Connect with us

ಲೈಫ್ ಸ್ಟೈಲ್

ಯುವ ಜನರಲ್ಲಿ ಹೆಚ್ಚುತ್ತಿರುವ ಹೃದಯಾಘಾತ

Published

on

  • ಡಾ.ರಾಮನರೇಶ್ ಎಸ್.ಎಂಬಿಬಿಎಸ್ ಎಂಡಿ ಡಿಎಂ (ಕಾರ್ಡಿಯಾಲಜಿ),ಕನ್ಸಲ್ಟೆಂಟ್ ಇಂಟರ್ ವೆನ್ಷನಲ್ ಕಾರ್ಡಿಯೋಲಾಜಿಸೇಂಟ್,ಅಪೋಲೊ ಕ್ಲೀನಿಕ್, ಬೆಂಗಳೂರು

ಯುವ ಜನರಲ್ಲಿ ಹೃದಯಾಘಾತದ ಪ್ರಮಾಣ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ಯುವ ಪೀಳಿಗೆ ದೈನಂದಿನ ಆರೋಗ್ಯ ತಪಾಸಣೆಗಳನ್ನು ಮಾಡುವಾಗ ಯಾವ ಅಂಶಗಳು ಮತ್ತು ಮುನ್ನೆಚ್ಚರಿಕೆಯ ಕ್ರಮಗಳು ತೆಗೆದುಕೊಳ್ಳ ಬೇಕು ಎಂಬುದು ಮುಖ್ಯ.

ಕಳೆದ ಹಲವಾರು ದಶಕಗಳಿಂದ, ವೃದ್ಧಾಪ್ಯಕ್ಕೆ ಹೃದಯಾಘಾತ ಅತ್ಯಂತ ದೊಡ್ಡ ಶತ್ರು/ ಅಪಾಯದ ಅಂಶಗಳಲ್ಲಿ ಒಂದು ಎಂದು ತಿಳಿಯಲಾಗಿದೆ. ಈ ಒಳ ಶತ್ರು ಸಾಮಾನ್ಯವಾಗಿ ಪುರುಷರು 50+ ಮತ್ತು ಮಹಿಳೆಯರನ್ನು 65+ನಷ್ಟು ಬಾಧಿಸುತ್ತದೆ. ಇತ್ತೀಚೆಗೆ 20, 30 ಮತ್ತು 40ರ ಇಳಿವಯಸ್ಸಿನ ಜನರು ಈ ಹೃದಯ ಸಂಬಂಧಿ ದಾಳಿಗೆ ತುತ್ತಾಗುತ್ತಿದ್ದಾರೆ.

ಈ ಹೃದಯಾಘಾತಗಳು ಸಾಮಾನ್ಯವಾಗಿ ಒಬ್ಬ ವ್ಯಕ್ತಿಯ 50 ಅಥವಾ 60 ರ ಹರೆಯದಲ್ಲಿ ಸಂಭವಿಸುವ ಸಾಮಾನ್ಯ ಹೃದಯಾಘಾತಗಳಲ್ಲ ಎಂದು ಕಿರಿಯ ವಯಸ್ಸಿನ ಜನರಲ್ಲಿ ನಡೆಸಿದ Premature Coronary Artery Disease (PCAD) ಅಧ್ಯಯನವು ಸೂಚಿಸುತ್ತದೆ. ಕಿರಿಯ ವಯಸ್ಸಿನವರಲ್ಲಿ ತೀರ ವಿಭಿನ್ನ ರೀತಿಯ ಪ್ರಚೋದಕಗಳಾಗಿ ಕಾಣಿಸುತ್ತಿದೆ.

ಈ ಪ್ರಕರಣಗಳಲ್ಲಿ ಶೇ.12-13ರಷ್ಟು ಜನರು ಮಧುಮೇಹ ಅಥವಾ ಅಧಿಕ ರಕ್ತದೊತ್ತಡ ಹೊಂದಿದವರಾಗಿದ್ದಾರೆ. ಇದರಿಂದ ಗೊತ್ತಾಗುತ್ತಿರುವ ಒಂದು ಅಂಶವೆಂದರೇ ವಯಸ್ಸಿನ ಮತ್ತು ಈ ಖಾಯಿಲೆ ಎಂಬ ೨ ಗುಂಪುಗಳ ಅಪಾಯದ ಅಂಶಗಳ ನಡುವೆ ಒಂದು ದೊಡ್ಡ ವ್ಯತ್ಯಾಸ ಇದೆ ಎಂದು. ಯುವ ಜನತೆ/ಕಿರಿಯ ರೋಗಿಗಳಲ್ಲಿ CHD Coronary heart disease ಯ ವೈದ್ಯಕೀಯ ಪ್ರಸ್ತುತಿಯು ಹಿರಿಯರಿಗಿಂತ ಭಿನ್ನವಾಗಿರುತ್ತದೆ. ಇದರಿಂದಾಗಿ ಹೆಚ್ಚಿನ ಸಂಖ್ಯೆಯ ಯುವ ರೋಗಿಗಳು ಆಂಜಿನಾ ದ ಅನುಭವ ಹೊಂದಿರುವುದಿಲ್ಲ.

ಇದು ಕೇವಲ ಕೆಟ್ಟ ಜೀವನಶೈಲಿ ಮತ್ತು ಒತ್ತಡಗಳಿಂದ ಮಾತ್ರವಲ್ಲ. ಮಾಲಿನ್ಯ ಮತ್ತು ಅಧಿಕ ಕಾರ್ಬ್ ಆಹಾರ ಸೇವನೆಯೂ ಸಹ ಹೃದಯಾಘಾತದ ಹೆಚ್ಚಳದಲ್ಲಿ ಪ್ರಮುಖ ಪಾತ್ರ ವಹಿಸಬಹುದು. ಯುವಜನರು ಏನನ್ನು ತಿನ್ನುತ್ತಾರೆ ಎನ್ನುವುದಕ್ಕಿಂತ ಇದು ಹೆಚ್ಚು ಆರೋಗ್ಯ ಸಮಸ್ಯೆಗಳನ್ನು ಉಂಟುಮಾಡುತ್ತದೆ ಎಂಬುದನ್ನು ನಾವು ಅರಿಯಬೇಕು. ತಡವಾಗಿಮಾಡುವ ಊಟ/ ರಾತ್ರಿಯ ಊಟ ಮತ್ತು ಸಿಎಆರ್ ಬೋಹೈಡ್ರೇಟ್ ಗಳು ಮತ್ತು ಮಾಂಸಗಳ ದೊಡ್ಡಭಾಗದ ಒಂದು ಕಳವಳಕಾರಿ ಆಹಾರ ಪದ್ಧತಿಯಾಗಿದೆ.

ಇದನ್ನೂ ಓದಿ | ಪ್ರಬುದ್ಧರೆನ್ನುವ ಪ್ರಭುಗಳಿಗೆ ಅತೀವ ನಮನ..!

ಹೃದಯಾಘಾತಗಳು ಮತ್ತು ಹೃದಯಾಘಾತದ ಲಕ್ಷಣಗಳು, ಚಿಕ್ಕ ವಯಸ್ಸಿನಲ್ಲಿ ಯಾವುದೇ ಮುನ್ಸೂಚನೆಯಿಲ್ಲದೆ ಬರುತ್ತವೆ, ಮುಖ್ಯವಾಗಿ ಹೃದಯ ರೋಗದ ಲಕ್ಷಣಗಳು ಮೊದಲು ಇರಲಿಲ್ಲ, ಏಕೆಂದರೆ ಹೃದಯ ಸಂಬಂಧಿ ಕಾಯಿಲೆಯ ಲಕ್ಷಣಗಳು ಈ ಮೊದಲು ಹೃದಯ ಸಂಬಂಧಿ ಕಾಯಿಲೆಯ ಲಕ್ಷಣಗಳಂತೆ ಇರಲಿಲ್ಲ. ಸಣ್ಣ ವಯಸ್ಸಿನಲ್ಲಿ ಹೃದಯಾಘಾತಕ್ಕೆ ಕಾರಣವಾಗುವ ಪ್ರಮುಖ ಅಂಶಗಳು ಈ ಕೆಳಗಿನವುಗಳನ್ನು ಒಳಗೊಂಡಿವೆ:

  • ಮಾದಕ ವಸ್ತು ಬಳಕೆ ಅಥವಾ ಅತಿಯಾದ ಆಲ್ಕೋಹಾಲ್ ಬಳಕೆ
  • ಧೂಮಪಾನ
  • ಕೌಟುಂಬಿಕ ಇತಿಹಾಸ
  • ಅಧಿಕ ರಕ್ತದೊತ್ತಡ
  • ಅಧಿಕ ಕೊಲೆಸ್ಟ್ರಾಲ್ ಮಟ್ಟಗಳು
  • ದೈಹಿಕ ಚಟುವಟಿಕೆಯ ಕೊರತೆ
  • ಮಧುಮೇಹ & ದುರ್ಬಲ ಗ್ಲುಕೋಸ್ ಸಹಿಷ್ಣುತೆ
    ಕಳಪೆ ಆಹಾರ

ಎಂಐ myocardial infarction ಹೊಂದಿರುವ ಯುವ ರೋಗಿಗಳು ಸಾಮಾನ್ಯವಾಗಿ CHD Coronary heart disease ಗಾಗಿ ಬಹು ಅಪಾಯದ ಅಂಶಗಳನ್ನು ಹೊಂದಿರುತ್ತಾರೆ. ಉದಾಹರಣೆಗೆ, ಕೆಲವು ಅಧ್ಯಯನಗಳಲ್ಲಿ, 90 ರಿಂದ 97 ಪ್ರತಿಶತದಷ್ಟು ಜನರು ಅಥ್ರೊಸ್ಕ್ಲೆರೋಸಿಸ್/ atherosclerosis ಗೆ ಒಂದು ಅಥವಾ ಹೆಚ್ಚು ಸಾಂಪ್ರದಾಯಿಕ ಅಪಾಯದ ಅಂಶಗಳನ್ನು ಹೊಂದಿರುತ್ತಾರೆ.

ಧೂಮಪಾನ/ Smoking

ಯುವ ರೋಗಿಗಳಲ್ಲಿ ಸಿಗರೇಟು ಸೇದುವುದು ಅತ್ಯಂತ ಸಾಮಾನ್ಯ ಮತ್ತು ಮಾರ್ಪಾಟು ಮಾಡಬಹುದಾದ ಅಪಾಯದ ಅಂಶವಾಗಿದೆ. ಎಂಐ ಹೊಂದಿರುವ 65 ರಿಂದ 92 ಪ್ರತಿಶತ ಯುವ ರೋಗಿಗಳಲ್ಲಿ ಇದು ಕಂಡುಬಂದಿದೆ, ಇದು 45 ವರ್ಷಕ್ಕಿಂತ ಮೇಲ್ಪಟ್ಟ ವಯಸ್ಸಿನ 24 ರಿಂದ 56 ಪ್ರತಿಶತ ದಷ್ಟು ರೋಗಿಗಳಲ್ಲಿ ಕಂಡುಬಂದಿದೆ.

ಕುಟುಂಬ ಇತಿಹಾಸ/ Family history

CHD ಹೊಂದಿರುವ ಯುವ ರೋಗಿಗಳು ಹೆಚ್ಚಾಗಿ ಅಕಾಲಿಕ CHD ಯ ಕೌಟುಂಬಿಕ ಇತಿಹಾಸವನ್ನು ಹೊಂದಿರುತ್ತಾರೆ. ಇದರ ಜೊತೆಗೆ, ಅಕಾಲಿಕ CHD ಹೊಂದಿರುವ ರೋಗಿಗಳ ಸಂತತಿಯು ಅಂತಹ ಕೌಟುಂಬಿಕ ಇತಿಹಾಸವಿಲ್ಲದ ರೋಗಿಗಳಿಗಿಂತ coronary/ಪರಿಧಮನಿಯ ಅಪಾಯದ ಅಂಶಗಳನ್ನು ಹೊಂದಿರುವ ಸಾಧ್ಯತೆ ಹೆಚ್ಚು. ಕೌಟುಂಬಿಕ ಇತಿಹಾಸ ಮತ್ತು ಅವಧಿಪೂರ್ವ CHD ನಡುವಿನ ಸಂಬಂಧವು ಅನುವಂಶೀಯ ಮತ್ತು ಪರಿಸರೀಯ ಅಂಶಗಳಿಂದ ಬರಬಹುದು.

ಮಧುಮೇಹ ಮತ್ತು ಅಧಿಕ ರಕ್ತದೊತ್ತಡ

ಗ್ಲುಕೋಸ್ ಸಹಿಷ್ಣುತೆ/ glucose tolerance ಮತ್ತು ಟೈಪ್ 2 ಮಧುಮೇಹದ ಅಪಾಯವು ಹೆಚ್ಚುತ್ತಿರುವುದು ಒಂದು ದೊಡ್ಡ ಅಪಾಯವಾಗಿದೆ. ಯುವ ರೋಗಿಗಳು ಆಗಾಗ್ಗೆ ಗ್ಲುಕೋಸ್ ಚಯಾಪಚಯ ಕ್ರಿಯೆಯ ಸೂಕ್ಷ್ಮ ಸಮಸ್ಯೆಗಳನ್ನು ಹೊಂದಿರುತ್ತಾರೆ, ಅತಿಯಾದ ಮಧುಮೇಹದ ಅನುಪಸ್ಥಿತಿಯಲ್ಲಿ ಗ್ಲುಕೋಸ್ ಸಹಿಷ್ಣುತೆಯ ದುರ್ಬಲತೆ, ಇದು ಕರೋನರಿ coronary disease ಕಾಯಿಲೆಯ ಒಂದು ಅಪಾಯಕಾರಿ ಅಂಶವಾಗಿರುವು ಮುಖ್ಯ ಕಾರಣವಾಗಿದೆ. ಮುಖ್ಯವಾಗಿ, ಆಹಾರ ಆಯ್ಕೆಗಳು ಅಂದರೆ ಅಲ್ಟ್ರಾ-ಸಂಸ್ಕರಿಸಿದ ಆಹಾರ, ತೂಕದಲ್ಲಿ ಹೆಚ್ಚಳ ಮತ್ತು ಬೊಜ್ಜು, ಜಡ ಜೀವನಶೈಲಿ ಮತ್ತು ದೈಹಿಕವಾಗಿ ಕಡಿಮೆ ಚಟುವಟಿಕೆ ಆಗಿವೆ.

ಈ ಅಪಾಯವನ್ನು ಕಡಿಮೆ ಮಾಡಲು ಅತ್ಯುತ್ತಮ ಆಯ್ಕೆಯೆಂದರೆ, ಅಪಾಯ ಅಂಶಗಳ ಅಭಿವೃದ್ಧಿ ಮತ್ತು ಪ್ರಗತಿಗೆ ಕಾರಣವಾಗುವ ಸಾಮಾಜಿಕ ಮತ್ತು ಪರಿಸರೀ ಪರಿಸ್ಥಿತಿಗಳನ್ನು ಬದಲಾಯಿಸುವುದು.

ತಡೆಗಟ್ಟುವಿಕೆ ಮತ್ತು ಮುನ್ನೆಚ್ಚರಿಕೆಗಳು/ Prevention and Precautions

ವ್ಯಾಯಾಮ ಮಾಡುವುದು, ಪೌಷ್ಟಿಕಾಂಶದ ಆಹಾರ ಸೇವನೆ, ಧೂಮಪಾನ ಮತ್ತು ಮದ್ಯಪಾನದಿಂದ ದೂರವಿರುವುದು, ಒತ್ತಡ ಮತ್ತು ರಕ್ತದೊತ್ತಡವನ್ನು ನಿಯಂತ್ರಿಸುವುದು ಮತ್ತು ಸರಿಯಾದ ರೀತಿಯಲ್ಲಿ ನಿರ್ವಹಿಸುವುದು. ಬೊಜ್ಜು, ಟೈಪ್ 2 ಮಧುಮೇಹ, ಕಳಪೆ ಆಹಾರ, ವ್ಯಾಯಾಮದ ಕೊರತೆ, ಅಧಿಕ ರಕ್ತದೊತ್ತಡ, ಅಧಿಕ ಕೊಲೆಸ್ಟ್ರಾಲ್ ಮತ್ತು ಹೃದಯ ರಕ್ತನಾಳ ಸಂಬಂಧಿ ಕಾಯಿಲೆಯ ಕೌಟುಂಬಿಕ ಇತಿಹಾಸ ದಂತಹ ನಡವಳಿಕೆಗಳು ಮತ್ತು ಅಪಾಯದ ಅಂಶಗಳ ಬಗ್ಗೆ ಜಾಗೃತಿ/ಅರಿವು ಮತ್ತು ಶಿಕ್ಷಣವು ಅಗತ್ಯವಾಗಿದೆ.

ಇವಲ್ಲದೇ, ಹವಾಮಾನ ವೈಪರೀತ್ಯಗಳ ಮೇಲೆ ಅಥವಾ COVID ಯ ಬೆದರಿಕೆಯ ಮೇಲೆ ಯಾವುದೇ ನಿಯಂತ್ರಣವಿಲ್ಲ. ಇಂತಹ ಸಾಂಕ್ರಾಮಿಕ ರೋಗಗಳಿಂದ ಮತ್ತು ಹವಾಮಾನ ಬದಲಾವಣೆಯಿಂದ ಬರುವ ಅನಾರೋಗ್ಯ ಅಪಾಯಗಳಿಂದ ರಕ್ಷಿಸಲು ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳಬೇಕು.

ಆರೋಗ್ಯವಂತ ನಾಗರಿಕರು ಯಾವುದೇ ರಾಷ್ಟ್ರಕ್ಕೆ ಅತ್ಯಂತ ದೊಡ್ಡ ಆಸ್ತಿ. ಶೀತದ ತಾಪದಿಂದ ನಿಮ್ಮನ್ನು ನೀವು ಬೆಚ್ಚಾಗಿ ಇದ್ದು ರಕ್ಷಿಸಿಕೊಳ್ಳಬೇಕು. COVID-19 ತಪ್ಪಿಸಲು ಸರಿಯಾದ ಮಾರ್ಗಸೂಚಿಗಳನ್ನು ಮತ್ತು ಎಸ್ ಒಪಿಗಳನ್ನು ಅನುಸರಿಸಬೇಕು. COVID-19 ನಿಂದ ಚೇತರಿಸಿಕೊಳ್ಳುತ್ತಿರುವ ರೋಗಿಗಳು ಮತ್ತು ಶ್ರಮದೊಂದಿಗೆ ಉಸಿರಾಡುವವರು,

ಅನಿಯಮಿತ ಹೃದಯ ಬಡಿತ, ಉಸಿರಾಟದ ತೊಂದರೆಯಿಂದ ಆರಾಮದಾಯಕ ನಿದ್ರೆ ಸಾಧ್ಯವಾಗದೇ ಇರಬಹುದು, ರಾತ್ರಿ ವೇಳೆ ಯಲ್ಲಿ ಎಚ್ಚರಗೊಳ್ಳದಿರುವುದು, ಲಘು ತಲೆ ಅಥವಾ ತಲೆಸುತ್ತು ಇದ್ದರೆ ತಕ್ಷಣ ವೈದ್ಯರ ಅಥವಾ ಹೃದ್ರೋಗ ತಜ್ಞರನ್ನು ಸಂಪರ್ಕಿಸಬೇಕು. ಅನಾರೋಗ್ಯ ಎಚ್ಚರಿಕೆಯ ಆರೋಗ್ಯ ಚಿಹ್ನೆಗಳನ್ನು ಎಂದಿಗೂ ನಿರ್ಲಕ್ಷಿಸಬಾರದು, ಅಪಾಯದ ಅಂಶಗಳನ್ನು ಅರ್ಥಮಾಡಿಕೊಳ್ಳುವುದು ಮತ್ತು ಸಕಾರಾತ್ಮಕ ನಡವಳಿಕೆಯ ಬದಲಾವಣೆ, ಆಶಾವಾದ ಜೀವನಶೈಲಿಗೆ ಆತ್ಮವಿಶ್ವಾಸ ಮತ್ತು ಆದ್ಯತೆಯನ್ನು ನೀಡಬೇಕು.

ಸರಿಯಾದ ವ್ಯಾಯಾಮ,ಸಮತೋಲಿತ ಆಹಾರ, ನಿಯಮಿತ ಆರೋಗ್ಯ ತಪಾಸಣೆ, ಒತ್ತಡ ನಿರ್ವಹಣೆ, ರಕ್ತದ ಸಕ್ಕರೆ, ಕೊಲೆಸ್ಟ್ರಾಲ್, ರಕ್ತದೊತ್ತಡ ಮತ್ತು ಧೂಮಪಾನ ಮತ್ತು ಮದ್ಯಪಾನವನ್ನು ತಪ್ಪಿಸುವುದು ಇವು ನಿಮ್ಮ ಆರೋಗ್ಯಕರ ಹೃದಯಕ್ಕೆ ಪ್ರಮುಖ ಅಂಶಗಳಾಗಿವೆ.

ಅನುಸರಿಸಬೇಕಾದ ಕೆಲವು ಮಾರ್ಗಸೂಚಿಗಳು
ನಿಮ್ಮ ಸಮಸ್ಯೆಯನ್ನು ಜಟಿಲವಾಗುವ ಮುನ್ನ ಪತ್ತೆ ಹಚ್ಚಿ ನಿರ್ಣಯಿಸಬೇಕು. ನಿಯಮಿತ ತಪಾಸಣೆಗಳಿಂದ ನಿಮಗೆ ಆರಂಭಿಕ ಹಂತದಲ್ಲೇ ಕೆಲವು ರೋಗಗಳ ಬಗ್ಗೆ ಅರಿವು ಮೂಡಿಸುತ್ತವೆ ಮತ್ತು ನೀವು ಅದನ್ನು ಉಲ್ಬಣವಾಗದಂತೆ ತಡೆಯಲು ಅಗತ್ಯ ಮತ್ತು ಸಕಾಲಿಕ ಕ್ರಮಗಳನ್ನು ಕೈಗೊಳ್ಳಬಹುದು.

ರೋಗಲಕ್ಷಣಗಳ ಆಧಾರದ ಮೇಲೆ ರೋಗಗಳನ್ನು ವೈದ್ಯರು ಗುರುತಿಸುತ್ತಾರೆ, ಸಮಸ್ಯೆ ಹೆಚ್ಚು ಜಟಿಲಗೊಳ್ಳದಂತೆ ಅಗತ್ಯ ಚಿಕಿತ್ಸೆಗೆ ಶಿಫಾರಸು ಮಾಡುತ್ತಾರೆ. ಆದ್ದರಿಂದ, ಆರೋಗ್ಯ ತಪಾಸಣೆಗಳು ಒಂದು ಮುಂಜಾಗ್ರತಾ ಕ್ರಮಗಳು ವಿಶೇಷವಾಗಿ ಅಪಾಯದ ಅಂಶಗಳನ್ನು ಹೊಂದಿರುವವರಲ್ಲಿ ಬಹಳ ಮುಖ್ಯ ಪಾತ್ರ ವಹಿಸುತ್ತದೆ.

ಸುದ್ದಿದಿನ‌‌.ಕಾಂ|ವಾಟ್ಸಾಪ್|9980346243

ಅಂತರಂಗ

ದೇವನಗರಿ ಸುದ್ದಿದಿನ – ದೀಪಾವಳಿ ವಿಶೇಷ ಸಂಚಿಕೆ 2026 : ಕತಾ ಸ್ಪರ್ಧೆ ; ಅನಂತ ಕುಣಿಗಲ್ ಅವರ ಸಂಸ‌ ಕತೆ ಪಡೆದ ಪ್ರಥಮ ಸ್ಥಾನ ಅಮಾನ್ಯ ; ಪರಿಷ್ಕೃತ ಫಲಿತಾಂಶ ‌ಪ್ರಕಟ

Published

on

ಸುದ್ದಿದಿನ,ದಾವಣಗೆರೆ:ದೇವನಗರಿ ಸುದ್ದಿದಿನ – ದೀಪಾವಳಿ ವಿಶೇಷ ಸಂಚಿಕೆ 2026ರ ಕತಾ ಸ್ಪರ್ಧೆಯ ನಿಯಮಾವಳಿಯನ್ನು ಉಲಂಘಿಸಿರುವ ಕಾರಣ ಅನಂತ ಕುಣಿಗಲ್ ಅವರ ಸಂಸ‌ ಕತೆ ಪಡೆದ ಪ್ರಥಮ ಸ್ಥಾನವನ್ನು ಅಮಾನ್ಯ ಮಾಡಲಾಗಿದೆ ಎಂದು ಪತ್ರಿಕೆಯ ಸಂಪಾದಕ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕತೆ-ಕವಿತೆ ಸ್ಪರ್ಧೆಯ ನಿಯಮಾವಳಿಗಳ ಪ್ರಕಾರ ‘ “ಸ್ವತಂತ್ರ ರಚನೆಯಾಗಿರ ಬೇಕು. ಈ ಮೊದಲು ಯಾವ ಮಾಧ್ಯಮಗಳಲ್ಲಿಯೂ ಪ್ರಕಟ ಅಥವಾ ಪ್ರಸಾರ ಆಗಿರಬಾರದು” ಎನ್ನುವ ನಿಯಮಾವಳಿಗಳನ್ನು ಉಲಂಘಿಸಿರುವುದರಿಂದ ಪ್ರಥಮ ಸ್ಥಾನ ಪಡೆದ ” ಸಂಸ” ಕತೆಯನ್ನು ಅಮಾನ್ಯಗೊಳಿಸಲಾಗಿದೆ.

‘ಸಂಸ’ ಕತೆಯ ಕತೆಗಾರರಾದ ಅನಂತ ಕುಣಿಗಲ್ ಅವರು
ಸ್ವತಃ ತಮ್ಮ ಫೇಸ್ ಬುಕ್ ವಾಲ್ ನಲ್ಲಿ ‘ ಸಂಸ’ ಕತೆಯು ಈ ಹಿಂದೆ ಯಾವುದೋ ಕತಾ ಸ್ಪರ್ಧೆಯಲ್ಲಿ ಸಮಾಧಾನಕರ ಬಹುಮಾನ ಪಡೆದಿತ್ತು. ಮತ್ತೊಂದೆಡೆ ತೃತೀಯ, ಮಗದೊಂದೆಡೆ ದ್ವಿತೀಯ ಬಹುಮಾನ ಲಭಿಸಿತ್ತು, ಅಲ್ಲದೆ ‘ಟೋಟೋ’ ಅವಾರ್ಡ್ ನ ಅಂತಿಮ ಸುತ್ತಿಗೆ ಎರಡು ಬಾರಿ ಶಾರ್ಟ್ ಲಿಸ್ಟ್ ಆಗಿತ್ತು ಎಂದು ಬರೆದು ಕೊಂಡಿರುತ್ತಾರೆ. ಆದಕಾರಣ ಈ ಕ್ರಮವನ್ನು ಕೈಗೊಳ್ಳಲಾಗಿದೆ.

ಕತಾ ಸ್ಪರ್ಧೆಯ ಪರಿಷ್ಕೃತ ಫಲಿತಾಂಶ

ಕತಾ ಸ್ಪರ್ಧೆಯಲ್ಲಿ ರವಿಮುಡೋಡಿ ಅವರ ʼಅರ್ಧ ರೇಖೆಯ ಚಿತ್ರʼ  ಕತೆಗೆ ಪ್ರಥಮ ಬಹುಮಾನ, ವಿಜಯ ಶ್ರೀ ಹಾಲಾಡಿ ಅವರ ʼಮಳೆಹಾಡುʼ ಕತೆಗೆ ದ್ವಿತೀಯ ಬಹುಮಾನ ಹಾಗೂ ಅಜೇಯ ಸಿಂಹ ಕೆ.ವಿ ಅವರ ‘ ಮಾರ್ಜಕದ ಶ್ರೀಮುಡಿ’ ಕತೆಗೆ  ತೃತೀಯ ಬಹುಮಾನ ದೊರೆತಿದೆ ಎಂದು ಸುದ್ದಿದಿನ ಪತ್ರಿಕೆ ಸಂಪಾದಕ ಮಾಹಿತಿ ನೀಡಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ದೇವನಗರಿ ಸುದ್ದಿದಿನ ಪತ್ರಿಕೆಯ ದೀಪಾವಳಿ ವಿಶೇಷಾಂಕ- 2026 ರ ಕತೆ – ಕವಿತೆ ಫಲಿತಾಂಶ ಪ್ರಕಟ

Published

on

ಸುದ್ದಿದಿನ,ದಾವಣಗೆರೆ:ದೇವನಗರಿ ಸುದ್ದಿದಿನ ಹಾಗೂ ಶ್ಯಾಮ್‌ ಪ್ರಕಾಶನ, ನವಿಲೇಹಾಳು ವತಿಯಿಂದ ದೀಪಾವಳಿ ವಿಶೇಷಾಂಕ-2026 ರ ಕತೆ ಮತ್ತು ಕವಿತೆ ಸ್ಪರ್ಧೆಯ ಫಲಿತಾಂಶ ಪ್ರಕಟವಾಗಿದ್ದು, ಕತಾ ಸ್ಪರ್ಧೆಯಲ್ಲಿ ಅನಂತ್‌ ಕುಣಿಗಲ್‌ ಅವರ ́ಸಂಸʼ ಕತೆಗೆ ಪ್ರಥಮ ಬಹುಮಾನ,. ರವಿ ಮಡೋಡಿ ಅವರ ʼಅರ್ಧ ರೇಖೆಯ ಚಿತ್ರʼ ಕತೆಗೆ ದ್ವಿತೀಯ ಬಹುಮಾನ ಹಾಗೂ ವಿಜಯ ಶ್ರೀ ಹಾಲಾಡಿ ಅವರ ʼಮಳೆಹಾಡುʼ ಕತೆಗೆ  ತೃತೀಯ ಬಹುಮಾನ ದೊರೆತಿದೆ ಎಂದು ಸುದ್ದಿದಿನ ಪತ್ರಿಕೆ ಸಂಪಾದಕರಾದ ಗೋವರ್ಧನ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಅಜೇಯ ಸಿಂಹ ಕೆ.ವಿ. ಅವರ ʼಮಾರ್ಜಕದ ಶ್ರೀಮುಡಿʼ, ಟಿ.ಆರ್.‌ ಪ್ರಕಾಶ ಭಾಗವತ ಅವರ ʼಸಮಾಧಿʼ , ರಘುನಂದನ್‌ ಅವರ ʼಹೀಗೊಂದು ಕಛೇರಿʼ , ಡಾ||. ಮಿರ್ಜಾ ಬಷೀರ್‌ ಅವರ ʼ ಒಂದು ಸದ್ದಿಲ್ಲದ ಕ್ರಾಂತಿʼ, ಸುಜಾತ ಎಸ್.‌ ಎನ್‌ ರೆಡ್ಡಿ ಅವರ ʼ ಸತ್ಯ ದರ್ಶನʼ, ಚಂದ್ರಿಕಾ ನಾಗರಾಜ್‌ ಹಿರಿಯಡಕ  ಅವರ ʼ ವೆಂಕಟನ ಸ್ವೆಟರ್, ರೈಹಾನ ಅವರ  ʼಬಾವಿಗೆ ಬಿದ್ದರೂʼ, ಒಟ್ಟು ಈ  ಏಳುಕತೆಗಳು ತೀರ್ಪುಗಾರ ಮೆಚ್ಚುಗೆ ಪಡೆದಿವೆ.

ಕತಾ ಸ್ಪರ್ಧೆಯ ತೀರ್ಪುಗಾರರಾಗಿ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತರಾದ ಕತೆಗಾರ ಹಾಗೂ ನಿವೃತ್ತ ಪ್ರಾಧ್ಯಾಪಕ ಅಮರೇಶ ನುಗಡೋಣಿ, ಹೊಸಪೇಟೆ, ಕವಿ ಕತೆಗಾರ , ಜಿ. ಮುದ್ದುವೀರಸ್ವಾಮಿ, ದಾವಣಗೆರೆ, ಕತೆಗಾರ್ತಿ ಹಾಗೂ ಕನ್ನಡ ಪ್ರಾಧ್ಯಾಪಕಿ, ಸುಜಾತ ಚಲಾವಾದಿ, ತಾಳಿಕೋಟೆ, ಕತೆಗಾರ ಹಾಗೂ ಅಕ್ಷರ ಸಂಗಾತ ಮಾಸ ಪತ್ರಿಕೆಯ ಸಂಪಾದಕ ಡಾ. ಟಿ ಎಸ್‌. ಗೊರವರ, ಗಜೇಂದ್ರಘಡ ಇವರು ಕಾರ್ಯನಿವಹಿದ್ದರು ಎಂದು ಮಾಹಿತಿ ನೀಡಿದ್ಧಾರೆ.

ಪ್ರಥಮ ಬಹುಮಾನ ಹತ್ತು ಸಾವಿರ ರೂ (10000 ರೂ ) ನಗದು, ದ್ವೀತೀಯ ಬಹುಮಾನ ಐದು ಸಾವಿರ ನಗದು, (5000 ರೂ), ತೃತೀಯ ಬಹುಮಾನ ಮೂರು ಸಾವಿರ (3000) ರೂ ನಗದು ಹಾಗೂ ಪ್ರಮಾಣ ಪತ್ರವನ್ನು ಬಹುಮಾನಿತರಿಗೆ ನೀಡಲಾಗುವುದು.

ಕವಿತೆ ಸ್ಪರ್ಧೆ ಫಲಿತಾಂಶ

ಕವಿತೆ ಸ್ಪರ್ಧೆಯಲ್ಲಿ ಆನಂದ ಕುಂಚನೂರ ಅವರ ʼ ಬೆತ್ತಲೆ ಶಿಖರʼ ಕವಿತೆಗೆ ಪ್ರಥಮ ಬಹುಮಾನ, ಅಜಯ್‌ ಅಂಗಡಿ ಅವರ ʼಒಂದು ಶ್ರಾವಣ ಸಂಜೆಗೆʼ ದ್ವಿತೀಯ ಬಹುಮಾನ, ಭಾಗ್ಯ ಜ್ಯೋತಿ ಹಿರೇಮಠ ಅವರ ʼ ಗೋಡೆ ಕವಿತೆಗೆ ತೃತೀಯ ಬಹುಮಾನ ದೊರೆತಿದೆ.

ಫೈಜ್ನಟ್ರಾಜ್‌ ಅವರ ʼಅವ್ವ ತಟ್ಟಿದ ರೊಟ್ಟಿಯಲ್ಲಿ ಬೆರಳಿನ ಗುರುತುʼ, ಹೊನ್ನಪ್ಪ. ನೀ. ಕರೆಕನ್ನಮ್ಮನವರ ಅವರ ʼಒಂಟಿಯಾನದ ಸರಕುʼ, ಕವಿತ ಎ.ವಿ ಅವರ ʼಬಂದಿದ್ದಾರೆ ಸಿಕ್ಕಿಲ್ಲʼ, ರಮ್ಯ ಕೆ.ಜಿ. ಅವರ ʼಬಿಡಿಸಿಕೊಳ್ಳುತ್ತದೊಂದು ಚಿತ್ರ,ʼ, ಮುರ್ತುಜಾ ಬೇಗಂ ಕೊಡಗಲಿ ಅವರ ʼಒಂದು ಕನ್ನಡಿ ಮೂರು ಬಿಂಬಗಳುʼ, ಮನಸ್ವಿ ಎಂ ಸ್ವಾಮಿ ಅವರ ʼ ರಾಜಧಾನಿಯಲ್ಲಿ ರಾಜʼ, ವೀಣಾ ರಾವ್ ಅವರ  ʼಬಣ್ಣಗಳ ಆಚೆಗೆʼ ಒಟ್ಟು ಏಳು ಕವಿತೆಗಳು ತೀರ್ಪುಗಾರರ ಮೆಚ್ಚುಗೆ ಪಡೆದಿವೆ.

ಕವಿತೆ ಸ್ಪರ್ಧೆಯ ತೀರ್ಪುಗಾರರಾಗಿ ಕವಿ ಚಂದ್ರಶೇಖರ ತಾಳ್ಯ, ಹೊಳಲ್ಕೆರೆ, ಕವಯಿತ್ರಿ ಸವಿತಾ ನಾಗಭೂಷಣ, ಶಿವಮೊಗ್ಗ, ಕವಿ ವಿಲ್ಸನ್‌ ಕಟೀಲು ಅವರು ಕಾರ್ಯನಿರ್ವಹಿಸಿದ್ದರು.

ಪ್ರಥಮ ಬಹುಮಾನ ಐದು ಸಾವಿರ ರೂ (5000 ರೂ ) ನಗದು, ದ್ವೀತೀಯ ಬಹುಮಾನ ಮೂರು ಸಾವಿರ ನಗದು, (3000 ರೂ), ತೃತೀಯ ಬಹುಮಾನ ಎರಡು ಸಾವಿರ (2000) ರೂ ನಗದು ಹಾಗೂ ಪ್ರಮಾಣ ಪತ್ರವನ್ನು ಬಹುಮಾನಿತರಿಗೆ ಇದೇ ಅಕ್ಟೋಬರ್‌ 24 ರಂದು ದಾವಣಗೆರೆಯ ಕುವೆಂಪು ಕನ್ನಡ ಭವನದಲ್ಲಿ ʼ ನಡೆಯುವ ದೀಪಾವಳಿ ವಿಶೇಷಾಂಕ-2026 ರ ಬಿಡುಗಡೆ ಕಾರ್ಯಕ್ರಮದಲ್ಲಿ  ನೀಡಿ ಗೌರವಿಸಲಾಗುವುದು ಎಂದು ಅವರು ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗೆ: 9980346243 ಸಂಪರ್ಕಿಸಲು ಈ ಮೂಲಕ ತಿಳಿಸಲಾಗಿದೆ.

Continue Reading

ದಿನದ ಸುದ್ದಿ

5 ವರ್ಷದಿಂದ PFಗೆ ಹಣ ಜಮಾ ಮಾಡಿಲ್ಲ, ಬಡ್ಡಿ ಸಿಗುತ್ತಾ? ಇಲ್ಲಿದೆ EPFO ನಿಯಮದ ಸ್ಪಷ್ಟ ಮಾಹಿತಿ!

Published

on

3 ವರ್ಷದ ನಂತರ ಬಡ್ಡಿ ನಿಲ್ಲುತ್ತದೆ ಎಂಬುದು ಹಳೆಯ ನಿಯಮ; 58 ವರ್ಷದವರೆಗೆ ಬಡ್ಡಿ ಗ್ಯಾರಂಟಿ, ಆದರೆ ಈ ತೆರಿಗೆ ನಿಯಮ ಗೊತ್ತಿರಲಿ

ಸುದ್ದಿದಿನ, ಬೆಂಗಳೂರು: ಉದ್ಯೋಗಿ ಭವಿಷ್ಯ ನಿಧಿ ಸಂಸ್ಥೆ (EPFO) ಚಂದಾದಾರರಲ್ಲಿ ಬಹುದಿನಗಳಿಂದ ಒಂದು ದೊಡ್ಡ ಗೊಂದಲವಿದೆ. ನಾನು ಕೆಲಸ ಬಿಟ್ಟಿದ್ದೇನೆ, ಕಳೆದ 5 ವರ್ಷಗಳಿಂದ ಪಿಎಫ್ ಖಾತೆಗೆ ಹಣ ಜಮೆಯಾಗಿಲ್ಲ, ಹಾಗಾದರೆ ನನ್ನ ಖಾತೆಗೆ ಇನ್ನೂ ಬಡ್ಡಿ ಸಿಗುತ್ತದೆಯೇ ಅಥವಾ ನನ್ನ ಹಣ ಹಾಗೆಯೇ ಉಳಿದುಕೊಳ್ಳುತ್ತದೆಯೇ?’ ಎಂಬುದು ಆ ಪ್ರಶ್ನೆ. ಈ ಪ್ರಶ್ನೆಗೆ ಇಪಿಎಫ್‌ಒ ನೇರವಾಗಿ ನೀಡಿರುವ ಉತ್ತರ – ಹೌದು, ಖಂಡಿತವಾಗಿಯೂ ಬಡ್ಡಿ ಸಿಗುತ್ತದೆ’.ಪಿಎಫ್‌ಗೆ ಹಣ ಜಮಾ ಮಾಡುವುದು ನಿಂತ ತಕ್ಷಣವೇ ಬಡ್ಡಿ ಬರುವುದು ನಿಂತುಹೋಗುತ್ತದೆ ಎಂಬುದು ಹಲವರಲ್ಲಿರುವ ತಪ್ಪು ಕಲ್ಪನೆ. ಆದರೆ ವಾಸ್ತವವೇ ಬೇರೆ.

http://Visit : www.suddidina.com

3 ವರ್ಷಗಳ ಹಳೆಯ ನಿಯಮದ ಅಸಲಿ ಸತ್ಯವೇನು?

ಈ ಗೊಂದಲಕ್ಕೆ ಕಾರಣ 2016ಕ್ಕಿಂತ ಮೊದಲು ಇದ್ದ ನಿಯಮ. ಹಳೆಯ ನಿಯಮದ ಪ್ರಕಾರ, ಒಂದು ಪಿಎಫ್ ಖಾತೆಗೆ ಸತತ 36 ತಿಂಗಳು (3 ವರ್ಷ) ಯಾವುದೇ ವಂತಿಗೆ ಜಮೆಯಾಗದಿದ್ದರೆ, ಅದನ್ನು `ನಿಷ್ಕ್ರಿಯ ಖಾತೆ’ (Inoperative Account) ಎಂದು ಪರಿಗಣಿಸಲಾಗುತ್ತಿತ್ತು ಮತ್ತು ಅಂತಹ ಖಾತೆಗೆ ಬಡ್ಡಿ ನೀಡುವುದನ್ನು ತಡೆಹಿಡಿಯಲಾಗುತ್ತಿತ್ತು. ಇದರಿಂದಾಗಿ ಲಕ್ಷಾಂತರ ಖಾತೆದಾರರ ಹಣಕ್ಕೆ ಬಡ್ಡಿ ಸಿಗದೆ ನಷ್ಟವಾಗುತ್ತಿತ್ತು.ಆದರೆ ಚಂದಾದಾರರ ಹಿತದೃಷ್ಟಿಯಿಂದ ಇಪಿಎಫ್‌ಒ 2016 ರಲ್ಲಿ ಈ ನಿಯಮಕ್ಕೆ ಮಹತ್ವದ ತಿದ್ದುಪಡಿ ತಂದಿದೆ. ಹೊಸ ಮತ್ತು ಪ್ರಸ್ತುತ ಜಾರಿಯಲ್ಲಿರುವ ನಿಯಮದ ಪ್ರಕಾರ, ಖಾತೆದಾರನಿಗೆ 58 ವರ್ಷ ವಯಸ್ಸಾಗುವವರೆಗೆ ಪಿಎಫ್ ಖಾತೆಯಲ್ಲಿರುವ ಹಣಕ್ಕೆ ನಿಯಮಿತವಾಗಿ ಚಕ್ರಬಡ್ಡಿ (Compounding Interest) ಜಮೆಯಾಗುತ್ತಲೇ ಇರುತ್ತದೆ. ನೀವು ಕೆಲಸದಲ್ಲಿದ್ದರೂ, ಇಲ್ಲದಿದ್ದರೂ ಇದು ಅನ್ವಯಿಸುತ್ತದೆ.

ಉದಾಹರಣೆ:

ಇದನ್ನು ಒಂದು ಉದಾಹರಣೆಯೊಂದಿಗೆ ನೋಡೋಣ. ಒಬ್ಬ ವ್ಯಕ್ತಿ ತಮ್ಮ 40ನೇ ವಯಸ್ಸಿನಲ್ಲಿ ಕೆಲಸಕ್ಕೆ ರಾಜೀನಾಮೆ ನೀಡಿ, ತಮ್ಮ ಪಿಎಫ್ ಖಾತೆಯಲ್ಲಿದ್ದ 10 ಲಕ್ಷ ರೂಪಾಯಿಯನ್ನು ಹಿಂಪಡೆಯದೆ ಹಾಗೆಯೇ ಬಿಡುತ್ತಾರೆ ಎಂದುಕೊಳ್ಳಿ. ಅವರು ಮುಂದಿನ 5 ವರ್ಷಗಳ ಕಾಲ ಅಂದರೆ 45ನೇ ವಯಸ್ಸಿನವರೆಗೆ ಯಾವುದೇ ಹಣವನ್ನು ಜಮೆ ಮಾಡದಿದ್ದರೂ, ಅವರ ಖಾತೆಯಲ್ಲಿರುವ ಆ 10 ಲಕ್ಷ ರೂಪಾಯಿಗೆ ಇಪಿಎಫ್‌ಒ ಪ್ರತಿ ವರ್ಷ ಘೋಷಿಸುವ ಬಡ್ಡಿ ದರದಂತೆ (ಪ್ರಸ್ತುತ 8.25%) ಬಡ್ಡಿ ಸೇರ್ಪಡೆಯಾಗುತ್ತಲೇ ಹೋಗುತ್ತದೆ. ಇದು ಅವರಿಗೆ 58 ವರ್ಷ ತುಂಬುವವರೆಗೆ ಅಂದರೆ ಇನ್ನೂ 13 ವರ್ಷಗಳ ಕಾಲ ನಿರಂತರವಾಗಿ ಸಿಗುತ್ತದೆ. ಅದೇ ರೀತಿ 50ನೇ ವಯಸ್ಸಿನಲ್ಲಿ ಕೆಲಸ ಬಿಟ್ಟವರಿಗೆ 58 ವರ್ಷದವರೆಗೆ 8 ವರ್ಷಗಳ ಕಾಲ ಬಡ್ಡಿ ಸಿಗುತ್ತದೆ.

ಈ ಒಂದು ತೆರಿಗೆ ನಿಯಮವನ್ನು ಮಾತ್ರ ಮರೆಯಬೇಡಿ!

ನಿಮ್ಮ ಹಣಕ್ಕೆ ಬಡ್ಡಿ ಸಿಗುತ್ತದೆ ಎಂಬುದು ಖುಷಿಯ ವಿಚಾರವೇ, ಆದರೆ ಇಲ್ಲಿ ಒಂದು ಪ್ರಮುಖ ತೆರಿಗೆ ಎಚ್ಚರಿಕೆಯಿದೆ. ನೀವು ಕೆಲಸ ಮಾಡುತ್ತಿರುವಾಗ ನಿಮ್ಮ ಪಿಎಫ್ ಬಡ್ಡಿಗೆ ಸಂಪೂರ್ಣ ತೆರಿಗೆ ವಿನಾಯಿತಿ ಇರುತ್ತದೆ. ಆದರೆ ನೀವು ಕೆಲಸ ಬಿಟ್ಟ ನಂತರ ನಿಮ್ಮ ಖಾತೆಗೆ ಜಮೆಯಾಗುವ ಬಡ್ಡಿಯನ್ನು ಆದಾಯ ತೆರಿಗೆ ಇಲಾಖೆಯು `ಇತರ ಮೂಲಗಳಿಂದ ಬಂದ ಆದಾಯ’ (Income from Other Sources) ಎಂದು ಪರಿಗಣಿಸುತ್ತದೆ. ಆದ್ದರಿಂದ ಆ ಬಡ್ಡಿಯ ಮೊತ್ತವನ್ನು ನೀವು ನಿಮ್ಮ ವಾರ್ಷಿಕ ಆದಾಯದಲ್ಲಿ ತೋರಿಸಿ, ನಿಮ್ಮ ತೆರಿಗೆ ಸ್ಲ್ಯಾಬ್‌ಗೆ ಅನುಗುಣವಾಗಿ ತೆರಿಗೆ ಪಾವತಿಸಬೇಕಾಗುತ್ತದೆ.

ಖಾತೆದಾರರು ಏನು ಮಾಡಬೇಕು?

1. ಕೆಲಸ ಬದಲಾಯಿಸಿದ್ದರೆ: ಹಳೆಯ ಕಂಪನಿಯ ಪಿಎಫ್ ಹಣವನ್ನು ವಿತ್‌ಡ್ರಾ ಮಾಡುವ ಬದಲು, ನಿಮ್ಮ ಯುಎಎನ್ (UAN) ಮೂಲಕ ಹೊಸ ಕಂಪನಿಯ ಖಾತೆಗೆ ವರ್ಗಾವಣೆ (Transfer) ಮಾಡಿಕೊಳ್ಳಿ. ಇದರಿಂದ ನಿಮ್ಮ ಸೇವಾ ಅವಧಿ ನಿರಂತರವಾಗಿರುತ್ತದೆ.

2. ವೃತ್ತಿ ವಿರಾಮದಲ್ಲಿದ್ದರೆ: 58 ವರ್ಷದವರೆಗೆ ಹಣ ಸುರಕ್ಷಿತವಾಗಿ ಬೆಳೆಯುತ್ತದೆ. ಆದರೆ ನಿಮಗೆ ತುರ್ತು ಅಗತ್ಯವಿಲ್ಲದಿದ್ದರೆ, ಹೆಚ್ಚಿನ ಆದಾಯಕ್ಕಾಗಿ ಬೇರೆಡೆ ಹೂಡಿಕೆ ಮಾಡುವ ಬಗ್ಗೆಯೂ ಯೋಚಿಸಬಹುದು.

3. 58 ವರ್ಷದ ನಂತರ: ಖಾತೆದಾರನಿಗೆ 58 ವರ್ಷ ತುಂಬಿದ ನಂತರವೂ ಹಣವನ್ನು ಹಿಂಪಡೆಯದಿದ್ದರೆ ಮಾತ್ರ ಆ ಖಾತೆಯನ್ನು ಮತ್ತೆ `ನಿಷ್ಕ್ರಿಯ’ ಎಂದು ಪರಿಗಣಿಸಿ ಬಡ್ಡಿ ನೀಡುವುದನ್ನು ಶಾಶ್ವತವಾಗಿ ನಿಲ್ಲಿಸಲಾಗುತ್ತದೆ.ಆದ್ದರಿಂದ 5 ವರ್ಷದಿಂದ ಹಣ ಜಮೆಯಾಗದಿದ್ದರೂ ಚಿಂತಿಸಬೇಕಿಲ್ಲ, ನಿಮ್ಮ ಪಿಎಫ್ ಹಣ ಇಪಿಎಫ್‌ಒ ನಲ್ಲಿ ಸುರಕ್ಷಿತವಾಗಿ ಬಡ್ಡಿಯೊಂದಿಗೆ ಬೆಳೆಯುತ್ತಿದೆ.

Continue Reading

Trending