Connect with us

ದಿನದ ಸುದ್ದಿ

ವಿಚಾರವಾದಿ ಡಾ.ಎಚ್. ನರಸಿಂಹಯ್ಯ ಬದುಕು : ಮಿಸ್ ಮಾಡ್ದೆ ಓದಿ ಈ ಲೇಖನ

Published

on

  • ಸಂಗಮೇಶ ಎನ್ ಜವಾದಿ

ನಾಡು ಕಂಡ ಅಪರೂಪದ ಧೀಮಂತ ಸಜ್ಜನ ವ್ಯಕ್ತಿ,
ಅಧ್ಯಾಪಕ, ಆಡಳಿತಗಾರ, ಸ್ನೇಹಮಯ ಮಾನವತಾವಾದಿ, ಪ್ರಗತಿಪರವಿಚಾರವಾದಿ, ಹಾಸ್ಯ ಪ್ರಜ್ಞೆಯ ವ್ಯಕ್ತಿತ್ವ,ರಾಷ್ಟ್ರೀಯವಾದಿ,ಖಾದಿ ಬಟ್ಟೆಯನ್ನೇ ಕೊನೆಯವರೆಗೂ ಧರಿಸುತ್ತಿದ ಮೇಧಾವಿ, ಬದುಕಿನೂದ್ದಕ್ಕೂ ಸರಳತೆ ಜೀವನ
ಸಾಗಿಸಿದ ಸಾಧಕ.

ಕಡು ಬಡತನದ ನಡುವೆಯೂ ಬದುಕನ್ನು ತಮ್ಮ ಇಷ್ಟದಂತೆ ಕಟ್ಟಿಕೊಂಡು ಬೆಳೆದ
ಕರುಣಾಮೂರ್ತಿ ಡಾ.ಎಚ್.ನರಸಿಂಹಯ್ಯನವರು. ದಟ್ಟ ದಾರಿದ್ರ್ಯದ ಮಧ್ಯೆಯೂ ತನ್ನಲ್ಲಿ ಅಂತರ್ಗತವಾಗಿದ್ದ ಪ್ರತಿಭೆಯ ಮೂಲಕ ವ್ಯಕ್ತಿಯೋರ್ವ ಎಂಥ ಎತ್ತರಕ್ಕೆ ಬೆಳೆದು ನಿಲ್ಲಬಹುದೆನ್ನುವುದನ್ನು ಜಾಗತಿಕ ಪ್ರಪಂಚಕ್ಕೆ ತೋರಿಸಿಕೊಟ್ಟ ಮಾಹಾಪುರುಷ.ಹಾಗಾಗಿ
ಶಿಸ್ತು ಮತ್ತು ಸರಳತೆಗೆ ಎಚ್ಚೆನ್ ರವರು ಹೆಚ್ಚು ಆದ್ಯತೆ ನೀಡಿದವರು.

ಜೊತೆಗೆ ಕರ್ನಾಟಕದ ಮೂಡಲಸೀಮೆಯ ಹುಡುಗನೊಬ್ಬ ಅಮೆರಿಕ್ಕೆ ಹೋದರೂ ಉಪ್ಪಿಟ್ಟು ತಿನ್ನುವ, ಗಾಂಧಿಟೊಪ್ಪಿಯನ್ನೇ ತೊಡುವ ಮೂಲಕ ಭಾರತದ ಹಿರಿಮೆಯನ್ನು ಕಾಪಾಡಿಕೊಂಡು ಬಂದ ಶಿಕ್ಷಣಪ್ರೇಮಿ ಎನ್ನುವುದು ನಾವ್ಯಾರು ಮರೆಯುವಂತಿಲ್ಲ.

ಸರಳತೆ, ಪ್ರಾಮಾಣಿಕತೆ, ಸಮಾಜಿಕ ಚಿಂತನೆ, ಪರಿಶುದ್ಧತೆಯನ್ನು ತಮ್ಮ ಬಾಳಿನುದ್ದಕ್ಕೂ ಒಂದು ವ್ರತದಂತೆ ಕಾಯ್ದುಕೊಂಡು ಬಂದ ಎಚ್ಚೆನ್‍ರ ಬದುಕು ಇಂದಿನ ಸಮಾಜಕ್ಕೆ ಆದರ್ಶ ಮತ್ತು ಮಾರ್ಗದರ್ಶನ ಎಂಬುವುದರಲ್ಲಿ ಎರಡು ಮಾತಿಲ್ಲ ಬಂಧುಗಳೆ.

ಡಾ. ಎಚ್ ಎನ್ ಜನನ – ಜೀವನ

ಎಚ್.ನರಸಿಂಹಯ್ಯನವರು ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ತಾಲ್ಲೂಕಿನ ಹೊಸೂರು ಗ್ರಾಮದ ತಂದೆ ಹನುಮಂತಪ್ಪ, ತಾಯಿ ವೆಂಕಟಮ್ಮ ದಂಪತಿಗಳ ಮಗನಾಗಿ 06-06-1920 ರಲ್ಲಿ ಜನಿಸಿದರು.

ಪ್ರಾಥಮಿಕ ಮತ್ತು ಮಾಧ್ಯಮಿಕ ವಿದ್ಯಾಭ್ಯಾಸವನ್ನು ಹೊಸೂರಿನಲ್ಲಿಯೇ ಮುಗಿಸಿದರು. 1935ರಲ್ಲಿ ಬೆಂಗಳೂರಿನ ನ್ಯಾಷನಲ್‌ ಹೈಸ್ಕೂಲಿಗೆ ಸೇರಿದರು.ತದನಂತರ ಭೌತಶಾಸ್ತ್ರದ ಬಿ.ಎಸ್ಸಿ. (ಆನರ್ಸ್) ಮತ್ತು ಎಂ.ಎಸ್ಸಿ., ಬೆಂಗಳೂರಿನ ಸೆಂಟ್ರಲ್ ಕಾಲೇಜಿನಲ್ಲಿ ಓದಿದರು. ಎಲ್ಲಾ ಪರೀಕ್ಷೆಗಳಲ್ಲಿ ಉನ್ನತ (ಪ್ರಥಮ) ದರ್ಜೆಯಲ್ಲಿ ಉತ್ತೀರ್ಣರಾದರು. 1946ರಲ್ಲಿ ಬೆಂಗಳೂರು ಬಸವನಗುಡಿ ಕಾಲೇಜಿನಲ್ಲಿ ಭೌತಶಾಸ್ತ್ರ ಅಧ್ಯಾಪಕರಾದರು.

ಅಲ್ಲಿಯೇ ಪ್ರಾಧ್ಯಾಪಕರಾಗಿ, ಆಮೇಲೆ ಹನ್ನೆರಡು ವರ್ಷಗಳ ಕಾಲ ಪ್ರಿನ್ಸಿಪಾಲರಾಗಿದ್ದರು.ಹಾಗೆ ಬೆಂಗಳೂರು ವಿಶ್ವವಿದ್ಯಾಲಯದ ಉಪಕುಲಪತಿಗಳಾಗಿಯೂ ಸೇವೆ ಸಲ್ಲಿಸಿದ್ದ ಶ್ರೇಯಸ್ಸಿನ ಜೊತೆಗೆ ಆ ಸಮಯದಲ್ಲಿ ಶಿಕ್ಷಣ ರಂಗದಲ್ಲಿ ಮಹತ್ವಪೂರ್ಣ ಬದಲಾವಣೆಗಳು ಮಾಡುವ ಮೂಲಕ ಸುಧಾರಣೆಗಳನ್ನು ಕೈಗೊಂಡ ಹೆಗ್ಗಳಿಕೆ ಇವರದಾಗಿತ್ತು. ಜೊತೆಗೆ ಕನ್ನಡವೆಂದರೆ ಹೆಚ್ಚು ಪ್ರೀತಿ, ಹಾಗೂ ಪ್ರಾವೀಣ್ಯತೆಯನ್ನು ಸಹ ಹೊಂದಿದರು.

ಇವರ ಇಡೀ ಜೀವನ ಶಿಕ್ಷಣಕ್ಕೆ ಮತ್ತು ನಾಲ್ಕು ನ್ಯಾಷನಲ್ ಕಾಲೇಜು, ಐದು ನ್ಯಾಷನ ಲ್ ಹೈಸ್ಕೂಲ್ ಮತ್ತು ಎರಡು ಪ್ರೈಮರಿ ಶಾಲೆಗಳನ್ನೊಳಗೊಂಡ ನ್ಯಾಷನಲ್ ಎಜುಕೇಷನ್ ಸೊಸೈಟಿಗೆ ಮೀಸಲಿಟ್ಟಿದ್ದರು.ಜಯನಗರದ ನ್ಯಾಷನಲ್ ಕಾಲೇಜಿನಲ್ಲಿರುವ ಬೆಂಗಳೂರು ಲಲಿತಕಲಾ ಪರಿಷತ್ತಿನ ಸ್ಥಾಪಕ ಅಧ್ಯಕ್ಷರಾಗಿ ಸಂಸ್ಥೆಗಳ ಉನ್ನತಿಗಾಗಿ ಶ್ರಮಿಸಿದ್ದಾರೆ. ಹಾಗೂ ಎಚ್.ಎನ್.ನ್ಯಾಷನಲ್ ಎಜುಕೇಷನ್ ಸೊಸೈಟಿ ಆಫ್‌ ಕರ್ನಾಟಕದ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸಿದ ಹಿರಿಮೆಗೆ ಸಾಕ್ಷಿಯಾಗಿದಾರೆ.

ಇದಲ್ಲದೆ ಬೆಂಗಳೂರು ವಿಶ್ವವಿದ್ಯಾಲಯದ ಪ್ರಗತಿ, ನ್ಯಾಷನಲ್ ಶಿಕ್ಷಣ ಸಂಸ್ಥೆಯ ಬೆಳವಣಿಗೆ, ಭಾರತದ ಸ್ವಾತಂತ್ರ್ಯ ಚಳುವಳಿ, ಮೈಸೂರು ರಾಜ್ಯದ ಸ್ಥಾಪನೆಗಾಗಿ ಹೋರಾಟ ಹೀಗೆ ಅನೇಕ ವಿಷಯಗಳಲ್ಲಿ ಹೋರಾಟ ಮಾಡಿದ್ದ ಜೀವನದ ಬದುಕು ಇವರದು.

ಮತ್ತೆ ವಿಜ್ಞಾನದಲ್ಲಿ, ವೈಜ್ಞಾನಿಕ ಮನೋಭಾವದಲ್ಲಿ ಅವರಿಗೆ ಅಚಲವಾದ ನಂಬಿಕೆ.ಮೂಢನಂಬಿಕೆ, ಮೌಢ್ಯದ ವಿರುದ್ಧ ಸತತ ಹೋರಾಟ. ಮೂವತ್ತು ವರ್ಷಗಳ ಹಿಂದೆ ಅವರು ಬೆಂಗಳೂರು ವಿಜ್ಞಾನ ವೇದಿಕೆ (Bangalore Science forum) ಎಂಬ ವಿಜ್ಞಾನವೇದಿಕೆಯನ್ನು ಸ್ಥಾಪಿಸಿ ಅದರ ಅಧ್ಯಕ್ಷರಾಗಿದರು. ಸಂಗೀತ, ನಾಟಕ, ನೃತ್ಯ ಮುಂತಾದ ಲಲಿತ ಕಲೆಗಳಿಗೆ ಮೊದಲಿನಿಂದಲೂ ಪ್ರೋತ್ಸಾಹ ನೀಡಿರುತ್ತಾರೆ ಹಾಗೂ
ಸರಳ ಕಟ್ಟುನಿಟ್ಟಾದ ಬದುಕನ್ನು ಪಾಲಿಸಿದರು.

ಡಾ.ಎಚ್ ಎನ್ ರವರ ಸರಳತೆ

ಡಾ.ಎಚ್ ಎನ್ ರವರ ಬದುಕಿನಲ್ಲಿ ಅವರು ಕಂಡ ನೋವು, ಸಂಕಟ, ಅನುಭವಿಸಿದ ಬಡತನ, ತಂದೆಯ ಸಾವು, ಓದಿಗಾಗಿ ಊರೂರು ಅಲೆದದ್ದು, ಬರಿಗಾಲಿನಲ್ಲಿ ನಡೆದುಕೊಂಡೆ ಬೆಂಗಳೂರು ತಲುಪಿದ್ದು, ಬದುಕಿಗೊಂದು ಹೊಸ ತಿರುವು ನೀಡಿದ ನ್ಯಾಷನಲ್ ಹೈಸ್ಕೂಲು, ಉಚಿತ ಪ್ರಸಾದ ನಿಲಯದಲ್ಲಿ ಪ್ರವೇಶ ಪಡೆಯಲು ಮಾಡಿದ ಹೋರಾಟ, ಬರೀ ನೀರು ಕುಡಿದೇ ದಿನಗಳನ್ನು ನೂಕಿದ್ದು, ಫೇಲಾದರೆ ಮತ್ತೆ ಮರಳಿ ಊರಿಗೆ ಹೋಗಬೇಕಲ್ಲ ಎನ್ನುವ ಭೀತಿಯಿಂದ ಓದಿದ್ದು, ಪ್ರತಿ ತರಗತಿಯಲ್ಲೂ ಪಟ್ಟಣದ ಹುಡುಗರಿಗೆ ಸ್ಪರ್ಧೆ ಒಡಿದ್ದು ಹೀಗೆ ಹತ್ತು ಹಲವು ಸಂಗತಿಗಳು ಅವರ ಸರಳತೆಗೆ ಸಾಕ್ಷಿಯಾಗಿದೆ.

ಅವರು ಬಾಲ್ಯದಲ್ಲಿ ಅನುಭವಿಸಿದ ಕಡು ಬಡತನ ಮತ್ತು ವಿದ್ಯಾಭ್ಯಾಸಕ್ಕಾಗಿ ಮಾಡಿದ ಹೋರಾಟ ನಂತರದ ಪ್ರಾಮಾಣಿಕ ಸರಳತೆಯ ಬದುಕಿಗೆ ಗಟ್ಟಿ ಅಡಿಪಾಯ ಒದಗಿಸಿತು ಎನ್ನುವುದು ಸುಳ್ಳಲ್ಲ.ನಂತರದ ಭಾಗ ಶಿಕ್ಷಕರಾಗಿ ಎಚ್.ನರಸಿಂಹಯ್ಯನವರು ಮಾಡಿದ ಸಾಧನೆಗಳು ಅದ್ಭುತ. ತಮ್ಮ ಇಡೀ ಬದುಕನ್ನು ಶಿಕ್ಷಕ ವೃತ್ತಿಗಾಗಿ ಮುಡಿಪಾಗಿಟ್ಟ ನರಸಿಂಹಯ್ಯನವರ ಸರಳ ಬದುಕು ಇಂದಿನ ಜನರಿಗೆ ಪ್ರೇರಣೆ ನೀಡುತ್ತದೆ.

ಅಮೇರಿಕಾದಂಥ ಆಕರ್ಷಕ ರಾಷ್ಟ್ರದಲ್ಲಿ ಅಧ್ಯಯನ ಮಾಡಿಯೂ ತಾಯ್ನಾಡಿನಲ್ಲಿ ಸೇವೆ ಸಲ್ಲಿಸಬೇಕೆನ್ನುವ ಅವರ ಹಂಬಲ, ವಿದ್ಯೆ ಕೊಟ್ಟು ಬದುಕು ರೂಪಿಸಿದ ನ್ಯಾಷನಲ್ ಶಿಕ್ಷಣ ಸಂಸ್ಥೆಯಲ್ಲೆ ಕೆಲಸ ಮಾಡಬೇಕೆನ್ನುವ ಅವರ ತುಡಿತ, ಬೆಂಗಳೂರು ವಿಶ್ವವಿದ್ಯಾಲಯದ ಉಪಕುಲಪತಿಯಾಗಿ ನಿವೃತ್ತಿಯ ನಂತರ ನ್ಯಾಷನಲ್ ಕಾಲೇಜಿಗೆ ಮರಳಿ ಬಂದ ಅವರ ಸರಳತೆಯ ನಿಷ್ಠೆ, ದೊಡ್ಡ ಹುದ್ಧೆಯಲ್ಲಿದ್ದೂ ವಿದ್ಯಾರ್ಥಿಗಳ ವಸತಿ ಗೃಹದ ಸಣ್ಣ ಕೋಣೆಯಲ್ಲಿ ವಾಸಿಸುತ್ತಿದ್ದ ಅವರ ಸರಳತೆ, ನ್ಯಾಷನಲ್ ಶಿಕ್ಷಣ ಸಂಸ್ಥೆಯ ಅಭಿವೃದ್ಧಿಗಾಗಿ ಬದುಕಿನುದ್ದಕ್ಕೂ ಶ್ರಮಿಸಿದ್ದು, ಕನ್ನಡ ಪ್ರಾಧಿಕಾರದ ಅಧ್ಯಕ್ಷರಾಗಿ ಮಾಡಿದ ಸೇವೆಗಳು, ಪವಾಡಗಳ ದುರುಪಯೋಗವನ್ನು ವಿರೋಧಿಸಿದ ಅವರ ವೈಚಾರಿಕ ಕ್ರಾಂತಿ, ತಮ್ಮ ಅಂತ್ಯಕ್ರಿಯೆಯನ್ನು ಅತ್ಯಂತ ಸರಳವಾಗಿ ಮಾಡಬೇಕೆಂದು ಅವರು ಬರೆದಿಟ್ಟ ಉಯಿಲು ಹೀಗೆ ಅನೇಕ ಸಂಗತಿಗಳ ಮೂಲಕ ಎಚ್ಚೆನ್ ಅವರ ಅಗಾಧ ಸರಳ ವ್ಯಕ್ತಿತ್ವ ವಿಶ್ವಕ್ಕೆ ಮಾದರಿ ಎನ್ನಬಹುದು.

ಅತ್ಯಂತ ಪ್ರಜ್ಞಾಪೂರ್ವಕವಾಗಿ ಅವರು ರೂಢಿಸಿಕೊಂಡಿದ್ದ ಸರಳ ಬದುಕು ಎಚ್ಚೆನ್ ಯವರು ಇಂದಿನ ಆಧುನಿಕ ಸಮಾಜಕ್ಕೆ ಇಷ್ಟವಾಗಲು ಮುಖ್ಯಕಾರಣವಾಗುತ್ತದೆ. ಸರಳತೆಗೆ ಇನ್ನೊಂದು ಹೆಸರೇ ಎಚ್.ನರಸಿಂಹಯ್ಯನವರು ಎನ್ನುವಂತೆ ಅವರು ಬದುಕಿ ಬಾಳಿದರು. ಧರಿಸುವ ಬಟ್ಟೆ, ಸೇವಿಸುವ ಆಹಾರ, ವಾಸಿಸುವ ಕೋಣೆ ಹೀಗೆ ಪ್ರತಿಯೊಂದು ಅವರ ಸರಳ ಬದುಕಿಗೆ ಸಾಕ್ಷಿಯಾಗಿದ್ದವು. ಸರಳತೆಗೂ ಮತ್ತು ಅವರ ಬದುಕಿಗೂ ಒಂದು ರೀತಿಯ ಅವಿನಾಭಾವ ಸಂಬಂಧ. ಬೆಂಗಳೂರು ವಿಶ್ವವಿದ್ಯಾಲಯದ ಉಪಕುಲಪತಿ ಹುದ್ದೆಯನ್ನು ಅಲಂಕರಿಸಿದಾಗಲೂ ಅವರು ತಮ್ಮ ವೇಶ ಭೂಷಣಗಳಲ್ಲಿ ಬದಲಾವಣೆ ಮಾಡಿಕೊಳ್ಳಲಿಲ್ಲ.

ಒಂದು ಹಂತದಲ್ಲಿ ಅಂಥದ್ದೊಂದು ಒತ್ತಡ ಬಂದಾಗ ಹುದ್ದೆಯನ್ನು ತ್ಯಜಿಸಲು ಮುಂದಾದರೆ ವಿನಹ ಸರಳತೆಯನ್ನು ಬಿಟ್ಟುಕೊಡಲು ಸ್ವಲ್ಪವೂ ಯೋಚಿಸಲಿಲ್ಲ. ಅನೇಕ ಉನ್ನತ ಹುದ್ದೆಗಳಲ್ಲಿ ಕಾರ್ಯನಿರ್ವಹಿಸಿದ ವ್ಯಕ್ತಿಯೋರ್ವ ತನ್ನ ಬದುಕಿನುದ್ದಕ್ಕೂ ವಿದ್ಯಾರ್ಥಿಗಳ ವಸತಿ ನಿಲಯದ ಸಣ್ಣ ಕೋಣೆಯಲ್ಲಿ ವಾಸವಾಗಿದ್ದರೆನ್ನುವುದು ಕಲ್ಪನೆಗೂ ನಿಲುಕದ ಸಂಗತಿ. ಆ ಕೋಣೆಯಲ್ಲಾದರೂ ಏನಿತ್ತು ಮಲಗಲು ಒಂದೆರಡು ಹಾಸಿಗೆಗಳು, ಬರೆಯಲು ಸಣ್ಣ ಮೇಜು, ಅತಿಥಿಗಳಿಗಾಗಿ ಕೂಡಲು ಎರಡು ಕುರ್ಚಿಗಳು. ವಿಲಾಸಿ ಜೀವನವನ್ನು ನಡೆಸುತ್ತ ಸರಳತೆಯನ್ನು ಕೇವಲ ಉಪದೇಶವಾಗಿಟ್ಟುಕೊಂಡವರಿಗೆ ಎಚ್ಚೆನ್ ಅವರ ಸರಳ ಬದುಕು ಒಂದು ನೀತಿ ಪಾಠವಾಗುತ್ತದೆ.

ಡಾ.ಎಚ್ ಎನ್ ರವರಿಗೆ ಸಂಧ
ಪ್ರಶಸ್ತಿ-ಗೌರವಗಳು

ಅವರ ಸರಳತೇಯ ಹೋರಾಟ, ಸಮಾಜಿಕ ಚಿಂತನೆಯ ಸೇವೆಗಾಗಿ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ (1968),ಸ್ವಾತಂತ್ರ್ಯ ಚಳವಳಿಯಲ್ಲಿ ಭಾಗವಹಿಸಿದ್ದಕ್ಕೆ ನೀಡಿದ ತಾಮ್ರಪತ್ರ ಪ್ರಶಸ್ತಿ (1973), ಭಾರತ ಸರ್ಕಾರದ
ಪದ್ಮಭೂಷಣ ಪ್ರಶಸ್ತಿ (1984),
ಕಲ್ಬುರ್ಗಿ ವಿಶ್ವವಿದ್ಯಾಲಯದ ಗೌರವ ಡಾಕ್ಟರೇಟ್ ಪ್ರಶಸ್ತಿ(1988), ದೇವರಾಜ ಅರಸು ಪ್ರಶಸ್ತಿ (1994) ಗಳು ದೊರೆಕಿವೆ. ಮತ್ತು
ಫೆಲೋಗಳಾಗಿರುವ ಕಮಿಟಿ ಫಾರ್ ದಿ ಸೈಂಟಿಪಿಕ್ ಇನ್ವೆಸ್ಟಿಗೇಷನ್ ಆಫ್ ದಿ ಕ್ಲೈಮ್ಸ್ ಆಫ್ ದಿ ಪ್ಯಾರಾ ನಾರ್ಮಲ್` ( Committee for Scientific Investigation of the claims of the Paranomal) ಸಂಸ್ಥೆಯು ಭಾರತದ ಏಕೈಕ ಫೆಲೋ ಎಂಬ ಗೌರವಕ್ಕೆ ಎಚ್ ಎನ್ ರವರು ಪಾತ್ರರಾಗಿದ್ದಾರೆ. 2004ರ ದಸರಾ ಮಹೋತ್ಸವದ ಉದ್ಘಾಟನೆ ಮಾಡುವ ಹಿರಿಮೆಗೆ ಭಾಜನರಾಗಿದ್ದಾರೆ . ಹೀಗೆ ಹತ್ತು ಹಲವು ಪ್ರಶಸ್ತಿ, ಗೌರವ, ಸನ್ಮಾನಗಳು ಸಂಧಿವೆ.

ಕೊನೆಯ ಮಾತು

ಎಚ್ಚೆನ್ ರವರ ನಿರ್ಮಲ ವ್ಯಕ್ತಿತ್ವ ಅದ್ಭುತ ಗುಣಗಳ ಒಂದು ಗಣಿ. ಕುಗ್ರಾಮವೊಂದರ ಅತ್ಯಂತ ಬಡತನದ ಕುಟುಂಬದಲ್ಲಿ ಹುಟ್ಟಿ ಬಂದ ಹಳ್ಳಿಯ ಹುಡುಗನೊಬ್ಬ ನಿರಂತರವಾದ ಸರಳತೆಯ,ಸಮಾಜಿಕ ಚಿಂತನೆಯ ಶ್ರಮದಿಂದ ಜೊತೆಗೆ ಅಚಲವಾದ ವಿಶ್ವಾಸದಿಂದ, ತನ್ನ ವೈಚಾರಿಕ ಮನೋಭಾವದಿಂದ ಅತ್ಯಂತ ಪ್ರತಿಭಾವಂತನಾಗಿ ಬೆಳೆದು ನಿಂತು ಶೈಕ್ಷಣಿಕ, ಸಾಂಸ್ಕೃತಿಕ, ಸಾಮಾಜಿಕ ಕ್ಷೇತ್ರಗಳಲ್ಲಿ ಮಾಡಿದ ಅಪ್ರತಿಮ ಸಾಧನೆ ನಮ್ಮಗೆಲ್ಲರಿಗೂ ಬೆರಗು ಹುಟ್ಟಿಸುತ್ತದೆ. ಜೊತೆಗೆ ಅವರ ಸರಳತೆಯ ಬದುಕು ಅನೇಕರಿಗೆ ಸ್ಪೂರ್ತಿಯ ಸೆಲೆಯಾಗುತ್ತದೆ.

ಮನುಷ್ಯ ಹೇಗೆ ಬದುಕಬೇಕೆನ್ನುವುದಕ್ಕೆ ಎಚ್ಚೆನ್ ಸದಾಕಾಲ ಮಾದರಿಯಾಗಿ ನಿಲ್ಲುತ್ತಾರೆ. ಎಚ್ಚೆನ್ ನಮಗೆಲ್ಲ ಇಷ್ಟವಾಗಲು ಅನೇಕ ಸಂಗತಿಗಳು ಕಾರಣವಾಗುತ್ತವೆ. ಅವರ ಸರಳ ಜೀವನ ಶೈಲಿ, ಅನನ್ಯ ರಾಷ್ಟ್ರ ಪ್ರೇಮ, ಬದುಕು ರೂಪಿಸಿದ ಶಿಕ್ಷಣ ಸಂಸ್ಥೆಯ ಮೇಲಿನ ನಿಷ್ಠೆ, ಕಡು ಬಡತನದ ಬದುಕಿನೊಂದಿಗಿನ ಹೋರಾಟ, ಅವರಲ್ಲಿನ ಅಚಲವಾದ ಆತ್ಮವಿಶ್ವಾಸ, ವೈಚಾರಿಕ ಮನೋಭಾವ, ಬದುಕಿನ ಒಂದು ಭಾಗ ಎನ್ನುವಂತೆ ಬೆಳೆಸಿಕೊಂಡು ಬಂದ ನಿಷ್ಟೂರತೆ ಹೀಗೆ ಅನೇಕ ಕಾರಣಗಳಿಂದ ನರಸಿಂಹಯ್ಯನವರ ವ್ಯಕ್ತಿತ್ವ ನಮಗೆ ಆಪ್ತವಾಗುತ್ತದೆ.ಹಳ್ಳಿಯಿಂದ ಬಂದ ಅನಾಥ ಬಾಲಕ ನ್ಯಾಷನಲ್ ಹೈಸ್ಕೂಲಿನಲ್ಲಿ ಪ್ರವೇಶ ಪಡೆದು ತನ್ನ ಸ್ವಂತ ಪರಿಶ್ರಮದಿಂದ ಆ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಸ್ಥಾನಕ್ಕೆರಿದ್ದು ಅವರ ಬದುಕಿನ ಮಹತ್ವದ ಸಾಧನೆಗಳಲ್ಲೊಂದು.

ವಿಶ್ವವಿದ್ಯಾಲಯದ ಉಪಕುಲಪತಿ, ಮೇಲ್ಮನೆಯ ಶಾಸಕ ಸ್ಥಾನ, ಕನ್ನಡ ಪ್ರಾಧಿಕಾರದ ಅಧ್ಯಕ್ಷತೆ, ಪದ್ಮಭೂಷಣ ಪ್ರಶಸ್ತಿ, ಗೌರವ ಡಾಕ್ಟರೇಟ್ ಈ ಎಲ್ಲವು ಎಚ್ಚೆನ್ ಅವರ ಪ್ರತಿಭೆಗೆ ಸಂದ ಗೌರವಗಳು. ಯಾವುದನ್ನೂ ಅವರು ಅಪೇಕ್ಷಿಸಿದವರಲ್ಲ. ಯಾವ ಪ್ರಶಸ್ತಿ, ಗೌರವಗಳ ಹಿಂದೆ ಬಿದ್ದವರಲ್ಲ. ಒಂದು ಪ್ರಶಸ್ತಿ, ಉನ್ನತ ಹುದ್ದೆ ದೊರೆತಾಗಲೂ ಅವರದು ನಿರ್ವಿಕಾರ ಭಾವ.

ತನ್ನದು ಎನ್ನುವ ಒಂದು ಕೌಟಂಬಿಕ ಚೌಕಟ್ಟನ್ನೂ ಕಟ್ಟಿ ಕೊಳ್ಳದ ವ್ಯಕ್ತಿಗೆ ಅನೇಕ ಸ್ಥಾನ ಮಾನಗಳು ಹುಡುಕಿಕೊಂಡು ಬಂದವು. ಪ್ರತಿಭೆ, ನಿರಂತರ ಪರಿಶ್ರಮ, ಪ್ರಾಮಾಣಿಕತೆ ಈ ಗುಣಗಳಿಂದ ಮನುಷ್ಯನೋರ್ವನ ಜೀವನದಲ್ಲಿ ಏನೆಲ್ಲ ಪವಾಡಗಳಾಗಬಹುದೆನ್ನುವುದಕ್ಕೆ ಎಚ್.ನರಸಿಂಹಯ್ಯನವರ ಸರಳತೆ ಬದುಕು, ಸಮಾಜಿಕ ಚಿಂತನೆಗಳು ಸಾಕ್ಷಿ ಹಾಗೂ ನಮಗೆಲ್ಲರಿಗೂ ಪ್ರೇರಣೆಯಾಗಿವೆ.

(ಲೇಖಕರು : ಸಂಗಮೇಶ ಎನ್ ಜವಾದಿ, ಕೊಡಂಬಲ.
ತಾಲೂಕು – ಚಿಟಗುಪ್ಪ, ಬೀದರ ಜಿಲ್ಲೆ.-9663809340.
Email I’d : snjawadi2009@gmail.com)

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ನನ್ನ ನೆಚ್ಚಿನ ಪುಸ್ತಕ ವಿಮರ್ಶೆ ಸ್ಪರ್ಧೆ ; ವಿದ್ಯಾರ್ಥಿಗಳಿಗೆ ಬಹುಮಾನ

Published

on

ಸುದ್ದಿದಿನ,ದಾವಣಗೆರೆ:ಪೂಜ್ಯ ಡಾ|| ಸದ್ಯೋಜಾತ ಶಿವಾಚಾರ್ಯ ಮಹಾಸ್ವಾಮಿಗಳವರ ಸ್ಮರಣಾರ್ಥ ಹಾಗೂ ಶಿಕ್ಷಕರ ದಿನಾಚರಣೆ ಅಂಗವಾಗಿ ಏರ್ಪಡಿಸಿದ್ದ ದಾವಣಗೆರೆ ಜಿಲ್ಲಾ ಮಟ್ಟದ “ನನ್ನ ನೆಚ್ಚಿನ ಪುಸ್ತಕ” ವಿಮರ್ಶೆ ಸ್ಪರ್ಧೆಯಲ್ಲಿ ಜಿಲ್ಲೆಯ ಹಲವಾರು ಪ್ರೌಢಶಾಲೆಯ ಮಕ್ಕಳು ಭಾಗವಹಿಸಿದ್ದರು.

ತೀರ್ಪುಗಾರರ ಮೆಚ್ಚುಗೆ ಪಡೆದ ಸಿದ್ಧಗಂಗಾ ಸಂಸ್ಥೆಯ ನಯಾಸ ಡಿ.ಎಸ್.‌ ಪ್ರಥಮ ಬಹುಮಾನವಾಗಿ ಒಂದು ಸಾವಿರ, ದ್ವಿತೀಯ ಬಹುಮಾನ ಗಳಿಸಿದ ಜಾಹ್ನವಿ ರೂ. 750 ಮತ್ತು ತೃತೀಯ ಬಹುಮಾನ ಗಳಿಸಿದ ಚೈತನ್ಯ ವಿ. ಎಸ್‌. ರೂ. 500 ನಗದು ಬಹುಮಾನ ಪಡೆದರು. ಜೊತೆಗೆ ಈ ಮಕ್ಕಳಿಗೆ ಆಯೋಜಕರು ಸ್ಮರಣಿಕೆ, ಪ್ರಶಸ್ತಿಪತ್ರ ನೀಡಿ ಶಾಲು ಹೊದಿಸಿ ಸನ್ಮಾನಿಸಿದರು. ಎಳೆಯರ ಪ್ರಬುದ್ಧತೆಯನ್ನು ಶ್ಲಾಘಿಸಿದರು.

ಸಿದ್ಧಗಂಗಾ ವಿದ್ಯಾಸಂಸ್ಥೆಯ ಮುಖ್ಯಸ್ಥೆ ಜಸ್ಟಿನ್‌ ಡಿಸೌಜ ಅವರು ವಿಜೇತ ವಿದ್ಯಾರ್ಥಿಗಳನ್ನು ಅಭಿನಂದಿಸಿದರು. ವಿದ್ಯಾರ್ಥಿಗಳ ನಿರಂತರ ಪರಿಶ್ರಮ, ಶಿಕ್ಷಕರ ಮಾರ್ಗದರ್ಶನ ಪಾಲಕರ ಪ್ರೋತ್ಸಾಹ ಈ ಯಶಸ್ಸಿಗೆ ಕಾರಣವಾಗಿದೆ ಎಂದರು.

ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಯಲ್ಲಿ ಪಠ್ಯಪುಸ್ತಕಗಳ ಜೊತೆಗೆ ಉತ್ತಮ ಕಾದಂಬರಿಗಳು, ಕಥಾಸಂಕಲನಗಳು, ಸಾಧಕರ ಆತ್ಮಕಥೆ ಕುರಿತಾದ ಪುಸ್ತಕಗಳನ್ನು ಓದುವ ಹವ್ಯಾಸ ಅತ್ಯಂತ ಮಹತ್ವದ್ದು, ಓದಿನ ಮೂಲಕ ಜ್ಞಾನ ವೃದ್ಧಿಯಾಗುವುದರ ಜೊತೆಗೆ ಚಿಂತನೆ, ವಿಶ್ಲೇಷಣೆ ಮತ್ತು ಅಭಿವ್ಯಕ್ತಿ ಸಾಮರ್ಥ್ಯವೂ ವೃದ್ಧಿಯಾಗುತ್ತದೆ. ವಿದ್ಯಾರ್ಥಿಗಳು ಮುಂದೆಯೂ ಇಂತಹ ಸಾಹಿತ್ಯಿಕ ಚಟುವಟಿಕೆಗಳಲ್ಲಿ ಸಕ್ರೀಯವಾಗಿ ಪಾಲ್ಗೊಂಡು ಹೆಚ್ಚಿನ ಸಾಧನೆ ಮಾಡಬೇಕು ಎಂದು ಶುಭ ಹಾರೈಸಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಚಿತ್ರದುರ್ಗ | ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯ ಡಿ.ಡಿ ಬಿ.ಮಲ್ಲಿಕಾರ್ಜುನ, ಕ್ರೈಸ್ ಇ.ಡಿ ಬಿ.ಶಿವಸ್ವಾಮಿ ವಿರುದ್ಧ ಲೋಕಾಗೆ ದೂರು

Published

on

ಸುದ್ದಿದಿನ,ಚಿತ್ರದುರ್ಗ: ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯ ವ್ಯಾಪ್ತಿಗೆ ಒಳಪಡುವ ವಸತಿ ಶಾಲೆಗಳಿಗೆ (ಕ್ರೈಸ್) ನಿಯಮಾನುಸಾರ ಆಹಾರ ಸಾಮಾಗ್ರಿಗಳನ್ನು ಸರಬರಾಜು ಮಾಡದೆ ವಂಚಿಸುತ್ತಿರುವ ಶ್ರೀ ಶಿರಡಿ ಪ್ರಾವಿಜನ್ ಸ್ಟೋರ್, ಚಿಕ್ಕಬಳ್ಳಾಪುರ ಇವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ದೂರು ನೀಡಿ ನಿಗಧಿತ ಅವಧಿ ಮುಕ್ತಾಯವಾದರೂ ಯಾವುದೇ ಕ್ರಮ ಕೈಗೊಳ್ಳದೆ ನಿರ್ಲಕ್ಷ್ಯ ತೋರಿದ ಚಿತ್ರದುರ್ಗ ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಬಿ. ಮಲ್ಲಿಕಾರ್ಜುನ ಹಾಗೂ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ ಇದರ ಕಾರ್ಯನಿರ್ವಾಹಕ ನಿರ್ದೇಶಕರಾದ ಬಿ.ಶಿವಸ್ವಾಮಿ ವಿರುದ್ಧ ಕರ್ತವ್ಯ ಲೋಪದ ಅಡಿಯಲ್ಲಿ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಲೋಕಾಯುಕ್ತದಲ್ಲಿ ದೂರು ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.

ಚಿತ್ರದುರ್ಗ ಜಿಲ್ಲಾ ವ್ಯಾಪ್ತಿಯ ವಸತಿ ಶಾಲೆಗಳಿಗೆ ಅಧಿಕೃತ ಟೆಂಡರುದಾರರಾದ ಶ್ರೀ ಶಿರಡಿ ಸಾಯಿ ಪ್ರಾವಿಜನ್ ಸ್ಟೋರ್, ಚಿಕ್ಕಬಳ್ಳಾಪುರ ಇವರು ನಿಯಮಾನುಸಾರ ಆಹಾರ ಸಾಮಾಗ್ರಿಗಳನ್ನು ವಿತರಣೆ ಮಾಡದೆ ಇರುವ ಅಧಿಕೃತ ಮಾಹಿತಿ ತಿಳಿದು, ಸಮಾಜ ಕಲ್ಯಾಣ ಇಲಾಖೆ ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ, ಚಿತ್ರದುರ್ಗ ಇವುಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ವಸತಿ ಶಾಲೆಗಳ ಪ್ರಾಂಶುಪಾಲರುಗಳಿAದ ಮಾಹಿತಿಹಕ್ಕು ಅಡಿಯಲ್ಲಿ ಪಡೆದ ದೃಢೀಕೃತ ದಾಖಲೆಗಳನ್ನು ಪರಿಶೀಲನೆ ಮಾಡಿದಾಗ ಆಹಾರ ಸಾಮಾಗ್ರಿ ಸರಬರಾಜಿನಲ್ಲಿ ಹಲವಾರು ಲೋಪದೋಷಗಳು ಕಂಡು ಬಂದಿರುತ್ತವೆ.

ಆದ ಕಾರಣ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಉಪ ನಿರ್ದೇಶಕರು, ಜಿಲ್ಲಾ ಸಮಾಜ ಕಲ್ಯಾಣ ನಾವು ದೂರು ನೀಡಿ ನಿಗಧಿತ ಅವಧಿ ಮುಕ್ತಾಯವಾದರೂ ಯಾವುದೇ ಪ್ರತ್ಯುತ್ತರವನ್ನಾಗಲಿ ಅಥವಾ ಹಿಂಬರಹವನ್ನಾಗಲಿ ನೀಡದೆ ಇರುವ ಕಾರಣ ದಿನಾಂಕ: 21-04-2026 ರಂದು ಜ್ಞಾಪನವನ್ನು ನೀಡಲಾಗಿತ್ತು. ಆದರೆ ಜ್ಞಾಪನ ನೀಡಿ ನಿಗಧಿತ ಅವಧಿ ಮುಕ್ತಾಯವಾದರೂ ಉಪ ನಿರ್ದೇಶಕರು, ಜಿಲ್ಲಾ ಸಮಾಜ ಕಲ್ಯಾಣ ಇಲಾಖೆ, ಚಿತ್ರದುರ್ಗ ದೂರು ಅರ್ಜಿಗೆ ಸಂಬAಧಿಸಿದAತೆ ತನಿಖಾ ವರದಿಯನ್ನಾಗಲಿ ಅಥವಾ ಪ್ರತ್ಯುತ್ತರವನ್ನಾಗಲಿ ನೀಡಿರುವುದಿಲ್ಲ.

ಈ ಬಗ್ಗೆ ಕಾರ್ಯನಿರ್ವಾಹಕ ನಿರ್ದೇಶಕರು, ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ, ಬೆಂಗಳೂರು ಇವರಿಗೆ ದೂರು ನೀಡಲಾಗಿತ್ತು. ಆದರೆ ಇವರು ಕೂಡ ಯಾವುದೇ ಕ್ರಮ ಕೈಗೊಳ್ಳದ ಹಿನ್ನೆಲೆಯಲ್ಲಿ ಕರ್ತವ್ಯ ಲೋಪ ಎಸಗಿದ ಅಧಿಕಾರಿಗಳ ವಿರುದ್ದ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಲೋಕಾಯುಕ್ತದಲ್ಲಿ ದೂರು ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ನಾಳೆ ʼನಿರಾಕಾರ ವಿಶ್ವಕರ್ಮʼ ಕೃತಿ ಬಿಡುಗಡೆ

Published

on

ಸುದ್ದಿದಿನ,ಬೆಂಗಳೂರು:ಕಾವ್ಯಸ್ಪಂದನ ಪ್ರಕಾಶನವು ಪ್ರಕಟಿಸಿರುವ ಪತ್ರಕರ್ತ, ಲೇಖಕ ಚಂದ್ರಶೇಖರ ಗಂಧನಹಳ್ಳಿ ಅವರ ʼನಿರಾಕಾರ ವಿಶ್ವಕರ್ಮʼ ಕೃತಿಯು ಸೆಪ್ಟೆಂಬರ್‌ 17ರಂದು ಬಿಡುಗಡೆಯಾಗಲಿದೆ. ಅಂದು ಬೆಳಗ್ಗೆ 10.30ಕ್ಕೆ ಮೈಸೂರು ಜಿಲ್ಲೆ, ಕೆ.ಆರ್.ನಗರ ತಾಲೂಕು ಆಡಳಿತ ಕಚೇರಿಯ ಸಭಾಂಗಣದಲ್ಲಿ ತಾಲೂಕು ಆಡಳಿತದ ಆಶ್ರಯ, ತಾಲೂಕು ವಿಶ್ವಕರ್ಮ ಸೇವಾ ಸಮಾಜ ಹಾಗೂ ತಾಲೂಕು ವಿಶ್ವಕರ್ಮ ಸಂಘದ ಜಂಟಿ ವತಿಯಿಂದ ಆಯೋಜಿಸಿರುವ ‘ವಿಶ್ವಕರ್ಮ ಜಯಂತಿ’ ಕಾರ್ಯಕ್ರಮದಲ್ಲಿ ಶಾಸಕರಾದ ಡಿ. ರವಿಶಂಕರ್‌ ಅವರು ಕೃತಿಯನ್ನು ಲೋಕಾರ್ಪಣೆ ಮಾಡಲಿದ್ದಾರೆ.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ತಹಶೀಲ್ದಾರ್‌ ಜಿ. ಸುರೇಂದ್ರ ಮೂರ್ತಿ ಅವರು ವಹಿಸಲಿದ್ದಾರೆ. ತಾಲೂಕು ವಿಶ್ವಕರ್ಮ ಸೇವಾ ಸಮಾಜದ ಅಧ್ಯಕ್ಷ ರೇವಣ್ಣ, ತಾಲೂಕು ವಿಶ್ವಕರ್ಮ ಸಂಘದ ಅಧ್ಯಕ್ಷ ವೇಣುಗೋಪಾಲ್‌ ಎನ್., ಪದಾಧಿಕಾರಿಗಳಾದ ಈಶ್ವರಾಚಾರ್‌, ಚೇತನ್‌ ಮೂರ್ತಿ ಸೇರಿದಂತೆ ವಿಶ್ವಕರ್ಮ ಸಮುದಾಯದ ಮುಖಂಡರು ಹಾಗೂ ತಾಲೂಕು ಆಡಳಿತದ ಅಧಿಕಾರಿಗಳು ಉಪಸ್ಥಿತರಿರಲಿದ್ದಾರೆ. ವೇದಿಕೆ ಕಾರ್ಯಕ್ರಮಕ್ಕೂ ಮುನ್ನ ಶ್ರೀ ಕಾಳಿಕಾಂಬಾ ದೇವಾಲಯದಲ್ಲಿ ವಿಶ್ವಕರ್ಮ ಜಯಂತಿ ಪ್ರಯುಕ್ತ ವಿಶೇಷ ಪೂಜೆ ನೆರವೇರಲಿದ್ದು, ಬಳಿಕ ಅಲ್ಲಿಂದ ತಾಲೂಕು ಆಡಳಿತ ಕಚೇರಿಯವರೆಗೆ ಮೆರವಣಿಗೆ ನಡೆಯಲಿದೆ.

ವಿಶೇಷವೆಂದರೆ, ಪ್ರಕಾಶಕರು ಹಾಗೂ ಆಯೋಜಕರ ಆಸಕ್ತಿಯ ಮೇರೆಗೆ ‘ನಿರಾಕಾರ ವಿಶ್ವಕರ್ಮ’ ಕೃತಿಯನ್ನು ತಿಂಗಳ ಅಂತರದಲ್ಲಿ ಮೂರು ಪ್ರತ್ಯೇಕ ಕಾರ್ಯಕ್ರಮಗಳಲ್ಲಿ ಬಿಡುಗಡೆ ಮಾಡಲಾಗುತ್ತಿದೆ. ಸೆಪ್ಟೆಂಬರ್‌ 17ರಂದು ಕೆ.ಆರ್.ನಗರದಲ್ಲಿ ಕೃತಿ ಬಿಡುಗಡೆಯಾದರೆ, ಸೆಪ್ಟೆಂಬರ್‌ 20ರಂದು ಬೆಂಗಳೂರಿನ ತಾತಗುಣಿಯ ವಿಶ್ವಕರ್ಮ ನಗರದಲ್ಲಿ ಕರ್ನಾಟಕ ರಾಜ್ಯ ವಿಶ್ವಕರ್ಮ ಮಹಾಮಂಡಳಿಯ ವತಿಯಿಂದ ಹಮ್ಮಿಕೊಂಡಿರುವ ಕಾರ್ಯಕ್ರಮದಲ್ಲಿ ಕೃತಿ ಲೋಕಾರ್ಪಣೆಗೊಳ್ಳಲಿದೆ. ಹಾಗೆಯೇ, ನವೆಂಬರ್‌ 22ರಂದು ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಕನ್ನಡ ಸಾಹಿತ್ಯ ಪರಿಷತ್ತಿನ ಸಭಾಂಗಣದಲ್ಲಿ ಕಾವ್ಯಸ್ಪಂದನ ಪ್ರಕಾಶನ ಏರ್ಪಡಿಸಿರುವ ಕಾರ್ಯಕ್ರಮದಲ್ಲಿಯೂ ಈ ಕೃತಿ ಬಿಡುಗಡೆಯಾಗಲಿದೆ.

ಮಾನವ ನಾಗರಿಕತೆಯ ಇತಿಹಾಸವನ್ನು ತೆರೆದರೆ, ಅದರ ಪ್ರತಿಯೊಂದು ಪುಟದ ಹಿಂದೆಯೂ ಶ್ರಮಿಸಿದ ಅನಾಮಿಕ ಕೈಗಳು ಕಾಣಿಸುತ್ತವೆ. ಆ ಕೈಗಳು ಕಲ್ಲನ್ನು ಕೆತ್ತಿ ದೇವಸ್ಥಾನವಾಗಿಸಿವೆ, ಕಬ್ಬಿಣವನ್ನು ಬಡಿದು ಆಯುಧವಾಗಿಸಿವೆ, ಮರಕ್ಕೆ ರೂಪ ಕೊಟ್ಟು ಬಾಗಿಲಾಗಿಸಿವೆ, ಮಣ್ಣಿಗೆ ಜೀವ ತುಂಬಿ ಮಡಕೆಯಾಗಿಸಿವೆ; ಹಾಗೆಯೇ ಬಣ್ಣಗಳ ಮೂಲಕ ಅಚ್ಚಳಿಯದ ಭಾವನೆಗಳನ್ನು ಮೂಡಿಸಿವೆ. ಆ ಸೃಷ್ಟಿಶೀಲ ಕೈಗಳಿಗೆ ಬಹುಶಃ ಇತಿಹಾಸದ ಅಧಿಕೃತ ಪುಟಗಳಲ್ಲಿ, ರಾಜ-ಮಹಾರಾಜರ ಕಥೆಗಳ ನಡುವೆ ದೊಡ್ಡ ಅಕ್ಷರಗಳಲ್ಲಿ ಹೆಸರು ಸಿಕ್ಕಿಲ್ಲದಿರಬಹುದು. ಆದರೆ ಅವರು ನಿರ್ಮಿಸಿದ ಕಲೆ, ಶಿಲ್ಪ, ವಾಸ್ತು, ಉಪಕರಣ ಮತ್ತು ಸೌಂದರ್ಯವೇ ನಮ್ಮ ನಾಗರಿಕತೆಯ ಉಸಿರಾಗಿ, ಜೀವಂತ ಸಾಕ್ಷಿಗಳಾಗಿ ಇಂದಿಗೂ ಉಳಿದಿವೆ. ಅಂತಹ ಸೃಜನಶೀಲ ಕೈಗಳ ಸಮೂಹ ಸ್ಮೃತಿಯನ್ನು, ಪರಂಪರೆಯನ್ನು ಮತ್ತು ಇತಿಹಾಸವನ್ನು ಅರಿಯುವ ಅರ್ಥಪೂರ್ಣ ಪ್ರಯತ್ನವನ್ನು ನಿರಾಕಾರ ವಿಶ್ವಕರ್ಮ ಕೃತಿಯಲ್ಲಿ ಲೇಖಕರಾದ ಚಂದ್ರಶೇಖರ ಗಂಧನಹಳ್ಳಿ ಅವರು ಮಾಡಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending