ದಿನದ ಸುದ್ದಿ
ಮಕ್ಕಾ ಮಸೀದಿ ಮೇಲೆ ಕೇಸರಿ ಧ್ವಜ ಹಾರಿಸಿ ಸೋಶಿಯಲ್ ಮೀಡಿಯಾದಲ್ಲಿ ಹರಿ ಬಿಟ್ಟ ಹಿಂದೂ ಯುವಕ ; ಮುಸ್ಲಿಂರ ಗುಂಪು ದೇವಸ್ಥಾನ, ಆಸ್ಪತ್ರೆ, ಬಸ್, ಪೊಲೀಸರ ವಾಹನಗಳ ಮೇಲೆ ಕಲ್ಲುತೂರಾಟ : ಹುಬ್ಬಳ್ಳಿಯಲ್ಲಿ 144 ಸೆಕ್ಷನ್ ಜಾರಿ

ಸುದ್ದಿದಿನ,ಹುಬ್ಬಳ್ಳಿ: ಮಕ್ಕಾ ಮಸೀದಿ ಮೇಲೆ ಕೇಸರಿ ಧ್ವಜ ಹಾರಿಸಿ ಸೋಶಿಯಲ್ ಮೀಡಿಯಾದಲ್ಲಿ ಹರಿ ಬಿಟ್ಟ ಹಿಂದೂ ಯುವಕನೊಬ್ಬ ಪೋಸ್ಟ್ ಮಾಡಿದ್ದ ಹಿನ್ನೆಲೆ ಹಳೆ ಹುಬ್ಬಳ್ಳಿಯಲ್ಲಿ ಮುಸ್ಲಿಂ ಯುವಕರು ಗಲಾಟೆ ನಡೆಸಿದ್ದಾರೆ.
ಮಕ್ಕಾ ಮಸೀದಿ ಮೇಲೆ ಕೇಸರಿ ಧ್ವಜ ಹಾರಿಸಿ, ಫೋಟೋ ಎಡಿಟ್ ಮಾಡಿ ಹಿಂದೂ ಯುವಕನೋರ್ವ ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದನು. ಈ ವಿವಾದಿತ ಪೋಸ್ಟ್ ಹಿನ್ನೆಲೆ ಹುಬ್ಬಳ್ಳಿಯಲ್ಲಿ ಮುಸ್ಲಿಂರ ಗುಂಪು ದೇವಸ್ಥಾನ, ಆಸ್ಪತ್ರೆ, ಬಸ್, ಪೊಲೀಸರ ವಾಹನಗಳ ಮೇಲೆ ಕಲ್ಲುತೂರಾಟ ನಡೆಸಿದ್ದಾರೆ.
ದುಷ್ಕರ್ಮಿಗಳು ಹುಬ್ಬಳ್ಳಿಯ ದಿಡ್ಡಿ ಓಣಿಯ ಗುರು ಆಸ್ಪತ್ರೆ ಧ್ವಂಸಗೊಳಿಸಿದ್ದಾರೆ. ದಿಡ್ಡಿ ಹನುಮಂತ ದೇವಸ್ಥಾನದ ಕಿಟಕಿ ಗ್ಲಾಸ್ ಒಡೆದು ಪುಡಿ, ಪುಡಿಗೊಳಿಸಿದ್ದಾರೆ ಮತ್ತು ಬಸ್‍ಗಳ ಮೇಲೆ ಕೂಡ ಕಲ್ಲು ತೂರಾಟವನ್ನು ನಡೆಸಿದ್ದಾರೆ. ಉಪ ನಗರ ಠಾಣೆ ಇನ್ಸ್‍ಪೆಕ್ಟರ್ ವಾಹನ ಜಖಂಗೊಳಿಸಿದ್ದಾರೆ. ಈ ವೇಳೆ ಗುಂಪನ್ನು ಚದುರಿಸಲು ಪೊಲೀಸರು ಲಾಠಿಚಾರ್ಜ್ ನಡೆಸಿದ್ದು, ಕೊನೆಗೆ ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ.
ಘಟನೆಯಲ್ಲಿ ಪೂರ್ವ ಸಂಚಾರಿ ಠಾಣೆ ಇನ್ಸ್‍ಪೆಕ್ಟರ್ ಕಾಡದೇವರ ಮಠ ತಲೆಗೆ ಗಾಯಗೊಂಡಿದ್ದು, ವಿವಾದಿ ಫೋಟೋ ಪೋಸ್ಟ್ ಮಾಡಿದ್ದ ಹಿಂದೂ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ. ಸದ್ಯ ಪರಿಸ್ಥಿತಿ ನಿಯಂತ್ರಣಕ್ಕೆ ಬರುವವರೆಗೂ ಹುಬ್ಬಳ್ಳಿ ನಗರಾದ್ಯಂತ ಪೊಲೀಸ್ ಆಯುಕ್ತ ಲಾಬೂರಾಮ್ ಕಲಂ 144 ಸೆಕ್ಷನ್ ಜಾರಿಗೊಳಿಸಿದ್ದಾರೆ.
ಘಟನೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಹಳೇ ಹುಬ್ಬಳ್ಳಿ ನಿವಾಸಿಗಳು ಗಲಾಟೆ ಮಾಡಿದವರು ನಮ್ಮ ಏರಿಯಾದವರಲ್ಲ. ನಾವು ಇಲ್ಲಿ ಅವರನ್ನು ನೋಡಿಯೇ ಇಲ್ಲ. ಕೆಲವರು ಕೇಸರಿ, ಕೆಲವರು ಹಸಿರು, ಕೆಲವರು ನೀಲಿ ಧ್ವಜ ಹಿಡಿದಿದ್ದರು. ಏಕಾಏಕಿ ಗಲಾಟೆ ಆರಂಭವಾಯಿತು. ನಂತರ ಕಲ್ಲು ತೂರಾಟ ನಡೆಸಿದ್ದಾರೆ ಎಂದು ಹೇಳಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್ ವಿತರಿಸಿದ ಶಾಸಕ ಕೆ.ಎಸ್.ಬಸವಂತಪ್ಪ

ಸುದ್ದಿದಿನ,ದಾವಣಗೆರೆ:2024ರ ಮಾರ್ಚ್ ತಿಂಗಳಲ್ಲಿ ನಡೆದ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಮಾಯಕೊಂಡ ಶಾಸಕ ಕೆ.ಎಸ್.ಬಸವಂತಪ್ಪ ಉಚಿತ ಲ್ಯಾಪ್‌ಟಾಪ್ ವಿತರಿಸಿದರು.
ಶಾಸಕ ನಿವಾಸದಲ್ಲಿ ಶನಿವಾರ ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್ ವಿತರಿಸಿ ಮಾತನಾಡಿದ ಶಾಸಕರು, ಇದೇ ಮಾ.21ರಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ ಆರಂಭವಾಗಲಿದ್ದು, ಮಕ್ಕಳು ಯಾವುದೇ ಆತಂಕ ಇಲ್ಲದೆ ಪರೀಕ್ಷೆ ಎದುರಿಸುವ ಮೂಲಕ ಉತ್ತಮ ಅಂಕಗಳನ್ನು ಪಡೆಯುವಂತೆ ಸಲಹೆ ನೀಡಿದರು.
ಈ ಸಂದರ್ಭದಲ್ಲಿ ದಕ್ಷಿಣ ವಲಯ ಕ್ಷೇತ್ರ ಶಿಕ್ಷಣಾಧಿಕಾರಿ ಪುಷ್ಪಲತಾ, ಇಸಿಒ ಗೋವಿಂದರಾಜ್ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಬೆಂವಿವಿ | ಸಂವಹನ ವಿದ್ಯಾರ್ಥಿಗಳಿಂದ ಹೋಳಿ ಸಂಭ್ರಮ

ಸುದ್ದಿದಿನ,ಬೆಂಗಳೂರು:ಬೆಂಗಳೂರು ವಿಶ್ವವಿದ್ಯಾಲಯದ ಸಂವಹನ ವಿಭಾಗದಿಂದ ಆಯೋಜಿಸಿದ್ದ ಹೋಳಿ ಹಬ್ಬದ ಅಂಗವಾಗಿ ವಿಭಾಗದ ಮುಂಭಾಗದಲ್ಲಿ ಸಂಶೋಧನಾ ವಿದ್ಯಾರ್ಥಿಗಳು, ಸ್ನಾತಕೋತ್ತರ ವಿದ್ಯಾರ್ಥಿಗಳು ಕಲರ್ ಹಚ್ಚುವ ಮೂಲಕ ಹೋಳಿ ಸಂಭ್ರಮ ಮಾಡಲಾಯಿತು. ಇದೇ ಸಂದರ್ಭದಲ್ಲಿ ವಿಭಾಗದ ಮುಖ್ಯಸ್ಥರು ಹಾಗೂ ಪ್ರಾಧ್ಯಾಪಕರಾದ ಡಾ. ಬಿ ಶೈಲಶ್ರೀರವರು, ಸಂಶೋಧನಾ, ಸ್ನಾತಕೋತ್ತರ ಪ್ರಥಮ ಹಾಗೂ ದ್ವೀತಿಯ ವರ್ಷದ ವಿದ್ಯಾರ್ಥಿಗಳು ಭಾಗವಹಿಸಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
2 ಕೋಟಿ 20 ಲಕ್ಷ ಜನ, ಪಡಿತರ ಚೀಟಿಯ ಪ್ರಯೋಜನ ಪಡೆಯುತ್ತಿಲ್ಲ : ಕೇಂದ್ರ ಸಚಿವ ಪ್ರಲ್ಹಾದ ಜೋಶಿ

ಸುದ್ದಿದಿನಡೆಸ್ಕ್:ದೇಶಾದ್ಯಂತ 2 ಕೋಟಿ 20 ಲಕ್ಷ ಜನ, ಪಡಿತರ ಚೀಟಿಯ ಪ್ರಯೋಜನ ಪಡೆಯುತ್ತಿಲ್ಲ; ಅಂದಾಜು 34 ಲಕ್ಷ 60 ಸಾವಿರ ಚೀಟಿಗಳು ನಕಲಿ ಎಂಬ ಆರೋಪವಿದೆ.
ಅರ್ಹರನ್ನು ಪಡಿತರ ಚೀಟಿಗೆ ಸೇರಿಸಿ, ಅನರ್ಹರನ್ನು ಕೈಬಿಡುವಂತೆ, ಎಲ್ಲ ರಾಜ್ಯ ಸರ್ಕಾರಗಳಿಗೆ ನಿರ್ದೇಶಿಸಲಾಗಿದೆ ಎಂದು, ಕೇಂದ್ರ ಆಹಾರ ಮತ್ತು ನಾಗರಿಕ ಪೂರೈಕೆ ಖಾತೆ ಸಚಿವ ಪ್ರಲ್ಹಾದ ಜೋಶಿ, ಸ್ಪಷ್ಟಪಡಿಸಿದ್ದಾರೆ.
ಲೋಕಸಭೆಯಲ್ಲಿ ಮಾತನಾಡಿದ ಅವರು, ‘ಅಂತ್ಯೋದಯ ಅನ್ನ ಯೋಜನೆ’ ಅಡಿ, ಕಳೆದ 2000ದಿಂದ ಆರ್ಥಿಕವಾಗಿ ದುರ್ಬಲರು ಹಾಗೂ ವಿಶೇಷ ಚೇತನರಿಗೆ, ಅತಿ ಕಡಿಮೆ ಬೆಲೆಯಲ್ಲಿ, ತಿಂಗಳಿಗೆ 35 ಕಿಲೋ ಆಹಾರ ಧಾನ್ಯ ನೀಡಲಾಗುತ್ತಿದೆ. ಪ್ರತಿ ಕುಟುಂಬಗಳಿಗೆ 35 ಕಿಲೋ ಪಡಿತರ ವಿತರಿಸಲಾಗುತ್ತಿದೆ ಎಂದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ6 days ago
ಸರ್ಕಾರಿ ವೈದ್ಯರು ಬೆಳಗ್ಗೆ 9 ಗಂಟೆಯಿಂದ 4 ಗಂಟೆಯವರೆಗೆ ಕಾರ್ಯ ನಿರ್ವಹಿಸುವುದು ಕಡ್ಡಾಯ:ಸಚಿವ ಶರಣಪ್ರಕಾಶ್ ಪಾಟೀಲ್
-
ದಿನದ ಸುದ್ದಿ4 days ago
ಮಾರ್ಚ್ 15 ರಂದು ಬೃಹತ್ ಉದ್ಯೋಗ ಮೇಳ ; ಸಂಜೆ ಬಿಐಇಟಿ ಸಾಂಸ್ಕೃತಿಕ ಕೇಂದ್ರದಲ್ಲಿ ಸಂಗೀತ ಪ್ರಭ
-
ದಿನದ ಸುದ್ದಿ6 days ago
ಮಹಿಳಾ ಸಬಲೀಕರಣಕ್ಕೆ ಶಿಕ್ಷಣ ಮತ್ತು ಆರ್ಥಿಕ ಸ್ವಾವಲಂಬನೆಯೇ ಪೂರಕ : ಡಾ.ಬಾಬು
-
ದಿನದ ಸುದ್ದಿ5 days ago
ಸೌಜನ್ಯ ಸಾವು ; ನಾಡಿನಾದ್ಯಂತ ಜನಾಂದೋಲನ : ಹಿರಿಯ ಪತ್ರಕರ್ತ ಪುರಂದರ್ ಲೋಕಿಕೆರೆ
-
ದಿನದ ಸುದ್ದಿ4 days ago
ದಾವಣಗೆರೆಯಲ್ಲಿ ಉದ್ಯೋಗ ಮೇಳ | ಬನ್ನಿ ಭಾಗವಹಿಸಿ, ಉದ್ಯೋಗ ಪಡೆಯಿರಿ
-
ದಿನದ ಸುದ್ದಿ4 days ago
ಚನ್ನಗಿರಿ | ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ‘ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ’
-
ದಿನದ ಸುದ್ದಿ4 days ago
ದಾವಣಗೆರೆ | ಪೊಲೀಸ್ ಪಬ್ಲಿಕ್ ಶಾಲೆಗೆ ನುರಿತ ಶಿಕ್ಷಕರಿಂದ ಅರ್ಜಿ ಆಹ್ವಾನ
-
ದಿನದ ಸುದ್ದಿ4 days ago
ವಾಣಿಜ್ಯ ಮಳಿಗೆಗಳ ಹರಾಜು ದಿನಾಂಕ ಮುಂದೂಡಿಕೆ