/home/u584543641/domains/suddidina.com/public_html/wp-content/themes/zox-news/amp-single.php on line 77

Warning: Trying to access array offset on value of type bool in /home/u584543641/domains/suddidina.com/public_html/wp-content/themes/zox-news/amp-single.php on line 77
" width="36" height="36">

ದಿನದ ಸುದ್ದಿ

ಪಶುವೈದ್ಯೆ ಅತ್ಯಾಚಾರ, ಕೊಲೆ : ನಾಲ್ವರು ಆರೋಪಿಗಳ ಎನ್ ಕೌಂಟರ್ | ಪ್ರತಿಕ್ರಿಯೆಗಳು

Published

on

ಸುದ್ದಿದಿನ,ಹೈದರಾಬಾದ್: ಇಡೀ ದೇಶವನ್ನೇ ತಲ್ಲಣಗೊಳಿಸಿದ್ದ ಹೈದರಾಬಾದ್ ಪಶುವೈದ್ಯೆ ಸಾಮೂಹಿಕ ಅತ್ಯಾಚಾರ ಕೊಲೆ ಪ್ರಕರಣದ ನಾಲ್ವರು ಆರೋಪಿಗಳನ್ನು ಪೊಲೀಸರು ಎನ್‍ಕೌಂಟರ್ ಮಾಡಿ ಹತ್ಯೆಗೈದಿದ್ದಾರೆ.

ಹೈದರಾಬಾದ್-ಬೆಂಗಳೂರು ಹೈವೇ 44ರಲ್ಲಿ ಪೊಲೀಸರು ಅತ್ಯಾಚಾರಿಗಳನ್ನು ಎನ್‍ಕೌಂಟರ್ ಮಾಡಿದ್ದಾರೆ. ಕಾಮುಕರು ಪಶುವೈದ್ಯೆಯನ್ನು ಬೆಂಕಿ ಹಚ್ಚಿ ಸುಟ್ಟ ಸ್ಥಳದಲ್ಲೇ ಪೊಲೀಸರು ಅತ್ಯಾಚಾರಿಗಳ ಮೇಲೆ ಫೈರಿಂಗ್ ಮಾಡಿ ಹತ್ಯೆ ಮಾಡಿದ್ದಾರೆ.

ಪಶುವೈದ್ಯೆಯನ್ನು ಸುಟ್ಟ ಘಟನಾ ಸ್ಥಳ ಮಹಜರು ವೇಳೆ ಆರೋಪಿಗಳು ಪೊಲೀಸರಿಂದ ತಪ್ಪಿಸಿಕೊಳ್ಳಲು ಯತ್ನಿಸಿದ್ದರು. ಈ ವೇಳೆ ಪೊಲೀಸರು ನಾಲ್ವರು ಅತ್ಯಾಚಾರಿಗಳ ಮೇಲೆ ಎನ್‍ಕೌಂಟರ್ ಮಾಡಿದ್ದಾರೆ.

ಏನಿದು ಪ್ರಕರಣ?

ನವೆಂಬರ್ 27ರಂದು 26 ವರ್ಷದ ಪಶುವೈದ್ಯೆಯನ್ನು ಸ್ಕೂಟಿ ಪಂಕ್ಚರ್ ಹಾಕಿಸಿಕೊಡುವ ನೆಪದಲ್ಲಿ ಲಾರಿ ಚಾಲಕ ಮೊಹಮ್ಮದ್ ಪಾಷಾ, ಮೂವರು ಕ್ಲೀನರ್ ಗಳಾದ ನವೀನ್, ಚೆನ್ನಕೇಶವುಲು ಮತ್ತು ಶಿವಾ ಸೇರಿ ಕಿಡ್ನಾಪ್ ಮಾಡಿ, ಸಾಮೂಹಿಕ ಅತ್ಯಾಚಾರ ಮಾಡಿದ್ದರು.

ಅಲ್ಲದೆ ವೈದ್ಯೆಯ ಮೃತ ದೇಹವನ್ನು ಸುಟ್ಟು ಹಾಕಿದ್ದರು. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿದ್ದ ಸೈಬರಾಬಾದ್ ಪೊಲೀಸರು, ನಾಲ್ವರು ಮೃಗೀಯ ಮನುಷ್ಯರನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ನ್ಯಾಯಾಲಯ ಈ ಕೃತ್ಯಕ್ಕೆ ಇವರನ್ನು ಏಳು ದಿನಗಳ ಪೊಲೀಸ್ ಕಸ್ಟಡಿಗೆ ಒಪ್ಪಿಸಿತ್ತು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version