Connect with us

ದಿನದ ಸುದ್ದಿ

ಕೋವಿಡ್ ಸೋಂಕು ಪ್ರಕರಣಗಳ ಹೆಚ್ಚಳ ಹಿನ್ನೆಲೆ; ಅಗತ್ಯ ಮುನ್ನೆಚ್ಚರಿಕೆ ಕ್ರಮಗಳ ಅನುಷ್ಠಾನಕ್ಕೆ ಕರ್ನಾಟಕ ಸೇರಿದಂತೆ 5 ರಾಜ್ಯಗಳಿಗೆ ಕೇಂದ್ರ ಸೂಚನೆ

Published

on

ಸಾಂದರ್ಭಿಕ ಚಿತ್ರ

ಸುದ್ದಿದಿನ ಡೆಸ್ಕ್ : ಕೋವಿಡ್-19 ಸೋಂಕು ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಅಗತ್ಯ ಕ್ರಮಗಳ ನಿರಂತರ ಅನುಷ್ಠಾನ, ನಿಗಾ ವಹಿಸುವುದು ಮತ್ತು ಪರಿಣಾಮಕಾರಿ ವ್ಯವಸ್ಥೆ ರೂಪಿಸುವಂತೆ ಕರ್ನಾಟಕ, ತಮಿಳುನಾಡು, ಕೇರಳ, ತೆಲಂಗಾಣ ಮತ್ತು ಮಹಾರಾಷ್ಟ್ರ ಸರ್ಕಾರಗಳಿಗೆ ಕೇಂದ್ರ ಸೂಚನೆ ನೀಡಿದೆ.

ಈ ಐದು ರಾಜ್ಯಗಳಿಗೆ ಪತ್ರ ಬರೆದಿರುವ ಕೇಂದ್ರ ಆರೋಗ್ಯ ಇಲಾಖೆ ಕಾರ್ಯದರ್ಶಿ ರಾಜೇಶ್ ಭೂಷಣ್, ಈ ವಾರದಲ್ಲಿ ಕೋವಿಡ್-19 ಪ್ರಕರಣಗಳ ಹೆಚ್ಚಳ ಹಾಗೂ ಸಕ್ರಿಯ ಪ್ರಕರಣಗಳು ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಈ ರಾಜ್ಯಗಳು ಸೋಂಕು ನಿಯಂತ್ರಣಕ್ಕೆ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಖಚಿತಪಡಿಸಿಕೊಳ್ಳುವಂತೆ ಸಲಹೆ ನೀಡಿದ್ದಾರೆ.

ಪರೀಕ್ಷೆ, ಸೋಂಕು ಪತ್ತೆ ಹಚ್ಚುವಿಕೆ, ಚಿಕಿತ್ಸೆ ಮತ್ತು ಲಸಿಕೆ ನೀಡಿಕೆಯ ಮೇಲೆ ನಿರಂತರವಾಗಿ ನಿಗಾವಹಿಸಬೇಕು. ಕೋವಿಡ್ ನಿಯಂತ್ರಣದ ಸೂಕ್ತ ಕ್ರಮಗಳನ್ನು ಪಾಲಿಸಬೇಕು ಎಂದು ಅವರು ಪತ್ರದಲ್ಲಿ ತಿಳಿಸಿದ್ದಾರೆ.

ಕಳೆದ ಮೂರು ತಿಂಗಳಲ್ಲಿ ದೇಶಾದ್ಯಂತ ಕೋವಿಡ್-19 ಪ್ರಕರಣಗಳ ಸಂಖ್ಯೆಯಲ್ಲಿ ಇಳಿಕೆಯಾಗಿದೆ. ಆದರೆ ಕೆಲವು ರಾಜ್ಯಗಳಲ್ಲಿ ಮಾತ್ರ ಸೋಂಕು ಹೆಚ್ಚಳದ ಪ್ರಕರಣಗಳು ವರದಿಯಾಗುತ್ತಿವೆ. ಈ ಹಿನ್ನೆಲೆಯಲ್ಲಿ ಕೊರೊನಾ ಹರಡುವಿಕೆ ತಡೆಗೆ ಕಟ್ಟುನಿಟ್ಟಿನ ಕ್ರಮಗಳನ್ನು ಜಾರಿಗೆ ತರುವುದು ಅಗತ್ಯವಾಗಿದೆ ಎಂದು ರಾಜೇಶ್ ಭೂಷಣ್ ಹೇಳಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ದೇವದಾಸಿ ಪುನರ್‍ವಸತಿ ಕಚೇರಿಯಲ್ಲಿ ಖಾಲಿ ಇರುವ ಹುದ್ದೆಗೆ ಅರ್ಜಿ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ:ಪ್ರಸಕ್ತ ಸಾಲಿನ ದೇವದಾಸಿ ಪುನರ್‍ವಸತಿ ಯೋಜನೆಯಡಿ ತಾತ್ಕಾಲಿಕವಾಗಿ ಖಾಲಿ ಇರುವ ಹುದ್ದೆಗೆ ನೇರ ತಾತ್ಕಾಲಿಕ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ.

ಅಭ್ಯರ್ಥಿಗಳು ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಇಲಾಖೆ, 14ನೇ ಮುಖ್ಯ ರಸ್ತೆ, ಕುವೆಂಪು ನಗರ, ಎಮ್.ಸಿ.ಸಿ ‘ಬಿ’ ಬ್ಲಾಕ್, ದಾವಣಗೆರೆ ಇಲ್ಲಿ ಅರ್ಜಿಗಳನ್ನು ಪಡೆದು ಫೆಬ್ರವರಿ 12 ರೊಳಗಾಗಿ ಕಚೇರಿ ಸಲ್ಲಿಸಬೇಕು.

ದೇವದಾಸಿ ಪುನರ್ ವಸತಿ ಯೋಜನೆ, ಜಿಲ್ಲಾ ಕಚೇರಿ, ದಾವಣಗೆರೆ ಸ್ಥಳಕ್ಕೆ ಯೋಜನಾಧಿಕಾರಿಗಳ ಹುದ್ದೆ ಸಂಖ್ಯೆ-1, ನಿವೃತ್ತ ಶಿಶು ಅಭಿವೃದ್ದಿ ಯೋಜನಾಧಿಕಾರಿಗಳು, ಎಂಎಸ್‍ಡಬ್ಲ್ಯೂ, ಸಮಾಜಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ, ಮನಃಶಾಸ್ತ್ರದಲ್ಲಿ ಎಂ.ಎಸ್ಸಿ, ಜೊತೆಗೆ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು.

ಚನ್ನಗಿರಿ ತಾಲ್ಲೂಕು ಯೋಜನಾ ಅನುಷ್ಟಾನಾಧಿಕಾರಿಗಳು ಹುದ್ದೆ ಸಂಖ್ಯೆ-1, ಬಿಎಸ್‍ಡಬ್ಲ್ಯೂ, ಬಿಎ ಇನ್ ಸೋಶಿಯಲಾಜಿ, ಎಂಎಸ್‍ಸಿ ಇನ್ ಸೈಕೋಲಾಜಿ ಹಾಗೂ ಕಡ್ಡಾಯವಾಗಿ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು. ಹಾಗೂ ಕಡ್ಡಾಯವಾಗಿ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು.

ದೇವದಾಸಿ ಪುನರ್ ವಸತಿ ಯೋಜನೆ, ಜಿಲ್ಲಾ ಕಚೇರಿ, ದಾವಣಗೆರೆ ಸ್ಥಳಕ್ಕೆ ದಾಖಲಾಧಿಕಾರಿಗಳ ಹುದ್ದೆ ಸಂಖ್ಯೆ-1, ಬಿಕಾಂ ಪದವಿ ಅಥವಾ ತತ್ಸಮಾನ ಪದವಿ ಹಾಗೂ ಕಡ್ಡಾಯವಾಗಿ ಕಂಪ್ಯೂಟರ್ ಕನ್ನಡ ಮತ್ತು ಇಂಗ್ಲೀಷ್ ಟೈಪಿಂಗ್ ಜ್ಞಾನವನ್ನು ಹೊಂದಿರಬೇಕು. ಹೆಚ್ಚಿನ ಮಾಹಿತಿಗಾಗಿ ದೂ.ಸಂ: 08192-222117 ಸಂಪರ್ಕಿಸಬಹುದೆಂದು ಇಲಾಖೆಯ ಅಧಿಕಾರಿ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಭರತ ಹುಣ್ಣಿಮೆ ಪ್ರಯುಕ್ತ 25 ಹೆಚ್ಚುವರಿ ವಿಶೇಷ ವಾಹನ

Published

on

ಸಾಂದರ್ಭಿಕ ಚಿತ್ರ

ಸುದ್ದಿದಿನ,ದಾವಣಗೆರೆ : ಜನವರಿ 31 ರಿಂದ ಫೆಬ್ರವರಿ 2 ರವರೆಗೆ ಹರಪನಹಳ್ಳಿ ತಾಲ್ಲೂಕು ಉಚ್ಚಂಗಿದುರ್ಗದಲ್ಲಿ ಜರುಗಲಿರುವ  ಭಾರತ ಹುಣ್ಣಿಮೆಗಾಗಿ ರಾಜ್ಯ ರಸ್ತೆ ಸಾರಿಗೆ ನಿಗಮ, ದಾವಣಗೆರೆ ವಿಭಾಗದ ಘಟಕಗಳಿಂದ ರಾಜ್ಯದಾದ್ಯಂತ ಬರುವ ಭಕ್ತಾಧಿಗಳ ಅನುಕೂಲಕ್ಕಾಗಿ 25 ಹೆಚ್ಚುವರಿ ವಿಶೇಷ ವಾಹನ ಕಾರ್ಯಾಚರಣೆ ಮಾಡಲಾಗಿದೆ ಎಂದು ವಿಭಾಗೀಯ ನಿಯಂತ್ರಣಾಧಿಕಾರಿ ತಿಳಿಸಿದ್ದಾರೆ.

Continue Reading

ದಿನದ ಸುದ್ದಿ

ಕಾಗದ ರಹಿತ ನೋಂದಣಿ ವ್ಯವಸ್ಥೆಯ ತರಬೇತಿ

Published

on

ಸುದ್ದಿದಿನ,ದಾವಣಗೆರೆ:ಕಾಗದ ರಹಿತ ನೋಂದಣಿ ವ್ಯವಸ್ಥೆಯನ್ನು ಜಾರಿಗೊಳಿಸಿದ್ದು, ಜಿಲ್ಲಾ ನೋಂದಣಿ ಕಚೇರಿ ವ್ಯಾಪ್ತಿಗೆ ಬರುವ ದಸ್ತಾವೇಜು ಬರಹಗಾರರು, ವಕೀಲರು, ಕರ್ನಾಟಕ ಒನ್, ದಾವಣಗೆರೆ ಒನ್, ಗ್ರಾಮ ಒನ್ ಮತ್ತು ಬಾಪೂಜಿ ಸೇವಾ ಕೇಂದ್ರ ಸಿಬ್ಬಂದಿ ವರ್ಗದವರಿಗೆ ತರಬೇತಿ ಆಯೋಜಿಸಲಾಗಿದೆ.
ತರಬೇತಿಯು ಜ.30 ರಂದು ಹೊನ್ನಾಳಿ ಉಪ ನೋಂದಣಿ ಕಚೇರಿ ಆವರಣ, ಜ.31 ರಂದು ಚನ್ನಗಿರಿ ಉಪ ನೋಂದಣಿ ಕಚೇರಿ ಆವರಣ, ಫೆ.2 ರಂದು ಹರಿಹರ ಉಪ ನೋದಣಿ ಕಚೇರಿ ಆವರಣ, ಫೆ.3 ರಂದು ದಾವಣಗೆರೆ ಉಪ ನೋಂದಣಿ ಕಚೇರಿ, ಫೆ.4 ರಂದು ಜಗಳೂರು ಉಪ ನೋಂದಣಿ ಕಚೇರಿ ಆವರಣಗಳಲ್ಲಿ ಮಧ್ಯಾಹ್ನ 1 ರಿಂದ 2 ಗಂಟೆಯವರೆಗೆ ನಡೆಯಲಿದೆ ಎಂದು ಜಿಲ್ಲಾ ನೋಂದಣಾಧಿಕಾರಿ ತಿಳಿಸಿದ್ದಾರೆ.

Continue Reading

Trending