ದಿನದ ಸುದ್ದಿ

ಪುಣೆಯಿಂದ ಹುಬ್ಬಳಿಗೆ ಇಂದಿನಿಂದ ವಂದೇ ಭಾರತ್ ರೈಲು ಸಂಚಾರ

Published

on

ಸುದ್ದಿದಿನಡೆಸ್ಕ್:ಪ್ರಧಾನಿ ನರೇಂದ್ರ ಮೋದಿಯವರ ದೂರದೃಷ್ಠಿ ಯೋಜನೆಗಳ ಹಿನ್ನಲೆಯಲ್ಲಿ ರೈಲ್ವೆ ಇಲಾಖೆಯು ಅಭಿವೃದ್ಧಿ ಸಾಧಿಸುತ್ತಿದೆ ಎಂದು ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ತಿಳಿಸಿದ್ದಾರೆ.

ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಸುದ್ಧಿಗಾರರೊಂದಿಗೆ ಮಾತನಾಡಿದ ಅವರು, ಜನ ಸಾಮಾನ್ಯರಿಗೆ ಹೆಚ್ಚು ಅನುಕೂಲ ಒದಗಿಸುವ ನಿಟ್ಟಿನಲ್ಲಿ ಸುಗಮ ಸುರಕ್ಷಿತ ರೈಲು ಸೇವೆ ನೀಡಲಾಗುತ್ತಿದ್ದು, ಹಿಂದಿಗಿಂತ ಈಗ ರೈಲು ಸೇವೆ ನೂರುಪಟ್ಟು ಅಭಿವೃದ್ಧಿ ಸಾಧಿಸಿದೆ ಎಂದು ಹೇಳಿದ್ದಾರೆ. ಪುಣೆಯಿಂದ ಹುಬ್ಬಳ್ಳಿಗೆ ವಂದೇ ಭಾರತ್ ರೈಲು ಸಂಚಾರ ಆರಂಭಗೊಳ್ಳಲಿದ್ದು, ಈ ರೈಲಿಗೆ ಇಂದು ರಾತ್ರಿ 8 ಗಂಟೆಗೆ ಬೆಳಗಾವಿಯಲ್ಲಿ ಹಸಿರು ನಿಶಾನೆ ತೋರಲಾಗುವುದು ಎಂದು ಮಾಹಿತಿ ನೀಡಿದ್ದಾರೆ.

ಇದೇ ವೇಳೆ ಬೆಂಗಳೂರು-ಧಾರವಾಡ ವಂದೇ ಭಾರತ್ ರೈಲು ಬೆಳಗಾವಿವರೆಗೂ ವಿಸ್ತರಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದ್ದಾರೆ. ಕಿತ್ತೂರು ಮಾರ್ಗದ ಬೆಳಗಾವಿ ಧಾರವಾಡ ನೇರ ರೈಲು ಸಂಚಾರ ಆರಂಭಿಸುವ ಬಗ್ಗೆ ಜಿಲ್ಲಾಧಿಕಾರಿ ಮತ್ತು ಸ್ಥಳೀಯ ಜನಪ್ರತಿನಿಧಿಗಳೊಂದಿಗೆ ಚರ್ಚಿಸಲಾಗಿದೆ. ಈಯೋಜನೆಯ ಕಾಮಗಾರಿಯನ್ನು ಶೀಘ್ರವೇ ಆರಂಭಿಸಲಾಗುವುದು ಎಂದು ಹೇಳಿದ್ದಾರೆ.

ಸವದತ್ತಿ ಯಲ್ಲಮ್ಮ ದರ್ಶನಕ್ಕೆ ತೆರಳುವ ಭಕ್ತರಿಗೆ ಅನುಕೂಲವಾಗುವ ಹಿನ್ನಲೆಯಲ್ಲಿ ರೈಲು ಸಂಪರ್ಕ ಕಲ್ಪಿಸುವ ಬಗ್ಗೆ ಚರ್ಚೆ ನಡೆಸಲಾಗಿದ್ದು, ಈ ಯೋಜನೆಯ ಅನುಷ್ಠಾನಕ್ಕೆ ಸರ್ವೆ ಕಾರ್ಯ ನಡೆದಿದೆ ಎಂದು ಸಚಿವರು ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version