮಾ ಕೇರ್ ಸೆಂಟರ್ನ ಕಟ್ಟಡ ಕಾಮಗಾರಿ, ಉಪಕರಣ ಮತ್ತು ಸೂಪರ್ ಸ್ಪೇಷಾಲಿಟಿ ಆಸ್ಪತ್ರೆಯ ಉಪಕರಣಗಳನ್ನು ಒದಗಿಸಲು ಹೈಟ್ಸ್ ಇವರಿಗೆ ವಹಿಸಲಾಗಿರುತ್ತದೆ. ಕಟ್ಟಡ ಕಾಮಗಾರಿಗೆ ರೂ.65ಕೋಟಿಗಳು ಮತ್ತು ಉಪಕರಣಗಳಿಗೆ ರೂ.85ಕೋಟಿಗಳು(ಟ್ರಾಮಾ ಕೇರ್ ಮತ್ತು ಸೂಪರ್ ಸ್ಪೇಷಾಲಿಟಿ ಆಸ್ಪತ್ರೆ ಉಪಕರಣಗಳು ಒಳಗೊಂಡಿರುತ್ತವೆ)
ಟ್ರಾಮಾ ಕೇರ್ ಸೆಂಟರ್ ಕಟ್ಟಡವು 49 ಸಾಮಾನ್ಯ ಹಾಸಿಗೆ, 72 ಐಸಿಯು ಹಾಸಿಗೆ ಮತ್ತು ತುರ್ತು ಚಿಕಿತ್ಸ ಘಟಕದಲ್ಲಿ 79 ಹಾಸಿಗೆಗಳು ಒಟ್ಟಾರೆ 200 ಹಾಸಿಗೆಗಳ ಸಾಮಥ್ರ್ಯವನ್ನು ಹೊಂದಿದೆ.
ಇದರ ಜೊತೆಗೆನ್ಯೂರೋ ಸರ್ಜರಿ ವಿಭಾಗ(ಅಪಘಾತದಿಂದ ತಲೆಯ ಮೇಲೆ ಪೆಟ್ಟು, ಮೆದುಳು ಹಾಗೂ ನರಹುರಿ ಸಮಸ್ಯೆಗಳಿಂದ ಬಳಲುತ್ತಿರುವ ರೋಗಿಗಳಿಗೆ ಚಿಕಿತ್ಸೆ), ಪ್ಲಾಸ್ಟಿಕ್ ಸರ್ಜರಿ ವಿಭಾಗ(ಸುಟ್ಟ ಗಾಯಗಳು, ಮರು ನಿರ್ಮಾಣದ ಶಸ್ತ್ರ, ಸೂಕ್ಷ್ಮ ರಕ್ತನಾಳಗಳ ಶಸ್ತ್ರಚಿಕಿತ್ಸೆ ಹಾಗೂ ಸೌಂದರ್ಯ ವರ್ಧಕ ಶಸ್ತ್ರಚಿಕಿತ್ಸೆಗಳು),ಆರ್ಥೋಪಿಡಿಕ್ಸ್ ವಿಭಾಗ(ಮೂಳೆ ಮತ್ತು ಸಂಧಿಗಳು ಸಮಸ್ಯೆಗಳು),ರೇಡಿಯೋಲಜಿ ವಿಭಾಗ(ದೇಹದ ವಿವಿಧ ಭಾಗಗಳ ಸಿ.ಟಿಸ್ಕ್ಯಾನ್ ಮತ್ತು ರೋಗ ನಿರ್ಧಾರ ಮಾಡುವ ವ್ಯವಸ್ಥೆ),ಅನಸ್ಥೇಷಿಯ ವಿಭಾಗ(ವಿಶೇಷ ಶಸ್ತ್ರಚಿಕಿತ್ಸೆಗಳಿಗೆ ಅರವಳಿಕೆ ಮದ್ದು ನೀಡುವ ವಿಭಾಗ)ಗಳನ್ನು ಹೊಂದಿರುವುದು ವಿಶೇಷ.
ವಿಮ್ಸ್ ಬಗೆಗೊಂದಿಷ್ಟು
ವಿಮ್ಸ್ ಬಳ್ಳಾರಿಯ ದಂಡು ಪ್ರದೇಶದಲ್ಲಿರುವ ಅಲ್ಲಿಪುರದಲ್ಲಿದ್ದು, 173 ಎಕರೆ ವಿಸ್ತೀರ್ಣ ಹೊಂದಿದೆ. ಈ ಹಿಂದೆ ಕಾರಾಗೃಹ ಕಟ್ಟಡವಾಗಿತ್ತು;1958ರಲ್ಲಿ ಕಾರಗೃಹವನ್ನು ಮುಚ್ಚಲಾಗಿಯಿತು. ಈ ಪ್ರದೇಶವನ್ನು ಅಂದಿನ ಸರ್ಕಾರವು ವಿಮ್ಸ್ ಸ್ಥಾಪಿಸಲು 1961ರಲ್ಲಿ ಹಸ್ತಾಂತರಿಸಿರುತ್ತದೆ. 1962 ರಲ್ಲಿ 100 ವಿದ್ಯಾರ್ಥಿಗಳ ಸಾಮಥ್ರ್ಯವನ್ನು ಹೊಂದಿದ್ದು, ಇದರ ಅಧೀನದಲ್ಲಿ ವಿದ್ಯಾರ್ಥಿಗಳ ಬೋಧನೆಗಾಗಿ ವೈದ್ಯಕೀಯ ಮಹಾವಿದ್ಯಾಲಯ ಆಸ್ಪತ್ರೆಯ ಕಟ್ಟಡವು ಮೊದಲನೆ ಹಂತ ಮತ್ತು ಎರಡನೇ ಹಂತದ ಕಟ್ಟಡವು 1977 & 1981-82 ರಲ್ಲಿ ನಿರ್ಮಾಣ ಮಾಡಲಾಗಿರುತ್ತದೆ. ಸದರಿ ಆಸ್ಪತ್ರೆಯು 512 ಹಾಸಿಗೆಗಳಿಗೆ ಮಂಜೂರಾಗಿರುತ್ತದೆ.
ಬಳ್ಳಾರಿ ವೈದ್ಯಕೀಯ ಕಾಲೇಜನ್ನು 1994ನೇ ಸಾಲಿನಲ್ಲಿ ವಿಜಯನಗರ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಸ್ವಾಯತ್ತ ಸಂಸ್ಥೆಯನ್ನಾಗಿ ಪರಿವರ್ತಿಸಲಾಗಿರುತ್ತದೆ. ಸರ್ಕಾರವು ಸದರಿ ಸಂಸ್ಥೆಯಲ್ಲಿ ಎಂ.ಬಿ.ಬಿ.ಎಸ್ ಪ್ರವೇಶ ಮಿತಿಯನ್ನು 100 ರಿಂದ 150ಕ್ಕೆ ಹೆಚ್ಚಿಸಲು ಹಾಗೂ 2010ನೇ ಸಾಲಿನಲ್ಲಿ 1017 ಹಾಸಿಗೆಗಳ ಸಾಮಥ್ರ್ಯಕ್ಕೆ ಮಂಜೂರಾತಿಯನ್ನು ನೀಡಲಾಗಿರುತ್ತದೆ.
ಈ ಆಸ್ಪತ್ರೆಗೆ ಬಳ್ಳಾರಿ ಜಿಲ್ಲೆ ಹಾಗೂ ಸುತ್ತಮುತ್ತಲಿನ ಜಿಲ್ಲೆಗಳಿಂದ ಮತ್ತು ನೆರೆ ರಾಜ್ಯವಾದ ಆಂಧ್ರ ಪ್ರದೇಶದ ಹಲವು ಊರುಗಳಿಗೆ ಅತ್ಯಂತ ಪ್ರಮುಖ ಆಸ್ಪತ್ರೆಯಾಗಿರುವುದರಿಂದ ಪ್ರತಿ ದಿನ ಸಾವಿರಾರು ಸಂಖ್ಯೆಯಲ್ಲಿ ಚಿಕಿತ್ಸೆಗಾಗಿ ಸಾರ್ವಜನಿಕರು ಮತ್ತು ರೋಗಿಗಳು ಬರುತ್ತಿರುತ್ತಾರೆ. ವಿಮ್ಸ್ ಆಸ್ಪತ್ರೆಯು ಬಳ್ಳಾರಿ ಜಿಲ್ಲೆ ಮತ್ತು ನೆರೆಯ ರಾಜ್ಯ ಆಂಧ್ರಪ್ರದೇಶವನ್ನು ಹಲವು ಪ್ರದೇಶಗಳಿಗೆ ಹೊಂದಿಕೊಂಡಿದ್ದು ಈ ಪ್ರದೇಶದಲ್ಲಿ ಬಳ್ಳಾರಿ ಜಿಲ್ಲೆಗೆ ಇರುವ ಏಕೈಕ ಆಸ್ಪತ್ರೆಯಾಗಿದ್ದು, ಇಲ್ಲಿ ಪ್ರಾಥಮಿಕ ಚಿಕಿತ್ಸೆ ಆರೈಕೆ ಮತ್ತು ಸ್ಪೇಷಾಲಿಟಿ ಮತ್ತು ಸೂಪರ್ ಸ್ಪೇಷಾಲಿಟಿ ಚಿಕಿತ್ಸಾ ಸೇವೆಗಳನ್ನು ಒದಗಿಸಲಾಗುತ್ತಿದೆ.
ಈ ಸಂಸ್ಥೆಯು ಸುಮಾರು 60 ವರ್ಷಗಳ ಹಳೆಯದಾಗಿದೆ. ಪ್ರಸ್ತುತ ವಿಮ್ಸ್ ಸಂಸ್ಥೆಯ ಅಧೀನದಲ್ಲಿರುವ ಆಸ್ಪತ್ರೆಗೆ ಪ್ರತಿ ದಿನ 1500 ರಿಂದ 2000 ವರೆಗೆ ಹೊರರೋಗಿಗಳು ಮತ್ತು 500 ರಿಂದ 800 ರವರೆಗೆ ಒಳರೋಗಿಗಳಾಗಿ ಚಿಕಿತ್ಸೆಗೆ ಬರುತ್ತಿರುತ್ತಾರೆ ಹಾಗೂ ಎಂ.ಬಿ.ಬಿ.ಎಸ್ 150, ಬಿಡಿಎಸ್-50, ಪಿ.ಜಿ-120, ಸೂಪರ್ ಸ್ಪೇಷಾಲಿಟಿ-05, ಪ್ಯಾರಾ ಮೇಡಿಕಲ್-150, ಬಿಎಸ್ಸಿ ನಸಿರ್ಂಗ್-100+30 ವಿದ್ಯಾರ್ಥಿಗಳ ಪ್ರವೇಶಾತಿಯ ಸಾಮರ್ಥ್ಯ ಹೊಂದಿದೆ.
ವಿಮ್ಸ್ ಸಂಸ್ಥೆಯ ಅಧೀನದಲ್ಲಿ ವೈದ್ಯಕೀಯ ಮಹಾವಿದ್ಯಾಲಯ, ದಂತ ಕಾಲೇಜು, ನಸಿರ್ಂಗ್ ಕಾಲೇಜು, ವೈದ್ಯಕೀಯ ಮಹಾವಿದ್ಯಾಲಯ ಆಸ್ಪತ್ರೆ, ಸ.ವೆ.ಕ್ಷಯ ರೋಗ ಆಸ್ಪತ್ರೆ, ನಗರ ಆರೋಗ್ಯ ಕೇಂದ್ರ ಹೊಂದಿರುತ್ತದೆ. ಇದಲ್ಲದೇ ಈ ಹಿಂದೆ ಜಿಲ್ಲಾ ಆಸ್ಪತ್ರೆಯು ಸಹ ವಿಮ್ಸ್ ಸಂಸ್ಥೆಯ ಅಧೀನದಲ್ಲಿತ್ತು;ಅದನ್ನು ಮೂರು ವರ್ಷಗಳ ಹಿಂದಷ್ಟೇ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಸ್ತಾಂತರಗೊಂಡಿರುತ್ತದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದಾವಣಗೆರೆ | ಕೆರೆಗಳ ಸಂರಕ್ಷಣೆ; ಒತ್ತುವರಿ ತೆರವಿಗೆ ಕಟ್ಟುನಿಟ್ಟಿನ ಕ್ರಮ : ಡಿಸಿ ಗಂಗಾಧರಸ್ವಾಮಿ ಜಿ.ಎಂ
ಸುದ್ದಿದಿನ,ದಾವಣಗೆರೆ:ಈ ವರ್ಷ ಬರಗಾಲದ ಲಕ್ಷಣಗಳಿರುವುದರಿಂದ ಜಲಚರಗಳ ರಕ್ಷಣೆ ಹಾಗೂ ಕುಡಿಯುವ ನೀರಿನ ಲಭ್ಯತೆಗೆ ಮೊದಲ ಆದ್ಯತೆ ನೀಡಬೇಕು. ಜಿಲ್ಲೆಯ ಕೆರೆಗಳಲ್ಲಿರುವ ನೀರಿನ ಪ್ರಮಾಣದ ಬಗ್ಗೆ ನಿಖರವಾದ ಅಧ್ಯಯನ ನಡೆಸಿ ವರದಿ ನೀಡುವಂತೆ , ಜಿಲ್ಲೆಯ ಕೆರೆಗಳ ಸಂರಕ್ಷಣೆ ಹಾಗೂ ಒತ್ತುವರಿ ತೆರವಿಗೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ತಹಶೀಲ್ದಾರರುಗಳಿಗೆ ಜಿಲ್ಲಾಧಿಕಾರಿಗಳಾದ ಗಂಗಾಧರಸ್ವಾಮಿ ಜಿ.ಎಂ ಅವರು ಸೂಚನೆ ನೀಡಿದರು.
ಅವರು (ಏ.15) ಕೆರೆಗಳ ಸಂರಕ್ಷಣೆ, ಒತ್ತುವರಿ ತೆರವು ಹಾಗೂ ಮುಂಬರುವ ಬೇಸಿಗೆಯ ಕುಡಿಯುವ ನೀರಿನ ನಿರ್ವಹಣೆ ಕುರಿತು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಜಿಲ್ಲೆಯ ಒಟ್ಟು 533 ಕೆರೆಗಳ ಪೈಕಿ ಇನ್ನೂ 20 ಕೆರೆಗಳ ಒತ್ತುವರಿ ತೆರವು ಕಾರ್ಯ ಬಾಕಿ ಇದೆ. ಚನ್ನಗಿರಿ ತಾಲ್ಲೂಕಿನ 5 ಕೆರೆಗಳಾದ ಹರೇಗಂಗೂರು, ಸಾಗರಪೇಟೆ, ದಾಗಿನಕಟ್ಟೆ, ತ್ಯಾವಣಿಗ ಮತ್ತು ಸೂಳೆಕೆರೆ; ಹರಿಹರ ತಾಲ್ಲೂಕಿನ 7 ಕೆರೆಗಳಾದ ಹಿಂಡಸಗಟ್ಟ, ಜಿಗಳಿ, ಹಾಲಿವಾಣ, ಕಮಲಾಪುರ, ಗುಡ್ಡದತುಮ್ಮಿನಕಟ್ಟೆ, ಕುಂಬಳೂರು, ಯಲವಟ್ಟಿ; ದಾವಣಗೆರೆ ತಾಲ್ಲೂಕಿನ ಹೊನ್ನೂರು, ಹದಡಿ, ಮಾಳಗೊಂಡನಹಳ್ಳಿಯ 3 ಕೆರೆಗಳು ಹಾಗೂ ಹೊನ್ನಾಳಿ ತಾಲ್ಲೂಕಿನ ನೆಲಹೊನ್ನೆ, ಬನ್ನಿಕೊಡು, ಕುಂಬಳೂರು, ಸಾಸ್ವೆಹಳ್ಳಿ ಮತ್ತು ಬಲಮುರಿ ಕೆರೆಗಳನ್ನು ಶೀಘ್ರವಾಗಿ ಗುರುತಿಸಿ ತೆರವುಗೊಳಿಸಲು ಕ್ರಮವಹಿಸಬೇಕು. ತೆರವು ಕಾರ್ಯಾಚರಣೆಯನ್ನು ಛಾಯಾಚಿತ್ರ ಮತ್ತು ವಿಡಿಯೋ ಚಿತ್ರೀಕರಣದೊಂದಿಗೆ ಪಾರದರ್ಶಕವಾಗಿ ನಡೆಸಿ ಗ್ರಾಮ ಪಂಚಾಯತಿಗಳಿಗೆ ಅಧಿಕೃತವಾಗಿ ಹಸ್ತಾಂತರಿಸಬೇಕು ಎಂದು ತಿಳಿಸಿದರು.
ಚನ್ನಗಿರಿ ಹಾಗೂ ದಾವಣಗೆರೆ ತಾಲ್ಲೂಕಿನ ಹಲವು ಕೆರೆಗಳಿಗೆ ಕೊಳಚೆ ನೀರು ಸೇರುತ್ತಿರುವ ಬಗ್ಗೆ ದೂರುಗಳು ಕೇಳಿಬಂದಿವೆ. ಈ ಹಿನ್ನೆಲೆಯಲ್ಲಿ ಕುಡಿಯುವ ನೀರಿನ ಉದ್ದೇಶಕ್ಕೆ ಬಳಸುವ ಕೆರೆಗಳ ನೀರಿನ ಮಾದರಿಯನ್ನು ಪ್ರತಿ ತಿಂಗಳು ಪ್ರಯೋಗಾಲಯದಲ್ಲಿ ಪರೀಕ್ಷಿಸಿ ವರದಿ ಸಲ್ಲಿಸಬೇಕು. ಯೋಗ್ಯವಾಗಿದ್ದರೆ ಮಾತ್ರ ಕುಡಿಯಲು ಬಳಸಬೇಕು ಎಂದರು.
ಕೆರೆಗಳಲ್ಲಿ ಹೂಳೆತ್ತುವ ಕಾರ್ಯವನ್ನು ಕೇವಲ ರೈತರಿಗೆ ಮಾತ್ರ ಸೀಮಿತಗೊಳಿಸಬೇಕು. ಅಕ್ರಮ ಮಣ್ಣು ಸಾಗಾಟಕ್ಕೆ ಆಸ್ಪದ ನೀಡದಂತೆ ಭೂ-ವಿಜ್ಞಾನ ಇಲಾಖೆ ಹಾಗೂ ನೀರಾವರಿ ಇಲಾಖೆಯ ಅಧಿಕಾರಿಗಳ ಸಮನ್ವಯದೊಂದಿಗೆ ಕಾರ್ಯನಿರ್ವಹಿಸಲು ಹಾಗೂ ಮಣ್ಣಿನ ಮೂಲ ಪದರ ಹಾನಿಯಾಗದಂತೆ ಕ್ರಮವಹಿಸಬೇಕೆಂದು ಸಭೆಯಲ್ಲಿ ಹಾಜರಿದ್ದ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಕೆರೆಗಳನ್ನು ಒತ್ತುವರಿಯಿಂದ ಶಾಶ್ವತವಾಗಿ ಮುಕ್ತಗೊಳಿಸಲು ಅರಣ್ಯ ಇಲಾಖೆಯ ಸಹಯೋಗದೊಂದಿಗೆ ಕೆರೆಗಳ ಬಫರ್ ವಲಯದಲ್ಲಿ ಸಸಿಗಳನ್ನು ನೆಟ್ಟು ಜೈವಿಕ ಬೇಲಿ ನಿರ್ಮಿಸಲು ಯೋಜನೆ ರೂಪಿಸಲಾಗಿದೆ. ಮುಂಬರುವ ಮಳೆಗಾಲದ ವೇಳೆಗೆ ಸಸಿಗಳನ್ನು ನೆಡಲು ಸಿದ್ಧತೆ ಮಾಡಿಕೊಳ್ಳುವಂತೆ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲೆಯ ವ್ಯಾಪ್ತಿಯಲ್ಲಿ ಕೆರೆಗಳ ನೀರಿನ ಸಂಗ್ರಹಣಾ ಮಟ್ಟದ ಕುರಿತು ವಿವರ (ಮಾರ್ಚ್ 31 ಅಂತ್ಯಕ್ಕೆ)
ಪೂರ್ಣ ತುಂಬಿದ ಕೆರೆಗಳು: ಜಿಲ್ಲೆಯ ಒಟ್ಟು 08 ಕೆರೆಗಳು ಶೇ. 100 ರಷ್ಟು ಭರ್ತಿಯಾಗಿವೆ.
ಶೇ. 51 ರಿಂದ ಶೇ. 99 ರಷ್ಟು: ಒಟ್ಟು 47 ಕೆರೆಗಳಲ್ಲಿ ಉತ್ತಮ ನೀರಿನ ಸಂಗ್ರಹವಿದೆ.
ಶೇ. 31 ರಿಂದ ಶೇ. 50 ರಷ್ಟು: ಸುಮಾರು 164 ಕೆರೆಗಳು ಅರ್ಧದಷ್ಟು ನೀರಿನ ಮಟ್ಟವನ್ನು ಹೊಂದಿವೆ.
ಶೇ. 1 ರಿಂದ ಶೇ. 30 ರಷ್ಟು: ಜಿಲ್ಲೆಯ ಗರಿಷ್ಠ ಅಂದರೆ 250 ಕೆರೆಗಳಲ್ಲಿ ಕನಿಷ್ಠ ಪ್ರಮಾಣದ ನೀರು ಸಂಗ್ರಹವಾಗಿದೆ.
ಶೂನ್ಯ ಮಟ್ಟ (ತುಂಬಿರದ ಕೆರೆಗಳು): ಪ್ರಸ್ತುತ ಜಿಲ್ಲೆಯ 64 ಕೆರೆಗಳಲ್ಲಿ ನೀರಿನ ಸಂಗ್ರಹವಿಲ್ಲದೆ ಖಾಲಿಯಾಗಿವೆ.
ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಮಹಾವೀರ ಕರಣ್ಣನವರ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕಾಧಿಕಾರಿ ಗಿತ್ತೆ ಮಾಧವ ವಿಠ್ಠಲರಾವ್, ಉಪ ವಿಭಾಗಾಧಿಕಾರಿಗಳು, ತಹಶೀಲ್ದಾರುಗಳು, ಬೃಹತ್ ಮತ್ತು ಸಣ್ಣ ನೀರಾವರಿ ಇಲಾಖೆಯ ಅಧಿಕಾರಿಗಳು , ಉಪ ಅರಣ್ಯ ಸಂರಕ್ಷಣಾಧಿಕಾರಿಗಳು ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ವಯೋವೃದ್ಧರ ಸಾಮಾಜಿಕ ಆರ್ಥಿಕ ಸ್ಥಿತಿಗತಿ ಅಧ್ಯಯನ
ಸುದ್ದಿದಿನ,ದಾವಣಗೆರೆ:ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಮಾಜಶಾಸ್ತ್ರ ವಿಭಾಗದ ವಿದ್ಯಾರ್ಥಿಗಳು ವಯೋವೃದ್ಧರ ಕುರಿತು ಬುಧವಾರ ಸಾಮಾಜಿಕ ಸಮೀಕ್ಷೆ ನಡೆಸಿದರು.
ನಗರದ ತರಳಬಾಳು ಬಡಾವಣೆಯ ಆಯೂಷ್ ಚಾರಿಟೇಬಲ್ ಟ್ರಸ್ಟ್ ನ ಆರೈಕೆ ವೃದ್ಧಾಶ್ರಮಕ್ಕೆ ಭೇಟಿ ನೀಡಿ ಅಧ್ಯಯನ ನಡೆಸಿದರು. ಸಂದರ್ಶನದ ವೇಳೆ ವೃದ್ಧರ ಸಮಸ್ಯೆಗಳನ್ನು ಆಲಿಸಿದ ಕೆಲ ವಿದ್ಯಾರ್ಥಿಗಳು ಭಾವುಕರಾದರು.
ಈ ಸಂದರ್ಭದಲ್ಲಿ ವಿಭಾಗದ ಅಧ್ಯಾಪಕರುಗಳಾದ ಡಾ. ಶಿವಣ್ಣ ಹೆಚ್. ಎಸ್, ಡಾ. ಸುರೇಶ್ ಹೆಚ್. ಎನ್, ಡಾ. ಮಾದನಾಯ್ಕ ಹೆಚ್ ಇವರು ಮಾರ್ಗದರ್ಶನ ನೀಡಿದ್ದು, ಪ್ರಾಂಶುಪಾಲರಾದ ಬಸವರಾಜ್ ಬಿ ತಹಸೀಲ್ದಾರ್ ಮತ್ತು ಆಶ್ರಮದ ಅರ್ಜುನ್, ವಿರೇಶ್ ಅವರು ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಸಮಾನತೆಯ ಸಮಾಜ ನಿರ್ಮಾಣಕ್ಕೆ ಸಂವಿಧಾನವೇ ಭದ್ರ ಬುನಾದಿ: ಗಂಗಾಧರಸ್ವಾಮಿ ಜಿ.ಎಂ
ಸುದ್ದಿದಿನ,ದಾವಣಗೆರೆ:ಭಾರತ ರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರು ನೀಡಿದ ಸಂವಿಧಾನವು ದೇಶದ ಪ್ರತಿಯೊಬ್ಬ ನಾಗರಿಕನಿಗೂ ಸಮಾನತೆ ಮತ್ತು ಸ್ವಾತಂತ್ರ್ಯವನ್ನು ಕಲ್ಪಿಸಿಕೊಟ್ಟಿರುವ ಮಹಾನ್ ಶಕ್ತಿ ಎಂದು ಜಿಲ್ಲಾಧಿಕಾರಿ ಗಂಗಾಧರಸ್ವಾಮಿ ಜಿ.ಎಂ ಅವರು ಅಭಿಪ್ರಾಯಪಟ್ಟರು.
ಅವರು ಇಂದು (ಎ.14) ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿರುವ ತುಂಗಭದ್ರಾ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ದಾವಣಗೆರೆ ಮಹಾನಗರ ಪಾಲಿಕೆ , ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಸಮಾಜ ಕಲ್ಯಾಣ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಳ್ಳಲಾಗಿದ್ದ ಡಾ. ಬಿ.ಆರ್. ಅಂಬೇಡ್ಕರ್ ಅವರ 135ನೇ ಜನ್ಮದಿನಾಚರಣೆ ಕಾರ್ಯಕ್ರಮ ಉದ್ಪಾಟಿಸಿ ನಂತರ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಅವರು ಮಾತನಾಡಿದರು.
3000 ವರ್ಷಗಳ ಇತಿಹಾಸವಿರುವ ನಮ್ಮ ಸಮಾಜದಲ್ಲಿ, ಬ್ರಿಟಿಷರ ಆಳ್ವಿಕೆಯ ನಂತರವೂ ದೇಶದ ಸಮಗ್ರ ಜನತೆಗೆ ಸಮಾನತೆಯನ್ನು ಕಲಿಸಿಕೊಟ್ಟವರು ಬಾಬಾಸಾಹೇಬ್ ಅಂಬೇಡ್ಕರ್. ಮನುಷ್ಯನಿಗೆ ಮೆದುಳು ಮತ್ತು ಆತ್ಮ ಎಷ್ಟು ಮುಖ್ಯವೋ, ದೇಶಕ್ಕೆ ಸಂವಿಧಾನವು ಅಷ್ಟೇ ಮುಖ್ಯ. ವಿಶೇಷವಾಗಿ 32ನೇ ವಿಧಿಯು ಸಂವಿಧಾನದ ಆತ್ಮವಿದ್ದಂತೆ ,ಅಂಬೇಡ್ಕರ್ ಅವರು ಲಂಡನ್ ಸ್ಕೂಲ್ ಆಫ್ ಎಕನಾಮಿಕ್ಸ್ ಮತ್ತು ಕೊಲಂಬಿಯಾ ವಿಶ್ವವಿದ್ಯಾಲಯದಂತಹ ಪ್ರತಿಷ್ಠಿತ ಸಂಸ್ಥೆಗಳಲ್ಲಿ ಶಿಕ್ಷಣ ಪಡೆದಿದ್ದು, ಅವರ ಬೌದ್ಧಿಕ ಸಾಮರ್ಥ್ಯವೇ ಇಂದಿನ ಸಂವಿಧಾನಕ್ಕೆ ಬಲ ತುಂಬಿದೆ ಎಂದು ಅವರು ವಿವರಿಸಿದರು.
ವಿದ್ಯಾರ್ಥಿಗಳು ಕೇವಲ ಪರೀಕ್ಷೆಗಳಲ್ಲಿ ಉತ್ತೀರ್ಣರಾಗುವುದಕ್ಕಷ್ಟೇ ಶಿಕ್ಷಣ ಪಡೆಯಬಾರದು. ಬದಲಾಗಿ, ಸ್ವತಂತ್ರ ಆಲೋಚನೆ ಮತ್ತು ಸಮಾಜದ ಹಕ್ಕುಗಳನ್ನು ಕಾಪಾಡಿಕೊಳ್ಳುವ ಬದ್ಧತೆಯನ್ನು ಬೆಳೆಸಿಕೊಳ್ಳಬೇಕು ಎಂದು ಕಿವಿಮಾತು ಹೇಳಿದರು. ಅಂಬೇಡ್ಕರ್ ಮತ್ತು ಅಬ್ದುಲ್ ಕಲಾಂ ಅವರಂತಹ ಮಹನೀಯರು ನಮಗೆ ಪ್ರೇರಣೆಯಾಗಬೇಕು. ಬದ್ಧತೆ ಮತ್ತು ಪ್ರಯತ್ನವಿದ್ದರೆ ಯಾರೂ ಏನನ್ನು ಬೇಕಾದರೂ ಸಾಧಿಸಬಹುದು ಎಂದು ತಿಳಿಸಿದರು.
ನಾವೆಲ್ಲರು ಸಂವಿಧಾನವನ್ನು ಕಡ್ಡಾಯವಾಗಿ ಓದಿ ತಿಳಿದುಕೊಳ್ಳಬೇಕು, ಕನಿಷ್ಠ 12 ರಿಂದ 18 ರವರೆಗಿನ ಪರಿಚ್ಛೇದಗಳನ್ನು ಕಡ್ಡಾಯವಾಗಿ ತಿಳಿದುಕೊಂಡಿರಬೇಕು. ಹಿಂದೆ ವಚನಕಾರರು ರಚಿಸಿದ ವಚನೆಗಳೆ ಸಂವಿಧಾನದ ಆಶಯಗಳು ಆಗಿವೆ, ವಿದೇಶಗಳಲ್ಲಿ ಮಹಿಳೆಯರಿಗೆ ಸಮಾನ ಅವಕಾಶ ಇಲ್ಲ, ಆದರೆ ಭಾರತದಲ್ಲಿ ಸ್ವಾತಂತ್ರ್ಯ ನಂತರ ಮಹಿಳೆಯರಿಗೆ ಸಮಾನತೆಯನ್ನು ಕಲ್ಪಿಸಲಾಗಿದೆ, ಜಿಲ್ಲೆಯ ಹಾಸ್ಟೆಲ್ಗಳಲ್ಲಿ ವಿದ್ಯಾರ್ಥಿಗಳಿಗೆ ವೈಚಾರಿಕ ಜಾಗೃತಿ ಮೂಡಿಸಲು ಅಂಬೇಡ್ಕರ್, ಬಸವಣ್ಣ ಮತ್ತು ಗಾಂಧೀಜಿಯವರ ತತ್ವಗಳ ಬಗ್ಗೆ ಉಪನ್ಯಾಸಗಳನ್ನು ಹಮ್ಮಿಕೊಳ್ಳಲು ಕ್ರಿಯಾ ಯೋಜನೆ ರೂಪಿಸಲಾಗಿದೆ ಎಂದು ತಿಳಿಸಿದರು.
ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕಾಧಿಕಾರಿ ಗಿತ್ತೆ ಮಾಧವ ವಿಠ್ಠಲ್ ರಾವ್ ಅವರು “ಶಿಕ್ಷಣವು ಸಮಾಜದ ಪ್ರಗತಿಗೆ ಪ್ರಮುಖ ಅಸ್ತ್ರ”. ಕಡು ಬಡತನ ಮತ್ತು ಸಾಮಾಜಿಕ ಅಸಮಾನತೆಯ ನಡುವೆಯೂ ಅಂಬೇಡ್ಕರ್ ಅವರು ಉನ್ನತ ಶಿಕ್ಷಣ ಪಡೆದು ಸಮಾಜದಲ್ಲಿ ಬದಲಾವಣೆ ತಂದರು. ವಿಶ್ವದ ಅತ್ಯುತ್ತಮ ಸಂವಿಧಾನಗಳಲ್ಲಿ ಒಂದಾದ ಭಾರತದ ಸಂವಿಧಾನವನ್ನು ನೀಡಿದ ಅಂಬೇಡ್ಕರ್ ಅವರ ಶ್ರಮವನ್ನು ನಾವು ಮರೆಯುವಂತಿಲ್ಲ, ಸಂವಿಧಾನವು ಕೇವಲ ಕಾನೂನಿನ ದಾಖಲೆಯಲ್ಲ, ಅದು ಪ್ರತಿಯೊಬ್ಬ ನಾಗರಿಕನ ಬದುಕಿನ ಸ್ಫೂರ್ತಿ ಎಂದರು.
ಸಮಾಜದಲ್ಲಿನ ಜಾತಿ ಪದ್ಧತಿ ಮತ್ತು ಅಸ್ಪೃಶ್ಯತೆಯನ್ನು ನಿರ್ಮೂಲನೆ ಮಾಡಲು ಬಾಬಾಸಾಹೇಬರು ಪಟ್ಟ ಶ್ರಮ ಹಾಗೂ ಅವರು ಬರೆದ ‘ಜಾತಿ ವಿನಾಶ’ ಕೃತಿಯ ಮಹತ್ವದ ಬಗ್ಗೆ ತಿಳಿಸಿದರು. ಹುಲಿ ಹಾಲಿನ್ನು ಕುಡಿದವನು ಎಷ್ಟು ಬಲಶಾಲಿಯಾಗಿರುತ್ತೇನೋ ಶಿಕ್ಷಣ ಪಡೆದವನು ಅಷ್ಟೇ ಬಲಶಾಲಿಯಾಗುತ್ತಾನೆ. ಪ್ರತಿಯೊಬ್ಬರೂ ಶಿಕ್ಷಣಕ್ಕೆ ಒತ್ತು ನೀಡಿ, ಬಡ ಮಕ್ಕಳ ಶಿಕ್ಷಣಕ್ಕೆ ನೆರವಾಗುವಂತೆ ಕರೆ ನೀಡಿದರು.
ಚುನಾವಣೆ ನೀತಿ ಸಂಹಿಗೆ ಜಾರಿಯಲ್ಲಿರುವ ಹಿನ್ನೆಲೆಯ್ಲಲಿ ಕಾರ್ಯಕ್ರಮವನ್ನು ಸರಳವಾಗಿ ಆಚರಿಸಲಾಯಿತು, ಇದೇ ಸಂದರ್ಭದಲ್ಲಿ ಸಂವಿಧಾನ ಪೀಠಿಕೆಯನ್ನು ಅಪರ ಜಿಲ್ಲಾಧಿಕಾರಿ ಶೀಲವಂತ ಶಿವಕುಮಾರ್ ಅವರು ಬೋದಿಸಿದರು.
ಕಾರ್ಯಕ್ರಮಕ್ಕೂ ಮುನ್ನ ನಗರದ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದಲ್ಲಿರುವ ಬಾಬಾ ಸಾಹೇಬರ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಬೆಳ್ಳಿರಥಕ್ಕೆ ಚಾಲನೆ ನೀಡಿದರು. ಬೆಳ್ಳಿ ರಥವು ಡಾ.ಬಿ.ಆರ್.ಅಂಬೇಡ್ಕರ್ ವೃತ್ತದಿಂದ ಗಾಂಧಿವೃತ್ತ ಜಯದೇವ ವೃತ್ತದ ಮೂಲಕ ನಗರದ ಪ್ರಮುಖ ಬೀದಿಗಳಲ್ಲಿ ಸಂಚರಿಸಿತು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಶೇಖರ್ ಹೆಚ್.ಟಿ ಅಪರ ಜಿಲ್ಲಾಧಿಕಾರಿ ಶೀಲವಂತ ಶಿವಕುಮಾರ್, ಮಹಾನಗರ ಪಾಲಿಕೆ ಆಯುಕ್ತೆ ಮತ್ತು ಉಪಕಾರ್ಯದರ್ಶಿ ಮಮತ ಗೌಡರ್, ಯೋಜನಾ ನಿರ್ದೇಶಕಿ ರೇಷ್ಮಾ ಕೌಸರ್ ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಸಿದ್ದಲಿಂಗೇಶ್, ಜಿಲ್ಲಾ ಮಟ್ಟದ ಅಧಿಕಾರಿಗಳು ವಿವಿಧ ಸಂಘಟನೆಗಳ ಮುಖಂಡರು ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ಅಂಕಣ4 days agoಇತಿಹಾಸ ಕಥನಶಾಸ್ತ್ರ: ಅಂಬೇಡ್ಕರ್ ಅವರ ಚಿಂತನೆಯ ಹಾದಿ
-
ದಿನದ ಸುದ್ದಿ7 days agoಸಂವಿಧಾನದ ಆಶಯಗಳನ್ನು ಜಾರಿಗೊಳಿಸುವ ಕೆಲಸ ನಾವು ಮಾಡುತ್ತಿದ್ದೀವಾ ಎಂದು ಪತ್ರಕರ್ತರು ಪ್ರಶ್ನಿಸಿಕೊಳ್ಳಬೇಕು : ಸಿಎಂ ಸಿದ್ದರಾಮಯ್ಯ
-
ದಿನದ ಸುದ್ದಿ2 days agoವಯೋವೃದ್ಧರ ಸಾಮಾಜಿಕ ಆರ್ಥಿಕ ಸ್ಥಿತಿಗತಿ ಅಧ್ಯಯನ
-
ದಿನದ ಸುದ್ದಿ5 days agoಚಿಕ್ಕಮಗಳೂರು | ನೂತನ ಭದ್ರಾ ಸೇತುವೆ ಲೋಕಾರ್ಪಣೆಗೊಳಿಸಿ
-
ದಿನದ ಸುದ್ದಿ4 days agoಸಮಾನತೆಯ ಸಮಾಜ ನಿರ್ಮಾಣಕ್ಕೆ ಸಂವಿಧಾನವೇ ಭದ್ರ ಬುನಾದಿ: ಗಂಗಾಧರಸ್ವಾಮಿ ಜಿ.ಎಂ
-
ದಿನದ ಸುದ್ದಿ5 days agoನಾಳೆ ಡಾ. ಬಿ.ಆರ್. ಅಂಬೇಡ್ಕರ್ ಅವರ 135 ನೇ ಜನ್ಮ ದಿನಾಚರಣೆ
-
ದಿನದ ಸುದ್ದಿ5 days agoಅಂಧ ಮಕ್ಕಳ ವಸತಿ ಶಾಲೆಗೆ ಅರ್ಜಿ ಆಹ್ವಾನ
-
ದಿನದ ಸುದ್ದಿ2 days agoದಾವಣಗೆರೆ | ಕೆರೆಗಳ ಸಂರಕ್ಷಣೆ; ಒತ್ತುವರಿ ತೆರವಿಗೆ ಕಟ್ಟುನಿಟ್ಟಿನ ಕ್ರಮ : ಡಿಸಿ ಗಂಗಾಧರಸ್ವಾಮಿ ಜಿ.ಎಂ

