ದಿನದ ಸುದ್ದಿ

ಹುಬ್ಬಳ್ಳಿ ಗಲಭೆ ಪ್ರಕರಣ | ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

Published

on

ಸಾಂದರ್ಭಿಕ ಚಿತ್ರ

ಸುದ್ದಿದಿನ, ಶಿವಮೊಗ್ಗ: ಹುಬ್ಬಳ್ಳಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲವರನ್ನು ಬಂಧಿಸಲಾಗಿದ್ದು, ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಶಿವಮೊಗ್ಗದಲ್ಲಿ ನಿನ್ನೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಕರಣದ ತನಿಖೆ ನಡೆಯುತ್ತಿದ್ದು, ಸಾಕ್ಷ್ಯಾಧಾರ ಪರಿಗಣಿಸಿ ಪೊಲೀಸರು ಕ್ರಮ ವಹಿಸುತ್ತಿದ್ದಾರೆ ಎಂದರು. ಕಾನೂನು ಬಾಹಿರ ಚಟುವಟಿಕೆಯಲ್ಲಿ ತೊಡಗಿಸಿಕೊಂಡವರ ವಿರುದ್ಧ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಲಿದೆ ಎಂದು ಇದೇ ಸಂದರ್ಭದಲ್ಲಿ ಮುಖ್ಯಮಂತ್ರಿ ತಿಳಿಸಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version