ದಿನದ ಸುದ್ದಿ

ವಿದ್ಯಾರ್ಥಿನಿಲಯಗಳಿಗೆ ಬಾಡಿಗೆ ಕಟ್ಟಡಗಳು ಬೇಕಾಗಿದೆ ; ಸಂಪರ್ಕಿಸಿ

Published

on

ಸುದ್ದಿದಿನ,ದಾವಣಗೆರೆ:ನಗರ ವ್ಯಾಪ್ತಿಯಲ್ಲಿ ಹೊಸದಾಗಿ ಮಂಜೂರಾಗಿರುವ 8 ಮೆಟ್ರಿಕ್ ನಂತರ ಬಾಲಕ, ಬಾಲಕಿಯರ ವಿದ್ಯಾರ್ಥಿ ನಿಲಯಗಳಿಗೆ ನಗರದಲ್ಲಿ ವಿದ್ಯಾರ್ಥಿನಿಲಯಗಳನ್ನು ನಡೆಸಲು ಕನಿಷ್ಠ 900 ಚದರ ಮೀಟರ್ ವಿಸ್ತಿರ್ಣವುಳ್ಳ ಸುಸಜ್ಜಿತವಾದ ಬಾಡಿಗೆ ಕಟ್ಟಡಗಳು ಅವಶ್ಯಕತೆ ಇರುತ್ತದೆ.

ಕಟ್ಟಡಗಳು ಅಗತ್ಯ ಮೂಲಭೂತ ಸೌಲಭ್ಯವಿರುವ ಕಟ್ಟಡದ ಮಾಲೀಕರು ಅಗತ್ಯ ದಾಖಲೆಗಳೊಂದಿಗೆ ಜುಲೈ 1 ರೊಳಗಾಗಿ ಅಂಚೆ ಮೂಲಕ, ಖುದ್ದಾಗಿ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ತಾಲ್ಲೂಕು ಕಲ್ಯಾಣಾಧಿಕಾರಿಗಳು, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಜಿ.ಮಲ್ಲಿಕಾರ್ಜುನ ದ್ವಿಪಥ ರಸ್ತೆ(ಹೊಸ ರಿಂಗ್ ರಸ್ತೆ) ಶ್ರೀಮತಿ ರತ್ನಮ್ಮ ತೆಲಗಿ ಸಿದ್ದೇಶಿ ರೆಸಿಡೆನ್ಸಿಯಲ್ ಲೇ ಔಟ್, ಶ್ರೀದೇವರಾಜು ಅರಸು ಭವನ ದಾವಣಗೆರೆ ಇವರನ್ನು ಸಂಪರ್ಕಿಸಬೇಕೆಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ತಾಲ್ಲೂಕು ಕಲ್ಯಾಣಧಿಕಾರಿ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version