ಲೈಫ್ ಸ್ಟೈಲ್
ಕಾರಹುಣ್ಣೀಮೇಯ ಕರಿ ಹರಿಯಲು ಸಜ್ಜಾದ ಕರುನಾಡು
ಉತ್ತರ ಕರ್ನಾಟಕದ ಜನಪ್ರಿಯ ಹಬ್ಬಗಳಲ್ಲಿ ಕಾರಹುಣ್ಣಿಮೆ ಒಂದಾಗಿದೆ, ಅದರಲ್ಲೂ ವಿಶೇಷವಾಗಿ ಗ್ರಾಮೀಣ ಸೊಗಡಿನ ಕಾರ ಹುಣ್ಣಿಮೆಯನ್ನು ರೈತರು ಸಂಭ್ರಮದಿಂದ ಆಚರಿಸುತ್ತಾರೆ. ಕೆಲ ಕಡೆ ಒಂದಷ್ಟು ಅವಘಡಗಳು ಸಂಭವಿಸಿದರೂ ಒಟ್ಟಾರೆ ಕಾರಹುಣ್ಣಿಮೆ ಹಬ್ಬ ರೈತಾಪಿ ವರ್ಗದ ಕಳೆಯೇರಿಸಿದ್ದಂತೂ ಹೌದು. ಉತ್ತರ ಕರ್ನಾಟಕದದಲ್ಲಿ ವಿಭಿನ್ನ, ಹಾಗೂ ರೈತರು ನಂಬಿಕೆಯಿಂದ ಕಾರ ಹುಣ್ಣಿಮೆ ಆಚರಿಸುವ ಪದ್ಧತಿ ತಲೆತಲಾಂತರದಿಂದ ಬಂದಿದೆ.
ಹಬ್ಬದ ಅಂಗವಾಗಿ ನಗರ ಹಾಗೂ ಹಳ್ಳಿಗಳಲ್ಲಿ ವಿವಿಧೆಡೆ ಎತ್ತುಗಳ ಕರಿ ಹರಿಯುವ ಮೂಲಕ ಕಡು ಬೇಸಿಗೆ ಕಳೆದು ಮುಂಗಾರು ಸ್ವಾಗತಿಸಲು ಈ ಹಬ್ಬ ಸಾಕ್ಷಿಯಾಗುತ್ತದೆ. ರೈತರು ತಮ್ಮ ಎತ್ತು ಹಾಗೂ ಹೋರಿಗಳ ಮೈ ತೊಳೆದು, ರೈತರು ವಿವಿಧ ಬಗೆ ಶೃಂಗಾರದ ವಸ್ತುಗಳನ್ನು ಹಾಕುತ್ತಾರೆ. ಇನ್ನು ಎತ್ತು, ಹೋರಿಗಳ ಕೊಂಬುಗಳಿಗೆ ಬಣ್ಣ ಬಳೆಯುತ್ತಾರೆ. ಜೊತೆಗೆ ಮೈಮೇಲೆ ವಿಶೇಷವಾದ ಚಿತ್ತಾರ ಬಿಡಿಸಿ ಮೆರವಣಿಗೆ ಮಾಡುತ್ತಾರೆ.
ಸಂಜೆ ಹಮ್ಮಿಕೊಳ್ಳುವ ಕರಿ ಹರಿಯುವ ಸಂರ್ಭಮದಲ್ಲಿ ಭಾಗವಹಿಸಿ ರೋಮಾಂಚನಗೊಳಿಸುತ್ತಾರೆ. ವರ್ಷವಿಡೀ ದುಡಿಯುವ ಎತ್ತುಗಳಿಗೆ ಮನರಂಜನಾ ಕೂಟವಾಗಿ ಕಾರಹುಣ್ಣಿಮೆಯ ಕರಿ ಹರಿವುವ ಕಾರ ಹುಣ್ಣಿಮೆ ನಿಮಿತ್ತ ವಿಶೇಷವಾಗಿ ಶೃಂಗಾರಗೊಂಡಿರುವ ಎತ್ತು ಹೋರಿಗಳಿಗೆ ವಿವಿಧ ಬಗೆಯ ಭಕ್ಷ್ಯಗಳಾದ ಹೋಳಿಗೆ, ಕಡುಬು ಖಾದ್ಯಗಳನ್ನು ಮಾಡಿ ಉಣಬಡಿಸುವ ಮೂಲಕ ಅನ್ನದಾತರು ತಮ್ಮ ಎತ್ತುಗಳ ಮೇಲಿನ ಅಭಿಮಾನ ಮೆರೆಯುತ್ತಾರೆ.
ಎತ್ತು ಹೋರಿಗಳಿಗೆ ಉಣಿಸುವ ಸಂಪ್ರದಾಯ ಉತ್ತರ ಕರ್ನಾಟಕದಾದ್ಯಂತ ರೂಢಿಯಲ್ಲಿದೆ. ಗ್ರಾಮದ ರೈತರು ಹಾಗೂ ಯುವಕರು ಶೃಂಗರಿಸಿ ತಂದಿದ್ದ ತಮ್ಮ ಎತ್ತುಗಳನ್ನು ಸಾಲು ಸಾಲಾಗಿ ಓಡಿಸಿ ಸಂಭ್ರಮಪಡುತ್ತಾರೆ. ನಂತರ ರೈತರು ಮನೆಗೆ ಬಂದಾಗ ಅವುಗಳಿಗೆ ಆರತಿ ಎತ್ತಿ ಖುಷಿ ಪಟ್ಟರು. ಇದರ ಅಂಗವಾಗಿ ನಗರದ ಸುತ್ತ-ಮುತ್ತಲಿರುವ ವಿವಿಧ ಹಳ್ಳಿಯ ಜನರು ಎತ್ತುಗಳ ಕರಿ ಹರಿಯುವ ವಿಶಿಷ್ಠ ಆಚರಣೆಗೆ ನೂರಾರು ರೈತರು, ಗ್ರಾಮದ ಮಹಿಳೆಯರು ಹಾಗೂ ಯುವಕರು ಸಾಕ್ಷಿಯಾಗುತ್ತಾರೆ.
ಇದಕ್ಕೂ ಮೊದಲು ಮಹಿಳೆಯರು ಕಾರ ಹುಣ್ಣಿಮೆ ನಿಮಿತ್ತ ವಿಶೇಷ ಪೂಜೆ ನೆರವೇರಿಸಿ, ಈ ವರ್ಷನಾದ್ರೂ ಉತ್ತಮ ಮಳೆ-ಬೆಳೆ, ಸಿರಿ-ಧಾನ್ಯ ಸಂಪತ್ತು ಉತ್ತಮ ರೀತಿಯಲ್ಲಿ ನೀಡಿ ನಮ್ಮನ್ನು ಉದ್ದರಿಸು ಎಂದು ಭೂ ತಾಯಿ ಹಾಗೂ ಗೋಮಾತೆಯಲ್ಲಿ ಮೊರೆಯಿಡುತ್ತಾರೆ. ಅಲ್ಲದೆ ಸಮೀಪದ ಅರಳಿ ಮರಕ್ಕೆ ಪೂಜೆ ಸಲ್ಲಿಸುವ ಮೂಲಕ ಮುಂಗಾರನ್ನು ಬರಮಾಡಿಕೊಳ್ಳುತ್ತಾರೆ. ಕಾರಹುಣ್ಣಿಮೆ ದಿನದಂದು ಎತ್ತು, ಹೋರಿಗಳಿಗೆ ಕೃಷಿ ಚಟುವಟಿಕೆ ಯಿಂದ ವಿರಾಮ ನೀಡಲಾಗಿರುತ್ತೆ. ಹಬ್ಬದ ಅಂಗವಾಗಿ ಮನೆಯಲ್ಲಿ ತಯಾರಿಸಿದ ವಿಶೇಷ ಸಿಹಿ ಖಾದ್ಯಗಳನ್ನು ಸವಿದು ಸಂಭ್ರಮ ಪಡುತ್ತಿದ್ದ ದೃಶ್ಯ ಸಾಮಾನ್ಯವಾಗಿ ಆಕರ್ಷಣೆಯಾಗಿರುತ್ತದೆ.
ಕಾರಹುಣ್ಣಿಮೆಯ ಉದ್ದೇಶ
ಕಾರಹುಣ್ಣಿಮೆ ದಿನದಂದು ಪ್ರಮುಖವಾಗಿ ಎತ್ತು, ಹೋರಿಗಳೇ ಆಕರ್ಷಣೆಯಾಗಿರುತ್ತವೆ.
ಕಾರ ಹಬ್ಬದ ವಿಶೇಷತೆಯಲ್ಲಿ ಕರಿ ಹರಿಯುವ ಕಾರ್ಯಕ್ರಮವೂ ಒಂದು. ಕಾರಹುಣ್ಣಿಮೆಯಂದು ಸಂಜೆಯಾಗುತ್ತಿದಂತೆ ಕರಿ ಹರಿಯುವ ಸಮಾರಂಭ ಹಮ್ಮಿಕೊಳ್ಳಲಾಗಿರುತ್ತೆ. ಊರ ಅಗಸಿಯಲ್ಲಿ ಬೇವಿನ ತಪ್ಪಲಿನ ತೋರಣದ ನಡುವೆ ಕೊಬ್ಬರಿ, ಶೇಂಗಾ, ಬೆಲ್ಲ, ಪುಟ್ಟಾಣಿ, ಚುರುಮುರಿ, ಉತ್ತತ್ತಿ ಹಾಗೂ ಕಲ್ಲುಸಕ್ಕರೆಯನ್ನು ಕಟ್ಟಲಾಗಿರುತ್ತೆ.
ಕರಿ ಹರಿಯಲು ಬಿಳಿ, ಹಾಗೂ ಕೆಂದು ಬಣ್ಣದ ಎತ್ತುಗಳಿಗೆ ಮಾತ್ರ ಅವಕಾಶ ನೀಡಲಾಗುತ್ತೆ. ಹಲಗೆ ಸದ್ದು ಮಾಡುತ್ತಿದ್ದಂತೆ ಅಗಸಿ ಎದುರಿಗೆ ಕರಿ ಹರಿಯಲು ಎತ್ತುಗಳೊಂದಿಗೆ ರೈತರು ತಾ ಮುಂದು ನೀ ಮುಂದು ಎಂದು ಎತ್ತುಗಳನ್ನು ಓಡಿಸಿಕೊಂಡು ಬಂದು ಕರಿ ಹರಿಯುತ್ತಾರೆ. ಕರಿಯುವ ಓಟದಲ್ಲಿ ಇತರೆ ರೈತರು ಕೇಕೆ ಹಾಕಿ ಉತ್ಸಾಹ ತುಂಬುತ್ತಾರೆ. ಯಾವ ಬಣ್ಣದ ಎತ್ತು ಕರಿಹರಿಯುತ್ತೋ ಆ ಬಣ್ಣದ ಬೆಳೆ ಚೆನ್ನಾಗಿ ಬರುತ್ತೆ ಅನ್ನುವ ನಂಬಿಕೆ ರೈತರದ್ದಾಗಿದೆ.
ಈ ಬಾರಿಯ ಕಾರಹುಣ್ಣಿಮೆ ಹಬ್ಬದಂದು ಜಿಲ್ಲೆಯ ಪ್ರತಿ ಗ್ರಾಮಗಳಲ್ಲೂ ಕಾರಹುಣ್ಣಿಮೆ ಕರಿ ಹರಿಯುವ ಸಂಪ್ರದಾಯದ ನಡೆಸಲು ಎಲ್ಲ ಜನರು ಎತ್ತುಗಳ ಓಟದ ಕರಿ ಹಬ್ಬಕ್ಕೆ ಸಾವಿರಾರು ಸಂಖ್ಯೆಯಲ್ಲಿ ರೈತರು ಸಾಕ್ಷಿಯಾಗಲು ಕಾತುರರಾಗಿದ್ದಾರೆ. ಈ ಬಾರಿ, ಓಟದಲ್ಲಿ ಯಾವ ಬಣ್ಣದ ಎತ್ತು ಮೊದಲ ಸ್ಥಾನದಲ್ಲಿ ಓಡಿ ಬಂದು ಕರಿ ಹರಿಯಲಿದೆ ಎನ್ನುವುದೆ ಒಂದು ಯಕ್ಷ ಪ್ರಶ್ನೆಯಾಗಿದೆ. ಯಾಕೆಂದರೆ ಬಿಳಿ ಎತ್ತು ಮೊದಲು ಕರಿ ಹರಿದ್ರೆ ಬಿಳಿಜೋಳ, ಅಂದರೆ ಹಿಂಗಾರು ಮಳೆ-ಬೆಳೆ ಚೆನ್ನಾಗಿ ಆಗುತ್ತೆ ಅನ್ನುವ ನಂಬಿಕೆ.
ಇನ್ನು ಕೆಂದು ಬಣ್ಣದ ಕರಿ ಹರಿದ್ರೆ ಮುಂಗಾರು ಮಳೆ-ಬೆಳೆ ಚೆನ್ನಾಗಿ ಆಗುತ್ತೆ ಅನ್ನುವ ನಂಬಿಕೆ ಯನ್ನು ರೈತರು ಹೊಂದಿದ್ದಾರೆ. ಯಾವ ಬಣ್ಣದ ಎತ್ತು ಮೊದಲು ಬರುತ್ತದೆವೋ ಆ ಬೆಳೆ ಬಿತ್ತಲೂ ಕಾತೂರರಾಗಿದ್ದಾರೆ. ಇತ್ತ ಎತ್ತುಗಳು ಒಂದೆಡೆ ಕಂಡು ಬಂದ್ರೆ, ಸಾಲು ಸಾಲಾಗಿ ರಸ್ತೆಯ ಇಕ್ಕೆಲಗಳಲ್ಲಿ ನಿಂತ ರೈತ್ರು ಕೇಕೆ ಹಾಕಿ ಸಂಭ್ರಮಿಸಿದ್ರು. ಇನ್ನು ಮೊದಲು ಕರಿ ಹರಿದ ಎತ್ತಿಗೆ ರೈತರೆಲ್ಲರೂ ಸೇರಿ ಮೆರವಣಿಗೆ ಮಾಡುತ್ತಾರೆ.
ಕೆಲವು ಕಡೆಗಳಲ್ಲಿ ಕರಿ ಹರಿದ ಬಳಿಕ ಗುಂಡು ಎತ್ತುವ ಸ್ಪರ್ಧೆ ಏರ್ಪಡಿಸಲಾಗಿರುತ್ತೆ. ವರ್ಷವಿಡೀ ಕೃಷಿಯಲ್ಲಿ ತೊಡಗಿದ ರೈತರು ದೈಹಿಕ ಕಸರತ್ತು ನಡೆಸುವ ಮೂಲಕ ಕ್ರೀಡಾ ಮನೋಭಾವ ಮೆರೆಯುತ್ತಾರೆ. ಆನಂತರ ಶಕ್ತಿ ದೇವತೆಗಳ ದೇಗುಲಗಳಿಗೆ ತೆರಳಿ ರೈತರು ಮಳೆ ಕುರಿತಾಗಿ ದೇವರ ಹೇಳಿಕೆಯನ್ನು ಕೇಳುತ್ತಾರೆ. ಒಟ್ಟಿನಲ್ಲಿ ಕಾರಹುಣ್ಣಿಮೆ ಎಂದರೆ ರೈತರ- ಎತ್ತುಗಳ ಹಬ್ಬ ಅಂತಾನೆ ಫೇಮಸ್..
ಇನ್ನು ಕಪ್ಪು ಬಣ್ಣದ ಎತ್ತು ಅಪಶಕುನ ಎನ್ನುವ ಕಾರಣಕ್ಕೆ ಕರಿ ಹರಿಯಲು ಕಪ್ಪು ಬಣ್ಣದ ಎತ್ತನ್ನು ಓಟಕ್ಕೆ ಬಿಡುವುದಿಲ್ಲ.ಇನ್ನೊಂದು ನಂಬಿಕೆ ಎಂದರೆ ಕರಿ ಹರಿದ ಎತ್ತು ಕೈಗೆ ಸಿಗದೆ ಊರಿನ ಸೀಮೆ ದಾಟಿ ಹೋದರೆ ಕರಿ ಹರಿಯುದನ್ನು ನಿಷೇಧಿಸಿ ಕಾರಹುಣ್ಣಿಮೆ ಹಬ್ಬವನ್ನು ಕೈಬಿಡುತ್ತಾರೆ. ಒಟ್ನಲ್ಲಿ ರಾಜ್ಯದ ಬಹುತೇಕ ಜಿಲ್ಲೆಯಲ್ಲಿ ಈ ಬಾರಿ ಮುಂಗಾರು ಮತ್ತು ಹಿಂಗಾರು ಮಳೆ-ಬೆಳೆ ಚೆನ್ನಾಗಿ ಬರಲಿ ಎನ್ನುವ ಬರವಸೆಯಲ್ಲಿ ಕಾಯುತ್ತಿದ್ದಾರೆ. ಈ ವರ್ಷನಾದ್ರು ಭೂತಾಯಿ ಹಾಗೂ ವರುಣದೇವರಿಬ್ಬರೂ ಸೇರಿ ರೇತನ ದುಖಃದ ಬದುಕು ಬವಣೆಯನ್ನು ನೀಗಿಸಲಿ ಎಂದು ಆಶಿಸುತ್ತೇವೆ.
- ಕಾರಹುಣ್ಣಿಮೆ ಹಬ್ಬ ಆಚರಿಸಲು ನಮಗೆ ತುಂಬಾ ಸಂತೋಷ ಇದೆ. ನಾನು ನಮ್ಮ ಎತ್ತುಗಳನ್ನು ಸಹ ಓಟಕ್ಕೆಂದು ಸಿಂಗಾರ ಮಾಡಿ ತಯಾರಿ ಮಾಡುತ್ತಿದ್ದೆವೆ. ಆದರೆ ವರ್ಷದಿಂದ ವರ್ಷಕ್ಕೆ ಮಳೆ ಬೆಳೆ ಕಡಿಮೆಯಾಗಿದೆ. ಈ ವರ್ಷನಾದ್ರು ದೇವರು ಉತ್ತಮ ಮಳೆ ಕೊಡುತ್ತಾನೆನೋ ಎನ್ನುವ ಬರವಸಲೆಯಲ್ಲಿ ಅನ್ನದಾತ ಕಾಯುತ್ತಿದ್ದಾನೆ. ಅನ್ನದಾತ ಪ್ರತಿವರ್ಷವು ನಷ್ಟ ಅನುಭವಿಸಿ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾನೆ. ಇದು ಈ ವರ್ಷ ಕಡಿಯಾಗುತ್ತದೆ ಎಂದು ನಂಬಿದ್ದವೆ.
|ಸಂಗಪ್ಪ. ಚಂ. ಮೇತ್ರಿ (ವಿಜಯಪುರ ರೈತ)
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂತರಂಗ
ದೇವನಗರಿ ಸುದ್ದಿದಿನ – ದೀಪಾವಳಿ ವಿಶೇಷ ಸಂಚಿಕೆ 2026 : ಕತಾ ಸ್ಪರ್ಧೆ ; ಅನಂತ ಕುಣಿಗಲ್ ಅವರ ಸಂಸ ಕತೆ ಪಡೆದ ಪ್ರಥಮ ಸ್ಥಾನ ಅಮಾನ್ಯ ; ಪರಿಷ್ಕೃತ ಫಲಿತಾಂಶ ಪ್ರಕಟ
ಸುದ್ದಿದಿನ,ದಾವಣಗೆರೆ:ದೇವನಗರಿ ಸುದ್ದಿದಿನ – ದೀಪಾವಳಿ ವಿಶೇಷ ಸಂಚಿಕೆ 2026ರ ಕತಾ ಸ್ಪರ್ಧೆಯ ನಿಯಮಾವಳಿಯನ್ನು ಉಲಂಘಿಸಿರುವ ಕಾರಣ ಅನಂತ ಕುಣಿಗಲ್ ಅವರ ಸಂಸ ಕತೆ ಪಡೆದ ಪ್ರಥಮ ಸ್ಥಾನವನ್ನು ಅಮಾನ್ಯ ಮಾಡಲಾಗಿದೆ ಎಂದು ಪತ್ರಿಕೆಯ ಸಂಪಾದಕ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕತೆ-ಕವಿತೆ ಸ್ಪರ್ಧೆಯ ನಿಯಮಾವಳಿಗಳ ಪ್ರಕಾರ ‘ “ಸ್ವತಂತ್ರ ರಚನೆಯಾಗಿರ ಬೇಕು. ಈ ಮೊದಲು ಯಾವ ಮಾಧ್ಯಮಗಳಲ್ಲಿಯೂ ಪ್ರಕಟ ಅಥವಾ ಪ್ರಸಾರ ಆಗಿರಬಾರದು” ಎನ್ನುವ ನಿಯಮಾವಳಿಗಳನ್ನು ಉಲಂಘಿಸಿರುವುದರಿಂದ ಪ್ರಥಮ ಸ್ಥಾನ ಪಡೆದ ” ಸಂಸ” ಕತೆಯನ್ನು ಅಮಾನ್ಯಗೊಳಿಸಲಾಗಿದೆ.
‘ಸಂಸ’ ಕತೆಯ ಕತೆಗಾರರಾದ ಅನಂತ ಕುಣಿಗಲ್ ಅವರು
ಸ್ವತಃ ತಮ್ಮ ಫೇಸ್ ಬುಕ್ ವಾಲ್ ನಲ್ಲಿ ‘ ಸಂಸ’ ಕತೆಯು ಈ ಹಿಂದೆ ಯಾವುದೋ ಕತಾ ಸ್ಪರ್ಧೆಯಲ್ಲಿ ಸಮಾಧಾನಕರ ಬಹುಮಾನ ಪಡೆದಿತ್ತು. ಮತ್ತೊಂದೆಡೆ ತೃತೀಯ, ಮಗದೊಂದೆಡೆ ದ್ವಿತೀಯ ಬಹುಮಾನ ಲಭಿಸಿತ್ತು, ಅಲ್ಲದೆ ‘ಟೋಟೋ’ ಅವಾರ್ಡ್ ನ ಅಂತಿಮ ಸುತ್ತಿಗೆ ಎರಡು ಬಾರಿ ಶಾರ್ಟ್ ಲಿಸ್ಟ್ ಆಗಿತ್ತು ಎಂದು ಬರೆದು ಕೊಂಡಿರುತ್ತಾರೆ. ಆದಕಾರಣ ಈ ಕ್ರಮವನ್ನು ಕೈಗೊಳ್ಳಲಾಗಿದೆ.
ಕತಾ ಸ್ಪರ್ಧೆಯ ಪರಿಷ್ಕೃತ ಫಲಿತಾಂಶ
ಕತಾ ಸ್ಪರ್ಧೆಯಲ್ಲಿ ರವಿಮುಡೋಡಿ ಅವರ ʼಅರ್ಧ ರೇಖೆಯ ಚಿತ್ರʼ ಕತೆಗೆ ಪ್ರಥಮ ಬಹುಮಾನ, ವಿಜಯ ಶ್ರೀ ಹಾಲಾಡಿ ಅವರ ʼಮಳೆಹಾಡುʼ ಕತೆಗೆ ದ್ವಿತೀಯ ಬಹುಮಾನ ಹಾಗೂ ಅಜೇಯ ಸಿಂಹ ಕೆ.ವಿ ಅವರ ‘ ಮಾರ್ಜಕದ ಶ್ರೀಮುಡಿ’ ಕತೆಗೆ ತೃತೀಯ ಬಹುಮಾನ ದೊರೆತಿದೆ ಎಂದು ಸುದ್ದಿದಿನ ಪತ್ರಿಕೆ ಸಂಪಾದಕ ಮಾಹಿತಿ ನೀಡಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದೇವನಗರಿ ಸುದ್ದಿದಿನ ಪತ್ರಿಕೆಯ ದೀಪಾವಳಿ ವಿಶೇಷಾಂಕ- 2026 ರ ಕತೆ – ಕವಿತೆ ಫಲಿತಾಂಶ ಪ್ರಕಟ
ಸುದ್ದಿದಿನ,ದಾವಣಗೆರೆ:ದೇವನಗರಿ ಸುದ್ದಿದಿನ ಹಾಗೂ ಶ್ಯಾಮ್ ಪ್ರಕಾಶನ, ನವಿಲೇಹಾಳು ವತಿಯಿಂದ ದೀಪಾವಳಿ ವಿಶೇಷಾಂಕ-2026 ರ ಕತೆ ಮತ್ತು ಕವಿತೆ ಸ್ಪರ್ಧೆಯ ಫಲಿತಾಂಶ ಪ್ರಕಟವಾಗಿದ್ದು, ಕತಾ ಸ್ಪರ್ಧೆಯಲ್ಲಿ ಅನಂತ್ ಕುಣಿಗಲ್ ಅವರ ́ಸಂಸʼ ಕತೆಗೆ ಪ್ರಥಮ ಬಹುಮಾನ,. ರವಿ ಮಡೋಡಿ ಅವರ ʼಅರ್ಧ ರೇಖೆಯ ಚಿತ್ರʼ ಕತೆಗೆ ದ್ವಿತೀಯ ಬಹುಮಾನ ಹಾಗೂ ವಿಜಯ ಶ್ರೀ ಹಾಲಾಡಿ ಅವರ ʼಮಳೆಹಾಡುʼ ಕತೆಗೆ ತೃತೀಯ ಬಹುಮಾನ ದೊರೆತಿದೆ ಎಂದು ಸುದ್ದಿದಿನ ಪತ್ರಿಕೆ ಸಂಪಾದಕರಾದ ಗೋವರ್ಧನ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅಜೇಯ ಸಿಂಹ ಕೆ.ವಿ. ಅವರ ʼಮಾರ್ಜಕದ ಶ್ರೀಮುಡಿʼ, ಟಿ.ಆರ್. ಪ್ರಕಾಶ ಭಾಗವತ ಅವರ ʼಸಮಾಧಿʼ , ರಘುನಂದನ್ ಅವರ ʼಹೀಗೊಂದು ಕಛೇರಿʼ , ಡಾ||. ಮಿರ್ಜಾ ಬಷೀರ್ ಅವರ ʼ ಒಂದು ಸದ್ದಿಲ್ಲದ ಕ್ರಾಂತಿʼ, ಸುಜಾತ ಎಸ್. ಎನ್ ರೆಡ್ಡಿ ಅವರ ʼ ಸತ್ಯ ದರ್ಶನʼ, ಚಂದ್ರಿಕಾ ನಾಗರಾಜ್ ಹಿರಿಯಡಕ ಅವರ ʼ ವೆಂಕಟನ ಸ್ವೆಟರ್, ರೈಹಾನ ಅವರ ʼಬಾವಿಗೆ ಬಿದ್ದರೂʼ, ಒಟ್ಟು ಈ ಏಳುಕತೆಗಳು ತೀರ್ಪುಗಾರ ಮೆಚ್ಚುಗೆ ಪಡೆದಿವೆ.
ಕತಾ ಸ್ಪರ್ಧೆಯ ತೀರ್ಪುಗಾರರಾಗಿ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತರಾದ ಕತೆಗಾರ ಹಾಗೂ ನಿವೃತ್ತ ಪ್ರಾಧ್ಯಾಪಕ ಅಮರೇಶ ನುಗಡೋಣಿ, ಹೊಸಪೇಟೆ, ಕವಿ ಕತೆಗಾರ , ಜಿ. ಮುದ್ದುವೀರಸ್ವಾಮಿ, ದಾವಣಗೆರೆ, ಕತೆಗಾರ್ತಿ ಹಾಗೂ ಕನ್ನಡ ಪ್ರಾಧ್ಯಾಪಕಿ, ಸುಜಾತ ಚಲಾವಾದಿ, ತಾಳಿಕೋಟೆ, ಕತೆಗಾರ ಹಾಗೂ ಅಕ್ಷರ ಸಂಗಾತ ಮಾಸ ಪತ್ರಿಕೆಯ ಸಂಪಾದಕ ಡಾ. ಟಿ ಎಸ್. ಗೊರವರ, ಗಜೇಂದ್ರಘಡ ಇವರು ಕಾರ್ಯನಿವಹಿದ್ದರು ಎಂದು ಮಾಹಿತಿ ನೀಡಿದ್ಧಾರೆ.
ಪ್ರಥಮ ಬಹುಮಾನ ಹತ್ತು ಸಾವಿರ ರೂ (10000 ರೂ ) ನಗದು, ದ್ವೀತೀಯ ಬಹುಮಾನ ಐದು ಸಾವಿರ ನಗದು, (5000 ರೂ), ತೃತೀಯ ಬಹುಮಾನ ಮೂರು ಸಾವಿರ (3000) ರೂ ನಗದು ಹಾಗೂ ಪ್ರಮಾಣ ಪತ್ರವನ್ನು ಬಹುಮಾನಿತರಿಗೆ ನೀಡಲಾಗುವುದು.
ಕವಿತೆ ಸ್ಪರ್ಧೆ ಫಲಿತಾಂಶ
ಕವಿತೆ ಸ್ಪರ್ಧೆಯಲ್ಲಿ ಆನಂದ ಕುಂಚನೂರ ಅವರ ʼ ಬೆತ್ತಲೆ ಶಿಖರʼ ಕವಿತೆಗೆ ಪ್ರಥಮ ಬಹುಮಾನ, ಅಜಯ್ ಅಂಗಡಿ ಅವರ ʼಒಂದು ಶ್ರಾವಣ ಸಂಜೆಗೆʼ ದ್ವಿತೀಯ ಬಹುಮಾನ, ಭಾಗ್ಯ ಜ್ಯೋತಿ ಹಿರೇಮಠ ಅವರ ʼ ಗೋಡೆ ಕವಿತೆಗೆ ತೃತೀಯ ಬಹುಮಾನ ದೊರೆತಿದೆ.
ಫೈಜ್ನಟ್ರಾಜ್ ಅವರ ʼಅವ್ವ ತಟ್ಟಿದ ರೊಟ್ಟಿಯಲ್ಲಿ ಬೆರಳಿನ ಗುರುತುʼ, ಹೊನ್ನಪ್ಪ. ನೀ. ಕರೆಕನ್ನಮ್ಮನವರ ಅವರ ʼಒಂಟಿಯಾನದ ಸರಕುʼ, ಕವಿತ ಎ.ವಿ ಅವರ ʼಬಂದಿದ್ದಾರೆ ಸಿಕ್ಕಿಲ್ಲʼ, ರಮ್ಯ ಕೆ.ಜಿ. ಅವರ ʼಬಿಡಿಸಿಕೊಳ್ಳುತ್ತದೊಂದು ಚಿತ್ರ,ʼ, ಮುರ್ತುಜಾ ಬೇಗಂ ಕೊಡಗಲಿ ಅವರ ʼಒಂದು ಕನ್ನಡಿ ಮೂರು ಬಿಂಬಗಳುʼ, ಮನಸ್ವಿ ಎಂ ಸ್ವಾಮಿ ಅವರ ʼ ರಾಜಧಾನಿಯಲ್ಲಿ ರಾಜʼ, ವೀಣಾ ರಾವ್ ಅವರ ʼಬಣ್ಣಗಳ ಆಚೆಗೆʼ ಒಟ್ಟು ಏಳು ಕವಿತೆಗಳು ತೀರ್ಪುಗಾರರ ಮೆಚ್ಚುಗೆ ಪಡೆದಿವೆ.
ಕವಿತೆ ಸ್ಪರ್ಧೆಯ ತೀರ್ಪುಗಾರರಾಗಿ ಕವಿ ಚಂದ್ರಶೇಖರ ತಾಳ್ಯ, ಹೊಳಲ್ಕೆರೆ, ಕವಯಿತ್ರಿ ಸವಿತಾ ನಾಗಭೂಷಣ, ಶಿವಮೊಗ್ಗ, ಕವಿ ವಿಲ್ಸನ್ ಕಟೀಲು ಅವರು ಕಾರ್ಯನಿರ್ವಹಿಸಿದ್ದರು.
ಪ್ರಥಮ ಬಹುಮಾನ ಐದು ಸಾವಿರ ರೂ (5000 ರೂ ) ನಗದು, ದ್ವೀತೀಯ ಬಹುಮಾನ ಮೂರು ಸಾವಿರ ನಗದು, (3000 ರೂ), ತೃತೀಯ ಬಹುಮಾನ ಎರಡು ಸಾವಿರ (2000) ರೂ ನಗದು ಹಾಗೂ ಪ್ರಮಾಣ ಪತ್ರವನ್ನು ಬಹುಮಾನಿತರಿಗೆ ಇದೇ ಅಕ್ಟೋಬರ್ 24 ರಂದು ದಾವಣಗೆರೆಯ ಕುವೆಂಪು ಕನ್ನಡ ಭವನದಲ್ಲಿ ʼ ನಡೆಯುವ ದೀಪಾವಳಿ ವಿಶೇಷಾಂಕ-2026 ರ ಬಿಡುಗಡೆ ಕಾರ್ಯಕ್ರಮದಲ್ಲಿ ನೀಡಿ ಗೌರವಿಸಲಾಗುವುದು ಎಂದು ಅವರು ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗೆ: 9980346243 ಸಂಪರ್ಕಿಸಲು ಈ ಮೂಲಕ ತಿಳಿಸಲಾಗಿದೆ.

ದಿನದ ಸುದ್ದಿ
5 ವರ್ಷದಿಂದ PFಗೆ ಹಣ ಜಮಾ ಮಾಡಿಲ್ಲ, ಬಡ್ಡಿ ಸಿಗುತ್ತಾ? ಇಲ್ಲಿದೆ EPFO ನಿಯಮದ ಸ್ಪಷ್ಟ ಮಾಹಿತಿ!
ಸುದ್ದಿದಿನ, ಬೆಂಗಳೂರು: ಉದ್ಯೋಗಿ ಭವಿಷ್ಯ ನಿಧಿ ಸಂಸ್ಥೆ (EPFO) ಚಂದಾದಾರರಲ್ಲಿ ಬಹುದಿನಗಳಿಂದ ಒಂದು ದೊಡ್ಡ ಗೊಂದಲವಿದೆ. ನಾನು ಕೆಲಸ ಬಿಟ್ಟಿದ್ದೇನೆ, ಕಳೆದ 5 ವರ್ಷಗಳಿಂದ ಪಿಎಫ್ ಖಾತೆಗೆ ಹಣ ಜಮೆಯಾಗಿಲ್ಲ, ಹಾಗಾದರೆ ನನ್ನ ಖಾತೆಗೆ ಇನ್ನೂ ಬಡ್ಡಿ ಸಿಗುತ್ತದೆಯೇ ಅಥವಾ ನನ್ನ ಹಣ ಹಾಗೆಯೇ ಉಳಿದುಕೊಳ್ಳುತ್ತದೆಯೇ?’ ಎಂಬುದು ಆ ಪ್ರಶ್ನೆ. ಈ ಪ್ರಶ್ನೆಗೆ ಇಪಿಎಫ್‌ಒ ನೇರವಾಗಿ ನೀಡಿರುವ ಉತ್ತರ – ಹೌದು, ಖಂಡಿತವಾಗಿಯೂ ಬಡ್ಡಿ ಸಿಗುತ್ತದೆ’.ಪಿಎಫ್‌ಗೆ ಹಣ ಜಮಾ ಮಾಡುವುದು ನಿಂತ ತಕ್ಷಣವೇ ಬಡ್ಡಿ ಬರುವುದು ನಿಂತುಹೋಗುತ್ತದೆ ಎಂಬುದು ಹಲವರಲ್ಲಿರುವ ತಪ್ಪು ಕಲ್ಪನೆ. ಆದರೆ ವಾಸ್ತವವೇ ಬೇರೆ.
http://Visit : www.suddidina.com
3 ವರ್ಷಗಳ ಹಳೆಯ ನಿಯಮದ ಅಸಲಿ ಸತ್ಯವೇನು?
ಈ ಗೊಂದಲಕ್ಕೆ ಕಾರಣ 2016ಕ್ಕಿಂತ ಮೊದಲು ಇದ್ದ ನಿಯಮ. ಹಳೆಯ ನಿಯಮದ ಪ್ರಕಾರ, ಒಂದು ಪಿಎಫ್ ಖಾತೆಗೆ ಸತತ 36 ತಿಂಗಳು (3 ವರ್ಷ) ಯಾವುದೇ ವಂತಿಗೆ ಜಮೆಯಾಗದಿದ್ದರೆ, ಅದನ್ನು `ನಿಷ್ಕ್ರಿಯ ಖಾತೆ’ (Inoperative Account) ಎಂದು ಪರಿಗಣಿಸಲಾಗುತ್ತಿತ್ತು ಮತ್ತು ಅಂತಹ ಖಾತೆಗೆ ಬಡ್ಡಿ ನೀಡುವುದನ್ನು ತಡೆಹಿಡಿಯಲಾಗುತ್ತಿತ್ತು. ಇದರಿಂದಾಗಿ ಲಕ್ಷಾಂತರ ಖಾತೆದಾರರ ಹಣಕ್ಕೆ ಬಡ್ಡಿ ಸಿಗದೆ ನಷ್ಟವಾಗುತ್ತಿತ್ತು.ಆದರೆ ಚಂದಾದಾರರ ಹಿತದೃಷ್ಟಿಯಿಂದ ಇಪಿಎಫ್‌ಒ 2016 ರಲ್ಲಿ ಈ ನಿಯಮಕ್ಕೆ ಮಹತ್ವದ ತಿದ್ದುಪಡಿ ತಂದಿದೆ. ಹೊಸ ಮತ್ತು ಪ್ರಸ್ತುತ ಜಾರಿಯಲ್ಲಿರುವ ನಿಯಮದ ಪ್ರಕಾರ, ಖಾತೆದಾರನಿಗೆ 58 ವರ್ಷ ವಯಸ್ಸಾಗುವವರೆಗೆ ಪಿಎಫ್ ಖಾತೆಯಲ್ಲಿರುವ ಹಣಕ್ಕೆ ನಿಯಮಿತವಾಗಿ ಚಕ್ರಬಡ್ಡಿ (Compounding Interest) ಜಮೆಯಾಗುತ್ತಲೇ ಇರುತ್ತದೆ. ನೀವು ಕೆಲಸದಲ್ಲಿದ್ದರೂ, ಇಲ್ಲದಿದ್ದರೂ ಇದು ಅನ್ವಯಿಸುತ್ತದೆ.
ಉದಾಹರಣೆ:
ಇದನ್ನು ಒಂದು ಉದಾಹರಣೆಯೊಂದಿಗೆ ನೋಡೋಣ. ಒಬ್ಬ ವ್ಯಕ್ತಿ ತಮ್ಮ 40ನೇ ವಯಸ್ಸಿನಲ್ಲಿ ಕೆಲಸಕ್ಕೆ ರಾಜೀನಾಮೆ ನೀಡಿ, ತಮ್ಮ ಪಿಎಫ್ ಖಾತೆಯಲ್ಲಿದ್ದ 10 ಲಕ್ಷ ರೂಪಾಯಿಯನ್ನು ಹಿಂಪಡೆಯದೆ ಹಾಗೆಯೇ ಬಿಡುತ್ತಾರೆ ಎಂದುಕೊಳ್ಳಿ. ಅವರು ಮುಂದಿನ 5 ವರ್ಷಗಳ ಕಾಲ ಅಂದರೆ 45ನೇ ವಯಸ್ಸಿನವರೆಗೆ ಯಾವುದೇ ಹಣವನ್ನು ಜಮೆ ಮಾಡದಿದ್ದರೂ, ಅವರ ಖಾತೆಯಲ್ಲಿರುವ ಆ 10 ಲಕ್ಷ ರೂಪಾಯಿಗೆ ಇಪಿಎಫ್‌ಒ ಪ್ರತಿ ವರ್ಷ ಘೋಷಿಸುವ ಬಡ್ಡಿ ದರದಂತೆ (ಪ್ರಸ್ತುತ 8.25%) ಬಡ್ಡಿ ಸೇರ್ಪಡೆಯಾಗುತ್ತಲೇ ಹೋಗುತ್ತದೆ. ಇದು ಅವರಿಗೆ 58 ವರ್ಷ ತುಂಬುವವರೆಗೆ ಅಂದರೆ ಇನ್ನೂ 13 ವರ್ಷಗಳ ಕಾಲ ನಿರಂತರವಾಗಿ ಸಿಗುತ್ತದೆ. ಅದೇ ರೀತಿ 50ನೇ ವಯಸ್ಸಿನಲ್ಲಿ ಕೆಲಸ ಬಿಟ್ಟವರಿಗೆ 58 ವರ್ಷದವರೆಗೆ 8 ವರ್ಷಗಳ ಕಾಲ ಬಡ್ಡಿ ಸಿಗುತ್ತದೆ.
ಈ ಒಂದು ತೆರಿಗೆ ನಿಯಮವನ್ನು ಮಾತ್ರ ಮರೆಯಬೇಡಿ!
ನಿಮ್ಮ ಹಣಕ್ಕೆ ಬಡ್ಡಿ ಸಿಗುತ್ತದೆ ಎಂಬುದು ಖುಷಿಯ ವಿಚಾರವೇ, ಆದರೆ ಇಲ್ಲಿ ಒಂದು ಪ್ರಮುಖ ತೆರಿಗೆ ಎಚ್ಚರಿಕೆಯಿದೆ. ನೀವು ಕೆಲಸ ಮಾಡುತ್ತಿರುವಾಗ ನಿಮ್ಮ ಪಿಎಫ್ ಬಡ್ಡಿಗೆ ಸಂಪೂರ್ಣ ತೆರಿಗೆ ವಿನಾಯಿತಿ ಇರುತ್ತದೆ. ಆದರೆ ನೀವು ಕೆಲಸ ಬಿಟ್ಟ ನಂತರ ನಿಮ್ಮ ಖಾತೆಗೆ ಜಮೆಯಾಗುವ ಬಡ್ಡಿಯನ್ನು ಆದಾಯ ತೆರಿಗೆ ಇಲಾಖೆಯು `ಇತರ ಮೂಲಗಳಿಂದ ಬಂದ ಆದಾಯ’ (Income from Other Sources) ಎಂದು ಪರಿಗಣಿಸುತ್ತದೆ. ಆದ್ದರಿಂದ ಆ ಬಡ್ಡಿಯ ಮೊತ್ತವನ್ನು ನೀವು ನಿಮ್ಮ ವಾರ್ಷಿಕ ಆದಾಯದಲ್ಲಿ ತೋರಿಸಿ, ನಿಮ್ಮ ತೆರಿಗೆ ಸ್ಲ್ಯಾಬ್‌ಗೆ ಅನುಗುಣವಾಗಿ ತೆರಿಗೆ ಪಾವತಿಸಬೇಕಾಗುತ್ತದೆ.
ಖಾತೆದಾರರು ಏನು ಮಾಡಬೇಕು?
1. ಕೆಲಸ ಬದಲಾಯಿಸಿದ್ದರೆ: ಹಳೆಯ ಕಂಪನಿಯ ಪಿಎಫ್ ಹಣವನ್ನು ವಿತ್‌ಡ್ರಾ ಮಾಡುವ ಬದಲು, ನಿಮ್ಮ ಯುಎಎನ್ (UAN) ಮೂಲಕ ಹೊಸ ಕಂಪನಿಯ ಖಾತೆಗೆ ವರ್ಗಾವಣೆ (Transfer) ಮಾಡಿಕೊಳ್ಳಿ. ಇದರಿಂದ ನಿಮ್ಮ ಸೇವಾ ಅವಧಿ ನಿರಂತರವಾಗಿರುತ್ತದೆ.
2. ವೃತ್ತಿ ವಿರಾಮದಲ್ಲಿದ್ದರೆ: 58 ವರ್ಷದವರೆಗೆ ಹಣ ಸುರಕ್ಷಿತವಾಗಿ ಬೆಳೆಯುತ್ತದೆ. ಆದರೆ ನಿಮಗೆ ತುರ್ತು ಅಗತ್ಯವಿಲ್ಲದಿದ್ದರೆ, ಹೆಚ್ಚಿನ ಆದಾಯಕ್ಕಾಗಿ ಬೇರೆಡೆ ಹೂಡಿಕೆ ಮಾಡುವ ಬಗ್ಗೆಯೂ ಯೋಚಿಸಬಹುದು.
3. 58 ವರ್ಷದ ನಂತರ: ಖಾತೆದಾರನಿಗೆ 58 ವರ್ಷ ತುಂಬಿದ ನಂತರವೂ ಹಣವನ್ನು ಹಿಂಪಡೆಯದಿದ್ದರೆ ಮಾತ್ರ ಆ ಖಾತೆಯನ್ನು ಮತ್ತೆ `ನಿಷ್ಕ್ರಿಯ’ ಎಂದು ಪರಿಗಣಿಸಿ ಬಡ್ಡಿ ನೀಡುವುದನ್ನು ಶಾಶ್ವತವಾಗಿ ನಿಲ್ಲಿಸಲಾಗುತ್ತದೆ.ಆದ್ದರಿಂದ 5 ವರ್ಷದಿಂದ ಹಣ ಜಮೆಯಾಗದಿದ್ದರೂ ಚಿಂತಿಸಬೇಕಿಲ್ಲ, ನಿಮ್ಮ ಪಿಎಫ್ ಹಣ ಇಪಿಎಫ್‌ಒ ನಲ್ಲಿ ಸುರಕ್ಷಿತವಾಗಿ ಬಡ್ಡಿಯೊಂದಿಗೆ ಬೆಳೆಯುತ್ತಿದೆ.



