ರಾಜಕೀಯ
ಕೆಪಿಸಿಸಿ ಸಾರಥ್ಯಕ್ಕೆ ನಾನು ಸಿದ್ಧ : ಡಿಕೆಶಿ
ಸುದ್ದಿದಿನ, ಬೆಂಗಳೂರು : ಕಾಂಗ್ರೆಸ್ ನ ಮಾಸ್ಟರ್ ಮೈಂಡ್ ಡಿ.ಕೆ.ಶಿವಕುಮಾರ್ ನನ್ನನ್ನು ಕೆಪಿಸಿಸಿ ಸಾರಥ್ಯಕ್ಕೆ ಆಯ್ಕೆ ಮಾಡಿದರೆ ಅದನ್ನು ನಿಭಾಯಿಸಲು ನಾನು ಸಿದ್ಧನಿದ್ದೇನೆ ಎಂದು ಹೇಳಿದ್ದಾರೆ.
ಬೆಂಳೂರಿನಲ್ಲಿ ಸೋಮವಾರ ಮಾತನಾಡಿದ ಅವರು, ನಾನು ಪಕ್ಷದ ತೀರ್ಮಾನಕ್ಕೆ ಬದ್ಧನಾಗಿರುತ್ತೇನೆ. ಪಕ್ಷದ ಸಂಘಟನೆಗೆ ಹೈಕಮಾಂಡ್ ಕೆಪಿಸಿಸಿ ಅಧ್ಯಕ್ಷ ಸ್ಥಾನ ನೀಡಿದರೆ ನಾನದನ್ನು ನಿಭಾಯಿಸಲು ತಯಾರಿದ್ದೇನೆ ಎಂದು ತಿಳಿಸಿದ್ದಾರೆ.
ಡಿಕೆಶಿಗೆ ಒಲಿಯಲಿದೆಯೇ ಕೆಪಿಸಿಸಿ ಅಧ್ಯಕ್ಷ ಗಾದಿ?
ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರ ಬರಲು ಡಿ.ಕೆ.ಶಿ ಅವರೇ ಪ್ರಮುಖ ಕಾರಣರಾಗಿದ್ದಾರೆ. ಆದರೆ ಅವರಿಗೆ ಸಚಿವ ಸ್ಥಾನ ಸಿಗುವುದೇ? ಇಲ್ಲವೇ? ಎಂಬುದಿನ್ನೂ ತೀರ್ಮಾನವಾಗಿಲ್ಲ.
ಡಾ.ಜಿ.ಪರಮೇಶ್ವರ ಅವರು ಉಪಮುಖ್ಯಮಂತ್ರಿಯಾದ ಹಿನ್ನೆಲೆ, ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಆದ್ದರಿಂದ ಡಿ.ಕೆ.ಶಿ ಈ ಅಧ್ಯಕ್ಷ ಸ್ಥಾನಕ್ಕೆ ಆಯ್ಕೆಯಾಗಬಹುದು ಎಂಬ ಸುದ್ದಿ ಹರಿದಾಡುತ್ತಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9985715401