ದಿನದ ಸುದ್ದಿ
ಅಕ್ರಮ ಹಣ ವರ್ಗಾವಣೆ ಕೇಸ್ : ಡಿ.ಕೆ ಶಿವಕುಮಾರ್’ಗೆ ಜಾಮೀನು ಅರ್ಜಿ ವಿಚಾರಣೆ ಜುಲೈ 30 ಕ್ಕೆ ಮುಂದೂಡಿಕೆ
ಸುದ್ದಿದಿನ,ನವದೆಹಲಿ: ಅಕ್ರಮ ಹಣ ವರ್ಗಾವಣೆ ಸಂಬಂಧಿಸಿದಂತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಇಂದು ಇಡಿ ವಿಚಾರಣೆಗೆ ಹಾಜರಾಗಿದ್ದರು. ಯಾವುದೇ ಕಾರಣಕ್ಕೂ ಜಾಮೀನು ನೀಡುವುದಿಲ್ಲ ಎಂದು ಹೇಳಿ ಜುಲೈ 30 ಕ್ಕೆ ಅರ್ಜಿ ವಿಚಾರಣೆ ಮುಂದೂಡಲಾಗಿದೆ.
ಈ ಹಿಂದೆ ತನಿಖೆ ನಡೆಸಿದ್ದ ಅಧಿಕಾರಿಗಳು ಆರೋಪಪಟ್ಟಿ ಸಲ್ಲಿಸಿದ್ದರು. ಆರೋಪ ಪಟ್ಟಿಯನ್ನು ಆಧರಿಸಿ ಡಿ.ಕೆ ಶಿವಕುಮಾರ್ ಸೇರಿ ಐವರಿಗೆ ಸಮನ್ಸ್ ಜಾರಿ ಮಾಡಲಾಗಿತ್ತು.
ಸುದ್ದಿದಿನ.ಕಾಂ|ವಾಟ್ಸಾಪ್|9980346243