Connect with us

ದಿನದ ಸುದ್ದಿ

ದಾವಣಗೆರೆ | ಹಾಸ್ಟೆಲ್ ಎಲ್ಲಾ ವಿದ್ಯಾರ್ಥಿಗಳ ಬಯೋಮೆಟ್ರಿಕ್ ಮ್ಯಾಪ್ ಮಾಡಲು ಸೂಚನೆ : ಸಿಇಓ ಸುರೇಶ್ ಬಿ ಇಟ್ನಾಳ್

Published

on

ಸುದ್ದಿದಿನ,ದಾವಣಗೆರೆ:ಜಿಲ್ಲೆಯಲ್ಲಿನ ಎಲ್ಲಾ ಮೆಟ್ರಿಕ್ ಪೂರ್ವ ಹಾಸ್ಟೆಲ್ ವಿದ್ಯಾರ್ಥಿಗಳ ಬಯೋಮೆಟ್ರಿಕ್ ಮ್ಯಾಪ್ ಮಾಡಬೇಕೆಂದು ಸಿಇಓ ಸುರೇಶ್ ಬಿ.ಇಟ್ನಾಳ್ ಸೂಚನೆ ನೀಡಿದರು.

ಅವರು (ನ 8) ರಂದು ಜಿಲ್ಲಾ ಪಂಚಾಯತ್ ನ ಎಸ್.ಎಸ್ ಮಲ್ಲಿಕಾರ್ಜುನ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಹಾಸ್ಟೆಲ್ ವಾರ್ಡನ್‌ಗಳ ಪ್ರಗತಿ ಪರಿಶೀಲಿನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಎಲ್ಲಾ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳು ಹಾಸ್ಟೆಲ್ ಗಳಿಗೆ ಭೇಟಿ ನೀಡಿ ವಿದ್ಯಾರ್ಥಿಗಳ ಬಯೋಮೆಟ್ರಿಕ್ ಹಾಜರಾತಿಯನ್ನು ಪರಿಶೀಲನೆ ಮಾಡಬೇಕು. ಹಾಗೂ ಬಿಇಓಗಳು ಸೋಮವಾರದಂದು ಶಾಲೆಗಳಿಗೆ ಭೇಟಿ ನೀಡಿ ವಿದ್ಯಾರ್ಥಿಗಳಿಗೆ ನೀಡಲಾಗುವ ವಿವಿಧ ಬಗೆಯ ವಿದ್ಯಾರ್ಥಿವೇತನಗಳ ಕುರಿತು ಮಾಹಿತಿ ನೀಡುವ ಆಂದೋಲನ ಕೈಗೊಳ್ಳಬೇಕು. ಸೌಲಭ್ಯಗಳು ಅರ್ಹ ಪ್ರತಿಯೊಬ್ಬ ವಿದ್ಯಾರ್ಥಿಗಳಿಗೂ ಉಚಿತ ವಿದ್ಯಾರ್ಥಿವೇತನಗಳು ಸಿಗುವಂತಾಗಬೇಕು ಎಂದು ತಿಳಿಸಿದರು.

ಹಾಸ್ಟೆಲ್ ವಾರ್ಡನ್‌ಗಳು ಗುಣಮಟ್ಟದ ಆಹಾರ ನೀಡಬೇಕು. ಮತ್ತು ಹಾಸ್ಟೆಲ್ ವಾತಾವರಣವನ್ನು ಸ್ವಚ್ಛವಾಗಿ ಇರಿಸಿಕೊಳ್ಳಬೇಕು , ಒಂದು ವೇಳೆ ವಿದ್ಯಾರ್ಥಿಗಳಿಗೆ ಗುಣಮಟ್ಟದ ಆಹಾರ ಮತ್ತು ಸ್ವಚ್ಚತೆಯಲ್ಲಿ ಲೋಪ ದೋಷ ಕಂಡುಬಂದಲ್ಲಿ ಸಂಬಂಧ ಪಟ್ಟವರ ವಿರುದ್ಧ ಕಾನೂನು ರೀತಿ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಕೃಷ್ಣ ನಾಯಕ್ , ಸಿಪಿಓ ಮಲ್ಲನಾಯಕ್ ,ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ನಾಗರಾಜ್. ಕೆ ಹಾಗೂ ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ರಾಜ್ಯದಲ್ಲಿ ಭಾರೀ ಮಳೆ ಸಂಭವ ; ಐದು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್

Published

on

ಸುದ್ದಿದಿನಡೆಸ್ಕ್:ನವೆಂಬರ್ 14ರಿಂದ ರಾಜ್ಯದೆಲ್ಲೆಡೆ ಭಾರಿ ಮಳೆಯಾಗಲಿದ್ದು, ಐದು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಚಾಮರಾಜನಗರ, ಚಿಕ್ಕಮಗಳೂರು, ಕೊಡಗು, ಮೈಸೂರು, ಶಿವಮೊಗ್ಗಕ್ಕೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೋಲಾರ, ಮಂಡ್ಯ, ರಾಮನಗರ, ತುಮಕೂರು, ವಿಜಯನಗರದಲ್ಲಿ ಕೂಡ ಮಳೆಯಾಗಲಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಮತ್ತೆ ತಾಯಿಯಾಗಬೇಕು : ನಟಿ ಸಮಂತಾ

Published

on

ಸುದ್ದಿದಿನಡೆಸ್ಕ್:ಇತ್ತೀಚೆಗೆ ನಟಿ ಸಮಂತಾ ಅವರ ಕಮೆಂಟ್‌ಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ. ಆ ಹೇಳಿಕೆಗಳ ಮೇಲೆ ನಾನಾ ರೀತಿಯ ಅನುಮಾನಗಳೂ ವ್ಯಕ್ತವಾಗಿವೆ.

ಟಾಲಿವುಡ್ ಸ್ಟಾರ್ ಹೀರೋಯಿನ್ ಸಮಂತಾ ಬಗ್ಗೆ ವಿಶೇಷ ಪರಿಚಯ ಅಗತ್ಯವಿಲ್ಲ. ಸದ್ಯ ಸಮಂತಾ ಸತತ ಚಿತ್ರಗಳಲ್ಲಿ ಬ್ಯುಸಿಯಾಗಿರುವುದು ಗೊತ್ತೇ ಇದೆ. ಇತ್ತೀಚಿಗೆ ಸಮಂತಾ ಅವರ ವೆಬ್ ಸಿರೀಸ್ ವಿಚಾರಕ್ಕೆ ಸುದ್ದಿಯಾಗಿದ್ದರು. ನಟಿಯ ಇತ್ತೀಚಿನ ವೆಬ್ ಸಿರೀಸ್ ಸಿಟಾಡೆಲ್ ಸಖತ್ ಸುದ್ದಿಯಾಗಿದೆ. ಸದ್ಯ ಈ ವೆಬ್ ಸೀರೀಸ್ ಒಟಿಟಿಯಲ್ಲಿ ಸ್ಟ್ರೀಮ್ ಆಗುತ್ತಿದೆ ಎಂದು ತಿಳಿದುಬಂದಿದೆ. ಈ ವೆಬ್ ಸರಣಿಯ ಪ್ರಚಾರದ ವೇಳೆ ಮಾಡಿದ ಕಾಮೆಂಟ್‌ಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ.

ಇದರ ಭಾಗವಾಗಿ ಸಮಂತಾ ರಾಜ್ ಮತ್ತು ಡಿಕೆ ಸಂದರ್ಶನವೊಂದರಲ್ಲಿ ಹೇಳಿದ್ದು ದಿ ಫ್ಯಾಮಿಲಿ ಮ್ಯಾನ್ 2 ಚಿತ್ರೀಕರಣದ ವೇಳೆ ನಾನು ಹಲವು ಭಾವನೆಗಳಿಗೆ ಒಳಗಾಗಿದ್ದೆ ಎಂದು ಸಮಂತಾ ಹೇಳಿದ್ದಾರೆ. ಅಲ್ಲದೇ ಅವರ ನಿರ್ದೇಶನದಲ್ಲಿ ನಟಿಸುವುದು ಕಷ್ಟ ಎಂದಿದ್ದಾರೆ. ನಂತರ ಅದೇ ಸಂದರ್ಶನದಲ್ಲಿ ನಟಿ ಬೇರೆ ವಿಚಾರವನ್ನೂ ಹೇಳಿದ್ದಾರೆ.

ಹನಿ ಬನ್ನಿ ವೆಬ್ ಸರಣಿಯಲ್ಲಿ ತಾಯಿ ಪಾತ್ರದ ಬಗ್ಗೆ ಮಾತನಾಡುತ್ತಾ, ಅವರು ಸಂವೇದನಾಶೀಲ ಕಾಮೆಂಟ್​ಗಳನ್ನು ಮಾಡಿದ್ದಾರೆ. ನನಗೆ ತಾಯಿಯಾಗುವ ಕನಸು ಇದೆ. ನಾನು ತಾಯಿಯಾಗಲು ಇಷ್ಟಪಡುತ್ತೇನೆ ಎಂದು ಹೇಳಿದ್ದಾರೆ.

ಇದಕ್ಕಾಗಿ ತಡವಾಗಿದೆ ಎಂದು ಅವರು ಭಾವಿಸುವುದಿಲ್ಲ. ನಾನು ಜೀವನದಲ್ಲಿ ತುಂಬಾ ಖುಷಿಯಾಗಿದ್ದೇನೆ ಎಂದು ಸಮಂತಾ ಹೇಳಿದ ಮಾತುಗಳು ಸದ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ. ಆದರೆ ಸಮಂತಾ ಈ ಕಾಮೆಂಟ್ ಮಾಡಿದ ನಂತರ ಮತ್ತೊಮ್ಮೆ ಅವರ ಎರಡನೇ ಮದುವೆಯ ಸುದ್ದಿಗೆ ವೇಗ ಸಿಕ್ಕಿದೆ. ಈ ಹಿಂದೆ ರಾಜ್ ಹಾಗೂ ಡಿಕೆಶಿಯಲ್ಲಿ ರಾಜ್ ನನ್ನು ಪ್ರೀತಿಸುತ್ತಿದ್ದು, ಸದ್ಯದಲ್ಲೇ ಮದುವೆಯಾಗಲಿದ್ದಾರೆ ಎಂದು ಹೇಳಲಾಗಿತ್ತು.

ಆದರೆ ಇದೀಗ ಸಮಂತಾ ಎರಡನೇ ಮದುವೆಯ ಸುದ್ದಿ ಮುನ್ನೆಲೆಗೆ ಬಂದಿದ್ದು, ಮತ್ತೆ ತಾಯಿಯಾಗಬೇಕು ಎಂದು ಕಾಮೆಂಟ್ ಮಾಡಿದ್ದಾರೆ. ಇದರೊಂದಿಗೆ ರಾಜ್ ಎರಡನೇ ಮದುವೆಯಾಗಲಿದ್ದಾರೆ ಎಂಬ ಸುದ್ದಿಗೆ ವೇಗ ಸಿಕ್ಕಿದೆ. ಈ ಸುದ್ದಿಯಲ್ಲಿನ ಸತ್ಯಗಳ ಹೊರತಾಗಿ, ಈ ಸುದ್ದಿ ಸಾಮಾಜಿಕ ಮಾಧ್ಯಮದಲ್ಲಿ ಹಾಟ್ ಟಾಪಿಕ್ ಆಗಿದೆ. ಈ ಸುದ್ದಿಗೆ ಸಮಂತಾ ಹೇಗೆ ಪ್ರತಿಕ್ರಿಯಿಸುತ್ತಾರೆ ಎಂಬುದನ್ನು ನೋಡೋಣ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ವೀರ ವನಿತೆ ಒನಕೆ ಓಬವ್ವನ ಸಮಯ ಪ್ರಜ್ಞೆ, ಧೈರ್ಯ ಮತ್ತು ಸಾಹಸ ಹೆಣ್ಣು ಮಕ್ಕಳಿಗೆ ಸ್ಫೂರ್ತಿ: ಡಿಸಿ ಗಂಗಾಧರಸ್ವಾಮಿ ಜಿ.ಎಂ

Published

on

ಸುದ್ದಿದಿನ,ದಾವಣಗೆರೆ: ವೀರ ವನಿತೆ ಒನಕೆ ಓಬವ್ವನ ಸಮಯ ಪ್ರಜ್ಞೆ, ಧೈರ್ಯ ಮತ್ತು ಸಾಹಸ ನಮ್ಮ ನಾಡಿನ ಹೆಣ್ಣು ಮಕ್ಕಳಿಗೆ ಸ್ಫೂರ್ತಿ ಎಂದು ಜಿಲ್ಲಾಧಿಕಾರಿ ಗಂಗಾಧರಸ್ವಾಮಿ ಜಿ.ಎಂ
ಅವರು (ನ.11) ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕøತಿ ಇಲಾಖೆ, ಮಹಾನಗರ ಪಾಲಿಕೆ ಹಾಗೂ ಜಿಲ್ಲಾ ಛಲವಾದಿ ಮಹಾಸಭಾ (ರಿ) ದಾವಣಗೆರೆ ಇವರುಗಳ ಸಂಯುಕ್ತಾಶ್ರಯದಲ್ಲಿ ಜಿಲ್ಲಾಡಳಿತ ತುಂಗಾಭದ್ರ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ವೀರವನಿತೆ ಒನಿಕೆ ಓಬವ್ವ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ದೇಶ, ಸಮಾಜ ಹಾಗೂ ರಾಜ್ಯಕ್ಕಾಗಿ ಯಾರು ತ್ಯಾಗ ಮಾಡುತ್ತಾರೆ, ಅಂತಹವರು ಇತಿಹಾಸದ ಪುಟಗಳಲ್ಲಿ ಅಜರಾಮರವಾಗಿ ಉಳಿಯುತ್ತಾರೆ. ಈ ಹಿನ್ನಲೆಯಲ್ಲಿ ನಮ್ಮ ದೇಶಕ್ಕೆ ಇರುವಂತಹ ಮಹತ್ವ ಇನ್ನೂಂದು ದೇಶಕ್ಕಿಲ್ಲ ಎಂದು ತಿಳಿಸಿದರು.

ಒನಕೆ ಓಬವ್ವ, ರಾಣಿ ಚನ್ನಮ್ಮ, ಅಬ್ಬಕ್ಕ, ಗಾಂಧೀಜಿ, ನೆಹರು, ಬಾಬ ಸಾಹೇಬ್ ಅಂಬೆಡ್ಕರ್ ಇಂತ ಮಹಾನೀಯರು ತಮಗಾಗಿ ಕೆಲಸ ಮಾಡಲಿಲ್ಲ, ಬದಲಾಗಿ ದೇಶಕ್ಕಾಗಿ, ಸಮಾಜಕ್ಕಾಗಿ , ರಾಷ್ಟ್ರಕ್ಕಾಗಿ ತ್ಯಾಗ ಮಾಡಿದ್ದರಿಂದ ಇತಿಹಾಸ ಪುಟಗಳಲ್ಲಿ ಅಜಾರಮರವಾಗಿ ಉಳಿದಿದ್ದಾರೆ. ಅದೇ ರೀತಿ ನಾವುಗಳು ಸಮಾಜದ ಒಳಿತಿಗಾಗಿ ಕೆಲಸ ಮಾಡಿದಾಗ ಮಾತ್ರ ಇತಿಹಾಸ ಪುಟಗಳಲ್ಲಿ ಸೇರಲು ಸಾಧ್ಯ ಎಂದು ತಿಳಿಸಿದರು.

ಹೆಣ್ಣು ಮಕ್ಕಳು ಒನಕೆ ಓಬವ್ವನ ಧೈರ್ಯ, ಶೌರ್ಯದ ಗುಣಗಳನ್ನು ಅಳವಡಿಸಿಕೊಳ್ಳಬೇಕು ಎಂದು ವಿದ್ಯಾರ್ಥಿಗಳಿಗೆ ಕಿವಿ ಮಾತು ಹೇಳಿದರು.

ಮಹಾನಗರ ಪಾಲಿಕೆ ಮಹಾಪೌರರಾದ ಚಮನ್ ಸಾಬ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ರಾಜ್ಯ ಛಲವಾದಿ ಸಮಾಜದ ಮುಂಖಡರಾದ ಎಂ.ಸಿ.ಓಂಕಾರಪ್ಪ ಒನಕೆ ಓಬವ್ವ ತ್ಯಾಗ , ಧೈರ್ಯ, ಸ್ವಾಮಿ ನಿಷ್ಠೆ ಬಗ್ಗೆ ಸವಿಸ್ತರವಾದ ಮಾಹಿತಿ ನೀಡಿದರು.

ಕಾರ್ಯಕ್ರಮದಲ್ಲಿ, ಹೆಚ್ಚುವರಿ ಪೊಲೀಸ್ ಅಧಿಕಾರಿ ವಿಜಯ್ ಕುಮಾರ್ ಎಂ. ಸಂತೋಷ, ಮುಖ್ಯ ಯೋಜನಾಧಿಕಾರಿ ಮಲ್ಲಾನಾಯ್ಕ, ದೂಡ ಸದಸ್ಯರಾದ ಗಿರೀಶ್, ಉಪ ಮೇಯರ್ ಸೋಗಿ ಶಾಂತಕುಮಾರ್, ಮಹಾನಗರ ಪಾಲಿಕೆ ಸದಸ್ಯರಾದ ಗಡಿಗುಡಾಳ್ ಮಂಜುನಾಥ್, ಸಮಾಜ ಕಲ್ಯಾಣ ಇಲಾಖೆ ಜಂಟಿ ನಿದೇಶಕರಾದ ನಾಗರಾಜ್, ಜಿಲ್ಲಾ ಛಲವಾದಿ ಸಮಾಜದ ಮುಂಖಡರಾದ ಜೈ ಪ್ರಕಾಶ್, ಉಪಾಧ್ಯಕ್ಷರಾದ ರುದ್ರಮ್ಮ, ಜಿಲ್ಲಾ ಮಾದಿಗ ಸಮಾಜದ ಮುಂಖಡರಾದ ವೀರಭದ್ರಪ್ಪ, ಹಾಗೂ ಕೆ.ಎಸ್.ಎಸ್ ಕಾಲೇಜಿನ ವಿದ್ಯಾರ್ಥಿಗಳು ಭಾಗವಹಿಸಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending