ದಿನದ ಸುದ್ದಿ
‘ಐ ಬಿ ಪಿ ಎಸ್’ ಬ್ಯಾಂಕ್ ಸಿಬ್ಬಂದಿ ನೇಮಕಾತಿ ಪರೀಕ್ಷೆಗೆ ತರಬೇತಿ
ಸುದ್ದಿದಿನ,ಮೈಸೂರು : ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಕರಾಮುವಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ಐ.ಬಿ.ಪಿ.ಎಸ್ ರಾಷ್ಟ್ರೀಕೃತ ಬ್ಯಾಂಕ್ ಅಧಿಕಾರಿಗಳ ಮತ್ತು ಗುಮಾಸ್ತರ ಹುದ್ದೆಗಳಿಗೆ ನೇಮಕ ಮಾಡಿಕೊಳ್ಳಲು ನಡೆಸುವ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿಯನ್ನು ಆಯೋಜಿಸಲಾಗಿದೆ.
ದೇಶದ ವಿವಿಧ ರಾಷ್ಟ್ರೀಕೃತ ಬ್ಯಾಂಕ್‍ಗಳವರು ಈ ಸಾಲಿನಲ್ಲಿ ಒಂದು ಲಕ್ಷಕ್ಕೂ ಹೆಚ್ಚು ಅಧಿಕಾರಿಗಳ ಹಾಗೂ ಗುಮಾಸ್ತರ ಹುದ್ದೆಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳ ಮೂಲಕ ನೇಮಕಾತಿ ಮಾಡಿಕೊಳ್ಳಲು ನಿರ್ಧರಿಸಿರುವ ಹಿನ್ನೆಲೆಯಲ್ಲಿ ತರಬೇತಿ ಆಯೋಜಿಸಲಾಗಿದೆ.
ಆಸಕ್ತರು ಡಿ.10 ರೊಳಗಾಗಿ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಆವರಣದಲ್ಲಿರುವ ‘ಕರಾಮುವಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರ’ ದ ಕಚೇರಿಯಲ್ಲಿ ಬೆಳಗ್ಗೆ 10 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ತಮ್ಮ ಹೆಸರನ್ನು ನೊಂದಾಯಿಸಿಕೊಳ್ಳಬಹುದು. ಹೆಚ್ಚಿನ ವಿವರಗಳಿಗೆ ದೂ.ಸಂ: 0821-2515944 ನ್ನು ಸಂಪರ್ಕಿಸಬಹುದೆಂದು ಕರಾಮುವಿ ಕುಲಸಚಿವರಾದ ಪ್ರೊ. ಬಿ. ರಮೇಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243