ದಿನದ ಸುದ್ದಿ
ಜಗಳವೂ ಬೇಡ, ದಂಡವೊ ಬೇಡ ; ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿಕೊಳ್ಳಿ : ಜಿಲ್ಲಾಧಿಕಾರಿ ನಿತೇಶ್ ಪಾಟೀಲ
ಸುದ್ದಿದಿನ,ಹುಬ್ಬಳ್ಳಿ : ರಾಜ್ಯದಲ್ಲಿ ಕೋವಿಡ್ ಎರಡನೇ ಅಲೆಯ ಸಂಭವ ಕುರಿತು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ. ಸಾರ್ವಜನಿಕರು ಕೋವಿಡ್ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಪಾಲಿಕೆ ಹಾಗೂ ಪೊಲೀಸ್ ಅಧಿಕಾರಿಗಳು ನಿಯಮ ಉಂಘನೆಗಾಗಿ ದಂಡ ವಿಧಿಸುವ ವೇಳೆ ವಾಗ್ವಾದ ಮಾಡುತ್ತೀರಿ. ಇದರ ಬದಲು ಜಗಳವೂ ಬೇಡ, ದಂಡವೂ ಬೇಡ ಎಲ್ಲರೂ ಮಾಸ್ಕ್ ಧರಿಸಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಿ ಎಂದು ಧಾರವಾಡ ಜಿಲ್ಲಾಧಿಕಾರಿ ನಿತೇಶ ಪಾಟೀಲ ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.
ಹುಬ್ಬಳ್ಳಿಯ ಅರ್ಬನ್ ಓಯಾಸಿಸ್ ಮಾಲ್ ನಲ್ಲಿ ಮಾಸ್ಕ್ ಧರಿಸದ ಸಾರ್ವಜನಿಕರಿಗೆ ದಂಡ ವಿಧಿಸಿ ನಂತರ ಅವರು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು.
ಇದನ್ನೂ ಓದಿ | ಹೊನ್ನಾಳಿ | ಬೈಕ್ ಅಪಘಾತದಲ್ಲಿ ಪಿಡಿಒ ಸಾವು
ನಾಗರಿಕರು ದಂಡ ವಿಧಿಸಿಕೊಂಡು ಮಾಸ್ಕ್ ಹಾಕಿಕೊಳ್ಳುವ ಪ್ರಮೇಯಕ್ಕೆ ಹೋಗಬೇಡಿ. ಸ್ವ ಇಚ್ಛೆಯಿಂದ ಕೋವಿಡ್ ನಿಯಮಗಳನ್ನು ಪಾಲಿಸಿ. ಇದರಿಂದ ನಿಮಗೂ ಹಾಗೂ ಕುಟುಂಬದವರಿಗೂ ಒಳಿತಾಗುತ್ತದೆ. ಮಾಲ್ ಗಳಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಕೋವಿಡ್ ನಿಯಮಗಳ ಉಲಂಘನೆ ಕಂಡುಬಂದಿಲ್ಲ. ಪಾಲಿಕೆ ಹಾಗೂ ಪೊಲೀಸ್ ಇಲಾಖೆ ಅಧಿಕಾರಿಗಳು ಬಸ್ ಸ್ಟಾಂಡ್ ಸೇರಿದಂತೆ ಇತರೆ ಸಾವರ್ಜನಿಕ ಸ್ಥಳಗಳಲ್ಲಿ ಪರಿಶೀಲನೆ ಮುಂದುವರಿಸಲಿದ್ದಾರೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಮಹಾನಗರ ಪಾಲಿಕೆ ಆಯುಕ್ತ ಡಾ.ಸುರೇಶ್ ಇಟ್ನಾಳ್, ತಹಶಿಲ್ದಾರರಾದ ಶಶಿಧರ ಮಾಡ್ಯಾಳ, ಪ್ರಕಾಶ್ ನಾಶಿ ಸೇರಿದಂತೆ ಮತ್ತಿತರು ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243