Connect with us

ದಿನದ ಸುದ್ದಿ

ದೇವರ ಬಗ್ಗೆ ನಮಗೂ ಭಕ್ತಿ ಇದೆ ನಮ್ಮೂರಲ್ಲಿ ನಾನು ರಾಮ ಮಂದಿರ ನಿರ್ಮಾಣ ಮಾಡುತ್ತೇನೆ : ಸಿದ್ದರಾಮಯ್ಯ

Published

on

siddaramaiah forin tour

ಸುದ್ದಿದಿನ,ಮೈಸೂರು : ಕೊರೊನಾ ಸೋಂಕು ರಾಜ್ಯದಲ್ಲಿ ಮತ್ತೊಮ್ಮೆ ವ್ಯಾಪಕವಾಗಿ ಹರಡುವ ಆತಂಕ ಎದುರಾಗಿದೆ. ಈ ಬಾರಿಯಾದರೂ ರಾಜ್ಯ ಸರ್ಕಾರ ಬೇಜವಾಬ್ದಾರಿಯಿಂದ ವರ್ತಿಸದೆ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು. ಕೊರೊನಾ ನಿರ್ವಹಣೆ ಭ್ರಷ್ಟಾಚಾರ ನಡೆಸಲು ಸಿಗುವ ಸುವರ್ಣಾವಕಾಶ ಎಂಬ ಬಿಜೆಪಿ ನಾಯಕರ ಮನಸ್ಥಿತಿ ಮೊದಲು ಬದಲಾಗಬೇಕು ಎಂದರು.

ಪೆಟ್ರೋಲ್- ಡೀಸೆಲ್‌ ಬೆಲೆ ಏರಿಕೆ ವಾಹನ ಸವಾರರ ಮೇಲಷ್ಟೇ ಅಲ್ಲ ದೇಶದ ಪ್ರತಿ ನಾಗರೀಕನ ಮೇಲೆ ಕೆಟ್ಟ ಪರಿಣಾಮ ಬೀರಲಿದೆ. ದಿನ ಬಳಕೆಯ ವಸ್ತುಗಳು, ಪ್ರಯಾಣ ದರ, ಉತ್ಪಾದನಾ ವೆಚ್ಚ ಹೀಗೆ ಎಲ್ಲಾ ವಿಧದಲ್ಲೂ ಜನಸಾಮಾನ್ಯರ ಮೇಲೆ ಹೊರೆಯಾಗಲಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಹೇಳಿದ್ದ ಅಚ್ಚೇ ದಿನ್ ಅಂದ್ರೆ ಇದೇನಾ? ಎಂದು ನುಡಿದರು.

ದೇಶದ ಜನರ ಭಾವನೆಗಳಿಗೆ ಬಿಜೆಪಿ ನಾಯಕರು ಅನ್ಯಾಯ ಮಾಡುತ್ತಿದ್ದಾರೆ, ದೇಶದ ಒಬ್ಬ ಸಾಮಾನ್ಯ ನಾಗರೀಕನಾಗಿ ರಾಮಮಂದಿರ ನಿರ್ಮಾಣಕ್ಕೆ ಸಂಗ್ರಹ ಮಾಡಿದ್ದ ಹಣದ ಲೆಕ್ಕ ಕೊಡಿ ಅಂತ ಕೇಳಿದ್ದೇನೆ. ಸಾರ್ವಜನಿಕರ ಹಣದ ಲೆಕ್ಕ ಕೇಳೋದ್ರಲ್ಲಿ ತಪ್ಪೇನಿದೆ? ಲೆಕ್ಕ ಕೊಡೋದು ಹಣ ಸಂಗ್ರಹಿಸಿದವರ ಕರ್ತವ್ಯ ಅಲ್ಲವೇ? ಎಂದು ಪ್ರಶ್ನಿಸಿದರು.

ನಮ್ಮೂರಿನಲ್ಲಿ ನಾನು ರಾಮ ಮಂದಿರ ನಿರ್ಮಾಣ ಮಾಡುತ್ತಿದ್ದೇನೆ. ದೇವರ ಬಗ್ಗೆ ನಮಗೂ ಭಕ್ತಿ ಇದೆ, ನಮ್ಮ ಶ್ರದ್ಧೆ, ನಂಬಿಕೆಗಳು ವೈಯಕ್ತಿಕ ವಿಚಾರಗಳಾಗಿರಬೇಕೇ ಹೊರತು ರಾಜಕೀಯ ಅಸ್ತ್ರಗಳಾಗಬಾರದು. ರಾಮ ಮಂದಿರ ನಿರ್ಮಾಣ ವಿಷಯದಲ್ಲಿ ಬಿಜೆಪಿ ನಾಯಕರು ರಾಜಕೀಯ ಲಾಭ ಪಡೆಯಲು ಹೊರಟಿರುವುದು ನಾಚಿಕೆಗೇಡು ಎಂದು ಆಕ್ರೋಶ ವ್ಯಕ್ತಪಡಿಸಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ವಂಚನೆ | ದಾವಣಗೆರೆ ವಿಶ್ವವಿದ್ಯಾಲಯದ ವಿದ್ಯಾವಿಷಯಕ ಪರಿಷತ್ತಿನ ಸದಸ್ಯತ್ವದಿಂದ ಎಸ್.ಸುರೇಶ್ ವಜಾ

Published

on

ದಾವಣಗೆರೆ, ಸುದ್ದಿದಿನ; ಸುಳ್ಳು ಮಾಹಿತಿ ನೀಡಿ ದಾವಣಗೆರೆ ವಿಶ್ವವಿದ್ಯಾಲಯದ ವಿದ್ಯಾವಿಷಯಕ ಪರಿಷತ್ತಿನ ಸದಸ್ಯರಾಗಿ ನಾಮ ನಿರ್ದೇಶನಗೊಂಡಿರುವ ಸಂತೆಬೆನ್ನೂರು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಭಾರ ಪ್ರಾಂಶುಪಾಲ ಎಸ್.ಸುರೇಶ್ ಅವರನ್ನು ತಕ್ಷಣವೇ ವಜಾಗೊಳಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.
ಪ್ರಭಾರ ಪ್ರಾಂಶುಪಾಲ ಎಸ್. ಸುರೇಶ್ ಇವರು ವಿಶ್ವವಿದ್ಯಾಲಯಕ್ಕೆ ದಿನಾಂಕ: 31-05-2025 ರ ವೇಳೆಗೆ 11 ವರ್ಷ 5 ತಿಂಗಳು 11 ದಿನಗಳ ಕಾಲ ಪ್ರಾಂಶುಪಾಲರಾಗಿ ಸೇವೆಯನ್ನು ಸಲ್ಲಿಸಿರುವಂತೆ ವಿಶ್ವವಿದ್ಯಾಲಯಕ್ಕೆ ಮಾಹಿತಿ ನೀಡಿರುತ್ತಾರೆ. ಅಧಿಕೃತ ದಾಖಲೆಗಳೊಂದಿಗೆ ಕುಲಸಚಿವರು, ದಾವಣಗೆರೆ ವಿಶ್ವವಿದ್ಯಾಲಯ ಇವರಿಗೆ ದೂರು ನೀಡಿ ನಿಗಧಿತ ಕಾಲವಾಧಿಯಲ್ಲಿ ಯಾವುದೇ ಕ್ರಮ ಕೈಗೊಳ್ಳದ ಕಾರಣ ಕುಲಸಚಿವರ ವಿರುದ್ಧ ಲೋಕಾಯುಕ್ತದಲ್ಲಿ ದೂರು ನೀಡಲಾಗಿತ್ತು.
ದೂರಿನ ವಿಷಯವು ಸುದ್ದಿದಿನ ಆನ್‌ಲೈನ್ ಪೋರ್ಟಲ್‌ನಲ್ಲಿ ಪ್ರಸಾರಗೊಂಡ ನಂತರ ಎಚ್ಚೆತ್ತುಕೊಂಡ ಕುಲಸಚಿವರು ಪರಿಶೀಲನೆ ಮಾಡಿ ತಕ್ಷಣವೇ ಎಸ್.ಸುರೇಶ್ ಅವರನ್ನು ದಾವಣಗೆರೆ ವಿಶ್ವವಿದ್ಯಾಲಯದ ವಿದ್ಯಾವಿಷಯಕ ಪರಿಷತ್ತಿನ ಸದಸ್ಯತ್ವದಿಂದ ವಜಾಗೊಳಿಸಿ ಆದೇಶ ಹೊರಡಿಸಿದ್ದಾರೆ. ತಕ್ಷಣವೇ ಎಚ್ಚೆತ್ತುಕೊಂಡು ತಪ್ಪಿತಸ್ಥರ ವಿರುದ್ಧ ಕೈಗೊಂಡ ಕುಲಸಚಿವ ಎಸ್.ಬಿ ಘಂಟಿ ಅವರ ಕ್ರಮಕ್ಕೆ ವಕೀಲ ಡಾ.ಕೆ.ಎ.ಓಬಳಪ್ಪ ಪ್ರಶಂಸೆ ವ್ಯಕ್ತಪಡಿಸಿದ್ದು, ಅಧಿಕಾರದ ಆಸೆಗೆ ಸುಳ್ಳು ಮಾಹಿತಿ ನೀಡುವ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಜರುಗಿಸಬೇಕು ಎಂಬುದಾಗಿ ಆಗ್ರಹಿಸಿದ್ದಾರೆ.

Continue Reading

ದಿನದ ಸುದ್ದಿ

ವಂಚನೆ | ದಾವಣಗೆರೆ ವಿಶ್ವವಿದ್ಯಾಲಯದ ವಿದ್ಯಾವಿಷಯಕ ಪರಿಷತ್ತಿನ ಸದಸ್ಯತ್ವದಿಂದ ಎಸ್.ಸುರೇಶ್ ವಜಾ

Published

on

ಸಂತೆಬೆನ್ನೂರು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಭಾರ ಪ್ರಾಂಶುಪಾಲ ಎಸ್.ಸುರೇಶ್

ದಾವಣಗೆರೆ, ಸುದ್ದಿದಿನ; ಸುಳ್ಳು ಮಾಹಿತಿ ನೀಡಿ ದಾವಣಗೆರೆ ವಿಶ್ವವಿದ್ಯಾಲಯದ ವಿದ್ಯಾವಿಷಯಕ ಪರಿಷತ್ತಿನ ಸದಸ್ಯರಾಗಿ ನಾಮ ನಿರ್ದೇಶನಗೊಂಡಿರುವ ಸಂತೆಬೆನ್ನೂರು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಭಾರ ಪ್ರಾಂಶುಪಾಲ ಎಸ್.ಸುರೇಶ್ ಅವರನ್ನು ತಕ್ಷಣವೇ ವಜಾಗೊಳಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.
ಪ್ರಭಾರ ಪ್ರಾಂಶುಪಾಲ ಎಸ್. ಸುರೇಶ್ ಇವರು ವಿಶ್ವವಿದ್ಯಾಲಯಕ್ಕೆ ದಿನಾಂಕ: 31-05-2025 ರ ವೇಳೆಗೆ 11 ವರ್ಷ 5 ತಿಂಗಳು 11 ದಿನಗಳ ಕಾಲ ಪ್ರಾಂಶುಪಾಲರಾಗಿ ಸೇವೆಯನ್ನು ಸಲ್ಲಿಸಿರುವಂತೆ ವಿಶ್ವವಿದ್ಯಾಲಯಕ್ಕೆ ಮಾಹಿತಿ ನೀಡಿರುತ್ತಾರೆ. ಅಧಿಕೃತ ದಾಖಲೆಗಳೊಂದಿಗೆ ಕುಲಸಚಿವರು, ದಾವಣಗೆರೆ ವಿಶ್ವವಿದ್ಯಾಲಯ ಇವರಿಗೆ ದೂರು ನೀಡಿ ನಿಗಧಿತ ಕಾಲವಾಧಿಯಲ್ಲಿ ಯಾವುದೇ ಕ್ರಮ ಕೈಗೊಳ್ಳದ ಕಾರಣ ಕುಲಸಚಿವರ ವಿರುದ್ಧ ಲೋಕಾಯುಕ್ತದಲ್ಲಿ ದೂರು ನೀಡಲಾಗಿತ್ತು.
ದೂರಿನ ವಿಷಯವು ಸುದ್ದಿದಿನ ಆನ್‌ಲೈನ್ ಪೋರ್ಟಲ್‌ನಲ್ಲಿ ಪ್ರಸಾರಗೊಂಡ ನಂತರ ಎಚ್ಚೆತ್ತುಕೊಂಡ ಕುಲಸಚಿವರು ಪರಿಶೀಲನೆ ಮಾಡಿ ತಕ್ಷಣವೇ ಎಸ್.ಸುರೇಶ್ ಅವರನ್ನು ದಾವಣಗೆರೆ ವಿಶ್ವವಿದ್ಯಾಲಯದ ವಿದ್ಯಾವಿಷಯಕ ಪರಿಷತ್ತಿನ ಸದಸ್ಯತ್ವದಿಂದ ವಜಾಗೊಳಿಸಿ ಆದೇಶ ಹೊರಡಿಸಿದ್ದಾರೆ. ತಕ್ಷಣವೇ ಎಚ್ಚೆತ್ತುಕೊಂಡು ತಪ್ಪಿತಸ್ಥರ ವಿರುದ್ಧ ಕೈಗೊಂಡ ಕುಲಸಚಿವ ಎಸ್.ಬಿ ಘಂಟಿ ಅವರ ಕ್ರಮಕ್ಕೆ ವಕೀಲ ಡಾ.ಕೆ.ಎ.ಓಬಳಪ್ಪ ಪ್ರಶಂಸೆ ವ್ಯಕ್ತಪಡಿಸಿದ್ದು, ಅಧಿಕಾರದ ಆಸೆಗೆ ಸುಳ್ಳು ಮಾಹಿತಿ ನೀಡುವ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಜರುಗಿಸಬೇಕು ಎಂಬುದಾಗಿ ಆಗ್ರಹಿಸಿದ್ದಾರೆ.

Continue Reading

ದಿನದ ಸುದ್ದಿ

ದಾವಣಗೆರೆ | ಸ್ಮಾರ್ಟ್ ಟಿ.ವಿ ಖರೀದಿಯಲ್ಲಿ ಅವ್ಯವಹಾರ ; ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಡಿ.ಡಿ ರಾಜನಾಯ್ಕ ಸೇರಿ 5 ಜನ ಸಿ.ಡಿ.ಪಿ.ಒ ಗಳ ವಿರುದ್ಧ ಲೋಕಾಗೆ ದೂರು

Published

on

ದಾವಣಗೆರೆ, ಸುದ್ದಿದಿನ; 2025-26ನೇ ಸಾಲಿನಲ್ಲಿ ದಾವಣಗೆರೆ ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಛೇರಿಗಳಲ್ಲಿ ನಡೆದಿರುವ ಸ್ಮಾರ್ಟ್ ಟಿವಿ ಖರೀದಿಯ ಅವ್ಯವಹಾರವನ್ನು ತನಿಖೆಗೆ ಒಳಪಡಿಸಿ, ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ದೂರು ನಿಡಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.

ದಾವಣಗೆರೆ ಜಿಲ್ಲಾ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲಾ ತಾಲ್ಲೂಕುಗಳ ಶಿಶು ಅಭಿವೃದ್ದಿ ಯೋಜನಾಧಿಕಾರಿಗಳ ವ್ಯಾಪ್ತಿಗೆ ಒಳಪಟ್ಟಿರುವ ಅಂಗನವಾಡಿ ಕೇಂದ್ರಗಳಲ್ಲಿ ಸ್ಥಾಪನೆಯಾಗಿರುವ ಎಲ್.ಕೆ.ಜಿ ಹಾಗೂ ಯು.ಕೆ.ಜಿ ತರಗತಿಗಳಿಗೆ 2025-26ನೇ ಸಾಲಿನಲ್ಲಿ ಸ್ಮಾರ್ಟ್ ಟಿವಿಗಳನ್ನು ಖರೀದಿಸಿದ್ದು, ಸದರಿ ಖರೀದಿ ವ್ಯವಹಾರದಲ್ಲಿ ಕೆ.ಟಿ.ಪಿ.ಪಿ ನಿಯಮವನ್ನು ಸಂಪೂರ್ಣವಾಗಿ ಉಲ್ಲಂಘನೆ ಮಾಡಿರುವುದು ಮಾತ್ರವಲ್ಲದೆ ಮಾರುಕಟ್ಟೆ ದರಕ್ಕಿಂತ ಹೆಚ್ಚಿನ ದರವನ್ನು ನಿಗದಿಪಡಿಸಿರುವ ಮಾಹಿತಿ ಆಧಾರದ ಮೇಲೆ ಎಲ್ಲಾ ತಾಲ್ಲೂಕುಗಳಿಗೆ ಮಾಹಿತಿಹಕ್ಕು ಅರ್ಜಿ ಸಲ್ಲಿಸಿ, ದಾಖಲೆಗಳನ್ನು ಪರಿಶೀಲನೆ ಮಾಡಿದಾಗ ಸಾಕಷ್ಟು ಲೋಪಗಳು ಕಂಡುಬಂದಿರುತ್ತವೆ.

ದಾವಣಗೆರೆ ಜಿಲ್ಲಾ ವ್ಯಾಪ್ತಿಯ 5 ತಾಲ್ಲೂಕುಗಳ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಪ್ರತಿ ತಾಲ್ಲೂಕಿಗೆ 16 ಸ್ಮಾರ್ಟ್ ಟಿವಿಗಳನ್ನು ಏರ್‌ವೇವ್ಸ್ ಕಮ್ಯೂನಿಕೇಶನ್ಸ್, ಬೆಂಗಳೂರು ಇವರಿಂದ ರೂ. 4,99.999/- ಮೊತ್ತದಲ್ಲಿ ಖರೀದಿ ಮಾಡಲಾಗಿರುತ್ತದೆ. ಪ್ರತಿ ತಾಲ್ಲೂಕಿಗೆ ರೂ. 4,99,999/- ಗಳಂತೆ ಒಟ್ಟು 5 ತಾಲ್ಲೂಕುಗಳಿಂದ ಅಂದಾಜು 25 ಲಕ್ಷ ಮೊತ್ತದ ಖರೀದಿ ವ್ಯವಹಾರವನ್ನು ಒಂದೇ ಏಜೆನ್ಸಿಯಿಂದ ಒಂದೇ ದಿನಾಂಕದಲ್ಲಿ ನಡೆಸಿದ್ದರೂ ಕೆ.ಟಿ.ಪಿ.ಪಿ ನಿಯಮಾನುಸಾರ ಯಾವುದೇ ಟೆಂಡರ್ ಪ್ರಕ್ರಿಯೆಯನ್ನು ನಡೆಸಿರುವುದಿಲ್ಲ. ಬಹುತೇಕ ತಾಲ್ಲೂಕುಗಳ ಜಿ.ಎಸ್.ಟಿ ಬಿಲ್ಲಿನಲ್ಲಿ ದಿನಾಂಕವೇ ಇರುವುದಿಲ್ಲ. ಇನ್ನೂ ಕೆಲವು ಬಿಲ್ಲುಗಳಲ್ಲಿ ದಿನಾಂಕವನ್ನು ಕೈಬರಹದಿಂದ ನಮೂದಿಸಲಾಗಿರುತ್ತದೆ. ಹೀಗಾಗಿ ಸದರಿ ಖರೀದಿ ಪ್ರಕ್ರಿಯೆಯು ಸಂಪೂರ್ಣವಾಗಿ ನಿಯಮಬಾಹಿರವಾಗಿರುತ್ತದೆ.

ಈ ಪ್ರಕರಣದ ಖರೀದಿ ವ್ಯವಹಾರದಲ್ಲಿ ಭಾಗಿಯಾಗಿರುವ 1. ರಾಜಾನಾಯ್ಕ್, ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃಧಿ ಇಲಾಖೆ, ದಾವಣಗೆರೆ. 2. ಅಭಿಕುಮಾರ್ ಜಿ.ಎಸ್., ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು, ದಾವಣಗೆರೆ ತಾಲ್ಲೂಕು, 3. ಪ್ರಿಯದರ್ಶಿನಿ ಇ.ವೈ., ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು, ಹರಿಹರ ತಾಲ್ಲೂಕು. 4. ನಿರ್ಮಲ., ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು, ಚನ್ನಗಿರಿ ತಾಲ್ಲೂಕು 5. ಬೀರೇಂದ್ರ ಕುಮಾರ ಎಂ.ಪಿ., ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು, ಜಗಳೂರು ತಾಲ್ಲೂಕು. 6. ಜ್ಯೋತಿ ಎಸ್.ಎಸ್., ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು, ಹೊನ್ನಾಳಿ ತಾಲ್ಲೂಕು ಇವರುಗಳ ವಿರುದ್ಧ ಪ್ರಕರಣ ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.

Continue Reading

Trending