Connect with us

ದಿನದ ಸುದ್ದಿ

ಪ್ರಮುಖ ಸಂಕ್ಷಿಪ್ತ ಸುದ್ದಿಗಳು

Published

on

ಪ್ರಮುಖ ಸಂಕ್ಷಿಪ್ತ ಸುದ್ದಿಗಳು

  1. ರಾಜ್ಯದಲ್ಲಿ ಸಹಕಾರ ಕ್ಷೇತ್ರ ಸಾರ್ವಜನಿಕ ವಲಯದಲ್ಲಿ ವಿಶ್ವಾಸಾರ್ಹ ಕೆಲಸ ಮಾಡಿಕೊಂಡು ಬರುತ್ತಿದೆ. ಇದರಿಂದ ರೈತರಿಗೆ ಸಾಕಷ್ಟು ಅನುಕೂಲಗಳಾಗುತ್ತಿವೆ ಎಂದು ಸಹಕಾರ ಸಚಿವ ಎಸ್.ಟಿ ಸೋಮಶೇಖರ್ ಬೆಳಗಾವಿಯಲ್ಲಿಂದು ಹೇಳಿದ್ದಾರೆ. ಸಹಕಾರ ಇಲಾಖೆ ಸುಮಾರು 60 ಸಾವಿರ ಉದ್ಯೋಗಿಗಳ ಹೊಂದಿದ್ದು, ಬೃಹದಾಕಾರವಾಗಿ ಬೆಳೆಯುತ್ತಿದೆ. ಠೇವಣಿ ಹಣ ದುರುಪಯೋಗ ಪಡಿಸಿಕೊಳ್ಳುವ ಸಹಕಾರಿ ಬ್ಯಾಂಕ್‌ಗಳು ಹಾಗೂ ಸಂಬಂಧಪಟ್ಟವರ ವಿರುದ್ಧ ಸೂಕ್ತ ಕ್ರಮ ತೆಗೆದುಕೊಳ್ಳಲಾಗುವುದು. ಕಾನೂನಿಗೆ ಸೂಕ್ತ ತಿದ್ದುಪಡಿ ತರಲಾಗುವುದು ಎಂದು ತಿಳಿಸಿದ್ದಾರೆ.
  2. ಒತ್ತುವರಿದಾರರಿಗೆ ಭೂಮಿಯನ್ನು ಗುತ್ತಿಗೆ ಆಧಾರದಲ್ಲಿ ನೀಡುವ ರಾಜ್ಯ ಸರ್ಕಾರದ ಯೋಜನೆಯನ್ನು ಕಂದಾಯ ಸಚಿವ ಆರ್. ಅಶೋಕ್ ಏಪ್ರಿಲ್ ೨೮ ರಂದು ಚಿಕ್ಕಮಗಳೂರು ನಗರದಲ್ಲಿ ಪ್ರಕಟಿಸಲಿದ್ದಾರೆ ಎಂದು ಮೂಡಿಗೆರೆ ಶಾಸಕ ಎಂ.ಪಿ. ಕುಮಾರಸ್ವಾಮಿ ಹೇಳಿದ್ದಾರೆ.
  3. ಎಸ್.ಎಸ್.ಎಲ್.ಸಿ. ಪರೀಕ್ಷೆ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯ ಏಪ್ರಿಲ್ 22ರಿಂದ 30 ರವರೆಗೆ ಗದಗ ಜಿಲ್ಲೆಯ ಒಟ್ಟು 6 ಕೇಂದ್ರಗಳಲ್ಲಿ ನಡೆಯಲಿದೆ. ಮೌಲ್ಯಮಾಪನ ಕಾರ್ಯಗಳು ಸುಗಮವಾಗಿ ನಡೆಯಲು, ಶಾಂತಿ ಹಾಗೂ ಸುವ್ಯವಸ್ಥೆ ಕಾಪಾಡುವ ಸಲುವಾಗಿ ಮೌಲ್ಯಮಾಪನ ಕೇಂದ್ರ ಸುತ್ತಲಿನ 200 ಮೀಟರ್ ಪ್ರದೇಶ ನಿಷೇಧಿತ ಪ್ರದೇಶವೆಂದು ಘೋಷಿಸಿದೆ ಎಂದು ಜಿಲ್ಲಾಧಿಕಾರಿ ಎಂ.ಸುಂದರೇಶ್ ಬಾಬು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
  4. ಯಾದಗಿರಿ ಜಿಲ್ಲೆಯಲ್ಲಿ ಪದವಿ ಪೂರ್ವ ಶಿಕ್ಷಣ ಇಲಾಖೆ ಇದೇ ಏಪ್ರಿಲ್ 23 ರಿಂದ ನಡೆಸಲಿರುವ ದ್ವಿತೀಯ ಪಿಯುಸಿ ಪರೀಕ್ಷೆಯನ್ನು ಒಟ್ಟು 10,428ವಿದ್ಯಾರ್ಥಿಗಳು ಬರೆಯಲಿದ್ದು, ಅಗತ್ಯ ಸಿದ್ಧತೆ ಮತ್ತು ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಯಾದಗಿರಿ ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಚಂದ್ರಕಾಂತ್ ಜಿ.ಹಿಳ್ಳಿ ಅವರು ಆಕಾಶವಾಣಿಗೆ ಮಾಹಿತಿ ನೀಡಿದ್ದಾರೆ.
  5. ಆಜಾದಿ ಕಾ ಅಮೃತ್ ಮಹೋತ್ಸವ ರಾಷ್ಟ್ರೀಯ ಜಾಗೃತಿ, ಉತ್ತಮ ಆಡಳಿತದ ಕನಸು ನನಸಾಗಿಸುವ, ಜಾಗತಿಕ ಶಾಂತಿ ಹಾಗೂ ಅಭಿವೃದ್ಧಿಯ ಹಬ್ಬವಾಗಿದೆ ಎಂದು ಬಿಜೆಪಿ ಹಿರಿಯ ನಾಯಕ, ಕೇಂದ್ರ ವಾರ್ತಾ ಮತ್ತು ಪ್ರಸಾರ ಸಚಿವ ಅನುರಾಗ್ ಠಾಕೂರ್ ನವದೆಹಲಿಯಲ್ಲಿಂದು ಹೇಳಿದ್ದಾರೆ. ಅಮೃತ ಮಹೋತ್ಸವದಡಿ ದೇಶಾದ್ಯಂತ 25 ಸಾವಿರಕ್ಕೂ ಹೆಚ್ಚು ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಕೇಂದ್ರ ಸರ್ಕಾರದ ಸಚಿವಾಲಯಗಳು, ಇಲಾಖೆಗಳು ಎಂಟು ಸಾವಿರದ 616 ಕಾರ್ಯಕ್ರಮ ನಡೆಸಿದ್ದರೆ, ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳು ಒಂಬತ್ತು ಸಾವಿರದ 516ಕಾರ್ಯಕ್ರಮ ಆಯೋಜಿಸಿವೆ ಎಂದು ಹೇಳಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ದುರ್ಗಾಂಬಿಕಾದೇವಿ ಜಾತ್ರೆ ; ಭಕ್ತಾದಿಗಳಿಗೆ ಶೌಚಾಲಯ ವ್ಯವಸ್ಥೆ

Published

on

ಸುದ್ದಿದಿನ,ದಾವಣಗೆರೆ:ಫೆಬ್ರವರಿ 23 ರಿಂದ 27 ರವರೆಗೆ ನಡೆಯುವ ದುರ್ಗಾಂಬಿಕಾದೇವಿ ಜಾತ್ರೆ ಪ್ರಯಕ್ತ ದೇವಾಲಯಕ್ಕೆ ಆಗಮಿಸುವ ಭಕ್ತಾಧಿಗಳಿಗೆ ಶೌಚಾಲಯಗಳ ವ್ಯವಸ್ಥೆ ಕಲ್ಪಿಸಲಾಗಿದೆ.

ದೊಡ್ಡಪೇಟೆಯ ನಾಮದೇವ ಸಿಂಪಿ ಕಲ್ಯಾಣ ಮಂಟಪ, ವಿರಕ್ತಮಠ ಮತ್ತು ನಗರ ಕುಟುಂಬ ಕಲ್ಯಾಣ ಕೇಂದ್ರ-1, ಎಸ್.ಕೆ.ಪಿ ರಸ್ತೆಯ ಎಸ್.ವಿ.ಎಸ್.ಶಾಲೆ ಮತ್ತು ಕನ್ನಿಕಾಪರಮೇಶ್ವರಿ ದೇವಸ್ಥಾನ ಸಂಘ, ಮಾರ್ಕಂಡೇಶ್ವರ ಕಲ್ಯಾಣ ಮಂಟಪ, ಈ ಸ್ಥಳಗಳಲ್ಲಿರುವ ಶೌಚಾಲಯಗಳನ್ನು ಉಪಯೋಗಿಸುವ ಮೂಲಕ ದೇವಾಲಯದ ಸುತ್ತಮುತ್ತಲಿನ ಆವರಣವನ್ನು ಸ್ವಚ್ಚವಾಗಿಡಲು ಸಹಕರಿಸಬೇಕೆಂದು ಪಾಲಿಕೆ ಆಯುಕ್ತರು ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಮಾಜಿ ದೇವದಾಸಿ ಮಹಿಳೆಯರ ಮರು ಸಮೀಕ್ಷೆ : ಆಕ್ಷೇಪಣೆಗಳಿಗೆ ಅರ್ಜಿ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ : ಮಾಜಿ ದೇವದಾಸಿ ಮಹಿಳೆಯರ ಮರು ಸಮೀಕ್ಷೆ -2025ಕ್ಕೆ ಸಂಬಂಧಿಸಿದಂತೆ ಜಿಲ್ಲಾ ಮಟ್ಟದ ಮೇಲ್ವಿಚಾರಣೆ ಮತ್ತು ಮೌಲ್ಯಮಾಪನಗಳಿಗೆ ಆಕ್ಷೇಪಣೆ, ತಕರಾರು ಸಲ್ಲಿಸಲು ಅರ್ಜಿ ಆಹ್ವಾನಿಸಲಾಗಿದೆ.

ತಿರಸ್ಕೃತಗೊಂಡ ಅರ್ಜಿಗಳ ಅಭ್ಯರ್ಥಿಗಳ ಆಕ್ಷೇಪಣೆಗಳಿದ್ದಲ್ಲಿ, ಮಾರ್ಚ್ 13 ರೊಳಗೆ ನಿಗದಿಪಡಿಸಿದ ದಿನಾಂಕದೊಳಗಾಗಿ ಪೂರಕ ದಾಖಲಾತಿಗಳನ್ನು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಗೆ ಸಲ್ಲಿಸಬೇಕೆಂದು ಜಿಲ್ಲಾಧಿಕಾರಿ ಗಂಗಾರ‍್ವಾಮಿ.ಜಿ.ಎಂ.ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಉದ್ಯೋಗಿಗಳಿಗೆ ಗೂಗಲ್ ಶಾಕ್..! AI ಕಲಿಯದಿದ್ದರೆ ಉದ್ಯೋಗ ತೊರೆಯಿರಿ

Published

on

ಸುದ್ದಿದಿನ,ಬೆಂಗಳೂರು: ಜಗತ್ತಿನ ಟೆಕ್ ದೈತ್ಯ ಕಂಪನಿ ಗೂಗಲ್ ತನ್ನ ಉದ್ಯೋಗಿಗಳಿಗೆ ಶಾಕ್ ನೀಡಿದೆ. AI ಕಲಿಯದಿದ್ದರೆ ಉದ್ಯೋಗ ತೊರೆಯುವಂತೆ ಸೂಚಿಸಿದ್ದು, ‘ವಾಲಂಟರಿ ಎಕ್ಸಿಟ್ ಪ್ರೋಗ್ರಾಮ್’ (VEP) ಘೋಷಿಸಿದೆ.

ವಾಲಂಟರಿ ಎಕ್ಸಿಟ್ ಪ್ರೋಗ್ರಾಮ್’ (VEP)

AI ಕಲಿಯುವುದು ಅನಿವಾರ್ಯ: ಗೂಗಲ್ ಈಗ ಸಂಪೂರ್ಣವಾಗಿ ‘AI ಫಸ್ಟ್’ ಕಂಪನಿಯಾಗಿ ರೂಪಾಂತರಗೊಳ್ಳುತ್ತಿದೆ. ತಂತ್ರಜ್ಞಾನದ ವೇಗಕ್ಕೆ ಹೊಂದಿಕೊಳ್ಳಲು ಸಾಧ್ಯವಾಗದ ಅಥವಾ AI ಕಲಿಯಲು ಆಸಕ್ತಿ ಇಲ್ಲದ ಉದ್ಯೋಗಿಗಳಿಗೆ ಗೌರವಯುತವಾಗಿ ಉದ್ಯೋಗ ತೊರೆಯಲು ‘ವಾಲಂಟರಿ ಎಕ್ಸಿಟ್ ಪ್ರೋಗ್ರಾಮ್’ (VEP) ಯನ್ನು ಜಾರಿಗೊಳಿಸಿದೆ.

ಯಾರಿಗೆ ಅನ್ವಯಿಸುತ್ತದೆ?: ಇದು ಮುಖ್ಯವಾಗಿ ಗೂಗಲ್‌ನ ಗ್ಲೋಬಲ್ ಬಿಸಿನೆಸ್ ಆರ್ಗನೈಸೇಷನ್ (GBO) ವಿಭಾಗದ ಉದ್ಯೋಗಿಗಳಿಗೆ (ಸೇಲ್ಸ್, ಕಾರ್ಪೊರೇಟ್ ಡೆವಲಪ್ಮೆಂಟ್ ಮತ್ತು ಸೊಲ್ಯೂಷನ್ಸ್ ಟೀಮ್) ಗೆ ಅನ್ವಯಿಸುತ್ತದೆ. ಆದರೆ, ಗ್ರಾಹಕರೊಂದಿಗೆ ನೇರ ಸಂಪರ್ಕ ಹೊಂದಿರುವ ತಂಡಗಳಿಗೆ ಇದರಿಂದ ವಿನಾಯಿತಿ ನೀಡಲಾಗಿದೆ.

ಇದು ಲೇ-ಆಫ್ ಅಲ್ಲ: ಇದು ಕಡ್ಡಾಯವಾಗಿ ಕೆಲಸದಿಂದ ತೆಗೆದುಹಾಕುವ ಪ್ರಕ್ರಿಯೆಯಲ್ಲ. ಬದಲಾಗಿ, ಸ್ವತಃ ಹೊರಹೋಗಲು ಬಯಸುವ ಉದ್ಯೋಗಿಗಳಿಗೆ ಉತ್ತಮ ಪರಿಹಾರ ಧನ (Severance Package) ಮತ್ತು ಇತರ ಸೌಲಭ್ಯಗಳನ್ನು ನೀಡಿ ಕಳುಹಿಸಿಕೊಡುವ ಯೋಜನೆಯಾಗಿದೆ.

ಕಾರಣವೇನು?: ತಂತ್ರಜ್ಞಾನ ಅತ್ಯಂತ ವೇಗವಾಗಿ ಬದಲಾಗುತ್ತಿದ್ದು, ಕಂಪನಿಗೆ AI ಮಿಷನ್‌ಗೆ ಸಂಪೂರ್ಣವಾಗಿ ಹೊಂದಿಕೊಳ್ಳುವ ಮತ್ತು ಕ್ರಿಯಾತ್ಮಕವಾಗಿ ಕೆಲಸ ಮಾಡುವ ಕಾರ್ಯಪಡೆಯ ಅಗತ್ಯವಿದೆ ಎಂದು ಗೂಗಲ್‌ನ ಚೀಫ್ ಬಿಸಿನೆಸ್ ಆಫೀಸರ್ ಫಿಲಿಪ್ ಶೆಡ್ಲರ್ ತಿಳಿಸಿದ್ದಾರೆ.

ಭವಿಷ್ಯದ ಮುನ್ಸೂಚನೆ: ಅಮೆಜಾನ್, ಮೆಟಾ ಮತ್ತು ಮೈಕ್ರೋಸಾಫ್ಟ್‌ನಂತಹ ಇತರ ಟೆಕ್ ದೈತ್ಯ ಕಂಪನಿಗಳು ಕೂಡ ಇದೇ ಹಾದಿಯಲ್ಲಿ ಸಾಗುವ ಸಾಧ್ಯತೆ ಇದೆ. 2026ರಲ್ಲಿ ಈ ನಾಲ್ಕು ಕಂಪನಿಗಳು AI ತಂತ್ರಜ್ಞಾನಕ್ಕಾಗಿ ಸುಮಾರು 58.92 ಲಕ್ಷ ಕೋಟಿ ರೂಪಾಯಿ ಹೂಡಿಕೆ ಮಾಡುವ ಅಂದಾಜಿದೆ.

ಒಟ್ಟಾರೆಯಾಗಿ, ಭವಿಷ್ಯದ ಉದ್ಯೋಗ ಮಾರುಕಟ್ಟೆಯಲ್ಲಿ AI ಕೌಶಲ್ಯ ಅತ್ಯಂತ ಅನಿವಾರ್ಯ ಎಂಬ ಎಚ್ಚರಿಕೆಯ ಸಂದೇಶವನ್ನು ಗೂಗಲ್ ಈ ಮೂಲಕ ನೀಡಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending