ಕ್ರೀಡೆ

ಪ್ರಮುಖ ಸುದ್ದಿ ಮುಖ್ಯಾಂಶಗಳು

Published

on

ಪ್ರಮುಖ ಸುದ್ದಿ ಮುಖ್ಯಾಂಶಗಳು

  1. ತಮಿಳುನಾಡಿನ ವಿಲ್ಲುಪುರಂನಲ್ಲಿ ಇಂದು ಬೆಳಗಿನ ಜಾವ ಸಂಭವಿಸಿದ ದುರಂತದಲ್ಲಿ 5ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದಾರೆ. ದೇಗುಲದಲ್ಲಿ ನಡೆದ ಜಾತ್ರೆ ವೇಳೆ ವಿದ್ಯುತ್ ಶಾರ್ಟ್ ಸರ್ಕೀಟ್‌ನಿಂದ ಈ ದುರಂತ ಸಂಭವಿಸಿದೆ ಎಂದು ಸ್ಥಳೀಯ ಅಧಿಕಾರಿಗಳು ತಿಳಿಸಿದ್ದಾರೆ.
  2. ಆಲಮಟ್ಟಿ ಜಲಾಶಯದ ಎತ್ತರವನ್ನು 524 ಮೀಟರ್‌ಗೆ ಎತ್ತರಿಸಲು ಸರ್ಕಾರ ಬದ್ಧವಾಗಿದ್ದು, ಕೃಷ್ಣಾ ಮೇಲ್ದಂಡೆ ಯೋಜನೆಯ ಮೂರನೇ ಹಂತದ ಕಾಮಗಾರಿಗಳನ್ನು ಪೂರ್ಣಗೊಳಿಸಲು ಅಗತ್ಯವಿರುವ ಹಣ ಒದಗಿಸಲಾಗುವುದು. 24 ಗ್ರಾಮಗಳನ್ನು ಪುನಶ್ಚೇತನಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
  3. ಕೋವಿಡ್ ನಾಲ್ಕನೇ ಅಲೆ ಸಾಧ್ಯತೆಗಳ ಹಿನ್ನೆಲೆಯಲ್ಲಿ ಇಂದು ಪ್ರಧಾನಿ ನರೇಂದ್ರ ಮೋದಿ ಅವರು ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳ ಜೊತೆಗೆ ವಿಡಿಯೋ ಸಂವಾದ ನಡೆಸಲಿದ್ದು, ವಿವಿಧ ದೇಶಗಳು ಮತ್ತು ರಾಜ್ಯಗಳಲ್ಲಿನ ವಸ್ತುಸ್ಥಿತಿಯನ್ನು ಅವಲೋಕಿಸಿ ಮತ್ತು ಪರಾಮಾರ್ಶಿಸಿ ನಾಲ್ಕನೇ ಅಲೆಯನ್ನು ಸಮರ್ಥವಾಗಿ ತಡೆಗಟ್ಟುವ ನಿಟ್ಟಿನಲ್ಲಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲು ವೈಜ್ಞಾನಿಕ ಮಾರ್ಗದರ್ಶನವನ್ನು ನೀಡುವ ನಿರೀಕ್ಷೆ ಇದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.
  4. ಚಾಮರಾಜನಗರ ಜಿಲ್ಲೆಯಲ್ಲಿ ವಿಶೇಷ ಚೇತನರಿಗೆ ಅನುಕೂಲವಾಗುವಂತೆ ತಾಲೂಕು ಮತ್ತು ಹೋಬಳಿ ಮಟ್ಟದಲ್ಲಿ ಶಿಬಿರಗಳನ್ನು ಏರ್ಪಡಿಸಿ ಗುರುತಿನಚೀಟಿ ವಿತರಿಸುವಂತೆ ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಸರ್ಕಾರದ ಯೋಜನೆಗಳು ಪಾರದರ್ಶಕವಾಗಿ ಅರ್ಹರಿಗೆ ಮುಟ್ಟಬೇಕು. ಜಿಲ್ಲೆಯಲ್ಲಿ ಸ್ಥಳೀಯ ಮಟ್ಟದಲ್ಲಿ ವಿಶೇಷ ಶಿಬಿರಗಳನ್ನು ಏರ್ಪಡಿಸಿ ಬಾಕಿ ಉಳಿದಿರುವ ಗುರುತಿನ ಚೀಟಿಗಳನ್ನು ತ್ವರಿತವಾಗಿ ವಿತರಿಸಬೇಕು ಎಂದು ಅವರು ಹೇಳಿದರು.
  5. ಐದರಿಂದ ರಿಂದ 12 ವರ್ಷದೊಳಗಿನ ಮಕ್ಕಳಿಗೆ ಕಾರ್ಬೆವ್ಯಾಕ್ಸ್ ಲಸಿಕೆಯನ್ನು ತುರ್ತು ಬಳಕೆಗೆ ಮಹಾ ನಿಯಂತ್ರಕರು ಒಪ್ಪಿಗೆ ನೀಡಿದ್ದಾರೆ. 12 ವರ್ಷದ ಮಕ್ಕಳಿಗೆ ಜೈಕೋವಿಡ್ ಲಸಿಕೆಯ ಎರಡು ಡೋಸ್‌ಗಳನ್ನು ತುರ್ತು ಸಂದರ್ಭದಲ್ಲಿ ಬಳಕೆ ಮಾಡಲು ಡಿಸಿಜಿಐ ಅನುಮೋದನೆ ನೀಡಿದೆ ಎಂದು ಕೇಂದ್ರ ಆರೋಗ್ಯ ಸಚಿವ ಡಾ. ಮನ್ಸುಖ್ ಮಾಂಡವೀಯ ಟ್ವೀಟ್ ಸಂದೇಶದಲ್ಲಿ ತಿಳಿಸಿದ್ದಾರೆ.
  6. ಐಪಿಎಲ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ನಿನ್ನೆ ರಾತ್ರಿ ಪುಣೆಯಲ್ಲಿ ನಡೆದ ಪಂದ್ಯದಲ್ಲಿ ರಾಜಸ್ಥಾನ ರಾಯಲ್ಸ್ ತಂಡ, ರಾಯಲ್ ಚಾಲೆಂಜರ‍್ಸ್ ಬೆಂಗಳೂರು ತಂಡವನ್ನು 29 ರನ್‌ಗಳಿಂದ ಸೋಲಿಸಿದೆ. ಇಂದು ಮುಂಬೈಯ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆಯಲಿರುವ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ಮತ್ತು ಹೈದ್ರಾಬಾದ್ ಸನ್‌ರೈಸರ್ಸ್ ಮುಖಾಮುಖಿಯಾಗಲಿವೆ. ಪಂದ್ಯ ಸಂಜೆ 7.30ಕ್ಕೆ ಆರಂಭವಾಗಲಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version