Connect with us

ದಿನದ ಸುದ್ದಿ

ಚನ್ನಗಿರಿ | ವಿದ್ಯಾರ್ಥಿ ನಿಲಯಕ್ಕೆ ದಾಗಿನಕಟ್ಟೆ ಗ್ರಾಮದಲ್ಲಿ ಬಾಡಿಗೆಗೆ ಕಟ್ಟಡ ಬೇಕಾಗಿದೆ ; ಸಂಪರ್ಕಿಸಿ

Published

on

ಸುದ್ದಿದಿನ,ದಾವಣಗೆರೆ : ಚನ್ನಗಿರಿ ತಾಲ್ಲೂಕಿನ ಸಮಾಜ ಕಲ್ಯಾಣ ಇಲಾಖೆ ವ್ಯಾಪ್ತಿಯ ದಾಗಿನಕಟ್ಟೆ ಗ್ರಾಮದಲ್ಲಿರುವ ಡಾ.ಬಿ.ಆರ್ ಅಂಬೇಡ್ಕರ್ ಸರ್ಕಾರಿ ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿನಿಲಯಕ್ಕೆ ವಿದ್ಯಾರ್ಥಿಗಳ ಯೋಗ್ಯವಿರುವ ಮತ್ತು ಅಗತ್ಯ ಮೂಲಭೂತ ಸೌಲಭ್ಯವುಳ್ಳ ಸುಸಜ್ಜಿತ ಬಾಡಿಗೆ ಕಟ್ಟಡ ಅವಶ್ಯಕತೆ ಇರುತ್ತದೆ.

65 ವಿದ್ಯಾರ್ಥಿಗಳು ವಾಸಮಾಡಲು 6 ರಿಂದ 8 ಕೊಠಡಿಗಳು, 8 ಶೌಚಾಲಯ, 8 ಸ್ನಾನ ಗೃಹಗಳು, ಅಡುಗೆ ಕೊಠಡಿ, ಊಟದ ಕೊಠಡಿ, ದಾಸ್ತಾನು ಕೊಠಡಿ ಸೌಕರ್ಯವಿರುವ ಸುಸಜ್ಜಿತ ಕಟ್ಟಡ ಲಭ್ಯವಿದ್ದಲ್ಲಿ ಸಹಾಯಕ ನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ಚನ್ನಗಿರಿ ಇವರನ್ನು ಸಂಪರ್ಕಿಸಲು ಕಟ್ಟಡದ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಬೇಕೆಂದು ಚನ್ನಗಿರಿ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ವಿಕಲಚೇತನರ ಕ್ಷೇತ್ರದಲ್ಲಿ ಉತ್ತಮ ಸೇವೆ : ಜಿಲ್ಲಾ ಸಮಿತಿ ಸದಸ್ಯತ್ವಕ್ಕೆ ನೇಮಕ ಮಾಡಲು ಆಹ್ವಾನ

Published

on

ಸುದ್ದಿದಿನ,ದಾವಣಗೆರೆ:ಪ್ರಸಕ್ತ ಸಾಲಿನಲ್ಲಿ ಸೆರೆಬ್ರಲ್ ಪಾಲ್ಸಿ, ಮಸ್ಕ್ಯುಲರ್ ಡಿಸ್ಟ್ರೋಫಿ, ಪಾರ್ಕಿನ್ಸನ್, ಮಲ್ಟಿಪಲ್ ಸ್ಕ್ಲೆರೋಸಿಸ್ (Crebral Palsy, Muscular Dystrophy, Parkinson’s and Multiple Sclerosis) ಕಾಯಿಲೆಯಿಂದ ಬಳಲುತ್ತಿರುವ ವ್ಯಕ್ತಿಗಳ ಆರೈಕೆದಾರರಿಗೆ ಮಾಹೆಯಾನ ರೂ.1000/-ಗಳ
ಪ್ರ್ರೋತ್ಸಾಹಧನವನ್ನು ನೀಡುವ ಯೋಜನೆಯಡಿ ವಿಕಲಚೇತನರ ಕ್ಷೇತ್ರದಲ್ಲಿ ಉತ್ತಮವಾಗಿ ಸೇವೆ ಸಲ್ಲಿಸುತ್ತಿರುವ ಒಂದು ಸ್ವಯಂ ಸೇವಾ ಸಂಸ್ಥೆಯ ಪ್ರತಿನಿಧಿಯನ್ನು ಜಿಲ್ಲಾ ಸಮಿತಿಯ ಸದಸ್ಯರನ್ನಾಗಿ ನೇಮಕ ಮಾಡಲು ನವಂಬರ್ 21 ರೊಳಗಾಗಿ ಕಚೇರಿಗೆ ಮನವಿ ಸಲ್ಲಿಸಬಹುದು.

ಜಿಲ್ಲಾ ಸಮಿತಿಯ ಸದಸ್ಯತ್ವಕ್ಕೆ ಕನಿಷ್ಠ ಎರಡು ವರ್ಷಕ್ಕೂ ಹೆಚ್ಚು ವಿಕಲಚೇತನರ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಿರಬೇಕು, ಸಂಸ್ಥೆಯು ಪಿಡಬ್ಲ್ಯೂಡಿ ಆಕ್ಟ್-2016 ರನ್ವಯ ನೋಂದಣಿಯಾಗಿರಬೇಕು. ಸೆರೆಬ್ರಲ್ ಪಾಲ್ಸಿ, ಮಸ್ಕ್ಯುಲರ್ ಡಿಸ್ಟ್ರೋಫಿ, ಪಾರ್ಕಿನ್ಸನ್, ಮಲ್ಟಿಪಲ್ ಸ್ಕ್ಲೆರೋಸಿಸ್ ಈ ಅಂಗವಿಕಲತೆಗಳ ಸೇವೆ ಸಲ್ಲಿಸಿದ ಬಗ್ಗೆ ದಾಖಲೆ ಸಲ್ಲಿಸುವುದು. ಪ್ರಸಕ್ತ ಸಾಲಿಗೆ ಸದರಿ ಯೋಜನೆಯ ಜಿಲ್ಲಾ ಸಮಿತಿಯ ಸದಸ್ಯರನ್ನು ನೇಮಿಸಿಕೊಳ್ಳಲಾಗುವುದು ಎಂದು ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಅಧಿಕಾರಿ ಡಾ.ಕೆ.ಕೆ. ಪ್ರಕಾಶ್ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ದಾವಣಗೆರೆ | ತೋಟಗಾರಿಕೆ ಬೆಳೆಗಳನ್ನು ಬೆಳೆಯಲು ರೈತರಿಂದ ಅರ್ಜಿ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ:ತೋಟಗಾರಿಕೆ ಇಲಾಖೆಯಿಂದ ಹೊನ್ನಾಳಿ ಮತ್ತು ನ್ಯಾಮತಿ ಗ್ರಾಮ ಪಂಚಾಯಿತಿಯಲ್ಲಿ 2025-26ನೇ ಸಾಲಿಗೆ ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿಯೋಜನೆಯಡಿ ಹೊಸದಾಗಿ ತೋಟಗಾರಿಕೆ ಬೆಳೆಗಳನ್ನು ಬೆಳೆಯಲು ಆಸಕ್ತ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತ ರೈತರು ಪಹಣಿ, ಆಧಾರ್, ಉದ್ಯೋಗ ಚೀಟಿ, ಸಣ್ಣ, ಅತಿಸಣ್ಣ, ರೈತರ ಪ್ರಮಾಣ ಪತ್ರ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡವರಾಗಿದ್ದಲ್ಲಿ ಜಾತಿ ಪ್ರಮಾಣಪತ್ರ ದಾಖಲಾತಿಗಳೊಂದಿಗೆ ಸಂಬಂಧಪಟ್ಟ ಗ್ರಾಮ ಪಂಚಾಯಿತಿ ಅಥವಾ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು, ಹೊನ್ನಾಳಿ ಅಥವಾ ಹೋಬಳಿ ಮಟ್ಟದ ಸಹಾಯಕ ತೋಟಗಾರಿಕೆ ಅಧಿಕಾರಿಗಳನ್ನು ಸಂಪರ್ಕಿಸಬಹುದೆಂದು ಹಿರಿಯ ತೋಟಗಾರಿಕೆ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಕಬ್ಬಳ ಗ್ರಾಮದ ಮಹಿಳೆ ನಾಪತ್ತೆ

Published

on

ಸುದ್ದಿದಿನ,ದಾವಣಗೆರೆ: ಚನ್ನಗಿರಿ ತಾಲ್ಲೂಕಿನ ಬಸವಪಟ್ಟಣ ಪೊಲೀಸ್ ಠಾಣೆಯ ವ್ಯಾಪ್ತಿಯ ಕಬ್ಬಳ ಗ್ರಾಮದ ಮೇಘ.ಟಿ 29 ವರ್ಷ, ಇವರು ಕಳೆದ ಮೇ 1 ರಂದು ಬೆಳಿಗ್ಗೆ 10 ಗಂಟೆ ಸಮಯದಲ್ಲಿ ತನ್ನ ಗಂಡನ ಮನೆ ಇರುವ ಬೆಂಗಳೂರಿಗೆ ಹೋಗುವುದಾಗಿ ತಿಳಿಸಿ ಗಂಡನ ಮನೆಗೆ ಹೋಗದೇ, ತವರು ಮನೆಗೂ ವಾಪಾಸ್ ಬಂದಿರುವುದಿಲ್ಲ.

ಚಹರೆ ವಿವರ. 5 ಅಡಿ ಎತ್ತರ, ಗೋಧಿ ಮೈಬಣ್ಣ, ಸಾಧಾರಣ ಮೈಕಟ್ಟು, ಹೊಂದಿರುತ್ತಾರೆ, ಹೋಗುವಾಗ ನೀಲಿ ಬಣ್ಣದ ಟಾಪ್ ಕಪ್ಪು ಬಣ್ಣದ ಲೆಗ್ಗಿನ್ಸ್ ಧರಿಸಿರುತ್ತಾರೆ. ಕನ್ನಡ ಮತ್ತು ತೆಲುಗು ಮಾತಾನಾಡುತ್ತಾಳೆ, ಇವರ ಬಗ್ಗೆ ಸುಳಿವು ಸಿಕ್ಕಲ್ಲಿ ಬಸವಾಪಟ್ಟಣ ಪೊಲೀಸ್ ಠಾಣೆ ಪಿಎಸ್‍ಐ ದೂ.ಸಂ: 9480803260 ಸಂಖ್ಯೆಗೆ ಮಾಹಿತಿ ನೀಡಲು ಪೊಲೀಸ್ ಠಾಣೆಯ ಪೊಲೀಸ್ ಸಬ್‍ಇನ್ಸ್ ಪೆಕ್ಟರ್ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending