Connect with us

ರಾಜಕೀಯ

ನಾನೆಲ್ಲೂ ತಲೆಮರೆಸಿಕೊಂಡಿಲ್ಲ: ಡಿಕೆಶಿ

Published

on

ಸುದ್ದಿದಿನ ಡೆಸ್ಕ್: ಜಾರಿ ನಿರ್ದೇಶನಾಲಯ ಬಂಧನ ಭೀತಿ ಎದುರಿಸುತ್ತಿರುವ ಸಚಿವ ಡಿಕೆ ಶಿವಕುಮಾರ್ ಅವರು ರಾಜಧಾನಿ ದೆಹಲಿಗೆ ದೌಡಾಯಿಸಿದ್ದಾರೆ ಎಂದ ಆರೋಪಗಳ ಕುರಿತು ಖುದ್ದ ಪ್ರತಿಕ್ರಿಯಿಸಿರುವ ಸಚಿವರು, ನಾನು ಎಲ್ಲೂ ಓಡಿಹೋಗಿಲ್ಲ. ಹಾಗೂ ಬಂಧನದ ಭೀತಿಯಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.
ಸೋಮವಾರ ದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು, ನಾನು ಎಲ್ಲ ವ್ಯವಹಾರಗಳನ್ನು ಕಾನೂನು ಬದ್ಧವಾಗಿಯೇ ಮಾಡುತ್ತಿದ್ದೇನೆ ಹಾಗಾಗಿ ನನಗೆ ಯಾರ ಬಂಧನದ ಭೀತಿಯೂ ಇಲ್ಲ. ಕಳೆದ ಒಂದು ತಿಂಗಳಿನಿಂದ ನಾನು ಬಂಧನ ಭೀತಿಯಲ್ಲಿದ್ದೇನೆ. ದೆಹಲಿಯಲ್ಲಿ ವಕೀಲರನ್ನು ಕಾಣಲು ಬಂದಿದ್ದೇನೆಂಬ ಗಾಳಿ ಸುದ್ದಿ ಹರಿದಾಡುತ್ತಿದೆ. ಅದು ಶುದ್ಧ ಸುಳ್ಳು. ನಾನು ಯಾವುದೇ ಲೇವಾದೇವಿ ವ್ಯವಹಾರ ಮಾಡಿಲ್ಲ. ಬಿಜೆಪಿಯಲ್ಲಿ ನನಗೂ ಸಾಕಷ್ಟು ಸ್ನೇಹಿತರಿದ್ದಾರೆ. ಪ್ರತಿ ವಿದ್ಯಮಾನಗಳ ಬಗ್ಗೆ ನನಗೆ ಮಾಹಿತಿ ಬರುತ್ತದೆ ಎಂದು ಅವರು ತಿಳಿಸಿದರು.
ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ನನ್ನ ಬಗ್ಗೆ ಇಡಿಗೆ ಪತ್ರ ಬರೆದದ್ದನ್ನು ಬಹಿರಂಗಗೊಳಿಸಿದ್ದು ಏಕೆ ಎಂದು ತಮ್ಮ ಸಹೋದರ ಡಿಕೆ ಸುರೇಶ್ ಅವರನ್ನು ಕೇಳಿದ್ದಾಗಿಯೂ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ದಿನದ ಸುದ್ದಿ

ಹೊಳಲ್ಕೆರೆ | ಸ್ಪೀಚ್ ಸಂಸ್ಥೆ ಸಂಸ್ಥಾಪಕ ಹೆಚ್.ರಾಮಚಂದ್ರಪ್ಪ ನಿಧನ ; ಇಂದು ಅಂತ್ಯಕ್ರಿಯೆ

Published

on

ಸುದ್ದಿದಿನ,ಚಿತ್ರದುರ್ಗ:ಜಿಲ್ಲೆಯ ಬ್ಯಾಂಕ್ ಕಾಲೋನಿಯ ಸ್ಪೀಚ್ ಸಂಸ್ಥೆಯ ಸಂಸ್ಥಾಪಕರು ಹಾಗೂ ಎರಡು ಅವಧಿಗೆ ಹೊಳಲ್ಕೆರೆ ತಾಲ್ಲೂಕಿನ ಅರೇಹಳ್ಳಿ ಗ್ರಾಮ ಪಂಚಾಯತ್ ಸದಸ್ಯರಾಗಿದ್ದ ಹೆಚ್.ರಾಮಚಂದ್ರಪ್ಪ (59 ವರ್ಷ) ಶನಿವಾರ ಬೆಳಗ್ಗೆ 10:35 ಕ್ಕೆ ಅನಾರೋಗ್ಯದಿಂದ ನಿಧನರಾದರು.

ಮೃತರು ಪತ್ನಿ, ಸಹೋದರ, ಸಹೋದರಿಯರು ಸೇರಿದಂತೆ ಅಪಾರ ಬಂದು ಮಿತ್ರರನ್ನು ಅಗಲಿದ್ದಾರೆ. ಇವರ ಅಂತ್ಯ ಕ್ರಿಯೆಯನ್ನು ಹೊಳಲ್ಕೆರೆ ಸಮೀಪದ ನೆಹರು ಕಾಲೋನಿಯ ಜಮೀನಿನಲ್ಲಿ ಇಂದು (ಭಾನುವಾರ, ಜೂನ್ 07 ರಂದು ಮಧ್ಯಾಹ್ನ  2 ಗಂಟೆಗೆ) ನೆರವೇರಲಿದೆ ಎಂದು ಕುಟುಂಬದವರು ತಿಳಿಸಿದ್ದಾರೆ. ಸಂಪರ್ಕ ಮೊಬೈಲ್ ಸಂಖ್ಯೆ : 9740114246

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಆಶ್ರಯ ಯೋಜನೆ – ಆವಧಿ ವಿಸ್ತರಣೆ

Published

on

ಸುದ್ದಿದಿನ,ದಾವಣಗೆರೆ : 2025-26 ನೇ ಸಾಲಿನ ಪ್ರಧಾನ ಮಂತ್ರಿ ಆವಾಸ್ (ನಗರ) 2.0 ಯೋಜನೆಯಡಿ ನಿವೇಶನ ಮತ್ತು ವಸತಿ ರಹಿತ ಫಲಾನುಭವಿಗಳ ಅರ್ಜಿಗಳನ್ನು ಸಲ್ಲಿಸಲು ಜೂನ್‌ 30 ರವರೆಗೆ ಅವಧಿಯನ್ನು ವಿಸ್ತರಿಸಲಾಗಿದೆ.

ದಾವಣಗೆರೆ ಮಹಾ ನಗರಪಾಲಿಕೆ ವ್ಯಾಪ್ತಿಯಲ್ಲಿನ ಅರ್ಹ ನಿವೇಶನ ಹಾಗೂ ವಸತಿ ರಹಿತ ಅಂಗವಿಕಲರು, ಹಿರಿಯ ನಾಗರಿಕರು, ಒಂಟಿ ಮಹಿಳೆಯರು, ಪರಿಶಿಷ್ಟ ಜಾತಿ ಮತ್ತು ಪಂಗಡದವರು, ಹಿಂದುಳಿದ, ಅಲ್ಪಸಂಖ್ಯಾತ ವರ್ಗದವರು, ತೃತೀಯ ಲಿಂಗಿಗಳು, ಸ್ವಚ್ಛತಾ ಕಾರ್ಮಿಕರು, PM SVanidhi (ಪಿ ಎಂ -ಸ್ವ ನಿಧಿ )ಯೋಜನೆಯಡಿ ಗುರುತಿಸಲ್ಪಟ್ಟ ಬೀದಿ ವ್ಯಾಪಾರಿಗಳು ಮತ್ತು ಪ್ರಧಾನ ಮಂತ್ರಿ ವಿಶ್ವ ಕರ್ಮ ಯೋಜನೆಯಡಿ ಗುರುತಿಸಿದ ಕುಶಲ ಕರ್ಮಿಗಳು, ಅಂಗನವಾಡಿ ಕಾರ್ಯಕರ್ತರು, ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರು ಹಾಗೂ ವಲಸೆ ಬಂದ ಕುಟುಂಬದವರು ಅಗತ್ಯ ದಾಖಲೆಗಳೊಂದಿಗೆ ತಮ್ಮ ಅರ್ಜಿಗಳನ್ನು http://pmayurban.gov.in ಆನ್ಲೈನ್ ವೆಬ್ ಸೈಟ್ ನಲ್ಲಿ ಸಲ್ಲಿಸಬಹುದು ಅಥವಾ ಖುದ್ದಾಗಿ ಮಹಾನಗರ ಪಾಲಿಕೆಯ ಆಶ್ರಯ ಶಾಖೆಗೆ ಭೇಟಿ ನೀಡಿ ಮಾಹಿತಿಯನ್ನು ಪಡೆದು ನಿಗದಿತ ಅವಧಿಯೊಳಗೆ ಅರ್ಜಿ ಸಲ್ಲಿಸಬಹುದು ಎಂದು ದಾವಣಗೆರೆ ಮಹಾನಗರ ಪಾಲಿಕೆ ಆಯುಕ್ತರಾದ ಡಾ.ಮಹಾಂತೇಶ್‌ ಅವರು ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಬಡವರ ಕಲ್ಯಾಣವೇ ನಮ್ಮ ಆಡಳಿತದ ಕೇಂದ್ರಬಿಂದು : ಸಿಎಂ ಡಿಕೆಶಿ

Published

on

ಸುದ್ದಿದಿನ,ಬೆಂಗಳೂರು: ರಾಜ್ಯದ ನೂತನ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಅಧಿಕಾರ ಸ್ವೀಕರಿಸಿದ ಬಳಿಕ ಜನಪರ ಆಡಳಿತಕ್ಕೆ ಆದ್ಯತೆ ನೀಡುವುದಾಗಿ ಘೋಷಿಸಿದ್ದು, ಯುವಕರು, ವಿದ್ಯಾರ್ಥಿಗಳು ಹಾಗೂ ಮೂಲಸೌಕರ್ಯ ಅಭಿವೃದ್ಧಿಗೆ ವಿಶೇಷ ಒತ್ತು ನೀಡಲಾಗುವುದು ಎಂದು ತಿಳಿಸಿದ್ದಾರೆ.

ಮೊದಲ ಸಚಿವ ಸಂಪುಟ ಸಭೆಯ ಬಳಿಕ ಮಾತನಾಡಿದ ಅವರು, ರಾಜ್ಯದ ಸಮಗ್ರ ಅಭಿವೃದ್ಧಿ ಹಾಗೂ ಜನರ ಸಮಸ್ಯೆಗಳ ತ್ವರಿತ ಪರಿಹಾರವೇ ತಮ್ಮ ಸರ್ಕಾರದ ಪ್ರಮುಖ ಗುರಿಯಾಗಿದೆ ಎಂದು ಹೇಳಿದರು.

ರಾಜ್ಯದಾದ್ಯಂತ ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ಉಚಿತ ಬಸ್ ಪಾಸ್ ಯೋಜನೆ ಜಾರಿಗೆ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದರು. ಜೊತೆಗೆ ಯುವಜನರಲ್ಲಿ ನಾಯಕತ್ವ ಗುಣಗಳನ್ನು ಬೆಳೆಸುವ ಉದ್ದೇಶದಿಂದ “ಭಾರತ್ ಜೋಡೋ ಯುವ ಸಂಘ”ಗಳ ರಚನೆಗೆ ಸರ್ಕಾರ ಮುಂದಾಗಲಿದೆ ಎಂದು ಹೇಳಿದರು. ಈ ಸಂಘಟನೆಗಳು ಸಾಮಾಜಿಕ ಸೌಹಾರ್ದತೆ ಮತ್ತು ಯುವಜನರ ಸಬಲೀಕರಣಕ್ಕೆ ನೆರವಾಗಲಿವೆ ಎಂದು ಅಭಿಪ್ರಾಯಪಟ್ಟರು.

ನಗರ ಹಾಗೂ ಗ್ರಾಮೀಣ ಪ್ರದೇಶಗಳ ಮೂಲಸೌಕರ್ಯ ಸುಧಾರಣೆಗೆ ಹೆಚ್ಚಿನ ಆದ್ಯತೆ ನೀಡಲಾಗುವುದು ಎಂದು ಹೇಳಿದ ಮುಖ್ಯಮಂತ್ರಿ, ವಿಶೇಷವಾಗಿ ಬೆಂಗಳೂರಿನ ಹದಗೆಟ್ಟ ರಸ್ತೆಗಳ ದುರಸ್ತಿ ಮತ್ತು ಡಾಂಬರೀಕರಣ ಕಾರ್ಯಗಳನ್ನು ತ್ವರಿತಗೊಳಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದರು. ಜನರು ಎದುರಿಸುತ್ತಿರುವ ನಾಗರಿಕ ಸಮಸ್ಯೆಗಳ ಪರಿಹಾರಕ್ಕೆ ಸರ್ಕಾರ ಬದ್ಧವಾಗಿದೆ ಎಂದು ಅವರು ಹೇಳಿದರು.

ಮನೆ ನಿರ್ಮಾಣ ಹಾಗೂ ಆಸ್ತಿ ದಾಖಲೆಗಳಿಗೆ ಸಂಬಂಧಿಸಿದ ಎ-ಖಾತಾ ಮತ್ತು ಬಿ-ಖಾತಾ ಸಮಸ್ಯೆಗಳ ಪರಿಹಾರಕ್ಕೂ ಸರ್ಕಾರ ಕ್ರಮ ಕೈಗೊಳ್ಳಲಿದೆ ಎಂದು ಡಿ.ಕೆ. ಶಿವಕುಮಾರ್ ತಿಳಿಸಿದರು. ಜನಸಾಮಾನ್ಯರ ಬದುಕಿಗೆ ನೇರವಾಗಿ ಸಂಬಂಧಿಸಿದ ವಿಷಯಗಳಿಗೆ ಮೊದಲ ಆದ್ಯತೆ ನೀಡಲಾಗುವುದು ಎಂದು ಅವರು ಸ್ಪಷ್ಟಪಡಿಸಿದರು.

ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿರುವುದು ತಮ್ಮ ಜೀವನದ ಮಹತ್ವದ ಜವಾಬ್ದಾರಿಯಾಗಿದೆ ಎಂದು ಹೇಳಿದ ಅವರು, ಸಂವಿಧಾನದ ಮೌಲ್ಯಗಳನ್ನು ಕಾಪಾಡಿಕೊಂಡು ಎಲ್ಲ ವರ್ಗಗಳ ಅಭಿವೃದ್ಧಿಗೆ ಶ್ರಮಿಸುವುದಾಗಿ ಭರವಸೆ ನೀಡಿದರು. ರಾಜ್ಯದ ಅಭಿವೃದ್ಧಿಗೆ ಜನರ ಸಹಕಾರ ಅಗತ್ಯವಾಗಿದ್ದು, ಪಾರದರ್ಶಕ ಮತ್ತು ಉತ್ತರದಾಯಿ ಆಡಳಿತ ನೀಡುವುದು ತಮ್ಮ ಸಂಕಲ್ಪವಾಗಿದೆ ಎಂದು ಹೇಳಿದರು.

“ಜನರ ನಿರೀಕ್ಷೆಗಳಿಗೆ ತಕ್ಕಂತೆ ಕೆಲಸ ಮಾಡುವ ಸರ್ಕಾರವನ್ನು ನೀಡುತ್ತೇವೆ. ಯುವಕರು, ರೈತರು, ಮಹಿಳೆಯರು ಮತ್ತು ಬಡವರ ಕಲ್ಯಾಣವೇ ನಮ್ಮ ಆಡಳಿತದ ಕೇಂದ್ರಬಿಂದುವಾಗಿರುತ್ತದೆ” ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading
Advertisement

Title

ಅಂಕಣ4 hours ago

ಕವಿತೆ | ದೇವರ ಹೂವು

~ ಡಾ. ಸಿ.ಬಿ.ಐನಳ್ಳಿ ಊಟ ಮಾಟ ವೇಷ ಭಾಷೆ ಪ್ರಾರ್ಥನೆ ಬೇರೆ ಬೇರೆ ಪವಿತ್ರಪಠ್ಯ ಅವನದೊಂದು ನನ್ನದಿನ್ನೊಂದಂತೆ ನದಿ ದಂಡೆಯ ಮೇಲೆ ನೋಟ ಬೆರೆತು ಮಾತು ಮರೆತು...

ದಿನದ ಸುದ್ದಿ5 hours ago

ಹೊಳಲ್ಕೆರೆ | ಸ್ಪೀಚ್ ಸಂಸ್ಥೆ ಸಂಸ್ಥಾಪಕ ಹೆಚ್.ರಾಮಚಂದ್ರಪ್ಪ ನಿಧನ ; ಇಂದು ಅಂತ್ಯಕ್ರಿಯೆ

ಸುದ್ದಿದಿನ,ಚಿತ್ರದುರ್ಗ:ಜಿಲ್ಲೆಯ ಬ್ಯಾಂಕ್ ಕಾಲೋನಿಯ ಸ್ಪೀಚ್ ಸಂಸ್ಥೆಯ ಸಂಸ್ಥಾಪಕರು ಹಾಗೂ ಎರಡು ಅವಧಿಗೆ ಹೊಳಲ್ಕೆರೆ ತಾಲ್ಲೂಕಿನ ಅರೇಹಳ್ಳಿ ಗ್ರಾಮ ಪಂಚಾಯತ್ ಸದಸ್ಯರಾಗಿದ್ದ ಹೆಚ್.ರಾಮಚಂದ್ರಪ್ಪ (59 ವರ್ಷ) ಶನಿವಾರ ಬೆಳಗ್ಗೆ...

ದಿನದ ಸುದ್ದಿ11 hours ago

ಆಶ್ರಯ ಯೋಜನೆ – ಆವಧಿ ವಿಸ್ತರಣೆ

ಸುದ್ದಿದಿನ,ದಾವಣಗೆರೆ : 2025-26 ನೇ ಸಾಲಿನ ಪ್ರಧಾನ ಮಂತ್ರಿ ಆವಾಸ್ (ನಗರ) 2.0 ಯೋಜನೆಯಡಿ ನಿವೇಶನ ಮತ್ತು ವಸತಿ ರಹಿತ ಫಲಾನುಭವಿಗಳ ಅರ್ಜಿಗಳನ್ನು ಸಲ್ಲಿಸಲು ಜೂನ್‌ 30...

ದಿನದ ಸುದ್ದಿ2 days ago

ಗರಿಕೆ ಹುಲ್ಲಿನ ಜ್ಯೂಸ್‌ನಲ್ಲಿದೆ ರಕ್ತದ ಕ್ಯಾನ್ಸರ್ ಗುಣಪಡಿಸುವ ಶಕ್ತಿ

ಗಿರೀಶ್ ಮುತ್ತು ಗರಿಕೆ ಹುಲ್ಲಿನ ರಸದ ಸೇವನೆಯಿಂದ ದೇಹದಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚುತ್ತದೆ. ಸಿನೊಡಾನ್ ಡ್ಯಾಕ್ಟಿಲಾನ್ ಪ್ರೊಟೀನ್ ಎಂಬ ಅಂಶವಿದ್ದು, ಇದು ರೋಗನಿರೋಧಕ ಶಕ್ತಿ ಹೆಚ್ಚಲು...

ದಿನದ ಸುದ್ದಿ3 days ago

ಬಡವರ ಕಲ್ಯಾಣವೇ ನಮ್ಮ ಆಡಳಿತದ ಕೇಂದ್ರಬಿಂದು : ಸಿಎಂ ಡಿಕೆಶಿ

ಸುದ್ದಿದಿನ,ಬೆಂಗಳೂರು: ರಾಜ್ಯದ ನೂತನ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಅಧಿಕಾರ ಸ್ವೀಕರಿಸಿದ ಬಳಿಕ ಜನಪರ ಆಡಳಿತಕ್ಕೆ ಆದ್ಯತೆ ನೀಡುವುದಾಗಿ ಘೋಷಿಸಿದ್ದು, ಯುವಕರು, ವಿದ್ಯಾರ್ಥಿಗಳು ಹಾಗೂ ಮೂಲಸೌಕರ್ಯ ಅಭಿವೃದ್ಧಿಗೆ...

ದಿನದ ಸುದ್ದಿ3 days ago

ಬಿ.ಕೆ. ಹರಿಪ್ರಸಾದ್ ಕೆಪಿಸಿಸಿ ಅಧ್ಯಕ್ಷರಾಗಿ ನೇಮಕ

ಸುದ್ದಿದಿನ,ಬೆಂಗಳೂರು: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ)ಯ ನೂತನ ಅಧ್ಯಕ್ಷರಾಗಿ ಹಿರಿಯ ಕಾಂಗ್ರೆಸ್ ನಾಯಕ ಬಿ.ಕೆ.ಹರಿಪ್ರಸಾದ್ (B. K. Hariprasad) ಅವರನ್ನು ಅಖಿಲ ಭಾರತ ಕಾಂಗ್ರೆಸ್ ಸಮಿತಿ...

ಅಂಕಣ3 days ago

ಕೆಪಿಸಿಸಿಯ ನೂತನ ಸಾರಥಿ ಬಿ.ಕೆ. ಹರಿಪ್ರಸಾದ್ ರಾಜಕೀಯ ಪಯಣ

ಕರ್ನಾಟಕ ಕಾಂಗ್ರೆಸ್ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆಯೊಂದಾಗಿ ಹಿರಿಯ ನಾಯಕ ಬಿ.ಕೆ. ಹರಿಪ್ರಸಾದ್ ಅವರನ್ನು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (KPCC) ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ. ಮುಖ್ಯಮಂತ್ರಿ ಹುದ್ದೆಯನ್ನು...

ದಿನದ ಸುದ್ದಿ3 days ago

ಧನ್ಯವಾದಗಳು ಕರ್ನಾಟಕ : ಸಿಎಂ ಡಿಕೆ ಶಿವಕುಮಾರ್

ಸುದ್ದಿದಿನ ಡೆಸ್ಕ್:ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ನಾನು ಇಂದು ಪ್ರಮಾಣ ವಚನ ಸ್ವೀಕರಿಸಿದ್ದೇನೆ. ಮುಖ್ಯಮಂತ್ರಿಯಾಗಿ ರಾಜ್ಯದ ಏಳುಕೋಟಿ ಜನತೆಯ ಸೇವೆ ಮಾಡಲು ಒದಗಿ ಬಂದಿರುವ ಈ ಅವಕಾಶ ನನ್ನ...

ದಿನದ ಸುದ್ದಿ3 days ago

ಮೊದಲ ಸಂಪುಟ ಸಭೆಯಲ್ಲೇ ಮಹತ್ವದ 5 ಘೋಷಣೆ ಮಾಡಿದ ಸಿಎಂ ಡಿಕೆಶಿ

ಸುದ್ದಿದಿನ,ಬೆಂಗಳೂರು: ಕರ್ನಾಟಕದ ನೂತನ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಅಧಿಕಾರ ಸ್ವೀಕರಿಸಿದ ಕೆಲವೇ ಗಂಟೆಗಳಲ್ಲಿ ರಾಜ್ಯದ ಜನತೆಗೆ ಹಲವು ಮಹತ್ವದ ಘೋಷಣೆಗಳನ್ನು ನೀಡಿದ್ದಾರೆ. ಮುಖ್ಯಮಂತ್ರಿ ಸ್ಥಾನಕ್ಕೆ ಪ್ರಮಾಣವಚನ...

ದಿನದ ಸುದ್ದಿ5 days ago

ದಾವಣಗೆರೆಯಲ್ಲಿ ಸಂಚಾರಿ ಹೈಕೋರ್ಟ್ ಪೀಠ ಸ್ಥಾಪನೆಗೆ ವಕೀಲ ಎಲ್.ಎಚ್.ಅರುಣಕುಮಾರ್ ಮನವಿ

ಸುದ್ದಿದಿನಡೆಸ್ಕ್:ದಾವಣಗೆರೆಮಹಾನಗರದಲ್ಲಿ ಸಂಚಾರಿ ಹೈಕೋರ್ಟ್ ಪೀಠ ಸ್ಥಾಪನೆಗೆ ಮನವಿ ಮಾಡುವ ಮುನ್ನ ಪೂರ್ವಭಾವಿಯಾಗಿ ಒಂದಿಷ್ಟು ಮಾಹಿತಿಯ ಅಗತ್ಯವಿದೆ. ದಾವಣಗೆರೆ ಅತ್ಯಂತ ನಿಖರವಾಗಿ ಕರ್ನಾಟಕದ ಮಧ್ಯಭಾಗದಲ್ಲಿದೆ. ಅದ್ದರಿಂದ ಈ ನಗರವನ್ನೇ...

Trending