Connect with us

ದಿನದ ಸುದ್ದಿ

ಕಿತ್ತೂರಿನಲ್ಲಿ ಮಾ.12 ರಂದು ಸ್ವಾತಂತ್ರೋತ್ರ್ಯದ ಅಮೃತ ಮಹೋತ್ಸವ : ವರ್ಚುವಲ್ ವೇದಿಕೆಯಲ್ಲಿ ಮಾನ್ಯ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಂದ ಚಾಲನೆ

Published

on

ಸುದ್ದಿದಿನ,ಬೆಳಗಾವಿ: ಬೆಳಗಾವಿ ಜಿಲ್ಲಾಡಳಿತ ವತಿಯಿಂದ ಶುಕ್ರವಾರ (ಮಾ.12) ಬೆಳಿಗ್ಗೆ 10 ಗಂಟೆಗೆ ಕಿತ್ತೂರು ಚನ್ನಮ್ಮನ ಕೋಟೆ ಆವರಣದಲ್ಲಿ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಉದ್ಘಾಟನಾ ಸಮಾರಂಭ ಏರ್ಪಡಿಸಲಾಗಿದೆ.

ಇದಕ್ಕೂ ಮುಂಚೆ ಸ್ವಾತಂತ್ರ್ಯದ ಅಮೃತ ಮಹೋತ್ಸವ ಅಂಗವಾಗಿ ದೇಶದ 75 ಸ್ಥಳಗಳಲ್ಲಿ ಏಕಕಾಲಕ್ಕೆ ನಡೆಯಲಿರುವ ಈ ಕಾರ್ಯಕ್ರಮಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ವರ್ಚುವಲ್ ವೇದಿಕೆಯ ಮೂಲಕ ಚಾಲನೆ ನೀಡಲಿದ್ದಾರೆ.

ರಾಜ್ಯದ ಬೆಳಗಾವಿ ಜಿಲ್ಲೆಯ ಕಿತ್ತೂರು, ಮಂಡ್ಯ ಜಿಲ್ಲೆಯ ಮದ್ದೂರು ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಅಮೃತ ಮಹೋತ್ಸವ ಸಮಾರಂಭ ನಡೆಯಲಿದೆ. ಇದಾದ ಬಳಿಕ ವೇದಿಕೆ ಕಾರ್ಯಕ್ರಮಗಳು ನಡೆಯಲಿವೆ.

ಕಿತ್ತೂರು ಕೋಟೆ ಆವರಣದಲ್ಲಿ ನಡೆಯಲಿರುವ ವೇದಿಕೆ ಸಮಾರಮಂಭವನ್ನು ಉಪ ಮುಖ್ಯಮಂತ್ರಿಗಳು ಹಾಗೂ ಸಾರಿಗೆ ಇಲಾಖೆಯ ಸಚಿವರಾದ ಲಕ್ಷ್ಮಣ ಸವದಿ ಅವರು ಉದ್ಘಾಟಿಸಲಿದ್ದಾರೆ.

ಕಿತ್ತೂರು ಕಲ್ಮಠ ರಾಜಗುರುಗಳಾದ ಶ್ರೀ ಮಡಿವಾಳ ರಾಜಯೋಗೀಂದ್ರ ಮಹಾಸ್ವಾಮಿಗಳು ಹಾಗೂ ನಿಚ್ಚನಕಿಯ ಮಡಿವಾಳೇಶ್ವರ ಮಠದ ಗುರುಗಳಾದ ಶ್ರೀ ಪಂಚಾಕ್ಷರಿ ಮಹಾಸ್ವಾಮಿಗಳು ದಿವ್ಯ ಸಾನಿಧ್ಯ ವಹಿಸಲಿದ್ದಾರೆ.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನ ಮತ್ತು ಹಿರಿಯ ನಾಗರಿಕ ಸಬಲೀಕರಣ ಇಲಾಖೆಯ ಸಚಿವರಾದ ಶಶಿಕಲಾ ಜೊಲ್ಲೆ, ಕೈಮಗ್ಗ ಮತ್ತು ಜವಳಿ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಸಚಿವರಾದ ಶ್ರೀಮಂತ ಪಾಟೀಲ, ಹಾಗೂ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವರಾದ ಉಮೇಶ ಕತ್ತಿ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಕಿತ್ತೂರು ಶಾಸಕರಾದ ಮಹಾಂತೇಶ ದೊಡಗೌಡ್ರ ಅಧ್ಯಕ್ಷತೆ ವಹಿಸಲಿದ್ದಾರೆ.

ಇದನ್ನೂ ಓದಿ |ಮನೆಯೊಳಗೆ ಮನೆಯೊಡೆಯನಿದ್ದಾನೋ ಇಲ್ಲವೋ..?

ಕರ್ನಾಟಕ ವಿಧಾನ ಪರಿಷತ್ತಿನ ಸರ್ಕಾರದ ಮುಖ್ಯ ಸಚೇತಕರಾದ ಮಹಾಂತೇಶ ಕವಟಗಿಮಠ, ಕರ್ನಾಟಕ ವಿಧಾನ ಸಭೆ ಉಪ ಸಭಾಧ್ಯಕ್ಷರಾದ ವಿಶ್ವನಾಥ ಚ. ಮಾಮನಿ, ಕರ್ನಾಟಕ ರಾಜ್ಯ ತಾಂಡಾ ಅಭಿವೃದ್ಧಿ ನಿಗಮ ಹಾಗೂ ಶಾಸಕರಾದ ಪಿ. ರಾಜೀವ, ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿ ಹಾಗೂ ಶಾಸಕರಾದ ಮಹೇಶ ಕುಮಠಳ್ಳಿ, ನವದೆಹಲಿ ಕರ್ನಾಟಕ ಸರ್ಕಾರದ ವಿಶೇಷ ಪ್ರತಿನಿಧಿಯಾದ ಶಂಕರಗೌಡ ಐ. ಪಾಟೀಲ, ಕರ್ನಾಟಕ ಆದಿ ಜಾಂಬವ ಅಭಿವೃದ್ಧಿ ನಿಗಮ ಅಧ್ಯಕ್ಷರು ಹಾಗೂ ಶಾಸಕರಾದ ದುರ್ಯೋಧನ ಐಹೊಳೆ, ಕರ್ನಾಟಕ ಆದಿ ಜಾಂಬವ ಅಭಿವೃದ್ಧಿ ನಿಗಮದ ಅಧ್ಯಕ್ಷರು ಹಾಗೂ ರಾಯಬಾಗ ಶಾಸಕರಾದ ಪಿ. ರಾಜೀವ, ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಆಶಾ ಐಹೊಳೆ, ಉಪಸ್ಥಿತರಿರುವರು ಎಂದು ಜಿಲ್ಲಾಧಿಕಾರಿಗಳಾದ ಎಂ.ಜಿ. ಹೀರೆಮಠ ಅವರು ತಿಳಿಸಿದ್ದಾರೆ.

ಯೂಥ್ ಕ್ಲಬ್, ನೆಹರೂ ಯುವ ಕೇಂದ್ರ, ಎನ್.ಎಸ್.ಎಸ್. ಸದಸ್ಯರು, ಎನ್.ಸಿ.ಸಿ. ಕೆಡೆಟ್‍ಗಳು ಸೇರಿದಂತೆ ವಿವಿಧ ಸಂಘ-ಸಂಸ್ಥೆಗಳ ಪದಾಧಿಕಾರಿಗಳು ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ.

ನಂದಗಡವರೆಗೆ ಸೈಕಲ್ ರ್ಯಾಲಿ

ಇದೇ ಸಂದರ್ಭದಲ್ಲಿ ಕಿತ್ತೂರಿನ ರಾಣಿ ಚನ್ನಮ್ಮ ವೃತ್ತದಿಂದ ಬೆಳಗಾವಿ ಮಾರ್ಗವಾಗಿ ಖಾನಾಪುರ ತಾಲ್ಲೂಕಿನ ನಂದಗಡದವರೆಗೆ ಸೈಕಲ್ ರ್ಯಾಲಿ ನಡೆಯಲಿದೆ.

ಸ್ವಾತಂತ್ರ್ಯದ ಅಮೃತ ಮಹೋತ್ಸವ ಅಂಗವಾಗಿ ಮಾರ್ಚ್ 12 ರಿಂದ ಮುಂದಿನ 75 ವಾರಗಳ ಕಾಲ ಸ್ವಾತಂತ್ರ್ಯ ಹೋರಾಟದ ಮಹತ್ತರ ಘಟಗಳ ಕುರಿತು ಜಿಲ್ಲೆಯಾದ್ಯಂತ ವಿವಿಧ ಕಾರ್ಯಕ್ರಮಗಳು ಹಾಗೂ ಛಾಯಾಚಿತ್ರ ಪ್ರದರ್ಶನಗಳು ನಡೆಯಲಿವೆ.

ಸ್ವಾತಂತ್ರ್ಯ ಹೋರಾಟದ ಮಹತ್ವದ ಘಟನಾವಳಿಗಳು, ತ್ಯಾಗ-ಬಲಿದಾನಗೈದ ಮಹನೀಯರು ಹಾಗೂ ಸ್ವಾತಂತ್ರ್ಯೋತ್ತರ ಭಾರತದ ಕುರಿತ ಉಪನ್ಯಾಸ ಕಾರ್ಯಕ್ರಮಗಳು ಕೂಡ ಜಿಲ್ಲೆಯ ಶಾಲಾ-ಕಾಲೇಜುಗಳಲ್ಲಿ ಏಕಕಾಲಕ್ಕೆ ಆರಂಭಗೊಳ್ಳಲಿವೆ.

ಇದಲ್ಲದೇ ಜಿಲ್ಲೆಯ ಆಯ್ದ 75 ನಗರ ಸ್ಥಳೀಯ ಸಂಸ್ಥೆಗಳು, ಕಂದಾಯ ಹೋಬಳಿ ಹಾಗೂ ಕೆಲವು ಗ್ರಾಮ ಪಂಚಾಯತಿಗಳಲ್ಲಿ ಮುಂದಿನ 75 ವಾರಗಳ ನಿಗದಿತ ವೇಳಾಪಟ್ಟಿಯಂತೆ ಕಾಲ ಪಾದಯಾತ್ರೆ, ಯೋಗ ಶಿಬಿರಗಳು, ಶ್ರಮದಾನ, ಸ್ವಾತಂತ್ರ್ಯ ಹೋರಾಟಗಾರರ ಮನೆಗೆ ಭೇಟಿ, ಮ್ಯಾರಾಥಾನ್, ರಂಗೋಲಿ ಸ್ಪರ್ಧೆ, ಬೀದಿನಾಟಕ, ಛಾಯಾಚಿತ್ರ ಪ್ರದರ್ಶನ ಮತ್ತಿತರ ಕಾರ್ಯಕ್ರಮಗಳು ನಡೆಯಲಿವೆ ಎಂದು ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಅವರು ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ಕ್ರೀಡೆ

Olympic Games Paris 2024 | ಇಂದು ಪ್ಯಾರಿಸ್ ಒಲಿಂಪಿಕ್ಸ್ ಉದ್ಘಾಟನೆ ; ಭವ್ಯ ಸಮಾರಂಭಕ್ಕೆ ಸೀನ್ ನದಿ ಸಜ್ಜು

Published

on

ಸುದ್ದಿದಿನಡೆಸ್ಕ್:ಪ್ಯಾರಿಸ್ ಒಲಿಂಪಿಕ್ಸ್‌ನ ಉದ್ಘಾಟನಾ ಸಮಾರಂಭ ಇಂದು ನಡೆಯಲಿದೆ. ಸೀನ್ ನದಿಯ ಮೇಲೆ ಇಂದು ಭಾರತೀಯ ಕಾಲಮಾನ ರಾತ್ರಿ 11ಗಂಟೆಗೆ ಉದ್ಘಾಟನಾ ಸಮಾರಂಭ ಜರುಗಲಿದೆ. ಪರೇಡ್‌ನಲ್ಲಿ ಭಾರತದ ಧ್ವಜಧಾರಿಗಳಾದ ಶರತ್ ಕಮಲ್ ಮತ್ತು ಪಿ.ವಿ.ಸಿಂಧು ಭಾರತವನ್ನು ಪ್ರತಿನಿಧಿಸಲಿದ್ದಾರೆ.

ಉದ್ಘಾಟನಾ ಸಮಾರಂಭಕ್ಕೂ ಮುನ್ನ ಕೆಲ ಪಂದ್ಯಗಳಿಗೆ ಚಾಲನೆ ನೀಡಲಾಗಿದೆ. ಅದರಂತೆ ಜುಲೈ 24 ರಿಂದ ಫುಟ್‌ಬಾಲ್ ಮತ್ತು ರಗ್ಬಿ ಪಂದ್ಯಗಳು ಶುರುವಾಗಿದ್ದು, ನಿನ್ನೆ ಬಿಲ್ಲುಗಾರಿಕೆ ಸ್ಪರ್ಧೆ ಆರಂಭವಾಗಿದೆ. ಈ ಸ್ಪರ್ಧೆಯೊಂದಿಗೆ ಭಾರತ ಒಲಿಂಪಿಕ್ಸ್ ಅಭಿಯಾನ ಆರಂಭಿಸುತ್ತಿರುವುದು ವಿಶೇಷವಾಗಿದೆ.

ಬಿಲ್ಲುಗಾರಿಕೆಯ ಶ್ರೇಯಾಂಕದ ಸುತ್ತಿನಲ್ಲಿ ಅಂಕಿತ ಭಕತ್, ಭಜನ್ ಕೌರ್ ಮತ್ತು ದೀಪಿಕಾ ಕುಮಾರಿ ಅವರನ್ನೊಳಗೊಂಡ ಭಾರತೀಯ ಮಹಿಳಾ ತಂಡ, 1 ಸಾವಿರದ 983 ಅಂಕಗಳೊಂದಿಗೆ ನಾಲ್ಕನೇ ಸ್ಥಾನವನ್ನು ಗಳಿಸಿ, ಕ್ವಾರ್ಟರ್ ಫೈನಲ್ಸ್ ಪ್ರವೇಶಿಸಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

JUDGE | ಕಳೆದ 10 ವರ್ಷಗಳಲ್ಲಿ ಹೈಕೋರ್ಟ್ ನ್ಯಾಯಾಧೀಶರ ಸಂಖ್ಯೆ ಏರಿಕೆ

Published

on

ಸುದ್ದಿದಿನಡೆಸ್ಕ್:ಕಳೆದ 10 ವರ್ಷಗಳಲ್ಲಿ ಹೈಕೋರ್ಟ್ಗಳ ನ್ಯಾಯಾಧೀಶರ ಸಂಖ್ಯೆ 906 ರಿಂದ 1114 ಕ್ಕೆ ಏರಿದೆ. ಸುಪ್ರೀಂ ಕೋರ್ಟ್ ಮತ್ತು ಹೈಕೋರ್ಟ್ಗಳ ನ್ಯಾಯಾಧೀಶರನ್ನು ಭಾರತದ ಸಂವಿಧಾನದ ಅಡಿಯಲ್ಲಿ ನೇಮಕ ಮಾಡಲಾಗಿದೆ ಎಂದು ಕೇಂದ್ರ ಕಾನೂನು ಸಚಿವ ಅರ್ಜುನ್ ರಾಮ್ ಮೇಘವಾಲ್ ರಾಜ್ಯಸಭೆಯಲ್ಲಿ ನಿನ್ನೆ ಲಿಖಿತ ಉತ್ತರ ನೀಡಿದ್ದಾರೆ.

ದೇಶದಲ್ಲಿ ಒಟ್ಟು 15 ಸಾವಿರದ 300 ಮೆಗಾ ವ್ಯಾಟ್, ಸಾಮರ್ಥ್ಯದ 21 ಪರಮಾಣು ರಿಯಾಕ್ಟರ್‌ಗಳು ಅನುಷ್ಠಾನದ ವಿವಿಧ ಹಂತಗಳಲ್ಲಿವೆ ಎಂದು ಕೇಂದ್ರ ಭೂವಿಜ್ಞಾನ ರಾಜ್ಯ ಸಚಿವ ಡಾ. ಜಿತೇಂದ್ರ ಸಿಂಗ್ ಲಿಖಿತ ಉತ್ತರದಲ್ಲಿ ತಿಳಿಸಿದ್ದಾರೆ.
ದೇಶದಲ್ಲಿ ಪ್ರಸ್ತುತ ಸ್ಥಾಪಿಸಲಾದ ಪರಮಾಣು ಶಕ್ತಿ ಸಾಮರ್ಥ್ಯವು 8 ಸಾವಿರ 180 ಮೆಗಾವ್ಯಾಟ್ ಆಗಿದ್ದು, 24 ಪರಮಾಣು ಶಕ್ತಿ ರಿಯಾಕ್ಟರ್‌ಗಳನ್ನು ಒಳಗೊಂಡಿದೆ.

ಪ್ರಸ್ತುತ ಸ್ಥಾಪಿಸಲಾದ ಪರಮಾಣು ವಿದ್ಯುತ್ ಸಾಮರ್ಥ್ಯವನ್ನು 2031-32ರ ವೇಳೆಗೆ 22 ಸಾವಿರದ 480 ಮೆಗಾವ್ಯಾಟ್‌ಗೆ ಹೆಚ್ಚಿಸಲು ನಿರ್ಧರಿಸಲಾಗಿದೆ ಎಂದು ತಿಳಿಸಿದ್ದಾರೆ
ಪರಮಾಣು ವಿದ್ಯುತ್ ಸ್ಥಾವರಗಳಿಂದ ವಾರ್ಷಿಕ ವಿದ್ಯುತ್ ಉತ್ಪಾದನೆಯು 2013-14 ರಲ್ಲಿ 34 ಸಾವಿರದ 228 ಮಿಲಿಯನ್ ಯುನಿಟ್‌ಗಳಿಂದ 2023-24 ರಲ್ಲಿ 47 ಸಾವಿರದ 971 ಮಿಲಿಯನ್ ಯುನಿಟ್‌ಗಳಿಗೆ ಏರಿಕೆಯಾಗಿದೆ ಎಂದು ಡಾ. ಜಿತೇಂದ್ರ ಸಿಂಗ್ ಹೇಳಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

KSOU | ಪ್ರವೇಶಾತಿಗೆ ಅರ್ಜಿ ಆಹ್ವಾನ

Published

on

ಸುದ್ದಿದಿನಡೆಸ್ಕ್:2024-25 ನೇ ಶೈಕ್ಷಣಿಕ ಸಾಲಿನ ಜುಲೈ ಆವೃತ್ತಿಗೆ ಯುಜಿಸಿ ಅನುಮೋದಿತ ಶಿಕ್ಷಣ ಕ್ರಮಗಳ ಪ್ರವೇಶಾತಿಗಾಗಿ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ವಿದ್ಯಾರ್ಥಿಗಳು ವೈಬ್ ಸೈಟ್ www.ksoumysuru.ac.in ನಲ್ಲಿ ಅರ್ಜಿ ಸಲ್ಲಿಸಬಹುದು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending