ದಿನದ ಸುದ್ದಿ
ಪ್ರಮುಖ ಸುದ್ದಿಗಳು
ಪ್ರಮುಖ ಸುದ್ದಿಗಳು
- ಕನ್ನಡ ಭಾಷೆ ಸಮೃದ್ಧಿಗೆ ಶ್ರಮಿಸುತ್ತಿರುವ ಕನ್ನಡ ವಿಶ್ವವಿದ್ಯಾಲಯಕ್ಕೆ ಅಗತ್ಯ ಮೂಲಸೌಕರ್ಯ ಹಾಗೂ ಇನ್ನಿತರ ಚಟುವಟಿಕೆಗಳಿಗಾಗಿ ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯಲ್ಲಿನ ಮುಖ್ಯಮಂತ್ರಿ ವಿವೇಚನಾ ಅನುದಾನದ ಅಡಿ 20 ಕೋಟಿ ರೂಪಾಯಿ ಹಣವನ್ನು ತಕ್ಷಣ ಬಿಡುಗಡೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಹಂಪಿ ಬಳಿಯ ಕನ್ನಡ ವಿವಿಯಲ್ಲಿ ನೂತನ ಐದು ಕಟ್ಟಡಗಳ ಉದ್ಘಾಟನೆ ಮತ್ತು 128ಪುಸ್ತಕಗಳ ಬಿಡುಗಡೆ ಹಾಗೂ ಸಂಚಾರಿ ವಿವಿ ಪುಸ್ತಕ ಮಾರಾಟ ವಾಹನ ಲೋಕಾರ್ಪಣೆಗೊಳಿಸಿ ಅವರು ಮಾತನಾಡಿದರು.
- ಕೋವಿಡ್ ಕಾರಣದಿಂದ ಕಳೆದ 2 ವರ್ಷಗಳಿಂದ ಬಹಳ ಸರಳವಾಗಿ ನಡೆದಿದ್ದ ಬೆಂಗಳೂರಿನ ಐತಿಹಾಸಿಕ ಕರಗ ಉತ್ಸವಕ್ಕೆ ಕ್ಷಣಗಣನೆ ಆರಂಭವಾಗಿದೆ. ಕರಗ ಶಕ್ತೋತ್ಸವ ಇಂದು ರಾತ್ರಿ 12.30ಕ್ಕೆ ನಡೆಯಲಿದೆ. ಧರ್ಮರಾಯ ಸ್ವಾಮಿ ದೇವಸ್ಥಾನವನ್ನು ಮಲ್ಲಿಗೆ ಹೂವಿನಿಂದ ಅಲಂಕರಿಸಲಾಗಿದೆ. ಕರಗ ಸಾಗುವ ಮಾರ್ಗದ ಉದ್ದಕ್ಕೂ ವಿದ್ಯುತ್ ದೀಪಗಳಿಂದ ಅಲಂಕಾರ ಮಾಡಲಾಗಿದೆ. ಕರಗ ಉತ್ಸವ ನೋಡಲು ರಾಜ್ಯದ ವಿವಿಧ ಕಡೆಗಳಿಂದ ಲಕ್ಷಾಂತರ ಜನ ಸೇರಲಿರುವ ಹಿನ್ನೆಲೆಯಲ್ಲಿ ನಗರಾದ್ಯಂತ ಬಿಗಿ ಭದ್ರತೆ ಒದಗಿಸಲಾಗಿದೆ.
- ವಿದ್ಯುತ್ ಸಂಪರ್ಕವಿಲ್ಲದ ಮನೆಗಳಿಗೆ ಹೊಸಬೆಳಕು ಯೋಜನೆಯ ಮೂಲಕ ಸಂಪರ್ಕ ಕಲ್ಪಿಸಲಾಗುತ್ತಿದೆ ಎಂದು ಇಂಧನ ಸಚಿವ ವಿ. ಸುನೀಲ್ ಕುಮಾರ್ ಹೇಳಿದ್ದಾರೆ. ಕೊಪ್ಪಳ ಜಿಲ್ಲೆಯ ಹಿರೇಬೊಮ್ಮನಾಳದಲ್ಲಿ ನೂತನ ವಿದ್ಯುತ್ ಉಪಕೇಂದ್ರ ಉದ್ಘಾಟಿಸಿ ಅವರು ಮಾತನಾಡಿದ ಅವರು, ಗಂಗಾ ಕಲ್ಯಾಣ ಯೋಜನೆಯಡಿ ರೈತರಿಗೆ ತ್ವರಿತವಾಗಿ ವಿದ್ಯುತ್ ಸಂಪರ್ಕ ಕಲ್ಪಿಸಲು ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಹೇಳಿದರು.
- ಕೇರಳದ ಮಲಪುರಂನಲ್ಲಿ ಇಂದು ಬೆಳಿಗ್ಗೆ ನಡೆದ ಸಂತೋಷ್ ಟ್ರೋಫಿಯ ೭೫ನೇ ರಾಷ್ಟ್ರೀಯ ಫುಟ್‌ಬಾಲ್ ಚಾಂಪಿಯನ್‌ಶಿಪ್‌ನ ಆರಂಭಿಕ ಪಂದ್ಯದಲ್ಲಿ ಪಶ್ಚಿಮ ಬಂಗಾಳ ತಂಡ, ಪಂಜಾಬ್ ಅನ್ನು 1-0ಗೋಲುಗಳಿಂದ ಮಣಿಸಿದೆ. ಮಂಜೇರಿಯಲ್ಲಿ ಇಂದು ರಾತ್ರಿ 8 ಗಂಟೆಗೆ ನಡೆಯುವ ಮತ್ತೊಂದು ಪಂದ್ಯದಲ್ಲಿ ಆತಿಥೇಯ ಕೇರಳ, ರಾಜಸ್ಥಾನವನ್ನು ಎದುರಿಸಲಿದೆ.
- ಐಪಿಎಲ್ ಕ್ರಿಕೆಟ್:ನಲ್ಲಿಂದು ಎರಡು ಪಂದ್ಯಗಳು ನಡೆಯಲಿವೆ. ಮುಂಬೈನ ಬ್ರಬೋರ್ನ್ ಕ್ರೀಡಾಂಗಣದಲ್ಲಿ ಮುಂಬೈ ಇಂಡಿಯನ್ಸ್ ಮತ್ತು ಲಖನೌ ಸೂಪರ್ ಜೈಂಟ್ಸ್ ನಡುವೆ ನಡೆಯುತ್ತಿರುವ ಪಂದ್ಯದಲ್ಲಿ ಇತ್ತೀಚಿನ ವರದಿ ಬಂದಾಗ॒ಲ॒ಖನೌ ಸೂಪರ್ ಜೈಂಟ್ಸ್ 17 ಓವರ್‌ಗಳಲ್ಲಿ೩॒ ವಿಕೆಟ್ ನಷ್ಟಕ್ಕೆ164 ರನ್ ಮಾಡಿ ಆಡುತ್ತಿದೆ. ಟಾಸ್ ಗೆದ್ದ ಮುಂಬೈ ಇಂಡಿಯನ್ಸ್ ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದೆ. ಸಂಜೆ 7.30ಕ್ಕೆ ವಾಂಖೆಡೆ ಕ್ರೀಡಾಂಗಣದಲ್ಲಿ ಆರಂಭಗೊಂಡಿರುವ ಮತ್ತೊಂದು ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಡೆಕ್ಕನ್ ಚಾರ್ಜರ್ಸ್ ಮುಖಾಮುಖಿಯಾಗಿವೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243