ದಿನದ ಸುದ್ದಿ
ಒನ್ ನೇಷನ್ ಒನ್ ರೇಷನ್ ಕಾರ್ಡ್ ಯೋಜನೆ ಜಾರಿ : ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಆದೇಶ
ಸುದ್ದಿದಿನ, ನವದೆಹಲಿ : ಜುಲೈ 31 ರೊಳಗೆ ದೇಶಾದ್ಯಂತ ಒನ್ ನೇಷನ್ ಒನ್ ರೇಷನ್ ಕಾರ್ಡ್ ಯೋಜನೆ ಜಾರಿಗೊಳಿಸಲು ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಆದೇಶಿಸಿದೆ.
ಅಸಂಘಟಿತ ವಲಯದ ಕಾರ್ಮಿಕರ ನೋಂದಣಿಗೆ ರಾಷ್ಟ್ರೀಯ ಪೋರ್ಟಲ್ ರಚಿಸುವ ವಿಚಾರಕ್ಕೆ ಸಂಬಂಧಿಸಿದಂತೆ ಸರ್ವೊಚ್ಛ ನ್ಯಾಯಾಲಯ ಮಹತ್ತರ ಆದೇಶ ನೀಡಿದ್ದು, ಆ ಮೂಲಕ ಪಡಿತರ ಚೀಟಿ ಇಲ್ಲದವರಿಗೆ ಆಹಾರ ಧಾನ್ಯ ವಿತರಿಸಲು ರಾಜ್ಯಗಳು ಯೋಜನೆ ರೂಪಿಸಬೇಕು ಎಂದು ತಿಳಿಸಲಾಗಿದೆ.
ಜುಲೈ 31ರ ಒಳಗೆ ಕೇಂದ್ರ ಸರ್ಕಾರ ಪೋರ್ಟಲ್ ಸಿದ್ಧಪಡಿಸಲು ಕ್ರಮ ಕೈಗೊಳ್ಳಬೇಕು. ಅಸಂಘಟಿತ ವಲಯದ ಕಾರ್ಮಿಕರ ನೋಂದಣಿ ಪ್ರಕ್ರಿಯೆಗೆ ರಾಷ್ಟ್ರೀಯ ಪೋರ್ಟಲ್ ಮಾಡಬೇಕು ಎಂದು ನ್ಯಾಯಾಲಯ ತಿಳಿಸಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243