ದಿನದ ಸುದ್ದಿ
ಅಕ್ರಮ ಹಣ ವರ್ಗಾವಣೆ ಪ್ರಕರಣ ; ಎನ್ಸಿಪಿ ನಾಯಕ ನವಾಬ್ ಮಾಲಿಕ್ ಗೆ ಜಾಮೀನು ನಿರಾಕರಣೆ
ಸುದ್ದಿದಿನ ಡೆಸ್ಕ್ : ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರದ ಸಚಿವ ಹಾಗೂ ಎನ್ಸಿಪಿ ನಾಯಕ ನವಾಬ್ ಮಾಲಿಕ್ ಅವರಿಗೆ ಜಾಮೀನು ನೀಡಲು ಸುಪ್ರೀಂ ಕೋರ್ಟ್ ಶುಕ್ರವಾರ ನಿರಾಕರಿಸಿದೆ.
ನ್ಯಾಯಮೂರ್ತಿಗಳಾದ ಡಿ.ವೈ. ಚಂದ್ರಚೂಡ್ ಮತ್ತು ಸೂರ್ಯಕಾಂತ್ ಅವರನ್ನೊಳಗೊಂಡ ವಿಭಾಗೀಯ ಪೀಠ ನವಾಬ್ ಮಾಲಿಕ್ ಅವರ ಜಾಮೀನು ಅರ್ಜಿ ತಳ್ಳಿಹಾಕಿದೆ. ಅಲ್ಲದೆ, ಮಾರ್ಚ್ 15ರಂದು ಬಾಂಬೆ ಹೈಕೋರ್ಟ್ ನೀಡಿದ್ದ ತೀರ್ಪಿಗೆ ಸಂಬಂಧ ಮಧ್ಯ ಪ್ರವೇಶಿಸಲು ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿದೆ.
ಭೂಗತ ದೊರೆ ದಾವುದ್ ಇಬ್ರಾಹಿಂ ಅವರ ಸಹೋದರಿ ಹಸೀನಾ ಪಾರ್ಕರ್ ಅವರು ಭಾಗಿಯಾಗಿದ್ದ ಜಮೀನು ವ್ಯವಹಾರದಲ್ಲಿ ಭಯೋತ್ಪಾದಕರಿಗೆ ಹಣ ಸಂದಾಯ ಮಾಡಿದ್ದಾರೆಂಬ ಆರೋಪದ ಹಿನ್ನೆಲೆಯಲ್ಲಿ ನವಾಬ್ ಮಾಲಿಕ್ ಅವರನ್ನು ಫೆಬ್ರವರಿ 23ರಂದು ಜಾರಿ ನಿರ್ದೇಶನಾಲಯ ಬಂಧಿಸಿತು.
ಸುದ್ದಿದಿನ.ಕಾಂ|ವಾಟ್ಸಾಪ್|9980346243