ರಾಜಕೀಯ
ನಾನು ಕಾಂಗ್ರೆಸ್ ತೊರೆಯೊಲ್ಲ : ಕಾಂಗ್ರೆಸ್ ಶಾಸಕ ಅನಿಲ್ ಚಿಕ್ಕಮಾದು
ಸುದ್ದಿದಿನ, ಬೆಂಗಳೂರು : ಬಿಜೆಪಿಯ ನಾಯಕ ಸಿ.ಪಿ. ಯೋಗೇಶ್ವರ್ ಅವರು ತಮಗೆ ಬಿಜೆಪಿಗೆ ಸೇರ್ಪಡೆ ಆಗುವಂತೆ ಆಮಿಷ ಒಡ್ಡಿದ್ದಾರೆ. ಆದರೆ ನಾನು ಯಾವುದೇ ಕಾರಣಕ್ಕೂ ಕಾಂಗ್ರೆಸ್ ತೊರೆಯುವುದಿಲ್ಲ ಎಂದು ಎಚ್. ಡಿ. ಕೋಟೆ ಕಾಂಗ್ರೆಸ್ ಶಾಸಕ ಅನಿಲ್ ಚಿಕ್ಕಮಾದು ತಿಳಿಸಿದರು.
ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಗೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆ ಆದರೆ ಸಚಿವ ಸ್ಥಾನ ನೀಡಲಾಗುವುದು. ಚುನಾವಣೆಗೆ ತಗಲುವ ಎಲ್ಲ ವೆಚ್ಚ ಭರಿಸಲಾಗುವುದು ಎಂದು ಆಮಿಷ ಒಡ್ಡಿದ್ದಾರೆ ಎಂದು ಆರೋಪಿಸಿದರು.
ನಾನು ಸಂಕಷ್ಟದಲ್ಲಿ ಇದ್ದಾಗ ಕಾಂಗ್ರೆಸ್ ಟಿಕೇಟ್ ನೀಡಿತು. ನಾನು ಯಾವುದೇ ಕಾರಣಕ್ಕೂ ಪಕ್ಷ ತೊರೆಯುವುದಿಲ್ಲ ಎಂದು ಹೇಳಿದರು. ಸಂಸದ ದ್ರುವ ನಾರಾಯಣ್ ಮಾತನಾಡಿ, ಆಪರೇಷನ್ ಕಮಲ ಮೂಲಕ ಬಿಜೆಪಿ ಪ್ರಜಾಪ್ರಭುತ್ವ ವ್ಯವಸ್ಥೆ ಯ ಕಗ್ಗೊಲೆ ಮಾಡುವ ಯತ್ನ ಮಾಡಿದೆ. ಈ ಬಗ್ಗೆ ಬಿಜೆಪಿ ನಾಯಕರಿಗೆ ನಾಚಿಕೆ ಆಗಬೇಕಿದೆ. ಈ ಕೃತ್ಯವನ್ನು ಬಿಜೆಪಿ ನಾಯಕರು ಕೈ ನೀಡಬೇಕಿದೆ. ಯೋಗೇಶ್ವರ್ ಅವರು ದಕ್ಷಿಣ ಕರ್ನಾಟಕದಲ್ಲಿ ಆಪರೇಷನ್ ಕಮಲದಡಿ ಕಾಂಗ್ರೆಸ್ ಪಕ್ಷದ ಶಾಸಕರನ್ನು ಸೆಳೆಯುವ ಯತ್ನ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9986715401