ದಿನದ ಸುದ್ದಿ

ರಾಜ್ಯದಲ್ಲಿ ಡೆಂಗಿ ಪ್ರಕರಣ ಹೆಚ್ಚಳ

Published

on

ಸುದ್ದಿದಿನ,ಬೆಂಗಳೂರು : ರಾಜ್ಯದಲ್ಲಿ ಡೆಂಗಿ ಪ್ರಕರಣಗಳ ಸಂಖ್ಯೆ ಹೆಚ್ಚಾಗಿದೆ. ಈ ತಿಂಗಳಲ್ಲಿ 544 ಮಂದಿ ಡೆಂಗಿಗೆ ತುತ್ತಾಗಿದ್ದಾರೆ. ಈವರೆಗೆ ಡೆಂಗಿ ಜ್ವರಕ್ಕೆ ಒಳಪಟ್ಟವರ ಒಟ್ಟು ಸಂಖ್ಯೆ 2,258ಕ್ಕೆ ಏರಿಕೆಯಾಗಿದೆ.

ಅಕಾಲಿಕ ಮಳೆಯಿಂದಾಗಿ ರಾಜ್ಯದಲ್ಲಿ ಈ ಜ್ವರ ಹೆಚ್ಚಿನವರಲ್ಲಿ ಕಾಣಿಸಿಕೊಳ್ಳುತ್ತಿದೆ. ಈ ವರ್ಷ 41,618 ಡೆಂಗಿ ಶಂಕಿತರನ್ನು ಗುರುತಿಸಿ, ತಪಾಸಣೆಗೆ ಒಳಪಡಿಸಲಾಗಿದೆ. 18,348 ಮಂದಿಯ ರಕ್ತ ಪರೀಕ್ಷೆ ನಡೆಸಲಾಗಿದೆ.

ಬಿಬಿಎಂಪಿ ವ್ಯಾಪ್ತಿಯಲ್ಲಿಯೇ 1,625 ಮಂದಿಯಲ್ಲಿ ಡೆಂಗಿ ಶಂಕೆ ವ್ಯಕ್ತವಾಗಿದ್ದು, 388 ಮಂದಿಯಲ್ಲಿ ಈ ಜ್ವರ ದೃಢಪಟ್ಟಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version