ದಿನದ ಸುದ್ದಿ

ಕರ್ನಾಟಕದಲ್ಲಿ ಕೋವಿಡ್ ಸೋಂಕು ಪ್ರಕರಣ ಹೆಚ್ಚಳ; ಮಾಸ್ಕ್ ಕಡ್ಡಾಯಗೊಳಿಸಿದ ಸರ್ಕಾರ

Published

on

ಸುದ್ದಿದಿನ, ಬೆಂಗಳೂರು:ರಾಜ್ಯದಲ್ಲಿ ಕೋವಿಡ್ ಸೋಂಕು ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಮಾಸ್ಕ್ ಕಡ್ಡಾಯಗೊಳಿಸಲಾಗಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಹೇಳಿದ್ದಾರೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ನಡೆದ ಕೋವಿಡ್ ತಾಂತ್ರಿಕ ಸಲಹಾ ಸಮಿತಿ ಸಭೆ ನಂತರ ಸುದ್ದಿಗಾರರಿಗೆ ಅವರು ಈ ವಿಷಯ ತಿಳಿಸಿದರು. ಜನಜಂಗುಳಿಯ ಸ್ಥಳಗಳಲ್ಲಿ ಹಾಗೂ ಒಳಾಂಗಣ ಪ್ರದೇಶದಲ್ಲಿ ಮಾಸ್ಕ್ ಕಡ್ಡಾಯಗೊಳಿಸಲಾಗಿದೆ. ಸಧ್ಯಕ್ಕೆ ಯಾವುದೇ ದಂಡ ವಿಧಿಸುವ ಆಲೋಚನೆ ಮಾಡಿಲ್ಲ.

ಈ ಕುರಿತು ಪರಿಷ್ಕೃತ ಮಾರ್ಗಸೂಚಿಯನ್ನು ಹೊರಡಿಸಲಾಗುವುದು ಎಂದು ಸಚಿವ ಸುಧಾಕರ್ ತಿಳಿಸಿದರು. ವಿಶ್ವ ಆರೋಗ್ಯ ಸಂಸ್ಥೆ ವರದಿಯಂತೆ ಈವರೆಗೂ ಲಸಿಕೆ ಪಡೆಯದವರು ಹೆಚ್ಚಾಗಿ ಸೋಂಕಿಗೆ ಒಳಗಾಗುತ್ತಿದ್ದಾರೆ. ಹೀಗಾಗಿ ಎಲ್ಲರು ಕಡ್ಡಾಯವಾಗಿ ಲಸಿಕೆ ಪಡೆಯಬೇಕು. 60 ವರ್ಷ ಮೇಲ್ಪಟ್ಟವರು ಹಾಗೂ ಈಗಾಗಲೇ 2ಡೋಸ್ ಲಸಿಕೆ ಪಡೆದವರು ಮುನ್ನೆಚ್ಚರಿಕೆ ಡೋಸ್ ಲಸಿಕೆ ಪಡೆಯಬೇಕು ಎಂದು ಅವರು ಹೇಳಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version