ದಿನದ ಸುದ್ದಿ
ಕೋವಿಡ್ ಟೆಸ್ಟ್ ಹೆಚ್ಚಿಸಿ : ಡಿ ಸಿ ಮಹಾಂತೇಶ್ ಬೀಳಗಿ
ಸುದ್ದಿದಿನ,ದಾವಣಗೆರೆ : ಜಿಲ್ಲಾಡಳಿತ ಭವನದ ತುಂಗಭದ್ರಾ ಸಭಾಂಗಣದಲ್ಲಿ ಇಂದು ನಡೆದ ಸಭೆಯಲ್ಲಿ ಜಲ್ಲಾಧಿಕಾರಿ ಮಾಂತೇಶ ಬೀಳಗಿ ಅವರು ಕೋವಿಡ್ ನಿಯಂತ್ರಣದ ಹಿನ್ನಲೆಯಲ್ಲಿ ಜಿಲ್ಲೆಯಲ್ಲಿ ಹೆಚ್ಚು ಹೆಚ್ಚು ಕೋವಿಡ್ ಟೆಸ್ಟ್ಗಳನ್ನು ಮಾಡುವ ಮೂಲಕ ಸೋಂಕಿತರನ್ನು ಬೇಗ ಪತ್ತೆ ಹಚ್ಚಿ ಕೋವಿಡ್ ಕೇರ್ ಸೆಂಟರ್ ಗೆ ದಾಖಲಿಸಲು ಸೂಚಿಸಿದ ಅವರು ಕೊರೊನಾ ಬಗೆಗೆ ಜಾಗೃತಿ ಮೂಡಿಸುವ ಕಾರ್ಯ ಆಗಬೇಕೆಂದರು.
ಹಾಗೂ ಕೋವಿಡ್-19 ಮೂರನೇ ಅಲೆಯಲ್ಲಿ ಮಕ್ಕಳಿಗೆ ಹೆಚ್ಚಿನ ಪ್ರಮಾಣದಲ್ಲಿ ಸೋಂಕು ತಗಲುವ ಸಾಧ್ಯತೆಗಳಿರುವ ಬಗೆಗೆ ತಾಂತ್ರಿಕ ಸಮಿತಿಯವರು ಮೂನ್ಸೂಚನೆ ನೀಡಿದ್ದು, ಮೂರನೇ ಅಲೆ ಎದುರಿಸಲು ಸಿದ್ಧತೆ ಮಾಡಿಕೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಸಭೆಯಲ್ಲಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ವಿಜಯ ಮಹಾಂತೇಶ್. ಬಿ. ದಾನಮ್ಮನವರ್, ಉಪವಿಭಾಗಾಧಿಕಾರಿ ಮಮತ ಹೊಸಗೌಡರ್, ಡಿಹೆಚ್‌ಒ ಡಾ.ನಾಗರಾಜ್, ಆರ್‌ಸಿಹೆಚ್ ಡಾ. ಮೀನಾಕ್ಷಿ, ಡಾ.ಮುರುಳೀಧರ್ ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243