ದಿನದ ಸುದ್ದಿ
ವಾಹನಗಳಿಗೆ ಹೈ ಸೆಕ್ಯೂರಿಟಿ ನಂಬರ್ ಪ್ಲೇಟ್ : ಅವಧಿ ವಿಸ್ತರಣೆ
ಸುದ್ದಿದಿನ ಡೆಸ್ಕ್ : ವಾಹನಗಳಿಗೆ ಹೈ ಸೆಕ್ಯೂರಿಟಿ ನಂಬರ್ ಪ್ಲೇಟ್ ಅಳವಡಿಸಿಕೊಳ್ಳುವ ಗಡುವನ್ನು ಮತ್ತೆ ಮೂರು ತಿಂಗಳ ಕಾಲ ವಿಸ್ತರಣೆ ಮಾಡುವುದಾಗಿ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ವಿಧಾನ ಪರಿಷತ್‌ಗಿಂದು ತಿಳಿಸಿದ್ದಾರೆ.
ಪ್ರಶ್ನೋತ್ತರ ಕಲಾಪದಲ್ಲಿ ಅವರು, ಕಾಂಗ್ರೆಸ್‌ನ ಮಾದೇಗೌಡ ಅವರ ಪ್ರಸ್ತಾಪಕ್ಕೆ ಉತ್ತರಿಸಿ, ಸುಪ್ರೀಂಕೋರ್ಟ್ ನಿರ್ದೇಶನದಂತೆ ರಾಜ್ಯದಲ್ಲಿ ಇದುವರೆಗೂ 18 ಲಕ್ಷ ವಾಹನಗಳಿಗೆ ಹೈ ಸೆಕ್ಯೂರಿಟಿ ನಂಬರ್ ಪ್ಲೇಟ್ ಅಳವಡಿಸಲಾಗಿದೆ. ಇನ್ನು ಹೆಚ್ಚಿನ ಸಂಖ್ಯೆಯಲ್ಲಿ ಇದು ನಡೆಯಬೇಕಾಗಿರುವುದರಿಂದ ಮೂರು ತಿಂಗಳು ವಿಸ್ತರಣೆ ಮಾಡಲಾಗಿದೆ ಎಂದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243