ದಿನದ ಸುದ್ದಿ

ದಾವಣಗೆರೆ | ಐ.ಎ.ಎಸ್ ಮತ್ತು ಕೆ.ಎ.ಎಸ್ ಪರೀಕ್ಷೆಗಳಿಗೆ ತರಬೇತಿ

Published

on

ಸುದ್ದಿದಿನ,ದಾವಣಗೆರೆ: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ‘ಕರಾಮುವಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರ’ದ ವತಿಯಿಂದ ಕೇಂದ್ರ ಲೋಕಸೇವಾ ಆಯೋಗ ಮತ್ತು ರಾಜ್ಯ ಲೋಕಸೇವಾ ಆಯೋಗವು 2021 ರಲ್ಲಿ ನಡೆಸಲಿರುವ ಐಎಎಸ್ ಮತ್ತು ಕೆಎಎಸ್ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ 60 ದಿನಗಳ ಆನ್‍ಲೈನ್ ತರಬೇತಿ ಶಿಬಿರವನ್ನು ಏರ್ಪಡಿಸಲಾಗಿದೆ.

ಆಸಕ್ತರು ನ.13 ರೊಳಗೆ ಮೈಸೂರಿನಲ್ಲಿರುವ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಆವರಣದಲ್ಲಿರುವ ಕರಾಮುವಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ಕಛೇರಿಯಲ್ಲಿ ಬೆಳಿಗ್ಗೆ 10 ಗಂಟೆಯಿಂದ ಸಂಜೆ 4 ಗಂಟೆಯೊಳಗಾಗಿ ತಮ್ಮ ಹೆಸರನ್ನು ನೊಂದಾಯಿಸಿಕೊಳ್ಳಬಹುದು. ಹೆಚ್ಚಿನ ಮಾಹಿತಿಗಾಗಿ ದೂ.ಸಂ 0821-2515944 ಸಂಪರ್ಕಿಸಬಹುದೆಂದು ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಕುಲಸಚಿವ ಪ್ರೊ. ಲಿಂಗರಾಜ ಗಾಂಧಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version